Hassan
ಲಕ್ಷಾಂತರ ಮಂದಿಗೆ ವಿದ್ಯೆ, ಮನೆ ಬಾಗಿಲಿಗೆ ಉನ್ನತ ಶಿಕ್ಷಣ ವಿವಿಧ ಕೋರ್ಸ್‌ಗಳಿಗೆ ಪ್ರವೇಶಾತಿ, ಕುಲಪತಿ ಪ್ರೊ. ಶರಣಪ್ಪ ವಿ. ಹಲಸೆ
ಹಾಸನ: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯವು ಉನ್ನತ ಶಿಕ್ಷಣ ಎಲ್ಲರಿಗೂ ಎಲ್ಲೆಡೆ ಎಂಬ ಘೋಷವಾಕ್ಯದೊಂದಿಗೆ ೧೯೯೬ರಲ್ಲಿ ಸ್ಥಾಪನೆಯಾಗಿ, ೧೮ ವರ್ಷದಿಂದ ೮೦ ವರ್ಷ ವಯೋಮಾನದವರೆಗಿನ ಲಕ್ಷಾಂತರ ಮಂದಿಗೆ ವಿದ್ಯೆ ನೀಡಿ, ವಿದ್ಯಾರ್ಥಿಗಳ ಮನೆ ಬಾಗಿಲಿಗೆ ಉನ್ನತ ಶಿಕ್ಷಣ ನೀಡಲು ಪ್ರಯತ್ನಿಸುತ್ತಿದೆ ಎಂದು ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಗೌರವಾನ್ವಿತ ಮಾನ್ಯ ಕುಲಪತಿಗಳಾದ ಪ್ರೊ. ಶರಣಪ್ಪ ವಿ. ಹಲಸೆ ರವರು ತಿಳಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಮಂಗಳವಾರ ಮಾತನಾಡಿ, ವಿಶ್ವವಿದ್ಯಾನಿಲಯವು ಕರ್ನಾಟಕದಾದ್ಯಂತ ಪ್ರಸ್ತುತ ಜಿಲ್ಲಾ ಕೇಂದ್ರಗಳಲ್ಲಿ ೩೪ ಪ್ರಾದೇಶಿಕ ಕೇಂದ್ರಗಳನ್ನು ತೆರೆದು ವಿದ್ಯಾರ್ಥಿಗಳಿಗೆ ಸಾಂಪ್ರದಾಯಕ (ರೆಗ್ಯೂಲರ್) ವಿಶ್ವವಿದ್ಯಾನಿಲಯಗಳ ಉನ್ನತ ಶಿಕ್ಷಣಕ್ಕೆ ಸರಿಸಮನಾಗಿ ಮನೆ ಬಾಗಿಲಿಗೆ ಉನ್ನತ ಶಿಕ್ಷಣ ಕೊಡುವಲ್ಲಿ ಮುಂಚೂಣಿಯಲ್ಲಿದೆ. ಹೀಗಾಗಿ ೧೦+೨ (ಪದವಿ ಪೂರ್ವ), ೧೦+೨+೩ (ಸ್ನಾತಕ ಪದವಿ) ವಿದ್ಯಾರ್ಹತೆ ಹೊಂದಿರುವ ಎಲ್ಲಾ ಆಭ್ಯರ್ಥಿಗಳು ಈ ಅವಕಾಶವನ್ನು ಸದುಪಯೋಗ ಮಾಡಿಕೊಂಡು ಕರಾಮುವಿಯಲ್ಲಿ ಪ್ರವೇಶಾತಿ ಪಡೆಯಬಹುದು ಎಂದರು. ಕ.ರಾ.ಮು.ವಿ.ಯು ಕರ್ನಾಟಕ ರಾಜ್ಯದಲ್ಲಿ ಮೈಸೂರಿನ ಮುಕ್ತ ಗಂಗೋತ್ರಿಯಲ್ಲಿ ಕೇಂದ್ರ ಕಛೇರಿ ಹೊಂದಿದ್ದು, ಅತ್ಯಂತ ಸುಂದರವಾದ ಹಸಿರು ಪರಿಸರದಲ್ಲಿ ಸುಸಜ್ಜಿತ ಆಡಳಿತ ಭವನ, ಪರೀಕ್ಷಾ ಭವನ, ವಿಜ್ಞಾನ ಭವನ, ಗ್ರಂಥಾಲಯ, ಪ್ರಾಯೋಗಿಕ ಪ್ರಯೋಗಾಲಯವನ್ನು ಹೊಂದಿದ್ದು, ರಾಜ್ಯದಾದ್ಯಂತ ೩೫ ಪ್ರಾದೇಶಿಕ ಕೇಂದ್ರಗಳು ಮತ್ತು ೧೮೦ ಕಲಿಕಾರ್ಥಿ ಸಹಾಯ ಕೇಂದ್ರಗಳಿದ್ದು, ವಿದ್ಯಾರ್ಥಿ ಸ್ನೇಹಿ ಶಿಕ್ಷಣ ಸೇವೆಯನ್ನು ಒದಗಿಸುತ್ತ ಬಂದಿದೆ. ಕ.ರಾ.ಮು.ವಿ.ಯಲ್ಲಿ ಪದವಿ/ಸ್ನಾತಕೋತ್ತರ ಶಿಕ್ಷಣ ಪಡೆದ ಸಾವಿರಾರು ವಿದ್ಯಾರ್ಥಿಗಳು ರಾಜ್ಯ, ಕೇಂದ್ರ ಸರ್ಕಾರದ ವಿವಿಧ ಶ್ರೇಣಿಯ ಸರ್ಕಾರಿ ಹುದ್ದೆ ಪಡೆದು ಕಾರ್ಯ ನಿರ್ವಹಿಸುತ್ತಿದ್ದಾರೆ. ಕೆ.ಎ.ಎಸ್., ಐ.ಎ.ಎಸ್., ಪೋಲಿಸ್ ಅಧಿಕಾರಿಗಳಾಗಿ, ಅಧ್ಯಾಪಕರಾಗಿ, ಶಿಕ್ಷಕರಾಗಿ ಕರಾಮುವಿಯ ವಿದ್ಯಾರ್ಥಿಗಳು ಆಯ್ಕೆಯಾಗಿರುತ್ತಾರೆ ಕ.ರಾ.ಮು.ವಿ.ಯು ಯು.ಜಿ.ಸಿ ಮಾನ್ಯತೆ ಪಡೆದಿರುವ ೪೭ ಸ್ನಾತಕ/ಸ್ನಾತಕೋತ್ತರ ಪದವಿ, ಡಿಪ್ಲೋಮಾ ಶಿಕ್ಷಣ ಕ್ರಮಗಳಿಗೆ ಪ್ರವೇಶಾತಿ ನೀಡುತ್ತಿದ್ದು, ಇದರ ಜೊತೆಗೆ ಪ್ರಸಕ್ತ ಸಾಲಿನಿಂದ ಸಮಾಜ ಕಾರ್ಯ, ಎಂ.ಬಿ.ಎ ವಿಭಾಗದಲ್ಲಿ ಆಸ್ಪತ್ರೆ ಮತ್ತು ಆರೋಗ್ಯ ಕಾಳಜಿ ನಿರ್ವಹಣೆ ಎಂ.ಸಿ.ಎ ಹಾಗೂ ೧೦ ಆನ್ ಲೈನ್ ಕೋರ್ಸ್ ಕೋರ್ಸ್‌ಗಳಿಗೆ ಪ್ರವೇಶಾತಿ ಮಾಡಲಾಗುತ್ತಿದೆ. ಕ.ರಾ.ಮು.ವಿ.ಯಲ್ಲಿ ಪ್ರಸ್ತುತ ಸಾಲಿನಲ್ಲಿ ಒಂದು ಲಕ್ಷ ಪ್ರವೇಶಾತಿ ಸಾಧಿಸಬೇಕು ಎಂಬ ಗುರಿ ಹೊಂದಲಾಗಿದೆ ಎಂದು ಹೇಳಿದರು.

ಪತ್ರಿಕಾಗೋಷ್ಠಿಯಲ್ಲಿ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಡೀನ್ ರಾಮನಾಥ್ ನಾಯ್ಡ್, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ಹೆಚ್.ಎಲ್. ಮಲ್ಲೇಶ್ ಗೌಡ, ಜಿಲ್ಲಾ ಸರಕಾರಿ ನೌಕರರ ಸಂಘದ ಅಧ್ಯಕ್ಷ ಈ. ಕೃಷ್ಣೇಗೌಡ, ಪ್ರಾದೇಶಿಕ ಕೇಂದ್ರದ ನಿರ್ದೇಶಕ ಪಿ. ಜಗದೀಶ್, ಕಲಿಕಾರ್ಥಿ ಸಹಾಯಕ ಕೇಂದ್ರಗಳ ಸಂಯೋಜನಾಧಿಕಾರಿ ಸಿದ್ಧೇಗೌಡ ಇತರರು ಉಪಸ್ಥಿತರಿದ್ದರು.
Hassan
HKS PUC ಕಾಲೇಜಿನಲ್ಲಿ ಜರುಗಿದ ರಾಜ್ಯಮಟ್ಟದ ಬಾಲ್ ಬ್ಯಾಡ್ಮಿಂಟನ್ ಕ್ರೀಡಾಕೂಟ ಸಮಾರೋಪ ಸಮಾರಂಭ
ಹಾಸನ: ಶಾಲಾ ಶಿಕ್ಷಣ (ಪದವಿ ಪೂರ್ವ) ಇಲಾಖೆ, ಹಾಸನ ಉಪ ನಿರ್ದೇಶಕರ ಕಛೇರಿ, ಹೆಚ್ ಕೆ ಎಸ್ ಪದವಿಪೂರ್ವ ಕಾಲೇಜು, ಹಾಸನ ಹಾಗೂ ಕಾರ್ಕಳದ ಕ್ರಿಯೇಟಿವ್ ಶಿಕ್ಷಣ ಪ್ರತಿಷ್ಠಾನ ಇವರ ಸಂಯುಕ್ತಾಶ್ರಯದಲ್ಲಿ 2025 – 26ನೇ ಶೈಕ್ಷಣಿಕ ಸಾಲಿನ ರಾಜ್ಯಮಟ್ಟದ ಬಾಲ್ ಬ್ಯಾಡ್ಮಿಂಟನ್ ಕ್ರೀಡಾಕೂಟದ ಸಮಾರೋಪ ಸಮಾರಂಭ ನಗರದ ಹೆಚ್‌ಕೆಎಸ್ ಪದವಿ ಪೂರ್ವ ಕಾಲೇಜು ಮೈದಾನದಲ್ಲಿ ಡಿ.5 ರಂದು ಜರುಗಿತು.
ಕಾರ್ಯಕ್ರಮದಲ್ಲಿ ಸಂಸ್ಥೆಯ ಪ್ರಾಂಶುಪಾಲ ಎ. ಪ್ರವೀಣ್ ಅವರು ಕ್ರೀಡೆಯ ರೂಪು ರೇಷೆಗಳನ್ನು ಕುರಿತು ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು. ಶಾಲಾ ಶಿಕ್ಷಣ (ಪದವಿಪೂರ್ವ) ಇಲಾಖೆಯ ಜಿಲ್ಲಾ ಕ್ರೀಡಾ ಸಂಯೋಜಕ ಸಿ.ಪಿ.ವಿಜಯ್ ಅವರು ರಾಜ್ಯಮಟ್ಟದ ಬಾಲ್ ಬ್ಯಾಡ್ಮಿಂಟನ್ ಕ್ರೀಡೆಯ ಯಶಸ್ಸಿಗೆ ಹೆಚ್‌ಕೆಎಸ್ ಪದವಿ ಪೂರ್ವ ಕಾಲೇಜಿನ ಕಾರ್ಯ ಚಟುವಟಿಕೆಗಳ ಕುರಿತು ಮೆಚ್ಚುಗೆ ವ್ಯಕ್ತಪಡಿಸಿದರು.

ಹಾಸನ ಜಿಲ್ಲೆಯ ಶಾಲಾ ಶಿಕ್ಷಣ (ಪದವಿಪೂರ್ವ) ಇಲಾಖೆಯ ಉಪನಿರ್ದೇಶಕ ಕೆ.ಪಿ.ಗಂಗಾಧರ ಅವರು, ಸೋಲು ಮತ್ತು ಗೆಲುವು ಒಂದೇ ನಾಣ್ಯದ ಎರಡು ಮುಖಗಳಿದ್ದಂತೆ ಸೋತವರು ಕುಗ್ಗದೆ ಮುಂದಿನ ಕಾರ್ಯಕ್ಕೆ ಪ್ರವೃತ್ತರಾಗಬೇಕೆಂದು ಅಧ್ಯಕ್ಷೀಯ ನುಡಿಗಳನ್ನಾಡಿದರು.
ರಾಜ್ಯಮಟ್ಟದ ಬಾಲ್ ಬ್ಯಾಡ್ಮಿಂಟನ್ ಕ್ರೀಡಾ ಪಂದ್ಯಾವಳಿಯಲ್ಲಿ ರಾಜ್ಯದ 33 ಶೈಕ್ಷಣಿಕ ಜಿಲ್ಲೆಗಳು ಭಾಗವಹಿಸಿದ್ದು, ದಕ್ಷಿಣ ಕನ್ನಡ ಜಿಲ್ಲೆಯ ಬಾಲಕರ ಮತ್ತು ಬಾಲಕಿಯರ ವಿಭಾಗ ಪ್ರಥಮ ಬಹುಮಾನ, ಬೆಂಗಳೂರು ದಕ್ಷಿಣ ಜಿಲ್ಲೆಯ ಬಾಲಕರು ಮತ್ತು ಬಾಲಕಿಯರ ವಿಭಾಗ ದ್ವಿತೀಯ ಬಹುಮಾನ, ಮೈಸೂರು ಜಿಲ್ಲೆಯ ಬಾಲಕರು ಮತ್ತು ಬಾಲಕಿಯರ ವಿಭಾಗ ಮೂರನೇ ಬಹುಮಾನ, ಬೀದರ್ ಜಿಲ್ಲೆಯ ಬಾಲಕರ ವಿಭಾಗದಲ್ಲಿ ನಾಲ್ಕನೇ ಬಹುಮಾನ ಹಾಗೂ ಉಡುಪಿ ಜಿಲ್ಲೆಯ ಬಾಲಕಿಯರ ವಿಭಾಗದಲ್ಲಿ ನಾಲ್ಕನೇ ಬಹುಮಾನವನ್ನು ಪಡೆದುಕೊಂಡು ಸಾಧನೆಗೈದ ಕ್ರೀಡಾಪಟುಗಳಿಗೆ ಪದಕಗಳು ಮತ್ತು ಆಕರ್ಷಕ ಟ್ರೋಫಿಗಳನ್ನು ನೀಡಿ ಗೌರವಿಸಲಾಯಿತು.

ಸಭಾ ಕಾರ್ಯಕ್ರಮವನ್ನು ಸಂಸ್ಕೃತ ಉಪನ್ಯಾಸಕರಾದ ಗಣೇಶ್ ಕೆ ಭಟ್ ಸ್ವಾಗತಿಸಿದರು. ಕನ್ನಡ ಉಪನ್ಯಾಸಕರಾದ ಲೋಕೇಶ್ ಪೂಜಾರಿ ನಿರೂಪಿಸಿದರೆ, ಆಂಗ್ಲ ಉಪನ್ಯಾಸಕರಾದ ಶ್ರೀನಿವಾಸ್ ಜೆ ಎನ್ ವಂದಿಸಿದರು.
Hassan
ಸಂವಿಧಾನದ ಮೌಲ್ಯಗಳನ್ನು ಉಳಿಸಲು ಮೋದಿ ಸರ್ಕಾರ ಶ್ರಮಿಸುತ್ತಿದೆ: ಲಾಲ್ ಸಿಂಗ್ ಆರ್ಯ
ಹಾಸನ: ಪಿಎಂ ನರೇಂದ್ರ ಮೋದಿಯವರ ನೇತೃತ್ವದಲ್ಲಿ ದೇಶದ ಆಡಳಿತ ವ್ಯವಸ್ಥೆ ಡಾ. ಬಾಬಾಸಾಹೇಬ್ ಅಂಬೇಡ್ಕರ್ ಬರೆದಿರುವ ಸಂವಿಧಾನದ ಮೌಲ್ಯಗಳನ್ನು ಕಟ್ಟುನಿಟ್ಟಾಗಿ ಅನುಸರಿಸುತ್ತಿದೆ ಎಂದು ಎಸ್‌ಸಿ ಮೋರ್ಚಾ ರಾಷ್ಟ್ರೀಯ ಅಧ್ಯಕ್ಷ ಲಾಲ್ ಸಿಂಗ್ ಆರ್ಯ ತಿಳಿಸಿದ್ದಾರೆ.
ನಗರದ ಜಿಲ್ಲಾ ಬಿಜೆಪಿ ಕಚೇರಿ ಬಳಿಯ ಖಾಸಗಿ ಹೋಟೆಲಿನ ಸಭಾಂಗಣದಲ್ಲಿ ಭಾನುವಾರದಂದು ಹಮ್ಮಿಕೊಳ್ಳಲಾಗಿದ್ದ ಸಂವಿಧಾನ ದಿವಸ್ ಹಾಗೂ ಅಂಬೇಡ್ಕರ್ ಪರಿನಿರ್ವಾಣ ದಿನದ ಕಾರ್ಯಕ್ರಮದಲ್ಲಿ ಅಂಬೇಡ್ಕರ್ ಬಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ ಮಾತನಾಡಿದರು.

ಡಾ.ಬಿ.ಆರ್.ಅಂಬೇಡ್ಕರ್ ಅವರ ಸಮಾಜ ಪರ ಹೋರಾಟ ಮತ್ತು ರಾಷ್ಟ್ರ ನಿರ್ಮಾಣಕ್ಕೆ ನೀಡಿದ ಅಸಮಾನ್ಯ ಕೊಡುಗೆಯನ್ನು ಹೃದಯಂಗಮವಾಗಿ ಸ್ಮರಿಸಿದರು. ದಲಿತರು, ಕಾರ್ಮಿಕರು, ಮಹಿಳೆಯರು ಸೇರಿದಂತೆ ಸಮಾಜದ ನಿರ್ಗತಿಕ ವರ್ಗಗಳಿಗೆ ನ್ಯಾಯ ಹಾಗೂ ಹಕ್ಕುಗಳನ್ನು ಒದಗಿಸಲು ಅಂಬೇಡ್ಕರ್ ಮಾಡಿದ ಹೋರಾಟವನ್ನು ಅವರು ನೆನೆದು ನಮನ ಸಲ್ಲಿಸಿದರು.
ಅಂಬೇಡ್ಕರ್ ರಚಿಸಿದ ಸಂವಿಧಾನ ದೇಶದ ಕೋಟ್ಯಾಂತರ ಜನರಿಗೆ ರಕ್ಷಣಾ ಕವಚದಂತೆ ಕೆಲಸ ಮಾಡುತ್ತಿದ್ದು, ಸಾಮಾಜಿಕ ನ್ಯಾಯವನ್ನೂ, ಅವಕಾಶಗಳ ಸಮಾನತೆಯನ್ನೂ ಒದಗಿಸಿದೆ ಎಂದು ಹೇಳಿದರು. ನಿರ್ಗತಿಕರಿಗೆ ನ್ಯಾಯ, ಬದುಕಿಲ್ಲದವರಿಗೆ ಗೌರವ, ದುರ್ಬಲರಿಗೆ ಸಾಮಾಜಿಕ ಭದ್ರತೆ ? ಇವುಗಳನ್ನು ಅಂಬೇಡ್ಕರ್ ಕನಸಿನ ಭಾರತಕ್ಕೆ ನೀಡಿದ ಮಹತ್ವದ ದಿಕ್ಕುಗಳು ಎಂದು ಕೊಂಡಾಡಿದರು. ಕೇಂದ್ರದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಅಂಬೇಡ್ಕರ್ ಕನಸು ಕಂಡ ದೇಶವನ್ನು ನಿರ್ಮಿಸಲು ಮೋದಿ ಸರ್ಕಾರ ಅನೇಕ ಕ್ರಮಗಳನ್ನು ಜಾರಿಗೊಳಿಸಿದೆ ಎಂದು ಆರ್ಯ ಅಭಿಪ್ರಾಯಪಟ್ಟರು.

ಕಾರ್ಯಕ್ರಮದಲ್ಲಿ ಆಲೂರು-ಸಕಲೇಶಪುರ ಶಾಸಕ ಸಿಮೆಂಟ್ ಮಂಜು ಪ್ರಾಸ್ತಾವಿಕವಾಗಿ ಮಾತನಾಡಿ, ಇಡೀ ಪ್ರಪಂಚದಲ್ಲಿ ಅತ್ಯುನ್ನತ, ಬಲಿಷ್ಠ ಮತ್ತು ಸಮಗ್ರ ಸಂವಿಧಾನವನ್ನು ದೇಶಕ್ಕೆ ನೀಡಿದವರು ಬಾಬಾ ಸಾಹೇಬ್ ಅಂಬೇಡ್ಕರ್ ಎಂದು ಕೊಂಡಾಡಿದರು. ಪಾಕಿಸ್ತಾನ, ಬಾಂಗ್ಲಾದೇಶ, ಅಫಘಾನಿಸ್ತಾನ ಹೀಗೆ ಹಲವು ದೇಶಗಳ ಅಸ್ಥಿರ ಪರಿಸ್ಥಿತಿಯನ್ನು ಉಲ್ಲೇಖಿಸಿ, ಬಲಿಷ್ಠ ಸಂವಿಧಾನ ಒಂದು ರಾಷ್ಟ್ರವನ್ನು ಹೇಗೆ ರಕ್ಷಿಸುತ್ತದೆ ಎಂಬುದಕ್ಕೆ ಭಾರತದ ಉದಾಹರಣೆಯನ್ನು ಅವರು ಮುಂದಿಟ್ಟರು. ಸಂವಿಧಾನ ಬರೆಯುವುದು ಅಷ್ಟೇನೂ ಸುಲಭದ ಕಾರ್ಯವಲ್ಲ ಅಪಮಾನಗಳನ್ನು ಸಹಿಸಿಕೊಂಡು, ನೂರಾರು ಗ್ರಂಥಗಳನ್ನು ಓದಿ, ಅಂಬೇಡ್ಕರ್ ಸಂವಿಧಾನ ರಚಿಸಿದ ಮಹಾನುಭಾವ ಎಂದು ಹೇಳಿದರು.
ಅಂಬೇಡ್ಕರ್ ಸಂವಿಧಾನ ಬರೆಯದೆ ಹೋಗಿದ್ದರೆ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗುತ್ತಿರಲಿಲ್ಲ ಅಭಿಪ್ರಾಯಪಟ್ಟರು. ಮಹಿಳೆಯರಿಗೆ ಆಸ್ತಿಯಲ್ಲಿ ಹಕ್ಕು, ಸಮಾಜದ ದುರ್ಬಲ ವರ್ಗಗಳಿಗೆ ಅವಕಾಶ ಇವೆಲ್ಲಾ ಬಾಬಾಸಾಹೇಬ್ ನೀಡಿದ ದಾರಿ ಎಂದು ಹೇಳಿದರು.

ಲೋಕಸಭೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಮಾಡಿದ ಭಾಷಣವನ್ನು ಉಲ್ಲೇಖಿಸಿದ ಅವರು, ದೇಶಕ್ಕೆ ಸಂವಿಧಾನ ಎನ್ನುವ ಅಮೃತ ಕೊಟ್ಟು, ವಿಷವನ್ನು ಕುಡಿದ ವ್ಯಕ್ತಿ ಅಂಬೇಡ್ಕರ್ ಎಂದು ಮೋದಿ ಅವರು ಹೇಳಿದ ಮಾತುಗಳನ್ನು ಸ್ಮರಿಸಿದರು.
ಮಹಿಳೆಯರ ಮೇಲೆ ಅನ್ಯಾಯ, ದಲಿತರ ಮೇಲಿನ ಅವಮಾನ, ಧರ್ಮಾಧಾರಿತ ರಾಜಕೀಯದ ವಿರುದ್ಧ ಅಂಬೇಡ್ಕರ್ ಧೈರ್ಯವಾಗಿ ಧ್ವನಿ ಎತ್ತಿದ ಸಿದ್ಧಾಂತಗಳನ್ನು ಹಂಚಿಕೊಂಡರು. ಅಂಬೇಡ್ಕರ್ ಅವರಿಗೆ ಭಾರತ ರತ್ನ ಪ್ರಶಸ್ತಿ ದೊರಕಿರುವುದು ಬಿಜೆಪಿ ಬೆಂಬಲಿತ ವಿ.ಪಿ.ಸಿಂಗ್ ಸರ್ಕಾರದಲ್ಲಿ ಎಂದು ಅವರು ತಿಳಿಸಿದರು.

ದೇಶದಲ್ಲಿ ಒಟ್ಟು 106 ಬಾರಿ ಸಂವಿಧಾನ ತಿದ್ದುಪಡಿ ನಡೆದಿವೆ. ಇದರಲ್ಲೇ ಕಾಂಗ್ರೆಸ್ 75 ಬಾರಿ, ಕಾಂಗ್ರೆಸ್‌ಯೇತರ ಸರ್ಕಾರಗಳು 31 ಬಾರಿ ಸಂವಿಧಾನವನ್ನು ಬದಲಿಸಿದವರು. ಆದರೇ ಮೋದಿ ಅಲ್ಲ, ಕಾಂಗ್ರೆಸ್ ಸರ್ಕಾರಗಳು ಎಂದು ಹೇಳಿದರು. ನಿಜವಾದ ಪ್ರಜಾಪ್ರಭುತ್ವ ಉಳಿಸುವವರು ನರೇಂದ್ರ ಮೋದಿ, ಸಂವಿಧಾನ ಪಾಲಿಸುವವರು ಬಿಜೆಪಿ. ಅಂಬೇಡ್ಕರ್ ಅವರಿಗೆ ನಿಜವಾದ ಗೌರವ ನೀಡಿರುವವರು ಮೋದಿ ಎಂದು ಶಾಸಕರು ಸ್ಪಷ್ಟಪಡಿಸಿದರು.
ಕಾರ್ಯಕ್ರಮದಲ್ಲಿ ಬಿಜೆಪಿ ರಾಷ್ಟ್ರೀಯ ಮೋರ್ಚಾ ಕಾರ್ಯಾಧ್ಯಕ್ಷ ಕುಮಾರ್ ನಾಯಕ್, ಜಿಲ್ಲಾ ಅಧ್ಯಕ್ಷ ಸಿದ್ದೇಶ್ ನಾಗೇಂದ್ರ, ಪ್ರಧಾನ ಕಾರ್ಯದರ್ಶಿ ಅಮಿತ್ ಶೆಟ್ಟಿ, ಎಸ್.ಸಿ. ಮೋರ್ಚಾ ಜಿಲ್ಲಾ ಅಧ್ಯಕ್ಷ ಎಸ್.ಡಿ. ಚಂದ್ರು, ರಾಜ್ಯ ಮಹಿಳಾ ಮೋರ್ಚಾ ಅಧ್ಯಕ್ಷೆ ನೇತ್ರಾವತಿ ಮಂಜುನಾಥ, ಉಪಾಧ್ಯಕ್ಷ ಶ್ರೀನಿವಾಸ್, ರಾಜ್ಯ ಕಾರ್ಯದರ್ಶಿ ಓಂಕಾರ್, ಪ್ರಶಾಂತ್ ಹಾಗೂ ಇತರ ಬಿಜೆಪಿ ಕಾರ್ಯಕರ್ತರು ಉಪಸ್ಥಿತಿ ನೀಡಿದರು. ವೇಧವತಿ ದೇಶಗೀತೆ ಹಾಡಿ ಕಾರ್ಯಕ್ರಮಕ್ಕೆ ಸಾಂಸ್ಕೃತಿಕ ಸೊಬಗು ನೀಡಿದರು. ಗಿರೀಶ್ ಸ್ವಾಗತಿಸಿದರು.
Hassan
ರಾತ್ರೋರಾತ್ರಿ ಮಿನಿ ಪಿಕಪ್ ವಾಹನದಲ್ಲಿ ಬಂದು ಕಾಫಿ ಕಳ್ಳತನ
50 ಕೆಜಿ ಕಾಫಿಗೆ ಬರೋಬ್ಬರಿ 30000 ದರ ಹೆಚ್ಚಳ ಹಿನ್ನೆಲೆ,
ಮಲೆನಾಡಿನಲ್ಲಿ ಹೆಚ್ಚಾಗುತ್ತಿದ್ದಾರೆ ಕಾಫಿ ಕಳ್ಳರು,
*ರಾತ್ರೋರಾತ್ರಿ ತೋಟಕ್ಕೆ ನುಗ್ಗಿ ಗಿಡದಲ್ಲಿದ್ದ ಕಾಫಿಯನ್ನು ಕಳ್ಳತನ ಮಾಡುತ್ತಾರೆ ಖದೀಮರು*
ವಾಹನದಲ್ಲಿ ಬರ್ತಾರೆ ಸಿಕ್ಕಸಿಕ್ಕ ಕಡೆ ಕಾಫಿ ದೋಚಿ ಹೊರಡುವ ಕಳ್ಳರು,
ಸುದೀಪ್ ಹಾಗೂ ಮಧು ಎಂಬುವರ ಕಾಫಿ ತೋಟದಲ್ಲಿ ಗಿಡದಲ್ಲಿದ್ದ ಕಾಫಿಯನ್ನೇ ಕಳ್ಳತನ ಮಾಡಿದ ಚಾಲಾಕಿ ಕಳ್ಳರು,
ರಾತ್ರೋರಾತ್ರಿ ಮಿನಿ ಪಿಕಪ್ ವಾಹನದಲ್ಲಿ ಬಂದು ಕಳ್ಳತನ ಮಾಡಿರೋ ಕಾಫಿ ಕಳ್ಳರು,
ಬೇಲೂರು ತಾಲೂಕು, ಚಿನ್ನೇನಹಳ್ಳಿ ಗ್ರಾಮದಲ್ಲಿ ಘಟನೆ,
ಹಾಸನ ಜಿಲ್ಲೆಯ ಬೇಲೂರು ತಾಲೂಕಿನ ಚಿನ್ನೇನಹಳ್ಳಿ ಗ್ರಾಮ,
ಒಂದು ಎಕರೆ ಎರಡು ಎಕರೆ ಇರೋ ತೋಟವನ್ನೇ ಟಾರ್ಗೆಟ್ ಮಾಡಿರುವ ಕಾಫಿ ಕಳ್ಳರು,
ಗಿಡದಲ್ಲಿದ್ದ ಕಾಫಿಯನ್ನು ಬಿಡುತ್ತಿಲ್ಲ ಕದೀಮರು
-
Mysore2 hours agoಬಸ್ ನಿಲ್ದಾಣಕ್ಕೆ ಕಾರು ಡಿಕ್ಕಿ: ಚಾಲಕನಿಗೆ ಗಂಭೀರ ಗಾಯ
-
Hassan55 minutes agoHKS PUC ಕಾಲೇಜಿನಲ್ಲಿ ಜರುಗಿದ ರಾಜ್ಯಮಟ್ಟದ ಬಾಲ್ ಬ್ಯಾಡ್ಮಿಂಟನ್ ಕ್ರೀಡಾಕೂಟ ಸಮಾರೋಪ ಸಮಾರಂಭ
-
State3 hours agoನಾಳೆಯಿಂದ ಚಳಿಗಾಲದ ಅಧಿವೇಶನ: ಸುವರ್ಣಸೌಧದಲ್ಲಿ ಸುತ್ತ ಹೈ ಆಲರ್ಟ್ 6,000 ಪೊಲೀಸ್ ಭದ್ರತೆ
-
Chikmagalur2 hours agoಕಾಫಿನಾಡಲ್ಲಿ ನಿಲ್ಲದ ಕಾಡಾನೆ ದಾಳಿ: ಕಾರ್ಮಿಕ ಗಣಪತಿ ಪ್ರಾಣಾಪಾಯದಿಂದ ಪಾರು
-
Chikmagalur2 hours agoಗ್ರಾ.ಪಂ.ಸದಸ್ಯ ಗಣೇಶ್ ಕೊಲೆ ಪ್ರಕರಣ: ಐವರ ಬಂಧನ, ಮೂವರಿಗಾಗಿ ತೀವ್ರ ಶೋಧ
-
Mandya24 minutes agoಮದ್ದೂರು ಬಳಿ ಭೀಕರ ಅಪಘಾತ : ಖಾಸಗಿ ಬಸ್ ಪಲ್ಟಿಯಾಗಿ 30ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ
-
Hassan7 hours agoರಾತ್ರೋರಾತ್ರಿ ಮಿನಿ ಪಿಕಪ್ ವಾಹನದಲ್ಲಿ ಬಂದು ಕಾಫಿ ಕಳ್ಳತನ
-
Sports4 hours agoಮೌನ ಮುರಿದು ಮದುವೆ ವಂದತಿಗಳಿಗೆ ಫುಲ್ಸ್ಟಾಪ್ ಇಟ್ಟ ಸ್ಮೃತಿ ಮಂದಾನ
