Mysore
ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವಕ್ಕೆ ಆಗಮಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ರವರಿಗೆ ಅಹ್ವಾನ

ಮೈಸೂರು : ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವಕ್ಕೆ ಆಗಮಿಸುವಂತೆ ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಸಮಾಜ ಕಲ್ಯಾಣ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಹೆಚ್.ಸಿ.ಮಹದೇವಪ್ಪ ಅವರು ಅಧಿಕೃತವಾಗಿ ಆಹ್ವಾನಿಸಿದರು.
ಬುಧವಾರ ಮುಖ್ಯಮಂತ್ರಿಗಳ ನಿವಾಸದಲ್ಲಿ ಭೇಟಿ ಮಾಡಿ, ಶಾಲು ಹೊದಿಸಿ, ವಿಶೇಷ ಪುಷ್ಪಮಾಲಿಕೆಯೊಂದಿಗೆ ಸನ್ಮಾನಿಸಿ, ಫಲತಾಂಬೂಲದ ಜೊತೆಗೆ ಆಹ್ವಾನ ಪತ್ರಿಕೆ ನೀಡುವ ಮೂಲಕ ದಸರಾ ಮಹೋತ್ಸವಕ್ಕೆ ಆಗಮಿಸುವಂತೆ ಆತ್ಮೀಯವಾಗಿ ಕೋರಿದರು.
ಈ ವೇಳೆ ಮೇಯರ್ ಶಿವಕುಮಾರ್, ಶಾಸಕರಾದ ರವಿಶಂಕರ್, ಎ.ಆರ್.ಕೃಷ್ಣಮೂರ್ತಿ, ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ, ಜಿಲ್ಲಾ ಪಂಚಾಯತ್ ಸಿಇಒ ಕೆ.ಎಂ.ಗಾಯಿತ್ರಿ, ನಗರ ಪೊಲೀಸ್ ಆಯುಕ್ತ ರಮೇಶ್ ಬಾನೋತ್, ಅಪರ ಜಿಲ್ಲಾಧಿಕಾರಿ ಪಿ.ಶಿವರಾಜು ಸೇರಿದಂತೆ ಮುಂತಾದವರು ಉಪಸ್ಥಿತರಿದ್ದರು.
Mysore
ಮೇ.04ರಂದು ಭಗೀರಥ ಜಯಂತಿಯನ್ನು ಆಚರಣೆ

ಮಹದೇವಸ್ವಾಮಿ ಪಟೇಲ್
ನಂಜನಗೂಡು : ಮೇ ನಾಲ್ಕರಂದು ಸಾಂಕೇತಿಕವಾಗಿ ಭಗೀರಥ ಜಯಂತಿಯನ್ನು ಆಚರಣೆ ಮಾಡಲಾಗುವುದು ಎಂದು ಶಾಸಕ ದರ್ಶನ್ ಧ್ರುವನಾರಾಯಣ್ ತಿಳಿಸಿದರು.
ನಂಜನಗೂಡು ಪಟ್ಟಣದ ಪ್ರವಾಸಿ ಮಂದಿರದಲ್ಲಿ ಶನಿವಾರ ತಾಲೂಕು ಮಟ್ಟದ ಅಧಿಕಾರಿಗಳು, ಸಮಾಜದ ಮುಖಂಡರ ಸಮ್ಮುಖದಲ್ಲಿ ಪೂರ್ವಭಾವಿ ಸಭೆ ನಡೆಸಿದರು.
ಬಳಿಕ ಮಾತನಾಡಿ, ರಾಜ್ಯದ ಮುಖ್ಯಮಂತ್ರಿ ಅವರನ್ನು ಆಹ್ವಾನ ಮಾಡಿ ಅದ್ದೂರಿಯಾಗಿ ಭಗಿರಥ ಜಯಂತಿಯನ್ನು ನಡೆಸಲು ಸಮಾಜದ ಮುಖಂಡರು ಸಲಹೆ ನೀಡಿದ್ದೀರಿ. ಇಂದು ಮುಖ್ಯಮಂತ್ರಿ ಅವರೊಂದಿಗೆ ಮಾತನಾಡುತ್ತೇನೆ. ಮುಖ್ಯಮಂತ್ರಿಗಳು ದಿನಾಂಕ ಸೂಚಿಸಿದ ಬಳಿಕ, ಕಾರ್ಯಕ್ರಮ ರೂಪ ರೇಷೆ ಬಗ್ಗೆ ಮತ್ತೊಂದು ಸಭೆಯನ್ನು ಕರೆದು ತೀರ್ಮಾನ ಮಾಡೋಣ. ಕಳೆದ ಬಾರಿ ಕನಕ ಜಯಂತಿ ಕಾರ್ಯಕ್ರಮದಲ್ಲಿ ಚರ್ಚಾ ಸ್ಪರ್ಧೆ ಮಾಡಿ ಅರ್ಥಪೂರ್ಣ ಜಯಂತಿಯನ್ನು ಆಚರಿಸಲಾಗಿತ್ತು. ಅದೇ ಮಾದರಿಯಲ್ಲಿ ಜಯಂತಿ ನಡೆಸೋಣ ಎಂದರು. ಜಿಲ್ಲಾ ಮಟ್ಟಕ್ಕಿಂತ ತಾಲೂಕು ಮಟ್ಟದಲ್ಲಿ ದೊಡ್ಡ ಮಟ್ಟದಲ್ಲಿ ಜಯಂತಿ ಕಾರ್ಯಕ್ರಮ ಮಾಡುತ್ತೇವೆ ಎಂದರು.
ಕಾಂಗ್ರೆಸ್ ಪಕ್ಷದ ಮಾಜಿ ತಾಲೂಕು ಅಧ್ಯಕ್ಷ ಮೂಗಶಟ್ಟಿ ಮಾತನಾಡಿ ನಿಮ್ಮ ನೇತೃತ್ವದಲ್ಲಿ ಮುಖ್ಯಮಂತ್ರಿ ಅವರನ್ನು ಕರೆಸಿ ಜಯಂತಿಯನ್ನು ಅದ್ದೂರಿಯಾಗಿ ಆಚರಿಸಬೇಕು. ಜನರನ್ನು ಸೇರಿಸುವ ಜವಾಬ್ದಾರಿ ನಾವು ತೆಗೆದುಕೊಳ್ಳುತ್ತೇವೆ ಎಂದರು
ನಂತರ ಹೆಮ್ಮರಗಾಲ ಸೋಮಣ್ಣ ಮಾತನಾಡಿ, ಭಗೀರಥ ಜಯಂತಿ ಆಚರಣೆ ಮಾಡಿ ಮೂರು ವರ್ಷಗಳಾಗಿವೆ. ಮುಖ್ಯಮಂತ್ರಿ ಅವರನ್ನು ಕರೆಸಿ, ನಂಜನಗೂಡು ಶಾಸಕರ ಅಧ್ಯಕ್ಷತೆಯಲ್ಲಿ ಅದ್ದೂರಿಯಾಗಿ ಜಯಂತಿ ಆಚರಿಸಲು ಸಮಾಜದ ಮುಖಂಡರು ತೀರ್ಮಾನಿಸಿದ್ದಾರೆ. ಸಭೆಗೆ ಸಮಾಜದ 10,000ಕ್ಕೂ ಹೆಚ್ಚು ಜನರ ಸೇರುವ ನಿರೀಕ್ಷೆ ಇದೆ ಎಂದರು.
ಸಭೆಯಲ್ಲಿ ಮಾಜಿ ಶಾಸಕ ಕಳಲೆ ಕೇಶವಮೂರ್ತಿ, ಮೂಗ ಶೆಟ್ಟಿ, ಹೆಮ್ಮರಗಾಲ ಸೋಮಣ್ಣ, ಹಾಡ್ಯ ರಂಗಸ್ವಾಮಿ, ಹೆಡತಲೆ ದೊರೆಸ್ವಾಮಿ ನಾಯಕ, ಲತಾ ಸಿದ್ದಶೆಟ್ಟಿ, ಕರಳಪುರ ನಾಗರಾಜು, ಟಿಪಿ ಶಿವಣ್ಣ, ಗೋವಿಂದರಾಜು, ಮಹದೇವ್, ಮುದ್ದು ಮಾದ ಶೆಟ್ಟಿ, ಸಿದ್ದರಾಜು, ನಾಗಮಣಿ ಶಂಕ್ರಪ್ಪ, ಬಾಲಚಂದ್ರ, ಕಲ್ಲಂಗಡಿ ಮಹದೇವಸ್ವಾಮಿ, ತರದಲೆ ಮಹದೇವು, ಶ್ರೀನಿವಾಸ್, ಸಿದ್ಧ ಶೆಟ್ಟಿ ಸೇರಿದಂತೆ ಇತರರು ಹಾಜರಿದ್ದರು.
Mysore
ಸುಮಯಾ ಪ್ರಾಪರ್ಟೀಸ್ ಶ್ರೇಷ್ಠತೆಯ 9 ವರ್ಷ ಮೈಸೂರಿನ ವಿಶ್ವಾಸಾರ್ಹ ಡೆವಲಪರ್ ಅಂಡ್ ಬಿಲ್ಡರ್

ಮೈಸೂರು: ಅರಮನೆ ನಗರಿ ಮೈಸೂರಿನ ವಿಶ್ವಾಸರ್ಹ ಬಿಲ್ಡರ್ ಅಂಡ್ ಡೆವಲಪರ್ ಸುಮಯಾ ಪ್ರಾಪರ್ಟೀಸ್ ಪ್ರೈವೇಟ್ ಲಿಮಿಟೆಡ್ ನಿವೇಶನಾಂಕ್ಷಿಗಳ ನಂಬಿಕೆ ಮತ್ತು ಶ್ರೇಷ್ಠತೆಯ 9 ಅದ್ಭುತ ವರ್ಷಗಳನ್ನು ಆಚರಿಸುತ್ತಿದೆ.
ಏಪ್ರಿಲ್ 24, 2016ರಂದು ಸ್ಥಾಪನೆಯಾದ ಈ ಕಂಪನಿಯು ಪಾರದರ್ಶಕತೆ, ಗುಣಮಟ್ಟ ಮತ್ತು ಗ್ರಾಹಕ ತೃಪ್ತಿಯಿಂದ ಬೆಂಬಲಿತವಾದ ಅಸಾಧಾರಣ ವಸತಿ ಯೋಜನೆಗಳನ್ನು ತಲುಪಿಸುವ ತನ್ನ ದೃಷ್ಟಿಕೋನಕ್ಕೆ ಬದ್ಧವಾಗಿದ್ದು, ಗ್ರಾಹಕರ ನಂಬಿಕೆಗೆ ಪಾತ್ರವಾಗಿದೆ.
ಕಳೆದ ಒಂಬತ್ತು ವರ್ಷಗಳಲ್ಲಿ, ಸುಮಯಾ ಪ್ರಾಪರ್ಟೀಸ್ ಆರು ಪ್ರತಿಷ್ಠಿತ ಯೋಜನೆಗಳನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದೆ – ಪ್ರಗತಿ ಡ್ರೀಮ್ಸ್. ಸುಮಯಾ ಹೋಮ್‌ಲ್ಯಾಂಡ್ಸ್, ಸೆರೆನ್ ಬ್ಲಾಸಮ್, ಸುಮಯಾ ಹೆವೆನ್ಲಿ ಹೋಮ್ಸ್, ಸುಮಯಾ ಕಲ್ಪತರು ಗಾರ್ಡನ್ಸ್ ಮತ್ತು ಸುಮಯಾ ಸಂಪರ್ಕ ನಗರ. ಈ ಮಹತ್ವದ ಯೋಜನೆಗಳ ಮೂಲಕ, ಕಂಪನಿಯು 2 ಸಾವಿರಕ್ಕೂ ಹೆಚ್ಚು ಸಂತೋಷದ ಗ್ರಾಹಕರ ವಿಶ್ವಾಸವನ್ನು ಗಳಿಸಿದೆ ಮತ್ತು ಮೈಸೂರಿನ ರಿಯಲ್ ಎಸ್ಟೇಟ್ ಉದ್ಯಮದಲ್ಲಿ ವಿಶ್ವಾಸಾರ್ಹ ಪಾಲುದಾರ ಎಂಬ ಖ್ಯಾತಿಗೆ ಪಾತ್ರವಾಗಿದೆ.
ಈ ವಿಶೇಷ ಸಂದರ್ಭದಲ್ಲಿ, ಆಡಳಿತ ಮಂಡಳಿಯು ಎಲ್ಲಾ ಮೌಲ್ಯಯುತ ಗ್ರಾಹಕರು. ಸಮರ್ಪಿತ ತಂಡದ ಸದಸ್ಯರು. ಪಾಲುದಾರರು ಮತ್ತು ಹಿತೈಷಿಗಳಿಗೆ ಹೃತ್ಪೂರ್ವಕ ಧನ್ಯವಾದಗಳನ್ನು ಅರ್ಪಿಸುತ್ತದೆ. ಅವರ ನಿರಂತರ ಬೆಂಬಲವು ಈ ಅದ್ಭುತ ಪ್ರಯಾಣದ ಅಡಿಪಾಯವಾಗಿದೆ.
ಆಚರಣೆಯನ್ನು ಇನ್ನಷ್ಟು ಸ್ಮರಣೀಯವಾಗಿಸಲು, ಸುಮಯಾ ಪ್ರಾಪರ್ಟೀಸ್ ಮೈಸೂರಿನಾದ್ಯಂತ ಹಲವಾರು ಮುಂಬರುವ ಯೋಜನೆಗಳೊಂದಿಗೆ ಪ್ರಮುಖ ವಿಸ್ತರಣೆಯನ್ನು ಘೋಷಿಸಲು ಉತ್ಸುಕವಾಗಿದೆ. ಕಂಪನಿಯು ಈ ವರ್ಷ 2 ಸಾವಿರಕ್ಕೂ ಹೆಚ್ಚು ಪ್ರೀಮಿಯಂ ವಸತಿ ಪ್ಲಾಟ್‌ಗಳನ್ನು ಪ್ರಾರಂಭಿಸಲು ಯೋಜಿಸಿದೆ. ಇವು ಮೈಸೂರಿನ ಎಲ್ಲಾ ದಿಕ್ಕುಗಳಲ್ಲಿ ಯೋಜನೆಯ ಹಂತದಲ್ಲಿವೆ. ಭವಿಷ್ಯದ ನಿವಾಸಿಗಳಿಗೆ ವಿಶ್ವ ದರ್ಜೆಯ ಸೌಲಭ್ಯಗಳು ಮತ್ತು ಉತ್ತಮ ಜೀವನ ಅನುಭವಗಳನ್ನು ನೀಡುತ್ತವೆ.
ನಂಬಿಕೆಯ ಬಲವಾದ ಪರಂಪರೆ ಮತ್ತು ಗುಣಮಟ್ಟಕ್ಕೆ ಅಚಲ ಬದ್ಧತೆಯೊಂದಿಗೆ, ಸುಮಯಾ ಪ್ರಾಪರ್ಟೀಸ್ ಮುಂಬರುವ ವರ್ಷಗಳಲ್ಲಿ ಇನ್ನೂ ಹೆಚ್ಚಿನ ಎತ್ತರವನ್ನು ಏರಲು ಎದುರು ನೋಡುತ್ತಿದೆ.
ಕೋಟ್
ನಮ್ಮ ಪ್ರಯಾಣದಲ್ಲಿ ಇಲ್ಲಿಯವರೆಗಿನ ಭಾಗವಾಗಿರುವ ಪ್ರತಿಯೊಬ್ಬ ಗ್ರಾಹಕರು, ಉದ್ಯೋಗಿಗಳು ಮತ್ತು ಸಹವರ್ತಿಗಳಿಗೆ ನಾವು ಪ್ರಾಮಾಣಿಕವಾಗಿ ಧನ್ಯವಾದಗಳನ್ನು ಅರ್ಪಿಸುತ್ತೇವೆ. ನಿಮ್ಮ ನಂಬಿಕೆ ಮತ್ತು ಬೆಂಬಲವು ನಮ್ಮ ದೊಡ್ಡ ಪ್ರೇರಣೆಯಾಗಿದೆ. ಮುಂದೆಯೂ ನಿರಂತರ ಪ್ರೋತ್ಸಾಹವನ್ನು ನಾವು ಬಯಸುತ್ತೇವೆ.
-ವಿಶಾಖ ಹೆಗಡೆ- ಸುಧಿ ಎಸ್ ಶೆಟ್ಟಿ, ವ್ಯವಸ್ಥಾಪಕ ನಿರ್ದೇಶಕರು, ಸುಮಾಯ ಪ್ರಾಪರ್ಟಿಸ್
Mysore
ನಮ್ಮ ಸರ್ಕಾರ ಗ್ಯಾರಂಟಿ ಯೋಜನೆಯೊಂದಿಗೆ ಅಭಿವೃದ್ಧಿಗೂ ಹಣ ನೀಡುತ್ತಿರುವುದೇ ಬಿಜೆಪಿಗೆ ಹೊಟ್ಟೆಯುರಿ: ಸಿಎಂ ಸಿದ್ದರಾಮಯ್ಯ

ಪಿರಿಯಾಪಟ್ಟಣ: ನಮ್ಮ ಸರ್ಕಾರ ಗ್ಯಾರಂಟಿ ಯೋಜನೆಯೊಂದಿಗೆ ರಾಜ್ಯದ ಕ್ಷೇತ್ರಗಳ ಅಭಿವೃದ್ಧಿಗೂ ಹಣ ನೀಡುತ್ತಿರುವುದೇ ಬಿಜೆಪಿಗೆ ಹೊಟ್ಟೆ ಉರಿ ಎಂದು ಸಿಎಂ ಸಿದ್ದರಾಮಯ್ಯ ಕಿಡಿಕಾರಿದ್ದಾರೆ.
ಪಿರಿಯಾಪಟ್ಟಣದಲ್ಲಿ ಜಿಲ್ಲಾಡಳಿತ ಮತ್ತು ನಾನಾ ಇಲಾಖೆಗಳ ಸಹಯೋಗದಲ್ಲಿ ಇಂದು(ಏಪ್ರಿಲ್.26) ಆಯೋಜಿಸಿದ್ದ 439.88 ಕೋಟಿ ರೂ. ಮೌಲ್ಯದ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ, ಉದ್ಘಾಟನೆ ನೆರವೇರಿಸಿದರು. ಇದೇ ವೇಳೆ ಸಾವಿರಾರು ಫಲಾನುಭವಿಗಳಿಗೆ ವಿವಿಧ ಸವಲತ್ತುಗಳನ್ನು ವಿತರಿಸಿ, ಅಂಬೇಡ್ಕರ್-ಬಾಬು ಜಗಜೀವನ್ ರಾಮ್ ಜನ್ಮ ದಿನಾಚರಣೆ ಉದ್ಘಾಟಿಸಿ ಮಾತನಾಡಿದರು.
ನಮ್ಮ ಸರ್ಕಾರ ಜನರ ಅಭಿವೃದ್ಧಿಗೆ ಹಣ ನೀಡುತ್ತಿದೆ. ಇದರಿಂದ ರಾಜ್ಯದ ಜನತೆ ಖುಷಿಯಾಗಿದ್ದಾರೆ. ಆದರೆ ಇದನ್ನು ಬಿಜೆಪಿ ಸಹಿಸದೇ ಹೊಟ್ಟೆಯುರಿ ಮಾಡುತ್ತಿದೆ. ಪಿರಿಯಾಪಟ್ಟಣ ಕೃಷಿ ಪ್ರಧಾನ ಕ್ಷೇತ್ರ. ಹೀಗಾಗಿ 300 ಕ್ಕೂ ಹೆಚ್ಚು ರೈತರಿಗೆ 100 ಕೋಟಿಗೂ ಅಧಿಕ ಮೊತ್ತದ ಕೃಷಿ ಯಂತ್ರೋಪಕರಣಗಳನ್ನು ಇಂದು ವಿತರಿಸಲಾಗಿದೆ. ಕೃಷಿ ಕಾರ್ಮಿಕರು ನಗರಗಳಿಗೆ ವಲಸೆ ಹೋಗಿದ್ದರಿಂದ ಗ್ರಾಮೀಣ ರೈತರು ಯಂತ್ರಗಳ ಮೇಲೆ ಅವಲಂಬಿತರಾಗಬೇಕಾಗಿದೆ ಎಂದು ಹೇಳಿದರು.
ಹಿಂದಿನ ವರ್ಷ ಜಲಾಶಯಗಳೆಲ್ಲಾ ತುಂಬಿ ರಾಜ್ಯದಲ್ಲಿ ಮಳೆ ಬೆಳೆ ಚೆನ್ನಾಗಿ ಆಗಿದೆ. ಈ ವರ್ಷವೂ ಒಳ್ಳೆ ಮಳೆ ಆಗಿ ರೈತರ ಮುಖದಲ್ಲಿ ಮಂದಹಾಸ ಮೂಡುತ್ತದೆ. ರಾಜ್ಯದಲ್ಲಿ ಬಡವ ಮತ್ತು ಮಧ್ಯಮ ವರ್ಗದ ಕುಟುಂಬಗಳಿಗೆ ತಿಂಗಳಿಗೆ 5 ರಿಂದ 6 ಸಾವಿರ ರೂಪಾಯಿ ಹಣ ಗ್ಯಾರಂಟಿಗಳ ಮೂಲಕ ತಲುಪುತ್ತಿದೆ. ಈ ಗ್ಯಾರಂಟಿಗಳಲ್ಲದೆ ಎಲ್ಲಾ ಇಲಾಖೆಗಳ ಅಭಿವೃದ್ಧಿ ಕಾರ್ಯಗಳ ಫಲ ಕೂಡ ನಾಡಿನ ದೊರೆಗಳಾದ ಜನರ ಮನೆ ಬಾಗಿಲಿಗೆ ತಲುಪುತ್ತಿದೆ. ಜನರಿಗೆ ಪ್ರತೀ ದಿನ ಒಂದಲ್ಲಾ ಒಂದು ರೀತಿಯಲ್ಲಿ ಸರ್ಕಾರದ ಅಭಿವೃದ್ಧಿ ಕಾಣಿಸುತ್ತಿದೆ. ಆದರೆ, ಬಿಜೆಪಿ ಮಾತ್ರ ಸರ್ಕಾರದ ಬೊಕ್ಕಸದಲ್ಲಿ ಹಣ ಇಲ್ಲ ಎಂದು ಸುಳ್ಳು ಹೇಳಿಕೊಂಡು ತಿರುಗುತ್ತಿದೆ ಎಂದು ಟೀಕಿಸಿದರು.
ಬೊಮ್ಮಾಯಿ ನೇತೃತ್ವದ ಬಿಜೆಪಿ ಸರ್ಕಾರ ಬರೀ ಸುಳ್ಳು ಹೇಳಿಕೊಂಡು, ದೇವರು ಧರ್ಮದ ಹೆಸರಲ್ಲಿ ತಮ್ಮ ವೈಫಲ್ಯಗಳನ್ನು ಮುಚ್ಚಿಕೊಂಡು ಜನರ ದಿಕ್ಕು ತಪ್ಪಿಸಿ ಕಾಲ ಕಳೆದು ಮನೆಗೆ ಹೋದರು ಎಂದು ವ್ಯಂಗ್ಯ ಮಾಡಿದರು.
-
State9 hours ago
ಗೋಲ್ಡ್ ಸ್ಮಗ್ಲಿಂಗ್ ಪ್ರಕರಣ: ಆರೋಪಿ ರನ್ಯಾರಾವ್ ಜಾಮೀನು ಅರ್ಜಿ ವಜಾಗೊಳಿಸಿದ ಹೈಕೋರ್ಟ್
-
Uncategorized6 hours ago
ಭಾರತ-ಪಾಕ್ ಯುದ್ಧದ ಬಗ್ಗೆ ಸಿಎಂ ಹೇಳಿಕೆ: ಸಿಎಂ ಸಿದ್ದರಾಮಯ್ಯ ವಿರುದ್ಧ ಆರ್.ಅಶೋಕ್ ವಾಗ್ದಾಳಿ
-
Mysore11 hours ago
ಕೇಂದ್ರ ಸರ್ಕಾರ, ಯುದ್ಧದ ಬದಲು ಪಾಕ್ ಉಗ್ರರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಿ: ಸಿಎಂ ಸಿದ್ದರಾಮಯ್ಯ
-
Mysore9 hours ago
ಬಿಜೆಪಿ ದೇವರು, ಧರ್ಮದ ಹೆಸರಲ್ಲಿ ಬರೀ ಸುಳ್ಳು ಹರಡುತ್ತದೆ: ಸಿಎಂ ಸಿದ್ದರಾಮಯ್ಯ ವ್ಯಂಗ್ಯ
-
Hassan5 hours ago
ಹಾಸನ| ಪ್ರತಿಯೊಬ್ಬರು ಬಾಲ್ಯದಿಂದಲೇ ತಮ್ಮ ಮಕ್ಕಳಿಗೆ ಸಂಸ್ಕಾರ ಕಲಿಸಿಕೊಡುವುದು ಅಗತ್ಯ: ಮಾಜಿ ಶಾಸಕ ಬಿ.ಆರ್. ಗುರುದೇವ್
-
Kodagu6 hours ago
ಪ್ರಧಾನಿ, ಗೃಹ ಸಚಿವರ ರಾಜೀನಾಮೆಗೆ ಆಮ್ ಆದ್ಮಿ ಪಾರ್ಟಿ ಆಗ್ರಹ
-
Hassan2 hours ago
ಜಮೀನು ವಿಚಾಕ್ಕೆ ಕೊಲೆ
-
Kodagu5 hours ago
ಮಡಿಕೇರಿಯಲ್ಲಿ ಸಮುದಾಯ ಸಂಶೋಧನೆ ಮತ್ತು ಅಭಿವೃದ್ಧಿ ಕೇಂದ್ರ ಉದ್ಘಾಟನೆ