Politics
ಪ್ರಜ್ವಲ್ ರೇವಣ್ಣಗೆ ಜೀವಾವಧಿ ಶಿಕ್ಷೆ| ಕೋರ್ಟ್ ತೀರ್ಪಿಗೆ ತಲೆ ಬಾಗಬೇಕಾಗುತ್ತದೆ: ನಿಖಿಲ್ ಕುಮಾರಸ್ವಾಮಿ
ಚಿತ್ರದುರ್ಗ: ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ, ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅಪರಾಧಿ ಎಂದು ಘೋಷಿಸಿ ಜೀವಾವಧಿ ಶಿಕ್ಷೆ ನೀಡಿದೆ. ಕೋರ್ಟ್‌ನ ಈ ತೀರ್ಪಿಗೆ ಯಾರೇ ಆದರೂ ತಲೆ ಬಾಗಬೇಕಾಗುತ್ತದೆ ಎಂದು ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ತಿಳಿಸಿದ್ದಾರೆ.
ಜಿಲ್ಲೆಯ ಹಿರಿಯೂರು ತಾಲೂಕಿನ ಮಸ್ಕಲ್ ಬಳಿ ಇಂದು ಈ ಕುರಿತು ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ ಅವರು, ಪ್ರಜ್ವಲ್ ರೇವಣ್ಣ ವಿರುದ್ಧ ಸೆಷನ್ ಕೋರ್ಟ್‍ನಲ್ಲಿ ಆದೇಶ ಪ್ರಕಟಗೊಂಡಿದೆ. ಕೋರ್ಟ್ ತೀರ್ಪಿನ ಬಗ್ಗೆ ಹೆಚ್ಚಿನ ವಿಶ್ಲೇಷಣೆಯ ಅಗತ್ಯವಿಲ್ಲ ಎಂದು ಹೇಳಿದ್ದಾರೆ.

ಪ್ರಜ್ವಲ್ ಮೇಲೆ ಆರೋಪ ಬಂದ ತಕ್ಷಣ ಪಕ್ಷದಿಂದ ಅಮಾನತು ಮಾಡಲಾಗಿತ್ತು. ನಮ್ಮ ಪಕ್ಷದ ವರಿಷ್ಠರು ಪಕ್ಷದಿಂದ ಅಮಾನತಿನಲ್ಲಿಟ್ಟಿದ್ದರು. ಆಗ ಅಪರಾಧಿನೋ, ಅಲ್ಲವೋ ಎಂಬ ತೀರ್ಪು ಬಂದಿರಲಿಲ್ಲ. ವರಿಷ್ಠರ ತೀರ್ಮಾನದ ಸ್ಪಷ್ಟತೆ ಅರ್ಥ ಮಾಡಿಕೊಳ್ಳಬೇಕಾಗುತ್ತದೆ. ಇದಕ್ಕಿಂತ ಹೆಚ್ಚಾಗಿ ಈ ವಿಷಯದ ಬಗ್ಗೆ ನಾನು ಪ್ರಯಿಕ್ರಿಯಿಸಲ್ಲ ಎಂದು ಹೇಳಿದ್ದಾರೆ.
Politics
ರಾಜ್ಯಪಾಲರು v/s ಸರ್ಕಾರ ಮತ್ತೆ ಸಂಘರ್ಷ: ಸಹಿ ಹಾಕದೇ ರಾಷ್ಟ್ರಪತಿ ಅಂಗಳಕ್ಕೆ ದ್ವೇಷ ಭಾಷಣ ಬಿಲ್
ಬೆಂಗಳೂರು: ರಾಜ್ಯಪಾಲರು v/s ಸರ್ಕಾರ ನಡುವೆ ಸಂಘರ್ಷ ಪುನಃ ಶುರುವಾಗಿದ್ದು, ಸರ್ಕಾರದ ದ್ವೇಷ ಭಾಷಣ ಬಿಲ್ ಗೆ ರಾಜ್ಯಪಾಲರು ಕೊಕ್ಕೆ ಹಾಕಿದ್ದು, ಸಹಿ ಹಾಕದೇ ಮಸೂದೆಯನ್ನು ರಾಷ್ಟ್ರಪತಿ ದ್ರೌಪದಿ ಮುರ್ಮ ಅವರಿಗೆ ಅಂಗಳಕ್ಕೆ ಕಳಿಸಿದ್ದಾರೆ. ಈ ಮೂಲಕ ಮತ್ತೆ ಸರ್ಕಾರ- ರಾಜ್ಯಪಾಲರ ಮಧ್ಯೆ ವಾರ್ ಶುರುವಾಗಿದೆ.
ಬೆಳಗಾವಿ ಅಧಿವೇಶನದಲ್ಲಿ ಪಾಸ್ ಆಗಿದ್ದ ದ್ವೇಷ ಭಾಷಣ ಬಿಲ್‌ಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಕೊಕ್ಕೆ ಹಾಕಿದ್ದಾರೆ. ಬಿಲ್‌ಗೆ ಸಹಿ ಹಾಕದೇ ರಾಷ್ಟ್ರಪತಿಗಳ ಅಂಗಳಕ್ಕೆ ಮಸೂದೆ ರವಾನೆ ಮಾಡಿದ್ದಾರೆ. ದ್ವೇಷ ಭಾಷಣದ ವ್ಯಾಖ್ಯಾನವೇ ಮಸೂದೆಯಲ್ಲಿ ಅಸ್ಪಷ್ಟವಾಗಿದೆ. ಮಸೂದೆಗೆ ಒಪ್ಪಿಗೆ ಕೊಡದಂತೆ 40ಕ್ಕೂ ಹೆಚ್ಚು ಮನವಿ ಬಂದಿರೋ ಬಗ್ಗೆ ರಾಜ್ಯಪಾಲರು ಉಲ್ಲೇಖ ಮಾಡಿ ರಾಷ್ಟ್ರಪತಿ ಅಂಗಳಕ್ಕೆ ರವಾನಿಸಿದ್ದಾರೆ.

2. ಅರ್ಥಪೂರ್ಣ ಸಮಾಲೋಚನೆ ಮಾಡದೇ ಅಂಗೀಕಾರ.
3. ಮಸೂದೆ ಸಂಬಂಧ ಕೆಲವು ಕಾನೂನು ತೊಡಕುಗಳಿವೆ.
4. ಮಿತಿಮೀರಿದ ಮತ್ತು ಭಯಾನಕ ಪರಿಣಾಮಗಳನ್ನು ಬೀರಲಿವೆ.
5. ಅಭಿವ್ಯಕ್ತಿ ಸ್ವಾತಂತ್ರ್ಯ, ಮೂಲಭೂತ ಹಕ್ಕನ್ನು ಕಸಿಯುವ ಮುನ್ಸೂಚನೆ.
6. ಈ ಮಸೂದೆಯು ಉದ್ದೇಶಕ್ಕಿಂತ ಪರಿಣಾಮಕ್ಕೆ ಆದ್ಯತೆ ನೀಡಿರುತ್ತದೆ.
7. ಸತ್ಯವನ್ನು ಮಾತಾಡಿದ್ರೂ, ಬೌದ್ಧಿಕ ಟೀಕೆ ಮಾಡಿದ್ರೂ ಬಂಧಿಸಬಹುದಾಗಿದೆ.
8. ಅಭಿವ್ಯಕ್ತಿ ಸ್ವಾತಂತ್ರ‍್ಯದ ರಕ್ಷಣೆ ಒಬ್ಬ ವ್ಯಕ್ತಿ, ಸಮುದಾಯಕ್ಕೆ ಸೀಮಿತವಾಗಿರಬಾರದು.
9. ಇಡೀ ಸಮಾಜದ ಸಾಮೂಹಿಕ ಹಕ್ಕಾಗಿರಬೇಕು.
10. ಅಧಿಕಾರಿಗಳು ತೀರ್ಮಾನಿಸಿದರೆ ಯಾವುದೇ ಕಾರ್ಯಕ್ರಮ ನಿಷೇಧಿಸಬಹುದು.
11. ಮಸೂದೆಯಲ್ಲಿರುವ ಈ ಕ್ರಮ ಸರಿಯಲ್ಲ ಎಂದು ಕಾರಣವನ್ನು ಉಲ್ಲೇಖಿಸಿದ ರಾಜ್ಯಪಾಲರು ದ್ವೇಷ ಭಾಷಣ ಬಿಲ್ ಅನ್ನು ಸಹಿ ಮಾಡದೇ ರಾಷ್ಟ್ರಪತಿ ದ್ರೌಪದಿ ಮುರ್ಮ ಅವರಿಗೆ ರವಾನೆ ಮಾಡಿದ್ದಾರೆ.
Politics
ಕೇಂದ್ರ ಬಜೆಟ್‌ನಲ್ಲಿ ಕರ್ನಾಟಕಕ್ಕೆ ಚೊಂಬು ನೀಡಲಾಗಿದೆ: ಸಿಎಂ ಸಿದ್ದರಾಮಯ್ಯ
ಕಲಬುರಗಿ: ಕರ್ನಾಟಕ ಸೇರಿದಂತೆ ದಕ್ಷಿಣ ಭಾರತಕ್ಕೆ ಬಜೆಟ್‌ನಲ್ಲಿ ಏನೂ ನೀಡಿಲ್ಲ. ಕರ್ನಾಟಕಕ್ಕೆ ಒಂದು ಚೊಂಬು ನೀಡಿದ್ದಾರೆ ಎಂದು ಕೇಂದ್ರ ಬಜೆಟ್ ವಿರುದ್ಧ ಸಿಎಂ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ.
ಕಲಬುರಗಿ ವಿಮಾನ ನಿಲ್ದಾಣದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಎರಡೆರಡು ಬೆಂಗಳೂರು-ಹೈದರಾಬಾದ್ ಹಾಗೂ ಬೆಂಗಳೂರು-ಚೆನ್ನೈ ಹೈಸ್ಪಿಡ್ ರೈಲು ನೀಡಿದ್ದಾರೆ. ಅದು ಕೂಡ 5 ವರ್ಷ ಸಮಯ ತೆಗೆದುಕೊಂಡಿದ್ದಾರೆ. ನಮಗೆ ಬೆಂಗಳೂರು-ಮುಂಬೈ, ಬೆಂಗಳೂರು-ಮಂಗಳೂರು, ಬೆಂಗಳೂರು-ಪುಣೆ ರೈಲು ಬೇಕಾಗಿತ್ತು. ನೀರಾವರಿ ಯೋಜನೆಗೆ ಹಣ ಕೇಳಿದ್ದೇವೆ. ಆದರೆ, ನೀರಾವರಿ ಯೋಜನೆಗೆ ಒಂದೇ ಒಂದು ಶಬ್ದ ಇಲ್ಲ. ಅಪರ್ ಕೃಷ್ಣಾ ಹಾಗೂ ಅಪರ್ ಭದ್ರಾ ಯೋಜನೆಗೆ ಸಹಾಯ ಕೇಳಿದ್ರೂ ಏನು ನೀಡಿಲ್ಲ. ಈ ಹಿಂದೆ ಬಜೆಟ್‌ನಲ್ಲಿ ಯೋಜನೆಗೆ 5,200 ಕೋಟಿ ಹಣ ನೀಡುತ್ತೇವೆ ಎಂದಿದ್ದರು. ಆದರೆ, ಒಂದು ರೂಪಾಯಿ ಸಹ ಕೊಟ್ಟಿಲ್ಲ. ಮೇಕೆದಾಟು ಯೋಜನೆ ಪ್ರಕರಣ ಸಂಬಂಧ ತಮಿಳನಾಡು ಅರ್ಜಿ ವಜಾ ಆಗಿದೆ. ಆದರೂ ಸಹ ಆ ಯೋಜನೆಗೆ ಬಜೆಟ್‌ನಲ್ಲಿ ಹಣ ಕೊಟ್ಟಿಲ್ಲ ಎಂದು ಕಿಡಿಕಾರಿದ್ದಾರೆ.

ಮಹದಾಯಿ ಯೋಜನೆಗೆ ಕೇಂದ್ರ ಸರ್ಕಾರ ಪರಿಸರ ಇಲಾಖೆ ಅನುಮತಿ ನೀಡಿಲ್ಲ. ಕೇಂದ್ರದಲ್ಲಿ ಅಧಿಕಾರಕ್ಕೆ ಬಂದರೆ ನಾವು ಕ್ಲಿಯರ್ ಮಾಡುವುದಾಗಿ ಯಡಿಯೂರಪ್ಪ ರಕ್ತದಲ್ಲಿ ಬರೆದು ಕೊಡುವುದಾಗಿ ಹೇಳಿದ್ದರು. ಆದರೆ, ಕೇಂದ್ರ ಪರಿಸರ ಇಲಾಖೆ ಬಜೆಟ್‌ನಲ್ಲಿ ಈ ಬಾರಿ ಸಹ ಅನುಮತಿ ಕೊಟ್ಟಿಲ್ಲ. ಈ ಮೂಲಕ ಕರ್ನಾಟಕದ ಜನತೆಗೆ ಕೇಂದ್ರ ಅನ್ಯಾಯ ಮಾಡಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
Politics
ರಾಜ್ಯ ಸರ್ಕಾರದ ಜಾಹೀರಾತು ಸಮರ್ಥಿಸಿಕೊಂಡ ಡಿಸಿಎಂ ಡಿ.ಕೆ.ಶಿವಕುಮಾರ್
ಶಿವಮೊಗ್ಗ: ಕೇಂದ್ರ ಸರ್ಕಾರ, ಮನರೇಗಾ ಯೋಜನೆ ಹೆಸರು ಬದಲಿಸಿರುವ ನಡೆಗೆ ಕಾಂಗ್ರೆಸ್ ವಿರೋಧ ವ್ಯಕ್ತಪಡಿಸಿದ್ದು, ಈ ಮಧ್ಯೆ ರಾಜ್ಯ ಸರ್ಕಾರ ಈ ಬಗ್ಗೆ ಜಾಹೀರಾತು ನೀಡಿತ್ತು. ಇದನ್ನು ಡಿಸಿಎಂ ಡಿ.ಕೆ.ಶಿವಕುಮಾರ್ ಸಮರ್ಥಿಸಿಕೊಂಡಿದ್ದಾರೆ.
ಶಿವಮೊಗ್ಗದಲ್ಲಿ ಇಂದು ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕಾಯ್ದೆ ಹಿಂಪಡೆದು ಹೊಸ ಯೋಜನೆ ಜಾರಿಗೊಳಿಸಿ ಕೇಂದ್ರ ಸರ್ಕಾರ ಗ್ರಾಮೀಣರಿಗೆ ಯಾವ ರೀತಿ ಅನ್ಯಾಯ ಮಾಡಿದೆ ಎಂಬುದನ್ನು ಜಾಹೀರಾತು ಮೂಲಕ ನಮ್ಮದೇ ಶೈಲಿಯಲ್ಲಿ ಜನರಿಗೆ ಮನವರಿಕೆ ಮಾಡಿಕೊಟ್ಟಿದ್ದೇವೆ. ಅದರಲ್ಲಿ ತಪ್ಪೇನಿದೆ ಪ್ರಶ್ನಿಸಿದ್ದಾರೆ.

ದೆಹಲಿಯಲ್ಲಿ ನಡೆದ ರೈತರ ಹೋರಾಟದ ಮಾದರಿಯಲ್ಲೇ ಮನರೇಗಾ ಯೋಜನೆ ಮರು ಜಾರಿಗೆ ಒತ್ತಾಯಿಸಿ ಕಾಂಗ್ರೆಸ್ ದೇಶದಾದ್ಯಂತ ಕೇಂದ್ರದ ವಿರುದ್ಧ ಹೋರಾಟ ಮಾಡಲಿದೆ. ಕೇಂದ್ರದ ತೀರ್ಮಾನದಿಂದ ಗ್ರಾಮ ಪಂಚಾಯಿತಿ ಸದಸ್ಯರ ಹಕ್ಕು ಕಿತ್ತುಕೊಂಡಂತಾಗಿದೆ. ಇದನ್ನೇ ಜಾಹೀರಾತಿನಲ್ಲಿ ಮನವರಿಕೆ ಮಾಡಿದ್ದೇವೆ ಎಂದು ತಿಳಿಸಿದ್ದಾರೆ.
-
Manglore13 hours agoಜಿ.ಎಲ್. ಟ್ರೋಫಿ-2026: ಜಿ.ಎಲ್. ಹಾಸನ ತಂಡ ಚಾಂಪಿಯನ್
-
Hassan14 hours agoಮಾಧ್ಯಮ ಸ್ವಾತಂತ್ರ್ಯ ಸದ್ಬಳಕೆಯಾಗಲಿ: ಎಎಸ್ಪಿ ತಮ್ಮಯ್ಯ
-
Hassan13 hours agoಅರಸೀಹಳ್ಳಿ ಹರೀಶ್ಗೆ ಪಿಹೆಚ್ಡಿ ಪದವಿ
-
Hassan14 hours agoಆನೆ-ಮಾನವ ಸಂಘರ್ಷಕ್ಕೆ ಶಾಶ್ವತ ಪರಿಹಾರ : ಕೇಂದ್ರ ಸಚಿವರನ್ನು ಭೇಟಿ ಮಾಡಿದ ಸಂಸದ ಶ್ರೇಯಸ್ ಪಟೇಲ್
-
National16 hours ago17ನೇ ಬೆಂಗಳೂರು ಚಿತ್ರೋತ್ಸವದಲ್ಲಿ ತಾಯಿ-ಮಗನ ಸಂಬಂಧದ ʼಅಮ್ಮಂಗೆ ಹೇಳ್ಬೇಡʼ ಚಿತ್ರ ಪ್ರದರ್ಶನ
-
State17 hours agoಸಿಎಂ ಹೌದು ಹುಲಿಯಾ ಆಗಿಲ್ಲ, ಹೌದು ಇಲಿಯಾ ಆಗಿದ್ದಾರೆ: ಆರ್.ಅಶೋಕ್
-
Mandya18 hours agoಎಂ. ಅಂಕೇಗೌಡರ ಪುಸ್ತಕ ಪ್ರೀತಿ ಇಂದಿನ ಯುವ ಪೀಳಿಗೆಗೆ ಮಾದರಿ : ಡಾ.ಮಾನಸ
-
Mysore14 hours agoಡ್ರಗ್ಸ್ ಲ್ಯಾಬ್ ಪತ್ತೆ: ಕೈಗಾರಿಕೆಗಳ ತಪಾಸಣೆಗೆ 14 ತಂಡ ರಚನೆ
