Chikmagalur
ಬೆನ್ನು ಮೂಳೆ ಮುರಿದು ಹಾಸಿಗೆ ಹಿಡಿದ ಬಾಲಕಿ ನಿಶಿತಾ
ಪ್ರತಿಭಾವಂತ ಬಾಲಕಿಯ ಚಿಕಿತ್ಸೆಗೆ ನೆರವು ಕೋರಿದ ಪೋಷಕರು.
ಕೊಟ್ಟಿಗೆಹಾರ : ಮೂಡಿಗೆರೆ ತಾಲೂಕಿನ ಬಣಕಲ್ ಸಮೀಪದ ಹಾರ್ಗೋಡು ಗ್ರಾಮದ 5ನೇ ತರಗತಿ ಬಾಲಕಿ ನಿಶಿತಾ ಆಟವಾಡುವಾಗ ಬಿದ್ದು ಬೆನ್ನ ಹುರಿ(ಸ್ಪೈನಲ್ ಕಾರ್ಡ್)ಮುರಿದು ಹಾಸಿಗೆ ಹಿಡಿದಿರುವ ಕರಣಾಜನಕ ಘಟನೆ ಈಚೆಗೆ ನಡೆದಿದೆ. ಬಾನಳ್ಳಿಯ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಓದುತ್ತಿದ್ದ ಬಾಲಕಿ ನಿಶಿತಾ ಪ್ರತಿಭಾವಂತೆಯಾಗಿದ್ದು, ಶಾಲೆಯಲ್ಲಿ ಓದುವುದರಲ್ಲೂ ಮುಂದಿದ್ದಳು.ಅರಳು ಹುರಿದಂತೆ ಮಾತನಾಡುವ ಬಾಲಕಿಗೆ ಶಾಲೆಯ ಒಂದು ದಿನದ ರಜೆ ತನ್ನ ಜೀವನವನ್ನೇ ಕೊರಗಿಸುವಂತೆ ಮಾಡಿದೆ.ಮನೆಯ ಪಕ್ಕದ ಮಕ್ಕಳ ಜೊತೆ ಆಟವಾಡುತ್ತಿದ್ದಾಗ ತಲೆಕೆಳಗಾಗಿ ಬಿದ್ದು ತನ್ನ ದೇಹದ ಕೈಕಾಲಿನ ಸ್ವಾಧೀನ ಕಳೆದುಕೊಂಡಿದ್ದಾಳೆ.ಬಾಲಕಿ ಹಾರ್ ಗೋಡಿನ ಕೆ.ಆರ್. ಶ್ರೀಧರ್ ಹಾಗೂ ಗೀತಾ ದಂಪತಿಯ ಪುತ್ರಿಯಾಗಿದ್ದು ಇವರು ಕೂಲಿ ಕಾರ್ಮಿಕರಾಗಿರುತ್ತಾರೆ.ದಿನದ ಒಪ್ಪತ್ತಿಗೂ ಕೂಲಿ ಕೆಲಸವನ್ನೇ ಅವಲಂಬಿಸಿದ್ದು ಒಬ್ಬಳೇ ಮಗಳ ಅನಾರೋಗ್ಯದಿಂದ ಕಂಗೆಟ್ಟು ಹೋಗಿದ್ದಾರೆ.ಬಾಲಕಿಗೆ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ಸೇರಿಸಿ ಅಲ್ಲಿ ವೈದ್ಯರು ಪರೀಕ್ಷೆ ನಡೆಸಿ ಶೇ ನೂರರಷ್ಟು ಭರವಸೆ ಕೊಡಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ.ಆದರೆ ಔಷಧಿಗೆ ಶೇ 50 ರಷ್ಟು ಸ್ಪಂಧಿಸಿರುವ ಬಾಲಕಿ ಈಗ ಒಂದು ಕೈ ಹಾಗೂ ಕಾಲುಗಳಿಗೆ ಸ್ಪರ್ಷ ಬಂದಿದೆ.ಬಣಕಲ್ ನ ಶ್ರೀ ಕೃಷ್ಣ ಕ್ಲಿನಿಕ್ ವೈದ್ಯರು ಅವಳಿಗೆ ಪಿಸಿಯೋತೆರಫಿ ನೀಡುತ್ತಿದ್ದಾರೆ.ಬಾಲಕಿಯು ಗುಣವಾಗುತ್ತೇನೆಂಬ ಆತ್ಮವಿಶ್ವಾಸದಿಂದ ಮುಂದಿನ ಕನಸು ಕಾಣುತ್ತಿದ್ದಾಳೆ.ನಿಲ್ಲಲು ಆಗದ ಕೈಯನ್ನು ಎತ್ತಲು ಆಗದ ಸ್ಥಿತಿಯಿಂದ ಇರುವ ಬಾಲಕಿ ನಿಶಿತಾಗೆ ಪೋಷಕರು ಚಿಕಿತ್ಸೆಗೆ ನೆರವು ಕೋರಿ ಪತ್ರಿಕೆಯೊಂದಿಗೆ ತಮ್ಮ ಅಳಲು ತೋಡಿಕೊಂಡಿದ್ದಾರೆ. ಮಗುವಿನ ಚಿಕಿತ್ಸೆಗೆ ಸುಮಾರು 5ಲಕ್ಷ ಖರ್ಚಿದೆ.ಸಹೃದಯಿಗಳಲ್ಲಿ ನೆರವಿನ ಹಸ್ತ ಚಾಚಿದ್ದಾರೆ. ಹೆಚ್ಚಿನ ಮಾಹಿತಿಗೆ ಪೋಷಕರ ದೂರವಾಣಿ ಸಂಖ್ಯೆ 9980430710 ಕರೆ ಮಾಡಬಹುದು.ಅಥವಾ ಧಾನಿಗಳು ಖಾತೆ ಸಂಖ್ಯೆ 0692500136635601. ಐಎಫ್ ಎಸ್ ಸಿ ಕೋಡ್ : ಕೆಎಆರ್ ಬಿ0000069. ಅವರ ಖಾತೆಗೆ ಹಣ ಹಾಕಬಹುದು ಅಥವಾ ಪೋನ್ ಪೇ ಮಾಡುವ ಮೂಲಕ ನೆರವು ನೀಡಬಹುದು.

Chikmagalur
ಮುಳ್ಳಯ್ಯನಗಿರಿ ದೇವಸ್ಥಾನದ ಕಾಮಗಾರಿ: ಸೀತಾಳಯ್ಯನ ಗಿರಿಯಿಂದ ಮುಳ್ಳಯ್ಯನಗಿರಿಗೆ ತೆರಳುವ ಮಾರ್ಗದಲ್ಲಿ ತಾತ್ಕಾಲಿಕ ನಿರ್ಬಂಧ
ಚಿಕ್ಕಮಗಳೂರು: ಮುಳ್ಳಯ್ಯನಗಿರಿ ದೇವಸ್ಥಾನದ ಕಾಮಗಾರಿ ನಡೆಯುತ್ತಿರುವುದರಿಂದ, ಸೀತಾಳಯ್ಯನ ಗಿರಿಯಿಂದ ಮುಳ್ಳಯ್ಯನಗಿರಿಗೆ ತೆರಳುವ ಮಾರ್ಗದಲ್ಲಿ ಪ್ರವಾಸಿ ವಾಹನಗಳ ಸಂಚಾರವನ್ನು ತಾತ್ಕಾಲಿಕವಾಗಿ ನಿರ್ಬಂಧಿಸಲಾಗಿದೆ.
ದೇವಸ್ಥಾನದ ನಿರ್ಮಾಣಕ್ಕೆ ಅಗತ್ಯವಿರುವ ಸಾಮಗ್ರಿಗಳನ್ನು ಭಾರಿ ವಾಹನಗಳ ಮೂಲಕ ಸಾಗಿಸುತ್ತಿರುವುದರಿಂದ ಮತ್ತು ಈ ರಸ್ತೆ ಕಿರಿದಾಗಿರುವುದರಿಂದ ಸುರಕ್ಷತೆಯ ದೃಷ್ಟಿಯಿಂದ ಈ ಕ್ರಮ ಕೈಗೊಳ್ಳಲಾಗಿದೆ.

ಫೆ.7 ರಿಂದ ಮಾರ್ಚ್ 5, 2026ರ ವರೆಗೆ ಪ್ರವಾಸಿ ಜೀಪ್‌ಗಳು ಹಾಗೂ ಸಾರ್ವಜನಿಕ ವಾಹನಗಳ ಓಡಾಟವನ್ನು ಜಿಲ್ಲಾ ಪ್ರವಾಸೋದ್ಯಮ ಅಭಿವೃದ್ಧಿ ಸಮಿತಿ ನಿಷೇಧಿಸಿದೆ. ಆದ್ದರಿಂದ, ಪ್ರವಾಸಿಗರು ಸೀತಾಳಯ್ಯನ ಗಿರಿಯಿಂದ ಮುಳ್ಳಯ್ಯನಗಿರಿಗೆ ನಡೆದುಕೊಂಡು ಹೋಗುವ ಮೂಲಕ ಸಹಕರಿಸಬೇಕೆಂದು ಜಿಲ್ಲಾಧಿಕಾರಿಗಳ ಆದೇಶದಂತೆ ಜಿಲ್ಲಾ ಪ್ರವಾಸೋದ್ಯಮ ಅಭಿವೃದ್ಧಿ ಸಮಿತಿ ಪ್ರಕಟಣೆಯಲ್ಲಿ ತಿಳಿಸಿದೆ.
Chikmagalur
ಜಿಲ್ಲಾ ಆಸ್ಪತ್ರೆಗೆ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದ ಸಿ.ಟಿ.ರವಿ
ಚಿಕ್ಕಮಗಳೂರು: ನಗರದ ಅರಳಗುಪ್ಪೆ ಮಲ್ಲೇಗೌಡ ಜಿಲ್ಲಾಸ್ಪತ್ರೆಯಲ್ಲಿನ ಅವ್ಯವಸ್ಥೆ ಹಾಗೂ ಔಷಧಿಗಳ ತೀವ್ರ ಕೊರತೆಯ ಕುರಿತು ಕೇಳಿಬಂದ ದೂರುಗಳ ಹಿನ್ನೆಲೆಯಲ್ಲಿ, ಎಂಎಲ್‌ಸಿ ಡಾ.ಸಿ.ಟಿ. ರವಿ ಅವರು ಇಂದು ಆಸ್ಪತ್ರೆಗೆ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಆಸ್ಪತ್ರೆಯ ದುಸ್ಥಿತಿ ಕಂಡು ಅವರು ತೀವ್ರ ಆಕ್ರೋಶ ವ್ಯಕ್ತಪಡಿಸಿದರು.

ಜಿಲ್ಲಾಸ್ಪತ್ರೆಗೆ ಭೇಟಿ ನೀಡಿದ ಸಿ.ಟಿ. ರವಿ ಅವರಿಗೆ ರೋಗಿಗಳು ಮತ್ತು ಅವರ ಸಂಬಂಧಿಕರು ತಮ್ಮ ಸಂಕಷ್ಟಗಳನ್ನು ಬಿಚ್ಚಿಟ್ಟರು. “ಸರ್ಕಾರಿ ಆಸ್ಪತ್ರೆಯಲ್ಲಿ ಉಚಿತವಾಗಿ ಚಿಕಿತ್ಸೆ ಸಿಗುತ್ತದೆ ಎಂದು ಬಂದರೆ, ಇಲ್ಲಿನ ವೈದ್ಯರು ಔಷಧಿಗಳನ್ನು ಹೊರಗಿನಿಂದ ತರಲು ಚೀಟಿ ಬರೆದುಕೊಡುತ್ತಿದ್ದಾರೆ. ಬಡವರು ಹಣಕ್ಕೆ ಎಲ್ಲಿ ಹೋಗಬೇಕು?” ಎಂದು ರೋಗಿಗಳ ಸಂಬಂಧಿಕರು ಕಣ್ಣೀರಿಟ್ಟರು. ಆಸ್ಪತ್ರೆಯ ಅವ್ಯವಸ್ಥೆ ಕಂಡು ಸಿ.ಟಿ. ರವಿ ಅವರು ಜಿಲ್ಲಾ ಸರ್ಜನ್ ಹಾಗೂ ವೈದ್ಯರ ವಿರುದ್ಧ ಸ್ಥಳದಲ್ಲೇ ಗರಂ ಆದರು.

ಆಸ್ಪತ್ರೆಯ ಸಿಬ್ಬಂದಿ ಹಾಗೂ ಜಿಲ್ಲಾ ಸರ್ಜನ್ ಅವರನ್ನು ತರಾಟೆಗೆ ತೆಗೆದುಕೊಂಡ ಸಿ.ಟಿ. ರವಿ ಅವರು ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.
ಬಡವರ ಬದುಕು ದುಸ್ತರ
“ಸರ್ಕಾರಿ ಆಸ್ಪತ್ರೆಗೆ ಬರುವವರು ಅಸಹಾಯಕರು ಮತ್ತು ಬಡವರು. ಇಲ್ಲಿಯೇ ಔಷಧಿ ಇಲ್ಲದಿದ್ದರೆ ಅವರು ಎಲ್ಲಿಂದ ಹಣ ತರಬೇಕು? ರಾಜ್ಯದಾದ್ಯಂತ ಪ್ರತಿ ಸರ್ಕಾರಿ ಆಸ್ಪತ್ರೆಗಳಲ್ಲಿ ಔಷಧಿಗಳ ಕೊರತೆ ಕಾಡುತ್ತಿದೆ,” ಎಂದು ಆಕ್ರೋಶ ವ್ಯಕ್ತಪಡಿಸಿದರು.

ಆದ್ಯತೆ ಯಾವುದು?: “ನಿಮಗೆ ಸಚಿವ ಸಂಪುಟದ ಸ್ಥಾನಮಾನ ನೀಡುವುದು ಮೊದಲ ಆದ್ಯತೆಯೋ ಅಥವಾ ಜೀವ ಉಳಿಸಿಕೊಳ್ಳಲು ಬರುವ ಬಡವರಿಗೆ ಚಿಕಿತ್ಸೆ ನೀಡುವುದು ಆದ್ಯತೆಯೋ?” ಎಂದು ಸರ್ಕಾರವನ್ನು ನೇರವಾಗಿ ಪ್ರಶ್ನಿಸಿದರು.
ಡಯಾಲಿಸಿಸ್ ಸಮಸ್ಯೆ: ಡಯಾಲಿಸಿಸ್ ಘಟಕದ ಟೆಂಡರ್ ಪಡೆದ ಖಾಸಗಿ ಕಂಪನಿಗೆ ಕಳೆದ 10 ತಿಂಗಳಿನಿಂದ ಸರ್ಕಾರ ಒಂದು ರೂಪಾಯಿ ಹಣವನ್ನೂ ನೀಡಿಲ್ಲ. ಇದರಿಂದಾಗಿ ರೋಗಿಗಳಿಗೆ ಚಿಕಿತ್ಸೆ ಸಿಗದಂತಾಗಿದೆ ಎಂದು ಅವರು ಆತಂಕ ವ್ಯಕ್ತಪಡಿಸಿದರು.

ತುರ್ತು ಕ್ರಮಕ್ಕೆ ಆಗ್ರಹ: ಔಷಧಿಗಳ ಸರಬರಾಜು ಸಂಬಂಧ ಸರ್ಕಾರ ಯಾವುದೇ ಗಂಭೀರ ಕ್ರಮ ಕೈಗೊಂಡಿಲ್ಲ. ಸರ್ಕಾರ ತಕ್ಷಣ ಎಚ್ಚೆತ್ತುಕೊಂಡು ಬಡ ರೋಗಿಗಳಿಗೆ ಅಗತ್ಯವಿರುವ ಔಷಧಿ ಹಾಗೂ ಸೌಲಭ್ಯಗಳನ್ನು ಒದಗಿಸಬೇಕು, ಇಲ್ಲದಿದ್ದರೆ ಹೋರಾಟ ಅನಿವಾರ್ಯ ಎಂದು ಅವರು ಎಚ್ಚರಿಸಿದರು.
Chikmagalur
ಇಬ್ಬರು ಮಹಿಳಾ ಕಾರ್ಮಿಕರ ಮೇಲೆ ಚಿರತೆ ದಾಳಿ
ಚಿಕ್ಕಮಗಳೂರು: ಜಿಲ್ಲೆಯ ಮೂಡಿಗೆರೆ ತಾಲೂಕಿನ ಗೌತಹಳ್ಳಿ ಗ್ರಾಮದಲ್ಲಿ ಕಾಫಿ ತೋಟದಲ್ಲಿ ಕೆಲಸ ಮಾಡುತ್ತಿದ್ದ ಇಬ್ಬರು ಮಹಿಳಾ ಕಾರ್ಮಿಕರ ಮೇಲೆ ಚಿರತೆ ಏಕಾಏಕಿ ದಾಳಿ ನಡೆಸಿದ ಘಟನೆ ನಡೆದಿದೆ.
ದಾಳಿಗೆ ಒಳಗಾದ ಇಬ್ಬರೂ ಮಹಿಳೆಯರು ಅಸ್ಸಾಂ ಮೂಲದ ಕಾರ್ಮಿಕರಾಗಿದ್ದು, ತೋಟದಲ್ಲಿ ಕೆಲಸ ನಿರ್ವಹಿಸುತ್ತಿದ್ದ ವೇಳೆ ಚಿರತೆ ದಾಳಿ ಮಾಡಿದೆ.

ದಾಳಿಯಿಂದ ಇಬ್ಬರು ಮಹಿಳೆಯರಿಗೆ ಗಾಯಗಳಾಗಿದ್ದು, ಅವರನ್ನು ತಕ್ಷಣವೇ ಮೂಡಿಗೆರೆ ತಾಲ್ಲೂಕು ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಘಟನೆಯ ಮಾಹಿತಿ ತಿಳಿದ ಕೂಡಲೇ ಸ್ಥಳಕ್ಕೆ ಅರಣ್ಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಚಿರತೆ ದಾಳಿಯಿಂದ ಗ್ರಾಮಸ್ಥರಲ್ಲಿ ಭೀತಿ ಉಂಟಾಗಿದ್ದು, ಚಿರತೆಯನ್ನು ಕೂಡಲೇ ಸೆರೆ ಹಿಡಿಯುವಂತೆ ಸ್ಥಳೀಯರು ಅರಣ್ಯ ಇಲಾಖೆಯನ್ನು ಆಗ್ರಹಿಸಿದ್ದಾರೆ.

ಈ ಘಟನೆ ಮೂಡಿಗೆರೆ ತಾಲೂಕಿನಲ್ಲಿ ಮತ್ತೆ ಚಿರತೆ ಭೀತಿಯನ್ನು ಹೆಚ್ಚಿಸಿದ್ದು, ಕಾರ್ಮಿಕರು ಹಾಗೂ ಗ್ರಾಮಸ್ಥರು ಆತಂಕದಲ್ಲಿದ್ದಾರೆ.
-
Mysore24 hours agoರಾಜ್ಯದಲ್ಲಿ ಯತೀಂದ್ರ ಸೇಲ್ಸ್ ಟ್ಯಾಕ್ಸ್ ಕಡ್ಡಾಯ: ಪ್ರತಾಪ್ ಸಿಂಹ ಆರೋಪ
-
Mandya18 hours agoಕಾಯಕ ಶರಣರ ಆದರ್ಶ ಮೌಲ್ಯಗಳನ್ನು ಅಳವಡಿಸಿಕೊಳ್ಳಬೇಕು :ಡಾ. ಬಿ.ವಿ. ನಂದೀಶ್
-
Hassan14 hours agoಜನತೆಯ ಪ್ರೀತಿಗೆ ಮನಸೋತ ಡಿಸಿ ಕೆ.ಎಸ್. ಲತಾ ಕುಮಾರಿ
-
Mysore14 hours ago5 ಕೋಟಿ ರೂ. ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗೆ ಶಾಸಕ ದರ್ಶನ್ ಧ್ರುವ ನಾರಾಯಣ್ ಚಾಲನೆ: ರಸ್ತೆ ಡಾಂಬರೀಕರಣ_ಬಾಗೂರು ಅಣೆಕಟ್ಟು ಅಭಿವೃದ್ಧಿಗೆ ಗುದ್ದಲಿ ಪೂಜೆ
-
Kodagu17 hours agoಸಮ ಸಮಾಜ ನಿರ್ಮಾಣದಲ್ಲಿ ಕಾಯಕ ಶರಣರ ಕೊಡುಗೆ ಅಪಾರ: ಬಿ.ಬಿ.ಹೇಮಲತಾ
-
Mysore18 hours agoಕಳ್ಳತನ ಮಾಡಿದ್ದ ಕಾರು ವಶ: ಆರೋಪಿ ಬಂಧನ
-
Kodagu15 hours agoಸಂಜೀವಿನಿ ಕಟ್ಟಡ ನಿರ್ಮಾಣ ಶ್ಲಾಘನೀಯ : ಶಾಸಕ ಡಾ.ಮಂಥರ್ ಗೌಡ
-
National17 hours agoಪಿಎಂ ಮೋದಿ ವಿರುದ್ಧ ಆಕ್ಷೇಪಾರ್ಹ ಪೋಸ್ಟರ್ ಹೊತ್ತೊಯ್ದಿರುವುದು ಪ್ರಚೋದನಕಾರಿ ನೀತಿ: ಪ್ರಹ್ಲಾದ್ ಜೋಶಿ
