Connect with us

Location

ಕೆರಗೋಡು ಅಶಾಂತಿಗೆ ಸರಕಾರ, ಜಿಲ್ಲಾಧಿಕಾರಿಯೇ ನೇರ ಹೊಣೆ*

Published

on

*ಕೆರಗೋಡು ಅಶಾಂತಿಗೆ ಸರಕಾರ, ಜಿಲ್ಲಾಧಿಕಾರಿಯೇ ನೇರ ಹೊಣೆ*

*ಜಿಲ್ಲಾಧಿಕಾರಿ ಅಮಾನತು ಮಾಡಲು ಹೆಚ್.ಡಿ.ಕುಮಾರಸ್ವಾಮಿ ಆಗ್ರಹ*

*ಕೆರಗೋಡು ಗ್ರಾಮದಲ್ಲಿ 144 ತೆಗೆಯಲು ಒತ್ತಾಯ*
*ಸಿಎಂ ಸಿದ್ದರಾಮಯ್ಯ ವಿರುದ್ಧ ಮಾಜಿ ಮುಖ್ಯಮಂತ್ರಿ ವಾಗ್ದಾಳಿ*

***

ಮಂಡ್ಯ: ಕೆರಗೋಡು ಗ್ರಾಮದಲ್ಲಿ ಹನುಮಧ್ವಜ ಇಳಿಸಿ ಶಾಂತಿ ಕದಡಲು ಜಿಲ್ಲಾಡಳಿತವೇ ನೇರ ಕಾರಣ ಎಂದು ಗಂಭೀರ ಆರೋಪ ಮಾಡಿದ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು, ಕೂಡಲೇ ಮಂಡ್ಯ ಜಿಲ್ಲಾಧಿಕಾರಿಯನ್ನು ಅಮಾನತು ಮಾಡಬೇಕು ಎಂದು ಒತ್ತಾಯಿಸಿದರು.

ಕೆರಗೋಡು ಪ್ರಕರಣಕ್ಕೆ ಸಂಬಂಧಿಸಿ ಮಂಡ್ಯದಲ್ಲಿ ಜೆಡಿಎಸ್ ಮತ್ತು ಬಿಜೆಪಿ ಜಂಟಿಯಾಗಿ ಆಯೋಜಿಸಿದ್ದ ಪ್ರತಿಭಟನೆಯಲ್ಲಿ ಮಾತನಾಡಿದ ಅವರು; ಶಾಂತಿಯಿಂದ ಇದ್ದ ಕೆರಗೋಡು ಗ್ರಾಮದಲ್ಲಿ ಅಶಾಂತಿ ಉಂಟಾಗಿದೆ. ಇದಕ್ಕೆ ಸರಕಾರ ಮತ್ತು ಜಿಲ್ಲಾಧಿಕಾರಿಯೇ ಹೊಣೆ ಎಂದು ದೂರಿದರು.

ನಾನು ಸರಕಾರಕ್ಕೆ ನೇರವಾಗಿ ಪ್ರಶ್ನೆ ಕೇಳುತ್ತೇನೆ. ಎಷ್ಟು ದಿನ ಈ ಉದ್ಧಟತನ? ಎಷ್ಟು ದಿನ ನಿಮ್ಮ ಆಟ? ಬಹಳ ದಿನ ನಡೆಯಲ್ಲ, ಎಚ್ಚರಿಕೆಯಿಂದ ಇರಿ ಎಂದ ಅವರು; ಪೊಲೀಸ್ ಅಧಿಕಾರಿಗಳು ಜವಾಬ್ದಾರಿ ವಹಿಸಿ ಕೆಲಸ ಮಾಡಬೇಕು. ಈ ಬಗ್ಗೆ ಶಾಂತಿ ಕಾಪಾಡುವಂತೆ ಜಿಲ್ಲಾಧಿಕಾರಿಗೆ ಮನವಿ ಮಾಡಿದ್ದೆ. ಗ್ರಾಮಸ್ಥರ ಜತೆ ಚರ್ಚೆ ಮಾಡಿ ತೀರ್ಮಾನ ಮಾಡಿ ಅಂತ ಹೇಳಿದ್ದೆ. ಆದರೆ, ಜಿಲ್ಲಾಧಿಕಾರಿ ಮಾಡಿದ್ದೇನು? ಕೆರಗೋಡು ಕೆಂಡವಾಗಿದೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು.

ನಿಮ್ಮ ಪರವಾಗಿ ರಾಜ್ಯದಲ್ಲಿ ಪ್ರತಿಭಟನೆ ನಡೆಯುತ್ತಿದೆ.
ಹನುಮಂತನ ಕೆಣಕಿ ಉಳಿದವರು ಯಾರೂ ಇಲ್ಲ.
ರಾಜ್ಯದಲ್ಲಿ ಬರ ಪರಿಸ್ಥಿತಿ ಇದೆ. ಅದನ್ನು ಸರಿಪಡಿಸಿ. ರೈತರಿಗೆ ಪರಿಹಾರ ಕೊಡಿ. ಕೆರಗೋಡುನಲ್ಲಿ ನಡೆದ ಪ್ರಕರಣಕ್ಕೆ ಸಂಬಂಧಿಸಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಬೇಕು. ಲಾಠಿ ಚಾರ್ಜ್ ಮಾಡುವ ಮೂಲಕ ಸರಕಾರ ದೌರ್ಜನ್ಯ ಪ್ರದರ್ಶನ ಮಾಡಿದೆ. ಜನ ವಿರೋಧಿ ಆಡಳಿತ ಮಾಡಲು ಜನರು ಇವರಿಗೆ ಅಧಿಕಾರ ಕೊಟ್ಟಿದ್ದಾರಾ? ಎಂದು ಅವರು ಖಾರವಾಗಿ ಪ್ರಶ್ನಿಸಿದರು.

ಕಾನೂನು ಉಲ್ಲಂಘನೆ ಮಾಡಿರುವ ಬಗ್ಗೆ ಸುಳ್ಳು ದಾಖಲೆ ಸೃಷ್ಟಿಸಿ ರಾಜಕೀಯ ಮಾಡಲಾಗಿದೆ. ಅಧಿಕಾರಿಗಳನ್ನು ದುರುಪಯೋಗ ಮಾಡಿಕೊಂಡು ಈ ರೀತಿಯ ಕೆಲಸ ಮಾಡಲಾಗಿದೆ. ನ್ಯಾಯ ಸಿಗುವವರೆಗೆ ನಾವು ಹೋರಾಟ ಮಾಡೋಣ. ರಾಷ್ಟ್ರಧ್ವಜ ಹಾರಿಸುವುದರಲ್ಲಿ ಕಾಂಗ್ರೆಸ್ ನವರಿಗಿಂತ ನಾವೇನು ಕಡಿಮೆ ಇಲ್ಲ ಎಂದು ಮಾಜಿ ಮುಖ್ಯಮಂತ್ರಿ ಅವರು ಹೇಳಿದರು.

ಗೌರಿಶಂಕರ ಟ್ರಸ್ಟ್ ನವರು ಧ್ವಜಸ್ತಂಭ ನಿರ್ಮಿಸಲು ಅನುಮತಿ ಕೋರಿದ್ದಾರೆ. ನಿಮಗಿಂತ ಹೆಚ್ಚು ಜವಾಬ್ದಾರಿ ನಮಗೆ ಇದೆ. ಸರ್ಕಾರಕ್ಕೆ ಜವಾಬ್ದಾರಿ ಇಲ್ಲ ಎಂದು ಅವರು ಕಿಡಿಕಾರಿದರು.

*ಸಿಎಂ ಸಿದ್ದರಾಮಯ್ಯ ಅವರಿಗೆ ಎಚ್ಚರಿಕೆ*

ಸಿದ್ದರಾಮಯ್ಯ ಅವರೇ ರಾಜಕಾರಣ ಮಾಡುತ್ತಿರುವುದು ನಿಮ್ಮ ಪಕ್ಷ. ಇದು ಎರಡೂ ನಿಮಿಷದಲ್ಲಿ ಬಗೆಹರಿಸುವ ವಿಷಯ..ಇಷ್ಟೊಂದು ದೊಡ್ಡ ಮಟ್ಟಕ್ಕೆ ತೆಗೆದುಕೊಂಡು ಹೋಗಿರೋದು ನಿಮ್ಮ ಪಕ್ಷದವರು. ರಾಜಕೀಯ ಮಾಡಿ ಲಾಭ ಪಡೆಯಬೇಕಿಲ್ಲ. ಅಮಾಯಕರ ಮೇಲೆ ದೌರ್ಜನ್ಯ ಮಾಡಿದ್ದಾರೆ. ಪೊಲೀಸ್ ಇಲಾಖೆ, ಅಧಿಕಾರಿಗಳು ಪ್ರಚೋದನೆ ಕೊಟ್ಟಿದ್ದಾರೆ. ನಿಮಗೆ ಅಲ್ಪಸ್ವಲ್ಪ ಆಡಳಿತದ ಅನುಭವ ಇದೆ ಅಂತೀರಿ. 14 ಬಾರಿ ಬಜೆಟ್ ಕೊಟ್ಟವನು ಅಂತೀರಿ. ನಿಮಗೆ ಸ್ವಲ್ಪವಾದರೂ ಆಡಳಿತ ಪ್ರಜ್ಞೆ ಇದೆಯಾ? ಎಂದು ಕುಮಾರಸ್ವಾಮಿ ಅವರು ಆಕ್ರೋಶ ವ್ಯಕ್ತಪಡಿಸಿದರು.

ಲೋಕಸಭೆ ಚುನಾವಣೆ ಇಟ್ಟುಕೊಂಡು ಟಾರ್ಗೆಟ್ ಮಾಡಿದ್ದು ನಾವಲ್ಲ, ನೀವು. ಶೋಷಿತ ವರ್ಗಗಳ ಸಮಾವೇಶ ಮಾಡಿ ಮಟನ್ ಊಟ ಹಾಕಿಸಿದ್ದಾರೆ. ಅದು ರಾಜಕೀಯ. ನೀವು ಎಷ್ಟು ವರ್ಷ ಮುಖ್ಯಮಂತ್ರಿ ಆಗಿದ್ದೀರಿ? 5 ವರ್ಷ ಪೂರ್ಣಾವಧಿ, ಈಗ 1 ವರ್ಷ. ಹಿಂದೆ ಡಿಸಿಎಂ ಆಗಿ ಎಷ್ಟು ವರ್ಷ ಇದ್ದಿರಿ? ನಿಮ್ಮನ್ನು ಯಾರು ಹಿಡಿದುಕೊಂಡಿದ್ದರು ಶೋಷಿತರ ಸಮಾಜ ಸರಿಪಡಿಸಬೇಡಿ ಎಂದು. 14 ಬಜೆಟ್ ಕೊಟ್ಟೆ ಅಂತ ಭಾಷಣ ಮಾಡ್ತಿರಾ, ಶೋಷಿತ ವರ್ಗಕ್ಕೆ ಏನು ಕೊಟ್ರಿ? ಎಂದು ಸಿಎಂ ಸಿದ್ದರಾಮಯ್ಯ ಅವರಿಗೆ ಟಾಂಗ್ ಕೊಟ್ಟರು ಕುಮಾರಸ್ವಾಮಿ.

*ಪೊಲೀಸರು ಫ್ಲೆಕ್ಸ್ ಗೆ ರಕ್ಷಣೆ ಕೊಡುತ್ತಿದ್ದಾರೆ!*

ಕೋರ್ಟ್ ಆದೇಶದ ಮೇಲೆ ಪ್ಲೇಕ್ಸ್ ಹಾಕುವುದಕ್ಕೆ ಅನುಮತಿ ಬೇಕು. ಹನುಮಧ್ವಜ ತೆಗೆದಿದ್ದೀರಿ, ರಸ್ತೆಯಲ್ಲಿ ಪ್ಲೆಕ್ಸ್ ಹಾಕಿದ್ದಿರಲ್ಲ, ಆ ಮಹಾನುಭಾವರು ಯಾರು? ಅದಕ್ಕೆ ಯಾರು ಅನುಮತಿ ಕೊಟ್ಟವರು? ಪ್ಲೆಕ್ಸ್ ತೆಗೆಯೋದಕ್ಕೆ ಹೋದವರ ಮೇಲೆ ಲಾಠಿಚಾರ್ಜ್ ಮಾಡೋದು ಎಷ್ಟು ಸರಿ? ಪ್ಲೆಕ್ಸ್ ಗಳಿಗೆ ಪೊಲೀಸರು ರಕ್ಷಣೆ ಕೊಡುತ್ತಿದ್ದಾರೆ. ಮುಂದೆ ರಸ್ತೆಯಲ್ಲಿ ಓಡಾಡದ ಪರಿಸ್ಥಿತಿಗೆ ಜನ ಬರುವ ಅಪಾಯ ಇದೆ. ಕಾಂಗ್ರೆಸ್ ನವರು ಮಂಡ್ಯದಲ್ಲಿ ರಾಜಕಾರಣ ಶುರು ಮಾಡಿದ್ದಾರೆ. 35 ವರ್ಷಗಳ ಹಿಂದೆ ಇದೇ ಸಿದ್ದರಾಮಯ್ಯ ಅವರು ಧ್ವಜಸ್ತಂಭ ಉದ್ಘಾಟನೆ ಮಾಡಿದ್ದರು ಎಂದು ತಿರುಗೇಟು ಕೊಟ್ಟರು ಕುಮಾರಸ್ವಾಮಿ ಅವರು.

*ನಿಷೇಧಾಜ್ಞೆ ತೆಗೆಯಿರಿ ಎಂದು ಆಗ್ರಹ*

ಕೆರಗೋಡು ಗ್ರಾಮದಲ್ಲಿ 144 ಸೆಕ್ಷನ್ ವಾಪಸ್ ಪಡೆಯಿರಿ, ಶಾಂತಿ ಸ್ಥಾಪನೆಗೆ ನಾನು ಜವಾಬ್ದಾರಿ ಆಗುತ್ತೇನೆ. ಇಲ್ಲ ನಾವೇ ಹೆಚ್ಚು ಜನ ಸೇರಿಸಿದರೆ ಏನಾಗುತ್ತದೆ, ಯೋಚನೆ ಮಾಡಿ. ರಾಜಕೀಯ ಬಿಟ್ಟು ಶಾಂತಿ ನೆಲೆಸುವಂತೆ ಮಾಡಲು ಕ್ರಮ ಕೈಗೊಳ್ಳಿ. ಜನರು ರೊಚ್ಚಿಗೆದ್ದರೆ ಯಾವ 144 ಸೆಕ್ಷನ್ ಉಳಿಯಲ್ಲ. ಮೊದಲು 144 ಸೆಕ್ಷನ್ ವಾಪಸ್ ಪಡೆಯಿರಿ ಎಂದು ಅವರು ಒತ್ತಾಯ ಮಾಡಿದರು.

ಬಿಜೆಪಿ ಹಿರಿಯ ನಾಯಕರಾದ ಸಿಟಿ ರವಿ, ಮಾಜಿ ಶಾಸಕರಾದ ಸುರೇಶ್ ಗೌಡ, ಸಿ.ಎಸ್.ಪುಟ್ಟರಾಜು, ಡಾ.ಕೆ.ಅನ್ನದಾನಿ ಸೇರಿ ಎರಡೂ ಪಕ್ಷಗಳ ರಾಜ್ಯ, ಜಿಲ್ಲಾ ಮುಖಂಡರು ಹಾಗೂ ಅಸಂಖ್ಯಾತ ಕಾರ್ಯಕರ್ತರು ಭಾಗಿಯಾಗಿದ್ದರು.

Continue Reading
Click to comment

Leave a Reply

Your email address will not be published. Required fields are marked *

Mandya

ಎಚ್ಡಿಕೆ ಗೆಲುವಿಗೆ ಹರಕೆ ಹೊತ್ತು ಉರುಳು ಸೇವೆ ಮಾಡಿದ ಅಭಿಮಾನಿಗಳು

Published

on

ಶ್ರೀರಂಗಪಟ್ಟಣ: ಜೆಡಿಎಸ್, ಬಿಜೆಪಿ ಮೈತ್ರಿ ಅಭ್ಯರ್ಥಿ ಎಚ್.ಡಿ.ಕುಮಾರಸ್ವಾಮಿ ಗೆಲುವಿಗಾಗಿ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನ ಅಭಿಮಾನಿಗಳು ಹಾಗೂ ಕಾರ್ಯಕರ್ತರು ಶ್ರೀರಂಗನಾಥ ಸ್ವಾಮಿ ದೇವಾಲಯದ ಆವರಣದಲ್ಲಿ ಉರುಳು ಸೇವೆ ನಡೆಸಿ ಪ್ರಾರ್ಥನೆ ಸಲ್ಲಿಸಿದರು.

ಎಚ್.ಡಿ.ಕುಮಾರ ಸ್ವಾಮಿ ರವರ ಗೆಲುವು ಜಿಲ್ಲೆಯ ಗೆಲುವಾಗಿದ್ದು,‌ ಮತದಾರರು ಯಾವುದೇ ಆಮಿಷಕ್ಕೆ ಬಲಿಯಾಗದೆ ಕುಮಾರಸ್ವಾಮಿ ರವರನ್ನು ಬೆಂಬಲಿಸುವಂತೆ ಮನವಿ ಮಾಡಿದರು.

Continue Reading

Chamarajanagar

ಸುನಿಲ್ ಬೋಸ್ ಅವರಿಗೆ ಮತ ನೀಡುವಂತೆ ಎರಡನೇ ವಾರ್ಡಿನ ಸದಸ್ಯ ರಂಗನಾಥ್ ಮನವಿ

Published

on

ಯಳಂದೂರು: ಚಾಮರಾಜನಗರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಸುನಿಲ್ ಬೋಸ್ ಅವರಿಗೆ ಮತ ನೀಡುವಂತೆ ಎರಡನೇ ವಾರ್ಡಿನ ಸದಸ್ಯ ರಂಗನಾಥ್ ಮನವಿ ಮಾಡಿದರು.

ಅವರು ಪಟ್ಟಣದ ಮುಸ್ಲಿಂ ಬಡಾವಣೆಯಲ್ಲಿ ಮನೆಮನೆಗಳಿಗೆ ಕಾಂಗ್ರೆಸ್ ಪಕ್ಷದ ಗ್ಯಾರಂಟಿ ಕಾರ್ಡ್ ವಿತರಿಸಿ ಮಾತನಾಡಿದರು. ಈಗಾಗಲೇ ನುಡಿದಂತೆ ನಡೆಯುತ್ತಿರುವ ರಾಜ್ಯ ಸರ್ಕಾರ ಎಲ್ಲಾ ಐದು ಗ್ಯಾರಂಟಿಗಳನ್ನು ಜಾರಿ ಮಾಡಿದೆ. ಕೇಂದ್ರದಲ್ಲೂ ಸಹ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದರೆ ಪ್ರತಿಯೊಬ್ಬ ವಿದ್ಯಾವಂತ ಯುವಕನಿಗೆ ಮೊದಲ ಉದ್ಯೋಗದ ಗ್ಯಾರೆಂಟಿಯ ಯುವ ನ್ಯಾಯ, ಪ್ರತಿ ಬಡ ಕುಟುಂಬದ ಒಬ್ಬ ಮಹಿಳೆಗೆ ಪ್ರತಿ ವರ್ಷ ಒಂದು ಲಕ್ಷ ಮಹಿಳಾ ನ್ಯಾಯ, ಸಾಮಿನಾಥನ ಆಯೋಗದ ಸೂತ್ರದ ಪ್ರಕಾರ ಎಂ ಎಸ್ ಪಿ ಗೆ ಕಾನೂನು ಸ್ಥಾನಮಾನ ಮತ್ತು ಸಾಲ ಮನ್ನದ ರೈತ ನ್ಯಾಯ, ನರೇಗಾ ಯೋಜನೆ ಅಡಿಯಲ್ಲಿ ದಿನಕ್ಕೆ 400 ರೂಪಾಯಿ ಕನಿಷ್ಠ ವೇತನದ ಶ್ರಮಿಕ ನ್ಯಾಯ, ಸಾಮಾಜಿಕ ಮತ್ತು ಆರ್ಥಿಕ ಸಮಾನತೆಯನ್ನು ಖಚಿತಪಡಿಸಿಕೊಳ್ಳಲು ರಾಷ್ಟ್ರ ವ್ಯಾಪಿ ಜನಗಣತಿಯಲ್ಲಿ ಪ್ರತಿಯೊಬ್ಬ ವ್ಯಕ್ತಿ ಮತ್ತು ಪ್ರತಿ ಸಮುದಾಯವನ್ನು ಪರಿಗಣಿಸಲಾಗುವುದು ಪಾಲುದಾರಿಕೆ ನ್ಯಾಯ ಹೀಗೆ ಕಾಂಗ್ರೆಸ್ ನ ಗ್ಯಾರಂಟಿ ಕಾರ್ಡ್ ನಲ್ಲಿ ಪಂಚ ನ್ಯಾಯಗಳಿದ್ದು ಇವೆಲ್ಲವೂ ಜಾರಿಗೆ ಬರುತ್ತದೆ. ಆದ್ದರಿಂದ ಕಾಂಗ್ರೆಸ್ ಪಕ್ಷ ಗೆಲ್ಲಿಸುವಂತೆ ಮನವಿ ಮಾಡಿದರು.

ಕಾಂಗ್ರೆಸ್ ಮುಖಂಡರಾದ ಕೋಸ ಮಂಜು, ಶಬ್ಬೀರ್, ರಿಜ್ವಾನ್, ಭರತ, ರಾಮು, ನಾಗ ಸೇರಿದಂತೆ ಇತರರು ಹಾಜರಿದ್ದರು.

Continue Reading

Hassan

ಮುಂದಿನ ದಿನಗಳಲ್ಲಿ ಚೊಂಬು-ಜಾಗಟೆ ಗ್ಯಾರಂಟಿ

Published

on

ಕಾಂಗ್ರೆಸ್ ವಿರುದ್ಧ ಹೆಚ್.ಡಿ. ರೇವಣ್ಣ ವಾಗ್ದಾಳಿ

ಹಾಸನ: ಗ್ಯಾರಂಟಿ ಯೋಜನೆಗಳ ಹೆಸರಿನಲ್ಲಿ ರಾಜ್ಯದ ಖಜಾನೆ ಖಾಲಿ ಮಾಡಿ ಜನರಿಗೆ ಬಿಕ್ಷೆ ಹಾಕುತ್ತಿದ್ದು, ಮುಂದಿನ ದಿನಗಳಲ್ಲಿ ಚೊಂಬು ಮತ್ತು ಜಾಗಟೆ ಕೊಡುವುದು ಗ್ಯಾರಂಟಿ ಎಂದು ಮಾಜಿ ಸಚಿವ ಹೆಚ್.ಡಿ. ರೇವಣ್ಣ ಭವಿಷ್ಯ ನುಡಿದರು.

ನಗರದಲ್ಲಿ ಆಪ್ತರ ನಿವಾಸದಲ್ಲಿ ಮಾಧ್ಯಮದೊಂದಿಗೆ ಮಾತನಾಡಿ, ಕರ್ನಾಟಕ ರಾಜ್ಯ ಲೂಟಿ ಕೋರರ ಕೈಯಲ್ಲಿ ಸಿಲುಕಿಕೊಂಡಿದೆ ಗ್ಯಾರಂಟಿ ಯೋಜನೆಗಳ ಹೆಸರಿನಲ್ಲಿ ರಾಜ್ಯದ ಖಜಾನೆ ಖಾಲಿ ಮಾಡಿ ಜನರಿಗೆ ಬಿಕ್ಷೆ ಹಾಕುತ್ತಿದೆ ಮುಂದಿನ ದಿನಗಳಲ್ಲಿ ಕೈಯಲ್ಲಿ ಚೊಂಬು ಹಾಗೂ ಜಾಗಟೆ ಕೊಡುವುದು ಗ್ಯಾರಂಟಿ ಎಂದರು.

ಹೆಚ್.ಡಿ. ಕುಮಾರಸ್ವಾಮಿ ಸರ್ಕಾರದ ಅವಧಿಯಲ್ಲಿ ಹಾಸನ ಜಿಲ್ಲೆಯ ಶಿಕ್ಷಣ ಕ್ಷೇತ್ರದಲ್ಲಿ ಕ್ರಾಂತಿಕಾರರ ಬದಲಾವಣೆ ಆಗಿದೆ. ಶಾಲಾ ಕಾಲೇಜು ಕಟ್ಟಡಗಳು, ಗುಣಮಟ್ಟದ ಶಿಕ್ಷಣದ ಮೂಲಕ ಹಾಸನ ಜಿಲ್ಲೆ ಎಸ್.ಎಸ್.ಎಲ್.ಸಿ. ಯಲ್ಲಿ ಕೂಡ ಪ್ರಥಮ ಸ್ಥಾನ ಪಡೆಯುವ ಮೂಲಕ ಇಡೀ ರಾಜ್ಯಕ್ಕೆ ಮಾದರಿಯಾಗಿದೆ. ಆದರೆ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಹಾಸನ ಜಿಲ್ಲೆಗೆ ಕೊಡುಗೆ ಶೂನ್ಯ ಎಂದು ದೂರಿದರು. ನಂಬಿದವರಿಗೆ ಟೋಪಿ ಹಾಕಿ ನಿಷ್ಕಲ್ಮಶ ರಾಜಕಾರಿಣಿ ದೇವೇಗೌಡರನ್ನು ಪ್ರಧಾನಿ ಸ್ಥಾನದಿಂದ ಕೆಳಗಿಳಿಸಿದ್ದಾರೆ ಎಂದು ಕಿಡಿಕಾರಿದರು.

ಹಿಂದಿನಿಂದಲೂ ನಮ್ಮ ಕುಟುಂಬದ ಬಗ್ಗೆ ಅನೇಕರು ಒಂದಲ್ಲ, ಒಂದು ರೀತಿಯ ಅಪಪ್ರಚಾರ ಮಾಡುತ್ತಿದ್ದಾರೆ. ದೇವೇಗೌಡರ ಕಾಲದಿಂದಲೂ ಇದು ನಡೆಯುತ್ತಿದೆ. ಇದಕ್ಕೆಲ್ಲಾ ನಾವು ತಲೆ ಕೆಡಿಸಿಕೊಳ್ಳುವುದಿಲ್ಲ. ನಮ್ಮ ಕುಟುಂಬದ ಬಗ್ಗೆ ಅಪಪ್ರಚಾರ ಮಾಡುವುದು ಮಾಮೂಲಿ. ಇದನ್ನೆಲ್ಲ ಜಿಲ್ಲೆಯ ಜನರು ಗಮನಿಸುತ್ತಿದ್ದಾರೆ. ಈ ಚುನಾವಣೆಯಲ್ಲಿ ಹಾಸನ, ಮಂಡ್ಯ, ಕೋಲಾರ ಸೇರಿದಂತೆ ಎಲ್ಲಾ ೨೮ಕ್ಕೆ ೨೮ ಸ್ಥಾನವನ್ನೂ ನಾವು ಗೆಲ್ಲುತ್ತೇವೆ ಎಂದು ವಿಶ್ವಾಸವ್ಯಕ್ತಪಡಿಸಿದರು.

ರಾಜ್ಯದಲ್ಲಿ ಗ್ಯಾರಂಟಿ ಆಯ್ತು ಈಗ ಪೊಳ್ಳು ಗ್ಯಾರಂಟಿ ಶುರುವಾಗಿದೆ. ಬಾಂಡ್ ಪೇಪರ್‌ನಲ್ಲಿ ಸಿಎಂ ಹಾಗೂ ಡಿಸಿಎಂ ಒಂದು ಲಕ್ಷ ಕೊಡುವುದಾಗಿ ಕರಪತ್ರ ಹಂಚುತ್ತಿದ್ದಾರೆ. ಈ ಬಗ್ಗೆ ಚುನಾವಣಾ ಆಯೋಗ ಗಮನಿಸಬೇಕು ಎಂದು ಆಗ್ರಹಿಸಿದರು. ಒಂದು ಕಡೆ ಪ್ರಜ್ವಲ್, ದೇವೇಗೌಡರು ಏನು ಮಾಡಿದ್ದಾರೆ ಅಂತಾರೆ. ಆದರೆ ಅವರು ಈ ಜಿಲ್ಲೆಗೆ ಏನು ಕೊಡುಗೆ ಕೊಟ್ಟಿದ್ದಾರೆ ಎಂಬುದು ಜನರಿಗೆ ಗೊತ್ತು. ೧೧ ತಿಂಗಳಲ್ಲಿ ರಾಜ್ಯದ ಖಜಾನೆ ಖಾಲಿ ಮಾಡಿ ಖಾಲಿ ಚೊಂಬು ಕೊಟ್ಟಿದ್ದಾರೆ. ಒಂದೇ ಒಂದು ಅಭಿವೃದ್ಧಿ ಕೆಲಸ ಆಗಿಲ್ಲ ಎಂದು ಗಂಬೀರವಾಗಿ ಆರೋಪಿಸಿದರು.

ಹಾಸನ ಫ್ಲೈ ಓವರ್ ಮಾಡಲು ನಾನು ಬರಬೇಕಾಯ್ತಾ, ಹಾಸನದ ಬಸ್ ನಿಲ್ದಾಣಕ್ಕೆ ನಿತ್ಯ ನಾಲ್ಕು ಸಾವಿರ ಬಸ್ ಬರ್ತವೆ. ಆದರೆ ಇವರು ಕೇವಲ ಎರಡು ಪಥದ ರಸ್ತೆಯ ಫ್ಲೈ ಓವರ್ ಮಾಡಿದ್ದಾರೆ. ಹಾಸನದ ಮೆಡಿಕಲ್ ಕಾಲೇಜು ಉಳಿಸಲು ಇವರ ಕೊಡುಗೆ ಏನು? ನಮ್ಮ ಕೊಡುಗೆ ಏನು ಅಂತಾರೆ, ಇವರ ಕೊಡುಗೆ ಏನು ಹೇಳಲಿ? ಎಂದು ಸವಾಲು ಹಾಕಿದರು. ಅರವತ್ತು ವರ್ಷ ಆದರೂ ಈ ಕಾಂಗ್ರೆಸ್ ಸರ್ಕಾರ ಶಿಕ್ಷಣಕ್ಕೆ ಆದ್ಯತೆ ಕೊಡಲಿಲ್ಲ. ಶೇಕಡಾ ೪೦ ರಷ್ಡು ಶಿಕ್ಷಕರ ಹುದ್ದೆ ಖಾಲಿ ಇದೆ. ಬಡ ಜನರಿಗೆ ಮೋದಿಯವರು ಐದು ಕೆಜಿ ಅಕ್ಕಿ ಕೊಡ್ತಾರೆ ಇವರು ಅದನ್ನ ಹೇಳ್ತಾರಾ! ಇವರು ಗ್ಯಾರಂಟಿ ಗಾಗಿ ಲಕ್ಷಾಂತರ ಕೋಟಿ ಸಾಲ ಮಾಡಿದ್ದಾರೆ.

ಇವರು ಬಿಜೆಪಿಯನ್ನ ಪರ್ಸೆಂಟೇಜ್ ಎನ್ನೋರು ಇವರು ರೈತರಿಂದಲು ಪರ್ಸೆಂಡೇಜ್ ತಗೊತಾರಲ್ಲ ಸ್ವಾಮಿ ಎಂದು ಆರೋಪ ಮಾಡಿದರು.

Continue Reading

Trending

error: Content is protected !!