Mandya
ನಮ್ಮ ಕ್ಲಿನಿಕ್ ಉದ್ಘಾಟಿಸಿದ ಜಿಲ್ಲಾ ಉಸ್ತುವಾರಿ ಸಚಿವ
ಮಂಡ್ಯ: ನಗರದ ಹಾಲಹಳ್ಳಿಯಲ್ಲಿ ನೂತನವಾಗಿ ಆರಂಭಿಸಿರುವ ‘ನಮ್ಮ ಕ್ಲಿನಿಕ್’ ಅನ್ನು ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಅವರು ಶನಿವಾರ ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ಶಾಸಕ ಪಿ.ರವಿಕುಮಾರ್‌ಗೌಡ ಗಣಿಗ, ಲೋಕಸಭಾ ಚುನಾವಣಾ ಕಾಂಗ್ರೆಸ್ ಅಭ್ಯರ್ಥಿ ವೆಂಕಟರಮಣೇಗೌಡ(ಸ್ಟಾರ್ ಚಂದ್ರು), ಡಿಎಚ್‌ಒ ಕೆ.ಮೋಹನ್, ಆರ್‌ಸಿಎಚ್‌ಒ ಡಾ.ಅನಿಲ್ ಕುಮಾರ್, ಜಿಲ್ಲಾ ಕುಷ್ಠರೋಗ ನಿರ್ಮೂಲನಾಧಿಕಾರಿ ಡಾ.ಸೋಮಶೇಖರ್, ಜಿಲ್ಲಾ ಏಡ್ಸ್ ನಿಯಂತ್ರಣಾಧಿಕಾರಿ ಡಾ.ಎಂ.ಎನ್.ಆಶಾಲತಾ, ಡಾ.ಬೆಟ್ಟಸ್ವಾಮಿ, ಮಲೇರಿಯಾ ನಿರ್ಮೂಲನಾ ಅಧಿಕಾರಿ ಕಾಂತರಾಜು, ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಜವರೇಗೌಡ ಭಾಗವಹಿಸಿದ್ದರು.
ನಮ್ಮ ಕ್ಲಿನಿಕ್ ವಿಶೇಷತೆ: ನಗರ ಪ್ರಾಥಮಿಕ ಆರೋಗ್ಯ ಕೇಂದ್ರಗಳ ಜೊತೆಯಲ್ಲಿ ಸಮಗ್ರ ಪ್ರಾಥಮಿಕ ಆರೋಗ್ಯ ಸೇವೆಗಳನ್ನು ನೀಡಲು ನಗರ ಆರೋಗ್ಯ ಕೇಂದ್ರವಾದ ‘ನಮ್ಮ ಕ್ಲಿನಿಕ್’ಗಳನ್ನು 30,000 ಜನಸಂಖ್ಯೆಗೆ ಒಂದರಂತೆ ಸ್ಥಾಪಿಸಲಾಗುತ್ತಿದೆ. ನಮ್ಮ ಕ್ಲಿನಿಕ್‌ಗಳು ನಗರ ಪ್ರದೇಶದ ಸಮುದಾಯಕ್ಕೆ ಸಮಗ್ರ ಪ್ರಾಥಮಿಕ ಆರೋಗ್ಯ ಸೇವೆಗಳನ್ನು ಒದಗಿಸುವ ಸದುದ್ದೇಶ ಹೊಂದಿದೆ.
ಸಾರ್ವಜನಿಕರಿಗೆ ಉತ್ತಮ ಗುಣಮಟ್ಟದ ಆರೋಗ್ಯ ಸೇವೆ ಹಾಗೂ ನಿರಂತರ ಆರೋಗ್ಯ ಪಾಲನೆಯನ್ನು ಖಾತ್ರಿಪಡಿಸುವ ಮತ್ತು ಕೆಳಹಂತದಿಂದ ಮೇಲಿನ ಹಂತದ ಸೇವೆಗಳನ್ನು ನೀಡುವ ಆಸ್ಪತ್ರೆಗಳಿಗೆ ರೆಫರಲ್ ಸೇವೆಗಳ ಸಂಪರ್ಕ ಕಲ್ಪಿಸುವ ಉದ್ದೇಶ ಹೊಂದಿದೆ.
ನಮ್ಮ ಕ್ಲಿನಿಕ್ ಗಳ ಸ್ಥಾಪನೆ ಆರೋಗ್ಯ ಸೇವೆಗಳಿಗಾಗಿ ಸಾರ್ವಜನಿಕರು ತಮ್ಮ ಸ್ವಂತ ಹಣದ ಖರ್ಚನ್ನು ಕಡಿಮೆ ಮಾಡುವ ಮತ್ತು ದ್ವಿತೀಯ ಹಾಗೂ ತೃತೀಯ ಹಂತದ ಆರೋಗ್ಯ ಸಂಸ್ಥೆಗಳಲ್ಲಿ ಜನಸಂದಣಿಯನ್ನು ಕಡಿಮೆ ಮಾಡುವ ಉದ್ದೇಶವನ್ನು ಕೂಡ ಹೊಂದಿದೆ.
ಗರ ಪ್ರದೇಶಗಳಲ್ಲಿ ಪ್ರಾಥಮಿಕ ಆರೋಗ್ಯ ಸೇವೆಗಳನ್ನು ವಿಕೇಂದ್ರೀಕರಿಸುವ ಜೊತೆಗೆ ಸಾಂಕ್ರಾಮಿಕ ರೋಗಗಳ ಕಣ್ಗಾವಲು ವ್ಯವಸ್ಥೆಯನ್ನು ಬಲಪಡಿಸುತ್ತಾ ಸಾಂಕ್ರಾಮಿಕ ರೋಗ ಉಲ್ಬಣ ಪರಿಸ್ಥಿತಿಯನ್ನು ತ್ವರಿತಗತಿಯಲ್ಲಿ ದಾಖಲಿಸುವ ವ್ಯವಸ್ಥೆಯನ್ನು ಚಾಲನೆಗೊಳಿಸುವ ಉದ್ದೇಶವನ್ನು ಸಹ ಹೊಂದಿದೆ. ಇದರಿಂದ ಆರೋಗ್ಯ ಸಂವರ್ಧನೆ ಹಾಗೂ ಕ್ಷೇಮ ಚಟುವಟಿಕೆಗಳ ಮೂಲಕ ಗಂಡಾಂತರ ಕಾರ್ಯ ಪರಿಸ್ಥಿತಿಗಳನ್ನು ನಿವಾರಿಸುವುದಾಗಿದೆ.
Mandya
ಅಪಘಾತದಲ್ಲಿ ಪತ್ರಕರ್ತ ಸಾವು
ಮಂಡ್ಯ ಜಿಲ್ಲೆ ನಾಗಮಂಗಲ ಸಮೀಪ ಇಂದು ಸಂಜೆ ಸಂಭವಿಸಿದ ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡಿದ್ದ ಹಿರಿಯ ಪತ್ರಕರ್ತ ಬಿ.ಸಿ.ಮೋಹನಕುಮಾರ್ (50) ಆದಿಚುಂಚನಗಿರಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ..
ಆಂದೋಲನ, ಪ್ರಜಾವಾಣಿ ಸೇರಿದಂತೆ ಹಲವು ಪತ್ರಿಕೆಯಲ್ಲಿ ವರದಿಗಾರರಾಗಿ ಬಿ.ಸಿ.ಮೋಹನ ಕುಮಾರ್ ಅವರು ನಾಗಮಂಗಲ ತಾಲೂಕಿನ ಬ್ಯಾಡರಹಳ್ಳಿಯವರು.
ಪತ್ನಿ, ಬಂಧು ಬಳಗ ಸೇರಿದಂತೆ ಸ್ನೇಹ ಬಳಗವನ್ನು ಅಗಲಿದ್ದಾರೆ.
ಕೆಯುಡಬ್ಲ್ಯೂಜೆ ಸಂತಾಪ;ಹಿರಿಯ ಪತ್ರಕರ್ತ ಬಿ.ಸಿ.ಮೋಹನಕುಮಾರ್ ಅವರ ನಿಧನಕ್ಕೆ ಕರ್ನಾಟ ಕಾರ್ಯನಿರತ ಪತ್ರಕರ್ತರ ಸಂಘ (KUWJ) ಸಂತಾಪ ವ್ಯಕ್ತಪಡಿಸಿದೆ.
ಮೋಹನಕುಮಾರ್ ಆತ್ಮಕ್ಕೆ ಶಾಂತಿ ಸಿಗಲಿ. ಕುಟುಂಬಕ್ಕೆ ದುಃಖವನ್ನು ಭರಿಸುವ ಶಕ್ತಿಯನ್ನು ದೇವರು ಕರುಣಿಸಲಿ ಎಂದು ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಪ್ರಾರ್ಥಿಸಿದ್ದಾರೆ.
Mandya
ಕಾರ್ಗಿಲ್ ವೀರ ಯೋಧರ ತ್ಯಾಗ ಬಲಿದಾನ ಸ್ಮರಿಸೋಣ
ಶ್ರೀರಂಗಪಟ್ಟಣ : ವಿಶ್ವಕ್ಕೆ ಶಾಂತಿ ಬಯಸುವ ನಮ್ಮ ಭಾರತ ದೇಶಕ್ಕೆ ಎಸಗಿದ ನಂಬಿಕೆ ದ್ರೋಹದ ಪರಿಣಾಮ ನಮ್ಮ ಹೆಮ್ಮೆಯ ಸೈನಿಕರು ಪಾಕಿಸ್ತಾನಕ್ಕೆ ತಕ್ಕ ಪಾಠ ಕಲಿಸಿ, ವಿಜಯ ಸಾಧಿಸಿದ ಕಾರ್ಗಿಲ್ ವೀರ ಯೋಧರ ತ್ಯಾಗ ಹಾಗೂ ಬಲಿದಾನಗಳನ್ನು ಪ್ರತಿಯೊಬ್ಬ ಭಾರತೀಯರು ಸ್ಮರಿಸಿಕೊಳ್ಳುವ ಹೆಮ್ಮೆಯ ದಿನ ಎಂದು ಪಟ್ಟಣದ ಓಂ ಶ್ರೀನಿಕೇತನ ವಿದ್ಯಾಸಂಸ್ಥೆಯ ಪ್ರಾಂಶುಪಾಲ ಶಿವಕುಮಾರ್ ತಿಳಿಸಿದರು..
ಪಟ್ಟಣದ ಪುರಸಭಾ ವೃತ್ತದಲ್ಲಿ ಓಂ ಶ್ರೀನಿಕೇತನ ವಿದ್ಯಾಸಂಸ್ಥೆಯು ಕಾರ್ಗಿಲ್ ವಿಜಯ ದಿವಸದ ಸಂಭ್ರಮ ದಿನಾಚರಣೆಯ ಅಂಗವಾಗಿ ಆಯೋಜನೆ ಮಾಡಿದ್ದ’ ರಜತ ಸಂಭ್ರಮ’ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿ 1998 ರಲ್ಲಿ ಪಾಕಿಸ್ತಾನಕ್ಕೆ ಬಸ್ಸು ಹಾಗೂ ರೈಲು ಸಂಚಾರವನ್ನು ಆರಂಭಿಸಿ ಶಾಂತಿ ಬಯಸಿದ ಪ್ರತಿಫಲವಾಗಿ, ಭಯೋತ್ಪಾದನೆ, ಹಿಂಸೆ ಹರಡವಿಕೆ, ಮುಂಚೂಣಿಯಲ್ಲಿರುವ ನೆರೆಯ ರಾಷ್ಟ್ರ ಪಾಕಿಸ್ತಾನ 1999 ಕಾರ್ಗಿಲ್ ಪ್ರದೇಶವನ್ನು ತನ್ನದಾಗಿಸಿಕೊಳ್ಳಲು ಹವಣಿಸಿತು.
ಇದಕ್ಕೆ ಪ್ರತಿಯಾಗಿ ನಮ್ಮ ಸೈನಿಕರು ದಿಟ್ಟ ಉತ್ತರ ನೀಡಿ ಜಾಗತಿಕ ಮಟ್ಟದಲ್ಲಿ ಪಾಕಿಸ್ತಾನದ ಮುಖವಾಡವನ್ನು ಬಯಲು ಮಾಡಿ,ವಿಜಯದ ಪತಾಕೆ ಹಾರಿಸಿ 25 ವರ್ಷಗಳಾಗಿದ್ದು, ದೇಶದ ಸಂರಕ್ಷಣೆಯಲ್ಲಿ ವೀರ ಯೋಧರ ಸೇವೆ ಸ್ಮರಣೀಯ ಎಂದು ತಿಳಿಸಿದರು. ಸಂಸ್ಥೆಯ ಆಡಳಿತಾಧಿಕಾರಿ ಆಶಾಲತಾ ಪುಟ್ಟೇಗೌಡ ಮಾತನಾಡಿ, ಕಾರ್ಗಿಲ್ ಯುದ್ಧ ರಾಷ್ಟ್ರ ಭಕ್ತಿ ಹಾಗೂ ಭಾವೈಕ್ಯತೆಯನ್ನು ಜಾಗೃತಗೊಳಿಸಿದೆ ಎಂದರು. ಇದೇ ಸಂದರ್ಭದಲ್ಲಿ ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸುತ್ತಿರುವ ಬಾಬುರಾಯನಕೊಪ್ಪಲ್ ಗ್ರಾಮದ ಅಭಿಜಿತ್ ಅವರನ್ನು ಗೌರವಿಸಲಾಯಿತು.
ಮಂಜು ರಾಮ್ ಪುಟ್ಟೇಗೌಡ, ಸಂಕ್ರಾಂತಿ ಮಂಜೂರಾಮ್, ಉದ್ಯೋಗದಾತ ರುಕ್ಮಾಂಗದ, ವಕೀಲ ಪುಟ್ಟಸ್ವಾಮಿ, ನಾರಾಯಣ್, ಕೂಡಲಕುಪ್ಪೆ ಗೋಪಾಲ್ ಗೌಡ, ಶಿಕ್ಷಕರಾದ ಪುನೀತ್, ಕೃಷ್ಣ ಹಾಗೂ ಸಗುಪ್ತ ಸೇರಿದಂತೆ ಇತರರು ಹಾಜರಿದ್ದರು.ಇದಕ್ಕೂ ಮುನ್ನ ವಿದ್ಯಾರ್ಥಿಗಳು ಡಾ, ಬಿ ಆರ್ ಅಂಬೇಡ್ಕರ್ ವೃತ್ತದಿಂದ ಪುರಸಭೆ ವೃತ್ತದವರೆಗೂ ದೇಶಕ್ಕಾಗಿ ಪ್ರಾಣ ತ್ಯಾಗ ಮಾಡಿದ ವೀರ ಯೋಧರ ಭಾವಚಿತ್ರವನ್ನು ಪ್ರದರ್ಶಿಸಿ ವಿಜಯದ ಘೋಷಣೆಗಳನ್ನು ಕೂಗುತ್ತಾ ಮೆರವಣಿಗೆಯಲ್ಲಿ ಹೊರಟರು
Mandya
ಮಂಡ್ಯ ಜಿಲ್ಲೆಯ ಅಂಧ ಮಕ್ಕಳಿಗೆ ಮೈಸೂರು ಅಂಧ ಮಕ್ಕಳ ಪ್ರವೇಶ ಶಾಲೆಯಲ್ಲಿ ಅವಕಾಶ – ಎಡಿಸಿ ಡಾ.ಹೆಚ್.ಎಲ್ ನಾಗರಾಜು
ಮಂಡ್ಯ: ಜಿಲ್ಲೆಯ ಅಂಧ ಮಕ್ಕಳಿಗೆ ಮೈಸೂರಿನ ತಿಲಕ್ ನಗರದಲ್ಲಿರುವ ಅಂಧ ಮಕ್ಕಳ ಪ್ರವೇಶ ಶಾಲೆಯಲ್ಲಿ ಪ್ರವೇಶಕ್ಕೆ ಅವಕಾಶ ಕಲ್ಪಿಸಲಾಗಿದೆ
ಎಂದು ಅಪರ ಜಿಲ್ಲಾಧಿಕಾರಿ ಡಾ.ಹೆಚ್.ಎಲ್.ನಾಗರಾಜು ತಿಳಿಸಿದರು.
ಅವರು ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ಶೇ. 40 ಕ್ಕಿಂತ ಹೆಚ್ಚು ದೃಷ್ಟಿದೋಷವುಳ್ಳ ಮಕ್ಕಳನ್ನು ಅಂಧ ಮಕ್ಕಳ ಪಾಠಶಾಲೆಗೆ ದಾಖಲಿಸುವ ಹಾಗೂ ನೇತ್ರ ತಜ್ಞರಿಂದ ತಪಾಸಣಾ ಶಿಬಿರಗಳನ್ನು ಆಯೋಜಿಸುವ ಸಂಬಂಧ ಸಭೆ ನಡೆಸಿ ಮಾತನಾಡಿದರು.
ಮೈಸೂರಿನ ತಿಲಕ್ ನಗರದಲ್ಲಿರುವ ಸರ್ಕಾರಿ ಅಂಧ ಮಕ್ಕಳ ಶಾಲೆಯಲ್ಲಿ ವಸತಿ, ಊಟ, ಆರೋಗ್ಯ ತಪಾಸಣೆ, ಕೌಶಲ್ಯಾಭಿವೃದ್ಧಿ ತರಬೇತಿ ಸೇರಿದಂತೆ ವಿವಿಧ ಕಾರ್ಯಕ್ರಮಗಳಿದ್ದು, ಇಲ್ಲಿ ಒಳ್ಳೆಯ ಶಿಕ್ಷಣ ಪಡೆದು ವ್ಯಕ್ತಿತ್ವ ವಿಕಸನಗೊಳಿಸಿಕೊಳ್ಳಬಹುದಾಗಿದೆ ಎಂದರು.
ಮಂಡ್ಯ ಜಿಲ್ಲೆಯಲ್ಲಿರುವ ದೃಷ್ಟಿ ದೋಷವುಳ್ಳ ಮಕ್ಕಳನ್ನು ಮೈಸೂರಿನಲ್ಲಿರುವ ಸರ್ಕಾರಿ ಅಂಧ ಮಕ್ಕಳ ಪಾಠಶಾಲೆಗೆ ದಾಖಲಿಸಲು ದೃಷ್ಟಿ ದೋಷವುಳ್ಳ ಮಕ್ಕಳ ಪೋಷಕರನ್ನು ಭೇಟಿ ಮಾಡಿ. ಅಲ್ಲಿ ಸಿಗುವ ಸೌಲಭ್ಯ ಸವಲತ್ತುಗಳ ಬಗ್ಗೆ ತಿಳಿಸಿ ಪೋಷಕರ ಮನವೊಲಿಸಿ ಎಂದರು.
ಜಿಲ್ಲೆಯಲ್ಲಿ 6 ರಿಂದ 16 ವರ್ಷದೊಳಗಿನ ಒಟ್ಟು 89 ಜನ ದೃಷ್ಠಿ ದೋಷವುಳ್ಳ ವಿಕಲಚೇತನರಿದ್ದು, ಅದರಲ್ಲಿ 83 ಜನ ವಿದ್ಯಾರ್ಥಿಗಳು ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿದ್ದಾರೆ. ಉಳಿದ 6 ಜನ ಮಕ್ಕಳು ಯಾವುದೇ ಶಾಲೆಯಲ್ಲಿ ವ್ಯಾಸಂಗ ಮಾಡದೆ ಮನೆಯಲ್ಲಿಯೇ ಉಳಿದುಕೊಂಡಿರುತ್ತಾರೆ. ಅವರ ಪೋಷಕರನ್ನು ಮೈಸೂರಿನ ಅಂಧ ಮಕ್ಕಳ ಶಾಲೆಗೆ ದಾಖಲಿಸಲು ತಿಳಿಸಿ ಎಂದರು.
ಜಿಲ್ಲೆಯಲ್ಲಿ ಒಟ್ಟು 2966 ಜನ ವಿಕಲತೆವುಳ್ಳ ಅಂಧ ವಿಕಲಚೇತನರಿದ್ದಾರೆ. ಮಂಡ್ಯ ತಾಲ್ಲೂಕಿನಲ್ಲಿ – 744, ಮದ್ದೂರು – 420, ಮಳವಳ್ಳಿ – 528, ಶ್ರೀರಂಗಪಟ್ಟಣ – 206, ಪಾಂಡವಪುರ – 294, ನಾಗಮಂಗಲ – 348, ಕೆ ಆರ್ ಪೇಟೆ ತಾಲ್ಲೂಕಿನಲ್ಲಿ – 426 ಅಂಧ ವಿಕಲಚೇತನರಿದ್ದಾರೆ ಎಂದರು.
ಮೈಸೂರಿನ ತಿಲಕ ನಗರದಲ್ಲಿರುವ ಸರ್ಕಾರಿ ಅಂಧ ಮಕ್ಕಳ ಪಾಠ ಶಾಲೆಯಲ್ಲಿ ಈಗಾಗಲೇ ವ್ಯಾಸಂಗ ಮಾಡಿದ ಅನೇಕ ವಿದ್ಯಾರ್ಥಿಗಳು ಒಳ್ಳೆಯ ಹುದ್ದೆಯಲ್ಲಿದ್ದಾರೆ. ಕೆಲ ಅಂಧ ಮಕ್ಕಳ ಪೋಷಕರಿಗೆ ತಮ್ಮ ಮಕ್ಕಳನ್ನು ಶಾಲೆಗೆ ಕಳುಹಿಸಲು ಆರ್ಥಿಕವಾಗಿ ಸಬಲರಾಗಿರುವುದಿಲ್ಲ. ಅಂತವರಿಗೆ ಇದು ಒಳ್ಳೆಯ ಅವಕಾಶವಾಗಿದೆ ಎಂದರು.
ಜಿಲ್ಲೆಯಲ್ಲಿರುವ ಒಟ್ಟು 89 ಮಕ್ಕಳು ಅಲ್ಲಿ ಶಿಕ್ಷಣ ಪಡೆಯುವಂತೆ ತಿಳಿಸಿ. ಎಲ್ಲಾ ಅಂಧ ಮಕ್ಕಳ ಪೋಷಕರು ಮೈಸೂರಿನ ಅಂಧ ಮಕ್ಕಳ ಶಾಲೆಗೆ ಒಮ್ಮೆ ಭೇಟಿ ನೀಡಿದಾಗ ಅಲ್ಲಿ ಸಿಗುವ ಸೌಲಭ್ಯಗಳ ಅರಿವಾಗುತ್ತದೆ ಎಂದರು.
ಸಭೆಯಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ಎಸ್ ರಾಜಮೂರ್ತಿ, ಜಿಲ್ಲಾ ಆರೋಗ್ಯ ಕುಟುಂಬ ಮತ್ತು ಕಲ್ಯಾಣಾಧಿಕಾರಿ ಡಾ. ಮೋಹನ್, ಜಿಲ್ಲಾ ಪಂಚಾಯತ್ ನ ಸಹಾಯಕ ಕಾರ್ಯದರ್ಶಿ ಮೋಹನ್ ಕುಮಾರ್, ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಇಲಾಖೆಯ ಕಲ್ಯಾಣಾಧಿಕಾರಿ ಕೋಮಲ್ ಕುಮಾರ್, ಮಿಮ್ಸ್ ಅಧೀಕ್ಷಕರು ಶಿವಕುಮಾರ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
-
Mysore3 months ago
ಶ್ರೀಮತಿ ಭವಾನಿ ರೇವಣ್ಣ ಸಹೋದರ ಇಂದು ಅಂತ್ಯಕ್ರಿಯೆ
-
State6 months ago
Free sewing machine, ಉಚಿತ ಹೊಲಿಗೆ ಯಂತ್ರ ಪಡೆಯಲು ಅರ್ಜಿ ಸಲ್ಲಿಸಿ!
-
State6 months ago
ಶಾಲಾ ಮಕ್ಕಳಿಗೆ ಫೆಬ್ರವರಿ ತಿಂಗಳಲ್ಲಿ ಭರ್ಜರಿ ಹಾಲಿಡೇ! ಇಲ್ಲಿದೆ ರಜಾ ಲಿಸ್ಟ್!!!
-
Health6 months ago
Sugar Control ಆಗಬೇಕು ಅಂದ್ರೆ ಈ ಹಿಟ್ಟನ್ನು ತಿನ್ನಬೇಕಂತೆ! ಕನ್ಫ್ಯೂಸ್ ಆಗ್ಬೇಡಿ ಸುದ್ದಿ ಓದಿ
-
Hassan3 months ago
ಹಾಸನ ಜಿಲ್ಲೆ ಹೊಳೆನರಸೀಪುರ ತಾಲ್ಲೂಕಿನ ಹರದನಹಳ್ಳಿಯಲ್ಲಿ ಸಂಸದ ಪ್ರಜ್ವಲ್ ರೇವಣ್ಣ ಹೇಳಿಕೆ
-
Uncategorized2 months ago
NEET 2024 ಮರು ಪರೀಕ್ಷೆಗೆ ಒತ್ತಾಯ: ಪೇಪರ್ ಲೀಕ್, ಮೋಸದ ಗ್ರೇಸ್ ಮಾರ್ಕ್, ಒಂದೇ ಕೇಂದ್ರದ ವಿದ್ಯಾರ್ಥಿಗಳು ಟಾಪರ್ಸ್ !!
-
Uncategorized8 months ago
ಅರ್ಜುನನ ಸಮಾದಿಗೆ ಪೂಜೆ ಸಲ್ಲಿಸಿದ ಮೈಸೂರು ರಾಜವಂಶಸ್ಥ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್
-
State6 months ago
ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ!!. ‘ಹಳೆ ಪಿಂಚಣಿ’ ಜಾರಿಗೆ ಗ್ರೀನ್ ಸಿಗ್ನಲ್ ಕೊಟ್ಟ ರಾಜ್ಯ ಸರ್ಕಾರ.