National
ಭಾರತ ಟಿ-20 ತಂಡಕ್ಕೆ ಹೊಸ ನಾಯಕ? ಶ್ರೇಯಸ್ ಅಯ್ಯರ್ ಹೆಸರು ಮುನ್ನೆಲೆಗೆ
National
ವಿದ್ಯಾರ್ಥಿಗಳ ಧ್ವನಿಯನ್ನು ಲಾಠಿಯಿಂದ ಹತ್ತಿಕ್ಕಲು ಸಾಧ್ಯವಿಲ್ಲ: ಶ್ರೇಯಸ್ ಎಂ.ಪಟೇಲ್
ನವದೆಹಲಿ: ನವದೆಹಲಿಯ ಜಂತರ್ ಮಂತರ್ ಎದುರು ಶಾಂತಿಯುತವಾಗಿ ಪ್ರತಿಭಟನೆ ನಡೆಸುತ್ತಿದ್ದ ವಿದ್ಯಾರ್ಥಿಗಳ ಮೇಲೆ ದೆಹಲಿ ಪೊಲೀಸರು ನಡೆಸಿದ ಲಾಠಿಚಾರ್ಜ್ ಮತ್ತು ದಮನಕಾರಿ ಕ್ರಮವನ್ನು ತೀವ್ರವಾಗಿ ಖಂಡಿಸಿದ್ದಾರೆ.
ನೀಟ್ ಪರೀಕ್ಷೆಯಲ್ಲಿನ ಅಕ್ರಮಗಳು ಹಾಗೂ ವಿದ್ಯಾರ್ಥಿಗಳ ಭವಿಷ್ಯಕ್ಕೆ ನ್ಯಾಯ ಒದಗಿಸುವಲ್ಲಿ ವಿಫಲರಾದ ಕೇಂದ್ರ ಶಿಕ್ಷಣ ಸಚಿವ ಶ್ರೀ ಧರ್ಮೇಂದ್ರ ಪ್ರಧಾನ್ ಅವರು ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕು ಎಂಬ ಆಗ್ರಹದೊಂದಿಗೆ, ಪ್ರಧಾನಮಂತ್ರಿ ನಿವಾಸದ ಎದುರು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ನೇತೃತ್ವದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಪ್ರಿಯಾಂಕಾ ಗಾಂಧಿ ರವರು ಮತ್ತು ಕರ್ನಾಟಕದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರೊಂದಿಗೆ ಬೃಹತ್ ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು ಎಂದಿದ್ದಾರೆ.

ಈ ಸಂದರ್ಭದಲ್ಲಿ ಮಾತನಾಡಿದ ಸಂಸದ ಶ್ರೇಯಸ್ ಎಂ.ಪಟೇಲ್ ವಿದ್ಯಾರ್ಥಿಗಳ ಧ್ವನಿಯನ್ನು ಲಾಠಿಯಿಂದ ಹತ್ತಿಕ್ಕಲು ಸಾಧ್ಯವಿಲ್ಲ. ಯುವಜನರ ಭವಿಷ್ಯ, ಶಿಕ್ಷಣ ವ್ಯವಸ್ಥೆಯ ಪಾವಿತ್ರ್ಯ ಮತ್ತು ನ್ಯಾಯಕ್ಕಾಗಿ ನಮ್ಮ ಹೋರಾಟ ನಿರಂತರವಾಗಿ ಮುಂದುವರಿಯಲಿದೆ ಎಂದು ತಿಳಿಸಿದ್ದಾರೆ.
National
ಪ್ರಧಾನಿ ನಿವಾಸದ ಬಳಿ ವಿಪಕ್ಷಗಳ ಪ್ರತಿಭಟನೆ ಅಂತ್ಯ; ರಾಹುಲ್ ಗಾಂಧಿ ಪೊಲೀಸರ ವಶಕ್ಕೆ
National
ನಕ್ಸಲ್ ಪ್ರದೇಶಗಳಿಗೆ ₹95 ಕೋಟಿ ವಿದೇಶಿ ಹಣ ಹರಿವು ಆರೋಪ: ಇಡಿಯಿಂದ PMLA ತನಿಖೆ ಆರಂಭ
ನವದೆಹಲಿ: ನಕ್ಸಲ್ ಪೀಡಿತ ಪ್ರದೇಶಗಳಿಗೆ ಅಕ್ರಮವಾಗಿ ವಿದೇಶಿ ಹಣ ಹರಿಸಲಾಗುತ್ತಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಜಾರಿ ನಿರ್ದೇಶನಾಲಯ (ED) ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆ (PMLA) ಅಡಿಯಲ್ಲಿ ಹೊಸ ತನಿಖೆ ಆರಂಭಿಸಿದೆ.
ಇಡಿಯ ಪ್ರಾಥಮಿಕ ತನಿಖೆಯ ಪ್ರಕಾರ, 2025ರ ನವೆಂಬರ್‌ನಿಂದ 2026ರ ಏಪ್ರಿಲ್‌ವರೆಗೆ ಸುಮಾರು ₹95 ಕೋಟಿ ವಿದೇಶಿ ಹಣವನ್ನು ಭಾರತೀಯ ಬ್ಯಾಂಕಿಂಗ್ ಹಾಗೂ ನಿಯಂತ್ರಣ ವ್ಯವಸ್ಥೆಯನ್ನು ಬದಿಗೊತ್ತಿ, ವಿದೇಶಿ ಡೆಬಿಟ್ ಕಾರ್ಡ್‌ಗಳ ಮೂಲಕ ಭಾರತಕ್ಕೆ ತರಲಾಗಿದೆ ಎನ್ನಲಾಗಿದೆ.

ಈ ಪ್ರಕರಣ ಸಂಬಂಧ ಸಿಬಿಐಗೆ ಪತ್ರ ಬರೆದಿರುವ ಇಡಿ, ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯ್ದೆ (UAPA), ವಿದೇಶಿ ದೇಣಿಗೆ ನಿಯಂತ್ರಣ ಕಾಯ್ದೆ (FCRA) ಹಾಗೂ ಭಾರತೀಯ ನ್ಯಾಯ ಸಂಹಿತೆ (BNS) ಅಡಿಯಲ್ಲಿ ಪ್ರಕರಣ ದಾಖಲಿಸುವಂತೆ ಮನವಿ ಮಾಡಿದೆ.
ಅಮೆರಿಕ ಮೂಲದ Truist Bank ನೀಡಿದ್ದ ಡೆಬಿಟ್ ಕಾರ್ಡ್‌ಗಳನ್ನು ಬಳಸಿ ದೇಶದ ವಿವಿಧ ಎಟಿಎಂಗಳಿಂದ ಕೋಟ್ಯಂತರ ರೂಪಾಯಿ ನಗದು ಹಿಂಪಡೆಯಲಾಗಿದೆ ಎಂದು ತನಿಖೆಯಲ್ಲಿ ಆರೋಪಿಸಲಾಗಿದೆ. ವಿದೇಶಿ ಸಂಸ್ಥೆಯೊಂದು ನಕಲಿ (ಶೆಲ್) ಕಂಪನಿಗಳ ಜಾಲದ ಮೂಲಕ ಈ ಹಣ ವರ್ಗಾವಣೆ ನಡೆಸಿದ್ದು, ಡಿಜಿಟಲ್ ಸಾಕ್ಷ್ಯಗಳನ್ನು ನಾಶಪಡಿಸಿರುವ ಶಂಕೆಯನ್ನೂ ಇಡಿ ವ್ಯಕ್ತಪಡಿಸಿದೆ.

ಈ ಜಾಲದ ಸುಳಿವಿನ ಮೇರೆಗೆ ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವಿದೇಶಿ ಪ್ರಜೆಯೊಬ್ಬನನ್ನು ಲುಕ್‌ಔಟ್ ನೋಟಿಸ್ ಆಧಾರದಲ್ಲಿ ತಡೆದು, ಆತನ ಬಳಿ 24 ವಿದೇಶಿ ಡೆಬಿಟ್ ಕಾರ್ಡ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ.
ಈ ಮೊದಲು ವಿದೇಶಿ ವಿನಿಮಯ ನಿರ್ವಹಣಾ ಕಾಯ್ದೆ (FEMA) ಅಡಿಯಲ್ಲಿ ತನಿಖೆ ಪೂರ್ಣಗೊಳಿಸಿದ್ದ ಇಡಿ, ತನ್ನ ವರದಿಯನ್ನು ಕರ್ನಾಟಕ ಹಾಗೂ ಛತ್ತೀಸ್‌ಗಢ ಪೊಲೀಸರಿಗೆ ಹಂಚಿಕೊಂಡಿದೆ. ಈ ಸಂಬಂಧ ಎರಡೂ ರಾಜ್ಯಗಳ ಪೊಲೀಸರು ಈಗಾಗಲೇ ಪ್ರತ್ಯೇಕ ಎಫ್‌ಐಆರ್‌ಗಳನ್ನು ದಾಖಲಿಸಿ ಮುಂದಿನ ತನಿಖೆ ನಡೆಸುತ್ತಿದ್ದಾರೆ.
-
Mysore9 hours agoಹುಣಸೂರಿನಲ್ಲಿ ಒಂದೇ ಕುಟುಂಬದ ನಾಲ್ವರು ಆತ್ಮಹ*ತ್ಯೆ; ಸಾವಿನ ಕಾರಣ ನಿಗೂಢ
-
Mysore15 hours agoನಂಜನಗೂಡಿನಲ್ಲಿ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನ: ಕಾಮುಕನಿಗೆ ಗ್ರಾಮಸ್ಥರಿಂದ ಧರ್ಮದೇಟು, ಪೊಲೀಸರ ವಶಕ್ಕೆ
-
Kodagu12 hours agoಅಧ್ಯಕ್ಷರಾಗಿ ವಾಂಚಿರ ವಿಠಲ್ ನಾಣಯ್ಯ ಆಯ್ಕೆ
-
Politics4 hours agoಪರಪ್ಪನ ಅಗ್ರಹಾರಕ್ಕೆ ವಿಜಯಲಕ್ಷ್ಮಿ, ರಕ್ಷಿತಾ ಭೇಟಿ: ದರ್ಶನ್ ಆರೋಗ್ಯ ವಿಚಾರಣೆ
-
Politics5 hours agoರಾಜ್ಯ ಸಚಿವ ಸಂಪುಟ ವಿಸ್ತರಣೆ ನಾಳೆ: 18 ಮಂದಿಗೆ ಸಚಿವ ಸ್ಥಾನ ಸಾಧ್ಯತೆ
-
Kodagu5 hours agoಹಾರಂಗಿ ಜಲಾಶಯದ ನೀರು ಕುಡಿಯಲು ಮಾತ್ರ: ರೈತರಿಗೆ ಬೆಳೆ ಬೆಳೆಯದಂತೆ ಮನವಿ
-
Kodagu7 hours agoಕೂಡಿಗೆ ವ್ಯಾಪ್ತಿಯಲ್ಲಿ 1 ಕೋಟಿ ರೂ. ವೆಚ್ಚದ ಕಾಮಗಾರಿಗಳಿಗೆ ಡಾ. ಮಂತರ್ ಗೌಡ ಚಾಲನೆ
-
Manglore2 hours agoಮನೆ ಕಾಮಗಾರಿಗೆ ಬಂದು 6.37 ಲಕ್ಷ ಮೌಲ್ಯದ ಚಿನ್ನಾಭರಣ ಕಳವು- ಕೃತ್ಯ ಎಸಗಿದ 24 ಗಂಟೆಯೊಳಗೆ ಆರೋಪಿ ಅಂದರ್


