Connect with us

Education

ಮೈವಿವಿ ಕುಲಪತಿ ಪ್ರೊ.ಲೋಕನಾಥ್ ನೇಮಕ ರದ್ದುಗೊಂಡಿದೆ

Published

on

ಮೈಸೂರು : ಮೈಸೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ.ಲೋಕನಾಥ್ ನೇಮಕ ರದ್ದುಗೊಂಡಿದೆ.

ನೂತನ ಕುಲಪತಿ ನೇಮಕಕ್ಕೆ ಜಾಹೀರಾತು, ಶೋಧನಾ ಸಮಿತಿ ರಚನೆಗೆ ಕೋರ್ಟ್ ಆದೇಶ ನೀಡಿದೆ. ಲೋಕನಾಥ್ ನೇಮಕ ಪ್ರಶ್ನಿಸಿ ಪ್ರೊ.ಶರತ್ ಅನಂತಮೂರ್ತಿ ಕೋರ್ಟ್ ಮೊರೆ ಹೋಗಿದ್ದರು‌‌.
ಈ ಹಿಂದೆ ಪ್ರೊ.ಶಶಿಧರ ಪ್ರಸಾದ್ ನೇಮಕ ಸಹ ಇದೇ ರೀತಿ ರದ್ದಾಗಿತ್ತು. ಪ್ರೊ.ಶಶಿಧರ ಪ್ರಸಾದ್
ಲೋಕನಾಥ್ ಅವರಿಗೆ ಸಂಶೋದನಾ ಮಾರ್ಗದರ್ಶಕರಾಗಿದ್ದರು. ಇದೀಗ ಅವರ ಶಿಷ್ಯ ಡಾ.ಲೋಕನಾಥ್ ಅವರು ಸಹ ಕುಲಪತಿ ಹುದ್ದೆ ಕಳೆದುಕೊಂಡಿರುವುದು ಕಾಕತಾಳೀಯ.

Continue Reading
Click to comment

Leave a Reply

Your email address will not be published. Required fields are marked *

Education

ಕರ್ನಾಟಕ ಸಿಇಟಿ ರಿಸಲ್ಟ್ ಯಾವಾಗ? ಇಲ್ಲಿದೆ ಸ್ಪಷ್ಟನೆ

Published

on

ಈಗಾಗಲೇ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಿದ್ದು, ಇದೀಗ ಉತ್ತೀರ್ಣರಾಗಿರುವ ವಿದ್ಯಾರ್ಥಿಗಳು ಎಂಜಿನಿಯರಿಂಗ್‌ ಸೇರಿದಂತೆ ವಿವಿಧ ವೃತ್ತಿಪರ ಕೋರ್ಸ್‌ಗಳ ಪ್ರವೇಶಕ್ಕಾಗಿ ಬರೆದ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ ) ಫಲಿತಾಂಶಕ್ಕಾಗಿ ಕಾಯುತ್ತಿದ್ದಾರೆ. ಇನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಎಚ್.ಪ್ರಸನ್ನ ಪ್ರತಿಕ್ರಿಯಿಸಿದ್ದು, ದ್ವಿತೀಯ P U ಎರಡನೇ ಪರೀಕ್ಷೆ ಮತ್ತು ಕೃಷಿ ಪ್ರಾಯೋಗಿಕ ಪರೀಕ್ಷೆಗಳ ಫಲಿತಾಂಶ ಘೋಷಣೆಯಾದ ನಂತರವೇ ಸಾಮಾನ್ಯ ಪ್ರವೇಶ ಪರೀಕ್ಷೆಯ (CET-24) ಫಲಿತಾಂಶವನ್ನು ಪ್ರಕಟಿಸಲಾಗುತ್ತದೆ ಎಂದು ಸ್ಪಷ್ಟಪಡಿಸಿದ್ದಾರೆ. ಈ ಮೂಲಕ ಎಲ್ಲಾ ಗೊಂದಲಗಳಿಗೆ ತೆರೆ ಎಳೆದಿದ್ದಾರೆ.

ಇಂದು ಸೋಮವಾರ (ಮೇ 20) ಫಲಿತಾಂಶ ಪ್ರಕಟಿಸುತ್ತಾರೆ ಎಂದು ಸಾಮಾಜಿಕ ಮಾಧ್ಯಮಗಳಲ್ಲಿ ಸುದ್ದಿ ಹರಿದಾಡುತ್ತಿತ್ತು. ಇದರ ಬೆನ್ನಲ್ಲೇ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಎಚ್.ಪ್ರಸನ್ನ ಅವರು ಪ್ರತಿಕ್ರಿಯಿಸಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಸುದ್ದಿ ಸತ್ಯಕ್ಕೆ ದೂರವಾದುದು. ದ್ವಿತೀಯ P U ಎರಡನೇ ಪರೀಕ್ಷೆ ಮತ್ತು ಕೃಷಿ ಪ್ರಾಯೋಗಿಕ ಪರೀಕ್ಷೆಗಳ ಫಲಿತಾಂಶ ಘೋಷಣೆಯಾದ ನಂತರವೇ ಸಿಇಟಿ ಫಲಿತಾಂಶ ಪ್ರಕಟವಾಗಲಿದೆ ಎಂದು ತಿಳಿಸಿದರು.

ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಸಿಇಟಿ ಪರೀಕ್ಷೆಯನ್ನು ಏಪ್ರಿಲ್ 18, 19ರಂದು ನಡೆಸಿತ್ತು. ಇದರ ಫಲಿತಾಂಶವು ಲೋಕಸಭಾ ಚುನಾವಣೆಯ ರಿಸಲ್ಟ್‌ ಬಳಿಕವೇ ಘೋಷಣೆಯಾಗಲಿದೆ ಎಂದು ಹೇಳಲಾಗುತ್ತಿತ್ತು. ಆದರೆ, ಈಗ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಪ್ರಸನ್ನ ಸ್ಪಷ್ಟನೆ ನೀಡಿದ್ದು, ದ್ವಿತೀಯ ಪಿಯುಸಿ 2ನೇ ಪರೀಕ್ಷೆ ಫಲಿತಾಂಶ ನಂತರವೇ ಸಿಇಟಿ ಫಲಿತಾಂಶವನ್ನು ಪ್ರಕಟ ಮಾಡಲಾಗುವುದು ಎಂದು ಹೇಳಿದ್ದಾರೆ.

ಜೆಕೆವಿಕೆಯ ಪ್ರಾಯೋಗಿಕ ಪರೀಕ್ಷೆ ಮೇ 25ರಂದು ನಡೆಯಲಿದ್ದು, ಫಲಿತಾಂಶ ಮೇ 30ರಂದು ಪ್ರಕಟವಾಗಲಿದೆ. ಇನ್ನು ದ್ವಿತೀಯ ಪಿಯು ಪರೀಕ್ಷೆ-2ರ ಫಲಿತಾಂಶ ಮೇ 30ರಂದು ಪ್ರಕಟವಾಗುವ ಸಾಧ್ಯತೆಗಳಿವೆ. ಇದಾದ ಬಳಿಕ ಸಿಇಟಿ ರಿಸಲ್ಟ್​ ಪ್ರಕಟವಾಗಲಿದೆ. ಈ ಬಾರಿ 3.49 ಲಕ್ಷ ವಿದ್ಯಾರ್ಥಿಗಳು ಸಿಇಟಿ ಪರೀಕ್ಷೆ ಬರೆದಿದಿದ್ದಾರ ಪ್ರತಿ ವರ್ಷ ಮೇ, ಜೂನ್‌ನಲ್ಲಿ ಪರೀಕ್ಷೆ ನಡೆದರೆ ಈ ಬಾರಿ ಏಪ್ರಿಲ್‌ನಲ್ಲೇ ಪರೀಕ್ಷೆ ನಡೆಸಲಾಗಿತ್ತು. ಆದರೆ, ಅಧಿಕಾರಿಗಳ ಎಡವಟ್ಟಿನಿಂದ ಫಲಿತಾಂಶ ವಿಳಂಬವಾಗಿದೆ ಎಂಬ ದೂರುಗಳೂ ಕೇಳಿ ಬರುತ್ತಿವೆ.

ಪ್ರಸಕ್ತ ಸಾಲಿನಲ್ಲಿ ದ್ವಿತೀಯ ಪಿಯುಸಿಗೆ ಮೂರು ಪರೀಕ್ಷೆಗಳನ್ನು ನಡೆಸಲಾಗುತ್ತಿದ್ದು, ಮೊದಲ ಎರಡು ಪರೀಕ್ಷೆಗಳ ಪೈಕಿ ಯಾವುದರಲ್ಲಿ ಹೆಚ್ಚು ಅಂಕ ಬಂದಿದೆಯೊ ಅವುಗಳನ್ನೇ ಸಿಇಟಿ ರ‍್ಯಾಂಕ್‌ಗೆ ಪರಿಗಣನೆ ಮಾಡಲಾಗುವುದು ಎಂದು ಹೇಳಲಾಗಿದೆ. ಹೀಗಾಗಿ ಎರಡನೇ ಪರೀಕ್ಷೆಯ ಫಲಿತಾಂಶಕ್ಕಾಗಿ ಕೆಇಎ ಕಾಯುವುದು ಅನಿವಾರ್ಯವಾಗಿದೆ.

Continue Reading

Education

ಎಸ್‌ಎಸ್‌ಎಲ್‌ಸಿ. PUC ವಿದ್ಯಾರ್ಥಿಗಳ ʼMarks Card’ ನಲ್ಲಿ ಮಹತ್ವದ ಬದಲಾವಣೆ

Published

on

SSLC Marks Card: ಎಸ್‌ಎಸ್‌ಎಲ್‌ಸಿ ಹಾಗೂ ಪಿಯುಸಿ ವಿದ್ಯಾರ್ಥಿಗಳಿಗೆ ಶಿಕ್ಷಣ ಸಚಿವರು ಸಿಹಿ ಸುದ್ದಿಯೊಂದನ್ನು ನೀಡಿದ್ದು, ಮಾರ್ಕ್ಸ್‌ ಕಾರ್ಡ್‌ ನಲ್ಲಿ ಮಹತ್ವದ ಬದಲಾವಣೆ ಮಾಡುವುದಾಗಿ ಹೇಳಿದ್ದಾರೆ.

ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಪರೀಕ್ಷೆಯನ್ನು ಅನುತ್ತೀರ್ಣರಾದ ವಿದ್ಯಾರ್ಥಿಗಳಿಗೆ ಸಪ್ಲಿಮೆಂಟರ್‌ ಪರೀಕ್ಷೆ ಇರಲಿದೆ. ಆದರೆ ಮಾರ್ಕ್ಸ್‌ ನೀಡುವಾಗ ಸಪ್ಲಿಮೆಂಟರ್‌ ಎಂದು ನಮೂದಿಸುವುದಿಲ್ಲ ಎಂದು ಹೇಳಿದ್ದಾರೆ.

ಶಾಲಾ ಮಕ್ಕಳಿಗೆ ವಾರದಲ್ಲಿ ಎರಡು ದಿನ ಮೊಟ್ಟೆ, ಚಿಕ್ಕಿ ನೀಡಲಾಗುವುದು. ವಾರದಲ್ಲಿ ಆರು ದಿನ ಕ್ಷೀರ ಭಾಗ್ಯದ ಹಾಲು ನೀಡುವ ಕ್ರಮ ಕೈಗೊಂಡಿರುವುದಾಗಿಯೂ, ಮೂರು ದಿನ ಹಾಲಿಗೆ ರಾಗಿ ಮಾಲ್ಟ್‌ ಮಿಕ್ಸ್‌ ಮಾಡಿ ಕೊಡಲಾಗುತ್ತದೆ. ಜೊತೆಗೆ ಶಾಲಾ ಬ್ಯಾಗ್‌ ಹೊರೆ ಕೂಡಾ ಕಡಿಮೆ ಮಾಡಲಾಗುತ್ತದೆ. ಸರಕಾರಿ ಶಾಲೆಗಳನ್ನು ಉನ್ನತೀರಕರಣ ಮಾಡುವುದಕ್ಕೆ ಸೂಕ್ತ ಕ್ರಮ ಕೈಗೊಳ್ಳಲಾಗಿದ ಎಂದು ಅವರು ಮಾಧ್ಯಮದವರಿಗೆ ಹೇಳಿದ್ದಾರೆ.

Continue Reading

Education

11,894 ಶಿಕ್ಷಕರ ನೇಮಕಾತಿ; ರಾಜ್ಯಸರಕಾರದಿಂದ ಮಹತ್ವದ ಘೋಷಣೆ

Published

on

ಬೆಂಗಳೂರು: 2022 ಹಾಗೂ 2023 ನೇ ಸಾಲಿನಲ್ಲಿ ನಡೆಸಿದ 11,894 ಪದವೀಧರ ಪ್ರಾಥಮಿಕ ಶಿಕ್ಷಕರ ನೇಮಕಾತಿ ಬಗ್ಗೆ ರಾಜ್ಯ ಸರ್ಕಾರವು ಮಹತ್ವದ ನಿರ್ಧಾರವನ್ನು ತೆಗೆದುಕೊಂಡಿದೆ.

11,894 ಶಿಕ್ಷಕರ ನೇಮಕಾತಿ ಗೆ ಕುರಿತಂತೆ ಶಾಲಾ ಶಿಕ್ಷಣ ಇಲಾಖೆ ಆದೇಶವನ್ನು ಹೊರಡಿಸಿದೆ. ಈ ನೇಮಕಾತಿಯ ಸುಪ್ರೀಂ ಕೋರ್ಟ್ ನ ಅಂತಿಮ ತೀರ್ಪಿಗೆ ಒಳಪಟ್ಟಿದೆ.

ಈ ವಿಚಾರವಾಗಿ ತಂದೆ ಅಥವಾ ಗಂಡನ ಆದಾಯ ಪ್ರಮಾಣ ಪತ್ರವನ್ನು ಪರಿಶೀಲಿಸಬೇಕಾ ಎಂಬುದರ ಕುರಿತ ತೀರ್ಪು ಸುಪ್ರೀಂ ಕೋರ್ಟ್ ನಿಂದ ಹೊರ ಬರಲಿದ್ದು. ಅಲ್ಲಿಯವರೆಗೆ ನೇಮಕಾತಿಗೆ ತಡೆ ನೀಡಿದೆ.

ರಾಜ್ಯ ಸರ್ಕಾರದ ಕೋರಿಕೆಯನ್ನು ಕೇಳಿರುವ ಸುಪ್ರೀಂಕೋರ್ಟ್‌ ತನ್ನ ತೀರ್ಪಿಗೆ ಬದ್ಧವಾಗಿ ನೇಮಕಗೊಂಡ ಶಿಕ್ಷಕರು ಪಠ್ಯ ಚಟುವಟಿಕೆ ಮುಂದುವರೆಸಲು ರಾಜ್ಯ ಸರ್ಕಾರಕ್ಕೆ ಅವಕಾಶ ನೀಡಿದೆ.

Continue Reading

Trending

error: Content is protected !!