Connect with us

Mandya

ಅನುಮಾನಾಸ್ಪದ ಸ್ಥಿತಿಯಲ್ಲಿ ಮಹಿಳೆ ಶವ ಪತ್ತೆ

Published

on

ನಾಗಮಂಗಲ: ತಾಲ್ಲೂಕಿನ ಇರುಬನಹಳ್ಳಿ ಗ್ರಾಮದ ಸಮೀಪದ ಗೊಲ್ಲರಹಟ್ಟಿಯ ಹೊರವಲಯದಲ್ಲಿ ಮುರ್ಗಮ್ಮ (30) ಎಂಬ ಮಹಿಳೆಯ ಶವ ಪತ್ತೆಯಾಗಿದೆ.

ಮೃತ ಮುರ್ಗಮ್ಮ ತಾಲ್ಲೂಕಿನ ತಿರುಮಲಾಪುರ ಗ್ರಾಮದ ನಿವಾಸಿಯಾಗಿದ್ದು, ಶನಿವಾರ ಮುರ್ಗಮ್ಮ ಮೃತ ದೇಹವನ್ನು ಕಂಡು ಸ್ಥಳೀಯರು ಬೆಳ್ಳೂರು ಪೊಲೀಸ್ ಠಾಣೆಗೆ ಮಾಹಿತಿ ನೀಡಿದ್ದಾರೆ. ಮಾಹಿತಿ ತಿಳಿದು ಸ್ಥಳಕ್ಕೆ ಆಗಮಿಸಿದ ಬೆಳ್ಳೂರು ಪೊಲೀಸರು ಪರಿಶೀಲನೆ ನಡೆಸಿ ಮೃತ ದೇಹವನ್ನು ಆದಿಚುಂಚನಗಿರಿ ವೈದ್ಯಕೀಯ ಆಸ್ಪತ್ರೆಗೆ ರವಾನಿಸಿ ಮರಣೋತ್ತರ ಪರೀಕ್ಷೆ ನಡೆಸಿದ್ದಾರೆ.ನಂತರ ಸಂಬಂಧ ಪಟ್ಟ ಕುಟುಂಬಸ್ಥರಿಗೆ ಮೃತ ದೇಹವನ್ನು ಹಸ್ತಾಂತರಿಸಿದ್ದಾರೆ. ಅಲ್ಲದೇ ಮರಣೋತ್ತರ ಪರೀಕ್ಷೆಯ ವರದಿ ಬಂದ ನಂತರ ಸಾವಿಗೆ ನಿಖರವಾದ ಕಾರಣ ತಿಳಿಯಲಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಅಲ್ಲದೇ ಘಟನೆಯ ಸಂಬಂಧ ಬೆಳ್ಳೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Continue Reading
Click to comment

Leave a Reply

Your email address will not be published. Required fields are marked *

Mandya

ಶ್ರೇಷ್ಠ ಭಾರತ ನಿರ್ಮಾಣಕ್ಕೆ ಕೈಜೋಡಿಸಿ

Published

on

ಮಂಡ್ಯ : “ಒಂದೇ ಭಾರತ, ಶ್ರೇಷ್ಠ ಭಾರತ ಮತ್ತು ಅಭಿವೃದ್ಧಿ ಹೊಂದಿದ ಭಾರತಕ್ಕಾಗಿ, ಮೇಡ್ ಇನ್ ಇಂಡಿಯಾ ಮತ್ತು ಮೇಕ್ ಇನ್ ಇಂಡಿಯಾ ಗುರಿಗಳನ್ನು ಸಾಧಿಸಲು ಕೊಡುಗೆ ನೀಡಿ ಮತ್ತು ದೇಶವನ್ನು ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನಾಗಿ ಮಾಡಲು ಪ್ರಯತ್ನಿಸಿ” ಎಂದು ವಿದ್ಯಾರ್ಥಿಗಳಿಗೆ ಕರ್ನಾಟಕದ ಗೌರವಾನ್ವಿತ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರು ಕರೆ ನೀಡಿದರು.

ಅವರು ಇಂದು ಅಂಬೇಡ್ಕರ್ ಭವನದಲ್ಲಿ ಆಯೋಜಿಸಲಾಗಿದ್ದ ಮಂಡ್ಯ ವಿಶ್ವವಿದ್ಯಾಲಯದ 3ನೇ ಘಟಿಕೋತ್ಸವದ ಅಧ್ಯಕ್ಷತೆ ವಹಿಸಿ ಮಾತನಾಡಿದರು. “ಈ ಘಟಿಕೋತ್ಸವ ಸಮಾರಂಭದಲ್ಲಿ ಪದವಿ ಪಡೆದ ಎಲ್ಲಾ ವಿದ್ಯಾರ್ಥಿಗಳಿಗೆ ಅಭಿನಂದನೆಗಳು ಮತ್ತು ಈ ವಿಶೇಷ ದಿನ. ಇದು ನಿಮ್ಮ ಜೀವನದ ಅತ್ಯಂತ ಅಮೂಲ್ಯ ಕ್ಷಣಗಳಲ್ಲಿ ಒಂದಾಗಿದೆ. ನಿಮ್ಮ ಜೀವನವನ್ನು ರೂಪಿಸುವಲ್ಲಿ ಗಣನೀಯ ಕೊಡುಗೆ ನೀಡಿದ ಈ ವಿಶ್ವವಿದ್ಯಾಲಯದ ಎಲ್ಲಾ ಶಿಕ್ಷಕರು, ಆಡಳಿತ ಸಿಬ್ಬಂದಿ ಮತ್ತು ಪೋಷಕರನ್ನು ಗೌರವಿಸಿ ಎಂದರು.

ಜೀವನದ ಯಶಸ್ಸಿನಲ್ಲಿ ಶಿಕ್ಷಣವು ಪ್ರಮುಖ ಪಾತ್ರ ವಹಿಸುತ್ತದೆ. ಶಿಕ್ಷಣವು ಜೀವನದ ಪ್ರತಿಯೊಂದು ಕ್ಷೇತ್ರದಲ್ಲೂ ಉಪಯುಕ್ತವಾಗಿದೆ. ಶಿಕ್ಷಣವು ಕೌಶಲ್ಯಗಳನ್ನು ಹೆಚ್ಚಿಸುತ್ತದೆ ಮತ್ತು ನಾವು ಆಸಕ್ತಿ ಹೊಂದಿರುವ ಕ್ಷೇತ್ರದಲ್ಲಿ ಕೌಶಲ್ಯಪೂರ್ಣರಾಗುವ ಮೂಲಕ ನಾವು ಉತ್ತಮ ಯಶಸ್ಸನ್ನು ಸಾಧಿಸಬಹುದು. ನಿಮ್ಮ ಶಿಕ್ಷಣದ ಜ್ಞಾನವನ್ನು ಯಾರು ಕದಿಯಲು ಸಾಧ್ಯವಿಲ್ಲ. ಜೀವನ ಪೂರ್ತಿ ಕಲಿಕೆ ನಿರಂತರವಾಗಿರಲಿ. ಇದು ನಿಮ್ಮ ಯಶಸ್ಸಿಗೆ ಹಾದಿಯಾಗಲಿದೆ ಎಂದು ಹೇಳಿದರು.

ಜಾಗತಿಕ ತಾಪಮಾನ ಏರಿಕೆ, ಹವಾಮಾನ ಬದಲಾವಣೆ, ಪರಿಸರ ಮಾಲಿನ್ಯದಂತಹ ಜಾಗತಿಕ ಸವಾಲುಗಳ ಹೆಚ್ಚಾಗುತ್ತಿವೆ. ಈ ಜಾಗತಿಕ ಸವಾಲುಗಳ ಪರಿಹಾರಕ್ಕೆ ಕೊಡುಗೆ ನೀಡಬೇಕು. ಪರಿಸರ ಮಾಲಿನ್ಯ ತಡೆಗಟ್ಟುವಲ್ಲಿ ಮುಂದಾಗಬೇಕು ಹಾಗೂ ಹಾಗೂ ಸಮಾಜಕ್ಕಾಗಿ ನಿಸ್ವಾರ್ಥ ಸೇವೆ ಮಾಡಬೇಕು ಎಂದು ತಿಳಿಸಿದರು.

ಪ್ರಾಚೀನ ಕಾಲದಲ್ಲಿ, ನಮ್ಮ ಶಿಕ್ಷಣ ವ್ಯವಸ್ಥೆ, ನಮ್ಮ ಜ್ಞಾನ, ವಿಜ್ಞಾನ ಕೊಡುಗೆಯೊಂದಿಗೆ, ಭಾರತವು ಧರ್ಮ, ಸಂಸ್ಕೃತಿ ಮತ್ತು ಆಧ್ಯಾತ್ಮಿಕತೆಯ ಕೇಂದ್ರವಾಗಿತ್ತು ಮತ್ತು ಬಲವಾದ ಆರ್ಥಿಕತೆಯಿಂದಾಗಿ ಆರ್ಥಿಕವಾಗಿ ಸಮೃದ್ಧವಾಗಿತ್ತು ಎಂಬ ಕಾರಣಕ್ಕಾಗಿ ನಮ್ಮ ಭಾರತವನ್ನು “ವಿಶ್ವ ಗುರು” ಮತ್ತು “ಸೋನೆ ಕಿ ಚಿಡಿಯಾ” ಎಂದು ಕರೆಯಲಾಗುತ್ತಿತ್ತು ಎಂದು ಎಲ್ಲರಿಗೂ ತಿಳಿದಿದೆ. ಪ್ರಾಚೀನ ಭಾರತೀಯ ಖಗೋಳಶಾಸ್ತ್ರಜ್ಞರು ಬ್ರಹ್ಮಾಂಡದ ವೈಜ್ಞಾನಿಕ ತತ್ವಗಳನ್ನು ಅರ್ಥಮಾಡಿಕೊಂಡರು. ಭಾರತೀಯ ಖಗೋಳಶಾಸ್ತ್ರದ ಬೇರುಗಳು ವೇದಗಳಲ್ಲಿ ಕಂಡುಬರುತ್ತವೆ. ಋಗ್ವೇದ, ಯಜುರ್ವೇದ, ಅಥರ್ವವೇದ ಮತ್ತು ಸಾಮವೇದಗಳಲ್ಲಿ ಖಗೋಳ ಘಟನೆಗಳನ್ನು ಉಲ್ಲೇಖಿಸಲಾಗಿದೆ. ಖಗೋಳಶಾಸ್ತ್ರದಿಂದ ಭೂವಿಜ್ಞಾನ, ಗಣಿತ, ವೈದ್ಯಕೀಯ ಮತ್ತು ಇತರ ಹಲವು ಕ್ಷೇತ್ರಗಳಲ್ಲಿ ಭಾರತೀಯರು ಗಮನಾರ್ಹ ಕೊಡುಗೆಗಳನ್ನು ನೀಡಿದ್ದಾರೆ. ಗಣಿತಶಾಸ್ತ್ರದಲ್ಲಿ, ಶೂನ್ಯ ಮತ್ತು ದಶಮಾಂಶ ಸಂಖ್ಯೆಗಳನ್ನು ಭಾರತೀಯ ಗಣಿತಜ್ಞರು ಮತ್ತು ಖಗೋಳಶಾಸ್ತ್ರಜ್ಞರು ಕಂಡುಹಿಡಿದಿದ್ದಾರೆ ಎಂದು ಹೇಳಿದರು.

ಪ್ರಸ್ತುತ ಜಗತ್ತು ವೇಗವಾಗಿ ಬದಲಾಗುತ್ತಿದೆ. ಕೃತಕ ಬುದ್ಧಿಮತ್ತೆ, ಡೇಟಾ ವಿಜ್ಞಾನ, ಸುಸ್ಥಿರ ಅಭಿವೃದ್ಧಿ ಮತ್ತು ಉದ್ಯಮಶೀಲತೆಯಂತಹ ಕ್ಷೇತ್ರಗಳು ನಮ್ಮ ಜೀವನದ ಮೇಲೆ ಪ್ರಭಾವ ಬೀರುತ್ತಿವೆ. ನೀವು ಯಾವಾಗಲೂ ಇತ್ತೀಚಿನ ತಂತ್ರಜ್ಞಾನಗಳು ಮತ್ತು ಆಲೋಚನೆಗಳೊಂದಿಗೆ ನಿಮ್ಮನ್ನು ನವೀಕರಿಸಿಕೊಳ್ಳಬೇಕು ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಪಶ್ಚಿಮ ಬಂಗಾಳದ ಕೋಲ್ಕತ್ತಾದ ಎನ್‌ಎಸ್‌ಎಚ್‌ಎಂ ಜ್ಞಾನ ಕ್ಯಾಂಪಸ್‌ನ ನಿರ್ದೇಶಕ ಪ್ರೊ.ಸೌಮೇಂದ್ರನಾಥ್ ಬಂಡೋಪಾಧ್ಯಾಯ, ಕುಲಪತಿ ಪ್ರೊ.ಕೆ.ಶಿವಚಿತಪ್ಪ, ಇತರ ಗಣ್ಯರು ಉಪಸ್ಥಿತರಿದ್ದರು.

Continue Reading

Mandya

ಶ್ರಮಜೀವಿ ರೈತರಿಗೆ ಭೂತಾಯಿ ಮೋಸ ಮಾಡುವುದಿಲ್ಲ : ಸಚಿವ ಎನ್.ಚಲುವರಾಯಸ್ವಾಮಿ

Published

on

ನಾಗಮಂಗಲ : ಶ್ರಮ ಜೀವಿ ರೈತರಿಗೆ ಭೂತಾಯಿ ಯಾವಾಗಲೂ ಮೋಸ ಮಾಡುವುದಿಲ್ಲ. ರೈತರ ಏಳಿಗೆಗಾಗಿ ಪ್ರತಿಫಲ ನೀಡುವ ಭೂಮಿಗೆ ನಾವುಗಳು ಚಿರಋಣಿಯಾಗಿ ಇರಬೇಕೆಂದು ಸಚಿವ ಎನ್.ಚೆಲುವರಾಯಸ್ವಾಮಿ ತಿಳಿಸಿದರು.

ಅವರು ತಾಲೂಕು ದೇವಲಾಪುರ ಹೋಬಳಿ ಕೇಂದ್ರದಲ್ಲಿ ದೇವಲಾಪುರ ರೈತ ಉದ್ಪಾದಕರ ಕಂಪನಿಯ ನೂತನ ಕಟ್ಟಡದ ಗುದ್ದಲಿ ಪೂಜೆ ನೆರವೇರಿಸಿ ಮಾತನಾಡಿದರು.

ಕೃಷಿ ಇಲಾಖೆಯ ಸಹಯೋಗದಲ್ಲಿ ಕೃಷಿ ಪೂರಕ ಸಂಸ್ಥೆಗಳು ಇದ್ದು, ರೈತರು ಇದರ ಪ್ರಯೋಜನ ಪಡೆದುಕೊಳ್ಳುವ ಮುಖಾಂತರ ಆರ್ಥಿಕವಾಗಿ ಸದೃಢರಾಗಬೇಕು ಎಂದರು.

ತಾವೇ ಉತ್ಪಾದಕ ಕಂಪನಿಗಳ ನಿರ್ವಹಣೆ ಮಾಡುವ ವ್ಯವಸ್ಥೆ ಇದ್ದರೆ ಸರ್ಕಾರದಿಂದ ರಿಯಾಯಿತಿ ದರದಲ್ಲಿ ಸಾಲ ಸೌಲಭ್ಯ ಸಿಗಲಿದ್ದು, ರೈತರು ಇಂತಹ ಕೃಷಿ ಪೂರಕ ವ್ಯವಸ್ಥೆಗಳಿಗೆ ಹಾಗೂ ಕೃಷಿ ಭೂಮಿಯ ಬೆಳವಣಿಗೆ ಮಾಡಲು ಅನೇಕ ಯೋಜನೆಗಳು ರೂಪಿಸಿದ್ದು ಕೃಷಿ ಅವಲಂಬಿತ ರೈತರು ಸದ್ಬಳಕೆ ಮಾಡಿಕೊಳ್ಳಬೇಕು ಎಂದು ಹೇಳಿದರು.

ಸಮಾರಂಭದ ಅಧ್ಯಕ್ಷತೆಯನ್ನು ರೈತ ಉತ್ಪಾದಕರ ಸಂಘದ ಅಧ್ಯಕ್ಷರಾದ ಹಾಗೂ ರಾಜ್ಯ ನಿರ್ದೇಶಕರಾದ. ರಾಜೇಶ್ ವಹಿಸಿ ಮಾತನಾಡಿದರು.ಕಾರ್ಯಕ್ರಮದಲ್ಲಿ ಪಾಂಡವಪುರ ಉಪ ವಿಭಾಗಾಧಿಕಾರಿ ಶ್ರೀನಿವಾಸ್ ತಹಸೀಲ್ದಾರ್ ಆದರ್ಶ್, ಜಿಲ್ಲಾ ಕೃಷಿ ಜಂಟಿ ನಿರ್ದೇಶಕ ಅಶೋಕ್, ಕೃಷಿ ಉಪ ನಿರ್ದೇಶಕ ಭಾನುಪ್ರಕಾಶ್, ಸಹಾಯಕ ಕೃಷಿ ನಿರ್ದೇಶಕರಾದ ಹರೀಶ್, ಕಾರಸವಾಡಿ ಮಹದೇವ, ನೇಗಿಲು ಯೋಗಿ ಬಸವರಾಜು ಗ್ರಾಮ ಪಂಚಾಯಿತಿ ಸದಸ್ಯ ರಮೇಶ್, ರೈತ ಉತ್ಪಾದಕರ ಸಂಘದ ಅಧ್ಯಕ್ಷರುಗಳು ನಿರ್ದೇಶಕರುಗಳು ಉಪಸ್ಥಿತರಿದ್ದರು.

ಇದೇ ಸಂದರ್ಭದಲ್ಲಿ ಸಚಿವರು ಕರಡಹಳ್ಳಿ ಗ್ರಾಮದಲ್ಲಿ ನೂತನವಾಗಿ ಪಶು ಸಂಗೋಪನ ಚಿಕಿತ್ಸಾಲಯ ಉದ್ಘಾಟನೆ ಹಾಗೂ ದೇವಲಾಪುರ ಹ್ಯಾಂಡ್ ಪೋಸ್ಟ್ ಪಾಲಿಟೆಕ್ನಿಕ್ ಪ್ರಯೋಗಾಲಯ ಹಾಗೂ ಪ್ರಥಮ ದರ್ಜೆ ಕಾಲೇಜು ವಿವಿಧ ಕಾಮಗಾರಿಗಳಿಗೆ ಗುದ್ದಲಿ ಪೂಜೆ ನೆರವೇರಿಸಿ ಅರೆ ಅಲ್ಪಹಳ್ಳಿ ಗ್ರಾಮದಲ್ಲಿ ಹಾಲು ಉತ್ಪಾದಕರ ಸಹಕಾರ ಸಂಘದ ಗುದ್ದಲಿ ಪೂಜೆ ಹಾಗೂ ಅಲ್ಪಹಳ್ಳಿ ಗ್ರಾಮದಲ್ಲಿ ಸಮುದಾಯ ಭವನ ಭೂಮಿ ಪೂಜೆ ನೆರವೇರಿಸಿದರು.

Continue Reading

Mandya

ನಮ್ಮ ಬದುಕಿನ ಸಾರ್ಥಕತೆಗೆ ದೇವರಲ್ಲಿ ನಮ್ಮ ಮನಸ್ಸು ಕೇಂದ್ರೀಕೃತವಾಗಿರಬೇಕು: ಶ್ರೀ ಸೋಮನಾಥ ಸ್ವಾಮೀಜಿ

Published

on

ನಾಗಮಂಗಲ : ನಮ್ಮ ಸಾರ್ಥಕ ಬದುಕಿಗೆ ಭಗವಂತನಲ್ಲಿ ನಮ್ಮ ಮನಸ್ಸು ಕೇಂದ್ರೀಕೃತವಾಗಿರಬೇಕು ಎಂದು ಶ್ರೀ ಕ್ಷೇತ್ರ ಆದಿಚುಂಚನಗಿರಿ ಮೈಸೂರು ಶಾಖ ಮಠದ ಶ್ರೀ ಸೋಮನಾಥ ಸ್ವಾಮೀಜಿ ತಿಳಿಸಿದರು.

ಅವರು ಪಟ್ಟಣದಲ್ಲಿರುವ 800 ವರ್ಷಗಳ ಇತಿಹಾಸವುಳ್ಳ ರೇಣುಕಾ ಎಲ್ಲಮ್ಮ ದೇವಿ ದೇವಸ್ಥಾನದ ಗರ್ಭಗುಡಿಯ ಜೀರ್ಣೋದ್ಧಾರ ಮತ್ತು ಕಳಸ ಪ್ರತಿಷ್ಠಾಪನೆ ಮತ್ತು ಪ್ರಾಣ ಪ್ರತಿಷ್ಠಾಪನ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.

ನಮ್ಮ ಬದುಕಿನ ಸಾರ್ಥಕತೆಗೆ ನಾವು ದೇವರಲ್ಲಿ ನಮ್ಮಮನಸ್ಸನ್ನು ಕೇಂದ್ರೀಕೃತವಾಗಿ ಇಟ್ಟಿರಬೇಕು. ಇದು ನಮಗೆ ಕೊಟ್ಟಿರುವಂತಹ ಒಂದು ಅವಕಾಶಗಳು. ಇದು ನಮ್ಮ ಋಷಿಮುನಿಗಳು ನಮಗೆ ನೀಡಿರುವಂತಹ ಒಂದು ಸಾರ್ಥಕ ಬದುಕಿನ ಮಾರ್ಗ ಎಂದರು.

ಇದೇ ಸಂದರ್ಭದಲ್ಲಿ ದೇವಾಲಯ ಸಮಿತಿಯ ಅಧ್ಯಕ್ಷರು ಸದಸ್ಯರು ಭಕ್ತಾದಿಗಳು ಉಪಸ್ಥಿತರಿದ್ದು ಶ್ರೀ ಗಳಿಂದ ಆಶೀರ್ವಾದ ಪಡೆದರು.

Continue Reading

Trending

error: Content is protected !!