Kodagu
ನಾಗರ ಹೊಳೆ ವ್ಯಾಪ್ತಿಯಿಂದ 23.6 ಕಿ.ಮೀ ಬಫರ್ ಝೋನ್ ವಿಸ್ತರಣೆಗೆ ಯುಕೊ ವಿರೋಧ

ಸರ್ಕಾರದ ಏಕಪಕ್ಷೀಯ ನಿರ್ಧಾರ ಆತಂಕಕಾರಿ ಬೆಳವಣಿಗೆ : ಮಂಜು ಚಿಣ್ಣಪ್ಪ.
ಮಡಿಕೇರಿ : ನಾಗರಹೊಳೆ ಅಣ್ಯದಂಚಿನಿAದ ಗರಿಷ್ಠ 23.6 ಕಿ.ಮೀ ಬಫರ್ ಝೋನ್ ವಿಸ್ತರಣೆಗೆ ಕೇವಲ ಅಧಿಕಾರಿಗಳ ಸಲಹೆಯ ಮೇರೆಗೆ ಪ್ರಸ್ತಾವನೆ ಕಳುಹಿಸಿರುವುದು ಖಂಡನೀಯ. ಸರ್ಕಾರದ ಈ ನಡೆಯು ದ.ಕೊಡಗಿನ ಜನತೆಯ ಪಾಲಿಗೆ ಮಾರಕವಾಗಲಿದ್ದು, ಸರ್ಕಾರ ಈ ಕುರಿತಂತೆ ಸ್ಪಷ್ಠೀಕರಣ ನೀಡಬೇಕಿದೆ. ಹಾಗೆಯೇ ಏಕಪಕ್ಷೀಯವಾಗಿ ನಿರ್ಧಾರ ತೆಗೆದುಕೊಂಡು ಕಳುಹಿಸಿರುವ ಪ್ರಸ್ತಾವನೆಯನ್ನು ಹಿಂದಕ್ಕೆ ಪಡೆಯಬೇಕು ಮತ್ತು ಜನತೆ ಈ ಕುರಿತು ಎಚ್ಚೆತ್ತುಕೊಳ್ಳಬೇಕು ಎಂದು ಯುಕೊ ಅಧ್ಯಕ್ಷ ಕೊಕ್ಕಲೆಮಾಡ ಮಂಜು ಚಿಣ್ಣಪ್ಪ ಆಗ್ರಹಿಸಿದ್ದಾರೆ.
ಪತ್ರಿಕಾ ಹೇಳಿಕೆ ನೀಡಿರುವ ಅವರು, ಯಾವುದೇ ಕಾರಣಕ್ಕೂ ಅರಣ್ಯೇತರ ವಲಯದ ಜನವಸತಿ ಪ್ರದೇಶಗಳಿಗೆ ಸೂಕ್ಷ್ಮ ಪರಿಸರ ತಾಣಗಳ ಮಿತಿಯನ್ನು ವಿಸ್ತರಿಸುವ ಪ್ರಸ್ತಾವನೆಯನ್ನು ಕೈಬಿಡಬೇಕು. ನಾಗರ ಹೊಳೆ ವ್ಯಾಪ್ತಿಯ 271 ಚ.ಕಿ.ಮೀ ಅರಣ್ಯೇತರ ವಲಯ ಎಂದು ಪ್ರಸಾಪಿಸಿರುವುದು ಆತಂಕಕ್ಕೆ ಕಾರಣ ವಾಗಿದೆ. ಅರಣ್ಯೇತರ ವಲಯ ಅಂದರೆ, ಅದು ಜನ ವಸತಿ ಪ್ರದೇಶಕ್ಕೆ ಬಫರ್ ಝೋನ್ ವಿಸ್ತರಣೆಯ ಹುನ್ನಾರವಾಗಿದೆ ಎಂಬ ಆತಂಕ ಎದುರಾಗಿದೆ. ಹಾಗಾದಲ್ಲಿ ದ.ಕೊಡಗಿನ ಗಡಿ ಗ್ರಾಮಗಳು ತನ್ನ ಅಸ್ತಿತ್ವವನ್ನು ಕಳೆದುಕೊಳ್ಳಲಿದೆ. ಪರಿಸರ ಸೂಕ್ಷ್ಮ ವಲಯ ಯಾವುದೇ ಕಾರಣಕ್ಕೂ ಸಾಂಸ್ಕೃತಿಕ ಸೂಕ್ಷö್ಮ ಭೂ ಪ್ರದೇಶವನ್ನು ಕಬಳಿಸುವುದನ್ನು ಯುಕೊ ಸಂಪೂರ್ಣ ವಿರೋಧಿಸುತ್ತದೆ ಎಂದು ಹೇಳಿದ್ದಾರೆ.
Kodagu
ಕೊಡಗು ಜಿಲ್ಲಾಡಳಿತ ಭವನದಲ್ಲಿ ಆಧುನಿಕ ತಂತ್ರಜ್ಞಾನದ ಲಿಫ್ಟ್ ಭಾಗ್ಯ

ಕೊಡಗು: ಮಡಿಕೇರಿಯಲ್ಲಿರುವ ಕೊಡಗು ಜಿಲ್ಲಾಡಳಿತ ಭವನದ ಸಂಕೀರ್ಣಕ್ಕೆ ಆಧುನಿಕ ತಂತ್ರಜ್ಞಾನದ ನೂತನ ಲಿಫ್ಟ್ ಅಳವಡಿಕೆ ಆಗಲಿದೆ. ಸುಮಾರು 14 ಲಕ್ಷ ರೂ ವೆಚ್ಚದಲ್ಲಿ ಸಂಪೂರ್ಣ ರಸ್ಟ್ ಪ್ರೂಫ್ ಲಿಫ್ಟ್ ಇನ್ನು ಮೂರು ವಾರಗಳ ಒಳಗಾಗಿ ಅಳವಡಿಸಿ ಸಾರ್ವಜನಿಕ ಬಳಕೆಗೆ ಲಭ್ಯವಾಗಲಿದೆ ಎಂದು ನಿರ್ವಹಣೆ ಹೊತ್ತ ಸಂಸ್ಥೆ ಮಾಹಿತಿ ನೀಡಿದೆ.
ಜಿಲ್ಲಾಡಳಿತ ಭವನ ಲೋಕಾರ್ಪಣೆ ಗೊಂಡು ಐದು ವರ್ಷಗಳಲ್ಲಿಯೇ ಪದೇ ಪದೇ ರಿಪೇರಿಯಾಗಲು ಆರಂಭಿಸಿತ್ತು. ಕಟ್ಟಡ ನಿರ್ಮಾಣ ಕಾಲದಲ್ಲಿ ಕಾಮಗಾರಿ ವಸ್ತುಗಳನ್ನು ಸಾಗಿಸಲು ಲಿಫ್ಟ್ ಬಳಕೆಯಾದ್ದರಿಂದ ಅದರ ಸಾಮರ್ಥ್ಯ ಕೂಡ ಕುಗ್ಗಿತ್ತು. ಕಳೆದ ಡಿಸೆಂಬರ್ ನಲ್ಲಿ ಸಂಪೂರ್ಣ ಬಂದ್ ಆಗಿತ್ತು. ಕೊಡಗು ಜಿಲ್ಲಾಧಿಕಾರಿಗಳಾದ ವೆಂಕಟ್ ರಾಜಾ ಅವರಿಂದ ಸಂಪೂರ್ಣ ಮಾಹಿತಿ ಪಡೆದ ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಭೋಸರಾಜು ಅವರು ಹಾಗೂ ಶಾಸಕ ಎ.ಎಸ್.ಪೊನ್ನಣ್ಣ ಮತ್ತು ಡಾ ಮಂತರ್ ಗೌಡ ಅವರು ಲಿಫ್ಟ್ ನ್ನು ರಿಪೇರಿ ಮಾಡುವ ಬದಲು ಹೊಸ ಲಿಫ್ಟ್ ಖರೀದಿಗೆ ಸೂಚನೆ ನೀಡಿದ ಮೇರೆಗೆ ದಿನಾಂಕ 31-1-2025 ರಂದು ಜಿಲ್ಲಾಧಿಕಾರಿಗಳು ಟೆಂಡರ್ ಕರೆದು ದಿನಾಂಕ 4-3-2025 ರಂದು ಕಾರ್ಯಾದೇಶವನ್ನು ಲಿಫ್ಟ್ ತಯಾರಿಕೆಯಲ್ಲಿ ಪ್ರತಿಷ್ಠಿತ ಸಂಸ್ಥೆ ಯಾಗಿರುವ ಬೆಂಗಳೂರಿನ ಸ್ವಿಫ್ಟ್ ಸ್ಪೇಸ್ ಎಲಿವೇಟರ್ಸ್ ಸಂಸ್ಥೆಗೆ ನೀಡಲಾಯಿತು.
ಹಳೆಯ ಲಿಫ್ಟ್ ನ್ನು ಸ್ಥಳಾಂತರಿಸುವ ಕೆಲಸ ಮುಗಿದಿದ್ದು, ಹೊಸ ಲಿಪ್ಟ್ ಅಳವಡಿಕೆಗೆ ಸಂಸ್ಥೆ ಸಿದ್ದತೆ ನಡೆಸುತ್ತಿದೆ. ಇನ್ನು ಮೂರು ವಾರಗಳಲ್ಲಿ ಸಾರ್ವಜನಿಕ ಉಪಯೋಗಕ್ಕೆ ಲಭ್ಯವಾಗಲಿದೆ. ಲಿಫ್ಟ್ ಇಲ್ಲದೆ ಸಾರ್ವಜನಿಕರು ಅದರಲ್ಲೂ ವಿಶೇಷವಾಗಿ ವೃದ್ದರು ಮತ್ತು ವಿಶೇಷ ಚೇತನರು ಜಿಲ್ಲಾಡಳಿತ ಭವನದ ಮೂರನೇ ಮಹಡಿ ತಲುಪಲು ಪ್ರಯಾಸ ಪಡುತ್ತಿದ್ದು, ಈಗ
ಉಸ್ತುವಾರಿ ಸಚಿವರು, ಕೊಡಗಿನ ಶಾಸಕದ್ವಯರು ಹಾಗೂ ಕೊಡಗು ಜಿಲ್ಲಾಧಿಕಾರಿಗಳ ಕಾಳಜಿಯಿಂದ ನಿಟ್ಟುಸಿರು ಬಿಡುವಂತೆ ಆಗಿದೆ.
Kodagu
ಮಾ.25 ಮತ್ತು 26 ರಂದು ಉಸ್ತುವಾರಿ ಸಚಿವರ ಕೊಡಗು ಜಿಲ್ಲಾ ಪ್ರವಾಸ

ಮಡಿಕೇರಿ : ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ಎಸ್.ಭೋಸರಾಜು ಅವರು ಮಾರ್ಚ್, 25 ಮತ್ತು 26 ರಂದು ಕೊಡಗು ಜಿಲ್ಲಾ ಪ್ರವಾಸ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ.
ಮಾನ್ಯ ಸಚಿವರು ಮಾರ್ಚ್, 25 ರಂದು ಬೆಳಗ್ಗೆ 11 ಗಂಟೆಗೆ ನಗರದ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜಿನಲ್ಲಿ ‘ಸುಸ್ಥಿರ ಅಭಿವೃದ್ಧಿಗಾಗಿ ವಿಜ್ಞಾನ ಮತ್ತು ತಂತ್ರಜ್ಞಾನ’ ಎಂಬ ಶೀರ್ಷಿಕೆಯಡಿ ಕನ್ನಡದಲ್ಲಿ 5ನೇ ವಿಜ್ಞಾನ ಮತ್ತು ತಂತ್ರಜ್ಞಾನ ಸಮ್ಮೇಳನದಲ್ಲಿ ಭಾಗವಹಿಸಲಿದ್ದಾರೆ.
ಸಂಜೆ 4.30 ಗಂಟೆಗೆ ಪೊನ್ನಂಪೇಟೆ ತಾಲ್ಲೂಕು ನಾಗರಹೊಳೆ ಮಹರ್ಷಿ ವಾಲ್ಮೀಕಿ ಆದಿವಾಸಿ ಬುಡಕಟ್ಟು ವಸತಿ ಶಾಲೆಗೆ ಭೇಟಿ ನೀಡಲಿದ್ದಾರೆ.
ಮಾರ್ಚ್, 26 ರಂದು ಬೆಳಗ್ಗೆ 10.30 ಗಂಟೆಗೆ ವಿರಾಜಪೇಟೆ ಹಾಗೂ ಪೊನ್ನಂಪೇಟೆ ತಾಲ್ಲೂಕುಗಳ ತಾಲ್ಲೂಕು ಮಟ್ಟದ ಅಧಿಕಾರಿಗಳೊಂದಿಗೆ ಸಭೆ ನಡೆಸಲಿದ್ದಾರೆ ಎಂದು ಸಚಿವರ ಆಪ್ತ ಕಾರ್ಯದರ್ಶಿ ವೀರಭದ್ರ ಹಂಚಿನಾಳ ಅವರು ತಿಳಿಸಿದ್ದಾರೆ.
Kodagu
ಮಡಿಕೇರಿಯಿಂದ ಬೆಂಗಳೂರು ವಿಮಾನ ನಿಲ್ದಾಣಕ್ಕೆ ಪ್ಲೈಬಸ್ ಸಂಚಾರ

ಮಡಿಕೇರಿ : ಬೆಂಗಳೂರಿನ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಪ್ಲೈಬಸ್ ಸಂಚಾರಕ್ಕೆ ಈಗಾಗಲೇ ಚಾಲನೆ ನೀಡಲಾಗಿದೆ ಎಂದು ಕೆಎಸ್‍ಆರ್‍ಟಿಸಿ ಮಡಿಕೇರಿ ಘಟಕದ ವ್ಯವಸ್ಥಾಪಕರಾದ ಎಂ.ಎಂ.ಮೆಹಬೂಬ್ ಅಲಿ ಅವರು ತಿಳಿಸಿದ್ದಾರೆ.
ಬೆಂಗಳೂರು ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಮಧ್ಯರಾತ್ರಿ 2.30 ಗಂಟೆಗೆ ಹೊರಟು ಮಡಿಕೇರಿಗೆ ಬೆಳಗ್ಗೆ 7.30 ಗಂಟೆಗೆ ತಲುಪಲಿದೆ.
ನಂತರ ಬೆಳಗ್ಗೆ 11.30 ಗಂಟೆಗೆ ಮಡಿಕೇರಿಯಿಂದ ಹೊರಟು ಸಂಜೆ 6 ಗಂಟೆಗೆ ಬೆಂಗಳೂರು ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ತಲುಪಲಿದೆ. ಕೆಎಸ್‍ಆರ್‍ಟಿಸಿ ಬೆಂಗಳೂರು ಕೇಂದ್ರ ವಿಭಾಗದ ನಾಲ್ಕನೇ ಘಟಕದಿಂದ ಪ್ಲೈ ಬಸ್ ಸೌಲಭ್ಯ ಕಲ್ಪಿಸಲಾಗಿದೆ ಎಂದು ಮೆಹಬೂಬ್ ಅಲಿ ಅವರು ತಿಳಿಸಿದ್ದಾರೆ
-
Mandya7 hours ago
ಜನಮಿತ್ರ ಫಲಶೃತಿ: ಹೆಬ್ಬಾಡಿಹುಂಡಿ ಗ್ರಾಮದ ಸ್ಮಶಾನ ಜಾಗದ ರಸ್ತೆ ಬೇಲಿಗೆ ಸಿಗ್ತು ಉತ್ತರ
-
Hassan15 hours ago
ಹಾಸನದಲ್ಲಿ ಭಾರೀ ಮಳೆ: ಅಪಾರ ಪ್ರಮಾಣದ ಬೆಳೆ ಹಾನಿ
-
Mandya11 hours ago
ಜೆಎಸ್ಎಸ್ ಕಾಲೇಜಿನಲ್ಲಿ ಪತ್ರಿಕಾ ಬರಹ ಕುರಿತು ಕಾರ್ಯಾಗಾರ
-
Kodagu12 hours ago
ರಸ್ತೆಯ ಅಭಿವೃದ್ಧಿ ಕಾಮಗಾರಿಗೆ ಭೂಮಿ ಪೂಜೆ
-
Kodagu8 hours ago
ಮಡಿಕೇರಿಯಿಂದ ಬೆಂಗಳೂರು ವಿಮಾನ ನಿಲ್ದಾಣಕ್ಕೆ ಪ್ಲೈಬಸ್ ಸಂಚಾರ
-
Mandya9 hours ago
ವ್ಯಕ್ತಿಯ ಬಗ್ಗೆ ಮಾಹಿತಿ ಸಿಕ್ಕರೆ ಕೂಡಲೇ ತಿಳಿಸಿ
-
Hassan14 hours ago
ಕ್ಷಯ ಮುಕ್ತ ಭಾರತವನ್ನಾಗಿ ಮಾಡಲು ಎಲ್ಲಾರೂ ಕೈಜೋಡಿಸಿ: ಡಿಸಿ ಸಿ. ಸತ್ಯಭಾಮ
-
Kodagu10 hours ago
ನಿವೃತ್ತ ಶಿಕ್ಷಕಿಯಿಂದ ಕಕ್ಕಬ್ಬೆ ಯುವಕಪಾಡಿ ಸರಕಾರಿ ಶಾಲೆಯ ವಿದ್ಯಾರ್ಥಿಗಳಿಗೆ ಚಾರಣ ಭಾಗ್ಯ