Connect with us

Chamarajanagar

ನ್ಯೂನ್ಯತೆ ಹಿನ್ನೆಲೆಯಲ್ಲಿ ನಾಲ್ವರು ಸಿಬ್ಬಂದಿ ವಿರುದ್ದ ಶಿಸ್ತು ಕ್ರಮಕ್ಕೆ ಸೂಚನೆ : ಡಾ. ಎಚ್. ಕೃಷ್ಣ

Published

on

ಚಾಮರಾಜನಗರ:- ಜಿಲ್ಲೆಯಲ್ಲಿ ಕಳೆದ ಮೂರು ದಿನಗಳಿಂದ ಭೇಟಿ ಹಮ್ಮಿಕೊಂಡು ವಿವಿಧೆಡೆ ಶಾಲೆ, ಅಂಗನವಾಡಿ, ನ್ಯಾಯಬೆಲೆ ಅಂಗಡಿ, ಆಸ್ಪತ್ರೆ, ಹಾಸ್ಟಲ್, ರೈತಸಂಪರ್ಕ ಕೇಂದ್ರಗಳ ಕಾರ್ಯವೈಖರಿಯನ್ನು ಪರಿಶೀಲಿಸಿದ್ದೇನೆ. ನ್ಯೂನ್ಯತೆ ಕಂಡುಬಂದ ಹಿನ್ನೆಲೆಯಲ್ಲಿ ನಾಲ್ವರು ಸಿಬ್ಬಂದಿ ವಿರುದ್ದ ಶಿಸ್ತು ಕ್ರಮಕ್ಕೆ ಶಿಫಾರಸು ಮಾಡಲಾಗಿದ್ದು, ಸಂಬಂಧಪಟ್ಟ ಇಲಾಖೆಯ ಹಿರಿಯ ಅಧಿಕಾರಿಗಳು ಅಗತ್ಯ ಕ್ರಮ ವಹಿಸಿದ್ದಾರೆ ಎಂದು ಕರ್ನಾಟಕ ರಾಜ್ಯ ಆಹಾರ ಆಯೋಗದ ಅಧ್ಯಕ್ಷ ಡಾ. ಎಚ್. ಕೃಷ್ಣ ತಿಳಿಸಿದರು.

ಅಧಿಕಾರಿಗಳ ಸಭೆಯ ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಕರ್ನಾಟಕ ರಾಜ್ಯ ಆಹಾರ ಆಯೋಗದ ಅಧ್ಯಕ್ಷರು ಆಹಾರ ದಾಸ್ತಾನು ವ್ಯತ್ಯಾಸ, ವಹಿಗಳನ್ನು ನಿರ್ವಹಿಸದಿರುವುದು ಸೇರಿದಂತೆ ಇನ್ನಿತರ ನ್ಯೂನ್ಯತೆಗಳ ಕಾರಣದಿಂದ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ಓರ್ವ ಹಾಸ್ಟೆಲ್ ವಾರ್ಡನ್, ಸಮಾಜ ಕಲ್ಯಾಣ ಇಲಾಖೆ ಓರ್ವ ಹಾಸ್ಟೆಲ್ ವಾರ್ಡನ್, ಸರ್ಕಾರಿ ಶಾಲೆಯ ಮಧ್ಯಾಹ್ನದ ಬಿಸಿಯೂಟ ನಿರ್ವಹಣೆಗೆ ಸಂಬಂಧಿಸಿದಂತೆ ಓರ್ವರು, ಪೌಷ್ಠಿಕ ಆಹಾರವನ್ನು ಕೆಲ ಫಲಾನುಭವಿಗಳಿಗೆ ವಿತರಿಸದೇ ದಾಖಲು ಪುಸ್ತಕದಲ್ಲಿ ವಿತರಣೆ ಮಾಡಲಾಗಿದೆ ಎಂದು ನಮೂದಿಸಿರುವ ಓರ್ವ ಅಂಗನವಾಡಿ ಕಾರ್ಯಕರ್ತೆ ವಿರುದ್ದ ಶಿಸ್ತು ಕ್ರಮ ಜರುಗಿಸಲು ಸೂಚಿಸಲಾಗಿದೆ.

ಕಡ್ಡಾಯ ರಜೆಯಂತಹ ಕ್ರಮಗಳಿಗೆ ಅಧಿಕಾರಿಗಳು ಕ್ರಮವಹಿಸಿದ್ದಾರೆ. ಮಲ್ಲಯ್ಯನಪುರದಲ್ಲಿ ನ್ಯಾಯಬೆಲೆ ಅಂಗಡಿಯಲ್ಲಿ ಪಡಿತರ ಚೀಟಿದಾರರಿಗೆ ವಿತರಿಸಲಾಗಿರುವ ಪಡಿತರದಲ್ಲಿ ತೂಕ ವ್ಯತ್ಯಾಸ, ಬಯೋಮೆಟ್ರಿಕ್ ಪಡೆದು ಆಹಾರ ಪದಾರ್ಥ ವಿತರಣೆ ಮಾಡದೇ ತಡವಾಗಿ ಆಹಾರ ಧಾನ್ಯ ವಿತರಣೆ ಮಾಡುತ್ತಿರುವುದು ಕಂಡುಬಂದ ಹಿನ್ನೆಲೆಯಲ್ಲಿ ಸದರಿ ನ್ಯಾಯಬೆಲೆ ಅಂಗಡಿಯನ್ನು ಅಮಾನತು ಮಾಡಲಾಗಿದೆ ಎಂದು ವಿವರಿಸಿದರು.

ಸಮಾಜ ಕಲ್ಯಾಣ, ಪರಿಶಿಷ್ಟ ವರ್ಗಗಳ ಕಲ್ಯಾಣ, ಹಿಂದುಳಿದ ವರ್ಗಗಳು ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವ್ಯಾಪ್ತಿಯ ಹಾಸ್ಟಲ್‍ಗಳಲ್ಲಿ ಮುಖ್ಯವಾಗಿ ಸ್ವಚ್ಚತೆ ಕಾಪಾಡಿಕೊಳ್ಳಬೇಕು. ಮಕ್ಕಳಿಗೆ ಪೌಷ್ಠಿಕಾಂಶಯುಕ್ತ ಆಹಾರ ನೀಡಬೇಕು. ದಾಸ್ತಾನು ದಾಖಲೆಗಳನ್ನು ಕ್ರಮಬದ್ಧವಾಗಿ ನಿರ್ವಹಿಸಬೇಕು. ಮೆನು ಪ್ರಕಾರವೇ ಆಹಾರ ನೀಡಬೇಕು. ತಾಲೂಕು ಕಚೇರಿ ಭೇಟಿ ವೇಳೆ ಆಧಾರ್ ಲಿಂಕ್ ಸಮಸ್ಯೆಯಿಂದ ಹಲವಾರು ಜನರಿಗೆ ಸೌಲಭ್ಯಗಳು ತಲುಪಲು ವಿಳಂಬವಾಗಿರುವುದು ಕಂಡುಬಂದಿದೆ. ಆಧಾರ್ ಸಮಸ್ಯೆಗೆ ತಕ್ಷಣವೇ ಸ್ಪಂದಿಸುವಂತೆ ಸಂಬಂಧಪಟ್ಟ ತಹಶೀಲ್ದಾರ್ ಅವರಿಗೆ ಸೂಚಿಸಲಾಗಿದೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಶ್ರೀರೂಪ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮೋನಾ ರೋತ್, ಕರ್ನಾಟಕ ರಾಜ್ಯ ಆಹಾರ ಆಯೋಗದ ಸದಸ್ಯರಾದ ಲಿಂಗರಾಜು ಕೋಟೆ, ಸುಮಂತ್ ರಾವ್, ಕೆ.ಎಸ್. ವಿಜಯಲಕ್ಷ್ಮೀ, ಎ. ರೋಹಿಣಿಪ್ರಿಯ, ಮಾರುತಿ ದೊಡ್ಡಣ್ಣನವರ್, ಆಹಾರ ಇಲಾಖೆಯ ಉಪನಿರ್ದೇಶಕ ವಸುಂಧರಾ ಹೆಗಡೆ, ಜಿಲ್ಲಾಮಟ್ಟದ ಅಧಿಕಾರಿಗಳು ಇದ್ದರು.

Chamarajanagar

ವಿವಿಧ ಗ್ರಾಮ ಪಂಚಾಯಿತಿಗಳಿಗೆ ಜಿ.ಪಂ.ಸಿಇಒ ಮೋನಾ ರೋತ್ ಭೇಟಿ : ಪರಿಶೀಲನೆ

Published

on

ಚಾಮರಾಜನಗರ: ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮೋನಾ ರೋತ್ ಚಾಮರಾಜನಗರ ತಾಲೂಕಿನ ವಿವಿಧ ಗ್ರಾಮ ಪಂಚಾಯಿತಿಗಳಿಗೆ ದಿಢೀರ್ ಭೇಟಿ ನೀಡಿ, ವಿವಿಧ ಯೋಜನೆ ಕಾಮಗಾರಿ ಇನ್ನಿತರ ಕಾರ್ಯಗಳನ್ನು ಪರಿಶೀಲಿಸಿದರು.

ಉದ್ಯೋಗ ಖಾತರಿ ಯೋಜನೆ, ಎನ್.ಆರ್.ಎಲ್.ಎಂ, ಸ್ವಚ್ಛ ಭಾರತ್ ಮಿಷನ್ (ಗ್ರಾ), ಜಲಜೀವನ್ ಮಿಷನ್ ಯೋಜನೆ, ವಿವಿಧ ವಸತಿ ಯೋಜನೆ, 14 ಮತ್ತು 15ನೇ ಹಣಕಾಸು ಯೋಜನೆ ಹಾಗೂ ಇತರೆ ಗ್ರಾಮೀಣಾಭಿವೃದ್ದಿ ಯೋಜನೆಗಳಡಿ ಅನುಷ್ಟಾನಗೊಳಿಸಲಾಗಿರುವ ಕಾಮಗಾರಿಗಳ ಪ್ರಗತಿಯನ್ನು ಪರಿಶೀಲಿಸಿದರು.

ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಗ್ರಂಥಾಲಯ, ಘನ ಮತ್ತು ದ್ರವ ತ್ಯಾಜ್ಯ ವಿಲೇವಾರಿ ಘಟಕ, ಕೂಸಿನ ಮನೆ ಕೇಂದ್ರಗಳ ಅನುಷ್ಟಾನ, ನಿರ್ವಹಣೆ ಹಾಗೂ ತೆರಿಗೆ ವಸೂಲಾತಿ ಕುರಿತಾದ ಕಡತಗಳು ಮತ್ತು ದಾಖಲಾತಿಗಳ ನಿರ್ವಹಣೆ ಮತ್ತು ಗ್ರಾಮ ಪಂಚಾಯಿತಿ ಸಿಬ್ಬಂದಿಗಳ ಹಾಜರಾತಿಯನ್ನು ವೀಕ್ಷಿಸಿದರು.

ಮಾದಾಪುರ ಗ್ರಾಮ ಪಂಚಾಯಿತಿ ಡಿಜಿಟಲ್ ಗ್ರಂಥಾಲಯಕ್ಕೆ ಭೇಟಿ ನೀಡಿ ಗ್ರಂಥಾಲಯಕ್ಕೆ ಸದಸ್ಯತ್ವ ನೋಂದಣಿಯಾಗಿರುವ ಸದಸ್ಯರ ಸಂಖ್ಯೆ, ಗ್ರಂಥಾಲಯದಲ್ಲಿ ಸಂಗ್ರಹಿಸಲಾಗಿರುವ ಅಧ್ಯಯನ ಪುಸ್ತಕಗಳು, ಶಾಲಾ ಮಕ್ಕಳ ನೋಂದಣಿ, ಪುಸ್ತಕಗಳ ಸಂಗ್ರಹಣೆ ಮತ್ತು ನಿರ್ವಹಣೆ, ಗ್ರಂಥಾಲಯಕ್ಕೆ ಪ್ರತಿದಿನ ಭೇಟಿ ನೀಡುವವರ ಬಗ್ಗೆ ಗ್ರಂಥಾಲಯದ ಮೇಲ್ವಿಚಾರಕರು ಹಾಗೂ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಿಂದ ಮಾಹಿತಿ ಪಡೆದರು. ಸದಸ್ಯರ ನೋಂದಣಿ ಸಂಖ್ಯೆಯನ್ನು ಹೆಚ್ಚಿಸುವಲ್ಲಿ ಅಗತ್ಯ ಕ್ರಮವಹಿಸುವ ಕುರಿತು ಸೂಚನೆಯನ್ನು ನೀಡಿದರು.

ಗ್ರಾಮದ ಅಂಗನವಾಡಿ ಕೇಂದ್ರ-1 ಮತ್ತು ಕೇಂದ್ರ-2ಕ್ಕೆ ಭೇಟಿ ನೀಡಿ, ಅಂಗನವಾಡಿಯಲ್ಲಿ ದಾಖಲಾಗಿರುವ ಮಕ್ಕಳ ಸಂಖ್ಯೆ, ಮಕ್ಕಳು ಹಾಗೂ ಗರ್ಭಿಣಿ-ಬಾಣಂತಿಯರಿಗೆ ನೀಡುತ್ತಿರುವ ಪೌಷ್ಠಿಕ ಆಹಾರದ ಗುಣಮಟ್ಟವನ್ನು ಪರಿಶೀಲಿಸಿದರು. ಆಹಾರ ಪದಾರ್ಥಗಳ ದಾಸ್ತಾನು, ಅಂಗನವಾಡಿ ಕಾರ್ಯಕರ್ತೆ ಮತ್ತು ಮೇಲ್ವಿಚಾರಕರ ಹಾಜರಾತಿ, ದಾಸ್ತಾನು ವಹಿ ಹಾಗೂ ಇತರೆ ವೆಚ್ಚದ ವಹಿಗಳು, ಅಡುಗೆ ಕೋಣೆ, ಕುಡಿಯುವ ನೀರು, ಶೌಚಾಲಯ ವ್ಯವಸ್ಥೆ ಮತ್ತು ಸ್ವಚ್ಛತೆ ಕುರಿತು ವೀಕ್ಷಿಸಿದರು.

Continue Reading

Chamarajanagar

ಬೆಳಗಿನ ವೇಳೆ ವಿದ್ಯುತ್ ಪೂರೈಕೆಗೆ ಒತ್ತಾಯಿಸಿ ರೈತರಿಂದ ಪ್ರತಿಭಟನೆ

Published

on

ಕೊಳ್ಳೇಗಾಲ: ತಾಲೂಕಿನ ಕುಂತೂರು ಸುತ್ತಮುತ್ತಲಿನ ಗ್ರಾಮಗಳಲ್ಲಿ ಹಗಲು ವೇಳೆಯಲ್ಲಿ ವಿದ್ಯುತ್ ಪೂರೈಕೆಗೆ ಒತ್ತಾಯಿಸಿ ರೈತರು ಪ್ರತಿಭಟನೆ ನಡೆಸಿದರು.

ಪಟ್ಟಣದ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ (ಸೆಸ್ಕ್) ಕಚೇರಿ ಮುಂಭಾಗದಲ್ಲಿ ರೈತ ಮುಖಂಡ ಕುಂತೂರು ನಂಜುಂಡಸ್ವಾಮಿ ನೇತೃತ್ವದಲ್ಲಿ ದಿಢೀರ್ ಪ್ರತಿಭಟನೆ ನಡೆಸಲಾಯಿತು.

ಕುಂತೂರು ಭಾಗದ ಜಮೀನುಗಳಿಗೆ ರಾತ್ರಿ ವೇಳೆಯಲ್ಲಿ ವಿದ್ಯುತ್ ಪೂರೈಕೆ ಮಾಡಲಾಗುತ್ತಿರುವುದರಿಂದ ರೈತರು ಕೃಷಿ ಚಟುವಟಿಕೆಗಳಿಗೆ ಜಮೀನಿಗೆ ತೆರಳಲು ಕಾಡು ಪ್ರಾಣಿಗಳಿಂದ ತೊಂದರೆಯಾಗುತ್ತಿದೆ. ಈ ಹಿನ್ನೆಲೆಯಲ್ಲಿ ಬೆಳಗಿನ ಸಮಯದಲ್ಲಿ ವಿದ್ಯುತ್ ಪೂರೈಕೆ ಮಾಡುವಂತೆ ರೈತರು ಒತ್ತಾಯಿಸಿದರು.

ಪ್ರತಿಭಟನಾ ಸ್ಥಳಕ್ಕೆ ಸೆಸ್ಕ್ ಕಾರ್ಯಪಾಲಕ ಅಭಿಯಂತರ ತಬಸ್ಸುಮ್ ಆಗಮಿಸಿ ಮಾತನಾಡಿದ ಅವರು, ಬಳ್ಳಾರಿಯಿಂದ ಹೆಚ್ಚುವರಿ ವಿದ್ಯುತ್ ತರಲು ಹೆವಿ ಲೈನ್ ಕಾಮಗಾರಿ ನಡೆಯುತ್ತಿರುವ ಕಾರಣಕ್ಕೆ ರಾತ್ರಿ ವೇಳೆ ವಿದ್ಯುತ್ ನೀಡಲಾಗುತ್ತಿದೆ ಎಂದು ತಿಳಿಸಿದರು.

ಫೆ. 12ರ ನಂತರ ಬೆಳಗಿನ ಸಮಯದಲ್ಲಿ ಏಳು ಗಂಟೆಗಳ ಕಾಲ ವಿದ್ಯುತ್ ಪೂರೈಕೆ ಮಾಡುವುದಾಗಿ ಭರವಸೆ ನೀಡಿದರು. ಈ ಭರವಸೆಯ ಮೇರೆಗೆ ರೈತರು ಪ್ರತಿಭಟನೆಯನ್ನು ಕೈಬಿಟ್ಟು ತೆರಳಿದರು. ಈ ವೇಳೆ ಎಇಇ ರಾಜು ಉಪಸ್ಥಿತರಿದ್ದರು.

ಪ್ರತಿಭಟನೆಯಲ್ಲಿ ಕುಂತೂರು ನಂಜುಂಡಸ್ವಾಮಿ, ಗಿರೀಶ್ ಆಲಹಳ್ಳಿ, ತೋಟದಾರ್ಯ ತೇರಂಬಳ್ಳಿ, ಲೋಕೇಶ್, ರೇಚಣ್ಣ, ಸತೀಶ್, ಗುರುಪಾದಸ್ವಾಮಿ ತೇರಂಬಳ್ಳಿ, ಮಹೇಶ್, ಕುಂತೂರು ಮಲ್ಲಿಕಾರ್ಜುನ, ನಿರಂಜನಮೂರ್ತಿ, ಬಾಬು, ನಾಗೇಶ್, ಅಂಗಡಿ ರವಿ ಸೇರಿದಂತೆ ಹಲವರು ಭಾಗವಹಿಸಿದ್ದರು.

Continue Reading

Chamarajanagar

ಗಾಜನೂರಿನಲ್ಲಿ ರಾಜಕುಮಾರ್ ಸರ್ಕಲ್ ಸ್ಥಾಪನೆ

Published

on

ಚಾಮರಾಜನಗರ:  ಜಿಲ್ಲೆಯ ಗಡಿಭಾಗಕ್ಕೆ ಹೊಂದಿಕೊಂಡಿರುವ ಗಾಜನೂರು ಗ್ರಾಮದಲ್ಲಿ ಗ್ರಾಮಸ್ಥರ ಮುಂದಾಳತ್ವದಲ್ಲಿ ಇಂದು ಕಣ್ಮನ ಸೆಳೆಯುವಂತೆ ವರನಟ ಡಾ. ರಾಜಕುಮಾರ್ ಅವರ ಹೆಸರಿನ ಸರ್ಕಲ್ ಸ್ಥಾಪಿಸಲಾಯಿತು.

ಗಾಜನೂರಿನ ಪೆಟ್ರೋಲ್ ಬಂಕ್ ಸಮೀಪದಲ್ಲಿರುವ ಸರ್ಕಲ್ ಗೆ ಡಾ.ರಾಜಕುಮಾರ್ ಅವರ ಹೆಸರನ್ನು ನಾಮಕರಣ ಮಾಡಲಾಗಿದ್ದು, ಇದೇ ಸಂದರ್ಭದಲ್ಲಿ ಡಾ.ರಾಜಕುಮಾರ್ ಅವರ ಭಾವಚಿತ್ರವನ್ನು ಅನಾವರಣಗೊಳಿಸಲಾಯಿತು. ಕಾರ್ಯಕ್ರಮದ ಅಂಗವಾಗಿ ಸಾಂಸ್ಕೃತಿಕ ಕಲಾತಂಡಗಳು ಭಾಗವಹಿಸಿ ವಿವಿಧ ಪ್ರದರ್ಶನಗಳನ್ನು ನೀಡುವ ಮೂಲಕ ಕಾರ್ಯಕ್ರಮಕ್ಕೆ ಮೆರಗು ನೀಡಿದವು.

ಈ ಸಂದರ್ಭದಲ್ಲಿ ಡಾ.ರಾಜಕುಮಾರ್ ಅವರ ಸಂಬಂಧಿಗಳಾದ ಗೋಪಾಲ್, ರಾಮಮೂರ್ತಿ, ಕದಿರಯ್ಯ ಮಾಸ್ಟರ್, ನಾಗರಾಜು, ಪ್ರೇಮಗೋಪಾಲ್, ಮಂಗಳಮ್ಮ ಸೇರಿದಂತೆ ದೊಡ್ಡ ಗಾಜನೂರಿನ ಗ್ರಾಮಸ್ಥರು ಉಪಸ್ಥಿತರಿದ್ದರು.

Continue Reading

Trending

error: Content is protected !!