Mysore
ಮೈಸೂರು ಊಟಿ ರಾಷ್ಟ್ರೀಯ ಹೆದ್ದಾರಿ ಜಲಾವೃತ

ಮೈಸೂರು: ಜಿಲ್ಲೆಯಲ್ಲಿ ನಿರಂತರವಾಗಿ ಮಳೆ ಮುಂದುವರೆದಿದ್ದು, ಕಪಿಲಾ ನದಿಯಲ್ಲಿ ಪ್ರವಾಹ ಹೆಚ್ಚಿರುವ ಹಿನ್ನೆಲೆ ನಂಜನಗೂಡು ಹೊರವಲಯದ ಮಲ್ಲನ ಮೂಲೆ ಮಠದ ಬಳಿ ಮೈಸೂರು ಊಟಿ ರಾಷ್ಟ್ರೀಯ ಹೆದ್ದಾರಿ ಜಲಾವೃತವಾಗಿದೆ.
ಹೆದ್ದಾರಿಯಲ್ಲಿ 4 ಅಡಿಗೂ ಹೆಚ್ಚು ನೀರು ಬಂದಿದ್ದು, ಈ ಹೆದ್ದಾರಿಯಲ್ಲಿ ವಾಹನ ಸಂಚಾರವನ್ನು ನಿರ್ಬಂಧಿಸಲಾಗಿದೆ. ಕೇರಳದ ವಯನಾಡು ಪ್ರದೇಶದಲ್ಲಿ ಮಳೆ ಮುಂದುವರಿದಿರುವ ಪರಿಣಾಮವಾಗಿ ಕಬಿನಿ ಜಲಾಶಯದಿಂದ ಕಪಿಲಾ ನದಿಗೆ 70ಸಾವಿರ ಕ್ಯೂಸೆಕ್ ನೀರು ಹರಿಸಲಾಗುತ್ತಿದ್ದು, ನದಿಯು ಅಪಾಯದ ಮಟ್ಟ ಮೀರಿ ಹರಿಯುತ್ತಿದೆ.

ಮೈಸೂರಿನಿಂದ ನಂಜನಗೂಡಿಗೆ ತೆರಳುವ ವಾಹನಗಳನ್ನು ಅಡಕನಹಳ್ಳಿ ಕೈಗಾರಿಕಾ ಪ್ರದೇಶದ ಬಳಿ ಬ್ಯಾರಿಕೇಡ್ ಅಳವಡಿಸಿ ತಡೆಯಲಾಗಿದೆ. ಅಡಕನಹಳ್ಳಿ ಮಾರ್ಗವಾಗಿ ನಂಜನಗೂಡಿಗೆ ಸಂಚರಿಸುವಂತೆ ತಿಳಿಸಿದ್ದು, ನಂಜನಗೂಡಿನಿಂದ ಮೈಸೂರಿಗೆ ತೆರಳುವ ವಾಹನಗಳು ತಾಂಡವಪುರ ಮೂಲಕ ಹೆಜ್ಜಿಗೆ ಸೇತುವೆ ಮೂಲಕ ಸಂಚರಿಸಲು ತಿಳಿಸಲಾಗುತ್ತಿದೆ.

Mysore
ವಿದ್ಯಾರ್ಥಿಗಳೇ ರಾಷ್ಟ್ರ ದೇವೋಭವ ಎನ್ನಿ: ಶ್ರೀ ವಿಶ್ವ ಪ್ರಸನ್ನ ತೀರ್ಥ ಸ್ವಾಮೀಜಿ ಸಲಹೆ
ಮೈಸೂರು: ಸಂಸ್ಕೃತಿ, ಮೌಲ್ಯಗಳು ಮತ್ತು ದೇಶಪ್ರೇಮ ಬೆಳೆಸುವಲ್ಲಿ ಮತ್ತು ವ್ಯಕ್ತಿತ್ವ ವಿಕಸನ, ಚಾರಿತ್ರ‍್ಯವನ್ನು ರೂಪಿಸುವಲ್ಲಿ ಶಿಕ್ಷಣದ ಪಾತ್ರ ಹಿರಿದಾದುದು ಎಂದು ವಿಜಯ ವಿಠಲ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಪೇಜಾವರ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಹೇಳಿದರು.
ವಿಜಯ ವಿಠಲ ಶಿಕ್ಷಣ ಸಂಸ್ಥೆಗಳ ವತಿಯಿಂದ ಆಯೋಜಿಸಿದ್ದ ಸಾಧಕರ ದಿನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಶಿಸ್ತು, ವಿನಯ, ಕರುಣೆ ಮತ್ತು ಆತ್ಮವಿಶ್ವಾಸದಂತಹ ಗುಣಗಳನ್ನು ಬೆಳೆಸಿಕೊಳ್ಳಬೇಕು. ರಾಷ್ಟ್ರದೇವೋಭವ ಎಂಬ ಉಕ್ತಿಗೆ ಮಹತ್ವವಿದೆ. ರಾಷ್ಟ್ರದ ಬಗ್ಗೆ ಪ್ರೀತಿಯನ್ನು ಬೆಳೆಸಿಕೊಳ್ಳಿ, ಸಾಂಸ್ಕೃತಿಕ ಮೌಲ್ಯಗಳನ್ನು ಎತ್ತಿಹಿಡಿಯಿರಿ ಎಂದು ಸಲಹೆ ನೀಡಿದರು.

ವಿದ್ಯಾರ್ಥಿಗಳು ಸಾಮಾಜಿಕ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳಬೇಕು. ಫನ್ ಫೇರ್ ಮೂಲಕ ವಿದ್ಯಾರ್ಥಿಗಳು ಸಂಗ್ರಹಿಸಿ, ದಾನ ಮಾಡಿದ ಹಣವನ್ನು ಅಜೇಯ ಟ್ರಸ್ಟ್ (ಬಾಲಕಿಯರಿಗಾಗಿ), ವಿಶ್ವಜನೀನ ಟ್ರಸ್ಟ್ (ವಿಕಲ ಮತ್ತು ವಿಶೇಷ ಚೇತನರಿಗಾಗಿ) ಮತ್ತು ವನವಾಸಿ ಕಲ್ಯಾಣ ಟ್ರಸ್ಟ್ (ಬುಡಕಟ್ಟು ಮತ್ತು ಗ್ರಾಮೀಣ ಹಿಂದುಳಿದ ವಿದ್ಯಾರ್ಥಿಗಳಿಗಾಗಿ) ಎಂಬ ಮೂರು ಸೇವಾ ಸಂಸ್ಥೆಗಳಿಗೆ ನೀಡಿರುವುದನ್ನು ಶ್ಲಾಘಿಸಿದರು.
ಸಂಸ್ಥೆಯ ಕಾರ್ಯದರ್ಶಿ ಆರ್. ವಾಸುದೇವ ಭಟ್ ಅಧ್ಯಕ್ಷತೆ ವಹಿಸಿ ಮಾತನಾಡಿ, ಕೇವಲ ಶೈಕ್ಷಣಿಕ ಸಾಧನೆಗಳನ್ನು ಮಾತ್ರವಲ್ಲದೆ, ಮುಕ್ತ ದಿನ ಮತ್ತು ಫನ್ ಫೇರ್ ಕಾರ್ಯಕ್ರಮಗಳಲ್ಲಿನ ಅವರ ಸಕ್ರಿಯ ಭಾಗವಹಿಸುವಿಕೆಯನ್ನೂ ಪ್ರಶಂಶಿಸಿದರು.

ಈ ಚಟುವಟಿಕೆಗಳನ್ನು ಆಯೋಜಿಸುವಲ್ಲಿ ವಿದ್ಯಾರ್ಥಿಗಳು ತಮ್ಮ ಸಮಯ, ಸೃಜನಶೀಲತೆ ಮತ್ತು ತಂಡದ ಮನೋಭಾವವನ್ನು ಸಮರ್ಪಣಾಭಾವದಿಂದ ವಿನಿಯೋಗಿಸಿದ್ದು, ಇದು ಸೇವಾ ಉದ್ದೇಶಗಳಿಗಾಗಿ ನಿಧಿ ಸಂಗ್ರಹಕ್ಕೆ ಸಹಕಾರಿಯಾಯಿತು ಎಂದು ತಿಳಿಸಿದರು.
ಸಂಸ್ಥೆಯ ಗೌರವ ಕಾರ್ಯದರ್ಶಿ ಸಿಎ ವಿಶ್ವನಾಥ ಎ. ಪ್ರಸ್ತಾವಿಕವಾಗಿ ಮಾತನಾಡಿ, ವಿದ್ಯಾರ್ಥಿಗಳ ಆತ್ಮವಿಶ್ವಾಸ ಮತ್ತು ಸಮಗ್ರ ಬೆಳವಣಿಗೆಯನ್ನು ರೂಪಿಸುವಲ್ಲಿ ಪ್ರೋತ್ಸಾಹದ ಮಹತ್ವವನ್ನು ಹೇಳಿದರು. ಒಂದು ಸರಳ ಮೆಚ್ಚುಗೆ ಕೂಡಾ ಯುವ ಮನಸ್ಸುಗಳ ಮೇಲೆ ಹೇಗೆ ಗಹನವಾದ ಮತ್ತು ಉಲ್ಲಾಸಕರ ಪರಿಣಾಮವನ್ನು ಬೀರಬಲ್ಲದು ಎಂಬುದನ್ನು ಅವರು ವಿವರಿಸಿದರು. ಸರಿಯಾದ ಸಮಯದಲ್ಲಿ ನೀಡುವ ಪ್ರೋತ್ಸಾಹ, ವಿದ್ಯಾರ್ಥಿಗಳಿಗೆ ಸ್ಫೂರ್ತಿ , ಆತ್ಮವಿಶ್ವಾಸ ಮತ್ತು ಉತ್ಸಾಹವನ್ನು ಮರಳಿ ಗಳಿಸಲು ಸಹಾಯ ಮಾಡುತ್ತದೆ . ಶಿಕ್ಷಕರು, ಪೋಷಕರು ಮತ್ತು ಮಾರ್ಗದರ್ಶಕರಿಂದ ವಿದ್ಯಾರ್ಥಿಗಳಲ್ಲಿ ದೃಢಸಂಕಲ್ಪ, ಆತ್ಮವಿಶ್ವಾಸ ಮತ್ತು ಸಕಾರಾತ್ಮಕ ಮನೋಭಾವವನ್ನು ಪೋಷಿಸುವಲ್ಲಿ ಅತ್ಯಂತ ಪ್ರಮುಖ ಪಾತ್ರವನ್ನು ವಹಿಸುತ್ತವೆ ಎಂದು ಹೇಳಿದರು.

ಸಾಧಕ ವಿದ್ಯಾರ್ಥಿಗಳಿಗೆ ಗೌರವ
2024-25ನೇ ಸಾಲಿನಲ್ಲಿ ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿ ಪರೀಕ್ಷೆಯಲ್ಲಿ ಅತ್ಯುತ್ತಮ ಸಾಧನೆ ಮಾಡಿದ ೧೩ ವಿದ್ಯಾರ್ಥಿಗಳಿಗೆ ಹಾಗೂ ಮೂವರು ವಿದ್ಯಾರ್ಥಿಗಳಿಗೆ ಕ್ರಮವಾಗಿ ಚಿನ್ನದ ಪದಕ ನೀಡಿ ಸನ್ಮಾನಿಸಲಾಯಿತು. ರಾಜ್ಯ ಹಾಗೂ ರಾಷ್ಟ್ರಮಟ್ಟದ ಕ್ರೀಡಾ ಸ್ಪರ್ಧೆಯಗಲ್ಲಿ ಉತ್ತಮ ಸಾಧನೆ ಮಾಡಿದ ವಿದ್ಯಾರ್ಥಿಗಳಿಗೆ ನೆನಪಿನ ಕಾಣಿಕೆಯನ್ನು ನೀಡಲಾಯಿತು.
ವಿಜಯ ವಿಠಲ ಪದವಿಪೂರ್ವ ಕಾಲೇಜು ಪ್ರಾಂಶುಪಾಲ ಎಚ್. ಸತ್ಯಪ್ರಸಾದ್ ಮತ್ತು ವಿಜಯ ವಿಠಲ ವಿದ್ಯಾಶಾಲಾ ಪ್ರಾಂಶುಪಾಲ ವೀಣಾ ಎಸ್.ಎ. ಉಪಸ್ಥಿತರಿದ್ದರು.
Mysore
ಡಿ.ಕೆ. ಶಿವಕುಮಾರ್ ಸಿಎಂ ಆದರೆ ಅವರ ಸಂಪುಟದಲ್ಲಿ ನನಗೆ ಸಚಿವ ಸ್ಥಾನ ಬೇಡ: ಕೆ.ಎನ್. ರಾಜಣ್ಣ
ಮೈಸೂರು : ರಾಜ್ಯದಲ್ಲಿ ಮುಖ್ಯಮಂತ್ರಿ ಸ್ಥಾನ ಬದಲಾವಣೆ ಸಂಬಂಧಿಸಿದಂತೆ ಚರ್ಚೆ ನಡೆಯುತ್ತಿರುವ ವೇಳೆ, ಮಾಜಿ ಸಚಿವ ಕೆ.ಎನ್ ರಾಜಣ್ಣ ಮಹತ್ವ ಹೇಳಿಕೆಯನ್ನು ನೀಡಿದ್ದಾರೆ.

ಒಂದು ವೇಳೆ ಡಿ.ಕೆ. ಶಿವಕುಮಾರ್ ಮುಖ್ಯಮಂತ್ರಿಯಾದರೆ ನನಗೆ ಸಚಿವ ಸ್ಥಾನ ಬೇಡ ಮತ್ತೊಬ್ಬರಿಗೆ ಅವಕಾಶ ಕೊಡಲಿ. ನನಗೆ ಯಾವ ಸ್ಥಾನವೂ ಬೇಕಾಗಿಲ್ಲ. ನಾನು ಮೊದಲೇ ಹೇಳಿದ್ದೇನೆ, ಹಾಗಂತ ಡಿ.ಕೆ.ಶಿವಕುಮಾರ್ ಸಿಎಂ ಆಗ್ತಾರೆಂದು ಹೇಳುತ್ತಿಲ್ಲ. ಆದೇನು ಸಿಎಂ ಆಗೇ ಬಿಡುತ್ತಾರೆ ಅಂದುಕೊಂಡಿದ್ದೀರಾ? ನನಗೆ ಅಧಿಕಾರದ ದಾಹ ಇಲ್ಲ ಎಂದು ಹೇಳಿದ್ದಾರೆ. ಇದೀಗ ಈ ಹೇಳಿಕೆ ಹೊಸ ಚರ್ಚೆಗೆ ಕಾರಣವಾಗಿದೆ.
Mysore
ಹೆಚ್ಚುವರಿ ಜಿಲ್ಲಾಧಿಕಾರಿ ಡಾ.ಶಿವರಾಜು, ಡಿಡಿಪಿಐ ಉದಯ್ ಕುಮಾರ್ ಪರೀಕ್ಷಾ ಕೇಂದ್ರಗಳಿಗೆ ಭೇಟಿ
ಮೈಸೂರು: ನಗರದ 47 ಪರೀಕ್ಷಾ ಕೇಂದ್ರಗಳಲ್ಲಿ ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆ -2025 (TET EXAM -2025) ) ನಡೆದಿದ್ದು, ಪರೀಕ್ಷಾ ಕೇಂದ್ರಗಳಿಗೆ ಹೆಚ್ಚುವರಿ ಜಿಲ್ಲಾಧಿಕಾರಿ ಡಾ.ಶಿವರಾಜು ಮತ್ತು ಡಿಡಿಪಿಐ ಉದಯ್ ಕುಮಾರ್ ಅವರು ಭೇಟಿ ನೀಡಿ ವೀಕ್ಷಿಸಿದರು.
ಪರೀಕ್ಷೆಯ ಪತ್ರಿಕೆ-1 ಬರೆಯಲು ಒಟ್ಟು 3685 ಅಭ್ಯರ್ಥಿಗಳು ಮತ್ತು ಪತ್ರಿಕೆ-2 ಬರೆಯಲು ಒಟ್ಟು 12144 ನೋಂದಣಿ ಮಾಡಿಸಿದ್ದರು. ಸದರಿ ಪರೀಕ್ಷೆಯು ಬೆಳಿಗ್ಗೆ 10.00 ರಿಂದ 12.30 ಗಂಟೆಯವರೆಗೆ ಮತ್ತು ಮಧ್ಯಾಹ್ನ 2.00 ಗಂಟೆಯಿಂದ 4.30 ಗಂಟೆಯವರೆಗೆ ನಡೆಯಿತು.

ಟೆರೇಷಿಯನ್ ಕಾನ್ವೆಂಟ್ ಪ್ರೌಢಶಾಲೆ ಮತ್ತು ಗೀತಾ ಶಿಶು ಶಿಕ್ಷಣ ಸಂಸ್ಥೆ ಕೇಂದ್ರಗಳಿಗೆ ಭೇಟಿ ನೀಡಿ ವೀಕ್ಷಿಸಿದರು. ಪ್ರಾಂಶುಪಾಲರು ಹಾಗೂ ವೀಕ್ಷಕರು ಹಾಜರಿದ್ದರು. ಬೆಳಗಿನ ಅಧಿವೇಶನದ ಪತ್ರಿಕೆ -1 ನ್ನು ಬರೆಯಲು 3412 ಅಭ್ಯರ್ಥಿಗಳು ಹಾರಿದ್ದರು. 274 ಅಭ್ಯರ್ಥಿಗಳು ಗೈರಾಗಿದ್ದರು.
ಮಧ್ಯಾಹ್ನದ ಅಧಿವೇಶನದ ಪತ್ರಿಕೆ -2 ಪರೀಕ್ಷೆಯನ್ನು ಬರೆಯಲು 11477 ಅಭ್ಯರ್ಥಿಗಳು ಹಾಜರಿದ್ದರೆ, 652 ಅಭ್ಯರ್ಥಿಗಳು ಗೈರು ಹಾಜರಾಗಿದ್ದರು. ಪರೀಕ್ಷಾ ಕೇಂದ್ರಗಳಿಗೆ ಸೂಕ್ತ ಪೊಲೀಸ್ ಬಂದೋಬಸ್ತ್ ವ್ಯವಸ್ಥೆಯನ್ನು ಮಾಡಲಾಗಿತ್ತು.
-
Mysore3 hours agoಬಸ್ ನಿಲ್ದಾಣಕ್ಕೆ ಕಾರು ಡಿಕ್ಕಿ: ಚಾಲಕನಿಗೆ ಗಂಭೀರ ಗಾಯ
-
State4 hours agoನಾಳೆಯಿಂದ ಚಳಿಗಾಲದ ಅಧಿವೇಶನ: ಸುವರ್ಣಸೌಧದಲ್ಲಿ ಸುತ್ತ ಹೈ ಆಲರ್ಟ್ 6,000 ಪೊಲೀಸ್ ಭದ್ರತೆ
-
Chikmagalur3 hours agoಗ್ರಾ.ಪಂ.ಸದಸ್ಯ ಗಣೇಶ್ ಕೊಲೆ ಪ್ರಕರಣ: ಐವರ ಬಂಧನ, ಮೂವರಿಗಾಗಿ ತೀವ್ರ ಶೋಧ
-
Hassan2 hours agoHKS PUC ಕಾಲೇಜಿನಲ್ಲಿ ಜರುಗಿದ ರಾಜ್ಯಮಟ್ಟದ ಬಾಲ್ ಬ್ಯಾಡ್ಮಿಂಟನ್ ಕ್ರೀಡಾಕೂಟ ಸಮಾರೋಪ ಸಮಾರಂಭ
-
Chikmagalur3 hours agoಕಾಫಿನಾಡಲ್ಲಿ ನಿಲ್ಲದ ಕಾಡಾನೆ ದಾಳಿ: ಕಾರ್ಮಿಕ ಗಣಪತಿ ಪ್ರಾಣಾಪಾಯದಿಂದ ಪಾರು
-
Sports5 hours agoಮೌನ ಮುರಿದು ಮದುವೆ ವಂದತಿಗಳಿಗೆ ಫುಲ್ಸ್ಟಾಪ್ ಇಟ್ಟ ಸ್ಮೃತಿ ಮಂದಾನ
-
Mandya1 hour agoಮದ್ದೂರು ಬಳಿ ಭೀಕರ ಅಪಘಾತ : ಖಾಸಗಿ ಬಸ್ ಪಲ್ಟಿಯಾಗಿ 30ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ
-
Hassan8 hours agoರಾತ್ರೋರಾತ್ರಿ ಮಿನಿ ಪಿಕಪ್ ವಾಹನದಲ್ಲಿ ಬಂದು ಕಾಫಿ ಕಳ್ಳತನ
