Connect with us

Mysore

ಕೇಂದ್ರ ವಾರ್ತಾ ಶಾಖೆಯ ನಿರ್ದೇಶಕರಾಗಿದ್ದ ಕೇಶವಮೂರ್ತಿ ನಿಧನ

Published

on

ಮೈಸೂರು: ನವದೆಹಲಿಯ ಕೇಂದ್ರ ವಾರ್ತಾ ಶಾಖೆ(PIB) ಯಲ್ಲಿ ನಿರ್ದೇಶಕರಾಗಿ ಸೇವೆ ಸಲ್ಲಿಸುತ್ತಿರುವ ಕರ್ನಾಟಕದ ಡಾ.ಎಚ್‌.ಆರ್‌. ಕೇಶವಮೂರ್ತಿ (59) ಅವರು ಮೈಸೂರಿನಲ್ಲಿ ಕೊನೆಯುಸಿರೆಳೆದರು.

1995ರ ಶ್ರೇಣಿಯ ಭಾರತೀಯ ಸಮಾಚಾರ ಸೇವಾ ಅಧಿಕಾರಿಯಾಗಿದ್ದ ಕೇಶವಮೂರ್ತಿ ಅವರು ಕಳೆದ ಕೆಲವು ದಿನಗಳಿಂದ ಅಸ್ವಸ್ಥರಾಗಿದ್ದರು. ಎಂದು ಕುಟುಂಬದ ಸದಸ್ಯರು ಮಾಹಿತಿ ನೀಡಿದ್ದಾರೆ. ಅವರು ಪತ್ನಿ, ಓರ್ವ ಪುತ್ರಿ, ಓರ್ವ ಪುತ್ರನನ್ನು ಅಗಲಿದ್ದಾರೆ.

ಕೇಶವಮೂರ್ತಿ ಅವರು ಹಲವಾರು ಹುದ್ದೆಗಳನ್ನು ಯಶಸ್ವಿಯಾಗಿ ನಿಭಾಯಿಸಿದ್ದರು.

ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ, ನಗರಾಭಿವೃದ್ಧಿ ಸಚಿವಾಲಯ, ಕೃಷಿ ಸಚಿವಾಲಯ, ದೂರ ಸಂಪರ್ಕ ಸಚಿವಾಲಯ ಹಾಗೂ ಈಶಾನ್ಯದ ಅರುಣಾಚಲ ಪ್ರದೇಶದ ಇಟಾ ನಗರದಲ್ಲಿ ಹಲವು ವರ್ಷಗಳ ಸೇವೆ ಸಲ್ಲಿಸಿದ್ದರು.

ಕೇಶವಮೂರ್ತಿ ಅವರ ನಿಧನಕ್ಕೆ ಪಿ.ಐ.ಬಿ. ಕರ್ನಾಟಕ ವಲಯದ ಹೆಚ್ಚುವರಿ ಮಹಾ ನಿರ್ದೇಶಕ ಎಸ್.ಜಿ. ರವೀಂದ್ರ ಹಾಗೂ ಕೇಂದ್ರ ಸಂವಹನ ಇಲಾಖೆಯ ಹಿರಿಯ ಅಧಿಕಾರಿಗಳು, ಸಿಬ್ಬಂದಿ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

Continue Reading

Mysore

ದಲಿತರ ಮೇಲೆ ಹಲ್ಲೆ ಖಂಡಿಸಿ ಪ್ರತಿಭಟನೆ

Published

on

ಮೈಸೂರು: ಜಿಲ್ಲೆಯ ಎಚ್‌.ಡಿ.ಕೋಟೆ ತಾಲ್ಲೂಕಿನ ಗ್ರಾಮದಲ್ಲಿ ದಲಿತ ಮಹಿಳೆ ಮೇಲೆ ಹಲ್ಲೆ ನಡೆಸಿರುವ ಘಟನೆಯನ್ನು ಖಂಡಿಸಿ ಕರ್ನಾಟಕ ವೀರಕೇಸರಿ ಪಡೆ ಪ್ರತಿಭಟಿಸಿದರು.

ನಗರದ ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಪ್ರತಿಭಟಿಸಿದ ಪಡೆಯ ಕಾರ್ಯಕರ್ತರು ದಲಿತರ ಮೇಲಿನ ಹಲ್ಲೇ ಘಟನೆಯನ್ನು ವಿರುದ್ಧ ನಾನಾ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು.ವೀರಕೇಸರಿ ಪಡೆಯ ಅಧ್ಯಕ್ಷ ಮಧುವನ ಚಂದ್ರು ಮಾತನಾಡಿ, ಎಚ್‌.ಡಿ.ಕೋಟೆ ತಾಲ್ಲೂಕಿನ ನಾಗನಹಳ್ಳಿ ಗ್ರಾಮದ ಕವಿತಾಬಾಯಿ ಮತ್ತು ಅವರ ವಿಕಲಚೇತನ ಪತಿ ರಾಯಪ್ಪರ ಮೇಲೆ ಸವರ್ಣೀಯರಾದ ವಿಜಯಕುಮಾರ್‌ ಮತ್ತು ಪತ್ನಿ ಕವಿತಾ ಮೇರಿ, ಮಗಳಾದ ಶಾಲಿನಿ, ಅಳಿಯ ಯೋಗೇಶ್‌ ನಿರಂತರವಾಗಿ ದೈಹಿಕವಾಗಿ ಹಲ್ಲೆ ನಡೆಸಿದ್ದಾರೆ. ಇದಾಗಿಯೂ ಹಲ್ಲೆಗೊಳಗಾದವರಿಂದ ಅಟ್ರಾಸಿಟಿ ದೂರು ದಾಖಲಿಸಿಲ್ಲ. ಬದಲಿಗೆ ಹಲ್ಲೆಗೆ ಒಳಗಾದವರ ಮೇಲೆ ದೂರು ದಾಖಲಿಸಿದ್ದಾರೆಂದು ದೂರಿದರು.

ಈ ಹಿನ್ನೆಲೆಯಲ್ಲಿ ಹಲ್ಲೆ ನಡೆಸಿದವರ ವಿರುದ್ಧ ಕಾನೂನು ರೀತಿ ದೂರು ದಾಖಲಿಸಿ ಮುಂದಿನ ಕ್ರಮ ಜರುಗಿಸಬೇಕು. ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ಉಗ್ರ ರೂಪದ ಪ್ರತಿಭಟನೆ ನಡೆಸಲಾಗುವುದು ಎಂದು ಹೇಳಿದರು. ಬಸವರಾಜು, ಸಿದ್ದರಾಜು, ರಾಮನಾಯಕ, ರಾಜೇಶ್ವರಿ ಇನ್ನಿತರರು ಉಪಸ್ಥಿತರಿದ್ದರು.

Continue Reading

Mysore

ವಾಜಮಂಗಲ ಗ್ರಾಮದಲ್ಲಿ ಅಂಬೇಡ್ಕರ್ ಬ್ಯಾನರ್ ಹರಿದ ಕಿಡಿಗೇಡಿಗಳು

Published

on

ಅಂಬೇಡ್ಕರ್ ಅವರ ಭಾವಚಿತ್ರವಿರುವ ಬ್ಯಾನರ್ ಹರಿದ ಕಿಡಿಗೇಡಿಗಳು

ಸಂವಿಧಾನ ಶಿಲ್ಪಿ ಭಾರತ ರತ್ನ ಡಾ.ಬಿ.ಆರ್.ಅಂಬೇಡ್ಕರ್ ಅವರ ಭಾವಚಿತ್ರವಿರುವ ಬ್ಯಾನರ್ ಅನ್ನು ಕತ್ತರಿಸಿ ಅವಮಾನ ಮಾಡಿರುವ ಘಟನೆ ತಾಲ್ಲೂಕಿನ ವಾಜಮಂಗಲ ಗ್ರಾಮದಲ್ಲಿ ನಡೆದಿದೆ.

ವಾಜಮಂಗಲದಲ್ಲಿ ಗ್ರಾಮದಲ್ಲಿ ಏ.14 ರಂದು ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಜಯಂತಿ ಆಚರಣೆ ವೇಳೆ ಗ್ರಾಮದ ಮುಖ್ಯ ರಸ್ತೆಯಲ್ಲಿ ಅಂಬೇಡ್ಕರ್ ಪ್ಲೆಕ್ಸ್ ಗಳನ್ನು ಹಾಕಲಾಗಿತ್ತು. ಕಿಡಿಗೇಡಿಗಳು ಶುಕ್ರವಾರ ರಾತ್ರಿ ವೇಳೆಯಲ್ಲಿ ಅಂಬೇಡ್ಕರ್ ಪ್ಲೆಕ್ಸ್ ಗಳನ್ನು ಹರಿದು ಅವಮಾನ ಮಾಡಿದ್ದಾರೆ.

ಅಂಬೇಡ್ಕರ್ ಅವರ ನಾಮ ಫಲಕದ ಮೇಲೆ ಚಪಲ್ಲಿ ನೇತು ಹಾಕಿ ಅಪಮಾನ ಮಾಡಿದ್ದಾರೆ.

ಗ್ರಾಮಸ್ಥರು ಸ್ಥಳದಲ್ಲೇ ಕುಳಿತು ಪ್ರತಿಭಟನೆ ಮಾಡಿದರು.
ಘಟನೆಯ ಸ್ಥಳಕ್ಕೆ ಆಗಮಿಸಿದ ಹೆಚ್ಚುವರಿ ಜಿಲ್ಲಾಧಿಕಾರಿ ಡಾ.ಪಿ.ಶಿವರಾಜು ಮಾತನಾಡಿ, ಈ ಘಟನೆಗೆ ಕಾರಣರಾದವರಿಗೆ ಕಾನೂನಿನಡಿಯಲ್ಲಿ ಕಠಿಣ ಶಿಕ್ಷೆ ವಿಧಿಸಲಾಗುವುದು.
ಜಿಲ್ಲೆಯ ಬೇರೆ ಯಾವ ಕಡೆಯೂ ಸಹ ಈ ರೀತಿಯ ಘಟನೆ ಯಾಗದಂತೆ ಮುಂಜಾಗ್ರತಾ ಕ್ರಮ ವಹಿಸುತ್ತೇವೆ ಎಂದರು.

ಇದೇ ಸಂದರ್ಭದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿಷ್ಣುವರ್ದನ್, ತಹಶೀಲ್ದಾರ್ ಮಹೇಶ್ ಹಾಜರಿದ್ದರು.

Continue Reading

Mysore

12 ವರ್ಷದ ಬಾಲಕಿ ಮೇಲೆ ಅತ್ಯಾಚಾರ : ಆರೋಪಿ ಬಂಧನ

Published

on

ಎಚ್.ಡಿ.ಕೋಟೆ: 12 ವರ್ಷದ ಅಪ್ರಾಪ್ತ ಬಾಲಕಿ ಮೇಲೆ ಪಕ್ಕದ ಮನೆಯ 65 ವರ್ಷದ ವ್ಯಕ್ತಿ ಅತ್ಯಾಚಾರ ಮಾಡಿರುವ ಘಟನೆ ತಾಲ್ಲೂಕಿನ ಹಂಪಾಪುರ ಗ್ರಾಮದಲ್ಲಿ ಏ.11 ರಂದು ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ.

ಏ.11 ರಂದು ಗ್ರಾಮದ ಮರಿಗೌಡ ಎಂಬ ವ್ಯಕ್ತಿ ಬಾಲಕಿಯನ್ನು ಪುಸಲಾಯಿಸಿ ತನ್ನ ಮನೆಗೆ ಕರೆದುಕೊಂಡು ಹೋಗಿ ಅತ್ಯಾಚಾರ ಮಾಡಿದ್ದಾನೆ.

ಬಾಲಕಿ ಹೊಟ್ಟೆ ನೋವಿನಿಂದ ಬಳಲುತ್ತಿದ್ದನ್ನು ಗಮನಿಸಿದ ತಂದೆ ಮಗಳನ್ನು ವಿಚಾರಿಸಿದ್ದಾನೆ ಬಾಲಕಿ ನಡೆದ ಘಟನೆಯನ್ನು ತಂದೆ, ತಾಯಿಗೆ ಹೇಳಿದ್ದಾಳೆ.

ಆತಂಕಗೊಂಡ ಬಾಲಕಿಯ ತಂದೆ, ತಾಯಿ ಮಾನ ಮರ್ಯಾದೆ ಗೊಸ್ಕಾರ ಘಟನೆ ಬಗ್ಗೆ ಯಾರ ಹತ್ತಿರ ಹೇಳಿಕೊಂಡಿಲ್ಲಾ. ಆದರೆ ಸಂತ್ರಸ್ತ ಬಾಲಕಿ ಅತ್ಯಚಾರ ವ್ಯಕ್ತಿ ನೋಡಿದಾಗಲೆಲ್ಲಾ ಇವನನ್ನು ಸಾಯಿಸಿ ಎಂದು ಹೇಳುವುದನ್ನು ಗಮನಿಸಿದ ತಂದೆ ತಾಯಿ ಖುದ್ದು ಘಟನೆ ಬಗ್ಗೆ ತಿಳಿದು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಶುಕ್ರವಾರ ಬೆಳಿಗ್ಗೆ ಹಾಲು ತರಲು ಮನೆಯಿಂದ ಹೊರಗೆ ಬಂದ ಅತ್ಯಾಚಾರ ಮಾಡಿದ ವ್ಯಕ್ತಿಯನ್ನು ಪೊಲೀಸರು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.

ಘಟನೆಗೆ ಸಂಬಂಧಿಸಿದಂತೆ ಎಚ್.ಡಿ.ಕೋಟೆ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪೊಲೀಸರು ತನಿಖೆ ಕೈಗೊಂಡಿದ್ದಾರೆ.

Continue Reading

Trending

error: Content is protected !!