Connect with us

Kodagu

ನಕ್ಸಲ್ ಚಟುವಟಿಕೆ ಆತಂಕ – ಕೊಡಗಿನಲ್ಲಿ ಹೈ ಅಲರ್ಟ್

Published

on

ಮಡಿಕೇರಿ: ಕೇರಳದ ವಯನಾಡಿನಲ್ಲಿ ಕಳೆದ ಒಂದು ತಿಂಗಳಿನಿಂದ ನಕ್ಸಲ್‌ ಚಟುವಟಿಕೆ ಮತ್ತೆ ಚುರುಕುಗೊಂಡಿದ್ದು, ಇದರ ಪ್ರಭಾವ ಕರ್ನಾಟಕದ ಮೇಲೂ ಬೀಳುವ ಅಪಾಯ ಕಾಣಿಸಿಕೊಂಡಿದೆ.
ಕೊಡಗು- ಕೇರಳ ಗಡಿಯಲ್ಲಿ ಸೋಮವಾರ ನಕ್ಸಲರು ಹಾಗೂ ಕೇರಳ ನಕ್ಸಲ್ ಕಾರ್ಯಪಡೆ ನಡುವೆ ಗುಂಡಿನ ಚಕಮಕಿ ನಡೆದಿದೆ. ಈ ಕಾರ್ಯಾಚರಣೆ ವೇಳೆ ಓರ್ವ ನಕ್ಸಲ್ ಗಾಯಗೊಂಡಿರುವುದಾಗಿ ತಿಳಿದು ಬಂದಿದ್ದು, ಈತ ಚಿಕಿತ್ಸೆಗಾಗಿ ಅಥವಾ ರಕ್ಷಣೆಗಾಗಿ ಕೊಡಗು ಜಿಲ್ಲೆಯನ್ನು ಪ್ರವೇಶಿಸುವ ಸಾಧ್ಯತೆಗಳಿರುವುದರಿಂದ ಜಿಲ್ಲಾ ಪೊಲೀಸರು ಹೈಅಲರ್ಟ್ ಘೋಷಿಸಿದ್ದಾರೆ.
ಕೊಡಗಿನ 4- 5 ಕಿ.ಮೀ ದೂರದಲ್ಲಷ್ಟೇ ಗುಂಡಿನ ಚಕಮಕಿ ನಡೆದಿದ್ದು, ನಕ್ಸಲರು ಕೇರಳ ಅರಣ್ಯ ಪ್ರದೇಶದಿಂದ ಕೊಡಗನ್ನು ಪ್ರವೇಶಿಸುವ ಬಗ್ಗೆ ಶಂಕೆ ವ್ಯಕ್ತವಾಗಿದೆ. ಆದ್ದರಿಂದ ಜಿಲ್ಲೆಯ ಚೆಕ್ ಪೋಸ್ಟ್ ಗಳಲ್ಲಿ ಹೆಚ್ಚುವರಿಯಾಗಿ ಜಿಲ್ಲಾ ಸಶಸ್ತ್ರ ಪೊಲೀಸರನ್ನು ನಿಯೋಜಿಸಲಾಗಿದ್ದು, ಎಲ್ಲಾ ವಾಹನಗಳನ್ನು ತಪಾಸಣೆಗೆ ಒಳಪಡಿಸಲಾಗುತ್ತಿದೆ. ಗಡಿ ಭಾಗದ ಆಸ್ಪತ್ರೆ, ಮೆಡಿಕಲ್ ಶಾಪ್ ಮತ್ತು ಹೋಂಸ್ಟೇ ಗಳಿಗೂ ಎಚ್ಚರದಿಂದ ಇರುವಂತೆ ತಿಳಿಸಲಾಗಿದೆ. ಅಲ್ಲದೆ ಪೊಲೀಸರನ್ನು ನಿಯೋಜಿಸಿ ನಿಗಾ ಇರಿಸಲಾಗಿದೆ.
ಕೇರಳ ಪೊಲೀಸರ ಕಾರ್ಯಾಚರಣೆಗೆ ಹೆದರಿ ಈ ನಕ್ಸಲರು ಕರ್ನಾಟಕ ಪ್ರವೇಶ ಮಾಡುವ ಅಪಾಯ ಇರುವುದರಿಂದ ಕೇರಳ-ಕರ್ನಾಟಕ ಗಡಿ ಭಾಗದಲ್ಲಿ ಕಟ್ಟೆಚ್ಚರ ವಹಿಸಲಾಗಿದೆ.
ಕೊಡಗು ಭಾಗದಲ್ಲಿರುವ ಕರ್ನಾಟಕ-ಕೇರಳ ಗಡಿ ಭಾಗವಾದ ಕುಟ್ಟ ಪ್ರದೇಶಕ್ಕೆ ಕೊಡಗು ಎಸ್ಪಿ ರಾಮರಾಜನ್ ಭೇಟಿ ನೀಡಿದ್ದು, ಗಡಿಯಲ್ಲಿ ಕಟ್ಟೆಚ್ಚರ ವಹಿಸುವಂತೆ ಪೊಲೀಸ್ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಕೊಡಗಿನಲ್ಲಿ ನಕ್ಸಲ್ ಚಟುವಟಿಕೆ ಇಲ್ಲವಾದರೂ ಕೇರಳ ಗಡಿಗೆ ಹೊಂದಿಕೊಂಡಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಕೊಡಗಿನ ಗಡಿಭಾಗ ಕುಟ್ಟ, ಬಿರುನಾಣಿ, ತೆರಾಲು ಭಾಗದಲ್ಲಿ ಕಟ್ಟೆಚ್ಚರ ವಹಿಸಲಾಗಿದೆ. ಕೂಂಬಿಂಗ್ ಕಾರ್ಯಾಚರಣೆ ನಡೆಸಲಾಗುತ್ತಿದೆ‌.
ಮುಂಜಾಗ್ರತಾ ಕ್ರಮವಾಗಿ ಗಡಿಭಾಗದಲ್ಲಿ ಹೆಚ್ಚಿನ ಸಿಬ್ಬಂದಿಯನ್ನು ಸ್ಥಳದಲ್ಲಿ ನಿಯೋಜನೆ ಮಾಡಲಾಗಿದೆ. ಕುಟ್ಟ ಗಡಿಯ ಚೆಕ್‌ ಪೋಸ್ಟ್‌ನಲ್ಲಿ ಪೊಲೀಸರು ವಾಹನ ತಪಾಸಣೆ ಬಿಗಿಗೊಳಿಸಿದ್ದಾರೆ.
ದಿನದ 24 ಗಂಟೆ ಪೊಲೀಸರು ಕರ್ತವ್ಯದಲ್ಲಿದ್ದು, ಯಾವುದೇ ಅನುಮಾನಾಸ್ಪದ ವ್ಯಕ್ತಿಗಳ ಓಡಾಟ ಕಂಡುಬಂದಲ್ಲಿ ವಿಚಾರಣೆಗೆ ಒಳಪಡಿಸುವಂತೆ ಪೊಲೀಸರಿಗೆ ಎಸ್.ಪಿ. ರಾಮರಾಜನ್ ನಿರ್ದೇಶನ ನೀಡಿದ್ದಾರೆ. ಕುಟ್ಟ ಭಾಗದಲ್ಲಿ ಎ.ಎನ್.ಎಫ್. ತಂಡ ಕಳೆದ ಹಲವು ಸಮಯದಿಂದ ಕೆಲಸ ನಿರ್ವಹಿಸುತ್ತಿದೆ. ಅಲ್ಲದೆ ಕೂಂಬಿಂಗ್ ಕಾರ್ಯಾಚರಣೆಯಲ್ಲಿ ತೊಡಗಿದೆ.

Kodagu

ಕಸ ವಿಲೇವಾರಿಗೆ ವಿರೋಧ: 4ನೇ ದಿನಕ್ಕೆ ಮುಂದುವರಿದ ಅಹೋರಾತ್ರಿ ಪ್ರತಿಭಟನೆ

Published

on

ಸಿದ್ದಾಪುರ: ವೀರಾಜಪೇಟೆ ತಾಲ್ಲೂಕಿನ, ಮಾಲ್ದಾರೆ ಗ್ರಾಮ ಪಂಚಾಯಿತಿ ಚೊಟ್ಟೆಪಾಳಿ (ಕಲ್ಲಳ್ಳ) ಜಾಗದಲ್ಲಿ ಗ್ರಾಮ ಪಂಚಾಯಿತಿ ವತಿಯಿಂದ ನೂತನವಾಗಿ ಕಸವಿಲೇವಾರಿ ಕೇಂದ್ರ ನಿರ್ಮಿಸಲು ಮುಂದಾಗಿರುವ ಕ್ರಮವನ್ನು ಖಂಡಿಸಿ ಬಹುಜನ ಸಮಾಜ ಪಾರ್ಟಿ ನೇತ್ರತ್ವದಲ್ಲಿ ಮಾಲ್ದಾರೆ ಗ್ರಾಮ ಪಂಚಾಯತಿ ಮುಂದೆ ನಾಲ್ಕನೇ ದಿನ ಅಹೋರಾತ್ರಿ ಪ್ರತಿಭಟನೆ ಮುಂದುವರೆದಿದೆ ಸ್ಥಳಕ್ಕೆ ಜಿಲ್ಲಾಧಿಕಾರಿಗಳು ಬರಬೇಕೆಂದು ಒತ್ತಾಯಿಸಿದ್ದಾರೆ.

ಬಹುಜನ ಸಮಾಜ ಪಾರ್ಟಿ ಜಿಲ್ಲಾಧ್ಯಕ್ಷ ದಿವಿಲ್ ಕುಮಾರ್ ಮಾತನಾಡಿ ಮಾಲ್ದಾರೆ ಗ್ರಾಮ ಪಂಚಾಯತಿ ಮುಂದೆ ನಡೆಯುತ್ತಿರುವ ಆಹೋರಾತ್ರಿ ಪ್ರತಿಭಟನೆ ನಾಲ್ಕನೇ ದಿನಕ್ಕೂ ಮುಂದುವರೆದಿದ್ದು ನಮ್ಮ ಮನವಿಗೆ ಮತ್ತು ಹೋರಾಟಕ್ಕೆ ಅಧಿಕಾರಿಗಳು ಸ್ಪಂದಿಸುತ್ತಿಲ್ಲ ಆಡಳಿತ ನಡೆಸುವ ಸರ್ಕಾರ ವಿರುದ್ಧ ಇಂದಿನಿಂದ ಉಪವಾಸ ಸತ್ಯಾಗ್ರಹ ಮಾಡಲಾಗುವುದು ಈ ಹೋರಾಟದಲ್ಲಿ ಬಡವರು ಹಾಗೂ ಕೂಲಿ ಕಾರ್ಮಿಕರಿಗೆ ಏನೇ ಹೆಚ್ಚು ಕಮ್ಮಿಯದಲ್ಲಿ ಸಂಬಂಧಪಟ್ಟ ಅಧಿಕಾರಿಗಳೇ ನೇರ ಹೊಣೆ ಹಾಗೂ ಜಿಲ್ಲಾಧಿಕಾರಿ ಸ್ಥಳಕ್ಕೆ ಬಂದು ಬೇಡಿಕೆ ಈಡೇರಿಸುವವರೆಗೂ ಪ್ರತಿಭಟನೆ ಮುಂದುವರೆಯಲಿದೆ ಎಂದು ಎಚ್ಚರಿಕೆ ನೀಡಿದರು.

ಪ್ರತಿಭಟನೆ ವೇಳೆ ಅಧಿಕಾರಿಗಳು ಹಾಗೂ ಆಡಳಿತದ ವ್ಯವಸ್ಥೆಯ ವಿರುದ್ಧ ಧಿಕ್ಕಾರ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಹಾಗೂ ಪೊನ್ನಂಪೇಟೆ ಸಮಾಜ ಕಲ್ಯಾಣ ಇಲಾಖೆ ಅಧಿಕಾರಿ ತೆಜರಾಜ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು ಪ್ರತಿಭಟನೆಗಾರರು ಮನವಿ ಪತ್ರ ಇದೆ ಸಂದರ್ಭ ನೀಡಿದರು.

ಪ್ರತಿಭಟನೆಯಲ್ಲಿ ಬ್ರಿಗೇಡ್ ಸಂಘಟನೆಯ ರಾಜ್ಯಾಧ್ಯಕ್ಷ ರೇವತಿ ರಾಜ್, ಬಹುಜನ ಭಾಗ್ಯ ವಿಧಾತಾ ವೇದಿಕೆ ಸಂಘಟನೆಯ ರಾಜ್ಯಾಧ್ಯಕ್ಷ ಚೇತನ್ ಕುಮಾರ್, ಹಾಗೂ ಸ್ಥಳೀಯ ಕಾಫಿ ಬೆಳೆಗಾರರಾದ ಬೋಪಣ್ಣ, ರಾಮಚಂದ್ರ, ವಿಷ್ಣು, ರೋಹನ್,ಸೇದಂತೆ ವಿವಿಧ ಸಂಘ ಸಂಸ್ಥೆಗಳ ಮುಖಂಡರುಗಳು  ಹಾಜರಿದ್ದರು

Continue Reading

Kodagu

ಭೀಕರ ರಸ್ತೆ ಅಪಘಾತ – ಬೈಕ್ ಸವಾರ ದುರ್ಮರಣ

Published

on

ಮಡಿಕೇರಿ : ಮಡಿಕೇರಿ ಕಾಟಕೇರಿ ಬಳಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಲಾರಿ ಅಡಿಗೆ ಸಿಲುಕಿ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ.
ಮಡಿಕೇರಿ-ಮಂಗಳೂರು ಮುಖ್ಯರಸ್ತೆಯ ಕಾಟಕೇರಿ ಬಳಿಯ ಪ್ರಶಾಂತಿ ಹೋಂ ಸ್ಟೇ ಎದುರು ನಡೆದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾನೆ.
ಬೈಕ್ ಸವಾರ ನಾಪೋಕ್ಲು ಬಳಿಯ ಕಕ್ಕಬ್ಬೆ ನಿವಾಸಿ ಬೆಟ್ಟಗೇರಿಯಲ್ಲಿ ವಾಸವಿರುವ ಶರತ್ (28) ಮೃತ ವ್ಯಕ್ತಿ.
ಮಡಿಕೇರಿ ಮಂಗಳೂರು ಮುಖ್ಯರಸ್ತೆಯಲ್ಲಿ ಕಾರನ್ನು ಹಿಂದಿಕ್ಕಿ ಹೋಗುತ್ತಿದ್ದಾಗ ಲಾರಿ ಅಡಿಗೆ ಬಿದ್ದ ಯುವಕ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಘಟನಾ ಸ್ಥಳಕ್ಕೆ ಮಡಿಕೇರಿ ಗ್ರಾಮಾಂತರ ಪೋಲಿಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.

Continue Reading

Kodagu

ವಿದ್ಯಾರ್ಥಿನಿ ಗಾಯತ್ರಿಗೆ ಸನ್ಮಾನ

Published

on

ಕುಶಾಲನಗರ : ಕುಶಾಲನಗರ ನಳಂದ ಇಂಟರ್ನ್ಯಾಷನಲ್ ಪಿಯು ಕಾಲೇಜಿನ ದ್ವಿತೀಯ ಪಿಯು (ವಿಜ್ಞಾನ) ವಿದ್ಯಾರ್ಥಿನಿ ಗಾಯತ್ರಿ ಕೆ 2023-24 ನೇ ಸಾಲಿನಲ್ಲಿ ನಡೆದ ದ್ವಿತೀಯ ಪಿಯು ಪರೀಕ್ಷೆಯಲ್ಲಿ ರಾಜ್ಯಕ್ಕೆ ಎರಡನೇ ರ್ಯಾಂಕ್ ಪಡೆದಿರುತಾರೆ. ಇವರು 600 ಕ್ಕೆ 597 ಅಂಕಗಳನ್ನು ಗಳಿಸಿದ್ದು, ಈ ಸಾಧನೆಗಾಗಿ ವಿದ್ಯಾರ್ಥಿಯನ್ನು ಕಾಲೇಜು ವತಿಯಿಂದ ಸನ್ಮಾನಿಸಲಾಯಿತು.


ಕಾರ್ಯಕ್ರಮದಲ್ಲಿ ವಸತಿ ನಿರ್ದೇಶಕ ನಾಮ್ಗಿಲ್ ಎನ್, ಶೈಕ್ಷಣಿಕ ಸಲಹೆಗಾರ ಎಫ್ ಎ ಎಸ್ ಸುರೇಂದ್ರ, ಪ್ರಾಂಶುಪಾಲ ಷಜಿ ಅಲುಂಗಲ್ ಜೋಸೆಫ್, ಶಿಕ್ಷಕರು ಮತ್ತು ವಿದ್ಯಾರ್ಥಿಗಳ ಸಮ್ಮುಖದಲ್ಲಿ ಕವಿತಾ ಸತಪನ್, ಗಾಯತ್ರಿಯವರಿಗೆ ಪ್ರಶಸ್ತಿ ಯನ್ನು ನೀಡಿ ತಲಾ 2 ಲಕ್ಷ ರೂಪಾಯಿಯ ಚೆಕ್ ಅನ್ನು ಹಸ್ತಾಂತರಿಸಿ ಗಾಯತ್ರಿಯನ್ನು ಸನ್ಮಾನ ಮಾಡಿದರು.

Continue Reading

Trending

error: Content is protected !!