Connect with us

Mysore

ನಂಜನಗೂಡಿನಲ್ಲಿ ಶ್ರದ್ಧಾ ಭಕ್ತಿಯಿಂದ ಬಕ್ರೀದ್ ಹಬ್ಬ ಆಚರಣೆ

Published

on

ನಂಜನಗೂಡಿನಲ್ಲಿ ಮುಸ್ಲಿಂ ಸಮುದಾಯದವರು ತ್ಯಾಗ ಮತ್ತು ಬಲಿದಾನ ಪ್ರತೀಕವಾಗಿರುವ
ಬಕ್ರೀದ್ ಹಬ್ಬವನ್ನು ಸೋಮವಾರ ಶ್ರದ್ಧಾ ಭಕ್ತಿಯಿಂದ ಆಚರಿಸಿದರು.

ನಂಜನಗೂಡು ಆರ್ ಪಿ ರಸ್ತೆಯಲ್ಲಿರುವ ಮಸೀದಿಯಲ್ಲಿ ನಂಜನಗೂಡು ಮುಸ್ಲಿಂ ಸಮುದಾಯದವರು ಬೆಳಿಗ್ಗೆ ಭಾಗವಹಿಸಿ ವಿಶೇಷ ಪ್ರಾರ್ಥನೆ ಸಲ್ಲಿಸಿದರು.

ಪ್ರಾರ್ಥನೆಯ ನಂತರ ಬಕ್ರಿದ್ ಹಬ್ಬದ ಜೀವಾಳ ಕುರುಬಾನಿ ಅತ್ಯಾಪ್ತ ವಸ್ತುವನ್ನು ಅಲ್ಲಾಹುಗೆ ಸಮರ್ಪಿಸುವುದು ಹೀಗಾಗಿ ಕುರಿ ಮೇಕೆ ಬಲಿ ನೀಡಿ ಬಕ್ರೀದ್ ಹಬ್ಬವನ್ನು ಆಚರಿಸಲಾಗಿದೆ.

ನಗರಸಭಾ ಸದಸ್ಯ ಖಾಲಿದ್, ಅಕ್ಬರ್, ಖಾದರ್, ಮುಂತಾದವರು ಹಾಜರಿದ್ದರು.

ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ನಂಜನಗೂಡು ಡಿಎಸ್ಪಿ , ಸಬ್ ಇನ್ಸ್ಪೆಕ್ಟರ್, ಸೇರಿದಂತೆ ಇನ್ನಿತರ ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿ ವರ್ಗದವರು ಸೂಕ್ತ ಬಂದೋಬಸ್ತ್ ನೀಡಿದರು.

ನಂಜನಗೂಡು ಮಹದೇವಸ್ವಾಮಿ ಪಟೇಲ್,

Continue Reading
Click to comment

Leave a Reply

Your email address will not be published. Required fields are marked *

Mysore

ಜೂಜಾಡುತ್ತಿದ್ದ ನಾಲ್ವರ ಬಂಧನ

Published

on

ಮೈಸೂರು: ಕಾನೂನು ಬಾಹಿರವಾಗಿ ಜೂಜಾಡುತ್ತಿದ್ದ ಅಡ್ಡೆ ಮೇಲೆ ದಾಳಿ ಮಾಡಿ ನಾಲ್ವರನ್ನು ಸಿ.ಸಿ.ಬಿ ಪೊಲೀಸರು ಬಂಧಿಸಿ ಒಟ್ಟು 12.5 ಸಾವಿರ ರೂ ನಗದು ಮತ್ತು ಪರಿಕರಗಳನ್ನು ವಶಪಡಿಸಿಕೊಂಡಿದ್ದಾರೆ.

ವಿಜಯನಗರ ಪೊಲೀಸ್ ಠಾಣಾ ವ್ಯಾಪ್ತಿಯ ವಿಜಯ ನಗರ 2ನೇ ಹಂತದ ಜೆ.ಬಿ. ಪ್ಯಾರಡೈಸ್ನ ಕೊಠಡಿಯೊಂದರಲ್ಲಿ ಕಾನೂನು ಬಾಹಿರವಾಗಿ ಹಣವನ್ನು ಪಣವಾಗಿಟ್ಟುಕೊಂಡು ಜೂಜಾಡುತ್ತಿದ್ದರು.

ಇದರ ಬಗ್ಗೆ ಜನವರಿ 14 ರಂದು ನಗರದ ಸಿ.ಸಿ.ಬಿ ಅಧಿಕಾರಿಗಳಿಗೆ ಬಂದ ಖಚಿತ ಮಾಹಿತಿಯ ಮೇರೆಗೆ ಸಿ.ಸಿ ಬಿ.ಅಧಿಕಾರಿ ಮತ್ತು ಸಿಬ್ಬಂದಿ ದಾಳಿ ಮಾಡಿ ನಾಲ್ವರನ್ನು ಬಂಧಿಸಿದ್ದಾರೆ. ವಿ ಜಯನಗರ ಪೊಲೀಸರು ಪ್ರಕರಣವನ್ನು ದಾಖಲಿಸಿಕೊಂಡು ತನಿಖೆಯನ್ನು ಕೈಗೊಂಡಿರುತ್ತಾರೆ.

Continue Reading

Mysore

ಕಾನೂನು ಬಾಹಿರವಾಗಿ ಗ್ಯಾಸ್ ದಾಸ್ತಾನು ಮಾಡುತ್ತಿದ್ದ ನಾಲ್ವರ ಬಂಧನ.

Published

on

ಮೈಸೂರು: ವಿವಿಧ ಕಂಪನಿಗೆ ಕಾನೂನು ಬಾಹಿರವಾಗಿ ಗ್ಯಾಸ್ ದಾಸ್ತಾನು ಮಾಡಿಕೊಂಡು ಗ್ಯಾಸ್ ರೀಫಿಲ್ಲಿಂಗ್ ಮಾಡುತ್ತಿದ್ದ ನಾಲ್ವರನ್ನು ಸಿ.ಸಿ.ಬಿ ಪೊಲೀಸರು ಬಂಧಿಸಿ. ಒಟ್ಟು 127 ಸಿಲಿಂಡರ್ ಗಳು 79 ರಾಡುಗಳು, 2 ಡಿಜಿಟಲ್ ಯಂತ್ರಗಳು ಹಾಗೂ 1 ಗೂಡ್ಸ್ ವಾಹನವನ್ನು ವಶಪಡಿಸಿಕೊಂಡಿದ್ದಾರೆ.


ನಗರದ ನರಸಿಂಹರಾಜ ಪೊಲೀಸ್ ಠಾಣಾ ವ್ಯಾಪ್ತಿಯ ಜಮೀನಿನಲ್ಲಿ ನಿರ್ಮಾಣ ಮಾಡಿರುವ ಶೆಡ್ ನಲ್ಲಿ ಅಕ್ರಮವಾಗಿ ವಿವಿಧ ಕಂಪನಿಗಳಿಗೆ ಅಡುಗೆ ಅನಿಲ ಸಿಲಿಂಡರ್ ಗಳನ್ನು ಉಪಯೋಗಿಸಿಕೊಂಡು ಯಾವುದೇ ಅಧಿಕೃತ ರಹದಾರಿ ಮತ್ತು ಖರೀದಿ ಮಾಡಿರುವ ಬಿಲ್ ಇಲ್ಲದೆ.

ಗ್ಯಾಸ್ ರೀಫಿಲ್ಲಿಂಗ್ ಮಾಡುತ್ತಿದ್ದಾರೆ ಎಂದು ಜನವರಿ 11 ರಂದು ಸಿ.ಸಿ.ಬಿ ಅಧಿಕಾರಿಗಳಿಗೆ ಬಂದ ಖಚಿತ ಮಾಹಿತಿಯ ಮೇರೆಗೆ. ಸಿ.ಸಿ.ಬಿ ಅಧಿಕಾರಿ ಮತ್ತು ಸಿಬ್ಬಂದಿ ದಾಳಿ ಮಾಡಿ ಆರೋಪಿಗಳನ್ನು ಬಂಧಿಸಿದ್ದಾರೆ.

Continue Reading

Mysore

ಮಾದಕವಸ್ತು ಮಾರಾಟ ಮಾಡಲು ಪ್ರಯತ್ನಿಸುತ್ತದ್ದ ಪೆಡ್ಲರ್ ಬಂಧನ

Published

on

ಮೈಸೂರು ಎಂ.ಡಿ.ಎಂ.ಎ ಎಂಬ ನಿಷೇಧಿತ ಮಾದಕವಸ್ತುವನ್ನು ಮಾರಾಟ ಮಾಡಲು ಪ್ರಯತ್ನಿಸಿದ ಪೆಡ್ಲರ್ ನನ್ನು ಸಿ.ಸಿ.ಬಿ ಘಟಕದ ಪೊಲೀಸರು ಬಂಧಿಸಿ ಒಟ್ಟು 20. ಸಾವಿರ ರೂ ಮೌಲ್ಯದ 6 ಗ್ರಾಂ 600 ಮಿಲಿ ಮಾದಕವಸ್ತುವನ್ನು ವಶಪಡಿಸಿಕೊಂಡಿದ್ದಾರೆ.


ನಗರದ ಉದಯಗಿರಿ ಪೊಲೀಸ್ ಠಾಣಾ ವ್ಯಾಪ್ತಿಯ ಕಲ್ಯಾಣಿಗಿರಿ ಹಳೇ ಆರ್.ಟಿ.ಒ. ಅಫೀಸ್ ಹತ್ತಿರ ಇರುವ ತ್ರಿವೇಣೆ ಪಾರ್ಕ್ ಬಳಿ. ಎಂ.ಡಿ.ಎಂ.ಎ ಎಂಬ ನಿಷೇಧಿತ ಮಾದಕವಸ್ತುವನ್ನು ಮಾರಾಟ ಮಾಡಲು ಒಬ್ಬ ಪೆಡ್ಲರ್ ನಿಂತಿದ್ದಾನೆಂದು ಜನವರಿ 7 ರಂದು ನಗರದ ಸಿ.ಸಿ.ಬಿ. ಘಟಕದ ಅಧಿಕಾರಿಗಳಿಗೆ ಬಂದ ಖಚಿತ ಮಾಹಿತಿಯ ಮೇರೆಗೆ.

ಸಿ.ಸಿ.ಬಿ ಘಟಕದ ಅಧಿಕಾರಿ ಮತ್ತು ಸಿಬ್ಬಂದಿ ದಾಳಿ ಮಾಡಿ ಆರೋಪಿಯನ್ನು ಬಂಧಿಸಿದ್ದಾರೆ. ಉದಯಗಿರಿ ಪೊಲೀಸ್ ಠಾಣೆಯಲ್ಲಿ ಪ್ರಕರಣವನ್ನು ದಾಖಲಿಸಿಕೊಂಡು ತನಿಖೆಯನ್ನು ಕೈಗೊಂಡಿದ್ದಾರೆ.

Continue Reading

Trending

error: Content is protected !!