Connect with us

Location

ನಂಜನಗೂಡಿನಲ್ಲಿ ಜನ ಸಂಪರ್ಕ ಸಭೆ ನಡೆಸಿದ ಜಿಲ್ಲಾ ಉಸ್ತುವಾರಿ ಸಚಿವ ಡಾ.ಹೆಚ್.ಸಿ ಮಹದೇವಪ್ಪ

Published

on

ನಂಜನಗೂಡಿನಲ್ಲಿ ಜನ ಸಂಪರ್ಕ ಸಭೆ ನಡೆಸಿದ ಜಿಲ್ಲಾ ಉಸ್ತುವಾರಿ ಸಚಿವ ಡಾ.ಹೆಚ್.ಸಿ ಮಹದೇವಪ್ಪ

ಉಸ್ತುವಾರಿ ಸಚಿವರಿಗೆ ಸಾಥ್ ನೀಡಿದ ನಂಜನಗೂಡು ಕ್ಷೇತ್ರ ಶಾಸಕ ದರ್ಶನ್ ಧ್ರುವನಾರಾಯಣ್

ನಂಜನಗೂಡು :ಜ 29

ನಗರದ ಹೌಸಿಂಗ್ ಬೋರ್ಡ್ ಪಾರ್ಕ್ ನಲ್ಲಿ ಜನ ಸಂಪರ್ಕ ಸಭೆಯನ್ನು ಜಿಲ್ಲಾ ಉಸ್ತುವಾರಿ ಸಚಿವ ಹಾಗೂ ಸಮಾಜ ಕಲ್ಯಾಣ ಇಲಾಖೆಯ ಸಚಿವ ಡಾ.ಹೆಚ್.ಸಿ ಮಹದೇವಪ್ಪ ನಡೆಸಿದ್ದಾರೆ.

ನಂಜನಗೂಡು ತಾಲ್ಲೂಕನ್ನು ಅಭಿವೃದ್ಧಿಯಲ್ಲಿ ಉನ್ನತ ಶ್ರೇಣಿಗೆ ತೆಗೆದುಕೊಂಡು ಹೋಗುವುದು ನಮ್ಮ ಆದ್ಯ ಕರ್ತವ್ಯ ಮುಂಬರುವ ಲೋಕಸಭಾ ಚುನಾವಣೆ ಸ್ಥಳೀಯ ಜಿಲ್ಲಾ ಪಂಚಾಯಿತಿ ತಾಲೂಕು ಪಂಚಾಯಿತಿ ಚುನಾವಣೆಗಳಲ್ಲಿ ಒಗ್ಗಟಿನಿಂದ ಕೆಲಸ ಮಾಡಿ ಪಕ್ಷವನ್ನು ಅಧಿಕಾರಕ್ಕೆ ತರುವುದು ಕಾರ್ಯಕರ್ತರು ಮತ್ತು ಮುಖಂಡರ ಜವಾಬ್ದಾರಿಯಾಗಿರುತ್ತದೆ.

ನಂಜನಗೂಡಿನಲ್ಲಿ ಉತ್ತಮ ಶಾಸಕರನ್ನು ಆಯ್ಕೆ ಮಾಡಲಾಗಿದೆ. ವೃತ್ತಿಯಲ್ಲಿ ವಕೀಲರಾಗಿ ಸೃಜನಶೀಲ ನಾಯಕತ್ವದ ಗುಣವನ್ನು ಬೆಳೆಸಿಕೊಂಡಿದ್ದಾರೆ. ಎಲ್ಲಾ ಕಾರ್ಯಕರ್ತರ ಮತ್ತು ಮುಖಂಡರನ್ನು ವಿಶ್ವಾಸಕ್ಕೆ ತೆಗೆದುಕೊಂಡು ತಾಲ್ಲೂಕನ್ನು ಅಭಿವೃದ್ಧಿಯತ್ತ ಕೊಂಡೊಯ್ಯಬೇಕಾಗಿದೆ.

ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಚಾಮರಾಜ ಕ್ಷೇತ್ರದಿಂದ ಯಾರು ಅಥವಾ ಸುನೀಲ್ ಬೋಸ್..? ಎಂದು ಮಾಧ್ಯಮದವರು ಪ್ರಶ್ನಿಸಿದಾಗ ಪ್ರತಿಕ್ರಿಯೆ ನೀಡಿ ಸಚಿವರು ಎಲ್ಲಾ ಕ್ಷೇತ್ರದಲ್ಲಿ ಶಾಸಕರ ಜೊತೆ ಮಾತನಾಡಿ ಚರ್ಚಿಸಿದ್ದೇವೆ ನಿರ್ಧಾರ ಹೈಕಮಾಂಡ್ ತೀರ್ಮಾನಿಸುತ್ತಾರೆ ಎಂದರು.

ಶಾಸಕ ದರ್ಶನ್ ಧ್ರುವನಾರಾಯಣ್ ಮಾತನಾಡಿ, ನಾನು ಚುನಾವಣೆಯ ಸಂದರ್ಭದಲ್ಲಿ ಹೆಚ್. ಸಿ ಮಹದೇವಪ್ಪ ಸಾಹೇಬರ ಅನುಪಸ್ಥಿತಿಯಲ್ಲಿ ಎಲ್ಲಾ ಕಾರ್ಯಕರ್ತರನ್ನ ಒಗ್ಗಟ್ಟಿನಿಂದ ಕೊಂಡ ಇದು ತಾಲ್ಲೂಕನ್ನು ಅಭಿವೃದ್ಧಿಪಡಿಸಿ ಕಾಂಗ್ರೆಸ್ ಪಕ್ಷವನ್ನು ಪ್ರಬಲವಾಗಿ ಸಂಘಟಿಸುವ ಭರವಸೆಯನ್ನು ನೀಡಲಾಗಿದೆ. ಅದೇ ರೀತಿ ನಡೆದುಕೊಳ್ಳುತ್ತೇನೆ ಎಂದರು.

ಈ ಸಭೆಯಲ್ಲಿ ಮಾಜಿ ಶಾಸಕ ಕಳಲೆ ಕೇಶವಮೂರ್ತಿ, ಕಾಂಗ್ರೆಸ್ ಪಕ್ಷದ ಮುಖಂಡ ಇಂದನ್ ಬಾಬು, ವೀರಶೈವ ಲಿಂಗಾಯತ ಮಹಾಸಭಾ ಅಧ್ಯಕ್ಷ ಬುಲೆಟ್ ಮಹದೇವಪ್ಪ , ಕಾಂಗ್ರೆಸ್ ಮುಖಂಡರುಗಳಾದ ಹೆಜ್ಜೆ ಗೆ ರವಿ, ಹೊಸಕೋಟೆ ಗಿರೀಶ್,ಕಾಂಗ್ರೆಸ್ ಪಕ್ಷದ ಮುಖಂಡರು ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು.

ನಂಜನಗೂಡು ಮಹದೇವಸ್ವಾಮಿ ಪಟೇಲ್.

Continue Reading
Click to comment

Leave a Reply

Your email address will not be published. Required fields are marked *

Chamarajanagar

ಸುನಿಲ್ ಬೋಸ್ ಅವರಿಗೆ ಮತ ನೀಡುವಂತೆ ಎರಡನೇ ವಾರ್ಡಿನ ಸದಸ್ಯ ರಂಗನಾಥ್ ಮನವಿ

Published

on

ಯಳಂದೂರು: ಚಾಮರಾಜನಗರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಸುನಿಲ್ ಬೋಸ್ ಅವರಿಗೆ ಮತ ನೀಡುವಂತೆ ಎರಡನೇ ವಾರ್ಡಿನ ಸದಸ್ಯ ರಂಗನಾಥ್ ಮನವಿ ಮಾಡಿದರು.

ಅವರು ಪಟ್ಟಣದ ಮುಸ್ಲಿಂ ಬಡಾವಣೆಯಲ್ಲಿ ಮನೆಮನೆಗಳಿಗೆ ಕಾಂಗ್ರೆಸ್ ಪಕ್ಷದ ಗ್ಯಾರಂಟಿ ಕಾರ್ಡ್ ವಿತರಿಸಿ ಮಾತನಾಡಿದರು. ಈಗಾಗಲೇ ನುಡಿದಂತೆ ನಡೆಯುತ್ತಿರುವ ರಾಜ್ಯ ಸರ್ಕಾರ ಎಲ್ಲಾ ಐದು ಗ್ಯಾರಂಟಿಗಳನ್ನು ಜಾರಿ ಮಾಡಿದೆ. ಕೇಂದ್ರದಲ್ಲೂ ಸಹ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದರೆ ಪ್ರತಿಯೊಬ್ಬ ವಿದ್ಯಾವಂತ ಯುವಕನಿಗೆ ಮೊದಲ ಉದ್ಯೋಗದ ಗ್ಯಾರೆಂಟಿಯ ಯುವ ನ್ಯಾಯ, ಪ್ರತಿ ಬಡ ಕುಟುಂಬದ ಒಬ್ಬ ಮಹಿಳೆಗೆ ಪ್ರತಿ ವರ್ಷ ಒಂದು ಲಕ್ಷ ಮಹಿಳಾ ನ್ಯಾಯ, ಸಾಮಿನಾಥನ ಆಯೋಗದ ಸೂತ್ರದ ಪ್ರಕಾರ ಎಂ ಎಸ್ ಪಿ ಗೆ ಕಾನೂನು ಸ್ಥಾನಮಾನ ಮತ್ತು ಸಾಲ ಮನ್ನದ ರೈತ ನ್ಯಾಯ, ನರೇಗಾ ಯೋಜನೆ ಅಡಿಯಲ್ಲಿ ದಿನಕ್ಕೆ 400 ರೂಪಾಯಿ ಕನಿಷ್ಠ ವೇತನದ ಶ್ರಮಿಕ ನ್ಯಾಯ, ಸಾಮಾಜಿಕ ಮತ್ತು ಆರ್ಥಿಕ ಸಮಾನತೆಯನ್ನು ಖಚಿತಪಡಿಸಿಕೊಳ್ಳಲು ರಾಷ್ಟ್ರ ವ್ಯಾಪಿ ಜನಗಣತಿಯಲ್ಲಿ ಪ್ರತಿಯೊಬ್ಬ ವ್ಯಕ್ತಿ ಮತ್ತು ಪ್ರತಿ ಸಮುದಾಯವನ್ನು ಪರಿಗಣಿಸಲಾಗುವುದು ಪಾಲುದಾರಿಕೆ ನ್ಯಾಯ ಹೀಗೆ ಕಾಂಗ್ರೆಸ್ ನ ಗ್ಯಾರಂಟಿ ಕಾರ್ಡ್ ನಲ್ಲಿ ಪಂಚ ನ್ಯಾಯಗಳಿದ್ದು ಇವೆಲ್ಲವೂ ಜಾರಿಗೆ ಬರುತ್ತದೆ. ಆದ್ದರಿಂದ ಕಾಂಗ್ರೆಸ್ ಪಕ್ಷ ಗೆಲ್ಲಿಸುವಂತೆ ಮನವಿ ಮಾಡಿದರು.

ಕಾಂಗ್ರೆಸ್ ಮುಖಂಡರಾದ ಕೋಸ ಮಂಜು, ಶಬ್ಬೀರ್, ರಿಜ್ವಾನ್, ಭರತ, ರಾಮು, ನಾಗ ಸೇರಿದಂತೆ ಇತರರು ಹಾಜರಿದ್ದರು.

Continue Reading

Hassan

ಮುಂದಿನ ದಿನಗಳಲ್ಲಿ ಚೊಂಬು-ಜಾಗಟೆ ಗ್ಯಾರಂಟಿ

Published

on

ಕಾಂಗ್ರೆಸ್ ವಿರುದ್ಧ ಹೆಚ್.ಡಿ. ರೇವಣ್ಣ ವಾಗ್ದಾಳಿ

ಹಾಸನ: ಗ್ಯಾರಂಟಿ ಯೋಜನೆಗಳ ಹೆಸರಿನಲ್ಲಿ ರಾಜ್ಯದ ಖಜಾನೆ ಖಾಲಿ ಮಾಡಿ ಜನರಿಗೆ ಬಿಕ್ಷೆ ಹಾಕುತ್ತಿದ್ದು, ಮುಂದಿನ ದಿನಗಳಲ್ಲಿ ಚೊಂಬು ಮತ್ತು ಜಾಗಟೆ ಕೊಡುವುದು ಗ್ಯಾರಂಟಿ ಎಂದು ಮಾಜಿ ಸಚಿವ ಹೆಚ್.ಡಿ. ರೇವಣ್ಣ ಭವಿಷ್ಯ ನುಡಿದರು.

ನಗರದಲ್ಲಿ ಆಪ್ತರ ನಿವಾಸದಲ್ಲಿ ಮಾಧ್ಯಮದೊಂದಿಗೆ ಮಾತನಾಡಿ, ಕರ್ನಾಟಕ ರಾಜ್ಯ ಲೂಟಿ ಕೋರರ ಕೈಯಲ್ಲಿ ಸಿಲುಕಿಕೊಂಡಿದೆ ಗ್ಯಾರಂಟಿ ಯೋಜನೆಗಳ ಹೆಸರಿನಲ್ಲಿ ರಾಜ್ಯದ ಖಜಾನೆ ಖಾಲಿ ಮಾಡಿ ಜನರಿಗೆ ಬಿಕ್ಷೆ ಹಾಕುತ್ತಿದೆ ಮುಂದಿನ ದಿನಗಳಲ್ಲಿ ಕೈಯಲ್ಲಿ ಚೊಂಬು ಹಾಗೂ ಜಾಗಟೆ ಕೊಡುವುದು ಗ್ಯಾರಂಟಿ ಎಂದರು.

ಹೆಚ್.ಡಿ. ಕುಮಾರಸ್ವಾಮಿ ಸರ್ಕಾರದ ಅವಧಿಯಲ್ಲಿ ಹಾಸನ ಜಿಲ್ಲೆಯ ಶಿಕ್ಷಣ ಕ್ಷೇತ್ರದಲ್ಲಿ ಕ್ರಾಂತಿಕಾರರ ಬದಲಾವಣೆ ಆಗಿದೆ. ಶಾಲಾ ಕಾಲೇಜು ಕಟ್ಟಡಗಳು, ಗುಣಮಟ್ಟದ ಶಿಕ್ಷಣದ ಮೂಲಕ ಹಾಸನ ಜಿಲ್ಲೆ ಎಸ್.ಎಸ್.ಎಲ್.ಸಿ. ಯಲ್ಲಿ ಕೂಡ ಪ್ರಥಮ ಸ್ಥಾನ ಪಡೆಯುವ ಮೂಲಕ ಇಡೀ ರಾಜ್ಯಕ್ಕೆ ಮಾದರಿಯಾಗಿದೆ. ಆದರೆ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಹಾಸನ ಜಿಲ್ಲೆಗೆ ಕೊಡುಗೆ ಶೂನ್ಯ ಎಂದು ದೂರಿದರು. ನಂಬಿದವರಿಗೆ ಟೋಪಿ ಹಾಕಿ ನಿಷ್ಕಲ್ಮಶ ರಾಜಕಾರಿಣಿ ದೇವೇಗೌಡರನ್ನು ಪ್ರಧಾನಿ ಸ್ಥಾನದಿಂದ ಕೆಳಗಿಳಿಸಿದ್ದಾರೆ ಎಂದು ಕಿಡಿಕಾರಿದರು.

ಹಿಂದಿನಿಂದಲೂ ನಮ್ಮ ಕುಟುಂಬದ ಬಗ್ಗೆ ಅನೇಕರು ಒಂದಲ್ಲ, ಒಂದು ರೀತಿಯ ಅಪಪ್ರಚಾರ ಮಾಡುತ್ತಿದ್ದಾರೆ. ದೇವೇಗೌಡರ ಕಾಲದಿಂದಲೂ ಇದು ನಡೆಯುತ್ತಿದೆ. ಇದಕ್ಕೆಲ್ಲಾ ನಾವು ತಲೆ ಕೆಡಿಸಿಕೊಳ್ಳುವುದಿಲ್ಲ. ನಮ್ಮ ಕುಟುಂಬದ ಬಗ್ಗೆ ಅಪಪ್ರಚಾರ ಮಾಡುವುದು ಮಾಮೂಲಿ. ಇದನ್ನೆಲ್ಲ ಜಿಲ್ಲೆಯ ಜನರು ಗಮನಿಸುತ್ತಿದ್ದಾರೆ. ಈ ಚುನಾವಣೆಯಲ್ಲಿ ಹಾಸನ, ಮಂಡ್ಯ, ಕೋಲಾರ ಸೇರಿದಂತೆ ಎಲ್ಲಾ ೨೮ಕ್ಕೆ ೨೮ ಸ್ಥಾನವನ್ನೂ ನಾವು ಗೆಲ್ಲುತ್ತೇವೆ ಎಂದು ವಿಶ್ವಾಸವ್ಯಕ್ತಪಡಿಸಿದರು.

ರಾಜ್ಯದಲ್ಲಿ ಗ್ಯಾರಂಟಿ ಆಯ್ತು ಈಗ ಪೊಳ್ಳು ಗ್ಯಾರಂಟಿ ಶುರುವಾಗಿದೆ. ಬಾಂಡ್ ಪೇಪರ್‌ನಲ್ಲಿ ಸಿಎಂ ಹಾಗೂ ಡಿಸಿಎಂ ಒಂದು ಲಕ್ಷ ಕೊಡುವುದಾಗಿ ಕರಪತ್ರ ಹಂಚುತ್ತಿದ್ದಾರೆ. ಈ ಬಗ್ಗೆ ಚುನಾವಣಾ ಆಯೋಗ ಗಮನಿಸಬೇಕು ಎಂದು ಆಗ್ರಹಿಸಿದರು. ಒಂದು ಕಡೆ ಪ್ರಜ್ವಲ್, ದೇವೇಗೌಡರು ಏನು ಮಾಡಿದ್ದಾರೆ ಅಂತಾರೆ. ಆದರೆ ಅವರು ಈ ಜಿಲ್ಲೆಗೆ ಏನು ಕೊಡುಗೆ ಕೊಟ್ಟಿದ್ದಾರೆ ಎಂಬುದು ಜನರಿಗೆ ಗೊತ್ತು. ೧೧ ತಿಂಗಳಲ್ಲಿ ರಾಜ್ಯದ ಖಜಾನೆ ಖಾಲಿ ಮಾಡಿ ಖಾಲಿ ಚೊಂಬು ಕೊಟ್ಟಿದ್ದಾರೆ. ಒಂದೇ ಒಂದು ಅಭಿವೃದ್ಧಿ ಕೆಲಸ ಆಗಿಲ್ಲ ಎಂದು ಗಂಬೀರವಾಗಿ ಆರೋಪಿಸಿದರು.

ಹಾಸನ ಫ್ಲೈ ಓವರ್ ಮಾಡಲು ನಾನು ಬರಬೇಕಾಯ್ತಾ, ಹಾಸನದ ಬಸ್ ನಿಲ್ದಾಣಕ್ಕೆ ನಿತ್ಯ ನಾಲ್ಕು ಸಾವಿರ ಬಸ್ ಬರ್ತವೆ. ಆದರೆ ಇವರು ಕೇವಲ ಎರಡು ಪಥದ ರಸ್ತೆಯ ಫ್ಲೈ ಓವರ್ ಮಾಡಿದ್ದಾರೆ. ಹಾಸನದ ಮೆಡಿಕಲ್ ಕಾಲೇಜು ಉಳಿಸಲು ಇವರ ಕೊಡುಗೆ ಏನು? ನಮ್ಮ ಕೊಡುಗೆ ಏನು ಅಂತಾರೆ, ಇವರ ಕೊಡುಗೆ ಏನು ಹೇಳಲಿ? ಎಂದು ಸವಾಲು ಹಾಕಿದರು. ಅರವತ್ತು ವರ್ಷ ಆದರೂ ಈ ಕಾಂಗ್ರೆಸ್ ಸರ್ಕಾರ ಶಿಕ್ಷಣಕ್ಕೆ ಆದ್ಯತೆ ಕೊಡಲಿಲ್ಲ. ಶೇಕಡಾ ೪೦ ರಷ್ಡು ಶಿಕ್ಷಕರ ಹುದ್ದೆ ಖಾಲಿ ಇದೆ. ಬಡ ಜನರಿಗೆ ಮೋದಿಯವರು ಐದು ಕೆಜಿ ಅಕ್ಕಿ ಕೊಡ್ತಾರೆ ಇವರು ಅದನ್ನ ಹೇಳ್ತಾರಾ! ಇವರು ಗ್ಯಾರಂಟಿ ಗಾಗಿ ಲಕ್ಷಾಂತರ ಕೋಟಿ ಸಾಲ ಮಾಡಿದ್ದಾರೆ.

ಇವರು ಬಿಜೆಪಿಯನ್ನ ಪರ್ಸೆಂಟೇಜ್ ಎನ್ನೋರು ಇವರು ರೈತರಿಂದಲು ಪರ್ಸೆಂಡೇಜ್ ತಗೊತಾರಲ್ಲ ಸ್ವಾಮಿ ಎಂದು ಆರೋಪ ಮಾಡಿದರು.

Continue Reading

Mandya

ಎಚ್ಡಿಕೆ ಮಂಡ್ಯದಲ್ಲಿ ಅಬ್ಬರದ ಪ್ರಚಾರ

Published

on

ಮಂಡ್ಯ : ಮಂಡ್ಯ ಲೋಕಸಭಾ ಕ್ಷೇತ್ರದ ಬಿಜೆಪಿ – ಜೆಡಿಎಸ್ ಪಕ್ಷದ ಅಭ್ಯರ್ಥಿ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಬಹಿರಂಗ ಪ್ರಚಾರದ ಕೊನೆಯ ದಿನ ಮಂಡ್ಯದಲ್ಲಿ ಭರ್ಜರಿ ರೋಡ್ ಶೋ ನಡೆಸುವ ಮೂಲಕ ಶಕ್ತಿಪ್ರದರ್ಶಿಸಿದರು.

ಬೆಂಗಳೂರು -ಮೈಸೂರು ಹೆದ್ದಾರಿಯಲ್ಲಿ ರೋಡ್ ಶೋ ನಡೆಸಿದ ಹೆಚ್‍.ಡಿ ಕುಮಾರಸ್ವಾಮಿಗೆ ಅಪಾರ ಜನಸ್ತೋಮ ಬೆಂಬಲ ಸೂಚಿಸಿತು.

ಮಂಡ್ಯ ವಿಶ್ವವಿದ್ಯಾನಿಲಯ ಆವರಣದಿಂದ ಪುತ್ರ ನಿಖಿಲ್ ಕುಮಾರಸ್ವಾಮಿ ಜೊತೆಗೂಡಿ ರೋಡ್ ಶೋ ಮೂಲಕ ಮತಯಾಚನೆಗೆ ಹೊರಟ ಮೈತ್ರಿ ಪಕ್ಷದ ಅಭ್ಯರ್ಥಿಗೆ ಬಿಜೆಪಿ ಹಾಗೂ ಜೆಡಿಎಸ್ ಕಾರ್ಯಕರ್ತರು ಜಯ ಘೋಷ ಮೊಳಗಿಸಿ ಹರ್ಷೋದ್ಗಾರದ ನಡುವೆ ಪುಷ್ಪಾರ್ಚನೆ ಮೂಲಕ ಹೆಜ್ಜೆ ಹಾಕಿದರು. ಅಪಾರ ಜನಸ್ತೋಮದ ನಡುವೆ ತೆರೆದ ವಾಹನದಲ್ಲಿ ಕೈ ಮುಗಿದು ನನ್ನ ಗೆಲುವಿಗೆ ಶ್ರಮಿಸುವಂತೆ ಮನವಿ ಮಾಡಿದರು.


ಜಯಚಾಮರಾಜೇಂದ್ರ ಒಡೆಯರ್ ವೃತ್ತದಲ್ಲಿ ಜನಸ್ತೋಮ ಉದ್ದೇಶಿಸಿ ಮಾತನಾಡಿದ ಮೈತ್ರಿ ಅಭ್ಯರ್ಥಿ ಎಚ್ ಡಿ ಕುಮಾರಸ್ವಾಮಿ ಆಳುವ ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.
ಬಹಿರಂಗ ಪ್ರಚಾರದ ಕೊನೆಯ ದಿನ ಜಾತ್ಯತೀತ ಜನತಾದಳ ಮತ್ತು ಬಿಜೆಪಿ ಪಕ್ಷದ ಕಾರ್ಯಕರ್ತರು ಹೊಸ ಹುಮ್ಮಸ್ಸಿನಿಂದ ಶಕ್ತಿಪ್ರದರ್ಶಿಸುವ ಮೂಲಕ ಮೈತ್ರಿ ಅಭ್ಯರ್ಥಿ ಗೆಲುವಿಗೆ ಅಣಿಯಾಗಿದ್ದಾರೆ.

Continue Reading

Trending

error: Content is protected !!