Connect with us

Hassan

ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರ ಎಚ್‌ಡಿಕೆ ಅಭಿಮಾನಿಗಳಿರುವ ಕ್ಷೇತ್ರ: ನಿಖಿಲ್‌ ಕುಮಾರಸ್ವಾಮಿ

Published

on

ಹಾಸನ : ಜೆಡಿಎಸ್ ಶಾಸಕ ಜಿ.ಟಿ.ದೇವೇಗೌಡರ ಬಗ್ಗೆ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಹೇಳಿಕೆ ಹಾಗೂ ಚಾಮುಂಡೇಶ್ವರಿ ಕ್ಷೇತ್ರದಿಂದ ಸಾ.ರಾ.ಮಹೇಶ್ ಸ್ಪರ್ಧೆ ವಿಚಾರವಾಗಿ ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್‌ ಕುಮಾರಸ್ವಾಮಿ  ಪ್ರತಿಕ್ರಿಯೆ ನೀಡಿದ್ದಾರೆ.

ಜಿಲ್ಲೆಯ, ಅರಕಲಗೂಡು ತಾಲೂಕಿನ, ಕೆಲಗಳಲೆ ಗ್ರಾಮದಲ್ಲಿ ಇಂದು ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ ಅವರು, ಇವತ್ತಿನ ಕಾಲಘಟ್ಟದಲ್ಲಿ ಇವೆಲ್ಲವನ್ನೂ ಚರ್ಚೆ ಮಾಡುವುದು ಅಪ್ರಸ್ತುತ. ಕೆಲವೊಂದು ರಾಜಕಾರಣದ ಬೆಳೆವಣಿಗೆಗಳನ್ನು ಬಹಳ ಹತ್ತಿರದಿಂದ ನೀವು ನೋಡಿದ್ದೀರಿ. ನಿಮ್ಮ ಹತ್ರ ಏನು ಮುಚ್ಚು ಮರೆ ಮಾಡಲು ಆಗಲ್ಲ. ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರ ಎಚ್.ಡಿ.ದೇವೇಗೌಡರು, ಎಚ್.ಡಿ.ಕುಮಾರಸ್ವಾಮಿ ಅವರ ಅಭಿಮಾನಿಗಳು ಇರುವ ಕ್ಷೇತ್ರ. ನಮ್ಮನ್ನು ಪ್ರೀತಿಸುವ ದೊಡ್ಡ ವರ್ಗ ಆ ಕ್ಷೇತ್ರದಲ್ಲಿದೆ ಎಂದಿದ್ದಾರೆ.

ಸ್ವಾಭಾವಿಕವಾಗಿ ಸಾರ್ವಜನಿಕ ವಲಯದಲ್ಲಿ ನಿಂತು ಚುನಾಯಿತ ಪ್ರತಿನಿಧಿಗಳು ಚರ್ಚೆ ಮಾಡಿದ ಸಂದರ್ಭದಲ್ಲಿ ಕಾರ್ಯಕರ್ತರಲ್ಲಿ ಸ್ವಲ್ಪ ಇರುಸು ಮುರುಸು ಆಗಿರುವುದು ಸತ್ಯ.  ಮಾಧ್ಯಮದ ಮುಂದೆ ಮಾತನಾಡಿ ಇತ್ಯರ್ಥ ಆಗುವುದು ಏನು ಅಲ್ಲ.   ಏನೇ ಬಗೆ ಹರಿಯಬೇಕಾದರೂ ಕಾಲ ಬರಬೇಕು, ಕಾಲ ನಿರ್ಣಯ ಮಾಡುತ್ತದೆ. ವರಿಷ್ಠರು ಕಾರ್ಯಕರ್ತರ ಗೌರವವನ್ನು ಕಾಪಾಡಿಕೊಳ್ಳುವ ದೃಷ್ಟಿಯಲ್ಲಿ, ಕ್ಷೇತ್ರವನ್ನು ಉಳಿಸಿಕೊಳ್ಳಲು ಆಯಾ ಸಂದರ್ಭದಲ್ಲಿ ಒಳ್ಳೆಯ ತೀರ್ಮಾನ ತೆಗೆದುಕೊಳ್ಳುತ್ತಾರೆಂದು ಈ ಪಕ್ಷದ ಕಾರ್ಯಕರ್ತನಾಗಿ ನಂಬಿಕೆ ಇಟ್ಟುಕೊಂಡಿದ್ದೇನೆ ಎಂದು ಹೇಳಿದ್ದಾರೆ.

ಇದೇ ಸಂದರ್ಭದಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣೆಗಳಲ್ಲಿ ಮೈತ್ರಿ ಬಗ್ಗೆ ಮಾಜಿಶಾಸಕ ಪ್ರೀತಂಗೌಡ ವಿರೋಧ, 2028 ಕ್ಕೆ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಮುಖ್ಯಮಂತ್ರಿ ಎಂಬ ಜೆಡಿಎಸ್ ನಾಯಕರ ಹೇಳಿಕೆ ಕುರಿತು ಪ್ರೀತಂಗೌಡ ಟಾಂಗ್ ನೀಡಿದ ವಿಚಾರವಾಗಿ ಮಾತನಾಡಿದ ಅವರು, ಜನತಾದಳ ಪಕ್ಷದ ನಾಯಕತ್ವದ ಹಿಡಿದಿರುವುದು ಸನ್ಮಾನ್ಯ ಕುಮಾರಣ್ಣ ಅವರು. ದೇವೇಗೌಡರು ಸಾಹೇಬರ ಮಾರ್ಗದರ್ಶನ, ರೇವಣ್ಣ ಸಾಹೇಬರ ಅವರ ರಾಜಕೀಯ ಶಕ್ತಿ ಬಹಳ ಪ್ರಬಲವಾಗಿದೆ. ಇವತ್ತಿಗೂ ಕುಮಾರಣ್ಣ ಅವರು ಕೊಟ್ಟಂತಹ ಆಡಳಿತ, ನಾನು ಜನರೊಂದಿಗೆ ಜನತಾದಳ ಮಾಡಿದಾಗ 52 ಕ್ಷೇತ್ರದಲ್ಲಿ 9 ಸಾವಿರ ಕಿಲೋಮೀಟರ್ ಪ್ರವಾಸ ಮಾಡಿದ್ದೆ. ಮೊದಲನೇ ಹಂತದಲ್ಲಿ ಓಡಾಡಿಕೊಂಡು ಬಂದಿದ್ದೇನೆ ಎಂದು ತಿಳಿಸಿದ್ದಾರೆ.

ಎಲ್ಲೇ ಹೋದರು ಇವತ್ತಿನ ಈ ಸರ್ಕಾರದ ದುರಾಡಳಿತ, ಸರ್ಕಾರದ ಕೆಲವೊಂದು ನಡವಳಿಕೆ ನೋಡಿ ಜನರು ಬೇಸತ್ತಿದ್ದಾರೆ. ಇಂತಹ ಸಂದರ್ಭದಲ್ಲಿ ಎಲ್ಲೇ ಹೋದರು ಜನ ಕುಮಾರಣ್ಣನಂತಹ ನಾಯಕ ಈ ರಾಜ್ಯದ ಚುಕ್ಕಾಣಿಯನ್ನು ಹಿಡಿಯಬೇಕೆಂಬ ಪ್ರಸ್ತಾಪಗಳು ಬಹಳ ಗಟ್ಟಿಯಾಗಿ ನಡೆಯುತ್ತಿದೆ. ಅದಕ್ಕೆ ನಾನು ಸಾಕ್ಷಿ ಇದ್ದೇನೆ, 2028 ಜನತಾದಳ ಪಕ್ಷ ಎಂದರೆ ಕುಮಾರಣ್ಣನ ನೇತೃತ್ವದಲ್ಲಿ ಚುನಾವಣೆ ನಡೆಯುತ್ತದೆ. ಇದು ಕಾರ್ಯಕರ್ತರ ಅಪೇಕ್ಷೆ ಅಲ್ಲಾ, ಜನರ ಭಾವನೆ ಕೂಡ ಅದೇ ಆಗಿದೆ.  ಅದನ್ನು ನಾನು ಹೊರಗಡೆ ಹಾಕಿದ್ದೀನಿ, ನಮ್ಮದು ಪ್ರಾದೇಶಿಕ ಪಕ್ಷ ಕಳೆದ ಲೋಕಸಭಾ ಚುನಾವಣೆಯಲ್ಲಿ ನಾವು ಅವರು ಜೊತೆ ಒಂದಾಗಿದ್ದೇವೆ ಎಂದಿದ್ದಾರೆ.

ರಾಜ್ಯದ ಹಿತ ದೃಷ್ಟಿಯಿಂದ ಒಂದಾಗಿದ್ದೇವೆ

ರಾಜ್ಯದ ಜನತೆಯೂ ಅದಕ್ಕೆ ಪೂರಕವಾಗಿ ಸಹಿ ಹಾಕಿದ್ದಾರೆ. ಲೋಕಸಭೆಗೆ 19 ಜನ ಸಂಸದರನ್ನು ಗೆಲ್ಲಿಸಿಕೊಟ್ಟಿದ್ದಾರೆ. ಕುಮಾರಣ್ಣ ಅವರು ಮುಂದೆ ಮುಖ್ಯಮಂತ್ರಿ ಆಗ್ತಾರೋ, ಆಗಬೇಕೋ, ಏನು ಆಗಬೇಕು, ರಾಜ್ಯ ರಾಜಕಾರಣಕ್ಕೆ ಯಾವಾಗ ಬರಬೇಕು. ಇವೆಲ್ಲವನ್ನು ಬಿಜೆಪಿಯ ರಾಷ್ಟ್ರೀಯ ನಾಯಕರು ಕಾಲ ಬಂದಂತಹ ಸಂದರ್ಭದಲ್ಲಿ ಕುಳಿತು ಚರ್ಚೆ ಮಾಡಿ ನಿರ್ಣಯ ತೆಗೆದುಕೊಳ್ಳುತ್ತಾರೆ ಎಂದು ಹೇಳಿದ್ದಾರೆ.

ಬಿಜೆಪಿ ಒಂದು ರಾಷ್ಟ್ರೀಯ ಪಕ್ಷ

ಶಿಸ್ತು ಪಾಲನೆ ಕಮಿಟಿ ಇರುತ್ತೆ, ನಮ್ಮಲ್ಲೂ ಇದೆ. ಆ ಶಿಸ್ತು ಪಾಲನೆ ಕಮಿಟಿ ಯಾ‌ರ‌್ಯಾರು ಪಕ್ಷದ ಅಶಿಸ್ತಿನ ನಡವಳಿಕೆಗೆ ಕಾರಣರಾಗುತ್ತಾರೆ. ಆಯಾ ಪಕ್ಷದ ಕಮಿಟಿಯಲ್ಲಿ ಇವೆಲ್ಲವೂ ತೀರ್ಮಾನ ಮಾಡುತ್ತಾರೆ. ಬೀದಿಯಲ್ಲಿ ನಿತ್ಕಂಡು, ಬೀದಿ ರಂಪಾಟ ಮಾಡಿಕೊಂಡು ಎರಡು ಪಕ್ಷದ ಕಾರ್ಯಕರ್ತರು, ನಾಯಕರು ಗೌರವ ಕಳೆದುಕೊಂಡು ಮಾತನಾಡಬೇಡಿ ಎಂದು ಅವರ ಪಕ್ಷದಲ್ಲಿ ತಿದ್ದಿ ಬುದ್ದಿ ಹೇಳುತ್ತಾರೆಂದು  ನಂಬಿದ್ದೀನಿ, ಕಾದು ನೋಡೋಣ ಎಂದು ತಿಳಿಸಿದ್ದಾರೆ.

Continue Reading

Hassan

ವಿಶೇಷ ಸಮಗ್ರ ಪರಿಷ್ಕರಣೆ ಬಿಎಲ್‌ಎ -2 ಕಾರ್ಯಾಗಾರವನ್ನು ಉದ್ಘಾಟಿಸಿದ ಸಿ.ಎನ್‌.ಬಾಲಕೃಷ್ಣ

Published

on

ವರದಿ: ದಯಾನಂದ ಶೆಟ್ಟಿಹಳ್ಳಿ

ಚನ್ನರಾಯಪಟ್ಟಣ: ಎಸ್‌ಐಆರ್ ಪ್ರಕ್ರಿಯೆಯ ಕುರಿತು ಸುಳ್ಳು ಜನಾಭಿಪ್ರಾಯ ಮೂಡಿಸಲು, ಪ್ರಜಾಪ್ರಭುತ್ವವನ್ನು ಅಪಖ್ಯಾತಿಗೊಳಿಸಲು ಅಪಪ್ರಚಾರ ಮಾಡುತ್ತಿದ್ದಾರೆ ಎಂದು ಶಾಸಕ ಸಿ.ಎನ್. ಬಾಲಕೃಷ್ಣ ಆರೋಪಿಸಿದರು.

ಪಟ್ಟಣದ ಸರ್ಕಾರಿ ನೌಕರರ ಭವನದಲ್ಲಿ ಶುಕ್ರವಾರದಂದು ಕರ್ನಾಟಕ ಪ್ರದೇಶ ಜನತಾದಳ (ಜಾತ್ಯತೀತ)ದ
ಶ್ರವಣಬೆಳಗೊಳ ವಿಧಾನಸಭಾ ಕ್ಷೇತ್ರದ ವಿಶೇಷ ಸಮಗ್ರ ಪರಿಷ್ಕರಣೆ ಬಿಎಲ್‌ಎ -2 ಕಾರ್ಯಾಗಾರವನ್ನು ಉದ್ಘಾಟಿಸಿ ಅವರು ಮಾತನಾಡಿದರು.

, ಮತದಾರರ ಪಟ್ಟಿಯನ್ನು ಶುದ್ಧ, ಹೆಚ್ಚು ಪಾರದರ್ಶಕ ಮತ್ತು ಹೆಚ್ಚು ವಿಶ್ವಾಸಾರ್ಹವಾಗಿಸುವುದು ಎಸ್‌ಐಆರ್‌ನ ಗುರಿಯಾಗಿದೆ. ಈ ಮಹತ್ವದ ಪ್ರಕ್ರಿಯೆಯ ಬಗ್ಗೆ ಗೊಂದಲವನ್ನು ಹರಡುವುದು ಪ್ರಜಾಪ್ರಭುತ್ವಕ್ಕೆ ಅನ್ಯಾಯ ಮಾತ್ರವಲ್ಲದೆ ನಾಗರಿಕರ ಹಕ್ಕುಗಳಿಗೆ ಮಾಡಿದ ಅವಮಾನವೂ ಆಗಿದೆ. ಕಾಂಗ್ರೆಸ್ ಸೇರಿದಂತೆ ಎಲ್ಲಾ ವಿರೋಧ ಪಕ್ಷಗಳು ನಕಾರಾತ್ಮಕ ರಾಜಕೀಯವನ್ನು ತ್ಯಜಿಸಿ, ಕಾನೂನು ಪ್ರಕ್ರಿಯೆಯನ್ನು ಗೌರವಿಸಿ ರಚನಾತ್ಮಕ ಸಲಹೆಗಳನ್ನು ನೀಡಬೇಕೆಂದು ಅವರು ಒತ್ತಾಯಿಸಿದರು.

ವಿರೋಧ ಪಕ್ಷಗಳು ತಮ್ಮ ಪ್ರಜಾಪ್ರಭುತ್ವ ವಿರೋಧಿ ಮನಸ್ಥಿತಿಯನ್ನು ಬಹಿರಂಗಪಡಿಸುತ್ತಿವೆ. ಪಾರದರ್ಶಕ ಮತದಾರರ ಪಟ್ಟಿಯು ಅವಕಾಶವಾದಿ ರಾಜಕೀಯವನ್ನು ದುರ್ಬಲಗೊಳಿಸುವುದರಿಂದ ವಿರೋಧ ಪಕ್ಷಗಳು ಚುನಾವಣಾ ಸ್ವಚ್ಛತೆಗೆ ಹೆದರುತ್ತಿವೆ. ಮೊದಲ ದಿನದಿಂದಲೇ SIR ಬಗ್ಗೆ ಗೊಂದಲ, ಭಯ ಮತ್ತು ಸುಳ್ಳುಗಳನ್ನು ಬಿತ್ತುವ ಮೂಲಕ ಸಾರ್ವಜನಿಕರನ್ನು ದಾರಿತಪ್ಪಿಸಿವೆ. ಸುಪ್ರೀಂ ಕೋರ್ಟ್ ಚುನಾವಣಾ ಆಯೋಗವು ತನ್ನ ಅಧಿಕಾರ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸಿದೆ.

ವಿರೋಧ ಪಕ್ಷಗಳು ಮತ್ತು ಅದರ ಮಿತ್ರಪಕ್ಷಗಳ ರಾಜಕೀಯವು ಸತ್ಯಗಳ ಮೇಲೆ ಅಲ್ಲ, ವದಂತಿಗಳು, ಅಪನಂಬಿಕೆ ಮತ್ತು ಮತಬ್ಯಾಂಕ್ ಲೆಕ್ಕಾಚಾರಗಳ ಮೇಲೆ ಆಧಾರಿತವಾಗಿದೆ.

ಪ್ರಜಾಪ್ರಭುತ್ವ ಸಂಸ್ಥೆಗಳನ್ನು ಬಲಪಡಿಸಲು ಯಾರು ಬಯಸುತ್ತಾರೆ ಮತ್ತು ರಾಜಕೀಯ ಲಾಭಕ್ಕಾಗಿ ಯಾರು ಗೊಂದಲವನ್ನು ಹರಡುತ್ತಾರೆ ಎಂಬುದನ್ನು ಸಾರ್ವಜನಿಕರು ಈಗ ಅರ್ಥಮಾಡಿಕೊಂಡಿದ್ದಾರೆ, ಗೊಂದಲವನ್ನು ಹರಡುವವರಿಗೆ ಸೂಕ್ತ ಉತ್ತರ ನೀಡುತ್ತಾರೆ. ಎಲ್ಲಾ ಮತದಾರರು ವದಂತಿಗಳಿಗೆ ಗಮನ ಕೊಡಬಾರದು ಮತ್ತು ತಮ್ಮ ಮತದಾನದ ಹಕ್ಕುಗಳನ್ನು ರಕ್ಷಿಸಲು ಜಾಗೃತರಾಗಿರಬೇಕು ಎಂದು ಅವರು ಮನವಿ ಮಾಡಿದರು.

ಶ್ರವಣಬೆಳಗೊಳ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಬರುವ ಪ್ರತಿಯೊಂದು ಬೂತ್‌ಗಳಲ್ಲಿ ಮತಪಟ್ಟಿ ಪರಿಷ್ಕರಣೆ ನಡೆಸುವ ಸಂದರ್ಭದಲ್ಲಿ ಜೆಡಿಎಸ್ ಕಾರ್ಯಕರ್ತರು ಎಚ್ಚರವಹಿಸಬೇಕೆಂದರು. ಕ್ಷೇತ್ರದ ಪ್ರತಿಯೊಂದು ಬೂತ್‌ಗಳಲ್ಲಿ ಬಿಎಲ್‌ಎಗಳು ಪರಿಷ್ಕರಣೆಗಾಗಿ ಹೋದಾಗ ಜೆಡಿಎಸ್ ಕಾರ್ಯಕರ್ತರು ಜತೆಯಲ್ಲಿದ್ದುಕೊಂಡು ಸಹಕಾರ ನೀಡಬೇಕು. ಮೃತರಾದವರು, ಗ್ರಾಮ,ಪಟ್ಟಣ ಬಿಟ್ಟು ಹೋಗಿರುವವರನ್ನು ಗುರುತಿಸಬೇಕು ಮತ್ತು ಎರಡು ಕಡೆಗಳಲ್ಲಿ ಬರುವ ಹೆಸರನ್ನು ತೆಗೆದು ಹಾಕುವ ಕೆಲಸ ಮಾಡಬೇಕು. 18 ವರ್ಷ ತುಂಬಿದವರನ್ನು ಹೊಸ ಮತದಾರರ ಪಟ್ಟಿಗೆ ಸೇರಿಸುವ ಕೆಲಸ ಮಾಡಬೇಕು.ಜತೆಗೆ ಮುಂಬರುವ ಚುನಾವಣೆಗಳಿಗೆ ಅರ್ಹ ಮತದಾರರು ಮಾತ್ರ ಮತದಾನ ಮಾಡುವಂತೆ ನೋಡಿಕೊಳ್ಳುವ ಜವಾಬ್ದಾರಿ ಪ್ರತಿಯೊಬ್ಬ ಬೂತ್ ಏಜೆಂಟರದ್ದಾಗಿರುತ್ತದೆ. ಆದ್ದರಿಂದ ಈ ಬಗ್ಗೆ ಸಮಪರ್ಕವಾಗಿ ಕಾರ್ಯ ನಿರ್ವಹಿಸಬೇಕೆಂದರು.

ಜೆಡಿಎಸ್ ರಾಜ್ಯ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿಯವರು ರಾಜ್ಯಾದ್ಯಂತ ಪ್ರವಾಸ ಮಾಡಿ ಜೆಡಿಎಸ್ ಪಕ್ಷದ ಸದಸ್ಯತ್ವ ನೋಂದಣಿಗೆ ಪಕ್ಷ ಸಂಘಟನೆ ಮಾಡುತ್ತಿದ್ದಾರೆ. ಕ್ಷೇತ್ರದ ಕಾರ್ಯಕರ್ತರು ಎಲ್ಲರನ್ನು ಒಗ್ಗೂಡಿಸಿ ಪಕ್ಷವನ್ನು ಸಂಘಟಿಸಬೇಕು. ಬೂತ್ ಮಟ್ಟದ ಸಮಿತಿಗಳನ್ನು ರಚಿಸಿ, ಅರ್ಹ ಮತದಾರರನ್ನು ಗುರುತಿಸಿ, ನೇರವಾಗಿ ಅರ್ಜಿಗಳನ್ನು ಪಡೆದು ಪರಿಷ್ಕರಣೆ ಮಾಡಿ ಅಧಿಕಾರಿಗಳಿಗೆ ಸಲ್ಲಿಸಬೇಕು. ಬಿಎಲ್‌ಎಗಳು ನಿರಂತರ ಪರಿಶ್ರಮದಿಂದ ಮತದಾರರ ಪಟ್ಟಿಯ ಪರಿಷ್ಕರಣೆ ಕಾರ್ಯ ಕೈಗೊಂಡು, ಮುಂಬರುವ ಚುನಾವಣೆಯಲ್ಲಿ ಗೆಲುವು ಸಾಧಿಸಲು ಇಂದಿನಿಂದಲೇ ಕ್ರಿಯಾಶೀಲರಾಗಬೇಕು ಎಂದು ಅವರು ಸಲಹೆ ನೀಡಿದರು.


ಬಿಎಲ್ಎ ಕಾರ್ಯಗಾರದಲ್ಲಿ ವಿಶೇಷ ಸಮಗ್ರ ಪರಿಷ್ಕರಣೆ ಕುರಿತು ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ್ದ ವೆಂಕಟೇಶ್ ಮತ್ತು ಅಶ್ವಿನ್ ಎಸ್ಐಆರ್ ಕುರಿತಂತೆ ಎಸ್ಐಆರ್‌ನ ಹಂತಗಳು ಮತ್ತು ಪ್ರತಿ ಹಂತದಲ್ಲಿನ ಪ್ರಕ್ರಿಯೆಗಳ ಬಗ್ಗೆ ಸವಿವರವಾಗಿ ತಿಳಿಸಿಕೊಟ್ಟರು.

ತಾಲೂಕು ಜೆಡಿಎಸ್ ಅಧ್ಯಕ್ಷ ಪರಮ ದೇವರಾಜೇಗೌಡ, ಜೆಡಿಎಸ್ ಮುಖಂಡರಾದ,ಪರಮ‌ ಕೃಷ್ಣೇಗೌಡ, ಬಿ.ಎಚ್.ಶಿವಣ್ಣ, ವಿ.ಎನ್.ರಾಜಣ್ಣ. ಚಂದ್ರಪ್ಪ, ಚಿಕ್ಕಬಿಳ್ತಿ ಪ್ರವೀಣ್, ರವೀಶ್, ವಿಕ್ಟರ್, ಧರ್ಮ, ಉಮೇಶ್, ವಡ್ಡರ ಹಳ್ಳಿ ರಾಜಣ್ಣ, ದಿಡಗ ವಾಸು, ಮೂಡನಹಳ್ಳಿ ಚಂದ್ರಣ್ಣ, ಬಾಗೂರು ಶಿವಣ್ಣ, ಕಾರೇಹಳ್ಳಿ ನಟೇಶ್, ಮಖಾನ್ ಶಿವು, ಡಿಶ್ ಕುಮಾರ್, ಪೂರ್ಣಿಮಾ ಟಿಎಪಿಸಿಎಂಎಸ್ ನ ಅಧ್ಯಕ್ಷ ಎಚ್.ಆರ್. ವೆಂಕಟೇಶಮೂರ್ತಿ, ನಿರ್ದೇಶಕ ಅನಿಲ್ ಮರಗೂರು ಪುರಸಭಾ ಮಾಜಿ ಅಧ್ಯಕ್ಷ ಕೋಟೆಮೋಹನ್ ಸೇರಿದಂತೆ ಪುರಸಭಾ ಸದಸ್ಯರುಗಳು ಹಾಗೂ ಶ್ರವಣಬೆಳಗೊಳ ವಿಧಾನಸಭಾ ಕ್ಷೇತ್ರದ ಎಲ್ಲಾ ಹೋಬಳಿಗಳ ಜೆಡಿಎಸ್ ಸದಸ್ಯರು ಭಾಗವಹಿಸಿದ್ದರು.

Continue Reading

Hassan

ಕೆ.ಎಂ. ಶಿವಲಿಂಗೇಗೌಡರಿಗೆ ಸಚಿವ ಸ್ಥಾನ ನೀಡುವಂತೆ ರಾಹುಲ್‌ ಗಾಂಧಿಗೆ ಮನವಿ ಮಾಡಿದ ಶ್ರೇಯಸ್‌ ಪಟೇಲ್‌

Published

on

ಹಾಸನ: ಸಂಸದ ಶ್ರೇಯಸ್ ಪಟೇಲ್ ಅವರು ಎಐಸಿಸಿ ನಾಯಕ ರಾಹುಲ್ ಗಾಂಧಿಗೆ ಪತ್ರ ಬರೆದು, ಅರಸೀಕೆರೆ ಕ್ಷೇತ್ರದ ಹಿರಿಯ ಕಾಂಗ್ರೆಸ್ ಶಾಸಕ ಕೆ.ಎಂ. ಶಿವಲಿಂಗೇಗೌಡರಿಗೆ ಕರ್ನಾಟಕ ಸಚಿವ ಸಂಪುಟದಲ್ಲಿ ಸ್ಥಾನ ನೀಡಬೇಕೆಂದು ಒತ್ತಾಯಿಸಿದ್ದಾರೆ.

ಪತ್ರದಲ್ಲಿ ಅವರು ಹೇಳಿರುವಂತೆ, ಹಾಸನ ಜಿಲ್ಲೆಯ ಏಳು ವಿಧಾನಸಭಾ ಕ್ಷೇತ್ರಗಳಲ್ಲಿ ಶಿವಲಿಂಗೇಗೌಡರು ಪ್ರಸ್ತುತ ಏಕೈಕ ಕಾಂಗ್ರೆಸ್ ಶಾಸಕರಾಗಿದ್ದು, ಪಕ್ಷವನ್ನು ಕಠಿಣ ಪರಿಸ್ಥಿತಿಗಳಲ್ಲಿಯೂ ತಳಮಟ್ಟದಿಂದ ಸಂಘಟಿಸುವಲ್ಲಿ ಮಹತ್ವದ ಪಾತ್ರ ವಹಿಸಿದ್ದಾರೆ. ನಾಲ್ಕು ಬಾರಿ ಶಾಸಕರಾಗಿ ಆಯ್ಕೆಯಾಗಿರುವ ಅವರು ಅನುಭವಸಂಪನ್ನ ನಾಯಕನಾಗಿದ್ದು, ಸದನದಲ್ಲಿ ತಮ್ಮ ವಾಕ್ಚಾತುರ್ಯ ಮತ್ತು ಪಕ್ಷದ ನಿಲುವುಗಳನ್ನು ಗಟ್ಟಿಯಾಗಿ ಪ್ರತಿಪಾದಿಸುವುದರಲ್ಲಿ ಹೆಸರುವಾಸಿಯಾಗಿದ್ದಾರೆ.

ಶ್ರೇಯಸ್ ಪಟೇಲ್ ಅವರು 2024ರ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಗೆಲುವಿಗೆ ಶಿವಲಿಂಗೇಗೌಡರ ಕೊಡುಗೆ ಪ್ರಮುಖವಾಗಿತ್ತು ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ. ಹೀಗಾಗಿ ಅವರಿಗೆ ಸಚಿವ ಸ್ಥಾನ ನೀಡಿದರೆ ಹಾಸನ ಜಿಲ್ಲೆಯ ಅಭಿವೃದ್ಧಿ ವೇಗಗೊಳ್ಳುತ್ತದೆ ಹಾಗೂ ಜಿಲ್ಲೆಯಲ್ಲಿ ಕಾಂಗ್ರೆಸ್ ಪಕ್ಷ ಇನ್ನಷ್ಟು ಬಲವಾಗುತ್ತದೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

ಈ ಮನವಿಯು ಇದೀಗ ರಾಜಕೀಯ ವಲಯದಲ್ಲಿ ಚರ್ಚೆಗೆ ಕಾರಣವಾಗಿದೆ. ಕಾಂಗ್ರೆಸ್ ಹೈಕಮಾಂಡ್ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಈ ಕುರಿತು ಯಾವ ನಿರ್ಧಾರ ಕೈಗೊಳ್ಳುತ್ತಾರೆ ಎಂಬುದು ಗಮನಸೆಳೆಯುತ್ತಿದೆ.

Continue Reading

Hassan

ಸಿಡಿಲು ಬಡಿದು ಗಾಯಗೊಂಡಿದ್ದ ಹಾಸನದ ರೈತ ಮಂಜರಾಜ್ ಆಸ್ಪತ್ರೆಯಲ್ಲಿ ಸಾ*ವು

Published

on

ಹಾಸನ: ಜಿಲ್ಲೆಯ ಕೊಂಬನಹಳ್ಳಿ ಗ್ರಾಮದಲ್ಲಿ ಸಿಡಿಲು ಬಡಿದು ರೈತ ಮೃತಪಟ್ಟ ಘಟನೆ ನಡೆದಿದೆ.

ನಿನ್ನೆ ಸಂಜೆ ಜಮೀನಿನಲ್ಲಿ ಕೆಲಸ ಮಾಡುತ್ತಿದ್ದಾಗ ಸಿಡಿಲಾಘಾತಕ್ಕೆ ಒಳಗಾಗಿ 44 ವರ್ಷದ ರೈತ ಮಂಜರಾಜ್ ಗಂಭೀರವಾಗಿ ಗಾಯಗೊಂಡಿದ್ದರು. ಅವರನ್ನು ತಕ್ಷಣ ಹಾಸನ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಆಸ್ಪತ್ರೆಯಲ್ಲೇ ಸಾವನ್ನಪ್ಪಿದ್ದಾರೆ.

ಈ ಘಟನೆ ದುದ್ದ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

Continue Reading

Trending

error: Content is protected !!