Mysore
ಕುಟುಂಬದ ಸದೃಢತೆಗೆ ಆರ್ಥಿಕ ಸ್ವಾವಲಂಬನೆ ಅಗತ್ಯ
ಗಾನವಿ ಫೌಂಡೇಷನ್ ಟೈಲರಿಂಗ್ ತರಬೇತಿ ಕಾರ್ಯಾಗಾರದ ಸಮಾರೋಪದಲ್ಲಿ ಅಡಿಷನಲ್ ಎಸ್‌ಪಿ ಡಾ.ಬಿ.ಎನ್.ನಂದಿನಿ
ಮೈಸೂರು : ಒಂದು ಕುಟುಂಬ ಸಮಾಜದಲ್ಲಿ ಸದೃಢವಾಗಿ ನಿಲ್ಲಲು ಮುಖವಾಗಿ ಆರ್ಥಿಕ ಸ್ವಾವಲಂಬನೆ ಮುಖ್ಯವಾಗಿದ್ದು, ಕುಟುಂಬಗಳು ಸದೃಢವಾದರೆ ದೇಶವೂ ಅಭಿವೃದ್ಧಿಯಾಗುತ್ತದೆ ಎಂದು ಹೆಚ್ಚುವರಿ ಪೊಲೀಸ್ ಅಧೀಕ್ಷಕರಾದ ಡಾ.ಬಿ.ಎನ್.ನಂದಿನಿ ಹೇಳಿದರು.
ಜ್ಯೋತಿನಗರ ಪೊಲೀಸ್ ಕ್ವಾಟ್ರಸ್ ಬಳಿಯ ಪೊಲೀಸ್ ಕ್ರೀಡಾ ಮತ್ತು ಸಾಂಸ್ಕೃತಿಕ ಭವನದಲ್ಲಿ ಮಂಗಳವಾರ ಸಂಜೆ ಗಾನವಿ ಫೌಂಡೇಷನ್ ಸಹಯೋಗದೊಂದಿಗೆ ಪೊಲೀಸ್ ಸಿಬ್ಬಂದಿಗಳ ಕುಟುಂಬದವರಿಗೆ ಏರ್ಪಡಿಸಿದ್ದ ಉಚಿತ ಟೈಲರಿಂಗ್ ತರಬೇತಿ ಸಮಾರೋಪ ಸಮಾರಂಭದಲ್ಲಿ ಅವರು ಮಾತನಾಡಿದರು.
ಸ್ವಾತಂತ್ರ್ಯದ ಅಮೃತ ಮಹೋತ್ಸವದ ಸಂದರ್ಭದಲ್ಲಿದ್ದರೂ ನಾವಿಂದು ಮಹಿಳೆಯರ ಆರ್ಥಿಕ ಸ್ವಾವಲಂಬನೆ ಬಗ್ಗೆ ಯೋಚನೆ ಮಾಡುತ್ತಿದ್ದೇವೆ. ಮಹಿಳೆಗೆ ಧೈರ್ಯ, ವಿಶ್ವಾಸ, ಭರವಸೆ ತುಂಬುವ ಕೆಲಸವಾಗಬೇಕಿದೆ. ಇದರಿಂದ ಮಹಿಳೆ ಮತ್ತಷ್ಟು ಚೇತರಿಕೆ ಕಾಣಬಹುದು. ಈ ನಿಟ್ಟಿನಲ್ಲಿ ಇಂತಹ ತರಬೇತಿಗಳು ಅಗತ್ಯವಾಗಿದ್ದು, ಮಹಿಳೆಯರು ಇದರ ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.
ಪ್ರಸ್ತುತ ದೇಶದಲ್ಲಿ ಸೈಬರ್ ಕ್ರೈಂ ಹೆಚ್ಚಾಗುತ್ತಿದೆ. ಮೊಬೈಲ್ಗಳಲ್ಲಿ ಬರುವ ಯಾವುದೇ ಅವಿಶ್ವಾಸನೀಯ ಆಪ್ಗಳನ್ನು ಡೌನ್ ಲೋಡ್ ಮಾಡಬಾರದು. ಅಥವಾ ಅಪರಿಚಿತ ವ್ಯಕ್ತಿಗಳಿಗೆ ತಮ್ಮ ವೈಯುಕ್ತಿಕ ವಿವರಗಳನ್ನು ನೀಡಬಾರದು. ವಿಶೇಷವಾಗಿ ನೀವು ಮನೆಗೆ ಬೀಗ ಹಾಕಿ ಎಲ್ಲೆ ಹೋದರೂ ಸ್ಟೇಟಸ್ ಹಾಕಬೇಡಿ. ನಿಮ್ಮ ಸ್ಟೇಟಸ್ ನೋಡಿಕೊಂಡು ಕಳ್ಳರು ನಿಮ್ಮ ಮನೆ ನುಗ್ಗಬಹುದು ಎಂಬ ಎಚ್ಚರಿಕೆಯನ್ನೂ ಸಹ ಅವರು ನೀಡಿದರು.
ಗಾನವಿ ಫೌಂಡೇಷನ್ ಅತ್ಯಂತ ತಾಳ್ಮೆ ಮತ್ತು ಶ್ರದ್ಧೆಯಿಂದ ಪೊಲೀಸ್ ಸಿಬ್ಬಂದಿಗಳ ಕುಟುಂಬದವರಿಗೆ ಸುಮಾರು ೧೦ ದಿನಗಳ ಕಾಲ ತರಬೇತಿ ನೀಡಿದೆ. ಇಷ್ಟೊಂದು ಕಡಿಮೆ ಅವಧಿಯಲ್ಲಿ ಮಹಿಳೆಯರು ಹೊಲಿಗೆ ಕಲಿತಿರುವುದು ಅತ್ಯಂತ ಸಂತೋಷಕರ ವಿಷಯ ಇದರ ಸಂಪೂರ್ಣ ಶ್ರೇಯಸ್ಸು ಗಾನವಿ ಫೌಂಡೇಷನ್ ಅವರ ಸಿಬ್ಬಂದಿಗಳಿಗೆ ಸಲ್ಲುತ್ತದೆ ಎಂದರು.
ಇದೇ ಸಂದರ್ಭದಲ್ಲಿ ತರಬೇತಿ ಕುರಿತು ರಾಣಿ ಕಿಶೋರ್, ಶೋಭಾ ಧನಂಜಯ್ಯ, ದೀಪಾ ಕಿರಣ್, ಆರ್.ಪಾರ್ವತಿ ಮಾತನಾಡಿ, ಸಿಬ್ಬಂದಿಗಳ ಮಕ್ಕಳಿಗೆ ಕಂಪ್ಯೂಟರ್ ಮತ್ತು ಡ್ರೈವಿಂಗ್ ತರಬೇತಿ ಕೊಡಿಸುವಂತೆ ಮನವಿ ಮಾಡಿದರು.
ಸಮಾರಂಭದಲ್ಲಿ ತರಬೇತಿ ಪಡೆದ ಸುಮಾರು ೨೪೩ ಮಹಿಳೆಯರಿಗೆ ಪ್ರಮಾಣ ಪತ್ರವನ್ನು ವೇದಿಕೆಯಲ್ಲಿದ್ದ ಗಣ್ಯರು ವಿತರಿಸಿದರು. ಗಾನವಿ ಫೌಂಡೇಷನ್ ಮುಖ್ಯಸ್ಥರಾದ ರಾಮೇಗೌಡ ಹಾಗೂ ಅಶ್ವಿನಿಯವರನ್ನು ವೇದಿಕೆಯಲ್ಲಿ ಸನ್ಮಾನಿಸಲಾಯಿತು.
ಉಪ ಪೊಲೀಸ್ ಆಯುಕ್ತರಾದ ಎ.ಮಾರುತಿ (ಸಿಎಆರ್) ಎ.ಜಿ.ಅಶೋಕ್ ಕುಮಾರ್( ಸಿಎಆರ್), ಅಶ್ವದಳದ ಕಮಾಂಡೆಂಟ್ ಶೈಲೇಂದ್ರ, ಸಿಎಆರ್ ಆರ್ಪಿಐ ಕೆ.ಎಂ.ಮೂರ್ತಿ, ಗಾನವಿ ಫೌಂಡೇಷನ್ ಮುಖ್ಯಸ್ಥರಾದ ರಾಮೇಗೌಡ, ಅಶ್ವಿನಿ ರಾಮೇಗೌಡ ಮುಂತಾದವರು ವೇದಿಕೆಯಲ್ಲಿದ್ದರು.
ಕೋಟ್
ತರಬೇತಿಗೆ ಸೇರಿದಾಗ ನನಗೆ ಹೊಲಿಗೆ ಯಂತ್ರದ ಪೆಡಲ್ ತುಳಿಯಲು ಬರುತ್ತಿರಲಿಲ್ಲ. ೧೦ ದಿನಗಳಲ್ಲಿ ಮಕ್ಕಳ ಫ್ರಾಕ್ ಹೊಲಿಯುವಷ್ಟರ ಮಟ್ಟಿಗೆ ಪ್ರಾವೀಣ್ಯತೆ ಪಡೆದಿದ್ದೇನೆ. ಇದಕ್ಕೆ ಗಾನವಿ ಫೌಂಡೇಷನ್ ತರಬೇತುದಾರರ ತಾಳ್ಮೆ, ಕಾರ್ಯಕ್ಷಮತೆ, ದಕ್ಷತೆ ಕಾರಣವಾಗಿದೆ.ಇದನ್ನು ಮತ್ತಷ್ಟು ತರಬೇತಿ ಪಡೆದು ಟೈಲರಿಂಗ್ ನನ್ನ ವೃತ್ತಿಯಾಗಿ ಮಾಡಿಕೊಳ್ಳುವ ವಿಶ್ವಾಸ ಹೊಂದಿದ್ದೇನೆ.
ರಾಣಿ ಕಿಶೋರ್, ತರಬೇತಿ ಪಡೆದ ಮಹಿಳೆ
Mysore
ಜೂಜಾಡುತ್ತಿದ್ದ ನಾಲ್ವರ ಬಂಧನ
ಮೈಸೂರು: ಕಾನೂನು ಬಾಹಿರವಾಗಿ ಜೂಜಾಡುತ್ತಿದ್ದ ಅಡ್ಡೆ ಮೇಲೆ ದಾಳಿ ಮಾಡಿ ನಾಲ್ವರನ್ನು ಸಿ.ಸಿ.ಬಿ ಪೊಲೀಸರು ಬಂಧಿಸಿ ಒಟ್ಟು 12.5 ಸಾವಿರ ರೂ ನಗದು ಮತ್ತು ಪರಿಕರಗಳನ್ನು ವಶಪಡಿಸಿಕೊಂಡಿದ್ದಾರೆ.
ವಿಜಯನಗರ ಪೊಲೀಸ್ ಠಾಣಾ ವ್ಯಾಪ್ತಿಯ ವಿಜಯ ನಗರ 2ನೇ ಹಂತದ ಜೆ.ಬಿ. ಪ್ಯಾರಡೈಸ್ನ ಕೊಠಡಿಯೊಂದರಲ್ಲಿ ಕಾನೂನು ಬಾಹಿರವಾಗಿ ಹಣವನ್ನು ಪಣವಾಗಿಟ್ಟುಕೊಂಡು ಜೂಜಾಡುತ್ತಿದ್ದರು.
ಇದರ ಬಗ್ಗೆ ಜನವರಿ 14 ರಂದು ನಗರದ ಸಿ.ಸಿ.ಬಿ ಅಧಿಕಾರಿಗಳಿಗೆ ಬಂದ ಖಚಿತ ಮಾಹಿತಿಯ ಮೇರೆಗೆ ಸಿ.ಸಿ ಬಿ.ಅಧಿಕಾರಿ ಮತ್ತು ಸಿಬ್ಬಂದಿ ದಾಳಿ ಮಾಡಿ ನಾಲ್ವರನ್ನು ಬಂಧಿಸಿದ್ದಾರೆ. ವಿ ಜಯನಗರ ಪೊಲೀಸರು ಪ್ರಕರಣವನ್ನು ದಾಖಲಿಸಿಕೊಂಡು ತನಿಖೆಯನ್ನು ಕೈಗೊಂಡಿರುತ್ತಾರೆ.
Mysore
ಕಾನೂನು ಬಾಹಿರವಾಗಿ ಗ್ಯಾಸ್ ದಾಸ್ತಾನು ಮಾಡುತ್ತಿದ್ದ ನಾಲ್ವರ ಬಂಧನ.
ಮೈಸೂರು: ವಿವಿಧ ಕಂಪನಿಗೆ ಕಾನೂನು ಬಾಹಿರವಾಗಿ ಗ್ಯಾಸ್ ದಾಸ್ತಾನು ಮಾಡಿಕೊಂಡು ಗ್ಯಾಸ್ ರೀಫಿಲ್ಲಿಂಗ್ ಮಾಡುತ್ತಿದ್ದ ನಾಲ್ವರನ್ನು ಸಿ.ಸಿ.ಬಿ ಪೊಲೀಸರು ಬಂಧಿಸಿ. ಒಟ್ಟು 127 ಸಿಲಿಂಡರ್ ಗಳು 79 ರಾಡುಗಳು, 2 ಡಿಜಿಟಲ್ ಯಂತ್ರಗಳು ಹಾಗೂ 1 ಗೂಡ್ಸ್ ವಾಹನವನ್ನು ವಶಪಡಿಸಿಕೊಂಡಿದ್ದಾರೆ.
ನಗರದ ನರಸಿಂಹರಾಜ ಪೊಲೀಸ್ ಠಾಣಾ ವ್ಯಾಪ್ತಿಯ ಜಮೀನಿನಲ್ಲಿ ನಿರ್ಮಾಣ ಮಾಡಿರುವ ಶೆಡ್ ನಲ್ಲಿ ಅಕ್ರಮವಾಗಿ ವಿವಿಧ ಕಂಪನಿಗಳಿಗೆ ಅಡುಗೆ ಅನಿಲ ಸಿಲಿಂಡರ್ ಗಳನ್ನು ಉಪಯೋಗಿಸಿಕೊಂಡು ಯಾವುದೇ ಅಧಿಕೃತ ರಹದಾರಿ ಮತ್ತು ಖರೀದಿ ಮಾಡಿರುವ ಬಿಲ್ ಇಲ್ಲದೆ.
ಗ್ಯಾಸ್ ರೀಫಿಲ್ಲಿಂಗ್ ಮಾಡುತ್ತಿದ್ದಾರೆ ಎಂದು ಜನವರಿ 11 ರಂದು ಸಿ.ಸಿ.ಬಿ ಅಧಿಕಾರಿಗಳಿಗೆ ಬಂದ ಖಚಿತ ಮಾಹಿತಿಯ ಮೇರೆಗೆ. ಸಿ.ಸಿ.ಬಿ ಅಧಿಕಾರಿ ಮತ್ತು ಸಿಬ್ಬಂದಿ ದಾಳಿ ಮಾಡಿ ಆರೋಪಿಗಳನ್ನು ಬಂಧಿಸಿದ್ದಾರೆ.
Mysore
ಮಾದಕವಸ್ತು ಮಾರಾಟ ಮಾಡಲು ಪ್ರಯತ್ನಿಸುತ್ತದ್ದ ಪೆಡ್ಲರ್ ಬಂಧನ
ಮೈಸೂರು ಎಂ.ಡಿ.ಎಂ.ಎ ಎಂಬ ನಿಷೇಧಿತ ಮಾದಕವಸ್ತುವನ್ನು ಮಾರಾಟ ಮಾಡಲು ಪ್ರಯತ್ನಿಸಿದ ಪೆಡ್ಲರ್ ನನ್ನು ಸಿ.ಸಿ.ಬಿ ಘಟಕದ ಪೊಲೀಸರು ಬಂಧಿಸಿ ಒಟ್ಟು 20. ಸಾವಿರ ರೂ ಮೌಲ್ಯದ 6 ಗ್ರಾಂ 600 ಮಿಲಿ ಮಾದಕವಸ್ತುವನ್ನು ವಶಪಡಿಸಿಕೊಂಡಿದ್ದಾರೆ.
ನಗರದ ಉದಯಗಿರಿ ಪೊಲೀಸ್ ಠಾಣಾ ವ್ಯಾಪ್ತಿಯ ಕಲ್ಯಾಣಿಗಿರಿ ಹಳೇ ಆರ್.ಟಿ.ಒ. ಅಫೀಸ್ ಹತ್ತಿರ ಇರುವ ತ್ರಿವೇಣೆ ಪಾರ್ಕ್ ಬಳಿ. ಎಂ.ಡಿ.ಎಂ.ಎ ಎಂಬ ನಿಷೇಧಿತ ಮಾದಕವಸ್ತುವನ್ನು ಮಾರಾಟ ಮಾಡಲು ಒಬ್ಬ ಪೆಡ್ಲರ್ ನಿಂತಿದ್ದಾನೆಂದು ಜನವರಿ 7 ರಂದು ನಗರದ ಸಿ.ಸಿ.ಬಿ. ಘಟಕದ ಅಧಿಕಾರಿಗಳಿಗೆ ಬಂದ ಖಚಿತ ಮಾಹಿತಿಯ ಮೇರೆಗೆ.
ಸಿ.ಸಿ.ಬಿ ಘಟಕದ ಅಧಿಕಾರಿ ಮತ್ತು ಸಿಬ್ಬಂದಿ ದಾಳಿ ಮಾಡಿ ಆರೋಪಿಯನ್ನು ಬಂಧಿಸಿದ್ದಾರೆ. ಉದಯಗಿರಿ ಪೊಲೀಸ್ ಠಾಣೆಯಲ್ಲಿ ಪ್ರಕರಣವನ್ನು ದಾಖಲಿಸಿಕೊಂಡು ತನಿಖೆಯನ್ನು ಕೈಗೊಂಡಿದ್ದಾರೆ.
-
Chamarajanagar20 hours ago
Hannur|ಒಂದೇ ಹುದ್ದೆಗಾಗಿ ಇಬ್ಬರು ಅಧಿಕಾರಿಗಳ ಜಟಾಪಟಿ
-
Hassan23 hours ago
Hassan| ಕಾಡಾನೆ ದಾಳಿಗೆ ಕಾರ್ಮಿಕ ಬ*ಲಿ
-
State15 hours ago
ಯಲ್ಲಾಪುರ, ಸಿಂಧನೂರಿನಲ್ಲಿ ಭೀಕರ ಅಪಘಾತ: ಮೃತರ ಕುಟುಂಬಕ್ಕೆ 3ಲಕ್ಷ ಪರಿಹಾರ ಘೋಷಿಸಿದ ಸಿಎಂ
-
Chamarajanagar12 hours ago
ಜ.23ರಂದು ಚಾಮರಾಜನಗರ ಪಟ್ಟಣದ ವಿವಿಧೆಡೆ ವಿದ್ಯುತ್ ವ್ಯತ್ಯಯ
-
National - International15 hours ago
ಪನಾಮಾ ಕಾಲುವೆ ವಿವಾದ: ಟ್ರಂಪ್ ಹೇಳಿಕೆ ತಿರಸ್ಕರಿಸಿದ ಪನಾಮಾ ಅಧ್ಯಕ್ಷ ಜೋಸ್ ರೌಲ್
-
National - International13 hours ago
ರಾಜ್ಯದಲ್ಲಿ ಪ್ರತ್ಯೇಕ ಎರಡು ಕಡೆ ಅಪಘಾತ: ಮೃತರಿಗೆ 2 ಲಕ್ಷ ಪರಿಹಾರ ಘೋಷಿಸಿದ ಪ್ರಧಾನಿ
-
Hassan18 hours ago
ಕಾಡಾನೆ ದಾಳಿಯಿಂದ ವೃದ್ದ ಸಾ*ವು ಪ್ರಕರಣ
-
Kodagu12 hours ago
ಸಾರ್ವಜನಿಕರಿಗೆ ಪಂಗನಾಮ ಹಾಕಿದ್ದ ಫರ್ನೀಚರ್ ಅಂಗಡಿ ಮಾಲೀಕನ ಬಂಧನ