Mysore
ಶ್ರೀ ಯೋಗಾನರಸಿಂಹಸ್ವಾಮಿ ದೇವಸ್ಥಾನದಲ್ಲಿ ಹೊಸ ವರ್ಷದ ಪ್ರಯುಕ್ತ ಎರಡು ಲಕ್ಷ ತಿರುಪತಿ ಮಾದರಿಯ ಲಡ್ಡು ಪ್ರಸಾದವನ್ನು ವಿತರಿಸಲಾಗುತ್ತದೆ

ಮೈಸೂರು ವಿಜಯನಗರದ ಶ್ರೀ ಯೋಗಾನರಸಿಂಹಸ್ವಾಮಿ ದೇವಸ್ಥಾನದಲ್ಲಿ ಕಳೆದ ಹಲವಾರು ವರ್ಷಗಳಿಂದ ಅನೂಚಾನವಾಗಿ ನಡೆಸಿಕೊಂಡು ಬರುತ್ತಿರುವಂತೆ ಈ ವರ್ಷವೂ ಸಹ ನೂತನ ಕ್ರೈಸ್ತ ವರ್ಷಾರಂಭದ (ಸೋಮವಾರ)ದಂದು ಬೆಳಗ್ಗೆ ಅಂಗವಾಗಿ ದಿನಾಂಕ: 04.00 ಗಂಟೆಯಿಂದ 01.01.2024 ಪ್ರಾರಂಭಿಸಿ ಯೋಗಾನರಸಿಂಹಸ್ವಾಮಿಯವರಿಗೆ ವಿಶೇಷ ಅಲಂಕಾರ ಮತ್ತು “ಶ್ರೀರಂಗಂಕ್ಷೇತ್ರ” “ಮಧುರೈ ಕ್ಷೇತ್ರಗಳಿಂದ ತರಿಸಿರುವ ವಿಶೇಷ “ತೋಮಾಲೆ” ಮತ್ತು “ಸ್ವರ್ಣಪುಷ್ಪದಿಂದ” ಶ್ರೀಸ್ವಾಮಿಗೆ “ಸಹಸ್ರನಾಮರ್ಚನೆ” ಮತ್ತು ದೇವಾಲಯದ ಉತ್ಸವ ಮೂರ್ತಿಯಾದ ಶ್ರೀಮಲಯಪ್ಪನ್ ಸ್ವಾಮಿ, ಪದ್ಮಾವತಿ ಮತ್ತು ಮಹಾಲಕ್ಷ್ಮಿ ದೇವರಿಗೆ ದೇವಾಲಯದ ಆವರಣದಲ್ಲಿ “ಏಕಾದಶ ಪ್ರಾಕಾರೋತ್ಸವ” ಹಾಗೂ ಇಪ್ಪತ್ತು ಕ್ವಿಂಟಾಲ್ ಪುಳಿಯೋಗರೆ ನಿವೇದನೆ” ಮತ್ತು ದೇವಾಲಯಕ್ಕೆ ಆಗಮಿಸುವ ಎಲ್ಲಾ ಭಕ್ತಾದಿಗಳಿಗೆ “ ಎರಡು ಲಕ್ಷ ತಿರುಪತಿ ಮಾದರಿಯ ಲಡ್ಡು ವಿತರಣಾ” ಕಾರ್ಯಕ್ರಮವನ್ನು ಪರಮ ಪೂಜ್ಯ ನಾಡೋಜ. ಪ್ರೊ. ಭಾಷ್ಯಂ ಸ್ವಾಮೀಜಿಯವರ ದಿವ್ಯ ನೇತೃತ್ವದಲ್ಲಿ ಏರ್ಪಡಿಸಲಾಗಿದೆ.
ಪ್ರಾರಂಭದಲ್ಲಿ ಅಂದರೆ 1994ನೇ ಇಸವಿಯಲ್ಲಿ ಅಂದಾಜು ಒಂದು ಸಾವಿರ ಲಡ್ಡು ವಿತರಣೆಯಿಂದ ಪ್ರಾರಂಭಿಸಿ ಕಳೆದ ಹಲವಾರು ವರ್ಷಗಳಿಂದ ಪ್ರತಿ ವರ್ಷ ಒಂದು ಲಕ್ಷ ಮತ್ತು ಎರಡು ಲಕ್ಷ ಲಡ್ಡುಪ್ರಸಾದವನ್ನು ಭಕ್ತಾದಿಗಳಿಗೆ ವಿತರಣೆ ಮಾಡಲಾಗುತ್ತಿದೆ. ಈ ವರ್ಷವೂ ಸಹ ಇನ್ನೂ ಹೆಚ್ಚು ಅಂದರೆ ಎರಡು ಲಕ್ಷ ಲಡ್ಡುವನ್ನು ವಿತರಣೆ ಮಾಡಲು ದೇವಸ್ಥಾನದ ವತಿಯಿಂದ ತಯಾರಿ ನಡೆಯುತ್ತಿದೆ. ಈ ವರ್ಷ ಅಂದಾಜು (2,000)ಗ್ರಾಂ ತೂಕದ (15,000) ಲಡ್ಡುಗಳು ಹಾಗೂ (150)ಗ್ರಾಂ ತೂಕದ (2 ಲಕ್ಷ) ಲಡ್ಡುಗಳನ್ನು ದೇವಾಲಯಕ್ಕೆ ಬರುವ ಎಲ್ಲಾ ಭಕ್ತಾದಿಗಳಿಗೆ ಯಾವುದೇ ಜಾತಿ, ಮತ ಮತ್ತು ಭೇದವಿಲ್ಲದೆ ಉಚಿತವಾಗಿ ವಿತರಿಸಲಾಗುವುದು.
ಲಡ್ಡು ಪ್ರಸಾದವನ್ನು ವಿಶೇಷವಾಗಿ 60 ಮಂದಿ ನುರಿತ ಬಾಣಸಿಗರಿಂದ ತಯಾರಿಸಲಾಗಿದ್ದು, ದಿನಾಂಕ: 20.12.2023 ರಿಂದ ಪ್ರಾರಂಭಿಸಿ 31.12.2023 ರವರೆಗೂ ಲಡ್ಡು ತಯಾರಿ ಕಾರ್ಯ ನಡೆಯುತ್ತದೆ.
ಲೋಕಕಲ್ಯಾಣಾರ್ಥಕ್ಕೋಸ್ಕರ ಮತ್ತು ದೇಶದ ಎಲ್ಲಾ ಜನರ ಒಳಿತಿಗಾಗಿ, ಸಮಸ್ತ ಜನರಿಗೆ ಸುಖ ಶಾಂತಿ ನೆಮ್ಮದಿ ದೊರೆಯಿಲಿ ಎಂದು ಪ್ರಾರ್ಥಿಸುವ ಮತ್ತು ಎಲ್ಲಾ ಭಕ್ತಾದಿಗಳು ಒಂದೇ ಎಂದು ಸಾರುವ ಏಕೈಕ ದೃಷ್ಟಿಯಿಂದ ಈ ಎಲ್ಲಾ ಕಾರ್ಯಕ್ರಮಗಳು ‘ಪರಮ ಪೂಜ್ಯ ಪ್ರೊ. ಭಾಷ್ಯಂಸ್ವಾಮೀಜಿಯವರ” ದಿವ್ಯನೇತೃತ್ವದಲ್ಲಿ ವಿಶೇಷ ಪ್ರಾರ್ಥನೆಯಿಂದ ನೆರವೇರಲಿದೆ.
ಆಸ್ತಿಕ ಭಕ್ತಾದಿಗಳು ಈ ಎಲ್ಲಾ ಕಾರ್ಯಕ್ರಮಗಳಲ್ಲಿ ಭಾಗವಹಿಸಿ ಭಗವಂತನ ಕೃಪಾಶೀರ್ವಾದಕ್ಕೆ ಪಾತ್ರರಾಗಬೇಕೆಂದು ಈ ಮಾಧ್ಯಮದ ಮೂಲಕ ಪ್ರಾರ್ಥಿಸುತ್ತೇನೆ.
Mysore
ಬಿಜೆಪಿ ಜಿಲ್ಲಾಧ್ಯಕ್ಷ ಕುಂಬ್ರಳ್ಳಿ ಸುಬ್ಬಣ್ಣಗೆ ಅಭಿನಂದನೆ ಸಮಾರಂಭ

ಮೈಸೂರು: ಭಾರತೀಯ ಜನತಾ ಪಾರ್ಟಿಯ ಗ್ರಾಮಾಂತರ ಜಿಲ್ಲಾಧ್ಯಕ್ಷರಾಗಿ ಆಯ್ಕೆಯಾದ ಕುಂಬ್ರಳ್ಳಿ ಸುಬ್ಬಣ್ಣ ಅವರಿಗೆ ಶನಿವಾರ ಪಕ್ಷದ ಕಚೇರಿಯಲ್ಲಿ ಮೈಸೂರು ಜಿಲ್ಲಾ ಗ್ರಾಮಾಂತರ ನಗರ ವತಿಯಿಂದ ಅಭಿನಂದಿಸಲಾಯಿತು.
ಈ ಸಂದರ್ಭದಲ್ಲಿ ರಾಜ್ಯ ವಕ್ತಾರ ಎಂ ಜಿ ಮಹೇಶ್,ಬಿಜೆಪಿ ಹಿರಿಯ ಮುಖಂಡರೂಗಳಾದ ಎಸ್. ಮಹಾದೇವಯ್ಯ, ಸುರೇಶ್ ಬಾಬು, ಕೃಷ್ಣಪ್ಪ ಗೌಡ ಗೋಪಾಲ್ ರಾವ್, ಮಿರ್ಲೆ ಶ್ರೀನಿವಾಸ್ ಗೌಡ, ಡಾ ಶಿವರಾಂ,ವಸಂತ್, ಗ್ರಾಮಾಂತರ ಪ್ರಧಾನ ಕಾರ್ಯದರ್ಶಿಗಳಾದ ಬಾಲಕೃಷ್ಣ, ಮಹೇಶ್ ಮಡವಾಡಿ, ಕಿರಣ್ ಜೈ ರಾಮ್ ಗೌಡ, ಕೇಬಲ್ ಮಹೇಶ್,ಜಿಲ್ಲಾ ಉಪಾಧ್ಯಕ್ಷರಾದ ರಮೇಶ್, ವಿನಯ್, ಗಿರೀಶ್ ಕೋಟೆ, ಮಾಜಿ ಜಿಲ್ಲಾ ಪಂಚಾಯತ್ ಸದಸ್ಯರಾದ ಕೆಂಪಣ್ಣ, ಎ.ಎಂ. ಗುರುಸ್ವಾಮಿ,ಜಿಲ್ಲಾ ವಕ್ತಾರ ದಯಾನಂದ್ ಪಟೇಲ್ ,ಮಾಜಿ ಮೇಯರ್ ಶಿವಕುಮಾರ್, ಎಸ್. ಸಿ. ಮೋರ್ಚಾ ಮೈಸೂರು ನಗರ ಅಧ್ಯಕ್ಷ ಶೈಲೆಂದ್ರ ರವರು, ಹಿಣಕಲ್ ಪಾಪಣ್ಣ, ನಗರ ಮಾಧ್ಯಮ ಸಹ ಸಂಚಾಲಕರಾದ ಬಿ.ಎಂ. ಕುಮಾರ್ ಹಾಗೂ ಆದಿ ದೇವಲಪುರ, ಮಲ್ಲೇಶ್ ಹಾಗೂ ಪದಾಧಿಕಾರಿಗಳು ಉಪಸ್ಥಿತರಿದ್ದರು.
Mysore
ಡಿಕೆಶಿ, ಮಲ್ಲಿಕಾರ್ಜುನ ಖರ್ಗೆ ಇಬ್ಬರಲ್ಲಿ ಒಬ್ಬರು ಸಿಎಂ ಆಗುತ್ತಾರೆ: ಎಚ್.ವಿಶ್ವನಾಥ್

ಮೈಸೂರು: ಈ ವರ್ಷದ ನವೆಂಬರ್‌ಗೆ ಸಿಎಂ ಬದಲಾವಣೆ ಆಗುತ್ತದೆ, ಡಿಸಿಎಂ ಡಿ.ಕೆ.ಶಿವಕುಮಾರ್ ಹಾಗೂ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಇಬ್ಬರಲ್ಲಿ ಒಬ್ಬರು ಮುಖ್ಯಮಂತ್ರಿ ಆಗುತ್ತಾರೆ ಎಂದು ಎಂಎಲ್‌ಸಿ ಎಚ್.ವಿಶ್ವನಾಥ್ ತಿಳಿಸಿದ್ದಾರೆ.
ಮೈಸೂರಿನಲ್ಲಿ ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯ ಹತ್ತು ವರ್ಷದ ಹಿಂದೆಯೇ ಜಾತಿವಾರು ಜನಗಣತಿ ಮಾಡಿಸಿದ್ದರು. ಒಂದುವರೆ ಲಕ್ಷ ಶಿಕ್ಷಕರು 2 ವರ್ಷ ಗಣತಿ ಮಾಡಿದ್ದರು. ಅದಕ್ಕಾಗಿ 170 ಕೋಟಿ ರೂ. ಅಧಿಕ ಹಣ ಖರ್ಚಾಗಿತ್ತು. ಆಗಿನ ಕಾಲದಿಂದಲೂ ವರದಿ ಬಹಿರಂಗ ಮಾಡದೇ ಹಾಗೆಯೇ ಇಟ್ಟುಕೊಂಡಿದ್ದರು. ಇದೀಗ ಹೈಕಮಾಂಡ್‌ಗೆ ಹೆದರಿಕೊಂಡು ಮತ್ತೆ ಜಾತಿಗಣತಿ ಮಾಡಿರುವುದಾಗಿ ಹೇಳಿದ್ದಾರೆ. ಇದು ಹೇಗೆ ಸಾಧ್ಯ? ಎಂದು ಪ್ರಶ್ನಿಸಿದ್ದಾರೆ.
ಜಾತಿಗಣತಿ ಮಾಡಲು ಶಿಕ್ಷಕರು ಬೇಕು. ಈಗ ತಾನೇ ಶಾಲೆಗಳು ಪ್ರಾರಂಭವಾಗಿರುವುದರಿಂದ ಶಿಕ್ಷಕರು ಲಭ್ಯವಾಗೋದಿಲ್ಲ. ಸಿದ್ದರಾಮಯ್ಯ ಹಾವಾಡಿಗನ ರೀತಿ ಈಗ ಮತ್ತೆ ಜಾತಿಗಣತಿ ಮಾಡಿಸುವುದಾಗಿ ಹೇಳುತ್ತಿದ್ದಾರೆ. ಮುಂದಿನ ನವೆಂಬರ್ ಮತ್ತು ಡಿಸೆಂಬರ್‌ಗೆ ಸಿಎಂ ಹುದ್ದೆಯಿಂದ ಸಿದ್ದರಾಮಯ್ಯ ಆಗುತ್ತಾರೆ. ಅದು ಹೇಗೆ ಜಾತಿಗಣತಿ ಮಾಡಿಸುತ್ತೀರಿ? ಮರುಜಾತಿಗಣತಿ ಮಾಡಿಸುವುದಿಲ್ಲವೆಂದು ಹೈಕಮಾಂಡ್‌ಗೆ ಹೇಳಿದ್ದರೇ ಸಿದ್ದರಾಮಯ್ಯ ಹೀರೋ ಆಗುತ್ತಿದ್ದರು. ಸಿದ್ದರಾಮಯ್ಯ ಹಿಂದುಳಿದ ವರ್ಗಗಳಿಗೆ ಅನ್ಯಾಯ ಮಾಡಿದರು. ಮೂರು ತಿಂಗಳೊಳಗೆ ಜಾತಿಗಣತಿ ಮಾಡಲು ಸಾಧ್ಯವಿಲ್ಲ. ಸಿದ್ದರಾಮಯ್ಯ ಸುಮ್ಮನೇ ದೇವರಾಜ ಹೆಸರು ಹೇಳಬೇಡಿ. ಪ್ರಾಮಾಣಿಕತೆ ಇಲ್ಲದ ಸಿಎಂ ಸಿದ್ದರಾಮಯ್ಯ ಎಂದು ಚರಿತ್ರೆಯಲ್ಲಿ ದಾಖಲಾಗಿ ಹೋದರು. ಸುಳ್ಳು ಹೇಳಿಕೊಂಡು ಓಡಾಡುತ್ತಿರುವ ಸಿಎಂ ಸಿದ್ದರಾಮಯ್ಯ ಎಂದು ಚರಿತ್ರೆಯಲ್ಲಿ ದಾಖಲಾಗುತ್ತಾರೆ. 170 ಕೋಟಿಗೂ ಹೆಚ್ಚು ಹಣ ಖರ್ಚು ಮಾಡಿ ಜಾತಿಗಣತಿ ಮಾಡಿಸಿದ ವರದಿಯನ್ನು ತಿಪ್ಪೆಗೆ ಎಸೆದಿದ್ದಾರೆ ಎಂದು ವಾಗ್ದಾಳಿ ನಡೆಸಿದ್ದಾರೆ.
ಆರ್‌ಸಿಬಿ ಸಂಭ್ರಮಾಚರಣೆ ವೇಳೆ ಡಿ.ಕೆ.ಶಿವಕುಮಾರ್ ಎಲ್ಲವನ್ನೂ ಕೆಡಿಸಿಬಿಟ್ಟರು
ಡಿಕೆಶಿ ಮುಖ್ಯಮಂತ್ರಿ ಆಗಲಿ ಎಂದುಕೊಂಡಿದ್ದೆ, ಆದರೆ ಆರ್‌ಸಿಬಿ ಸಂಭ್ರಮಾಚರಣೆ ವೇಳೆ ಡಿಕೆ ಶಿವಕುಮಾರ್ ಎಲ್ಲವನ್ನೂ ಕೆಡಿಸಿಬಿಟ್ಟರು. ಆರ್‌ಸಿಬಿಯಲ್ಲಿ ಕರ್ನಾಟಕದ ಆಟಗಾರರೇ ಇಲ್ಲ. ಆರ್‌ಸಿಬಿಗೂ ನಮ್ಮ ರಾಜ್ಯಕ್ಕೂ ಸಂಬಂಧವೇ ಇಲ್ಲ. ಕಾಲ್ತುಳಿತ ಘಟನೆ ಸಂಬಂಧ ಸಿಎಂ ಸಿದ್ದರಾಮಯ್ಯ ನೀಡಿದ ಹೇಳಿಕೆಗಳು ವೈರುಧ್ಯದಿಂದ ಕೂಡಿವೆ ಎಂದು ಕಿಡಿಕಾರಿದರು.
ಚಿನ್ನಸ್ವಾಮಿ ಸ್ಟೇಡಿಯಂ ಬಳಿ 3:30ಕ್ಕೆ ಕಾಲ್ತುಳಿತ ಆದರೂ ಸಂಜೆ 5:30 ಕ್ಕೆ ಗೊತ್ತಾಯಿತು. ವಿಧಾನಸೌಧ ಕಾರ್ಯಕ್ರಮಕ್ಕೂ, ಚಿನ್ನಸ್ವಾಮಿ ಕ್ರೀಡಾಂಗಣ ಕಾರ್ಯಕ್ರಮಕ್ಕೂ ಸಂಬಂಧವಿಲ್ಲ. ರಾಜ್ಯಪಾಲರನ್ನು ಆಹ್ವಾನಿಸಿರಲಿಲ್ಲ ಎಂದೆಲ್ಲ ಸಿದ್ದರಾಮಯ್ಯ ಹೇಳಿದ್ದರು. ಆ ಬಳಿಕ ರಾಜ್ಯಪಾಲರನ್ನು ಆಹ್ವಾನಿಸಿದ್ದು ನಾನೇ ಎಂದು ಹೇಳಿದ್ದಾರೆ. ಇವರ ತಪ್ಪು ಇಲ್ಲದಿದ್ದರೇ ಗೋವಿಂದರಾಜು ಅವರನ್ನು ರಾಜಕೀಯ ಕಾರ್ಯದರ್ಶಿ ಸ್ಥಾನದಿಂದ ಏಕೆ ತೆಗೆದರು ಎಂದು ಹೇಳಬೇಕು? ಎಂದು ಎಚ್ ವಿಶ್ವನಾಥ್ ಆಗ್ರಹಿಸಿದರು.
Mysore
ಕಾವೇರಿ ಆರತಿ ಹಾಗೂ ಅಮ್ಯೂಸ್ಮೆಂಟ್ ಪಾರ್ಕಿ ನಿರ್ಮಾಣ ಖಂಡಿಸಿ ಪ್ರತಿಭಟನೆ.

ಮೈಸೂರು: ಕೆ,ಆರ್,ಎಸ್, ಅಣೆಕಟ್ಟೆಯ ಬಳಿ ಕಾವೇರಿ ಆರತಿ ಹಾಗೂ ಅಮ್ಯೂಸ್ಮೆಂಟ್ ಪಾರ್ಕಿಗಲ್ಲ ನಿರ್ಮಾಣ ಮಾಡುವುದನ್ನು ಖಂಡಿಸಿ ಕನ್ನಡ ವೇದಿಕೆ ವತಿಯಿಂದ ಪ್ರತಿಭಟನೆ ನೆಡೆಸಲಾಯಿತು.
ಇಲ್ಲಿನ ಹಳೆ ಜಿಲ್ಲಾಧಿಕಾರಿ ಕಚೇರಿಯ ಬಳಿ ಶನಿವಾರ ಜಮಾಗೊಂಡ ಪ್ರತಿಭಟನಕಾರರು, ಕೆ. ಆರ್.ಎಸ್. ಅಣೆಕಟ್ಟೆ ನಿರ್ಮಾಸಿರೋದು, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಮೋಜು ಮಸ್ತಿ ಮಾಡೋದಕ್ಕೆ ಅಲ್ಲ. ರೈತಾಪಿ ವರ್ಗದವರು ಕೃಷಿ ಚಟುವಟಿಕೆಗಳು, ಹಾಗೂ ಮೈಸೂರು ಬೆಂಗಳೂರಿನ ಕುಡಿಯುವ ನೀರಿನ ಯೋಜನೆಗಾಗಿ ರಾಣಿ ಕೆಂಪ ನಂಜಮ್ಮಣಿ ಕೃಷ್ಣರಾಜಸಾಗರ ಮೀಸಲಾಗಿದೆ. ವಿನಹ ಮೋಜು ಮಸ್ತಿ ಮಾಡುವಂತಹ ಅಮ್ಯೂಸ್ಮೆಂಟ್ ಪಾರ್ಕಿಗಲ್ಲ, ಎಂದು ಆಕ್ರೋಶ ವ್ಯಕ್ತಪಡಿಸಿದರು.
ಕನ್ನಡ ವೇದಿಕೆ ಅಧ್ಯಕ್ಷ ಎಸ್ ಬಾಲಕೃಷ್ಣ ಮಾತನಾಡಿ, ಕರ್ನಾಟಕ ಮತ್ತು ತಮಿಳುನಾಡು ಜನರ ಜೀವ ನದಿ ಕಾವೇರಿ ಮೈಸೂರಿನ ಇತಿಹಾಸ ತಿಳಿಯದ ಸಚಿವರು ವಿಧಾನಸೌಧದ ಎಲ್ಲೋ ಒಂದು ಮೂಲೆಯಲ್ಲಿ ಕುಳಿತು ಮನಸ್ಸಿಗೆ ಬಂದಂತೆ ಹೇಳಿಕೆ ನೀಡುವುದು ಎಷ್ಟು ಸಮಂಜಸ. ಈಗಾಗಲೇ ಡಿ.ಸಿಎಂ. ಡಿ.ಕೆ.ಶಿವಕುಮಾರ ಅವರ ನಿರ್ಧಾರದಿಂದ ಆರ್.ಸಿ.ಬಿ ಕ್ರಿಕೆಟಿನ ವಿಜಯ್ಯೋತ್ಸವ ಆಚರಣೆಯಲ್ಲಿ ಕಾಲು ತುಳಿತಕ್ಕೆ 11 ಅಮಾಯಕ ಜನ ಬಲಿಯಾಗಿದ್ದಾರೆ. ಮೈಸೂರು ಮತ್ತು ಮಂಡ್ಯ ಭಾಗದ ಕೆಲವು ಶಾಸಕರು,ರೈತ ಹೋರಾಟಗಾರರು, ಕನ್ನಡ ಪರ ಹೋರಾಟಗಾರರು ಅಮ್ಯುಸ್ಮೆಂಟ್ ಪಾರ್ಕ್ ವಿರುದ್ಧ ಹೋರಾಟ ಮಾಡುತ್ತಿದ್ದಾರೆ ಆದರೆ ಸರ್ಕಾರದ ಮಂತ್ರಿಮಂಡಲದವರು ನಾವೇ ಕೆ.ಆರ್.ಎಸ್ ಅಣೆಕಟ್ಟು ಕಟ್ಟಿದ ರೀತಿಯಲ್ಲಿ ಮನ ಬಂದಂತೆ ಮಾತನಾಡುತ್ತಿದ್ದಾರೆ ಎಂದರು.
ಮಂಡ್ಯ ಮತ್ತು ಮೈಸೂರು ಜನತೆಯನ್ನು ಗಣನೆಗೆ ತೆಗೆದುಕೊಳ್ಳದೆ ತುಘುಲಕ್ ದರ್ಬಾರಿನಂತೆ ಸರ್ಕಾರ ದರ್ಬಾರು ಮಾಡುತ್ತಿದೆ ಯಾವೊಬ್ಬ ರೈತನಿಗಾಗಲಿ ಕಿಂಚಿತ್ತು ಗೌರವ ನೀಡುತ್ತಿಲ್ಲ. ಕೋಟ್ಯಾಂತರ ಜನರಿಗೆ ಆಶ್ರಯವಾಗಿರುವ ಕಾವೇರಿ ನೀರು ಇವರ ಮನೆ ಸ್ವತ್ತಂತೆ ಮಾತನಾಡುತ್ತಿದ್ದಾರೆ ಎಂದು ಹೇಳಿದರು.
ನೂರು ಕೋಟಿ ರೂ ವೆಚ್ಚ ಮಾಡಿ ಕಾವೇರಿ ಆರತಿ ಮಾಡುತ್ತಿವೆ ಅಂತ ಹೇಳುತ್ತಿದ್ದಾರೆ ಅದೇ ಹಣವನ್ನು ರೈತರ ನಿಧಿಗೆಂದು ಉಪಯೋಗಿಸಿದರೆ ಬೆಳೆ ನಷ್ಟವಾದಾಗ ಅಥವಾ ಯಾವುದಾದರೂ ಬಡ ರೈತ ತೀರಿಕೊಂಡರೆ ಪರಿಹಾರ ನೀಡಬಹುದು. ಇವೆಲ್ಲವನ್ನೂ ಲೆಕ್ಕಿಸದೆ ನಾವು ಕಾವೇರಿ ಆರತಿ ಮಾಡೇ ಮಾಡುತ್ತೇವೆ ಎಂದು ಪಟ್ಟು ಹಿಡಿತಿರುವುದು ರೈತರ ದಂಗೆ ಉಂಟು ಮಾಡುವುದಕ್ಕೆ ಎಡೆ ಮಾಡಿಕೊಡುತ್ತಿದೆ ಎಂದರು.
ನಾಲಾ ಬೀದಿ ರವಿ, ಬೋಗಾದಿ ಸಿದ್ದೇಗೌಡ, ಪ್ಯಾಲೇಸ್ ಬಾಬು, ಗುರು ಬಸಪ್ಪ, ಮಾದಪ್ಪ, ಗೋವಿಂದರಾಜು, ಕಾವೇರಮ್ಮ, ಹರೀಶ್, ಮಾಲಿನಿ, ಪ್ರೇಮ, ಪುಷ್ಪ, ಸುನಿಲ್, ಶಿವು ಗೌಡ, ಚಿನ್ನಪ್ಪ, ಸ್ವಾಮಿ ಗೈಡ್, ಎಲ್ಐಸಿ ಸಿದ್ದಪ್ಪ, ಸ್ವಾಮಿ ಹೊನಕೆರೆ, ಮೋದಿ, ರಮೇಶ್ ಮುಂತಾದವರಿದ್ದರು.
-
Mandya24 hours ago
ನೇಣು ಬಿಗಿದ ಸ್ಥಿತಿಯಲ್ಲಿ ಪುರುಷ ಹಾಗೂ ಮಹಿಳೆಯ ಕೊಳೆತ ಶ*ವಗಳು ಪತ್ತೆ
-
State20 hours ago
ಹಾಸನ ಏರ್ಪೋರ್ಟ್ 2026ಕ್ಕೆ ಪೂರ್ಣ: ಚಿಕ್ಕಮಗಳೂರು-ಮಡಿಕೇರಿಯಲ್ಲಿ ಹೆಲಿಪೋರ್ಟ್ ನಿರ್ಮಾಣಕ್ಕೆ ವರದಿ ಸಿದ್ಧ
-
Kodagu24 hours ago
ಗೃಹಲಕ್ಷ್ಮಿ ಯೋಜನೆ ಇ-ಕೆವೈಸಿ ಫೆಲ್ಯೂರ್: ಹತ್ತಿರದ ಸಿಡಿಪಿಓ ಕಚೇರಿ ತೆರಳಿ Status ಪರಿಶೀಲನೆ ಮಾಡಿಸಿ
-
Hassan23 hours ago
ಬೆಳೆ ವಿಮೆ ಪ್ರಚಾರದ ವಾಹನಗಳಿಗೆ ಡಿಸಿ ಸಿ. ಸತ್ಯಭಾಮ ಚಾಲನೆ
-
Hassan21 hours ago
ಕಾಣೆಯಾಗಿದ್ದ ಮಹಿಳೆ ಶವವಾಗಿ ಪತ್ತೆ
-
State20 hours ago
16ನೇ ಹಣಕಾಸಿನ ಆಯೋಗಕ್ಕೆ ಹೆಚ್ಚುವರಿ ಜ್ಞಾಪನಾ ಪತ್ರ ಸಲ್ಲಿಸಿದ ಸಿಎಂ ಸಿದ್ದರಾಮಯ್ಯ
-
State22 hours ago
ಕೇರಳದಲ್ಲಿ ಜೂ.17ರವರೆಗೂ ವ್ಯಾಪಕ ಮಳೆ: ರಾಜ್ಯದ ಮೀನುಗಾರರಿಗೆ ಐಎಂಡಿ ಎಚ್ಚರಿಕೆ
-
Kodagu24 hours ago
ಕೊಡಗು ಪತ್ರಕತ೯ರ ಸಂಘದಿಂದ ಪ್ರಶಸ್ತಿಗಳಿಗೆ ಅಜಿ೯ ಆಹ್ವಾನ