Connect with us

Hassan

ಎಲೈಟ್ ಸಂಸ್ಥೆಯ ನಾಗರಾಜ್‌ಗೆ ’ಕರ್ನಾಟಕ ಗುರುರತ್ನ ಪ್ರಶಸ್ತಿ-2025’

Published

on

ಹಾಸನ: ಹೇಮಾವತಿ ನಗರದ ಎಲೈಟ್ ಸ್ಕೂಲ್  ನಗರದ ಆಡಳಿತಾಧಿಕಾರಿ ಕೆ.ಎಂ. ನಾಗರಾಜು ಅವರಿಗೆ, ಚೆನ್ನೈ ಮೂಲದAMIT (Academy of Maritime Education and Training) ವಿಶ್ವವಿದ್ಯಾಲಯ ನೀಡುವ ’ಕರ್ನಾಟಕ ಗುರುರತ್ನ ಪ್ರಶಸ್ತಿ-2025’ಕ್ಕೆ ಭಾಜನರಾಗಿದ್ದಾರೆ.
ಕೆ.ಎಂ. ನಾಗರಾಜು ರವರು ಶೈಕ್ಷಣಿಕ ಕ್ಷೇತ್ರದಲ್ಲಿ ಸಲ್ಲಿಸಿದ 25 ವರ್ಷಗಳ ನಿರಂತರ ಶೈಕ್ಷಣಿಕ ಸಾಧನೆಗಳು, ಶಿಕ್ಷಣ ಕ್ಷೇತ್ರದಲ್ಲಿ ಹೊಸ ಹೊಸ ನಾವೀನ್ಯತೆ, ಶೈಕ್ಷಣಿಕ ತಂತ್ರಜ್ಜಾನದ ಮೂಲಕ ವಿದ್ಯಾರ್ಥಿಗಳಿಗೆ ಸುಲಭ ಹಾಗೂ ಪರಿಣಾಮಕಾರಿಯಾಗಿ ಬೋಧಿಸುವ ವಿವಿಧ ಕಲಿಕಾ ವಿಧಾನಗಳನ್ನು ಬಳಸಿ ವಿದ್ಯಾರ್ಥಿಗಳಿಗೆ ಶೈಕ್ಷಣಿಕವಾಗಿ ಪ್ರಗತಿ ಸಾಧಿಸಲು 25 ವರ್ಷಗಳಿಂದ ಅವಿರತವಾಗಿ ಶ್ರಮಿಸಿದ್ದಾರೆ. ಇವರ ಅವಿರತ ಶೈಕ್ಷಣಿಕ ಸಾಧನೆಯನ್ನು ಗುರುತಿಸಿ ಸುಮಾರು 700 ಜನರಲ್ಲಿ ಇವರು ಮೊದಲಿಗರಾಗಿ ಆಯ್ಕೆಗೊಂಡು Award of Excellency ವಿಭಾಗದಲ್ಲಿ 2025ರ ಕರ್ನಾಟಕ ಗುರುರತ್ನ ಪ್ರಶಸ್ತಿಗೆ ಪಾತ್ರರಾಗಿದ್ದಾರೆ.
ಇನ್ನೂ ನಾಗರಾಜು ಅವರನ್ನು ಎಲೈಟ್ ಶಾಲೆಯ ಆಡಳಿತಮಂಡಳಿ, ಬೋಧಕ ವರ್ಗ ಹಾಗೂ ಬೋಧಕೇತರ ವರ್ಗ, ಪೋಷಕರು ಹಾಗೂ ವಿದ್ಯಾರ್ಥಿಗಳು  ಅಭಿನಂದಿಸಿದ್ದಾರೆ. ಅಲ್ಲದೇ ಶಾಲೆಯ ಮುಖ್ಯಸ್ಥ ಹೆಚ್.ಪಿ. ಕಿರಣ್‌ರವರು ಮಾತನಾಡಿ , ಕೆ.ಎಂ. ನಾಗರಾಜುರವರ ಶೈಕ್ಷಣಿಕ ಚಿಂತನೆ ಹಾಗೂ ಪ್ರಯೋಗ ಶೀಲ ಚಟುವಟಿಕೆಗಳಿಗೆ ಸಂದ ಪ್ರಶಸ್ತಿ ಇದಾಗಿದೆ ಎಂದು ಬಣ್ಣಿಸಿದ್ದಾರೆ. ಜೊತೆಗೆ ಇವರಿಗೆ ಇದು ಸಂದ ಗೌರವ ನಮ್ಮ ಎಲೈಟ್ ಶಾಲೆಗೆ ಸಂದ ಗೌರವ ಎಂದು ತಿಳಿಸಿ ಅಭಿನಂದಿಸಿದ್ದಾರೆ.
Continue Reading

Hassan

ಮಾವಿನಕೆರೆಯಲ್ಲಿ ಚೆನ್ನಮ್ಮ ಪುಣ್ಯಸ್ಮರಣೆ ಸಿದ್ಧತೆ ಪರಿಶೀಲಿಸಿದ ಕುಮಾರಸ್ವಾಮಿ

Published

on

ಹಾಸನ: ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಅವರ ಪತ್ನಿ ದಿವಂಗತ ಚೆನ್ನಮ್ಮ ಅವರ 11ನೇ ದಿನದ ಪುಣ್ಯಸ್ಮರಣೆ ಕಾರ್ಯಕ್ರಮದ ಸಿದ್ಧತೆಗಳನ್ನು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ಇಂದು ಸಂಜೆ ಪರಿಶೀಲಿಸಿದರು.

ಜುಲೈ. 30ರಂದು ಹೊಳೆನರಸೀಪುರ ತಾಲ್ಲೂಕಿನ ಮಾವಿನಕೆರೆ ರಂಗನಾಥಸ್ವಾಮಿ ಬೆಟ್ಟದ ತಪ್ಪಲಿನಲ್ಲಿ ಪುಣ್ಯಸ್ಮರಣೆ ಕಾರ್ಯಕ್ರಮ ನಡೆಯಲಿದ್ದು, ರಾಜ್ಯದ ವಿವಿಧ ಭಾಗಗಳಿಂದ ರಾಜಕೀಯ ಮುಖಂಡರು, ಗಣ್ಯರು ಹಾಗೂ ಅಪಾರ ಸಂಖ್ಯೆಯ ಕಾರ್ಯಕರ್ತರು ಭಾಗವಹಿಸುವ ನಿರೀಕ್ಷೆಯಿದೆ.

ಈ ಹಿನ್ನೆಲೆಯಲ್ಲಿ ಕಾರ್ಯಕ್ರಮ ನಡೆಯಲಿರುವ ಸ್ಥಳಕ್ಕೆ ಭೇಟಿ ನೀಡಿದ ಕುಮಾರಸ್ವಾಮಿ ಅವರು ವೇದಿಕೆ ನಿರ್ಮಾಣ, ಆಸನ ವ್ಯವಸ್ಥೆ, ವಾಹನ ನಿಲುಗಡೆ, ಕುಡಿಯುವ ನೀರು, ಭದ್ರತೆ ಹಾಗೂ ಸಾರ್ವಜನಿಕರಿಗೆ ಕಲ್ಪಿಸಲಾಗುತ್ತಿರುವ ಮೂಲಸೌಲಭ್ಯಗಳ ಕುರಿತು ಅಧಿಕಾರಿಗಳು ಮತ್ತು ಪಕ್ಷದ ಮುಖಂಡರಿಂದ ಮಾಹಿತಿ ಪಡೆದು ಅಗತ್ಯ ಸೂಚನೆಗಳನ್ನು ನೀಡಿದರು.
ಕಾರ್ಯಕ್ರಮವು ಯಾವುದೇ ಅಡಚಣೆಯಿಲ್ಲದೆ ಸುಸೂತ್ರವಾಗಿ ನಡೆಯುವಂತೆ ಎಲ್ಲ ಅಗತ್ಯ ಸಿದ್ಧತೆಗಳನ್ನು ಪೂರ್ಣಗೊಳಿಸಲು ಸಂಬಂಧಿಸಿದವರಿಗೆ ಸೂಚನೆ ನೀಡಿದರು.

ಈ ಸಂದರ್ಭದಲ್ಲಿ ಮಾಜಿ ಸಚಿವ ಎಚ್.ಡಿ. ರೇವಣ್ಣ ಸೇರಿದಂತೆ ಪಕ್ಷದ ಮುಖಂಡರು ಮತ್ತು ಸ್ಥಳೀಯ ಪ್ರಮುಖರು ಉಪಸ್ಥಿತರಿದ್ದರು.

Continue Reading

Hassan

 ಕೇಂದ್ರ ಸರ್ಕಾರದ ವಿರುದ್ಧ ಸಂಸದ ಶ್ರೇಯಸ್‌ ಪಟೇಲ್ ಆಕ್ರೋಶ

Published

on

ಹಾಸನ: ದೆಹಲಿಯಲ್ಲಿ ಪ್ರತಿಭಟನೆ ನಡೆಸುತ್ತಿರುವ ವಿದ್ಯಾರ್ಥಿಗಳು ರಸ್ತೆ ಬದಿಯಲ್ಲೇ ಊಟ ಮಾಡಿ ನರಕಯಾತನೆ ಅನುಭವಿಸುತ್ತಿದ್ದರೂ ಕೇಂದ್ರ ಸರ್ಕಾರದ “ದಪ್ಪ ಚರ್ಮದ” ಅಧಿಕಾರಿಗಳು ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಹಾಸನ ಸಂಸದ ಶ್ರೇಯಸ್ ಪಟೇಲ್ ತೀವ್ರವಾಗಿ ವಾಗ್ದಾಳಿ ನಡೆಸಿದ್ದಾರೆ.

ಹಾಸನದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಮಹಿಳಾ ಸಂಸದರು ಎನ್ನುವುದನ್ನು ಕೂಡ ಗಮನಿಸದೆ ಪೊಲೀಸರು ನಮ್ಮನ್ನು ಕೀಳಾಗಿ ನಡೆಸಿ ಸ್ಟೇಡಿಯಂನಲ್ಲಿ ಕೂಡಿಹಾಕಿದ್ದರು ಎಂದು ಆರೋಪಿಸಿದರು. ‘ಅಚ್ಛೇ ದಿನ್’ ಬರುತ್ತದೆ ಎಂದಿದ್ದವರು ಇಂದು ವಿದ್ಯಾರ್ಥಿಗಳನ್ನು ಬೀದಿಪಾಲು ಮಾಡಿದ್ದಾರೆ. ಆತ್ಮಗೌರವವಿದ್ದರೆ ಕೇಂದ್ರ ಸಚಿವರು ಕೂಡಲೇ ರಾಜೀನಾಮೆ ನೀಡಿ ಜನರ ಮುಂದೆ ಬರಲಿ ಎಂದು ಸವಾಲುಹಾಕಿದರು. ದೇಶಕ್ಕೆ ರಾಹುಲ್ ಗಾಂಧಿ ಅವರ ನೇತೃತ್ವದ ಅಗತ್ಯವಿದ್ದು, ವಿದ್ಯಾರ್ಥಿಗಳ ಪರವಾಗಿ ನಮ್ಮ ಹೋರಾಟ ಮುಂದುವರಿಯುತ್ತದೆ ಎಂದು ತಿಳಿಸಿದರು.

Continue Reading

Hassan

 ಆಗಸ್ಟ್ 18ರೊಳಗೆ ಕಾಂಗ್ರೆಸ್ ಜಿಲ್ಲಾಧ್ಯಕ್ಷರ ಆಯ್ಕೆ; ಕೇಂದ್ರ ಸಚಿವರ ರಾಜೀನಾಮೆಗೆ ಸಂಸದೆ ಸುಧಾ ಆಗ್ರಹ

Published

on

ಹಾಸನ: ಕಾಂಗ್ರೆಸ್ ಸಂಘಟನ ಸೃಜನ ಅಭಿಯಾನದಡಿ ಹಾಸನದಲ್ಲಿ ಜಿಲ್ಲಾಧ್ಯಕ್ಷರ ಆಯ್ಕೆಗಾಗಿ ಸಭೆ ನಡೆಸಲಾಗಿದ್ದು, ಆಸಕ್ತರು ಯಾರು ಬೇಕಾದರೂ ಚುನಾವಣೆಯಲ್ಲಿ ಸ್ಪರ್ಧಿಸಬಹುದು. ಭರ್ತಿ ಮಾಡಿದ ಅರ್ಜಿಗಳನ್ನು ಆಗಸ್ಟ್ 18ರೊಳಗೆ ಹೈಕಮಾಂಡ್‌ಗೆ ಸಲ್ಲಿಸಲಾಗುವುದು ಎಂದು ಎಐಸಿಸಿ ವೀಕ್ಷಕಿ ಹಾಗೂ ಸಂಸದೆ ಸುಧಾ ತಿಳಿಸಿದ್ದಾರೆ.

ಹಾಸನದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಅತ್ಯಂತ ಕ್ಷಮಿಸಲಾರ ಅಪರಾಧವಾಗಿದ್ದು, ವಿದ್ಯಾರ್ಥಿಗಳ ಭವಿಷ್ಯದ ಜೊತೆ ಚೆಲ್ಲಾಟವಾಡಲಾಗಿದೆ. ಇದರ ನೈತಿಕ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಕೂಡಲೇ ರಾಜೀನಾಮೆ ನೀಡಬೇಕು ಹಾಗೂ ಪ್ರಧಾನಿ ಮೋದಿ ಮೌನ ಮುರಿಯಬೇಕು ಎಂದು ಆಗ್ರಹಿಸಿದರು. ಪ್ರತಿಭಟನಾ ನಿರತ ವಿದ್ಯಾರ್ಥಿಗಳ ಮೇಲೆ ಪೊಲೀಸರು ದೌರ್ಜನ್ಯ ಎಸಗಿರುವುದನ್ನು ಅವರು ತೀವ್ರವಾಗಿ ಖಂಡಿಸಿದರು.

Continue Reading

Trending

error: Content is protected !!