National - International
ಶ್ವೇತ ಭವನದಲ್ಲಿ ಮೋದಿ-ಟ್ರಂಪ್ ಜಂಟಿ ಪತ್ರಿಕಾಗೋಷ್ಠಿ: ಭಾರತೀಯ ಕಾಲಮಾನ ಹೀಗಿದೆ

ವಾಷಿಂಗ್ಟನ್: ಭಾರತದ ಪ್ರಧಾನಿ ನರೇಂದ್ರ ಮೋದಿ ಹಾಗೂ ಅಮೆರಿಕ ಅಧ್ಯಕ್ಷ ಡೋನಾಲ್ಡ್ ಟ್ರಂಪ್ ಅವರು ಜಂಟಿ ಪತ್ರಿಕಾಗೋಷ್ಠಿ ನಡೆಸಲಿದ್ದಾರೆ ಎಂದು ಅಮೆರಿಕಾ ಶ್ವೇತ ಭವನ ಮಾಹಿತಿ ನೀಡಿದೆ.
ಭಾರತೀಯ ಕಾಲಮಾನ ಪ್ರಕಾರ ಶುಕ್ರವಾರ ಬೆಳಗಿನ ಜಾವ 3.30ಕ್ಕೆ ಈ ಉಭಯ ನಾಯಕರು ಜಂಟಿ ಪತ್ರಿಕಾಗೋಷ್ಠಿಯಲ್ಲಿ ಪಾಲ್ಗೊಳ್ಳಲಿದ್ದಾರೆ.
ನರೇಂದ್ರ ಮೋದಿ, ವ್ಯಾಪಾರ, ತಂತ್ರಜ್ಞಾನ, ಇಂಧನ, ವಲಸೆ ವಿಷಯಗಳಿಗೆ ಸಂಬಂಧಿಸಿದಂತೆ ಡೋನಾಲ್ಡ್ ಟ್ರಂಪ್ ಜೊತೆ ದ್ವಿಪಕ್ಷೀಯ ಮಾತುಕತೆ ನಡೆಸಲಿದ್ದಾರೆ. ಈ ಭೇಟಿ ಭಾರತ ಹಾಗೂ ಅಮರಿಕಾದ ದ್ವಿಪಕ್ಷೀಯ ಬಾಂಧವ್ಯವನ್ನು ಮತ್ತಷ್ಟು ಗಟ್ಟಿಗೊಳಿಸಲಿದೆ ಎಂದು ಹೇಳಲಾಗುತ್ತಿದೆ.
2023 ರಲ್ಲಿ ಮೊದಲ ಬಾರಿಗೆ ಅಮೆರಿಕ ಮಾಜಿ ಅಧ್ಯಕ್ಷ ಜೋ ಬೈಡನ್ ಜೊತೆ ಮೋದಿ ಮೊದಲ ಜಂಟಿ ಪತ್ರಿಕಾಗೋಷ್ಠಿ ನಡೆಸಿದ್ದರು. ಈ ವೇಳೆ ಅಮೆರಿಕಾ ವರದಿಗಾರರು ಕೇಳಿದ್ದ ಪ್ರಶ್ನಯೊಂದಕ್ಕೆ ಭಾರತದಲ್ಲಿ ಧಾರ್ಮಿಕ ತಾರತಮ್ಮ ಇಲ್ಲ ಎಂದು ಹೇಳಿದ್ದರು.
ಈ ವಿಚಾರ ಸಾಮಾಜಿಕ ಜಾಲತಾಣದಲ್ಲಿ ಭಾರೀ ಚರ್ಚೆ ಹುಟ್ಟುಹಾಕಿತ್ತು. ಪ್ರಶ್ನೆ ಕೇಳಿದ್ದ ಪತ್ರಕರ್ತರ ವಿರುದ್ಧ ಮೋದಿ ಬೆಂಬಲಿಗರು ಮುಗಿಬಿದ್ದಿದ್ದರು. ಇದನ್ನು ಬೈಡನ್ ಸರ್ಕಾರ ವಿರೋಧಿಸಿತ್ತು.
ಆದರೆ ಭಾರತದಲ್ಲಿ ಅವರು 2014ರಲ್ಲಿ ಮೊದಲ ಬಾರಿಗೆ ಪ್ರಧಾನಿಯಾದಾಗಿನಿಂದ ಈವರೆಗೆ ಯಾವುದೇ ಪತ್ರಿಕಾಗೋಷ್ಠಿ ನಡೆಸಿಲ್ಲ. 2019ರ ಮೇ ನಲ್ಲಿ ಪತ್ರಿಕಾಗೋಷ್ಠಿ ನಡೆಸಿದ್ದ ಅವರು, ಯಾವುದೇ ಪ್ರಶ್ನೆಗಳಿಗೆ ಉತ್ತರಿಸದೇ ಹೋಗಿದ್ದರು.
National - International
ಹನಿಟ್ರ್ಯಾಪ್ ಪ್ರಕರಣ: ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್

ನವದೆಹಲಿ: ರಾಜ್ಯದಲ್ಲಿ ನಡೆದಿದೆ ಎನ್ನಲಾಗಿರುವ ಹನಿಟ್ರ್ಯಾಪ್ ವಿಚಾರ ದೇಶದಲ್ಲಿ ಭಾರೀ ಸುದ್ದಿಯಾಗಿದ್ದು, ಈ ಸಂಬಂಧ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಸುಪ್ರೀಂಕೋರ್ಟ್ ವಜಾಗೊಳಿಸಿದೆ.
ರಾಜಕಾರಣಿಗಳು ಹಾಗೂ ನ್ಯಾಯಾಧೀಶರ ಮೇಲೆ ಹನಿಟ್ರ್ಯಾಪ್ ಆಗಿದೆ. ಈ ಕುರಿತು ಸೂಕ್ತ ತನಿಖೆಯಾಗಬೇಕು ಎಂದು ಜಾರ್ಖಂಡ್ ರಾಜ್ಯದ ವಕೀಲ ವಿನಯ್ ಕುಮಾರ್ ಸಿಂಗ್ ಎಂಬುವವರು ಸುಪ್ರೀಂಕೋರ್ಟ್ ಪಿಐಎಲ್ ಸಲ್ಲಿಕೆ ಮಾಡಿದ್ದರು.
ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್, ನೀವು ಜಾರ್ಖಂಡ್ ರಾಜ್ಯದವರು. ಇದರ ಬಗ್ಗೆ ನಿಮಗೇನು ಸಂಬಂಧ. ನ್ಯಾಯಾಧೀಶರು ಯಾಕೆ ಹನಿಟ್ರ್ಯಾಪ್‌ಗೆ ಒಳಗಾಗುತ್ತಾರೆ. ಅದನ್ನು ಜಡ್ಜ್‌ಗಳು ನೋಡಿಕೊಳ್ಳುತ್ತಾರೆ ಎಂದು ವಕೀಲ ವಿನಯ್ ಕುಮಾರ್ ಸಿಂಗ್ ಅವರನ್ನು ತೀವ್ರ ತರಾಟೆಗೆ ತೆಗೆದುಕೊಂಡಿದೆ.
ಈ ಮೂಲಕ ಹನಿಟ್ರ್ಯಾಪ್ ತನಿಖೆ ನಡೆಸುವಂತೆ ಅರ್ಜಿ ಸಲ್ಲಿಸಿದ್ದ ವಕೀಲ ವಿನಯ್ ಕುಮಾರ್‌ರಿಗೆ ತೀವ್ರ ಮುಖಭಂಗವಾಗಿದೆ.
National - International
ಸುಪ್ರೀಂ ಕೋರ್ಟ್ ಅಂಗಳಕ್ಕೆ ಹನಿಟ್ರ್ಯಾಪ್ ಪ್ರಕರಣ

ನವದೆಹಲಿ: ರಾಜ್ಯದಲ್ಲಿ ಭಾರಿ ಸುದ್ದಿಯಾಗಿರುವ ಹನಿಟ್ರ್ಯಾಪ್ ಪ್ರಕರಣವು ಈಗ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದೆ.
ಕರ್ನಾಟಕದಲ್ಲಿ ಸಚಿವರು, ಶಾಸಕರ ವಿರುದ್ಧ ಹನಿಟ್ರ್ಯಾಪ್ ನಡೆದಿದೆ ಎನ್ನಲಾದ ಪ್ರಕರಣ ಕುರಿತು ತನಿಖೆ ನಡೆಸುವಂತೆ ವಿನಯ್‌ಕುಮಾರ್ ಸಿಂಗ್ ಎಂಬುವವರು ಸುಪ್ರೀಂ ಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಶಕ್ತಿ ಅರ್ಜಿ (ಪಿಐಎಲ್) ಅರ್ಜಿ ಸಲ್ಲಿಕೆ ಮಾಡಿದ್ದಾರೆ.
ವಿಧಾನಸಭೆ ಅಧಿವೇಶನದ ವೇಳೆ ಸ್ವತಃ ಸಚಿವರೇ ತಮ್ಮ ಮೇಲೆ ಹನಿಟ್ರ್ಯಾಪ್ ನಡೆದಿದೆ ಎಂದು ಹೇಳಿದ್ದಾರೆ. ಸಾರ್ವಜನಿಕ ವಿಶ್ವಾಸದ ದೃಷ್ಠಿಯಿಂದ ಕೋರ್ಟ್ ನಿಗಾದಲ್ಲಿ ಕೂಡಲೇ ತನಿಖೆ ನಡೆಸಬೇಕು ಎಂದು ವಿನಯ್‌ಕುಮಾರ್ ಸಿಂಗ್ ಮುಖ್ಯ ನಾಯಾಮೂರ್ತಿ ಬಳಿ ಮನವಿ ಮಾಡಿದ್ದಾರೆ.
ಇದಕ್ಕೆ ಶೀಘ್ರವೇ ಅರ್ಜಿಯ ವಿಚಾರಣೆ ನಡೆಸಲು ಸುಪ್ರೀಂ ಕೋರ್ಟ್ ತೀರ್ಮಾನಿಸಿದ್ದು, ಹನಿಟ್ರ್ಯಾಪ್ ವಿಚಾರಣೆಯನ್ನು ಇಂದು ಅಥವಾ ನಾಳೆ ಕೈಗೆತ್ತಿಕೊಳ್ಳಲಾಗುವುದು ಎಂದು ಸಿಜೆಐ ತಿಳಿಸಿದ್ದಾರೆ.
National - International
ಅಣ್ಣಾಮಲೈ ಒಬ್ಬ ಪುವರ್ ಮ್ಯಾನ್: ಡಿಕೆ ಶಿವಕುಮಾರ್ ಹೀಗೇಳಿದ್ದೇಕೆ?

ತಮಿಳುನಾಡು: ಜನಸಂಖ್ಯಾ ಆಧಾರಿತ ಲೋಕಸಭಾ ಕ್ಷೇತ್ರಗಳ ಮರು ವಿಂಗಡನೆ ಕುರಿತಂತೆ ಕೇಂದ್ರ ಸರ್ಕಾರದ ನಿರ್ಧಾರದ ವಿರುದ್ಧ ಐಎನ್‌ಡಿಐಎ ಮೈತ್ತಿ ಪಕ್ಷಗಳು ತಮಿಳುನಾಡು ಮುಖ್ಯಮಂತ್ರಿ ಸ್ಟಾಲಿನ್ ನೇತೃತ್ವದಲ್ಲಿ ಶನಿವಾರ ಸಭೆ ನಡೆಯಿತು.
ಈ ಸಭೆಯಲ್ಲಿ ದಕ್ಷಿಣ ಭಾರತದ ವಿವಿಧ ರಾಜ್ಯಗಳ ಮುಖ್ಯಮಂತ್ರಿಗಳು, ಕರ್ನಾಟಕದಿಂದ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಭಾಗವಹಿಸಿದ್ದರು.
ಈ ಸಭೆ ವಿರುದ್ಧ ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಕೆ. ಅಣ್ಣಾಮಲೈ ಅವರು ಮೇಕೆದಾಟು ಯೋಜನೆಗೆ ಮುಂದಾಗಿ ತಮಿಳುನಾಡು ರಾಜ್ಯದ ಜನರಿಗೆ ಅನ್ಯಾಯ ಮಾಡಿ, ಕ್ಷೇತ್ರ ಮರುವಿಂಗಡಣೆ ಸಭೆಗೆ ಹಾಜರಾಗಿದ್ದಾರೆ ಎಂದು ವಿರೋಧಿಸಿ ಕಪ್ಪುಪಟ್ಟಿ ಕಟ್ಟಿಕೊಂಡು ಪ್ರತಿಭಟನೆ ಮಾಡಿದರು.
ಇನ್ನು ತಮ್ಮ ಎಕ್ಸ್ ಖಾತೆಯಲ್ಲಿ ಕಾವೇರಿ ಮತ್ತು ಮುಲ್ಲೈ ಪೆರಿಯಾರ್ ವಿಷಯದಲ್ಲಿ ತಮಿಳುನಾಡು ರೈತರಿಗೆ ನಿರಂತರವಾಗಿ ದ್ರೋಹ ಬಗೆದ, ನಮ್ಮ ರಾಜ್ಯದ ನೈಸರ್ಗಿಕ ಸಂಪನ್ಮೂಲಗಳನ್ನು ಶೋಷಿಸುತ್ತಿರುವ ಮತ್ತು ತಮಿಳುನಾಡು ಗಡಿ ಜಿಲ್ಲೆಗಳನ್ನು ಕೇರಳದ ವೈದ್ಯಕೀಯ ತ್ಯಾಜ್ಯವನ್ನು ಸುರಿಯುವ ಸ್ಥಳವನ್ನಾಗಿ ಪರಿವರ್ತಿಸುತ್ತಿರುವ ತಮ್ಮ INDIA ಮೈತ್ರಿಕೂಟದ ಪಾಲುದಾರರಿಗೆ ಕೆಂಪು ಹಾಸಿನ ಸ್ವಾಗತ ನೀಡಿದ್ದಕ್ಕಾಗಿ ತಮಿಳುನಾಡು ಬಿಜೆಪಿ ಸಹೋದರ ಸಹೋದರಿಯರು ತಮ್ಮ ಮನೆಗಳ ಮುಂದೆ ಕಪ್ಪು ಧ್ವಜಗಳನ್ನು ಹಿಡಿದು ಪ್ರತಿಭಟನೆ ನಡೆಸುತ್ತಿದ್ದಾರೆ ಎಂದು ಬರೆದುಕೊಂಡದ್ದರು.
ಈ ಸಂಬಂಧ ಮಾಧ್ಯಮಗಳು ಕೇಳಿದ ಪ್ರಶ್ನೆಗಳಿಗೆ ಉತ್ತರ ನೀಡಿದ ಡಿಸಿಎಂ ಡಿಕೆ ಶಿವಕುಮಾರ್, ಅಣ್ಣಾಮಲೈ ಒಬ್ಬ ಪುವರ್ ಮ್ಯಾನ್, ಕರ್ನಾಟಕದಲ್ಲಿ ಕೆಲಸ ನಿರ್ವಹಿಸುವ ವೇಳೆ ನನ್ನ ಶಕ್ತಿ ಬಗ್ಗೆ ಆತನಿಗೆ ಗೊತ್ತಿದೆ. ಪ್ರತಿಭಟನೆ ಮಾಡಲಿ ಅದಕ್ಕೆ ನಾನು ತಲೆಕೆಡಿಸಿಕೊಳ್ಳುವುದಿಲ್ಲ. ಆತನಿಗೆ ಶುಭವಾಗಲಿ ಎಂದು ನಸುನಕ್ಕರು.
https://x.com/annamalai_k/status/1903348499267326152
ಡಿಕೆ ರಿಯಾಕ್ಷನ್‌ಗೆ ಮತ್ತೊಂದು ಪೋಸ್ಟ್ ಮಾಡಿರುವ ಅಣ್ಣಾಮಲೈ, ಹೌದು, ನಾನು ಪೊಲೀಸ್ ಅಧಿಕಾರಿಯಾಗಿ ಕರ್ನಾಟಕದ ಜನರಿಗೆ ಶ್ರದ್ಧೆಯಿಂದ ಸೇವೆ ಸಲ್ಲಿಸಿದ್ದೇನೆ. ಗಮನಾರ್ಹ ಉಲ್ಲೇಖಕ್ಕಾಗಿ ಧನ್ಯವಾದಗಳು ಡಿಸಿಎಂ ಡಿಕೆ ಶಿವಕುಮಾರ್ ಅವರೇ.
ಅಲ್ಲದೆ, ಈ ಬಡವನಿಗೆ ಶುಭ ಹಾರೈಸಿದ್ದಕ್ಕಾಗಿ ಧನ್ಯವಾದಗಳು ಮತ್ತು ಸಿದ್ದರಾಮಯ್ಯ ಅವರನ್ನು ಅವರ ಕುರ್ಚಿಯಿಂದ ಕೆಳಗಿಳಿಸಿ ಕರ್ನಾಟಕದ ಮುಖ್ಯಮಂತ್ರಿಯಾಗುವ ನಿಮ್ಮ ನಿರಂತರ ಪ್ರಯತ್ನಗಳಲ್ಲಿ ನಿಮಗೆ ನನ್ನ ಶುಭಾಶಯಗಳು! ಎಂದು ಬರೆದುಕೊಂಡು ತಮ್ಮ ಅಸಮಾಧಾನವನ್ನು ಹೊರಹಾಕಿದ್ದಾರೆ.
-
Kodagu21 hours ago
ಬೇಳೂರು ಬಾಣೆಯಲ್ಲಿ ಸ್ಟೇರಿಂಗ್ ಲಾಕ್ : ಕಾರು ಪಲ್ಟಿ
-
Kodagu17 hours ago
ಕೊಡಗಿನ ಭರವಸೆಯ ಪ್ರತಿಭೆ ವರ್ತ ಕಾಳಿ ಕಿರುಚಿತ್ರದ ನಿರ್ದೇಶಕ: ಕೃತಾರ್ಥ ಮಂಡೆಕುಟ್ಟಂಡ
-
State13 hours ago
ಬಿಜೆಪಿ ಶೋಕಾಸ್ ನೋಟಿಸ್ ಕುರಿತು ಶಾಸಕ ಎಸ್ಟಿಎಸ್ ಫಸ್ಟ್ ರಿಯಾಕ್ಷನ್
-
Mysore17 hours ago
ಎಲ್ಲಾ ಪಕ್ಷದವರ ಮೇಲೂ ಹನಿಟ್ರ್ಯಾಪ್ ಪ್ರಯತ್ನ ನಡೆದಿದೆ: ಯತೀಂದ್ರ ಸಿದ್ದರಾಮಯ್ಯ
-
Mandya16 hours ago
ಭೂ ದಾಖಲೆ ಹೊಂದಿರುವವರನ್ನು ಓಕ್ಕಲೆಬ್ಬಿಸಬೇಡಿ : ಎನ್ ಚೆಲುವರಾಯಸ್ವಾಮಿ
-
Mandya12 hours ago
ಎಂ.ಕೆ.ಸೋಮಶೇಖರ್ಗೆ ರಾಜ್ಯಮಟ್ಟದ ಛಾಯಗ್ರಾಹಕ ಹಾಗೂ ಕಲಾವಿದ ಪ್ರಶಸ್ತಿ ಪ್ರಧಾನ
-
State11 hours ago
ಬಿಜೆಪಿಯಿಂದ ಆರು ವರ್ಷಗಳ ಕಾಲ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಉಚ್ಛಾಟನೆ
-
Hassan15 hours ago
1 ಕೋಟಿ ರೂ. ವೆಚ್ಚದ ರಸ್ತೆ ಕಾಮಗಾರಿಗೆ ಗುದ್ದಲಿ ಪೂಜೆ ನರೆವೇರಿಸಿದ ಸ್ವರೂಪ್ ಪ್ರಕಾಶ್