Mandya
ಗ್ಯಾರಂಟಿ ಯೋಜನೆಗಳ ಮೂಲಕ ಪ್ರತಿವರ್ಷ ಒಂದು ತಾಲ್ಲೂಕಿಗೆ ಅಂದಾಜು ರೂ 220 ಕೋಟಿ : ಎನ್ ಚಲುವರಾಯಸ್ವಾಮಿ

ಮಂಡ್ಯ : ಹಲವಾರು ವಿರೋಧಗಳ ನಡುವೆ ರಾಜ್ಯದಲ್ಲಿ ಪಂಚ ಗ್ಯಾರಂಟಿಗಳನ್ನು ಅನುಷ್ಠಾನಗೊಳಿಸಲಾಯಿತು. ಈ ಯೋಜನೆಯಿಂದ ಪ್ರತಿ ತಾಲ್ಲೂಕಿಗೆ ಒಂದು ವರ್ಷದಲ್ಲಿ ಸುಮಾರು 220 ಕೋಟಿ ರೂ ನೀಡಲಾಗುತ್ತಿದೆ ಎಂದು ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ತಿಳಿಸಿದರು.
ಅವರು ಮದ್ದೂರು ತಾಲ್ಲೂಕಿನ ಕೊಪ್ಪದಲ್ಲಿ ಆಯೋಜಿಸಲಾಗಿದ್ದ ಜನತಾ ದರ್ಶನ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ಗ್ಯಾರಂಟಿ ಯೋಜನೆಗಳನ್ನು ಪಡೆಯಲು ಜನರು ಕಚೇರಿಗಳಿಗೆ ಅಲೆದಾಟುವಂತಿಲ್ಲ. ನೇರವಾಗಿ ಫಲಾನುಭವಿಗಳ ಖಾತೆಗೆ ಹಣ ಜಮೆಯಾಗುತ್ತದೆ ಎಂದರು.
ಸಮಸ್ಯೆ ಪರಿಹಾರವಾದ ನಂತರ ಪರಿಹಾರವಾಗಿದೆ ಎಂದು ಯಾರು ಅಭಿನಂದನೆ ಸಲ್ಲಿಸುವುದಿಲ್ಲ. ಹೊಸ ಸಮಸ್ಯೆಗಳ ಪರಿಹಾರಕ್ಕೆ ಅರ್ಜಿ ಸಲ್ಲಿಕೆಯಾಗುತ್ತದೆ. ಸಾರ್ವಜನಿಕರ ಕೆಲಸ ಮಾಡುವುದು ಜನಪ್ರತಿನಿಧಿಗಳ ಕೆಲಸ ಎಂಬ ಮನೋಭಾವನೆಯನ್ನು ಬೆಳಸಿಕೊಳ್ಳಬೇಕು ಎಂದರು.
ಕರ್ನಾಟಕ ರಾಜ್ಯ ಸಾರ್ವಜನಿಕರಿಗೆ ನೀಡುವ ಕಾರ್ಯಕ್ರಮಗಳಿಗೆ ಸಂಗ್ರಹಿಸುವ ಫಲಾನುಭವಿಗಳ ವಿವರಗಳ ಬಗ್ಗೆ ಬೇರೆ ರಾಜ್ಯಗಳು ಮೆಚ್ಚುಗೆ ವ್ಯಕ್ತಪಡಿಸಿ, ವಿವರ ಸಂಗ್ರಹಿಸಲು ರೂಪಿಸಿರುವ ತಂತ್ರಜ್ಞಾನ ವನ್ನು ಹಂಚಿಕೊಳ್ಳುವಂತೆ ಮನವಿ ಸಲ್ಲಿಸಿರುವುದು ಹರ್ಷದಾಯಕ ವಿಷಯವಾಗಿದೆ ಎಂದರು.
ಕೊಪ್ಪ ಹೋಬಳಿಯಲ್ಲಿ ಇದು ಎರಡನೇ ಬಾರಿಗೆ ಜನತಾ ದರ್ಶನ ಕಾರ್ಯಕ್ರಮವನ್ನು ಆಯೋಜಿಸಿದ್ದು, ಸ್ವೀಕರಿಸುವ ಕುಂದು ಕೊರತೆ ಅರ್ಜಿಗಳನ್ನು ಕಾನೂನು ಚೌಕಟ್ಟಿನಲ್ಲಿ ಪರಿಹರಿಸಲಾಗುವುದು ಎಂದರು.
ಕೊಪ್ಪದಲ್ಲಿ ಬೇಡಿಕೆ ಇರುವ ಪೊಲೀಸ್ ಠಾಣೆ ನಿರ್ಮಾಣ, ನಾಡ ಕಚೇರಿ ಹಾಗೂ ಪ್ರವಾಸಿ ಮಂದಿರ ನಿರ್ಮಾಣಕ್ಕೆ ಸ್ಥಳ ಗುರುತಿಸುವಂತೆ ಈಗಾಗಲೇ ಅಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದೆ. ಇದಲ್ಲದೇ ಪಂಚಾಯಿತಿ ಕಚೇರಿ ಹಾಗೂ ಗ್ರಂಥಾಲಯ ನಿರ್ಮಾಣಕ್ಕೆ ಕ್ರಮ ಕೈಗೊಂಡಿದ್ದು, ಸುಮಾರು 1 ಕೋಟಿ ವೆಚ್ಚವಾಗಲಿದೆ ಎಂದರು.
ಸಹಕಾರ ಸಂಘದ ಮೂಲಕ ರೂ 1 ಕೋಟಿ ಸಾಲ
ಕೊಪ್ಪ ಹಾಗೂ ಸುತ್ತಮುತ್ತಲಿನ 16 ಹಳ್ಳಿಗಳ ಕೃಷಿ ಪತ್ತಿನ ಸಹಕಾರ ಸಂಘ ಹಲವಾರು ಕಾರಣಗಳಿಂದ ಕೆಲಸ ಸ್ಥಗಿತಗೊಳಿಸಿತ್ತು. ಇದನ್ನು ಸರಿಪಡಿಸಿ ರೈತರು ಹಾಗೂ ಮಹಿಳೆಯರಿಗೆ ಆರ್ಥಿಕವಾಗಿ ಸದೃಢರಾಗಲು ಬಡ್ಡಿ ರಹಿತವಾಗಿ 1 ಕೋಟಿ ರೂ ವರೆಗೆ ಸಾಲ ನೀಡಲಾಗಿದೆ. ಇದಕ್ಕೆ ನಬಾಡ್೯ ವಿಧಿಸುವ ಬಡ್ಡಿಯನ್ನು ಸರ್ಕಾರ ಭರಿಸುತ್ತಿದೆ ಎಂದರು.
ಗ್ಯಾರಂಟಿ ಯೋಜನೆಗಳ ಜೊತೆಗೆ ಹೈನುಗಾರಿಕೆ ಕೃಷಿ ಸಂಬಂಧಿಸಿದ ಇಲಾಖೆಗಳ ಮೂಲಕ ಕೊಪ್ಪ ಮತ್ತು ಸುತ್ತಮುತ್ತಲಿನ ಗ್ರಾಮದಲ್ಲಿ ಸುಮಾರು 2000 ಫಲಾನುಭವಿಗಳಿಗೆ 1.96 ಕೋಟಿ ರೂ ಸಹಾಯಧನ ನೀಡಲಾಗಿದೆ ಎಂದರು.
ಪೌತಿ ಖಾತೆ ಆಂದೋಲನಕ್ಕೆ ಸಂಬಂಧಿಸಿದಂತೆ ಕಳೆದ ಒಂದುವರೆ ತಿಂಗಳಿನಿಂದ ಕೊಪ್ಪ ವ್ಯಾಪ್ತಿಯಲ್ಲಿ 1275 ಅರ್ಜಿ ಸ್ವೀಕರಿಸಿ ಸುಮಾರು 443 ಪೌತಿ ಖಾತೆ ಮಾಡಿಕೊಡಲಾಗಿದೆ. ಪೌತಿ ಖಾತೆ ಮಾಡಿಸಿಕೊಳ್ಳಲು ರೈತರು ಸಹ ಆಸಕ್ತಿ ತೋರಿಸಿ ಮುಂದೆ ಬರಬೇಕು. ದಾಖಲೆ, ಆರ್.ಟಿ.ಸಿ ಗಳು ಸರಿಯಿದ್ದರೆ ಮಾತ್ರ ಬ್ಯಾಂಕ್ ಅಥವಾ ಸೊಸೈಟಿಗಳಿಂದ ಸಾಲ ಪಡೆಯಲು ಸಾಧ್ಯ ಎಂದರು.
ರೈತರ ಭೂಮಿ ಹಾಗೂ ಇನ್ನಿತರೆ ದಾಖಲೆಗಳನ್ನು ಕಂದಾಯ ಇಲಾಖೆ ಡಿಜಟಲ್ ಮಾಡುವ ಭೂ ಸುರಕ್ಷಾ ಯೋಜನೆಯನ್ನು ಜಾರಿಗೆ ತಂದಿರುತ್ತದೆ. ಜಿಲ್ಲೆಯಲ್ಲಿ ಈಗಾಗಲೇ 36 ಲಕ್ಷ ದಾಖಲೆಗಳನ್ನು ಡಿಜಟಲೀಕರಣ ಮಾಡಲಾಗಿದೆ ಎಂದರು.
ಕಂದಾಯ ಇಲಾಖೆಯಲ್ಲಿ ಜನಪರ ಕೆಲಸಗಳು ನಡೆಯುತ್ತಿದ್ದು, ಸುಮಾರು 67 ಲಕ್ಷ ಪೌತಿ ಖಾತೆ, ಹಲವಾರು ವರ್ಷಗಳಿಂದ ಬಾಕಿ ಇದ್ದ ಕೋಟ್೯ ಪ್ರಕರಣಗಳನ್ನು ಒಂದು ವರ್ಷದಲ್ಲಿ 16000 ವಿಲೇವಾರಿ ಮಾಡಲಾಗಿದೆ. 18 ಲಕ್ಷ ಆರ್.ಟಿ.ಸಿ ಗಳಿಗೆ ಆಧಾರ್ ಜೋಡಣೆ ಕೆಲಸ ಮಾಡಲಾಗಿದೆ ಎಂದರು.
ಇತಿಹಾಸದಲ್ಲೇ ಮೊದಲ ಬಾರಿಗೆ ನಿರಂತರ 154 ದಿನಗಳು ಕೆ.ಆರ್.ಎಸ್ ನಲ್ಲಿ ನೀರು ತುಂಬಿರುವುದು ಸಂತೋಷದ ವಿಷಯವಾಗಿದೆ. ಜಿಲ್ಲೆಯ ಕೆರೆಗಳಿಗೆ ನೀರು ತುಂಬಿಸಲು ಕ್ರಮ ವಹಿಸಲಾಗಿದೆ ಬೆಳಗಳಿಗೆ ಕಟ್ಟು ಪದ್ಧತಿಯಲ್ಲಿ ನೀರು ಹರಿಸಲು ಪ್ರಾರಂಭಿಸಲಾಗಿದೆ. ರೈತರು ಬಿತ್ತನೆ ಕೆಲಸಗಳನ್ನು ಪ್ರಾರಂಭಿಸುವಂತೆ ತಿಳಿಸಿದರು.
ರೈತರಿಗೆ ಹೆಚ್ಚು ಉಪಯುಕ್ತವಾಗಲಿ ಎಂದು ರೈತರು ಹೆಚ್ಚಿರುವ ಜಿಲ್ಲೆ ಮಂಡ್ಯ ಜಿಲ್ಲೆಯಲ್ಲಿ ಕೃಷಿ ವಿಶ್ವವಿದ್ಯಾಲಯವನ್ನು ವಿ.ಸಿ.ಫಾರಂ ನಲ್ಲಿ ಪ್ರಾರಂಭಿಸಲಾಗುವುದು. ಇಲ್ಲಿ ಕೃಷಿ ತಜ್ಞರು ರೈತರಿಗೆ ಹಲವಾರು ಉಪಯುಕ್ತ ಮಾಹಿತಿಯನ್ನು ನೀಡಲಿದ್ದಾರೆ ಎಂದರು.
ಜಿಲ್ಲಾಧಿಕಾರಿ ಡಾ.ಕುಮಾರ ಮಾತನಾಡಿ, ಜನರ ಸಮಸ್ಯೆಗಳನ್ನು ಪರಿಹರಿಸಲು ಜನತಾ ದರ್ಶನ ಕಾರ್ಯಕ್ರಮವನ್ನು ಎರಡನೇ ಬಾರಿಗೆ ಕೊಪ್ಪದಲ್ಲಿ ಆಯೋಜಿಸಲಾಗಿದ್ದು, ಈ ಹಿಂದೆ ಸ್ವೀಕೃತವಾರ ಕುಂದು ಕೊರತೆ ಅರ್ಜಿಗಳಿಗೆ ಪರಿಹಾರ ಒದಗಿಸಲಾಗಿದೆ.
ಕಂದಾಯ ಇಲಾಖೆ ಚುರುಕಾಗಿ ಕೆಲಸ ನಿರ್ವಹಿಸುತ್ತಿದ್ದು, ಸ್ವಯಂ ಪ್ರೇರಿತವಾಗಿ ಪೌತಿ ಖಾತೆ ಆಂದೋಲನ, ಪೋಡಿ ದುರಸ್ತಿ, ಆಧಾರ ಸೀಡಿಂಗ್ ಕೆಲಸಗಳನ್ನು ಮನೆ ಮನೆಗೆ ಭೇಟಿ ನೀಡಿ ದಾಖಲೆ ಸಂಗ್ರಹಿಸಿಕೊಂಡು ಮಾಡಿಕೊಡಲಾಗುತ್ತಿದೆ ಎಂದರು.
ಕಾರ್ಯಕ್ರಮದಲ್ಲಿ ಡಿ.ಸಿ.ಸಿ ಬ್ಯಾಂಕ್ ಅಧ್ಯಕ್ಷ ಜೋಗಿಗೌಡ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶೇಖ್ ತನ್ವೀರ್ ಆಸಿಫ್, ಮಂಡ್ಯ ಉಪವಿಭಾಗಾಧಿಕಾರಿ ಶಿವ ಮೂರ್ತಿ ಸೇರಿದಂತೆ ಇನ್ನಿತರೆ ಅಧಿಕಾರಿಗಳು ಉಪಸ್ಥಿತರಿದ್ದರು.
Mandya
ಪತ್ರಕರ್ತರಿಗೆ ಪರಿಹಾರದ ಚೆಕ್ ವಿತರಣೆ

ಮಂಡ್ಯ : ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಮನವಿ ಮೇರೆಗೆ ಮಂಡ್ಯ ನಗರ ಸಭೆಯಲ್ಲಿ ಮೀಸಲಿರಿಸಿದ್ದ ಆರೋಗ್ಯ ಪರಿಹಾರ ನಿಧಿಯಿಂದ ಹಿರಿಯ ಪತ್ರಕರ್ತರಾದ ಬಸವರಾಜ್ ಹೆಗಡೆ ಹಾಗೂ ಶೇಷು ಅವರಿಗೆ ಪರಿಹಾರದ ಚೆಕ್ ವಿತರಣೆ ಮಾಡಲಾಯಿತು.
ಜಿಲ್ಲಾ ಕಾರ್ಯನಿರತ ಪತ್ರಕರ್ತ ಸಂಘದ ಅಧ್ಯಕ್ಷರಾದ ಕೆ..ಎನ್.ನವೀನ್ ಕುಮಾರ್ ಹಾಗೂ ಮಾಜಿ ಅಧ್ಯಕ್ಷರಾದ ಬಿ.ಪಿ ಪ್ರಕಾಶ್ ಅವರು, ಪರಿಹಾರದ ಚೆಕ್ ವಿತರಣೆ ಮಾಡಿ ಆರೋಗ್ಯ ವಿಚಾರಿಸಿದರು.
ಬಸವರಾಜ್ ಹೆಗಡೆ ಹಾಗೂ ಶೇಷು ಅವರು ಇತ್ತೀಚೆಗೆ ಅನಾರೋಗ್ಯಕ್ಕೆ ತುತ್ತಾಗಿದ್ದರು. ಜಿಲ್ಲಾ ಸಂಘದ ಮನವಿ ಮೇರೆಗೆ ನಗರ ಸಭೆ ತಲಾ ಹತ್ತು ಸಾವಿರದ ಪರಿಹಾರದ ಚೆಕ್ ಅನ್ನು ನೀಡಿದೆ.
Mandya
ಕರೀಘಟ್ಟ ದೇವರ ಕಾಡು ಅರಣ್ಯ ಪ್ರದೇಶಕ್ಕೆ ಬೆಂಕಿ: 25 ಎಕರೆ ಅರಣ್ಯ ಭಸ್ಮ

ಶ್ರೀರಂಗಪಟ್ಟಣ : ಕರೀಘಟ್ಟ ದೇವರ ಕಾಡು ಅರಣ್ಯ ಪ್ರದೇಶಕ್ಕೆ ಕಿಡಿಗೇಡಿಗಳು ಬೆಂಕಿ ಹಚ್ಚಿದ್ದು, ಸುಮಾರು 25 ಎಕರೆ ಪ್ರದೇಶದ ಅರಣ್ಯ ಭಸ್ಮವಾಗಿದೆ.
ತಾಲ್ಲೂಕಿನ ಗಣಂಗೂರು ಐಬಿ ಎದುರುಗಿನ ಅರಣ್ಯ ಪ್ರದೇಶಕ್ಕೆ ಯಾರೋ ಕಿಡಿಗೇಡಿಗಳು ಬೆಂಕಿ ಹಚ್ಚಿರುವುದರಿಂದ ಅರಣ್ಯ ಪ್ರದೇಶದಲ್ಲಿನ ಮರ, ಗಿಡಗಳು ಸೇರಿದಂತೆ ಪ್ರಾಣಿ ಪಕ್ಷಿಗಳು ಹಾನಿಗೊಳಗಾಗಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ.
ಸುದ್ದಿ ತಿಳಿದು ಸ್ಥಳಕ್ಕಾಗಮಿಸಿದ ಅರಣ್ಯ ಇಲಾಖೆ ಅಧಿಕಾರಿಗಳು, ಸಿಬ್ಬಂಧಿಗಳು ಹಾಗೂ ಅಗ್ನಿಶಾಮಕ ದಳದ ಸಿಬ್ಬಂಧಿಗಳು ಬೆಂಕಿ ನಂದಿಸಿದ್ದಾರೆ.
Mandya
ಫೈನಾನ್ಸ್ ಕಿರುಕುಳದಿಂದ ಮೃತರಾದ ತಾಯಿ-ಮಗನ ಕುಟುಂಬ ಭೇಟಿಯಾದ ಆರ್.ಅಶೋಕ್

ಮಂಡ್ಯ: ಮೈಕ್ರೋ ಫೈನಾನ್ಸ್ ಕಿರುಕಳಕ್ಕೆ ಬೇಸತ್ತು ತಾಯಿ, ಮಗ ಆತ್ಮಹತ್ಯೆ ಮಾಡಿಕೊಂಡದ್ದ ಗ್ರಾಮಕ್ಕೆ ಗುರುವಾರ ಭೇಟಿ ನೀಡಿದ ವಿಪಕ್ಷ ನಾಯಕ ಆರ್.ಅಶೋಕ್ ಕುಟುಂಬಸ್ಥರಿಗೆ ಸಾಂತ್ವಾನ ಹೇಳಿದ್ದಾರೆ.
ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ಕೊನ್ನಾಪುರ ಗ್ರಾಮದ ಪ್ರೇಮ ಎಂಬವವರು ಉಜ್ಜೀವನ್ ಬ್ಯಾಂಕ್‌ನಲ್ಲಿ 6 ಲಕ್ಷ ಸಾಲ ಪಡೆದು, ಸಾಲ ತೀರಿಸಲಾಗದೆ ಬ್ಯಾಂಕ್ ಸಿಬ್ಬಂದಿಗಳ ಕಾಟದಿಂದ ಮನನೊಂದು ಜ.28 ರಂದು ಆತ್ಮಹತ್ಯೆಗೆ ಶರಣಾಗಿದ್ದರು. ಬಳಿಕ ತಾಯಿ ಸಾವಿನಿಂದ ಮನನೊಂದ ಮಗ ರಂಜಿತ್ ಕೂಡ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದರು.
ಇಂದು (ಫೆ.6) ಗ್ರಾಮಕ್ಕೆ ಭೇಟಿ ನೀಡಿದ ವಿಪಕ್ಷ ನಾಯಕ ಆರ್.ಅಶೋಕ್ ಮೃತರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಕುಟುಂಬಸ್ಥರಿಗೆ ಸಾಂತ್ವಾನ ಹೇಳಿದರು. ಜೊತೆಗೆ ಜೆಡಿಎಸ್ ಶಾಸಕ ಡಾ.ಕೆ.ಅನ್ನದಾನಿ, ಬಿಜೆಪಿ ಜಿಲ್ಲಾಧ್ಯಕ್ಷ ಡಾ.ಇಂದ್ರೇಶ್, ಇಂಡವಾಳು ಸಚ್ಚಿದಾನಂದ ಮತ್ತಿತರರು ಸಾಥ್ ನೀಡಿದರು.
-
State11 hours ago
ಪಕ್ಷದಲ್ಲಿನ ಆಂತರಿಕ ಭಿನ್ನಾಭಿಪ್ರಾಯ ದುರದೃಷ್ಟಕರ: ಬಸವರಾಜ ಬೊಮ್ಮಾಯಿ ಬೇಸರ
-
Kodagu9 hours ago
ಕೊಡವಾಮೆ ಬಾಳೋ ಪಾದಯಾತ್ರೆ: ಮಧ್ಯ ಮಾರಾಟ ನಿಷೇಧ
-
Chamarajanagar9 hours ago
ಚಿಕ್ಕಮಗಳೂರು: ನಕ್ಸಲ್ ರವೀಂದ್ರಗೆ ಸೇರಿದ್ದು ಎನ್ನಲಾದ ಬಂದೂಕು ಪತ್ತೆ?
-
Kodagu13 hours ago
ಫೆ.7 ರ ಕೊಡವ ಪಾದಯಾತ್ರೆಗೆ ಸಿಎನ್ ಸಿ ಬೆಂಬಲ
-
Kodagu8 hours ago
ಕೊಟ್ಟಮುಡಿ ಝೀನತ್ ಯುವಕ ಸಂಘ ಅಧ್ಯಕ್ಷರಾಗಿ ಸೌಕತ್ ಆಯ್ಕೆ
-
Hassan7 hours ago
ಆಸ್ತಿ ವಿಚಾರಕ್ಕೆ ಎರಡು ಕುಟುಂಬಗಳ ನಡುವೆ ಮಾರಾಮಾರಿ
-
Sports9 hours ago
ಏಕದಿನ ಮಾದರಿಗೆ ದಿಢೀರ್ ನಿವೃತ್ತಿ ಘೋಷಿಸಿದ ಆಸೀಸ್ ಆಲ್ರೌಂಡರ್ ಸ್ಟೋಯ್ನಿಸ್
-
Hassan6 hours ago
ಎಂಸಿಇ ಕಾಲೇಜು ಉಪಾಧ್ಯಕ್ಷರಿಗೆ ವೀರಶೈವ ಲಿಂಗಾಯತ ಮಹಾಸಭಾದಿಂದ ಸನ್ಮಾನ