Chikmagalur
ಮಲೆನಾಡಿನ ಜನರ ಆರೋಗ್ಯವನ್ನು ಕಾಪಾಡುವ ನಿಟ್ಟಿನಲ್ಲಿ ನೂತನ ಕಟ್ಟಡ

ಚಿಕ್ಕಮಗಳೂರು: ಮಲೆನಾಡಿನ ಜನರ ಆರೋಗ್ಯವನ್ನು ಕಾಪಾಡುವ ನಿಟ್ಟಿನಲ್ಲಿ ನೂತನವಾಗಿ ಹೊರ ರೋಗಿಗಳ ಕಟ್ಟಡವನ್ನು ನಿರ್ಮಿಸಲಾಗಿದೆ ಎಂದು ಇಂಧನ ಮತ್ತು ಚಿಕ್ಕಮಗಳೂರು ಜಿಲ್ಲಾ ಉಸ್ತುವಾರಿ ಸಚಿವ ಕೆ.ಜೆ. ಜಾರ್ಜ್ ಹೇಳಿದರು.
ಜಿಲ್ಲಾ ಪಂಚಾಯತ್, ವೈದ್ಯಕೀಯ ಶಿಕ್ಷಣ ಇಲಾಖೆ ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಚಿಕ್ಕಮಗಳೂರು ಇವರುಗಳ ಸಂಯುಕ್ತ ಆಶ್ರಯದಲ್ಲಿ ಅರಳುಗುಪ್ಪೆ ಮಲ್ಲೇಗೌಡ ಜಿಲ್ಲಾ ಆಸ್ವತ್ರೆ ಆವರಣದಲ್ಲಿ ನೂತನವಾಗಿ ನಿರ್ಮಿಸಿರುವ ಹೊರ ರೋಗಿಗಳ ವಿಭಾಗದ ನೂತನ ಕಟ್ಟಡದ ಉದ್ಘಾಟನೆಯನ್ನು ನೆರವೇರಿಸಿ ಅವರು ಹೇಳಿದರು.
ಚಿಕ್ಕಮಗಳೂರು ಹಚ್ಚ ಹಸಿರಿನಿಂದ ಕೂಡಿರುವ ಪ್ರವಾಸಿಗರ ತಾಣ, ಇಲ್ಲಿನ ಜನರು ಕೂಡ ಅಷ್ಟೇ ಮುಗ್ಧ ಮನಸ್ಸಿನವರು.ಇಲ್ಲಿರುವ ಸರ್ಕಾರಿ ಆಸ್ಪತ್ರೆ ಜನರ ಹಿತಕ್ಕಾಗಿ ನಿರ್ಮಿತವಾಗಿದೆ. ಇಲ್ಲಿ ಸಾಕಷ್ಟು ರೋಗಿಗಳು ಚಿಕಿತ್ಸೆ ಪಡೆದು ಗುಣಮುಖರಾಗಿದ್ದಾರೆ. ಇಂತಹ ಆಸ್ಪತ್ರೆಗೆ ಯಾವುದೇ ಸೌಲಭ್ಯದ ಕೊರತೆ ಇಲ್ಲದಂತೆ ನೋಡಿಕೊಳ್ಳುವ ಜವಬ್ದಾರಿ ನಮ್ಮೆಲ್ಲರದು. ಹಾಗೇ ಜನರ ಹಿತವನ್ನು ಕಾಪಾಡುವ ನಿಟ್ಟಿನಲ್ಲಿ ನೂತನವಾಗಿ ಹೊರ ರೋಗಿಗಳ ಕಟ್ಟಡವನ್ನು ನಿರ್ಮಿಸಲಾಗಿದೆ ಇದನ್ನು ಜನರು ಸದುಪಯೋಗ ಪಡಿಸಿಕೊಂಡು ತಮ್ಮ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಿ ಎಂದು ಹೇಳಿದರು.
ಚಿಕ್ಕಮಗಳೂರು ವಿಧಾನ ಸಭಾ ಕ್ಷೇತ್ರದ ಶಾಸಕ ಹೆಚ್.ಡಿ. ತಮ್ಮಯ್ಯ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮದಲ್ಲಿ ಕರ್ನಾಟಕ ನವೀಕರಿಸಬಹುದಾದ ಇಂಧನ ಅಭಿವೃದ್ಧಿ ನಿಗಮದ ಅಧ್ಯಕ್ಷರು ಹಾಗೂ ಶೃಂಗೇರಿ ವಿಧಾನಸಭಾ ಕ್ಷೇತ್ರದ ಶಾಸಕ ಟಿ.ಡಿ. ರಾಜೇಗೌಡ, ಎಂಎಲ್ಸಿ ಸಿ.ಟಿ. ರವಿ, ಭದ್ರಾ ಕಾಡಾ ಶಿವಮೊಗ್ಗ ಅಧ್ಯಕ್ಷ ಡಾ. ಅಂಶುಮಂತ್, ನಗರಸಭೆ ಅಧ್ಯಕ್ಷೆ ಸುಜಾತ ಶಿವಕುಮಾರ್, ಕ.ರಾ. ಕೃಷಿ ಉತ್ಪನ್ನ ಸಂಸ್ಕರಣೆ ಮತ್ತು ರಫ್ತು ನಿಗಮ ಅಧ್ಯಕ್ಷ ಬಿ.ಹೆಚ್. ಹರೀಶ್, ಜಿಲ್ಲಾ ಗ್ಯಾರಂಟಿ ಯೋಜನೆ ಅಧ್ಯಕ್ಷ ಶಿವಾನಂದ ಸ್ವಾಮಿ, ಜಿಲ್ಲಾ ಪೊಲೀಸ್ ಅಧೀಕ್ಷ ಡಾ.ವಿಕ್ರಮ್ ಅಮಟೆ, ಜಿ.ಪಂ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಹೆಚ್.ಎಸ್ ಕೀರ್ತಾನ, ವೈದ್ಯಕೀಯ ವಿಜ್ಞಾನ ಸಂಸ್ಥೆಗಳ ಹಾಗೂ ನಿದೇಶಕ ಡಾ ಹರೀಶ್ ಎಂ.ಆರ್., ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಅಶ್ವತ್ ಬಾಬು, ಜಿಲ್ಲಾ ಸರ್ಜನ್ ಡಾ ಮೋಹನ್ ಕುಮಾರ್., ವೈದ್ಯರು, ವಿದ್ಯಾರ್ಥಿಗಳು, ಮುಂತಾದವರು ಉಪಸ್ಥಿತರಿದ್ದರು
Chikmagalur
ಅಪ್ರಾಪ್ತನಿಂದ ದ್ವಿಚಕ್ರ ವಾಹನ ಚಾಲನೆ: ಪೋಷಕರಿಗೆ 25 ಸಾವಿರ ರೂ ದಂಡ.

ಚಿಕ್ಕಮಗಳೂರು : ಮೂಡಿಗೆರೆ ಪಟ್ಟಣದ ಬಾಪು ನಗರದಲ್ಲಿ ಅಪ್ರಾಪ್ತ ಬಾಲಕನೋರ್ವ ಸ್ಕೂಟಿ ಚಾಲನೆ ಮಾಡುತ್ತಿದ್ದಾಗ ಮೂಡಿಗೆರೆ ಪೊಲೀಸರು ದ್ವಿಚಕ್ರ KA18 EC2707 ಸಂಖ್ಯೆಯ ಸ್ಕೂಟಿಯನ್ನು ವಶಕ್ಕೆ ಪಡೆದು ದಂಡ ವಿಧಿಸಿದರು.
ಬಾಲಕನ ಪೋಷಕರಾದ ಮೊಹಮ್ಮದ್ ಸಿರಾಜ್ ಮೇಲೆ ಪ್ರಕರಣ ದಾಖಲಾಗಿದ್ದು ವಿಚಾರಣೆ ನಡೆಸಿ ಮೂಡಿಗೆರೆ ಸಿವಿಲ್ ಜಡ್ಜ್ ಮತ್ತು ಜೆಎಂಎಫ್‌ಸಿ ನ್ಯಾಯಾಧೀಶರು ತೀರ್ಪು ನೀಡಿತು.
Chikmagalur
ಜನಿವಾರ ತೆಗೆಸಿರುವುದು ಖಂಡನೀಯ

ಜಯಪುರ : ಎರಡು ದಿನಗಳ ಹಿಂದೆ ರಾಜ್ಯದಾದ್ಯಂತ ನಡೆದ ವೃತ್ತಿಪರ ಕೋರ್ಸ್ ಗಳ ಸಿ ಇ ಟಿ ಪರೀಕ್ಷೆಯ ದಿನದಂದು ಪರೀಕ್ಷಾ ಅಧಿಕಾರಿಗಳು ಬ್ರಾಹ್ಮಣ ವಿದ್ಯಾರ್ಥಿಗಳ ಜನಿವಾರವನ್ನು ತೆಗೆಸಿದ್ದಲ್ಲದೆ ತೆಗೆಯಲು ಒಪ್ಪದ ವಿದ್ಯಾರ್ಥಿಯೊಬ್ಬನಿಗೆ ಪರೀಕ್ಷೆಯಲ್ಲಿ ಕುಳಿತುಕೊಳ್ಳಲು ಅವಕಾಶವನ್ನೇ ನೀಡದ ಘಟನೆ ನಡೆದಿರುತ್ತದೆ. ಕೆಲವು ವಿದ್ಯಾರ್ಥಿಗಳ ಜನಿವಾರವನ್ನು ಕತ್ತರಿಸಿ ಹಾಕಿದ ಕೃತ್ಯವೂ ನಡೆದಿರುತ್ತದೆ. ಇಂತಹ ಅಮಾನವೀಯ ಕೃತ್ಯವನ್ನು ನಮ್ಮ ಸಮಾಜ ವಿರೋಧಿಸುತ್ತದೆ ಎಂದು ಶೃಂಗೇರಿ ಶಿಷ್ಯ ಮಲೆನಾಡು ಹೆಬ್ಬಾರ ಬ್ರಾಹ್ಮಣ ಮಹಾಸಭಾ (ರಿ.)ದ ಕೇಂದ್ರೀಯ ಆಡಳಿತ ಮಂಡಳಿ ಅಧ್ಯಕ್ಷರಾದ ವಿಜಯರಂಗ ಕೋಟೆತೋಟ ಪತ್ರಿಕೆಗೆ ತಿಳಿಸಿದರು.
ನಮ್ಮ ದೇಶದಲ್ಲಿ ಪ್ರತಿಯೊಬ್ಬರಿಗೂ ಧಾರ್ಮಿಕ ಸ್ವಾತಂತ್ರ್ಯ ಇರುತ್ತದೆ, ಬ್ರಾಹ್ಮಣ್ಯದ ಸಂಕೇತವಾಗಿರುವ ಜನಿವಾರವನ್ನು ಉಪನಯನದ ಸಂದರ್ಭದಲ್ಲಿ ಧರಿಸಿದ ನಂತರ ಸಾಯುವವರೆಗೂ ಇಟ್ಟುಕೊಳ್ಳಬೇಕಾಗುತ್ತದೆ. ಬೇರೆ ಬೇರೆ ಕಾರಣಗಳಿಗೆ ಮಧ್ಯದಲ್ಲಿ ಬದಲಾಯಿಸಬಹುದು ಅಷ್ಟೇ, ಜನಿವಾರವನ್ನು ತೆಗೆಸಿರುವ ಈ ಕೃತ್ಯ ಅತ್ಯಂತ ಹೀನಾಯ ಮತ್ತು ಬ್ರಾಹ್ಮಣರ ಮೇಲೆ ನಡೆದಿರುವ ದೌರ್ಜನ್ಯ ಎಂದೇ ಪರಿಗಣಿಸಬೇಕಾಗುತ್ತದೆ.
ಸರಕಾರ ಮತ್ತು ಸಂಬಂಧಪಟ್ಟ ಇಲಾಖೆ ಈ ಕೂಡಲೇ ಇಂತಹ ದೌರ್ಜನ್ಯವನ್ನು ಎಸಗಿದ ಅಧಿಕಾರಿಗಳನ್ನು ಅಮಾನತು ಮಾಡುವುದಲ್ಲದೆ ಶಿಕ್ಷಣ ಇಲಾಖೆಯು ಬ್ರಾಹ್ಮಣ ಸಮಾಜದ ಕ್ಷಮಾಪಣೆಯನ್ನು ಕೇಳಬೇಕಾಗಿ ಆಗ್ರಹಿಸುತ್ತೇವೆ. ಇಂತಹ ಕೃತ್ಯ ಮುಂದೆ ಯಾವತ್ತೂ ನಡೆಯದಂತೆ ಬಂದೋಬಸ್ತ್ ಮಾಡಬೇಕಾಗಿ ಕೇಳಿಕೊಳ್ಳುತ್ತೇವೆ ಎಂದು ತಿಳಿಸಿದರು.
ವರದಿ :-ಎಂ.ಪಿ.ಪ್ರದೀಪ್ ಹೆಬ್ಬಾರ್, ಜಯಪುರ.
Chikmagalur
ಚಿಕ್ಕಮಗಳೂರು : ಕಳೆದ ಕೆಲವು ದಿನಗಳಿಂದ ಚಾರ್ಮಾಡಿ ಘಾಟಿಯಲ್ಲಿ ಕಾಣಿಸಿಕೊಳ್ಳುತ್ತಿರುವ ಒಂಟಿ ಸಲಗ

ಚಿಕ್ಕಮಗಳೂರು : ಕಳೆದ ಕೆಲವು ದಿನಗಳಿಂದ ಚಾರ್ಮಾಡಿ ಘಾಟಿಯಲ್ಲಿ ಒಂಟಿ ಸಲಗ ಕಾಣಿಸಿಕೊಳ್ಳದೊಡಗಿದೆ
ಮೂರು ದಿನದ ಹಿಂದೆ ಎಂಟನೇ ತಿರುವು ಬಳಿ ಸಂಜೆ ವೇಳೆ ಕಾಣಿಸಿದ್ದ ಆನೆ ಕಳೆದ ರಾತ್ರಿ ಸರ್ಕಾರಿ ಬಸ್ಸಿಗೆ ಅಡ್ಡ ನಿಂತಿದೆ.
ಸಂಜೆಯೂ ಚಾರ್ಮಾಡಿ ಘಾಟಿಯಲ್ಲಿ ಒಂಟಿ ಸಲಗ ಪ್ರತ್ಯಕ್ಷವಾಗಿದೆ.
ಸುಮಾರು ಅರ್ಧ ಗಂಟೆಗಳ ಕಾಲ ಒಂಟಿ ಸಲಗ ನಿಂತಲ್ಲೇ ನಿಂತಿದ್ದು, ಕಿ.ಮೀ. ಗಟ್ಟಲೆ ಟ್ರಾಫಿಕ್ ಜಾಮ್ ಆಗಿತ್ತು.
ಚಾರ್ಮಾಡಿ ಘಾಟ್ ಒಂದೆಡೆ ಗುಡ್ಡ, ಮತ್ತೊಂದೆಡೆ ಪ್ರಪಾತ ಇದ್ದು,ಆನೆ ದಾಳಿಗೆ ಮುಂದಾದರೆ ತಪ್ಪಿಸಿಕೊಳ್ಳೋದು ಕಷ್ಟ.
ನಿನ್ನೆ ಸಂಜೆ ಕಾರು ಚಾಲಕ ಆನೆಯಿಂದ ಜಸ್ಟ್ ಮಿಸ್ ಆಗಿದ್ದು ಆನೆಯನ್ನ ಸೆರೆ ಹಿಡಿದು ಸ್ಥಳಾಂತರಿಸುವಂತೆ ಸ್ಥಳಿಯರು, ಪ್ರವಾಸಿಗರು ಒತ್ತಾಯಿಸಿದ್ದಾರೆ.
-
Mandya22 hours ago
ಪತ್ನಿಯ ಶೀಲ ಶಂಕಿಸಿ ಪತಿಯಿಂದಲೇ ಬರ್ಬರ ಹತ್ಯೆ…!
-
Chamarajanagar22 hours ago
ಅಂಬಳೆ ಗ್ರಾಮ ಪಂಚಾಯಿತಿ ಅಧ್ಯಕ್ಷರಾಗಿ ನವೀನ್ ಅವಿರೋಧ ಆಯ್ಕೆ
-
Kodagu18 hours ago
ಹಾತೂರುವಿನಲ್ಲಿ ಮಾರುತಿ ಓಮ್ನಿ ಹಾಗೂ ಲಾರಿ ನಡುವೆ ಭೀಕರ ರಸ್ತೆ ಅಪಘಾತ.
-
Chamarajanagar22 hours ago
ಬೋನಿಗೆ ಬಿದ್ದ 3 ನೇ ಚಿರತೆ
-
Kodagu15 hours ago
ನಾಪೋಕ್ಲು ಬೇತು ಗ್ರಾಮದಲ್ಲಿ ನಿವೃತ ಸೈನಿಕನ ಮನೆಗೆ ಕನ್ನ ಹಾಕಿದ ಚೋರರು -ಕೋವಿ,ಬೆಳ್ಳಿಯಪೀಚೆಕತ್ತಿ ಕದ್ದು ಪರಾರಿ
-
Chamarajanagar13 hours ago
ನಾಳೆ ವಿವಿಧೆಡೆ ವಿದ್ಯುತ್ ವ್ಯತ್ಯಯ
-
Chikmagalur16 hours ago
ಅಕ್ರಮ ಸಂಬಂಧಕ್ಕಾಗಿ ಪತಿಯನ್ನ ಕೊಂದ ಸತಿ
-
Kodagu13 hours ago
ಬಿರುನಾಣಿ ವ್ಯಾಪ್ತಿಯಲ್ಲಿ ಹುಲಿ ಸೆರೆಗೆ ಕಾರ್ಯಚರಣೆ