Connect with us

Mysore

ನಂಜನಗೂಡು ತಾಲ್ಲೂಕಿನ ಚುಂಚನಹಳ್ಳಿ ಗ್ರಾಮಕ್ಕೆ ತಹಶೀಲ್ದಾರ್ ಶಿವಕುಮಾರ್ ಕಾಸ್ನೂರು ಭೇಟಿ

Published

on

ಸ್ಮಶಾನ ಭೂಮಿ ಪರಿಶೀಲನೆ ನಡೆಸಿದ ತಹಶೀಲ್ದಾರ್

ನಂಜನಗೂಡು ತಾಲೂಕಿನ ವರುಣ ವಿಧಾನಸಭಾ ಕ್ಷೇತ್ರದ ಚುಂಚನಹಳ್ಳಿ ಗ್ರಾಮದಲ್ಲಿ ಶವ ಸಂಸ್ಕಾರ ಮಾಡಲು ಸ್ಮಶಾನ ಇಲ್ಲದೆ ಗ್ರಾಮಸ್ಥರು ಪರದಾಡುತ್ತಿದ್ದಾರೆ ಎಂದು ತಾಲ್ಲೂಕು ಆಡಳಿತದ ಗಮನ ಸೆಳೆಯಲಾಗಿತ್ತು.

ಇದರಿಂದ ಎಚ್ಚೆತ್ತ ನಂಜನಗೂಡು ತಹಶೀಲ್ದಾರ್ ಶಿವಕುಮಾರ್ ಕಾಸ್ನೂರು ಗ್ರಾಮಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಗ್ರಾಮದ 34/2 ರಲ್ಲಿ ಸುಮಾರು 500 ವರ್ಷಗಳಿಂದಲೂ ಇದೇ ಜಾಗದಲ್ಲಿ ದಲಿತರು, ಲಿಂಗಾಯಿತರು, ಮಡಿವಾಳ ಶೆಟ್ಟರು, ಅಗಸರು, ಗೆಜ್ಜಗಾರರು , ನಾಯಕರು ಸೇರಿದಂತೆ ಇನ್ನುಳಿದ ಸಮುದಾಯದವರು ಶವ ಸಂಸ್ಕಾರ ಮಾಡಿಕೊಂಡು ಬರುತ್ತಿದ್ದಾರೆ. ಸ್ಮಶಾನದಲ್ಲಿ ತಂತಿ ಬೇಲಿ ಅಳವಡಿಸಿ, ಅಕ್ರಮವಾಗಿ ತೆಂಗು ಬಾಳೆ ಬೆಳೆಯನ್ನು ಬೆಳೆದಿದ್ದಾರೆ. ಸ್ಮಶಾನ ಮಂಜೂರು ಮಾಡಿಕೊಡಬೇಕು ಎಂದು ಗ್ರಾಮದ ವಿಮೋಚನಾ ಯುವಕ ಸಂಘ ಮತ್ತು ಗ್ರಾಮಸ್ಥರು ಒಂದು ವರ್ಷದ ಹಿಂದೆಯೇ ದೂರು ಸಲ್ಲಿಸಿದರು.

ಇದರಿಂದ ಜಾಗೃತಗೊಂಡ ದಲಿತ ಸಂಘರ್ಷ ಸಮಿತಿಯ ಜಿಲ್ಲಾ ವಿಭಾಗೀಯ ಸಂಚಾಲಕ ಮಂಜು ಶಂಕರಪುರ ನೇತೃತ್ವದಲ್ಲಿ ಗ್ರಾಮಕ್ಕೆ ಭೇಟಿ ನೀಡಿ, ತಹಶೀಲ್ದಾರ್ ಅವರಿಗೆ ಮನವಿ ಸಲ್ಲಿಸಲಾಗಿತ್ತು.

ಇದರಿಂದ ಎಚ್ಚೆತ್ತುಕೊಂಡು ತಹಶೀಲ್ದಾರ್ ಶಿವಕುಮಾರ್ ಕಾಸ್ನೂರು, ಕವಲಂದೆ ಆರ್.ಐ ಡಿಸೋಜಾ ಸ್ಮಶಾನದ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಸ್ಮಶಾನದಲ್ಲಿ ಗ್ರಾಮಸ್ಥರಿಗೆ ಅಂತ್ಯಸಂಸ್ಕಾರ ಮಾಡಲು ಯಾವುದೇ ತೊಂದರೆ ನೀಡುತ್ತಿಲ್ಲ ಅಧಿಕೃತವಾಗಿ ಸಾರ್ವಜನಿಕ ಸ್ಮಶಾನ ಮಾಡಿಕೊಡಿ ಎಂದು ಗ್ರಾಮಸ್ಥರು ಕೇಳಿಕೊಳ್ಳುತ್ತಿದ್ದಾರೆ. ದಾಖಲೆಗಳನ್ನು ಪರಿಶೀಲನೆ ನಡೆಸಿ ಈ ತಿಂಗಳ ಒಳಗೆ ಈ ಸಮಸ್ಯೆಯನ್ನು ಇತ್ಯರ್ಥಪಡಿಸುವುದಾಗಿ ತಹಶೀಲ್ದಾರ್ ಶಿವಕುಮಾರ್ ಕಾಸ್ನೂರು ಭರವಸೆ ನೀಡಿದ್ದಾರೆ.

 

Continue Reading
Click to comment

Leave a Reply

Your email address will not be published. Required fields are marked *

Mysore

ಏ. 26 ಮತ್ತು ಏ.27 ರಂದು ಎಂಎಲ್ಎ ಕಪ್ ಟೆನ್ನಿಸ್ ಬಾಲ್ ಕ್ರಿಕೆಟ್ ಪಂದ್ಯಾವಳಿ -2025

Published

on

ನಂಜನಗೂಡು: ಏ.24 ವರದಿ ಮಹದೇವಸ್ವಾಮಿ ಪಟೇಲ್

ಏ. 26 ಮತ್ತು ಏ.27 ರಂದು ನಂಜನಗೂಡಿನಲ್ಲಿ ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳ ಜೊತೆ ಎಂಎಲ್ಎ ಕಪ್ ಟೆನ್ನಿಸ್ ಬಾಲ್ ಕ್ರಿಕೆಟ್ ಪಂದ್ಯಾವಳಿ -2025 ನಡೆಸಲಾಗುತ್ತಿದೆ ಎಂದು ಪಂದ್ಯಾವಳಿಯ ವ್ಯವಸ್ಥಾಪಕ ಹಾಗೂ ದೈಹಿಕ ಶಿಕ್ಷಣ ಉಪನ್ಯಾಸಕ ಎಂ.ಡಿ ಬಾಲರಾಜು ಗೋಷ್ಠಿಯಲ್ಲಿ ಹೇಳಿದರು.

ನಂಜನಗೂಡು ತಾಲೂಕು ಪತ್ರಕರ್ತ ಭವನದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ನಂಜನಗೂಡು ವಿಧಾನಸಭಾ ಕ್ಷೇತ್ರದ ಶಾಸಕರಾದ ದರ್ಶನ್ ಧ್ರುವನಾರಾಯಣ್ ರವರ ಹುಟ್ಟು ಹಬ್ಬದ ಅಂಗವಾಗಿ ಇದೇ ಮೊಟ್ಟ ಮೊದಲ ಬಾರಿಗೆ ನಂಜನಗೂಡಿನ ಜೂನಿಯರ್ ಕಾಲೇಜು ಮೈದಾನದಲ್ಲಿ ಏ.26 ಮತ್ತು 27 ರಂದು ಎಂಎಲ್ಎ ಕಪ್ ಟೆನ್ನಿಸ್ ಬಾಲ್ ಕ್ರಿಕೆಟ್ ಪಂದ್ಯಾವಳಿಯನ್ನು ಆಯೋಜನೆ ಮಾಡಲಾಗಿದೆ.

ಏ.26 ರಂದು ಶನಿವಾರ ಬೆಳಿಗ್ಗೆ 9 ಗಂಟೆಗೆ ಕ್ರಿಕೆಟ್ ಪಂದ್ಯಾವಳಿಯನ್ನು ಹೆಚ್.ಡಿ ಕೋಟೆ ಶಾಸಕರಾದ ಅನಿಲ್ ಚಿಕ್ಕಮಾದು ರವರು ಉದ್ಘಾಟನೆ ಮಾಡಲಿದ್ದಾರೆ. ಶಾಸಕರಾದ ದರ್ಶನ್ ಧ್ರುವನಾರಾಯಣ್ ರವರು ಅಧ್ಯಕ್ಷತೆ ವಹಿಸಲಿದ್ದಾರೆ. ಗುಂಡ್ಲುಪೇಟೆ ಶಾಸಕರಾದ ಗಣೇಶ್ ಪ್ರಸಾದ್ ಘನ ಉಪಸ್ಥಿತಿಯಲ್ಲಿದ್ದಾರೆ. ಮಾಜಿ ಶಾಸಕರಾದ ಕಳಲೆ ಕೇಶವಮೂರ್ತಿ, ನಗರಸಭಾ ಅಧ್ಯಕ್ಷರಾದ ಶ್ರೀಕಂಠ ಸ್ವಾಮಿ, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಅಧ್ಯಕ್ಷರಾದ ಮಾರುತಿ ರವರು ಉಪಸ್ಥಿತಿಯಲ್ಲಿರುತ್ತಾರೆ. ಏ.27 ರಂದು ಸಮಾರೋಪ ಸಮಾರಂಭವನ್ನು ಚಾಮರಾಜನಗರ ಲೋಕಸಭಾ ಕ್ಷೇತ್ರದ ಸಂಸದರಾದ ಸುನೀಲ್ ಬೋಸ್ ಉದ್ಘಾಟನೆ ಮಾಡಲಿದ್ದಾರೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಸಕರಾದ ದರ್ಶನ್ ಧ್ರುವನಾರಾಯಣ್ ವಹಿಸಲಿದ್ದಾರೆ. ವಿಧಾನ ಪರಿಷತ್ ಸದಸ್ಯರಾದ ಡಾ.ಯತೀಂದ್ರ ಸಿದ್ದರಾಮಯ್ಯರವರು ಘನ ಉಪಸ್ಥಿತಿಯಲ್ಲಿದ್ದಾರೆ. ಉಪಸ್ಥಿತಿಯಲ್ಲಿ ನಗರಸಭಾ ಉಪಾಧ್ಯಕ್ಷರಾದ ರಿಯಾನ ಬಾನು, ಪ್ರಥಮ ದರ್ಜೆ ಗುತ್ತಿಗೆದಾರರಾದ ಯು.ಎನ್ ಪದ್ಮನಾಭರಾವ್ ಸೇರಿದಂತೆ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳು ಭಾಗವಹಿಸಲಿದ್ದಾರೆ. ಕ್ರಿಕೆಟ್ ಪಂದ್ಯಾವಳಿಯಲ್ಲಿ ಸರ್ಕಾರಿ ನೌಕರರು ಮತ್ತು ಜನಪ್ರತಿನಿಧಿಗಳ ಜೊತೆ ಕ್ರೀಡೆಯನ್ನು ನಡೆಸಲಾಗುತ್ತದೆ. ಅವರ ಜೊತೆಗೆ ಪತ್ರಕರ್ತರು ಮತ್ತು ವಕೀಲರನ್ನು ಭಾಗವಹಿಸುವಂತೆ ಶಾಸಕರು ತಿಳಿಸಿದ್ದಾರೆ. ಈಗಾಗಲೇ ಪೊಲೀಸ್ ಇಲಾಖೆ, ಆರೋಗ್ಯ ಇಲಾಖೆ, ಕಂದಾಯ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳ ಸುಮಾರು 10 ತಂಡಗಳು ಈಗಾಗಲೇ ನೋಂದಣಿ ಮಾಡಿಕೊಂಡಿದ್ದಾರೆ. ಪ್ರಥಮ ಬಹುಮಾನವಾಗಿ 50 ಸಾವಿರ ನಗದು, ಆಕರ್ಷಕ ಟ್ರೋಪಿ, ಮೆಡಲ್ ಮತ್ತು ಪ್ರಶಸ್ತಿ ಪತ್ರವನ್ನು ನೀಡಲಾಗುತ್ತದೆ. ದ್ವಿತೀಯ ಬಹುಮಾನವಾಗಿ 25 ಸಾವಿರ ನಗದು, ಆಕರ್ಷಕ ಟ್ರೋಪಿ, ಮೆಡಲ್ ಮತ್ತು ಪ್ರಶಸ್ತಿ ವಿತರಣೆ ಮಾಡಲಾಗುತ್ತದೆ. ಸಾರ್ವಜನಿಕ ಜೀವನದಲ್ಲಿ ಕೆಲಸ ಮಾಡುತ್ತಿರುವ ಸರ್ಕಾರಿ ನೌಕರರು ಮಾನಸಿಕವಾಗಿ ದೈಹಿಕವಾಗಿ ಸದೃಢರಾಗಲು ಈ ಕ್ರಿಕೆಟ್ ಪಂದ್ಯಾವಳಿಯನ್ನು ಆಯೋಜಿಸಲಾಗಿದೆ. ಇದರಿಂದ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳ ನಡುವೆ ಸ್ನೇಹ ಬಾಂಧವ್ಯ ಮತ್ತು ಸಹೋದರತೆ ಬೆಸೆಯುವ ಒಂದು ವಿನೂತನವಾದ ಕಾರ್ಯಕ್ರಮವಾಗಿದೆ ಕ್ರಿಕೆಟ್ ಪಂದ್ಯಾವಳಿಗೆ ಕ್ರೀಡಾ ಅಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಯಶಸ್ವಿಗೊಳಿಸಬೇಕು ಎಂದು ಮನವಿ ಮಾಡಿದರು.

ಪತ್ರಿಕಾಗೋಷ್ಠಿಯಲ್ಲಿ ಎಂ.ಡಿ ಬಾಲರಾಜು, ಕವಲಂದೆ ರಾಹುಲ್, ಮಾಜಿ ಗ್ರಾಪಂ ಸದಸ್ಯ ಮುಳ್ಳೂರು ಮಹದೇವಸ್ವಾಮಿ, ಹೆಡತಲೆ ರಾಜು, ಮುಳ್ಳೂರು ಸುರೇಶ್ ಹಾಜರಿದ್ದರು

Continue Reading

Mysore

ವಾಜಮಂಗಲದಲ್ಲಿ ಅಂಬೇಡ್ಕರ್ ಭಾವಚಿತ್ರಕ್ಕೆ ಅಪಮಾನ: ಕಿಡಿಗೇಡಿಗಳ ಬಂಧನಕ್ಕೆ ಆಗ್ರಹ

Published

on

ವರದಿ: ಮಹದೇವಸ್ವಾಮಿ ಪಟೇಲ್

ಮೈಸೂರು: ತಾಲೂಕಿನ ವಾಜಮಂಗಲ ಗ್ರಾಮದಲ್ಲಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್ ಅಂಬೇಡ್ಕರ್ ರವರ ಭಾವಚಿತ್ರಕ್ಕೆ ಅಪಮಾನ ಮಾಡಿದ ಕಿಡಿಗೇಡಿಗಳನ್ನು ಬಂಧಿಸಿ ಗಲ್ಲಿಗೇರಿಸಬೇಕು ಎಂದು ಆಗ್ರಹಿಸಿ ನಂಜನಗೂಡಿನಲ್ಲಿ ಏಕೀಕರಣದ ಹಾದಿಯಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆಯಿಂದ ಪ್ರತಿಭಟನೆ ನಡೆಸಲಾಯಿತು.

ನಂಜನಗೂಡು ನಗರದ ತಾಲ್ಲೂಕು ಆಡಳಿತ ಭವನದ ಮುಂಭಾಗದಲ್ಲಿ ರೈತ ಸಂಘ ಮತ್ತು ಹಸಿರು ಸೇನೆಯ ತಾಲ್ಲೂಕು ಅಧ್ಯಕ್ಷ ಸತೀಶ್ ನೇತೃತ್ವದಲ್ಲಿ ಜಮಾಯಿಸಿದ ರೈತರು, ಕಿಡಿಗೇಡಿಗಳನ್ನು ಬಂಧಿಸುವಂತೆ ಒತ್ತಾಯಿಸಿ ರಾಜ್ಯ ಸರ್ಕಾರದ ದಿಕ್ಕಾರದ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ನಂತರ ರೈತ ಸಂಘ ಮತ್ತು ಹಸಿರು ಸೇನೆಯ ತಾಲ್ಲೂಕು ಅಧ್ಯಕ್ಷ ಸತೀಶ್ ಮಾತನಾಡಿ, ಮುಖ್ಯಮಂತ್ರಿ ಸಿದ್ದರಾಮಯ್ಯ ರವರು ಪ್ರತಿನಿಧಿಸುವ ವರುಣ ವಿಧಾನಸಭಾ ಕ್ಷೇತ್ರದ ಮೈಸೂರು ತಾಲ್ಲೂಕಿನ ವಾಜಮಂಗಲ ಗ್ರಾಮದಲ್ಲಿ ಸಂವಿಧಾನ ಶಿಲ್ಪಿ, ಡಾ.ಬಿ.ಆರ್ ಅಂಬೇಡ್ಕರ್ ರವರ ಭಾವಚಿತ್ರವನ್ನು ಹರಿದು ಹಾಕಿ ಅಪಮಾನ ಮಾಡಲಾಗಿದೆ. ಇದರಿಂದ ನಮಗೆ ತುಂಬಾ ನೋವು ಉಂಟಾಗಿದೆ. ದೇಶಕ್ಕೆ ಸಂವಿಧಾನ ನೀಡಿದ ಡಾ.ಬಿ.ಆರ್. ಅಂಬೇಡ್ಕರ್ ಅವರಿಗೆ ಅಪಮಾನವಾದರೇ ನಾವು ಸಹಿಸುವುದಿಲ್ಲ ಇದನ್ನು ನಾವು ತೀವ್ರವಾಗಿ ಖಂಡಿಸುತ್ತೇವೆ ಎಂದರು.

ಅಪಮಾನ ಮಾಡಿದ ಕಿಡಿಗೇಡಿಗಳನ್ನು ಪತ್ತೆ ಹಚ್ಚಿ ಬಂಧಿಸುವಲ್ಲಿ ಪೊಲೀಸ್ ಇಲಾಖೆ ವಿಫಲವಾಗಿದೆ. ಮುಖ್ಯಮಂತ್ರಿಗಳ ಕ್ಷೇತ್ರವಾಗಿದೆ. ಆದರೂ ಇನ್ನು ಯಾವುದೇ ಕ್ರಮವನ್ನು ತೆಗೆದುಕೊಂಡಿಲ್ಲ. ಪ್ಲೆಕ್ಸ್ ಹರಿದು ಹಾಕಿ, ಅಂಬೇಡ್ಕರ್ ಅವರ ಫ್ಲೆಕ್ಸ್ ಗಳನ್ನು ಕಿತ್ತುಹಾಕಿ, ಕತ್ತರಿಯಿಂದ ಕತ್ತರಿಸಿ ಹೇಯ ಕೃತ್ಯ ಎಸಗಿದ್ದಾರೆ. ಮುಖ್ಯಮಂತ್ರಿಗಳ ಸ್ವ ಕ್ಷೇತ್ರದಲ್ಲಿ ಇಂತಹ ಘಟನೆ ನಡೆಯಬಾರದಾಗಿತ್ತು. ಇದಕ್ಕೆ ರಾಜಕೀಯ ಮಾಡದೆ ಕಿಡಿಗೇಡಿಗಳನ್ನು ಬಂಧಿಸಿ ಗಲ್ಲಿಗೇರಿಸಬೇಕು. ಸಾಂಸ್ಕೃತಿಕ ನಗರಿಯಂತಹ ಮೈಸೂರು ಜಿಲ್ಲೆಯಲ್ಲಿ ಇಂತಹ ಘಟನೆಗಳು ಮರುಕಳಿಸಿದಂತೆ ಎಚ್ಚರಿಕೆ ವಹಿಸಬೇಕು. ಈ ಕೂಡಲೇ ಕಿಡಿಗೇಡಿಗಳನ್ನು ಬಂಧಿಸಿ ಕಠಿಣ ಶಿಕ್ಷೆಗೆ ಒಳಪಡಿಸಬೇಕು ಇಲ್ಲದಿದ್ದಲ್ಲಿ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ನಡೆಸಲಾಗುತ್ತದೆ ಎಂದು ಎಚ್ಚರಿಕೆ ನೀಡಿದರು.

ತಹಶೀಲ್ದಾರ್ ಮೂಲಕ ರಾಷ್ಟ್ರಪತಿಯವರಿಗೆ ಮನವಿ ಪತ್ರವನ್ನು ಸಲ್ಲಿಸಲಾಯಿತು. ಪ್ರತಿಭಟನೆಯಲ್ಲಿ ರೈತ ಸಂಘ ಮತ್ತು ಹಸಿರು ಸೇನೆಯ ತಾಲ್ಲೂಕು ಅಧ್ಯಕ್ಷ ಸತೀಶ್, ತಾಲ್ಲೂಕು ಉಪಾಧ್ಯಕ್ಷ ನಂಜುಂಡೇಗೌಡ, ಮಹಿಳಾ ಘಟಕದ ಅಧ್ಯಕ್ಷೆ ಶ್ವೇತಾ, ಕೃಷ್ಣಪುರ ಮೋಹನ್, ಮಹದೇವ ನಾಯಕ, ಕೃಷ್ಣ, ಮಧುಕೃಷ್ಣ, ಅಂಕಣ್ಣ, ತಿಮ್ಮನಾಯಕ, ಸುರೇಶ್ ಸೇರಿದಂತೆ ರೈತರು ಹಾಜರಿದ್ದರು.

Continue Reading

Mysore

ವಲಯ ಕಚೇರಿ-3ರ ಕಟ್ಟಡ ಉದ್ಘಾಟನೆ ಸಿದ್ದತೆ ಪರಿಶೀಲಿಸಿದ ಜಿಟಿಡಿ

Published

on

ಮೈಸೂರು: ಸಾರ್ವಜನಿಕರ ಕೆಲಸಗಳು ಸುಗಮವಾಗಿ ನಡೆಯುವಕಾರಣಕ್ಕಾಗಿ ಶಾರದಾದೇವಿನಗರದಲ್ಲಿ ನಿರ್ಮಿಸಿರುವ ನಗರಪಾಲಿಕೆ ವಲಯ ಕಚೇರಿ-ಮೂರರ ಕಟ್ಟಡ ಉದ್ಘಾಟನೆ ಶನಿವಾರ ನಡೆಯಲಿದೆ. ಚಾಮುಂಡೇಶ್ವರಿಕ್ಷೇತ್ರದ ಶಾಸಕ ಜಿ.ಟಿ.ದೇವೇಗೌಡ ಭೇಟಿ ನೀಡಿ ಪರಿಶೀಲಿಸಿದರು.

ಚಾಮುಂಡೇಶ್ವರಿ ಕ್ಷೇತ್ರದ ವ್ಯಾಪ್ತಿಗೆ ಸೇರಿರುವ ಐದು ವಾರ್ಡುಗಳು ವಲಯ ಕಚೇರಿ-ಮೂರಕ್ಕೆ ಬರಲಿದೆ. ಸಿಎಂ ಅವರು ಕಾರ್ಯಕ್ರಮ ಉದ್ಘಾಟಿಸುವ ಕಾರಣ ಗುರುವಾರ ಭೇಟಿ ನೀಡಿ ಅಂತಿಮ ಹಂತದ ಸಿದ್ದತೆ ಪರಿಶೀಲಿಸಿ ಮಾಹಿತಿ ಪಡೆದರು.

Continue Reading

Trending

error: Content is protected !!