Hassan
ರಾಜ್ಯದಲ್ಲಿ 28 ಕ್ಕೆ 28 ಸ್ಥಾನ ಎನ್ ಡಿಎ ಮೈತ್ರಿ ಕೂಟ ಗೆಲ್ಲಲಿದೆ
ಹಾಸನ- ಹಾಸನದಲ್ಲಿ ಬಿಜೆಪಿ ವಿಧಾನಪರಿಷತ್ ಸದಸ್ಯ ಚಲವಾದಿ ನಾರಾಯಣಸ್ವಾಮಿ ಹೇಳಿಕೆ
ರಾಜ್ಯದಲ್ಲಿ 28 ಕ್ಕೆ 28 ಸ್ಥಾನ ಎನ್ ಡಿಎ ಮೈತ್ರಿ ಕೂಟ ಗೆಲ್ಲಲಿದೆ
ಕಾಂಗ್ರೆಸ್ ನಮ್ಮ ರಾಜ್ಯದಲ್ಲಿ ಅಧಿಕಾರದಲ್ಲಿ ಇರಬಹುದು
ಆದರೆ ದೇಶದಲ್ಲಿ ಮೋದಿ ಅಲೆಯಿಂದ ಕಾಂಗ್ರೆಸ್ ಚಿಂತೆಗೀಡಾಗಿದೆ
ಕಾಂಗ್ರೆಸ್ ನಲ್ಲಿ ನಾಯಕತ್ವವೇ ಇಲ್ಲ
ದೇಶದ ವಿಚಾರದಲ್ಲಿ ಕಾಂಗ್ರೆಸ್ ಸಾಧನೆ ಶೂನ್ಯ
ಕಾಂಗ್ರೆಸ್ ವಿರುದ್ದ ವಾಗ್ದಾಳಿ ನಡೆಸಿದ ಬಿಜೆಪಿ ನಾಯಕ
ಮೋದಿ ಓರ್ವ ನಿಷ್ಕಳಂಕ ರಾಜಕಾರಣಿ, ಕಾಂಗ್ರೆಸ್ ಇಷ್ಟು ದಿನ ದಲಿತರನ್ನು ಕೇವಲ ಓಟ್ ಬ್ಯಾಂಕ್ ಮಾಡಿಕೊಂಡಿದೆ
ನಾವು ದಲಿತರನ್ನು ಉದ್ಧಾರ ಮಾಡಿದ್ದೇವೆ ಎಂದು ಕೈ ನಾಯಕರು ಹೇಳ್ತಾರೆ
ಆದರೆ ಅಂಬೇಡ್ಕರ್ ಸೇರಿ ಈ ಸಮುದಾಯ ನೋಯಿಸಿಧ್ದು ಬಿಟ್ಟರೆ ಬೇರೆ ಏನು ಮಾಡಿಲ್ಲ.
ಬಿಜೆಪಿ ಅಧಿಕಾರಕ್ಕೆ ಬಂದರೆ ಸಂವಿಧಾನ ತೆಗೀತಾರೆ, ಅವರು ಅಂಬೇಡ್ಕರ್ ವಿರೋದಿ ಎಂದು ನಮ್ಮನ್ನ ದಾರಿ ತಪ್ಪಿಸುತ್ತಾರೆ
ಕಾಶ್ಮೀರದಲ್ಲಿ ಆರ್ಟಿಕಲ್ 370 ರದ್ದಾಗುವವರೆಗೂ ಏಕೆ ಸಂವಿಧಾನ ಜಾರಿ ಮಾಡೊಕೆ ಆಗಿರಲಿಲ್ಲ..
ಈ ಸಮಾಜದಲ್ಲಿ ಅಸ್ಪ್ರಶ್ಯತೆ ನಾಶ ಆಗೊವರೆಗೆ, ಸಮಾನತೆ ಬರೋಬರೆಗೆ ಮೀಸಲಾತಿ ಇರುತ್ತೆ ಎಂದು ಪ್ರಧಾನಿ ಅವರೇ ಹೇಳಿದಾರೆ
ಅಂಬೇಡ್ಕರ್ ಮತ್ತೆ ಹುಟ್ಟಿ ಬಂದರೂ ಸಂವಿಧಾನ ಬದಲಾವಣೆ ಸಾಧ್ಯ ಇಲ್ಲ ಎಂದು ಹೇಳಿದ್ದಾರೆ.
ಕಾಂಗ್ರೆಸ್ ತುರ್ತು ಪರಿಸ್ಥಿತಿ ಹೇರಿದ್ದು ಸಂವಿಧಾನ ವಿರೋದಿ ಅಲ್ಲವೇ
ಬಿಜೆಪಿ ದಲಿತ ವಿರೋದಿ ಅಲ್ಲ, ಅಂಬೇಡ್ಕರ್ ವಿರೋದಿಯೂ ಅಲ್ಲ.
ಕಾಂಗ್ರೆಸ್ ಮುಂದಿನ ಐವತ್ತು ವರ್ಷ ಅಧಿಕಾರದ ಕನಸನ್ನು ಕಾಣದ ಪರಿಸ್ಥಿತಿ ನಿರ್ಮಾಣ ಆಗಿದೆ
Hassan
ಕ್ರೀಡೆಯು ಪರಿಪೂರ್ಣ ವ್ಯಕ್ತಿತ್ವಕ್ಕೆ ನಾಂದಿಯಾಗಬಲ್ಲದು : ಡಾ. ಅಕ್ಷಯ್ ಎಸ್. ಗೌಡ.
ಹಾಸನ: ಕ್ರೀಡೆಯು ಕೇವಲ ಮನರಂಜನೆಗೋ ಅಥವಾ ಆರೋಗ್ಯ ವರ್ಧನೆಗೂ ಮಾತ್ರವಲ್ಲ. ವಿದ್ಯಾರ್ಥಿಗಳು ತಮ್ಮ ದೈನಂದಿನ ಚಟುವಟಿಕೆಗಳಲ್ಲಿ ತಮ್ಮಿಷ್ಟದ ಹೊರಾಂಗಣದ ಆಟವೊಂದನ್ನು ಅಳವಡಿಸಿಕೊಂಡರೆ, ಅದು ಅವರ ಪರಿಪೂರ್ಣ ವ್ಯಕ್ತಿತ್ವಕ್ಕೆ ನಾಂದಿಯಾಗಬಲ್ಲದು ಎಂದು ಚನ್ನರಾಯಪಟ್ಟಣದ ಆಯುರ್ವೇದ ತಜ್ಞ ವೈದ್ಯ ಡಾ. ಅಕ್ಷಯ್ ಎಸ್. ಗೌಡ ತಿಳಿಸಿದರು.

ನಗರದ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಯುರ್ವೇದ ಕಾಲೇಜ್ ನಲ್ಲಿ ನಡೆದ ವಾರ್ಷಿಕ ಕ್ರೀಡಾ ಸ್ಪರ್ಧೆಗಳ “ ಕ್ರೀಡಾ ತರಂಗ-2025 ಉದ್ಘಾಟಿಸಿ, ಧ್ವಜಾರೋಹಣ ನೆರವೇರಿಸಿ ಮಾತನಾಡುತ್ತಿದ್ದರು.

ಯುವಜನರು ಅನಾರೋಗ್ಯಕರ ಆಹಾರ, ದುಶ್ಚಟಗಳು, ಮೊಬೈಲ್ ದುರ್ಬಳಕೆಯಿಂದ ತಮ್ಮ ಅರೋಗ್ಯವನ್ನು ಹಾಳುಮಾಡಿಕೊಳ್ಳುತ್ತಿರುವುದು ಕಳವಳಕಾರಿ ಸಂಗತಿಯಾಗಿದೆ. ನಿತ್ಯವೂ ನಡಿಗೆ, ಲಘುವ್ಯಾಯಾಮ, ಆಟ, ಯೋಗದಂತಹ ಕ್ರಿಯೆಗಳು ನಮ್ಮ ದಿನಚರಿಯ ಅವಿಭಾಜ್ಯ ಅಂಗವಾಗಲೇಬೇಕಿದೆ. ಆಯುರ್ವೇದದ ಚಿಕಿತ್ಸೆಗಳು ಕ್ರೀಡಾಳುಗಳ ಆರೋಗ್ಯದ ಸಮಸ್ಯೆಗಳಿಗೆ ಅತ್ಯುತ್ತಮ ಚಿಕಿತ್ಸಾ ವಿಧಾನಗಳನ್ನು ಒಳಗೊಂಡಿದ್ದು, ಈವರೆಗೂ 1000 ಕ್ಕೂ ಹೆಚ್ಚು ಕ್ರೀಡಾಪಟುಗಳ ವಿವಿಧ ನೋವಿನ ಸಮಸ್ಯೆಗಳನ್ನು ಆಯುರ್ವೇದ ಚಿಕಿತ್ಸಾ ಕ್ರಮಗಳ ಮೂಲಕವೇ ಚಿಕಿತ್ಸೆ ನೀಡಿರುವುದನ್ನು ನೆನೆಸಿಕೊಂಡರು. ತಾವು ವ್ಯಕ್ತಿಯಲ್ಲಿ ವೈದ್ಯರಾದರೂ ತಮ್ಮಲ್ಲಿ ಇಂದಿಗೂ ಕಡಾ ಆಸಕ್ತಿ ಇರಲು ಎಸ್.ಡಿ.ಎಂ.ಶಿಕ್ಷಣ ಸಂಸ್ಥೆ ಒಂದು ಬಲವಾದ ಕಾರಣ ಎಂದು ತಿಳಿಸಿದರು.

ಕಾಲೇಜಿನ ಪ್ರಾಂಶುಪಾಲೆ ಡಾ.ಶೈಲಜಾ.ಉಪ್ಪಿನಕುದುರು ಅವರು ಮಾತನಾಡಿ, ಇತರ ವೃತ್ತಿಗಳಂತೆ ಆರೋಗ್ಯ ಕ್ಷೇತ್ರದ ವೃತ್ತಿಗಳಲ್ಲೂ ಒತ್ತಡ ಇರುತ್ತದೆ. ಹಾಗಾಗಿ ವಿದ್ಯಾರ್ಥಿ ದೆಸೆಯಲ್ಲೇ ಕ್ರೀಡೆಯನ್ನು ನಮ್ಮ ದಿನಚರಿಯ ಭಾಗವಾಗಿಸಬೇಕು ಎಂದರು. ಎಸ್.ಡಿ.ಎಂ.ಅಯುರ್ವೇದ ಶಿಕ್ಷಣ ಸಂಸ್ಥೆಗಳ ನಿರ್ದೇಶಕ ಡಾ.ಪ್ರಸನ್ನ ನರಸಿಂಹ ರಾವ್ ಅವರು ಮಾತನಾಡಿ ಎಲ್ಲ ಕ್ರೀಡಾಳುಗಳಿಗೆ ಶುಭಹಾರೈಸಿದರು.
ಆ ಸಮಾರಂಭದಲ್ಲಿ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕರಾದ ಡಾ.ಮುರಲೀಧರ್.ಪಿ.ಪೂಜಾರ್, ಉಪಪ್ರಾಂಶುಪಾಲರಾದ ಡಾ.ಅಶ್ವಿನಿಕುಮಾರ್.ಎಂ ಮತ್ತು ಡಾ.ಪ್ರಕಾಶ್. ಎಲ್. ಹೆಗಡೆ ಹಾಗು ದೈಹಿಕ ನಿರ್ದೇಶಕ ಶ್ರೀ ಗಣೇಶ್ ಉಪಸ್ಥಿತರಿದ್ದರು. ವಿವಿಧ ಕ್ರೀಡಾ ಸ್ಪರ್ಧೆಗಳ ವಿಜೇತರಿಗೆ ಪಾರಿತೋಷಕಗಳನ್ನು ವಿತರಿಸಲಾಯಿತು.
Hassan
ನಾವು ತೆರೆದ ಪುಸ್ತಕ ಎಲ್ಲವನ್ನೂ ಎದುರಿಸೋದಕ್ಕೆ ಸಿದ್ಧರಿದ್ದೇವೆ: ಸಿಎಂ ಸಿದ್ದರಾಮಯ್ಯ
ಹಾಸನ: ಅಹಿಂದ ಸಂಘಟನೆ ಮಾಡಿದ್ದು ನಾನು, ಭಾಗ್ಯಗಳು, ಗ್ಯಾರೆಂಟಿ ಯೋಜನೆಗಳನ್ನು ಮಾಡಿರೋದು ಯಾರಿಗೆ, ಬಡವರಿಗೆ ದಲಿತರಿಗೆ ಹಿಂದುಳಿದವರಿಗೆ ಇದು ಅಹಿಂದಕ್ಕಾಗಿ ಅಲ್ವಾ? ಅಹಿಂದಕ್ಕೆ ಅವರದ್ದೇನು ಕೊಡುಗೆ? ರೈತರ ಮಗನ ಮಗ ಮಗ ಅಷ್ಟೇ ಅಲ್ವಾ? ಮೇಕೆದಾಟಿಗೆ ಒಪ್ಪಿಗೆ ಕೊಡೊಸೋಕೆ ಅವರಿಗೆ ಆಗಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.
ಹಾಸನದಲ್ಲಿ ಇಂದು ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಜಿಎಸ್‌ಟಿ ಕಡಿಮೆ ಮಾಡಿದ್ದಕ್ಕೆ ನಮಗೆ ನಷ್ಟ ಎಷ್ಟು ಗೊತ್ತಾ? ಜಿಎಸ್‌ಟಿ ತಂದಿದ್ದು ನರೇಂದ್ರ ಮೋದಿಯವರು, ಮಧ್ಯದಲ್ಲಿ ಅದನ್ನು ಕಡಿಮೆ ಮಾಡಿದ್ದಾರೆ. ಶೇ.12% ಗ್ರೋತ್ ಇತ್ತು, ಈಗ 3% ಗೆ ಬಂದಿದೆ, ಇದನ್ನೆಲ್ಲಾ ನೀವು ಕೇಳೋದೆ ಇಲ್ಲ. ಭದ್ರ ಮೇಲ್ದಂಡೆ ಯೋಜನೆಗೆ ಮಿಸಸ್ ನಿರ್ಮಲಾ ಸೀತಾರಾಮನ್ ಹೇಳಿದ್ಲು, ಏಕವಚನದಲ್ಲೇ ಸಿಎಂ ವಾಗ್ದಾಳಿ ನಡೆಸಿದ್ದಾರೆ.

ಬಜೆಟ್ ನಲ್ಲೂ ಅದು ಪಾಸ್ ಆಗಿದೆ, ಇದರಬಗ್ಗೆ ಮೇಕೆದಾಟು ಬಗ್ಗೆ ಕುಮಾರಸ್ವಾಮಿ ಮಾತನಾಡಿದ್ದಾರಾ? ನಮ್ಮ ನೆರವಿಗೆ ಬಂದಿದ್ದು ನ್ಯಾಯಾಲಯ. ಕಾವೇರಿ ಅಥಾರಿಟಿಯಲ್ಲಿ ಇವತ್ತಿನವರೆಗೆ ಪಾಸ್ ಮಾಡೋದಕ್ಕೆ ಆಗಿಲ್ಲ. ಇದು ಯಾರಿಗೆ ಅನ್ಯಾಯ ಇದು ಮಂಡ್ಯಕ್ಕೆ ಅನ್ಯಾಯ ಅಲ್ವಾ? ಜಿಎಸ್‌ಟಿನಲ್ಲಿ12 ಸಾವಿರ ಕೋಟಿ ನಷ್ಟ ಆಗಬಹುದು ಎಂಬ ನಿರೀಕ್ಷೆ ಇದೆ. 88 ಸಾವಿರ ಕೋಟಿ ತಲುಪೋದು ಕೂಡ ಕಷ್ಟ ಆಗುತ್ತಿದೆ ಎಂದರು.
ಸಿದ್ದರಾಮಯ್ಯ ಅಹಿಂದಾಕ್ಕೆ ಏನು ಮಾಡಿದ್ದರು.. ಇದನ್ನೆಲ್ಲಾ ಯಾರು ಮಾಡಿರೋದು, ಇದರ ಬಗ್ಗೆ ಯಾವತ್ತಾದ್ರೂ ಪಾರ್ಲಿಮೆಂಟ್‌ನಲ್ಲಿ ಮಾತಾನಾಡಿದ್ದಾರಾ? ನಾವು ಗ್ಯಾರೆಂಟಿಗಾಗಿ ಲಕ್ಷ ಕೋಟಿ ಹಣ ನೀಡಿದ್ದೇವೆ. ಬೇಕಿದ್ದರೆ ವೆರಿಫಿಕೇಷನ್ ಮಾಡಲಿ, ಮೋದಿ ಈ ಯೋಜನೆಯನ್ನು ನೀಡೋದಕ್ಕೆ ಆಗೊಲ್ಲ ಎಂದು ಹೇಳಿದರು.

ಕರ್ನಾಟಕ ಆರ್ಥಿಕ ದಿವಾಳಿ ಆಗುತ್ತದೆ ಎಂದು ಹೇಳಿದ್ದರು. ಈಗ ನಾವು ಕೊಟ್ಟಿಲ್ವಾ ಎಂದ ಸಿಎಂ, ಯಾವ ಅವುಶ್ವಾಸವಾದರೂ ತರಲಿ ಏನಾದರೂ ತರಲಿ. ನಾವು ಎದುರೊಸೋದಕ್ಕೆ ತಯಾರಾಗಿದ್ದೇವೆ ಎಂದು ತಿಳಿಸಿದರು.
Hassan
ಪಂಚ ಗ್ಯಾರಂಟಿಗಳನ್ನು ವಿರೋಧಿಸುತ್ತಿರುವವರಿಗೆ ಜನರೇ ಉತ್ತರ ನೀಡಬೇಕು: ಸಿಎಂ ಸಿದ್ದರಾಮಯ್ಯ
ಹಾಸನ: ರಾಜ್ಯ ಸರ್ಕಾರ ಜಾರಿಗೆ ತಂದಿರುವ ಪಂಚ ಗ್ಯಾರಂಟಿಗಳನ್ನು ವಿರೋಧಿಸುತ್ತಿರುವವರಿಗೆ ಜನರೇ ಉತ್ತರ ನೀಡಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ನಗರದ ಎಂಜಿನಿಯರಿಂಗ್ ಕಾಲೇಜು ಆವರಣದಲ್ಲಿ ಶನಿವಾರ ನಡೆದ ಸರ್ಕಾರಿ ಸೇವೆ ಸಮರ್ಪಣಾ ಸಮಾವೇಶದಲ್ಲಿ ಮಾತನಾಡಿದ ಅವರು, ನಾವು 2023 ರ ಚುನಾವಣೆಯಲ್ಲಿ ಒಟ್ಟು 492 ಭರವಸೆ ನಿಡಿದ್ದೆವು. ನಾವು ಅದಿಕಾರಕ್ಕೆ ಬಂದು 2 ವರ್ಷ ಆರು ತಿಂಗಳು ತಿಂಬಿದೆ. ಈ ಅವಧಿಯಲ್ಲಿ 242 ಭರವಸೆಗಳನ್ನು ಈಡೇರಿಸಿದ್ದೇವೆ. 2013-18 ರಲ್ಲಿ 163 ಭರವಸೆ ನೀಡಿದ್ದೆವು. ಅದರಲ್ಲಿ 158 ಭರವಸೆ ಈಡೇರಿಸಿದ್ದೇವೆ.ಪ್ರಮುಖವಾಗಿ ಪಂಚ ಗ್ಯಾರಂಟಿಗಳನ್ನು ನೀಡಿದ್ದೆವು. ಅದರಲ್ಲಿ ಶಕ್ತಿ ಯೋಜನೆಯಡಿ ಸಮಾರು 600 ಕೋಟಿಗೂ ಹೆಚ್ಚು ಮಹಿಳಯರು ಬಸ್ ಗಳಲ್ಲಿ ಉಚಿತವಾಗಿ ಪ್ರಯಾಣಿಸಿದ್ದಾರೆ ಎಂದು ತಿಳಿಸಿದರು.

ಹಾಸನ ನನಗೆ ಪಕ್ಕದ ಜಿಲ್ಲೆ ನನಗೆ ಇಲ್ಲಿನ ರಾಜಕೀಯ ಹಾಗೂ ಸಮಸ್ಯೆಗಳು ಗೊತ್ತು. ನಾವು ಇಲ್ಲಿನ ಸಮಸ್ಯೆಗಳನ್ನು ಸಕಷ್ಟು ಬಗೆಹರಿಸಿದ್ದೇನೆ.
ಹೇಮಾವತಿ ಜಲಾಶಯದ ಕೆಳಗೆ 700 ಎಕರೆ ಜಾಗ ಇದ್ದು ಬೃಂದಾವನ ಮಾದರಿಯಲ್ಲಿ ಉದ್ಯಾನವನ ನಿರ್ಮಾಣಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಕೃಷ್ಣಬೈರೇಗೌಡ ಅವರು ಮನವಿ ಮಾಡಿದ್ದಾರೆ. ನಮ್ಮ ಸರ್ಕಾರ ಉದ್ಯಾನವನ ನಿರ್ಮಾಣಕ್ಕೆ ಪ್ರಾಮಾಣಿಕ ಪ್ರಯತ್ನ ಮಾಡುತ್ತೇವೆ. ನಾನು ಮಾತು ಕೊಡೊಲ್ಲ ಕೊಟ್ಟ ಮೇಲೆ ಮಾಡೇ ಮಾಡುತ್ತೇವೆ.
ಕರ್ನಾಟಕ ಇತಿಹಾಸದಲ್ಲಿ ಕೊಟ್ಟ ಮಾತಿನಂತೆ ನಡೆದುಕೊಂಡಿರುವ ಸರ್ಕಾರವಿದ್ದರೆ ಅದು ನಮ್ಮ ಕಾಂಗ್ರೆಸ್ ಸರ್ಕಾರ ಎಂದು ಹೇಳಿದರು.

ನಾವು ಒಂದು ವರ್ಷದೊಳಗೆ ಎಲ್ಲಾ ಐದು ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಿದೆವು. ಲೋಕಸಭಾ ಚುನಾವಣೆ ಬಳಿಕ ಎಲ್ಲಾ ಗ್ಯಾರಂಟಿಗಳನ್ನು ನಿಲ್ಲಿಸುತ್ತಾರೆ ಎಂದು ವಿರೋಧ ಪಕ್ಷಗಳು ಆರೋಪಿಸಿದವು. ಆದರೆ ನಾವು ಇಂದಿಗೂ ಗ್ಯಾರಂಟಿ ಯೋಜನೆಗಳನ್ನು ಯಶಸ್ವಿಯಾಗಿ ಮುಂದುವರೆಸುತ್ತಿದ್ದೇವೆ ಎಂದು ಹೇಳಿದರು.
ಅಂಬೇಡ್ಕರ್ ಅವರು ಸಂವಿಧಾನದಲ್ಲಿ ಸ್ವಾತಂತ್ರ್, ಸಮಾನತೆ ಮತ್ತು ಭ್ರಾತೃತ್ವ ಬಗ್ಗೆ ಹೇಳಿದ್ದಾರೆ. ಅದರಂತೆ ನಮ್ಮ ಸರ್ಕಾರ ಕೂಡ ನಡೆದುಕೊಳ್ಳುತ್ತಿದೆ. ಸಮಾಜದಲ್ಲಿ ಅಸಮಾನತೆ ಹೋಗಿ ಸಮಾನತೆ ಬರಬೇಕು, ದೇಶದಲ್ಲ ಇನ್ನೂ ಸಮಾನತೆ ಸಿಕ್ಕಿಲ್ಲ. ಇದಕ್ಕೆ ಪ್ರಮುಖ ಕಾರಣ ಜಾತಿ ವ್ಯವಸ್ಥೆ. ಎಲ್ಲಿಯವರೆಗೂ ಅಸಮಾನತೆಯನ್ನು ತೊಡೆದು ಹಾಕಲ್ಲ ಅಲ್ಲಿಯವರೆಗೂ ಸಮಾನತೆ ಬರಲು ಸಾದ್ಯವಿಲ್ಲ. ನಮ್ಮ ಸರ್ಕಾರ ಪಂಚ ಗ್ಯಾರಂಟಿ ಮೂಲಕ ಸಮಾತೆ ತರಲು ಪ್ರಯತ್ನಿಸುತ್ತಿದೆ ಎಂದು ಹೇಳಿದರು.

ನಮ್ಮ ಸರ್ಕಾರ ಯಾವತ್ತೂ ಸಂವಿಧಾನ ಪರವಾಗಿರುವ ಸರ್ಕಾರ, ರೈತರ, ಬಡವರ, ದೀನ ದಲಿತರ, ಕಾರ್ಮಿಕರ ಪರ ಇರುವ ಸರ್ಕಾರ ಎಂದು ತಿಳಿಸಿದರು.
-
State7 hours agoಡಿವೈಡರ್ಗೆ ಕಾರ್ ಡಿಕ್ಕಿ, ಹೊತ್ತಿ ಉರಿದ ಕಾರಿನೊಳಗೆ ಲೋಕಾಯುಕ್ತ ಇನ್ಸ್ಪೆಕ್ಟರ್ ಸಜೀವ ದಹನ
-
Hassan4 hours agoನಗರದ ಇಂಜಿನಿಯರ್ ಕಾಲೇಜು ಆವರಣದಲ್ಲಿ ಸರ್ಕಾರಿ ಸೇವೆಗಳ ಸಮರ್ಪಣ ಸಮಾವೇಶ
-
State20 hours agoSSLC ಪಾಸ್ ಆದವರಿಗೆ ಸರ್ಕಾರಿ ನೌಕರಿ ಚಾನ್ಸ್! ಸಂಪೂರ್ಣ ಮಾಹಿತಿ ಇಲ್ಲಿದೆ…
-
Chikmagalur24 hours agoಬಿಜಿಎಸ್: ಚಿತ್ರಕಲೆಯಲ್ಲಿ ವರೇಣ್ಯ ಜಿಲ್ಲಾಮಟ್ಟಕ್ಕೆ ಆಯ್ಕೆ
-
Chikmagalur22 hours agoವಿದ್ಯಾರ್ಥಿಗಳಿಗೆ ಉಚಿತ ಪಠ್ಯ ನೋಟ್ ಪುಸ್ತಕ ವಿತರಣೆ, ಮುಂದಿನ ಶೈಕ್ಷಣಿಕ ವರ್ಷದಿಂದ ಅನುಷ್ಠಾನ: ಮಧು ಬಂಗಾರಪ್ಪ
-
Mysore22 hours agoನಾಳೆಯಿಂದ ಸಿಗ್ಮಾ ಆಸ್ಪತ್ರೆಯಲ್ಲಿ ಉಚಿತ ಥೈರಾಯ್ಡ್ ತಪಾಸಣೆ
-
National21 hours agoಪಲಾಶ್ ಮುಚ್ಚಲ್ರೊಂದಿಗೆ ಮದುವೆ ಮುಂದೂಡಿದ ನಂತರ ಮೊದಲ ಪೋಸ್ಟ್ ಹಂಚಿಕೆಕೊಂಡ ಸ್ಮೃತಿ ಮಂದಾನ
-
Hassan7 hours agoಅಂಬೇಡ್ಕರ್ ತತ್ತ್ವ, ಸಿದ್ಧಾಂತಗಳು ಶಾಶ್ವತ: ಸಂಸದ ಶ್ರೇಯಸ್ ಪಟೇಲ್
