Connect with us

Kodagu

ನದಿ ನೀರಿನಲ್ಲಿ ಮುಳುಗಿ ವ್ಯಕ್ತಿ ದುರ್ಮರಣ

Published

on

ನಾಪೋಕ್ಲು : ಸ್ನಾನಕ್ಕೆಂದು ತೆರಳಿದ ವ್ಯಕ್ತಿಯೊಬ್ಬರು ನದಿ ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ನಾಪೋಕ್ಲು ಸಮೀಪದ ಕೊಳಕೇರಿ ಗ್ರಾಮದ ಕುವಲೆಕ್ಕಾಡು ಎಂಬಲ್ಲಿ ಗುರುವಾರ ನಡೆದಿದೆ.

ಕಕ್ಕಬ್ಬೆ ಕುಂಜಿಲ ವಾಟೆಕ್ಕಾಡು ಗ್ರಾಮದ ನಿವಾಸಿ ದಿವಂಗತ ರಾಜು ಎಂಬುವವರ ಪುತ್ರ ದೇವಯ್ಯ (38) ಮೃತ ದುರ್ದೈವಿ.

ಕೈಬುಲಿರ ಸಂತೋಷ್ ಎಂಬುವವರಿಗೆ ಸೇರಿದ ತೋಟದಲ್ಲಿ ಕಾಫಿ ಕಪಾತ್ ಕೆಲಸಕ್ಕೆ ಸಹೋದರ ಸುಬ್ರಮಣಿಯೊಂದಿಗೆ ತೆರಳಿದ್ದ ದೇವಯ್ಯ ಮದ್ಯಾಹ್ನ ಬಿಸಿಲಿನ ತಾಪ ಹೆಚ್ಚಾದ ಕಾರಣ ಸ್ನಾನಕ್ಕೆಂದು ತೋಟದಪಕ್ಕದಲ್ಲಿರುವ ಕುಪ್ಪೋಟು ಹೊಳೆಗೆ ಸ್ನಾನಕ್ಕೆ ತೆರಳಿದಾಗ ಆಕಸ್ಮಿಕವಾಗಿ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ. ನೀರಿನಲ್ಲಿ ಮುಳುಗಿದ್ದ ಮೃತ ದೇಹವನ್ನು ಕುಂಜಿಲ ಗ್ರಾಮದ ಅಶ್ರಫ್ ಪೊಯಕ್ಕರೆ,ಮಾಜಿ ಸೈನಿಕ ಮೊಯಿದೀನ್, ನಾಪೋಕ್ಲು ಗ್ರಾಮ ಪಂಚಾಯತ್ ಸದಸ್ಯ ಅಶ್ರಫ್, ಕುಂಜಿಲ ಗ್ರಾಮದ ಅಸೀಬ್, ಆಸ್ಕರ್, ಶಫೀಕ್, ರಶೀದ್, ರವಿ ಮತ್ತಿತರರು ಸತತ ಮೂರು ಗಂಟೆಗಳ ಕಾಲ ನೀರಿನಲ್ಲಿ ಶೋಧ ಕಾರ್ಯನಡೆಸಿ ಮೃತ ದೇಹವನ್ನು ಮೇಲೆತ್ತುವಲ್ಲಿ ಯಶಸ್ವಿಯಾದರು.

ಸ್ಥಳಕ್ಕೆ ನಾಪೋಕ್ಲು ಠಾಣಾಧಿಕಾರಿ ಮಂಜುನಾಥ್ ಹಾಗೂ ಸಿಬ್ಬಂದಿಗಳು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡರು.

Continue Reading
Click to comment

Leave a Reply

Your email address will not be published. Required fields are marked *

Kodagu

ನಾಲ್ ನಾಡ್ ಹಾಕಿ ಪಂದ್ಯಾವಳಿ ಮುಂದೂಡಿಕೆ

Published

on

ನಾಪೋಕ್ಲು: ನಾಲ್ ನಾಡ್ ಹಾಕಿ ಕ್ಲಬ್ ವತಿಯಿಂದ ಅಪ್ಪಚೆಟ್ಟೋಳಂಡ ಕುಟುಂಬಸ್ಥರ ಪ್ರಾಯೋಜಕತ್ವದಲ್ಲಿ ಮೆ 22 ರಿಂದ ನಾಪೋಕ್ಲು ಬಳಿಯ ಬಲ್ಲಮಾವಟಿ ನೇತಾಜಿ ವಿದ್ಯಾಸಂಸ್ಥೆಯ ಮೈದಾನದಲ್ಲಿ ನಡೆಸಲು ಉದ್ದೇಶಿಸಿರುವ ನಾಲ್ ನಾಡ್ ವ್ಯಾಪ್ತಿಯ ಅಂತರಗ್ರಾಮ ಹಾಕಿ ಪಂದ್ಯಾಟ ಮತ್ತು ಮಹಿಳೆಯರ ಹಗ್ಗಜಗ್ಗಾಟವನ್ನು ಮಳೆಯ ಕಾರಣದಿಂದ ಮುಂದೂಡಲಾಗಿದೆ.


ಪಂದ್ಯಾಟಗಳನ್ನು ಅಕ್ಟೋಬರ್ ಅಥವಾ ನವೆಂಬರ್ ತಿಂಗಳಲ್ಲಿ ನಡೆಸಲು ತೀರ್ಮಾನಿಸಲಾಗಿದೆ. ಕ್ರೀಡಾಭಿಮಾನಿಗಳು ಮತ್ತು ನೋಂದಾಯಿತ ತಂಡಗಳು ಬದಲಿಸಲಾದ ದಿನಾಂಕವನ್ನು ಗಮನಿಸಿ ಸಹಕರಿಸುವಂತೆ ನಾಲ್’ನಾಡ್ ಹಾಕಿ ಕ್ಲಬ್ ಅಧ್ಯಕ್ಷರು ಮತ್ತು ಆಡಳಿತ ಮಂಡಳಿಯವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Continue Reading

Kodagu

ಕೊಡಗಿನಲ್ಲಿ ಬೃಹತ್ ಗಾತ್ರದ ಕಾಡುಕೋಣ(ಕಾಟಿ) ಭೇಟೆ

Published

on

ಕೊಡಗಿನಲ್ಲಿ ಬೃಹತ್ ಗಾತ್ರದ ಕಾಡುಕೋಣ(ಕಾಟಿ) ಭೇಟೆ

539 ಕೆ.ಜಿ ಕಾಡುಕೋಣ ಮಾಂಸ ಸೇರಿ ಓರ್ವನ ಬಂಧನ.

ಎಮ್ಮೆಮಾಡು ನಿವಾಸಿ ಹ್ಯಾರಿಸ್(42) ಬಂಧಿತ ಆರೋಪಿ

ಬೆನ್ನಟ್ಟುವ ಸಂಧರ್ಭ ಜೊತೆಗಿದ್ದ ಮತ್ತೊಬ್ಬ ಆರೋಪಿ ಮೂಸ ಪರಾರಿ.

ಕೊಡಗು ಜಿಲ್ಲೆ ಮಾದಪುರ ಸಮೀಪದ ನಂದಿಮೊಟ್ಟೆಯಲ್ಲಿ ನಡೆದ ಘಟನೆ‌.

ಮಡಿಕೇರಿ ವಲಯ ಅರಣ್ಯ ಅಧಿಕಾರಿಗಳಿಂದ ನಡೆದ ಕಾರ್ಯಚರಣೆ.

ತಡರಾತ್ರಿ ಅಪ್ಪಂಗಳದಲ್ಲಿ ವಾಹನವನ್ನ ಬೆನ್ನಟಿ ಹಿಡಿದ ಅರಣ್ಯ ಅಧಿಕಾರಿಗಳು.

ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಅರಣ್ಯ ಇಲಾಖೆ ಸಿಬ್ಬಂದಿಗಳು .

ಬಂಧಿತರಿಂದ ಎರಡು ಕತ್ತಿ ಹಾಗೂ ಪಿಕಪ್ ವಾಹನ ವಶಕ್ಕೆ.

Continue Reading

Kodagu

ಕೊಡಗು ಜಿಲ್ಲೆಯ ಮಳೆ ವಿವರ

Published

on

ಜಿಲ್ಲೆಯಲ್ಲಿ ಸೋಮವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆ ಅವಧಿಯಲ್ಲಿ ಸರಾಸರಿ ಮಳೆ 17.21 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ 0.00 ಮಿ.ಮೀ. ಮಳೆಯಾಗಿತ್ತು. ಜನವರಿಯಿಂದ ಇಲ್ಲಿಯವರೆಗಿನ ಮಳೆ 198.24 ಮಿ.ಮೀ, ಕಳೆದ ವರ್ಷ ಇದೇ ಅವಧಿಯಲ್ಲಿ 122.89 ಮಿ.ಮೀ ಮಳೆಯಾಗಿತ್ತು.
ಮಡಿಕೇರಿ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 35.25 ಮಿ.ಮೀ. ಕಳೆದ ವರ್ಷ ಇದೇ ದಿನ 0.00 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 296.79 ಮಿ.ಮೀ, ಕಳೆದ ವರ್ಷ ಇದೇ ಅವಧಿಯಲ್ಲಿ 179.33 ಮಿ.ಮೀ. ಮಳೆಯಾಗಿತ್ತು.
ವಿರಾಜಪೇಟೆ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 8.40 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ 0.00 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 122.85 ಮಿ.ಮೀ. ಕಳೆದ ವರ್ಷ ಇದೇ ಅವಧಿಯಲ್ಲಿ 74.11 ಮಿ.ಮೀ. ಮಳೆಯಾಗಿತ್ತು.
ಪೊನ್ನಂಪೇಟೆ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 23.40 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ 0.00 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 176.89 ಮಿ.ಮೀ. ಕಳೆದ ವರ್ಷ ಇದೇ ಅವಧಿಯಲ್ಲಿ 76.94 ಮಿ.ಮೀ. ಮಳೆಯಾಗಿತ್ತು.
ಸೋಮವಾರಪೇಟೆ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 12.30 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ 0.00 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 172.65 ಮಿ.ಮೀ. ಕಳೆದ ವರ್ಷ ಇದೇ ಅವಧಿಯಲ್ಲಿ 96.66 ಮಿ.ಮೀ. ಮಳೆಯಾಗಿತ್ತು.
ಕುಶಾಲನಗರ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 6.70 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ 0.00 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 222 ಮಿ.ಮೀ. ಕಳೆದ ವರ್ಷ ಇದೇ ಅವಧಿಯಲ್ಲಿ 187.40 ಮಿ.ಮೀ. ಮಳೆಯಾಗಿತ್ತು.
ಜಿಲ್ಲೆಯಲ್ಲಿ ಹೋಬಳಿವಾರು ದಾಖಲಾಗಿರುವ ಮಳೆ ವಿವರ:-ಮಡಿಕೇರಿ ಕಸಬಾ 5.20, ನಾಪೋಕ್ಲು 9.20, ಸಂಪಾಜೆ 71, ಭಾಗಮಂಡಲ 55.60, ವಿರಾಜಪೇಟೆ ಕಸಬಾ 6.80, ಅಮ್ಮತ್ತಿ 10, ಹುದಿಕೇರಿ 1.30, ಶ್ರೀಮಂಗಲ 0.20, ಪೊನ್ನಂಪೇಟೆ 2, ಬಾಳೆಲೆ 90.10, ಸೋಮವಾರಪೇಟೆ ಕಸಬಾ 6.60, ಶನಿವಾರಸಂತೆ 11.20, ಶಾಂತಳ್ಳಿ 17.40, ಕೊಡ್ಲಿಪೇಟೆ 14, ಕುಶಾಲನಗರ 8.40, ಸುಂಟಿಕೊಪ್ಪ 5 ಮಿ.ಮೀ.ಮಳೆಯಾಗಿದೆ.

ಹಾರಂಗಿ ಜಲಾಶಯದ ನೀರಿನ ಮಟ್ಟ (20-05-2024) ವರದಿ

ಹಾರಂಗಿ ಜಲಾಶಯದ ಗರಿಷ್ಠ ಮಟ್ಟ 2,859 ಅಡಿಗಳು, ಇಂದಿನ ನೀರಿನ ಮಟ್ಟ 2823.09 ಅಡಿಗಳು. ಕಳೆದ ವರ್ಷ ಇದೇ ದಿನ 2819.78 ಅಡಿಗಳು. ಹಾರಂಗಿಯಲ್ಲಿ ಬಿದ್ದ ಮಳೆ 31.40 ಮಿ.ಮೀ., ಇಂದಿನ ನೀರಿನ ಒಳಹರಿವು 287 ಕ್ಯುಸೆಕ್, ಕಳೆದ ವರ್ಷ ಇದೇ ದಿನ 89 ಕ್ಯುಸೆಕ್, ಇಂದಿನ ನೀರಿನ ಹೊರ ಹರಿವು ನದಿಗೆ 200 ಕ್ಯುಸೆಕ್. ಕಳೆದ ವರ್ಷ ಇದೇ ದಿನ ನೀರಿನ ಹೊರ ಹರಿವು ನದಿಗೆ 50 ಕ್ಯುಸೆಕ್. ನಾಲೆಗೆ 40 ಕ್ಯುಸೆಕ್.

Continue Reading

Trending

error: Content is protected !!