Connect with us

Chikmagalur

ಕಾಫಿನಾಡಲ್ಲೂ ಹುಲಿ‌ ಉಗುರು ಉರುಳದ್ದೇ ಸದ್ದು

Published

on

ಅರ್ಚಕರಿಬ್ಬರಿಗೂ ೧೪ ದಿನ ನ್ಯಾಯಾಂಗ ಬಂಧನ

ಡಿಆರ್ ಎಫ್ ಓ ದರ್ಶನ್ ಗೂ ಸುತ್ತಿಕೊಂಡ ಹುಲಿ ಉಗುರು ಉರುಳು

ಚಿಕ್ಕಮಗಳೂರು : ಹುಲಿ ಉಗುರು ಪ್ರಕರಣ ರಾಜ್ಯಾದ್ಯಂತ ಸದ್ದು ಮಾಡುತ್ತಿದೆ. ಈ ಪ್ರಕರಣದಲ್ಲಿ ಖಾಂಡ್ಯದ ಪ್ರಸಿದ್ಧ ಮಾರ್ಕಂಡೇಶ್ವರ ದೇವಾಲಯದ ಇಬ್ಬರು ಅರ್ಚಕರು ಸೇರಿದಂತೆ ಅರಣ್ಯ ಇಲಾಖೆಯ ಡಿಆರ್‌ಎಫ್ಓ ಮೇಲೂ ದೂರು ಕೇಳಿಬಂದಿದೆ.

ಕಾಫಿನಾಡು ಚಿಕ್ಕಮಗಳೂರಿನಲ್ಲಿ ಹುಲಿ ಉಗುರು ಧರಿಸಿದ್ದ ಸಾಲು ಸಾಲು ಜನರ ಬಂಧನವಾಗತೊಡಗಿದೆ. ಚಿಕ್ಕಮಗಳೂರು ತಾಲೂಕಿನ ಖಾಂಡ್ಯದ ಇತಿಹಾಸ ಪ್ರಸಿದ್ಧ ಮಾರ್ಕಂಡೇಯ ದೇವಸ್ಥಾನದ ಇಬ್ಬರು ಅರ್ಚಕರು ಬಂಧನವಾಗಿರುವ ಬೆನ್ನಲ್ಲೇ ಮತ್ತೊಂದು ಪ್ರಕರಣ ಬಯಲಿಗೆ ಬಂದಿದ್ದು. ಈ ಪ್ರಕರಣದಲ್ಲಿ ಸ್ವತಃ ಅರಣ್ಯ ಇಲಾಖೆಯ ಅಧಿಕಾರಿಯೇ ಹುಲಿ ಉಗುರು ಪೆಂಡೆಂಟ್ ಧರಿಸಿರುವ ಫೋಟೊ ವೈರಲ್ ಆಗಿದೆ.

ಹುಲಿ ಉಗುರು ಧರಿಸಿದ ಆರೋಪ ಕಳಸದ ಡಿಆರ್‌ಎಫ್ಓ ದರ್ಶನ್ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ದೂರು ದಾಖಲು ಮಾಡಲಾಗಿದೆ. ಚಿಕ್ಕಮಗಳೂರು ತಾಲೂಕಿನ ಆಲ್ದೂರು ಮೂಲದ ದರ್ಶನ್. ವನ್ಯಜೀವಿ ಕಾಯ್ದೆಯಡಿ ಪ್ರಕರಣ ದಾಖಲಿಸುವಂತೆ ದೂರು ನೀಡಿದ್ದಾರೆ. ಆಲ್ದೂರು ವಲಯ ಅರಣ್ಯಾಧಿಕಾರಿಗೆ ಅರೆನೂರು ಗ್ರಾಮದ ಸುಪ್ರೀತ್, ಅಬ್ದುಲ್ ಎಂಬುವವರಿಂದ ದೂರು ದೂರು ದಾಖಲಾಗಿದೆ.
* ೧೪ ದಿನ ನ್ಯಾಯಾಂಗ ಬಂಧನ :
ಹುಲಿ ಉಗುರು ಧರಿಸಿದ್ದ ಹಿನ್ನೆಲೆಯಲ್ಲಿ ಚಿಕ್ಕಮಗಳೂರು ತಾಲೂಕಿನ ಪ್ರಸಿದ್ಧ ಮಾರ್ಕಾಂಡೇಶ್ವರ ದೇವಾಲಯದ ಅರ್ಚಕರುಗಳಾದ ಕೃಷ್ಣಾನಂದ ಹೊಳ್ಳ, ನಾಗೇಂದ್ರ ಜೋಯಿಸರನ್ನು ಬಾಳೆಹೊನ್ನೂರು ಅರಣ್ಯ ಇಲಾಖೆಯ ಸಿಬ್ಬಂಧಿಗಳು ಗುರುವಾರ ಬಂಧಿಸಿ ವಿಚಾರಣೆ ನಡೆಸಿ ಬಳಿಕ ಚಿಕ್ಕಮಗಳೂರಿನ ಜೆ.ಎಂ.ಎಫ್.ಸಿ ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದು, ನ್ಯಾಯಾಲಯವು ಬಂಧಿತ ಅರ್ಚಕರುಗಳಿಗೆ ೧೪ ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.

* ಕಾನೂನು ಎಲ್ಲರಿಗೂ ಒಂದೇ ಸಂತೋಷ್, ಮಾರ್ಕಂಡೇಯ ದೇವಸ್ಥಾನದ ಅರ್ಚಕರು ಸೇರಿದಂತೆ ಅಮಾಯಕರ ಮೇಲೆ ಕ್ರಮ ಕೈಗೊಳ್ಳುವ ಅರಣ್ಯ ಇಲಾಖೆಯವರು ಆರ್‌ಎಫ್‌ಒ ದರ್ಶನ ಮೇಲೆಯೂ ಕ್ರಮ ತೆಗೆದುಕೊಳ್ಳಬೇಕು.
– ಸುಪ್ರೀತ್, ದೂರುದಾರ

Continue Reading
Click to comment

Leave a Reply

Your email address will not be published. Required fields are marked *

Chikmagalur

ಬಿಜೆಪಿ ಪಕ್ಷದ ಮುಖಂಡನ ವಿರುದ್ಧ ಅಪ್ರಾಪ್ತ ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಟ್ವಿಸ್ಟ್

Published

on

ಚಿಕ್ಕಮಗಳೂರು : ರಾಜಕೀಯ ದ್ವೇಷಕ್ಕೆ ಅಪ್ರಾಪ್ತ ಬಾಲಕರನ್ನು ಬಳಸಿಕೊಂಡು ಲೈಂಗಿಕ ದೌರ್ಜನ್ಯದ ಸುಳ್ಳು ಆರೋಪವನ್ನು ಮಾಡಿಸಿದ ತಪ್ಪಿಗೆ ಶೃಂಗೇರಿ ಗ್ರಾಮ ಪಂಚಾಯ್ತಿ ಸದಸ್ಯ ಶಬರೀಶ್ ಇದೀಗ ತಾನೆ ತಗಾಲಾಕಿಕೊಂಡಿದ್ದಾನೆ ಶಬರೀಶ್ ವಿರುದ್ಧವೇ ಫೋಕ್ಲೋ ಪ್ರಕರಣ ದಾಖಲಾಗಿದ್ದು ಶೃಂಗೇರಿ ಪೊಲೀಸರು ಬಂಧಿಸಿದ್ದಾರೆ.

ಲೈಂಗಿಕ ದೌರ್ಜನ್ಯದ ಕೇಸಲ್ಲಿ MLC ಸೂರಜ್ ರೇವಣ್ಣ ಬಂಧನ ಬೆನ್ನಲೇ ಕಾಫಿನಾಡಲ್ಲೂ ಬಿಜೆಪಿ ಮುಖಂಡನ ವಿರುದ್ಧ ಅಪ್ರಾಪ್ತ ಬಾಲಕರಿಬ್ಬರ ಮೇಲೆ ದೌರ್ಜನ್ಯದ ಆರೋಪ ಎಂಬ ಸುದ್ದಿ ನಿನ್ನೆ ದಿನವಿಡೀ ಹರಿದಾಡಿತ್ತು, ಆದರೆ ದಾಲ್ ಮೆ ಕುಚ್ ಕಾಲಾ ಹೈ ಎಂದು ಅನಿಸಿತ್ತು ಅದು ಇಂದು ಸತ್ಯ ವಾಗಿದೆ. ಶೃಂಗೇರಿ ಬಿಜೆಪಿ ಪಕ್ಷದ ಮುಖಂಡನ ವಿರುದ್ಧ ಅಪ್ರಾಪ್ತ ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದೆ. ದಲಿತ ಬಾಲಕರ ಮೇಲೆ ಬಿಜೆಪಿ ಮುಖಂಡನಿಂದ ಲೈಂಗಿಕ ದೌರ್ಜನ್ಯದ ಆರೋಪ ಪ್ರಕರಣದಲ್ಲಿ

ಸಲಿಂಗಕಾಮಕ್ಕೆ ಅಪ್ರಾಪ್ತ ಬಾಲಕರನ್ನ ಬಳಸಿಕೊಂಡ ಆರೋಪ ಸುಳ್ಳಾಗಿದೆ. ಲೈಂಗಿಕ ದೌರ್ಜನ್ಯ ನಡೆಸಲಾಗಿದೆ ಎಂದು ಅಪ್ರಾಪ್ತ ಬಾಲಕರ ವಿಡಿಯೋ ಮಾಡಿ ಅದು ವೈರಲ್ ಆಗುತ್ತಿದ್ದಂತೆ ತನಿಖೆ ನಡೆಸಿದ್ದ ಶೃಂಗೇರಿ ಪೊಲೀಸರು ಹಾಗೂ ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳ ಕೌನ್ಸಿಲಿಂಗ್ ನಲ್ಲಿ ಸತ್ಯ ಬಯಲಾಗಿದೆ. ಅಪ್ರಾಪ್ತ ಬಾಲಕನ ಬಳಸಿ ಲೈಂಗಿಕ ದೌರ್ಜನ್ಯದ ಆರೋಪ ಮಾಡಿಸಿದ್ದ ಇಬ್ಬರ ವಿರುದ್ಧ ಪೋಕೋ ಕೇಸ್ ದಾಖಲಾಗಿದೆ. ರಾಜಕೀಯ ದ್ವೇಷಕ್ಕೆ ಲೈಂಗಿಕ ದೌರ್ಜನ್ಯದ ಆರೋಪ ಮಾಡುವಂತೆ ಬಾಲಕರಿಗೆ ಧಮ್ಮಿ ಹಾಕಿ ವಿಡಿಯೋ ಚಿತ್ರೀಕರಣ ಮಾಡಿ ವೈರಲ್ ಮಾಡಿದ್ದ ಇಬ್ಬರ ವಿರುದ್ಧ FIR ದಾಖಲಾಗಿದೆ. ಇಬ್ಬರಲ್ಲಿ ಓರ್ವನ ಬಂಧನವಾಗಿದ್ದು ಮತ್ತೋರ್ವನಿಗಾಗಿ ಪೊಲೀಸರು ಹುಡುಕಾಟ ನಡೆಸಿದ್ದಾರೆ. ಅಪ್ರಾಪ್ತ ಬಾಲಕರನ್ನ ಬಳಸಿಕೊಂಡು ದುರ್ಬಳಕೆಗೆ ಯತ್ನ ಮಾಡಿದ್ದಕ್ಕಾಗಿ ಸಮಾಜ ಕಲ್ಯಾಣ ಇಲಾಖೆ ಅಧಿಕಾರಿ ರಾಘವೇಂದ್ರರಿಂದ ಶೃಂಗೇರಿ ಪೊಲೀಸರಿಗೆ ದೂರು ನೀಡಲಾಗಿದೆ. ಗ್ರಾಮ ಪಂಚಾಯತಿ ಸದಸ್ಯ ಶಬರೀಶ್ ಹಾಗೂ ಸೂರ್ಯ ವಿರುದ್ಧ ರಾಘವೇಂದ್ರ ದೂರು ನೀಡಿದ್ದಾರೆ. ಸದ್ಯ ಶಬರೀಶ್ ನನ್ನು ಬಂಧಿಸಿರುವ ಶೃಂಗೇರಿ ಇನ್ಸ್‌ಪೆಕ್ಟರ್ ಜಿ.ಎಸ್ ಸಂದೀಪ್ ವಿಚಾರಣೆ ನಡೆಸುತ್ತಿದ್ದಾರೆ

. ಪಟ್ಟಣ ಪಂಚಾಯ್ತಿ ಸದಸ್ಯ ಹರೀಶ್ ಶೆಟ್ಟಿ ಹಾಗೂ ಶಬರೀಶ್ ನಡುವೆ ವೈಯಕ್ತಿಕ. ಹಾಗೂ ರಾಜಕೀಯ ದ್ವೇಷವಿತ್ತು.
ಸೂರಜ್ ರೇವಣ್ಣ ಪ್ರಕರಣ ಹೊರ ಬರುತ್ತಿದ್ದಂತೆ ಬಾಲಕರನ್ನ ಬಳಸಿಕೊಂಡು ವಿಡಿಯೋ ರೆಕಾರ್ಡ್ ಮಾಡಿ ಶೃಂಗೇರಿ ಬಿಜೆಪಿ ಮುಖಂಡ ಹರೀಶ್ ಶೆಟ್ಟಿ ವಿರುದ್ಧ ಇದೇ ರೀತಿ ಲೈಂಗಿಕ ದೌರ್ಜನ್ಯದ ಆರೋಪ ಮಾಡಿಸಿದ್ದ ಶಬರೀಶ್ ವಿರುದ್ಧ ಫೋಕೋ ಕೇಸ್ ದಾಖಲಾಗಿದೆ.

Continue Reading

Chikmagalur

ಲಾಂಗ್, ತಲವಾರ್ ಹಿಡಿದು ಹುಚ್ಚಾಟ, ಇಬ್ಬರ ಬಂಧನ

Published

on

ಚಿಕ್ಕಮಗಳೂರು : ಕಾರಿನಲ್ಲಿ ಲಾಂಗ್ ಇಟ್ಟುಕೊಂಡಿದ್ದ ಇಬ್ಬರು ಯುವಕರನ್ನು ಶುಕ್ರವಾರ ಪೊಲೀಸರು ಬಂಧಿಸಿದ್ದಾರೆ. ಪಟ್ಟಣದ ಬೆಟ್ಟಗೆರೆ ನಿವಾಸಿ ಸೈಯ್ಯದ್ ಸಲ್ಮಾನ್ (22) ಹಾಗೂ ಮಹಮ್ಮದ್ ಸಾಧಿಕ್ (25) ಬಂಧಿತರು.

ಶೆಟ್ಟಿಕೊಪ್ಪ ಕಡೆಯಿಂದ ಕಾರಿನಲ್ಲಿ ಇಬ್ಬರು ಯುವಕರು ಲಾಂಗ್ ಇಟ್ಟುಕೊಂಡು ಸಾರ್ವಜನಿಕರಿಗೆ ಬೆದರಿಕೆ ಹಾಕುವ ರೀತಿಯಲ್ಲಿ ಬರುತ್ತಿದ್ದಾರೆ ಎಂಬ ಮಾಹಿತಿ ಹಿನ್ನೆಲೆಯಲ್ಲಿ ಪೊಲೀಸರು ಸೌತಿಕೆರೆ ಸಮೀಪ ವಾಹನ ಪರಿಶೀಲನೆ ನಡೆಸಿದಾಗ ಇಬ್ಬರು ಆರೋಪಿಗಳು ಕಾರಿನಲ್ಲಿ ಲಾಂಗ್ ಇಟ್ಟುಕೊಂಡಿರುವುದು ಪತ್ತೆಯಾಗಿದೆ.

ವಿಚಾರಿಸಿದಾಗ ನಮ್ಮನ್ನು ನೋಡಿ ಜನರು ಹೆದರಿಕೊಳ್ಳಲಿ ಎಂದು ಲಾಂಗ್ ತೋರಿಸಿಕೊಂಡು ಓಡಾಡುತ್ತಿದ್ದೇವೆ ಎಂದು ತಿಳಿಸಿದ್ದಾರೆ. ಲಾಂಗ್ ಹಿಡಿದಿರುವ ಫೋಟೋಗಳನ್ನು ಸಾಮಾಜಿಕ ಜಾಲತಾಣಗಳಲ್ಲೂ ಅಪ್ ಲೋಡ್ ಮಾಡಿರುವುದು ತಿಳಿದುಬಂದಿದೆ. ಇಬ್ಬರನ್ನೂ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.

Continue Reading

Chikmagalur

ಪತ್ನಿಯ ಅನೈತಿಕ ಸಂಬಂಧಕ್ಕೆ ಪತಿ ಬಲಿ

Published

on

ಚಿಕ್ಕಮಗಳೂರು : ಪತ್ನಿಯ ಅನೈತಿಕ ಸಂಬಂಧಕ್ಕೆ ಪತಿ ಬಲಿಯಾಗಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ದೊಡ್ಡಿಬೀರನಹಳ್ಳಿ ಗ್ರಾಮದಲ್ಲಿ ಘಟನೆ ನಡೆದಿದೆ. ಪತ್ನಿಯೇ ಪತಿಗೆ ವಿಷ ಉಣಿಸಿ ಕೊಲೆ ಮಾಡಿದ್ದಾಳೆ. ಜಯಣ್ಣ (42) ಮೃತ ದುರ್ದೈವಿಯಾಗಿದ್ದು, ಪತ್ನಿ ಶೃತಿ (35) ಹಾಗೂ ಆಕೆಯ ಪ್ರಿಯಕರ ಕಿರಣ್ (27) ಎಂಬಾತನನ್ನು ಬಂಧಿಸಿ ವಿಚಾರಣೆ ನಡೆಸಿದ್ದಾರೆ.

ದೊಡ್ಡಿಬೀರನಹಳ್ಳಿ ಗ್ರಾಮದ ಜಯಣ್ಣ ಟೈಲ್ಸ್ ಕೆಲಸ ಮಾಡಿಕೊಂಡು ಜೀವನ ಸಾಗಿಸುತ್ತಿದ್ದರು. ಆದರೆ, ಕಳೆದ 15 ರಂದು(ಶನಿವಾರ) ರಾತ್ರಿ ಏಕಾಏಕಿ ಸಾವನ್ನಪ್ಪಿದ್ದರು. ಈ ವೇಳೆ ಗಂಡ ಹೊಟ್ಟೆ ನೋವಿನಿಂದ ಬಳುತ್ತಿದ್ದರು. ಆಸ್ಪತ್ರೆಗೆ ಚಿಕಿತ್ಸೆಗೆ ಕರೆದುಕೊಂಡು ಹೋದರು ಫಲಕಾರಿ ಆಗಿಲ್ಲ ಎಂದು ನಾಟಕ ಮಾಡಿ ಅಂತ್ಯ ಸಂಸ್ಕಾರಕ್ಕೆ ಸಿದ್ಧತೆ ನಡೆಸಿದ್ದಳಂತೆ. ಆದರೆ, ಮೃತ ಜಯಣ್ಣ ಸಂಬಂಧಿಕರಿಗೆ ಸಾವಿನ ಬಗ್ಗೆ ಅನುಮಾನ ಬಂದಿದ್ದು, ಈ ಬಗ್ಗೆ ಆತನ ಮಗಳನ್ನು ಕೇಳಿದ ವೇಳೆ ಅಪ್ಪನನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಲಿಲ್ಲ ಎಂದು ಹೇಳಿದ್ದರಂತೆ. ಬಳಿಕ ಸಂಬಂಧಿಕರು ಪೊಲೀಸರಿಗೆ ಮಾಹಿತಿ ನೀಡಿದ್ದು, ಕೂಡಲೇ ಸ್ಥಳಕ್ಕೆ ಬಂದ ಪೊಲೀಸರು ಶವ ಸಂಸ್ಕಾರಕ್ಕೆ ಸಿದ್ಧತೆ ಮಾಡಿಕೊಂಡಿದ್ದ ಪತ್ನಿಗೆ ಶಾಕ್ ಕೊಟ್ಟಿದ್ದರು.

ಮೃತ ಜಯಣ್ಣ

 

ಸದ್ಯ ಮಗಳಿಂದ ಹತ್ಯೆಯ ಹಿಂದಿನ ಅಸಲಿ ಕಥೆ ರಿವಿಲ್ ಆಗಿದ್ದು, ವಿಚಾರಣೆ ವೇಳೆ ಮೃತ ಜಯಣ್ಣನ ಅಣ್ಣನ ಮಗ ಕಿರಣ್ ಜೊತೆ ಅನೈತಿಕ ಸಂಬಂಧ ಇದಿದ್ದು ದೃಢವಾಗಿದೆ. ಅಲ್ಲದೇ ಮರಣೋತ್ತರ ವರದಿಯಲ್ಲಿ ಕೊಲೆ ಮಾಡಿರುವುದು ಗೊತ್ತಾಗಿದೆ. ಆರೋಪಿಗಳಾದ ಮೃತನ ಪತ್ನಿ ಶೃತಿ ಹಾಗೂ ಮಗ ಕಿರಣ್ ರನ್ನು ಸಖರಾಯಪಟ್ಟಣ ಠಾಣೆ ಪೊಲೀಸ್ ವಶಕ್ಕೆ ಪಡೆದಿದ್ದು, ಕೃತ್ಯಕ್ಕೆ ಬಳಸಿದ್ದ ಕಾರನ್ನ ವಶಕ್ಕೆ ಪಡೆದುಕೊಂಡಿದ್ದಾರೆ.

Continue Reading

Trending

error: Content is protected !!