Connect with us

Hassan

11 ದಿನ ಕಳೆದರೂ ಪತ್ತೆಯಾಗದ ನವವಿವಾಹಿತೆ ಪ್ರಿಯಾಂಕ; ಹೇಮಾವತಿ ನಾಲೆಯಲ್ಲಿ ಮುಂದುವರಿದ ಶೋಧ

Published

on

ಹಾಸನ: ನವವಿವಾಹಿತೆ ಪ್ರಿಯಾಂಕ (ಜಯಶೀಲಾ.ಬಿ.ಎನ್.) ನಿಗೂಢ ನಾಪತ್ತೆ ಪ್ರಕರಣಕ್ಕೆ 11 ದಿನ ಕಳೆದರೂ ಯಾವುದೇ ಸುಳಿವು ಸಿಕ್ಕಿಲ್ಲ. ಸೆ.20ರಂದು ಚನ್ನರಾಯಪಟ್ಟಣ ತಾಲ್ಲೂಕಿನ ಚಿಕ್ಕನಾಯಕನಹಳ್ಳಿ ಗ್ರಾಮದ ಬಳಿ ಪ್ರಿಯಾಂಕ ಹೇಮಾವತಿ ನಾಲೆಗೆ ಜಿಗಿದಿದ್ದಾರೆ ಎಂದು ಅವರ ಪತಿ ರಾಜೇಶ್ ಹೇಳಿದ್ದ ಹಿನ್ನೆಲೆಯಲ್ಲಿ, ಅಗ್ನಿಶಾಮಕ ದಳದ ಸಿಬ್ಬಂದಿ ಹಾಗೂ ಕುಟುಂಬಸ್ಥರು ಸೆ.21ರಿಂದ ನಾಲೆಯಲ್ಲಿ ನಿರಂತರ ಶೋಧ ನಡೆಸುತ್ತಿದ್ದಾರೆ.

ಚನ್ನರಾಯಪಟ್ಟಣದಿಂದ ತುಮಕೂರಿನವರೆಗೆ ಹೇಮಾವತಿ ನಾಲೆಯಲ್ಲಿ ಕುಟುಂಬಸ್ಥರು ಹಾಗೂ ಗ್ರಾಮಸ್ಥರು ವ್ಯಾಪಕವಾಗಿ ಹುಡುಕಾಟ ನಡೆಸಿದ್ದಾರೆ. ಇದೀಗ ನಾಲೆಯಲ್ಲಿ ನೀರು ನಿಲ್ಲಿಸಲಾಗಿದ್ದು, ಶೋಧ ಕಾರ್ಯವನ್ನು ಮತ್ತಷ್ಟು ತೀವ್ರಗೊಳಿಸಲಾಗಿದೆ.

ಬಾಗೂರು-ನವಿಲೆ ಸುರಂಗ ಪ್ರದೇಶದಲ್ಲಿಯೂ ಐದು ಟ್ರ್ಯಾಕ್ಟರ್‌ಗಳ ನೆರವಿನಿಂದ ಪ್ರಿಯಾಂಕ ಅವರ ಮೃತದೇಹಕ್ಕಾಗಿ ಹುಡುಕಾಟ ನಡೆಸಲಾಗಿದೆ. ಆದರೆ, ಹಲವು ದಿನಗಳಿಂದ ನಿರಂತರ ಶೋಧ ನಡೆಸಿದರೂ ಪ್ರಿಯಾಂಕ ಅವರ ಯಾವುದೇ ಸುಳಿವು ಪತ್ತೆಯಾಗಿಲ್ಲ.

ಈ ನಡುವೆ ಪ್ರಿಯಾಂಕ ಅವರ ಪತಿ ರಾಜೇಶ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಪ್ರಿಯಾಂಕ ನಾಪತ್ತೆಯಾಗಿ 11 ದಿನ ಕಳೆದರೂ ಅವರು ಬದುಕಿದ್ದಾರೆಯೇ ಅಥವಾ ಮೃತಪಟ್ಟಿದ್ದಾರೆಯೇ ಎಂಬುದಕ್ಕೆ ಯಾವುದೇ ಖಚಿತ ಮಾಹಿತಿ ಲಭ್ಯವಾಗಿಲ್ಲ. ಪ್ರಕರಣದಲ್ಲಿ ಹಲವು ಅನುಮಾನಗಳು ಮೂಡಿದ್ದು, ಪ್ರಿಯಾಂಕ ಅವರ ನಾಪತ್ತೆಯ ಹಿಂದಿನ ನಿಜವಾದ ಕಾರಣವೇನು ಎಂಬುದು ಇನ್ನೂ ನಿಗೂಢವಾಗಿಯೇ ಉಳಿದಿದೆ.

Continue Reading

Hassan

ಅರಕಲಗೂಡು: ಹೃದಯಾಘಾತದಿಂದ ಶಾಂತಲಕ್ಷ್ಮಿ ನಿ*ಧನ

Published

on

ಅರಕಲಗೂಡು: ಅರಕಲಗೂಡಿನ ಸಿ. ಜಯಕುಮಾರ್ ಅವರ ತಾಯಿ ಶ್ರೀಮತಿ ಶಾಂತಲಕ್ಷ್ಮಿ (ಪತಿ: ಚನ್ನಯ್ಯ) ಅವರು ಹೃದಯಾಘಾತದಿಂದ ನಿನ್ನೆ ನಿಧನರಾಗಿದ್ದಾರೆ. ಮೃತರ ಅಂತಿಮ ದರ್ಶನಕ್ಕೆ ಇಂದು ಬೆಳಗ್ಗೆ 11 ಗಂಟೆಯವರೆಗೆ ಅರಕಲಗೂಡಿನ ಮಂಜುನಾಥ ಚಿತ್ರಮಂದಿರದ ಸಮೀಪದಲ್ಲಿರುವ ಅವರ ಸ್ವಗೃಹದಲ್ಲಿ ಅವಕಾಶ ಕಲ್ಪಿಸಲಾಗಿದೆ.

ನಂತರ ಮೃತರ ಸ್ವಗ್ರಾಮವಾದ ಕಣಿಯೂರಿನಲ್ಲಿ ಅಂತಿಮ ವಿಧಿವಿಧಾನಗಳನ್ನು ನೆರವೇರಿಸಲಾಗುವುದು ಎಂದು ಕುಟುಂಬದ ಮೂಲಗಳು ತಿಳಿಸಿವೆ.

Continue Reading

Hassan

ಜಿಲ್ಲಾ ಮಟ್ಟದ ಕ್ರೀಡಾಕೂಟದಲ್ಲಿ ಅಧ್ಯಯನ ಪಿಯು ಕಾಲೇಜು ವಿದ್ಯಾರ್ಥಿಗಳ ಭರ್ಜರಿ ಸಾಧನೆ

Published

on

ಹಾಸನ, ಸೆ. 28: ನಗರದ ಅಧ್ಯಯನ ಪಿಯು ಕಾಲೇಜಿನ ವಿದ್ಯಾರ್ಥಿಗಳು ಜಿಲ್ಲಾ ಮಟ್ಟದ ವಿವಿಧ ಕ್ರೀಡಾಕೂಟಗಳಲ್ಲಿ ಗಮನಾರ್ಹ ಸಾಧನೆ ಮಾಡುವ ಮೂಲಕ ಕಾಲೇಜಿಗೆ ಕೀರ್ತಿ ತಂದಿದ್ದಾರೆ. ವಿವಿಧ ಕ್ರೀಡಾ ವಿಭಾಗಗಳಲ್ಲಿ ಹಲವು ವಿದ್ಯಾರ್ಥಿಗಳು ಪ್ರಥಮ, ದ್ವಿತೀಯ ಹಾಗೂ ತೃತೀಯ ಸ್ಥಾನಗಳನ್ನು ಪಡೆದುಕೊಂಡಿದ್ದು, ಕೆಲವರು ರಾಜ್ಯ ಮಟ್ಟದ ಸ್ಪರ್ಧೆಗಳಿಗೆ ಅರ್ಹತೆ ಪಡೆದಿದ್ದಾರೆ.

ಬಾಲಕಿಯರ ವಿಭಾಗದಲ್ಲಿ ಬಾಸ್ಕೆಟ್‌ಬಾಲ್, ಟೇಬಲ್ ಟೆನ್ನಿಸ್, ಜಿಮ್ನಾಸ್ಟಿಕ್ಸ್ ಹಾಗೂ ಬಾಕ್ಸಿಂಗ್‌ನಲ್ಲಿ ವಿದ್ಯಾರ್ಥಿನಿಯರು ಪ್ರಥಮ ಸ್ಥಾನ ಗಳಿಸಿದ್ದಾರೆ. ಚೆಸ್ ಹಾಗೂ ಮ್ಯಾರಥಾನ್ ವಿಭಾಗಗಳಲ್ಲಿ ರಾಜ್ಯ ಮಟ್ಟದ ಸ್ಪರ್ಧೆಗೆ ಅರ್ಹತೆ ಪಡೆದುಕೊಂಡಿದ್ದಾರೆ.

ಬಾಲಕರ ವಿಭಾಗದಲ್ಲಿಯೂ ಅಧ್ಯಯನ ವಿದ್ಯಾರ್ಥಿಗಳು ತಮ್ಮ ಕ್ರೀಡಾ ಪ್ರತಿಭೆಯನ್ನು ಮೆರೆದಿದ್ದಾರೆ. 50 ಕೆ.ಜಿ., 55 ಕೆ.ಜಿ. ಹಾಗೂ 80 ಕೆ.ಜಿ. ಒಳಗಿನ ಬಾಕ್ಸಿಂಗ್, ಯೋಗ, ಶೂಟಿಂಗ್, ವಿವಿಧ ತೂಕ ವಿಭಾಗಗಳ ಕುಸ್ತಿ, 70 ಕೆ.ಜಿ. ಒಳಗಿನ ವೇಟ್‌ಲಿಫ್ಟಿಂಗ್ ಹಾಗೂ 50 ಕೆ.ಜಿ. ಒಳಗಿನ ಕರಾಟೆಯಲ್ಲಿ ಪ್ರಥಮ ಸ್ಥಾನ ಗಳಿಸಿದ್ದಾರೆ.

ಶೂಟಿಂಗ್, ಈಜು ಫ್ರೀಸ್ಟೈಲ್ 4 × 50 ಮೀಟರ್ ರಿಲೇ ಹಾಗೂ 70 ಕೆ.ಜಿ. ಒಳಗಿನ ವೇಟ್‌ಲಿಫ್ಟಿಂಗ್‌ನಲ್ಲಿ ದ್ವಿತೀಯ ಸ್ಥಾನ, 80 ಕೆ.ಜಿ. ಒಳಗಿನ ವೇಟ್‌ಲಿಫ್ಟಿಂಗ್‌ನಲ್ಲಿ ತೃತೀಯ ಸ್ಥಾನ ಪಡೆದಿದ್ದಾರೆ. ಚೆಸ್‌ನಲ್ಲಿಯೂ ವಿದ್ಯಾರ್ಥಿಯೊಬ್ಬರು ರಾಜ್ಯ ಮಟ್ಟದ ಸ್ಪರ್ಧೆಗೆ ಅರ್ಹತೆ ಪಡೆದಿದ್ದಾರೆ.

ವಿದ್ಯಾರ್ಥಿಗಳ ಈ ಸಾಧನೆಗೆ ಅವರ ಪರಿಶ್ರಮ, ನಿರಂತರ ಅಭ್ಯಾಸ, ಶಿಸ್ತು ಹಾಗೂ ಕ್ರೀಡಾ ಮನೋಭಾವ ಕಾರಣವಾಗಿದೆ ಎಂದು ಕಾಲೇಜಿನ ಆಡಳಿತ ಮಂಡಳಿ ತಿಳಿಸಿದೆ.

ವಿದ್ಯಾರ್ಥಿಗಳ ಸಾಧನೆಗೆ ಕಾಲೇಜಿನ ಅಧ್ಯಕ್ಷ ಹಾಗೂ ಶೈಕ್ಷಣಿಕ ಮುಖ್ಯಸ್ಥ ಹೇಮಂತ್ ಕುಮಾರ್ ಎಚ್.ಎಸ್., ಕಾರ್ಯದರ್ಶಿ ಹಾಗೂ ಆಡಳಿತಾಧಿಕಾರಿ ಚೇತನ್ ಎಚ್.ವಿ., ಉಪಾಧ್ಯಕ್ಷ ಹಾಗೂ ಪ್ರಾಂಶುಪಾಲ ಚರಣ್ ಕುಮಾರ್, ಖಜಾಂಚಿ ಹಾಗೂ ಉಪಪ್ರಾಂಶುಪಾಲ ಮೋಹನ್ ಕುಮಾರ್ ಎಚ್.ಜಿ. ಅಭಿನಂದನೆ ಸಲ್ಲಿಸಿದ್ದಾರೆ. ಅಲ್ಲದೆ, ಕಾಲೇಜಿನ ಎಲ್ಲಾ ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ ವಿದ್ಯಾರ್ಥಿಗಳನ್ನು ಅಭಿನಂದಿಸಿ, ರಾಜ್ಯ ಮಟ್ಟದ ಸ್ಪರ್ಧೆಗಳಲ್ಲಿ ಯಶಸ್ಸು ಗಳಿಸುವಂತೆ ಶುಭ ಹಾರೈಸಿದ್ದಾರೆ.

ಶೈಕ್ಷಣಿಕ ಕ್ಷೇತ್ರದ ಜೊತೆಗೆ ಕ್ರೀಡೆ ಹಾಗೂ ಪಠ್ಯೇತರ ಚಟುವಟಿಕೆಗಳಿಗೂ ಆದ್ಯತೆ ನೀಡುತ್ತಿರುವ ಅಧ್ಯಯನ ಪಿಯು ಕಾಲೇಜಿನ ವಿದ್ಯಾರ್ಥಿಗಳ ಈ ಸಾಧನೆಯು ಕಾಲೇಜಿನ ಕ್ರೀಡಾ ಕ್ಷೇತ್ರದಲ್ಲಿ ಸಾಗುತ್ತಿರುವ ‘ವಿಜಯ ಯಾತ್ರೆ’ಗೆ ಮತ್ತೊಂದು ಹೆಮ್ಮೆಯ ಮೈಲಿಗಲ್ಲಾಗಿದೆ.

 

 

 

Continue Reading

Hassan

ಜಿಲ್ಲಾ ಮಟ್ಟದ ಮಾರ್ಚ್‌ಪಾಸ್ಟ್ ಸ್ಪರ್ಧೆಯಲ್ಲಿ ಅಧ್ಯಯನ ಪಿಯು ಕಾಲೇಜಿಗೆ ದ್ವಿತೀಯ ಸ್ಥಾನ

Published

on

ಹಾಸನ: ಅಧ್ಯಯನ ಪಿಯು ಕಾಲೇಜು, ಹಾಸನದ ವಿದ್ಯಾರ್ಥಿಗಳು ರೆಡ್‌ಕ್ರಾಸ್ ಸಂಸ್ಥೆಯ ಸಹಯೋಗದೊಂದಿಗೆ ನಡೆದ ಜಿಲ್ಲಾ ಮಟ್ಟದ ಮಾರ್ಚ್‌ಪಾಸ್ಟ್ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ ಪಡೆದು ಕಾಲೇಜಿಗೆ ಕೀರ್ತಿ ತಂದಿದ್ದಾರೆ.

ವಿದ್ಯಾರ್ಥಿಗಳು ಶಿಸ್ತು, ಸಮಯಪಾಲನೆ, ತಂಡದ ಸಮನ್ವಯ ಹಾಗೂ ಆತ್ಮವಿಶ್ವಾಸವನ್ನು ಪ್ರದರ್ಶಿಸಿ ಗಮನ ಸೆಳೆದಿದ್ದಾರೆ. ವಿದ್ಯಾರ್ಥಿಗಳ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ ಹಾಗೂ ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ಹರ್ಷ ವ್ಯಕ್ತಪಡಿಸಿ ಅಭಿನಂದನೆ ಸಲ್ಲಿಸಿದ್ದಾರೆ.

ಶಿಕ್ಷಣದ ಜೊತೆಗೆ ವಿದ್ಯಾರ್ಥಿಗಳಲ್ಲಿ ಕ್ರೀಡಾ ಮನೋಭಾವ, ನಾಯಕತ್ವ ಗುಣ, ಶಿಸ್ತು ಹಾಗೂ ಸಾಮಾಜಿಕ ಜವಾಬ್ದಾರಿಯನ್ನು ಬೆಳೆಸಲು ಕಾಲೇಜು ಸದಾ ಪ್ರೋತ್ಸಾಹ ನೀಡುತ್ತಿದೆ ಎಂದು ಆಡಳಿತ ಮಂಡಳಿ ತಿಳಿಸಿದೆ.

ಕಾಲೇಜಿನ ಪ್ರಾಂಶುಪಾಲರಾದ ಚರಣ್ ಕುಮಾರ್, ಹೇಮಂತ್ ಕುಮಾರ್, ಚೇತನ್ ಎಚ್.ವಿ., ಮೋಹನ್ ಕುಮಾರ್ ಎಚ್.ಜಿ. ಸೇರಿದಂತೆ ಸಮಸ್ತ ಸಿಬ್ಬಂದಿ ವಿದ್ಯಾರ್ಥಿಗಳಿಗೆ ಅಭಿನಂದನೆ ಸಲ್ಲಿಸಿದ್ದಾರೆ.

ವಿದ್ಯಾರ್ಥಿಗಳ ಪರಿಶ್ರಮ, ಶಿಕ್ಷಕರ ಮಾರ್ಗದರ್ಶನ ಹಾಗೂ ರೆಡ್‌ಕ್ರಾಸ್ ಘಟಕದ ಸಹಕಾರದಿಂದ ಈ ಯಶಸ್ಸು ಸಾಧ್ಯವಾಗಿದೆ. ಮುಂದಿನ ದಿನಗಳಲ್ಲಿ ವಿದ್ಯಾರ್ಥಿಗಳು ಇನ್ನಷ್ಟು ಉನ್ನತ ಸಾಧನೆ ಮಾಡಲಿದ್ದಾರೆ ಎಂಬ ವಿಶ್ವಾಸವನ್ನು ಆಡಳಿತ ಮಂಡಳಿ ವ್ಯಕ್ತಪಡಿಸಿದೆ.

Continue Reading

Trending

error: Content is protected !!