Mysore
ಗಾಂಧಿ ಜಯಂತಿ: ಪ್ರತಿಮೆಗೆ ಪುಷ್ಪಾರ್ಚನೆ ಬಳಿಕ SIR ವಿರುದ್ಧ ಯತೀಂದ್ರ ಸಿದ್ದರಾಮಯ್ಯ ಆ*ಕ್ರೋಶ
ಮೈಸೂರು: ಮಹಾತ್ಮ ಗಾಂಧೀಜಿ ಜಯಂತಿ ಹಿನ್ನೆಲೆಯಲ್ಲಿ ಮೈಸೂರಿನ ಗಾಂಧಿ ವೃತ್ತದಲ್ಲಿರುವ ಗಾಂಧೀಜಿ ಪ್ರತಿಮೆಗೆ ಸಚಿವ ಯತೀಂದ್ರ ಸಿದ್ದರಾಮಯ್ಯ ಪುಷ್ಪಾರ್ಚನೆ ಸಲ್ಲಿಸಿದರು. ಈ ವೇಳೆ ಶಾಸಕ ಕೆ. ಹರೀಶ್‌ಗೌಡ ಹಾಗೂ ಶ್ರೀವತ್ಸ ಸೇರಿದಂತೆ ಹಲವು ಮುಖಂಡರು ಉಪಸ್ಥಿತರಿದ್ದರು.
ಬಳಿಕ ಮಾತನಾಡಿದ ಯತೀಂದ್ರ ಸಿದ್ದರಾಮಯ್ಯ, ರಾಜ್ಯದಲ್ಲಿ ನಡೆಯುತ್ತಿರುವ SIR ಪ್ರಕ್ರಿಯೆಯನ್ನು ತಕ್ಷಣವೇ ನಿಲ್ಲಿಸಬೇಕು ಎಂದು ಆಗ್ರಹಿಸಿದರು. ಚುನಾವಣಾ ಆಯೋಗ ವ್ಯವಸ್ಥಿತವಾಗಿ ಸಂಘಟಿತ ಅಪರಾಧ ನಡೆಸುತ್ತಿದೆ ಎಂದು ಆರೋಪಿಸಿದ ಅವರು, ಬಿಜೆಪಿ ಹಾಗೂ ಚುನಾವಣಾ ಆಯೋಗದ ನಡುವೆ ಶಾಮೀಲಾಗಿರುವ ಆರೋಪ ಮಾಡಿದರು.
ಮುಸ್ಲಿಂರು ಕಾಂಗ್ರೆಸ್‌ಗೆ ಮತ ಹಾಕುವುದಿಲ್ಲ ಎಂಬ ಕಾರಣಕ್ಕೆ ಅವರ ಮತಗಳನ್ನು ಅಳಿಸುವ ಪ್ರಯತ್ನ ನಡೆಯುತ್ತಿದೆ ಎಂದು ಅವರು ಆರೋಪಿಸಿದರು. ಹೆಸರುಗಳ ಆಧಾರದ ಮೇಲೆ ಧರ್ಮ ಗುರುತಿಸುವುದು ಹಾಗೂ ಒಂದೇ ಪ್ರದೇಶದಲ್ಲಿ ಗುಂಪಾಗಿ ವಾಸಿಸುವುದರಿಂದ ಮುಸ್ಲಿಂ ಮತದಾರರ ಹೆಸರುಗಳನ್ನು ಸುಲಭವಾಗಿ ಡಿಲೀಟ್ ಮಾಡಲಾಗುತ್ತಿದೆ ಎಂಬ ಅನುಮಾನವಿದೆ ಎಂದು ಹೇಳಿದರು.

ಫಾರಂ ನಂಬರ್ 7ರಲ್ಲಿ ಆಕ್ಷೇಪಣೆ ಸಲ್ಲಿಸುವುದು ಬೇರೆ ವಿಚಾರ. ಆದರೆ ಒಬ್ಬೊಬ್ಬರೇ ಅಥವಾ ಬಲ್ಕ್ ಆಗಿ ಅರ್ಜಿಗಳನ್ನು ಸಲ್ಲಿಸುತ್ತಿದ್ದರೆ ಅದರ ಹಿಂದಿನ ಉದ್ದೇಶವೇನು? ಅವರಿಗೆ ಮತದಾರರ ಗುರುತಿನ ಚೀಟಿಗಳ ಮಾಹಿತಿ ನೀಡಿದವರು ಯಾರು ಎಂಬುದನ್ನು ಪರಿಶೀಲಿಸಬೇಕು ಎಂದು ಯತೀಂದ್ರ ಸಿದ್ದರಾಮಯ್ಯ ಪ್ರಶ್ನಿಸಿದರು.
ವಿಧಾನಸೌಧದ ಮೆಟ್ಟಿಲುಗಳ ಮೇಲೆ ಉರ್ದು ಉತ್ಸವ ವಿಚಾರ
ವಿಧಾನಸೌಧದ ಮೆಟ್ಟಿಲುಗಳ ಮೇಲೆ ಉರ್ದು ಉತ್ಸವ ಆಯೋಜನೆ ವಿಚಾರವಾಗಿಯೂ ಯತೀಂದ್ರ ಸಿದ್ದರಾಮಯ್ಯ ಪ್ರತಿಕ್ರಿಯಿಸಿದರು. ವಿಧಾನಸೌಧದ ಮೆಟ್ಟಿಲುಗಳ ಬಳಿ ಸರ್ಕಾರಿ ಕಾರ್ಯಕ್ರಮಗಳಿಗೆ ಮಾತ್ರ ಅವಕಾಶ ಎಂಬುದಾಗಿ ಈಗಾಗಲೇ ಸರ್ಕಾರ ಸ್ಪಷ್ಟಪಡಿಸಿದೆ. ಈ ಕುರಿತು ಸಚಿವ ಯು.ಟಿ. ಖಾದರ್ ಅವರು ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದಾರೆ. ಹೀಗಾಗಿ ಈ ವಿಚಾರಕ್ಕೆ ಹೆಚ್ಚಿನ ಮಹತ್ವ ನೀಡುವ ಅಗತ್ಯವಿಲ್ಲ ಎಂದು ಹೇಳಿದರು.
Mysore
ಮೈಸೂರಿನಲ್ಲಿ ಯುವಕನ ಬರ್ಬರ ಹ*ತ್ಯೆ; ಗಣೇಶ ಹಬ್ಬಕ್ಕೆ ಬಂದಿದ್ದ ಹಾಸನದ ಗೌರವ್ ಸಾ*ವು
ಮೈಸೂರು: ಮೈಸೂರಿನ ಮೆಟಗಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಯುವಕನೊಬ್ಬನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಗಣೇಶ ಹಬ್ಬದ ಹಿನ್ನೆಲೆಯಲ್ಲಿ ಹಾಸನದಿಂದ ಮೈಸೂರಿಗೆ ಬಂದಿದ್ದ 20 ವರ್ಷದ ಗೌರವ್ ಎಂಬ ಯುವಕ ಕೊಲೆಯಾಗಿದ್ದಾನೆ.

ಮಧ್ಯರಾತ್ರಿ ಸುಮಾರು 1 ಗಂಟೆ ವೇಳೆಗೆ ಸಣ್ಣ ವಿಚಾರಕ್ಕೆ ಜಗಳ ನಡೆದಿದ್ದು, ಈ ವೇಳೆ ಅಭಿ, ಅರ್ಜುನ್ ಹಾಗೂ ಅವರ ತಂಡ ಗೌರವ್ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಹಲ್ಲೆಯಿಂದ ಗಂಭೀರವಾಗಿ ಗಾಯಗೊಂಡ ಗೌರವ್ ರಕ್ತದ ಮಡುವಿನಲ್ಲಿ ಬಿದ್ದು ಮೃತಪಟ್ಟಿದ್ದಾನೆ ಎನ್ನಲಾಗಿದೆ. ಘಟನೆ ಮಾಹಿತಿ ತಿಳಿದು ಸ್ಥಳಕ್ಕೆ ಮೆಟಗಳ್ಳಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಘಟನೆಗೆ ಸಂಬಂಧಿಸಿದ ಆರೋಪಿಗಳ ಪತ್ತೆಗೆ ತನಿಖೆ ಚುರುಕುಗೊಳಿಸಿದ್ದಾರೆ. ಹತ್ಯೆಗೆ ನಿಖರ ಕಾರಣ ಹಾಗೂ ಘಟನೆಯಲ್ಲಿ ಭಾಗಿಯಾಗಿರುವವರ ಕುರಿತು ಪೊಲೀಸರು ಹೆಚ್ಚಿನ ಮಾಹಿತಿ ಕಲೆಹಾಕುತ್ತಿದ್ದಾರೆ.
Mysore
ಕಾಂಗ್ರೆಸ್ ವಿರುದ್ಧ ಮಹಿಳೆಯರು ಎದ್ದು ನಿಲ್ಲುವ ಕಾಲ ಬಂದಿದೆ: ಪ್ರೇಮಶಂಕರೇಗೌಡ
ಮೈಸೂರು: ಕಾಂಗ್ರೆಸ್ ವಿರುದ್ಧ ಮಹಿಳೆಯರು ಎದ್ದು ನಿಲ್ಲುವ ಕಾಲ ಬಂದಿದೆ ಎಂದು ಮೈಸೂರು ಜೆಡಿಎಸ್ ಮಹಿಳಾ ಘಟಕದ ಅಧ್ಯಕ್ಷೆ ಪ್ರೇಮಶಂಕರೇಗೌಡ ಎಚ್ಚರಿಕೆ ನೀಡಿದ್ದಾರೆ. ಮೈಸೂರಿನಲ್ಲಿ ಮಾತನಾಡಿದ ಅವರು, ಸಚಿವ ಬಾಲಕೃಷ್ಣ ಅವರು ಬ್ಲ್ಯಾಕ್‌ಮೇಲ್ ಮಾಡಿ ಸಚಿವರಾಗಿದ್ದಾರೆ ಎಂದು ಆರೋಪಿಸಿದರು. ಬಾಲಕೃಷ್ಣ ಅವರು ಹಿಂದೆ ಎಲ್ಲಿದ್ದರು ಎಂಬುದನ್ನು ಮೊದಲು ನೆನಪಿಸಿಕೊಳ್ಳಬೇಕು ಎಂದು ಟೀಕಿಸಿದರು.

ಕಾಂಗ್ರೆಸ್ ವಿರುದ್ಧದ ಹೋರಾಟವನ್ನು ಚಾಮುಂಡೇಶ್ವರಿ ಪದತಲದಿಂದಲೇ ಆರಂಭಿಸುತ್ತೇವೆ. ಕಾಂಗ್ರೆಸ್ ನಾಯಕರ ಹೇಳಿಕೆಗಳು ಹಾಗೂ ನಡೆಗೆ ಜೆಡಿಎಸ್ ಮಹಿಳಾ ಘಟಕದಿಂದ ತಕ್ಕ ಉತ್ತರ ನೀಡಲಾಗುವುದು ಎಂದು ಪ್ರೇಮಶಂಕರೇಗೌಡ ಎಚ್ಚರಿಕೆ ನೀಡಿದರು.
Mysore
ಕುಮಾರಸ್ವಾಮಿ ವಿರುದ್ಧ ವೈಯಕ್ತಿಕ ಟೀಕೆ ಸರಿಯಲ್ಲ: ಮಾಜಿ ಶಾಸಕ ಕೆ. ಮಹದೇವ್
ಮೈಸೂರು: ರಾಜಕೀಯದಲ್ಲಿ ಉನ್ನತ ಹುದ್ದೆಯಲ್ಲಿರುವ ನಾಯಕರು ವಿವಿಧ ವಿಚಾರಗಳ ಕುರಿತು ಹೇಳಿಕೆ ನೀಡುವುದು ಸಹಜ. ಆದರೆ ಅವರ ಹೇಳಿಕೆಗಳನ್ನು ಖಂಡಿಸುವ ಭರದಲ್ಲಿ ಆಡಳಿತ ಪಕ್ಷದ ನಾಯಕರು ವೈಯಕ್ತಿಕವಾಗಿ ಟೀಕೆ ಮಾಡುವುದು ಸರಿಯಲ್ಲ ಎಂದು ಮಾಜಿ ಶಾಸಕ ಕೆ. ಮಹದೇವ್ ಹೇಳಿದ್ದಾರೆ. ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರನ್ನು ಸಚಿವ ಬಾಲಕೃಷ್ಣ ಅವರು ವೈಯಕ್ತಿಕವಾಗಿ ತೇಜೋವಧೆ ಮಾಡುವ ರೀತಿಯಲ್ಲಿ ಮಾತನಾಡಿರುವುದು ಸರಿಯಲ್ಲ. ಕುಮಾರಸ್ವಾಮಿ ಅವರನ್ನು ‘ಹಫ್ತಾ ವಸೂಲಿ ಗಿರಾಕಿ’ ಎಂದು ಟೀಕಿಸಿರುವ ಹೇಳಿಕೆ ಬಾಲಕೃಷ್ಣ ಅವರಿಗೂ ಅನ್ವಯಿಸುತ್ತದೆ ಎಂದು ಮಹದೇವ್ ತಿರುಗೇಟು ನೀಡಿದರು.

ಮೈಸೂರಿನಲ್ಲಿ ಮಾತನಾಡಿದ ಅವರು, ಜೆಡಿಎಸ್‌ನ ಪ್ರಮುಖ ನಾಯಕರ ವೈಯಕ್ತಿಕ ತೇಜೋವಧೆಯನ್ನು ಕಾಂಗ್ರೆಸ್ ನಾಯಕರು ಕೈಬಿಡಬೇಕು. ಇಲ್ಲದಿದ್ದರೆ ಜೆಡಿಎಸ್ ವತಿಯಿಂದ ಉಗ್ರ ಪ್ರತಿಭಟನೆ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದರು. ಕುಮಾರಸ್ವಾಮಿ ಅವರು ವಾಸ್ತವಾಂಶಗಳನ್ನು ಮುಂದಿಟ್ಟುಕೊಂಡು ಮಾತನಾಡುತ್ತಿದ್ದಾರೆ. ಆದರೆ ಕಾಂಗ್ರೆಸ್ ನಾಯಕರು ವಿಚಾರಗಳನ್ನು ಬದಿಗಿಟ್ಟು ವೈಯಕ್ತಿಕ ಟೀಕೆಗಳಿಗೆ ಮುಂದಾಗುತ್ತಿರುವುದು ಸರಿಯಲ್ಲ ಎಂದು ಮಾಜಿ ಶಾಸಕ ಕೆ. ಮಹದೇವ್ ಹೇಳಿದರು.
-
Chikmagalur15 hours agoಫೇಸ್ಬುಕ್ನ ‘ಕೇರಳ ಲಾಟರಿ’ ಜಾಹೀರಾತು ನಂಬಿ ₹4.30 ಲಕ್ಷ ಕಳೆದುಕೊಂಡ ವ್ಯಕ್ತಿ
-
Hassan20 hours agoಸಂಸದ ಶ್ರೇಯಸ್ ಎಂ. ಪಟೇಲ್ ಅವರ ಪ್ರಯತ್ನಕ್ಕೆ ಸ್ಪಂದನೆ: ಅನುದಾನ ಬಿಡುಗಡೆಗೆ ಕಾವೇರಿ ನೀರಾವರಿ ನಿಗಮದ ವ್ಯವಸ್ಥಾಪಕ ನಿರ್ದೇಶಕರಿಗೆ ಸಚಿವರ ಸೂಚನೆ
-
Chikmagalur23 hours agoಆಲ್ದೂರು ಪ್ರಾಥಮಿಕ ಕೃಷಿ ಪತ್ತಿನ ಸಂಘಕ್ಕೆ 35 ಲಕ್ಷ ನಿವ್ವಳ ಲಾಭ
-
Chikmagalur47 minutes agoಶಿಕಾರಿಗೆ ತೆರಳಿದ್ದ ವೇಳೆ ಆಕಸ್ಮಿಕ ಗುಂಡೇಟು: 26 ವರ್ಷದ ಯುವಕ ಸಾ*ವು
-
Hassan16 hours agoಪೌರ ಕಾರ್ಮಿಕರ ಸೇವೆ ಶ್ಲಾಘನೀಯ: ಶಾಸಕ ಸಿಮೆಂಟ್ ಮಂಜು
-
Chikmagalur15 hours agoಮೆಸ್ಕಾಂ ಸಬ್ಸ್ಟೇಷನ್ನಿಂದ ₹31 ಲಕ್ಷ ಮೌಲ್ಯದ ಟ್ರಾನ್ಸ್ಫಾರ್ಮರ್ ಆಯಿಲ್ ಕಳವು
-
Chikmagalur15 hours agoಕಡೂರಿನಲ್ಲಿ ಮನೆ ಬೀಗ ಮುರಿದು ₹7.06 ಲಕ್ಷ ಮೌಲ್ಯದ ನಗದು, ಚಿನ್ನಾಭರಣ ಕಳವು
-
Hassan22 hours agoತೆಂಗು ಮತ್ತು ರಾಗಿ ಬೆಳೆ ಸಮಗ್ರ ವಿಚಾರ ಸಂಕಿರಣ
