Connect with us

Mysore

ಮೈಸೂರು ಮಹಾನಗರ ಪಾಲಿಕೆಯನ್ನು ಬೃಹತ್ ಮೈಸೂರು ಮಹಾನಗರ ಪಾಲಿಕೆಯನ್ನಾಗಿ ಮೇಲ್ದರ್ಜೆಗೇರಿಸುವಂತೆ ಮನವಿ

Published

on

ಮೈಸೂರು ಮಹಾನಗರ ಪಾಲಿಕೆಯನ್ನು ಬೃಹತ್ ಮೈಸೂರು ಮಹಾನಗರ ಪಾಲಿಕೆಯನ್ನಾಗಿ ಮೇಲ್ದರ್ಜೆಗೇರಿಸುವಂತೆ ಮುಖ್ಯಮಂತ್ರಿಗಳಲ್ಲಿ ಶಾಸಕ ಜಿ.ಟಿ.ಡಿ.ಮನವಿ

ಮೈಸೂರು ನಗರಕ್ಕೆ ಹೊಂದಿಕೊಂಡಿರುವ ಬಡಾವಣೆಗಳನ್ನು ಮೈಸೂರು ಮಹಾನಗರ ಪಾಲಿಕೆ ವ್ಯಾಪ್ತಿಗೆ ಒಳಪಡಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯರವರಲ್ಲಿ ಶಾಸಕ ಜಿ.ಟಿ.ದೇವೇಗೌಡ ಮನವಿ ಮಾಡಿದರು.
ಅವರು ಇಂದು ಬೆಂಗಳೂರಿನ ವಿಧಾನಸೌಧದಲ್ಲಿ ನಡೆದ ದಸರಾ ಮಹೋತ್ಸವ ಉನ್ನತ ಸಮಿತಿ ಸಭೆಯಲ್ಲಿ ಭಾಗವಹಿಸಿ ಮುಖ್ಯಮಂತ್ರಿಗಳಲ್ಲಿ ಮನವಿ ಮಾಡಿದರು.


ಮೈಸೂರು ನಗರವು ಅತ್ಯಂತ ವೇಗವಾಗಿ ಬೆಳೆಯುತ್ತಿರುವ ನಗರವಾಗಿದ್ದು, ಮೈಸೂರಿನ ಹೊರ ವರ್ತುಲ ರಸ್ತೆ (Outer ring road) ಒಳಗೆ ಬರುವ ಮೈಸೂರು ತಾಲ್ಲೂಕಿನ ಗ್ರಾಮಗಳಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಜನಸಂಖ್ಯೆ ಇದ್ದು, ಈ ವ್ಯಾಪ್ತಿಯಲ್ಲಿ ಹೆಚ್ಚಿನ ಬಡಾವಣೆಗಳು ಸಹಾ ಅಭಿವೃದ್ದಿಗೊಂಡಿದ್ದು, ನಿವಾಸಿಗಳಿಗೆ ಮೂಲಭೂತ ಸೌಕರ್ಯಗಳನ್ನು ಒದಗಿಸುವ ನಿಟ್ಟಿನಲ್ಲಿ ಸದರಿ ಬಡಾವಣೆಗಳನ್ನು ಮೈಸೂರು ಮಹಾನಗರ ಪಾಲಿಕೆಯ ವ್ಯಾಪ್ತಿಗೆ ಒಳಪಡಿಸುವ ಸಲುವಾಗಿ ಪಾಲಿಕೆಗೆ ಹೊಂದಿಕೊಂಡಂತೆ ಇರುವ ಗ್ರಾಮಗಳಲ್ಲಿನ ಬಡಾವಣೆಗಳನ್ನು ಪಾಲಿಕೆಗೆ ಸೇರಿಸಿಕೊಳ್ಳುವುದು ಅತ್ಯಂತ ಅವಶ್ಯಕವಾಗಿರುತ್ತದೆ.
ಕರ್ನಾಟಕ ಮುನಿಸಿಪಲ್ ಕಾರ್ಪೋರೇಷನ್ ಅಧಿನಿಯಮ-1976ರ ಸೆಕ್ಷನ್ 4 ಮತ್ತು ಸೆಕ್ಷನ್ 500 ರಲ್ಲಿ ದೊಡ್ಡ ನಗರ ಪ್ರದೇಶಗಳಲ್ಲಿ ಕೆಲವೊಂದು ನಗರಸಭೆ, ಪಟ್ಟಣ ಪಂಚಾಯಿತಿ ಮತ್ತು ಗ್ರಾಮ ಪಂಚಾಯಿತಿ ಪ್ರದೇಶಗಳನ್ನು ಸೇರಿಸಿಕೊಳ್ಳಲು ಹಾಗೂ ಕೈಬಿಡಲು ಅವಕಾಶ ಕಲ್ಪಿಸಲಾಗಿರುತ್ತದೆ.

ಮೈಸೂರು ಮಹಾ ನಗರಪಾಲಿಕೆಯನ್ನು ಬೃಹತ್ ಮಹಾನಗರ ಪಾಲಿಕೆಯನ್ನಾಗಿ ರಚನೆ ಮಾಡುವ ಸಂಬAಧ ಬೃಹತ್ ಮೈಸೂರು ಮಹಾನಗರ ಪಾಲಿಕೆಯ ಎಲ್ಲೆಯನ್ನು ಗುರುತಿಸಿ 2018ರ ವಾರ್ಡ್ Delimitaion ನ್ನು ಪರಿಗಣನೆಗೆ ತೆಗೆದುಕೊಂಡು ಹಾಲಿ ಮೈಸೂರು ಮಹಾನಗರ ಪಾಲಿಕೆ ವ್ಯಾಪ್ತಿಗೆ ಈ ಕೆಳಕಂಡ ಗ್ರಾಮ ಪಂಚಾಯಿತಿಗಳನ್ನು, ಪಟ್ಟಣ ಪಂಚಾಯಿತಿಗಳನ್ನು, ಮತ್ತು ನಗರಸಭೆಯನ್ನು ಸೇರಿಸಿಕೊಳ್ಳುಬೇಕಾಗಿದೆ.

1 ಹಾಲಿ ಮೈಸೂರು ಮಹಾನಗರ ಪಾಲಿಕೆ ವ್ಯಾಪ್ತಿ : 86.31.ಕಿ.ಮೀ
ಹೊಸದಾಗಿ ಸೇರ್ಪಡೆಗೊಳಿಸಲು ಪ್ರಸ್ತಾಪಿಸಿರುವ ಪ್ರದೇಶಗಳು
1 ಹೂಟಗಳ್ಳಿ ನಗರಸಭೆ 29.70 ಚ.ಕಿ.ಮೀ
2 ಶ್ರೀರಾಂಪುರ ಪಟ್ಟಣ ಪಂಚಾಯಿತಿ -17.84 ಚ.ಕಿ.ಮೀ
3 ರಮ್ಮನಹಳ್ಳಿ ಪಟ್ಟಣ ಪಂಚಾಯಿತಿ- 22.11 ಚ.ಕಿ.ಮೀ
4 ಕಡಕೋಳ ಪಟ್ಟಣ ಪಂಚಾಯಿತಿ- 34.71 ಚ.ಕಿ.ಮೀ
5 ಬೋಗಾದಿ ಪಟ್ಟಣ ಪಂಚಾಯಿತಿ – 35.50 ಚ.ಕಿ.ಮೀ
6 ಚಾಮುಂಡಿಬೆಟ್ಟಗ್ರಾಮ ಪಂಚಾಯಿತಿ -6.00 ಚ.ಕಿ.ಮೀ
7 ಸಿದ್ದಲಿಂಗಪುರ ಗ್ರಾಮ ಪಂಚಾಯಿತಿ- 14.70 ಚ.ಕಿ.ಮೀ
8 ಇಲವಾಲ ಗ್ರಾಮ ಪಂಚಾಯಿತಿ- 20.76 ಚ.ಕಿ.ಮೀ
9 ಆಲನಹಳ್ಳಿ ಗ್ರಾಮ ಪಂಚಾಯಿತಿ -5.69 ಚ.ಕಿ.ಮೀ
ಮೇಲ್ಕಂಡ ಪ್ರದೇಶಗಳ ಪೈಕಿ ಸರ್ಕಾರದಿಂದ ಅನುಮೋದನೆಗೊಂಡಿರುವ 2018ರ ವಾರ್ಡ್ Delimitaion ರನ್ವಯ ಹೂಟಗಳ್ಳಿ, ರಮ್ಮನಹಳ್ಳಿ ಹಾಗೂ ಶ್ರೀರಾಂಪುರ ಪ್ರದೇಶದ ಭಾಗಶಃ ಗ್ರಾಮಗಳು ಪಾಲಿಕೆಯ ಎಲ್ಲೆಯೊಳಗೆ ಬರುತ್ತಿದ್ದು, ಸರ್ಕಾರದ ಅಧಿಸೂಚನೆ ಅನ್ವಯ ಪಾಲಿಕೆಯ ವಾರ್ಡ್ ನಂ:1,2,3,4,5,20ರ ಹೆಬ್ಬಾಳು ಪ್ರದೇಶವು ಹೂಟಗಳ್ಳಿ ನಗರಸಭೆಯ ವ್ಯಾಪ್ತಿಗೆ ಸೇರಿರುತ್ತದೆ. ವಾರ್ಡ್ ನಂ: 35ರ ಸಾತಗಳ್ಳಿ ಪ್ರದೇಶವು ರಮ್ಮನಹಳ್ಳಿ ಪಟ್ಟಣ ಪಂಚಾಯಿತಿಗೆ ಹಾಗೂ ವಾರ್ಡ್ ನಂ:65ರ ಶ್ರೀರಾಂಪುರ ಪ್ರದೇಶವು ಶ್ರೀರಾಂಪುರ ಪಟ್ಟಣ ಪಂಚಾಯಿತಿಗೆ ಸೇರುತ್ತದೆ.


ಈ ಸಂಬಂಧ ಹೂಟಗಳ್ಳಿ ನಗರಸಭೆ, ರಮ್ಮನಹಳ್ಳಿ ಪಟ್ಟಣ ಪಂಚಾಯಿತಿ, ಹಾಗೂ ಶ್ರೀರಾಂಪುರ ಪಟ್ಟಣ ಪಂಚಾಯಿತಿ ಕಛೇರಿಗಳಿಂದ ಈಗಾಗಲೇ ಸರ್ಕಾರದಿಂದ ಅನುಮೋದನೆಗೊಂಡಿರುವ-2018ರ ವಾರ್ಡ್ Delimitaion ನಕ್ಷೆಯನ್ವಯ ಪಾಲಿಕೆಯ ವ್ಯಾಪ್ತಿಯೊಳಗೆ ಸೇರಿರುವ ಪ್ರದೇಶಗಳನ್ನು ಕೈಬಿಡುವಂತೆ ಸರ್ಕಾರಕ್ಕೆ ಪ್ರಸ್ತಾವನೆಯನ್ನು ಸಲ್ಲಿಸಿರುವುದಾಗಿ ಸದರಿ ಕಛೇರಿಗಳಿಂದ ತಿಳಿದುಬಂದಿರುತ್ತದೆ. ಗಡಿರೇಖೆಯು ಸರ್ಕಾರದ ಅಧಿಸೂಚನೆಯಂತೆ ಹಾಗೂ 2018 ವಾರ್ಡ್ Delimitaionನಂತೆ ಸಮಗ್ರ ನಕ್ಷೆ ತಯಾರಿಸಲಾಗಿದೆ. ಅದರಂತೆ ಪಾಲಿಕೆಯ ಹಾಲಿ ವಿಸ್ತೀರ್ಣ 86.31 ಚ.ಕಿ.ಮೀ ಪ್ರದೇಶಕ್ಕೆ ಚಾಮುಂಡಿಬೆಟ್ಟ ಗ್ರಾಮ ಪಂಚಾಯಿತಿ, ಆಲನಹಳ್ಳಿ ಗ್ರಾಮ ಪಂಚಾಯಿತಿ, ಸಿದ್ದಲಿಂಗಪುರ ಗ್ರಾಮ ಪಂಚಾಯಿತಿ, ಹೂಟಗಳ್ಳಿ ನಗರಸಭೆ, ಬೋಗಾದಿ ಪಟ್ಟಣ ಪಂಚಾಯಿತಿ, ಶ್ರೀರಾಂಪುರ ಪಟ್ಟಣ ಪಂಚಾಯಿತಿ, ರಮ್ಮನಹಳ್ಳಿ ಪಟ್ಟಣ ಪಂಚಾಯಿತಿ, ಇಲವಾಲ ಗ್ರಾಮ ಪಂಚಾಯಿತಿ ಓಳಗೊಂಡತೆ ಒಟ್ಟು 187.01ಚ.ಕಿ.ಮೀ ಪ್ರದೇಶವನ್ನು ಪಾಲಿಕೆಯ ವ್ಯಾಪ್ತಿಗೆ ಸೇರಿಸಿಕೊಳ್ಳಲಾಗಿ ಪ್ರಸ್ತಾವಿತ ಬೃಹತ್ ಮೈಸೂರು ಮಹಾನಗರ ಪಾಲಿಕೆ ಒಟ್ಟಾರೆ ವಿಸ್ತೀರ್ಣವು 273.32 ಚ.ಕಿ.ಮೀ ಆಗುತ್ತದೆ.
ಮೇಲ್ಕಂಡ ಅಂಶಗಳಲ್ಲಿ ಹಿನ್ನಲೆಯಲ್ಲಿ, ಚಾಮುಂಡಿಬೆಟ್ಟ ಗ್ರಾಮ ಪಂಚಾಯಿತಿ, ಆಲನಹಳ್ಳಿ ಗ್ರಾಮ ಪಂಚಾಯಿತಿ, ಸಿದ್ದಲಿಂಗಪುರ ಗ್ರಾಮ ಪಂಚಾಯಿತಿ, ಹೂಟಗಳ್ಳಿ ನಗರಸಭೆ, ಬೋಗಾದಿ ಪಟ್ಟಣ ಪಂಚಾಯಿತಿ, ಶ್ರೀರಾಂಪುರ ಪಟ್ಟಣ ಪಂಚಾಯಿತಿ, ರಮ್ಮನಹಳ್ಳಿ ಪಟ್ಟಣ ಪಂಚಾಯಿತಿ, ಇಲವಾಲ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ವಾಸಿಸುತ್ತಿರುವ ಜನರಿಗೆ ಮೂಲಭೂತ ಸೌಕರ್ಯಗಳನ್ನು ಒದಗಿಸುವುದರ ಜೊತೆಗೆ ಯೋಜನಾಬದ್ದ ನಗರದ ಬೆಳವಣಿಗೆಗೆ ಅವಕಾಶ ಕಲ್ಪಿಸುವ ಸಲುವಾಗಿ ಮೈಸೂರು ಮಹಾನಗರ ಪಾಲಿಕೆಗೆ ಸೇರಿಸಿಕೊಂಡು ಬೃಹತ್ ಮೈಸೂರು ಮಹಾನಗರ ಪಾಲಿಕೆಯನ್ನಾಗಿ ಮೇಲ್ದರ್ಜೇಗೆರಿಸುವಂತೆ ಈ ಮೂಲಕ ತಮ್ಮಲ್ಲಿ ಕೋರುತ್ತೇನೆ.

Continue Reading

Mysore

ಹುಲಿ ದಾಳಿಗೆ ಹಸು ಬಲಿ : ಹುಲಿ ಸೆರೆ ಹಿಡಿಯುವಂತೆ ಗ್ರಾಮಸ್ಥರಿಂದ ಪ್ರತಿಭಟನೆ

Published

on

ಹುಣಸೂರು: ಮೈಸೂರು  ಜಿಲ್ಲೆಯ  ಹುಣಸೂರು  ತಾಲೂಕಿನ  ಚಿಲ್ಕುಂದ ಗ್ರಾಮ ಪಂಚಾಯಿತಿ ವ್ಯಾಪ್ತಿಯ ನಾಗಮಂಗಲ ಗ್ರಾಮದಲ್ಲಿ ಹುಲಿ ದಾಳಿಗೆ ಹಸು ಬಲಿಯಾಗಿದ್ದು, ಹುಲಿ ಸೆರೆ ಹಿಡಿಯುವಂತೆ ಮುತ್ತುರಾಯನ ಹೊಸಳ್ಳಿ ಗ್ರಾಮಸ್ಥರು ಪ್ರತಿಭಟನೆ ನಡೆಸಿದ್ದಾರೆ.

ಈ ವೇಳೆ ಗ್ರಾಮಸ್ಥರು, ಎಲ್ಲಿಯ ತನಕ ಹೋರಾಟ ಹುಲಿ ಹಿಡಿಯುವ ತನಕ ಹೋರಾಟ ಬೇಕೇ ಬೇಕು ನ್ಯಾಯ ಬೇಕು ಎಂದು ಘೋಷಣೆಗಳನ್ನು ಕೂಗಿದ್ದಾರೆ. ಅಲ್ಲದೇ ಅರಣ್ಯ ಇಲಾಖೆ ಅಧಿಕಾರಿಗಳು ಹುಲಿ ಸೆರೆ ಹಿಡಿಯುವಂತೆ ಗ್ರಾಮದ ಮುಖ್ಯರಸ್ತೆಯಲ್ಲಿ ವಾಹನ ತಡೆದು, ಟೈರಿಗೆ ಬೆಂಕಿ ಹಚ್ಚಿ ಧರಣಿ ಮಾಡಿದ್ದಾರೆ.

ಈ ಪ್ರತಿಭಟನೆಯಲ್ಲಿ ಗ್ರಾಮ ಪಂಚಾಯಿತಿ ಸದಸ್ಯ ಶಿವರಾಜ್, ಜಗದೀಶ್, ಪ್ರಸನ್ನ, ರಾಜಶೇಖರ, ರಾಜನಾಯಕ, ಶ್ರಿನಿವಾಸ, ಕುಮಾರ, ವಿಶ್ವನಾಥ್, ವೇಣು ಸೇರಿದಂತೆ ಹಲವರು ಉಪಸ್ಥಿತರಿದ್ದರು.

Continue Reading

Mysore

ಗ್ರಾ.ಪಂ.ಸಾರ್ವಜನಿಕರ ಮೊದಲ ಸಂಪರ್ಕ ಕೇಂದ್ರವಾಗಿದೆ: ಡಾ.ಮಲ್ಲಿಕಾರ್ಜುನಸ್ವಾಮಿ

Published

on

ತಿ.ನರಸೀಪುರ: ತಾಲೂಕಿನ ಟಿ.ದೊಡ್ಡಪುರ ಗ್ರಾಮ ಪಂಚಾಯಿತಿಯಲ್ಲಿ 2024-25ನೇ ಸಾಲಿನ ಮಹಾತ್ಮ ಗಾಂಧಿ ಉದ್ಯೋಗ ಖಾತ್ರಿ ಯೋಜನೆ ಮತ್ತು 15ನೇ ಹಣಕಾಸು ಯೋಜನೆಯಡಿ ಕೈಗೊಂಡ ಕಾಮಗಾರಿಗಳ ಸಾಮಾಜಿಕ ಲೆಕ್ಕ ಪರಿಶೋಧನೆಯನ್ನು ನಡೆಸಲಾಯಿತು.

ಗ್ರಾಮ ಪಂಚಾಯಿತಿ ಸಭಾಂಗಣದಲ್ಲಿ ಅಧ್ಯಕ್ಷ ಪುಟ್ಟಸ್ವಾಮಿ ಅವರ ಉಪಸ್ಥಿತಿಯಲ್ಲಿ ನಡೆದ ಸಭೆಯಲ್ಲಿ, ಲೆಕ್ಕ ಪರಿಶೋಧಕ ರಂಗರಾಜು 2024-25ನೇ ಸಾಲಿನಲ್ಲಿ 15ನೇ ಹಣಕಾಸು ಯೋಜನೆಯ 34,94,332 ರೂ.ಗಳ ವೆಚ್ಚದಲ್ಲಿ ನಡೆಸಿದ 12 ಕಾಮಗಾರಿಗಳು ಮತ್ತು ಮಹಾತ್ಮಾ ಗಾಂಧಿ ಉದ್ಯೋಗ ಖಾತ್ರಿ ಯೋಜನೆಯಡಿ 1,27,10,624 ರೂ.ಗಳ ವೆಚ್ಚದಲ್ಲಿ ಕೈಗೊಂಡ 116 ಕಾಮಗಾರಿಗಳ ಲೆಕ್ಕವನ್ನು ಸಭೆಯಲ್ಲಿ ಮಂಡಿಸಿದರು.

ಸಭೆಯನ್ನು ಉದ್ದೇಶಿಸಿ ನೋಡಲ್ ಅಧಿಕಾರಿ ಡಾ.ಮಲ್ಲಿಕಾರ್ಜುನಸ್ವಾಮಿ ಮಾತನಾಡಿ, ಗ್ರಾಮ ಪಂಚಾಯಿತಿಯು ಸ್ಥಳೀಯ ಆಡಳಿತ ಸಂಸ್ಥೆಯಾಗಿದ್ದು, ಇದು ಸಾರ್ವಜನಿಕರ ಮೊದಲ ಸಂಪರ್ಕ ಕೇಂದ್ರವಾಗಿದೆ. ಸಾರ್ವಜನಿಕರು ವಿವಿಧ ಇಲಾಖೆಗಳಲ್ಲಿ ಲಭ್ಯವಿರುವ ಸೌಲಭ್ಯಗಳ ಮಾಹಿತಿ ಪಡೆಯುವುದರ ಜೊತೆ-ಜೊತೆಗೆ ಸೌಲಭ್ಯ ಪಡೆದುಕೊಂಡು ಆರ್ಥಿಕವಾಗಿ ಸಬಲೀಕರಣಗೊಳ್ಳಬೇಕು ಎಂದರು.

ಸಭೆಯಲ್ಲಿ ಉಪಾಧ್ಯಕ್ಷೆ ಮಂಜುಳಾ, ಸದಸ್ಯರಾದ ಆರ್.ಮಾದೇಶ್, ಜಯಬಸವಣ್ಣ,ರಾಜೇಶ್, ಮಹದೇವಮ್ಮ,ಚಿಕ್ಕತಾಯಮ್ಮ, ಬಸಮ್ಮಣ್ಣಿ,ಆರ್.ಭಾರತಿ,ರಾಜಮ್ಮ, ಸುಕನ್ಯಾ ಮಹೇಶ್,ಪಿಡಿಓ ದಯಾನಂದ,ಕೃಷಿ ಇಲಾಖೆಯ ವಿಶಾಲು,ಕಾರ್ಯದರ್ಶಿ ಪುರುಷೋತ್ತಮ್,ರೇಷ್ಮೆ ಇಲಾಖೆ ಈಶ್ವರ್,ಬಿಲ್ ಕಲೆಕ್ಟರ್ ಸಂಕೇಶ್, ವಿವಿಧ ಇಲಾಖೆಯ ಅಧಿಕಾರಿಗಳು, ಅಂಗನವಾಡಿ ಮತ್ತು ಆಶಾ ಕಾರ್ಯಕರ್ತೆಯರು ಇದ್ದರು.

Continue Reading

Mysore

ಸಿಸಿಬಿ ಪೊಲೀಸರ ಕಾರ್ಯಾಚರಣೆ: 17 ಲಕ್ಷ ರೂ. ಮೌಲ್ಯದ ಗಾಂಜಾ ವಶ, 2 ಆರೋಪಿ ಅರೆಸ್ಟ್‌

Published

on

ಮೈಸೂರು: ನಗರದಲ್ಲಿ ಸಿಸಿಬಿ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, 17 ಲಕ್ಷ ರೂ.  ಮೌಲ್ಯದ ಹೈಡ್ರೋ ಗಾಂಜಾವನ್ನು ವಶ ಪಡೆದು, ಇಬ್ಬರು ಆರೊಪಿಗಳನ್ನು ಬಂಧಿಸಿದ್ದಾರೆ.

ನರಸಿಂಹರಾಜ ಪೊಲೀಸ್ ಠಾಣೆ ವ್ಯಾಪ್ತಿಯ ನಾಯ್ಡುನಗರದಲ್ಲಿ ಸಿಸಿಬಿ ಪೊಲೀಸರು ದಿಢೀರ್ ದಾಳಿ ಮಾಡಿ ಸುಮಾರು 17 ಲಕ್ಷ ರೂ. ಮೌಲ್ಯದ 176 ಗ್ರಾಂ ಹೈಡ್ರೋ ಗಾಂಜಾ ವಶಕ್ಕೆ ಪಡೆದಿದ್ದಾರೆ.


ಹೈಡ್ರೋ ಗಾಂಜಾ ಮಾರಾಟ ಮತ್ತು ಖರೀದಿಗೆ ಸಂಬಂಧಿಸಿದಂತೆ ಅಫ್ತಾಬ್ ಅಲಿ ಬೇಗ್ ಮತ್ತು ಪ್ರತಾಪ್ ಕುಮಾರ್ ಎಂಬುವರ ಬಂಧನವಾಗಿದೆ.

ಇನ್ನೂ ಕಾರ್ಯಾಚರಣೆಗೆ ಸಂಬಂಧಿಸಿದಂತೆ ಎನ್. ಆರ್. ಪೊಲೀಸ್ ಠಾಣೆಯಲ್ಲಿ NDPS ಕಾಯ್ದೆ 1989ರ ಅಡಿಯಲ್ಲಿ FIR ದಾಖಲಾಗಿದೆ.

Continue Reading

Trending

error: Content is protected !!