Manglore
ಆರ್ಥೋಪೆಡಿಕ್ ರೊಬೊಟಿಕ್ ಸರ್ಜರಿ ವ್ಯವಸ್ಥೆ ‘ಸ್ಕೈವಾಕರ್’ ಯೆನೆಪೊಯ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಲಭ್ಯ
 
																								
												
												
											ಮಂಗಳೂರು: ನಗರದ ಯೆನೆಪೊಯ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ದಕ್ಷಿಣ ಏಷ್ಯಾದಲ್ಲೇ ಮೊದಲ ಬಾರಿಗೆ ಆರ್ಥೋಪೆಡಿಕ್ ರೊಬೊಟಿಕ್ ವ್ಯವಸ್ಥೆ ‘ಸ್ಕೈವಾಕರ್’ ಸರ್ಜರಿಯನ್ನು ಆರಂಭಿಸಿದೆ ಎಂದು ಯೆನೆಪೊಯ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯ ವೈದ್ಯಕೀಯ ನಿರ್ದೇಶಕ ಡಾ. ಮುಹಮ್ಮದ್ ತಾಹಿರ್ ಹೇಳಿದರು.

ನಗರದ ಯೆನೆಪೊಯ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಇಂದು ನಡೆದ ಸುದ್ದಿಗೋಷ್ಠಿಯಯಲ್ಲಿ ಮಾತನಾಡಿದ ಅವರು, ಅಮೆರಿಕದ ಮೈಕ್ರೋಪೋರ್ಟ್ ಆರ್ಥೋಪೆಡಿಕ್ಸ್ ಇಂಕ್ ಸಹಭಾಗಿತ್ವದಲ್ಲಿ ಈ ಸರ್ಜರಿ ವ್ಯವಸ್ಥೆಯನ್ನು ಆರಂಭಿಸಲಾಗಿದೆ. ನಮ್ಮಲ್ಲಿಗೆ ಬರುವ ರೋಗಿಗಳ ಬದುಕಿನಲ್ಲಿ ಧನಾತ್ಮಕ ಬದಲಾವಣೆ ತರುವ ನಿಟ್ಟಿನಲ್ಲಿ ಜಾಗತಿಕ ವೈದ್ಯಕೀಯ ಲೋಕದಲ್ಲಿ ಉಂಟಾಗುವ ಹೊಸ ಹೊಸ ಆವಿಷ್ಕಾರಗಳನ್ನು ತ್ವರಿತವಾಗಿ ಇಲ್ಲೂ ಅಳವಡಿಸಿಕೊಳ್ಳುವ ಕಾರ್ಯವನ್ನು ಯೆನೆಪೋಯ ಆಸ್ಪತ್ರೆ ಮಾಡುತ್ತಾ ಬಂದಿದೆ. ಅದರೊಂದಿಗೆ ರೋಗಿಗಳ ಆರೈಕೆಗೆ ಜಾಗತಿಕ ದರ್ಜೆಯ ಹೊಸ ತಂತ್ರಜ್ಞಾನಗಳನ್ನು ಅಳವಡಿಸಿಕೊಳ್ಳುವಲ್ಲಿ ಮುಂಚೂಣಿಯಲ್ಲಿರುವ ಆಸ್ಪತ್ರೆಯು ಇನ್ನೊಂದು ಗರಿಯನ್ನು ತನ್ನ ಮುಡಿಗೆ ಏರಿಸಿಕೊಂಡಿದೆ ಎಂದರು.
ಯೆನೆಪೊಯ ಆಸ್ಪತ್ರೆಯ ಮುಖ್ಯ ಆರ್ಥೋಪೆಡಿಕ್ ಹಾಗೂ ಮಂಡಿ ಬದಲಾವಣೆ ಸರ್ಜನ್ ಡಾ. ದೀಪಕ್ ರೈ ಮಾತನಾಡಿ, ಮೊದಲ ಸ್ಕೈವಾಕರ್ ಸರ್ಜರಿಯನ್ನು ಯೆನೆಪೊಯದಲ್ಲಿ ಈಗಾಗಲೇ ಯಶಸ್ವಿಯಾಗಿ ನೆರವೇರಿಸಿದ್ದು, ಸ್ಕೈವಾಕರ್ ರೊಬೊಟಿಕ್ ವ್ಯವಸ್ಥೆಯು ಮಂಡಿ ಬದಲಾವಣೆ ಶಸ್ತ್ರಚಿಕಿತ್ಸೆಯ ವೇಳೆ ಮಂಡಿಯ ಮರುನಿರ್ಮಾಣಕ್ಕೆ ಸಂಬಂಧಿಸಿದ ಹಾಗೂ ಲಿಗಮೆಂಟ್ ಬ್ಯಾಲೆನ್ಸಿಂಗ್‌ಗೆ ಸಂಬಂಧಿಸಿದ ರಿಯಲ್ ಟೈಮ್ ದತ್ತಾಂಶಗಳನ್ನು ನೀಡುತ್ತದೆ. ಎವೊಲ್ಯೂಷನ್ ಸಂಸ್ಥೆಯ ಮೀಡಿಯಲ್ ಪೈವೋಟ್ ವಿನ್ಯಾಸವು ಈ ವ್ಯವಸ್ಥೆಗೆ ಸಂಬಂಧಿಸಿದ ಪೇಟೆಂಟ್ ಹೊಂದಿದ್ದು, ಅದು ಮಂಡಿಯ ಸಹಜ ಚಲನೆಗೆ ಬೇಕಾದ ನಿಖರತೆಯನ್ನು ಒದಗಿಸುತ್ತದೆ. ಆರಂಭಿಕ ಕೆಲ ಮಂಡಿ ಬದಲಾವಣೆ ಸರ್ಜರಿಗಳಲ್ಲೇ ನಾವು ಉತ್ತಮ ಫಲಿತಾಂಶವನ್ನು ಕಾಣುತ್ತಿದ್ದೇವೆ ಎಂದು ಹೇಳಿದರು.
ಎವೊಲ್ಯೂಷನ್ ಮೀಡಿಯಲ್-ಪೈವೊಟ್ ನೀ ಸಿಸ್ಟಮ್ ಜೊತೆಗೆ ಕೆಲಸ ಮಾಡುವಂತೆ ವಿನ್ಯಾಸಗೊಂಡ ಜಗತ್ತಿನ ಏಕೈಕ-ರೊಬೊಟಿಕ್ ಸರ್ಜರಿ ತಂತಜ್ಞಾನ ಸ್ಕೈವಾಕರ್ ಆರ್ಥೋಪೆಡಿಕ್ ರೊಬೊಟಿಕ್ ಸಿಸ್ಟಮ್ ಆಗಿದೆ. ಇವೆರಡೂ ಸೇರಿಕೊಂಡು ಮಂಡಿ ಬದಲಾವಣೆ ಶಸ್ತ್ರಚಿಕಿತ್ಸೆಯಲ್ಲಿ ಸಬ್-ಮಿಲಿಮೀಟರ್ ಮಟ್ಟದ ನಿಖರತೆಯನ್ನು ನೀಡುತ್ತವೆ. ಈ ತಂತ್ರಜ್ಞಾನವು ರೋಗಿಯ ನಿರ್ದಿಷ್ಟ ಅನಾಟಮಿಯನ್ನು ಆಧರಿಸಿ, ಪ್ರತಿಯೊಬ್ಬರಿಗೂ ಅವರಿಗೆ ಅಗತ್ಯವಿರುವ ರೀತಿಯಲ್ಲಿ ಶಸ್ತ್ರಚಿಕಿತ್ಸೆಯ ಅಗತ್ಯವನ್ನು ಪೂರೈಸುತ್ತದೆ. ಅದರಿಂದಾಗಿ ಮಂಡಿ ಬದಲಾವಣೆಯ ಬಳಿಕ ರೋಗಿಗಳು ಬಹಳ ಬೇಗ ಚೇತರಿಸಿಕೊಂಡು, ಸುದೀರ್ಘ ಅವಧಿಯವರೆಗೆ ಯಾವುದೇ ನೋವಿಲ್ಲದೆ ಮೊದಲಿನಂತೆ ಕೆಲಸ ಕಾರ್ಯಗಳನ್ನು ಮಾಡಬಹುದಾಗಿದೆ. ದೀರ್ಘ ನಡಿಗೆ, ಮೆಟ್ಟಿಲು ಹತ್ತಿಳಿಯುವುದು, ಕುಳಿತು-ಎದ್ದು ಮಾಡುವುದು ಹೀಗೆ ಪ್ರತಿಯೊಂದು ಕೆಲಸವನ್ನೂ ಮೊದಲಿನಂತೆ ಮಾಡುವ ಪ್ಲೆಕ್ಸಿಬಿಲಿಟಿಯನ್ನು ಈ ಶಸ್ತ್ರಚಿಕಿತ್ಸೆ ನೀಡುತ್ತದೆ. ಭಾರತದಲ್ಲೇ ಮೊದಲ ಬಾರಿಗೆ ಯೆನೆಪೊಯ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಮಂಡಿನೋವಿನ ರೋಗಿಗಳು ಈ ಅನುಭವವನ್ನು ಪಡೆಯಲಿದ್ದಾರೆ ಎಂದು ತಿಳಿಸಿದರು.
Manglore
ಅಂಬಿಕಾ ಬಪ್ಪಳಿಗೆ ಅಂಬಿಕಾ ವಿದ್ಯಾಲಯ ಸಿಬಿಎಸ್‌ಇ ಸಂಸ್ಥೆಯಲ್ಲಿ ಹೆತ್ತವರ ಸಮಾವೇಶ| ಸಂಸ್ಥೆಯ ಅಭಿವೃದ್ಧಿಯಲ್ಲಿ ಪೋಷಕರ ಸಲಹೆಗಳು ಅತ್ಯಂತ ಮುಖ್ಯ: ಚಂದ್ರಕಾಂತ್ ಪೈ
 
														ಪುತ್ತೂರು : ಶಾಲಾ ಚಟುವಟಿಕೆಗೆ ಸಂಬಂಧಪಟ್ಟಂತೆ ಪೋಷಕರು ಮೌನ ವಹಿಸಬಾರದು. ತಮ್ಮ ಅನಿಸಿಕೆಗಳನ್ನು ಮುಕ್ತವಾಗಿ ವ್ಯಕ್ತಪಡಿಸಬೇಕು. ಶಿಕ್ಷಣ ಸಂಸ್ಥೆಯ ಅಭಿವೃದ್ಧಿಯಲ್ಲಿ ಪೋಷಕರ ಸಲಹೆಗಳು ಅತ್ಯಂತ ಪ್ರಮುಖ ಪಾತ್ರ ವಹಿಸುತ್ತವೆ ಎಂದು ಪುತ್ತೂರಿನ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಅಂಬಿಕಾ ವಿದ್ಯಾಲಯ ಸಿಬಿಎಸ್‌ಇ ಸಂಸ್ಥೆಯ 2025 26ನೇ ಸಾಲಿನ ರಕ್ಷಕ – ಶಿಕ್ಷಕ ಸಂಘದ ನೂತನ ಅಧ್ಯಕ್ಷ ಚಂದ್ರಕಾಂತ್ ಪೈ ಹೇಳಿದರು.
ಅವರು ವಿದ್ಯಾಲಯದಲ್ಲಿ ಶನಿವಾರ ನಡೆದ ರಕ್ಷಕ ಶಿಕ್ಷಕ ಸಂಘದ ಮಹಾಸಭೆಯಲ್ಲಿ ಅಧ್ಯಕ್ಷರಾಗಿ ಆಯ್ಕೆಯಾದ ನಂತರ ಅನಿಸಿಕೆ ವ್ಯಕ್ತಪಡಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಸುಬ್ರಹ್ಮಣ್ಯ ನಟ್ಟೋಜ ಇಂದಿನ ಪೀಳಿಗೆಗೆ ಪಠ್ಯ ಶಿಕ್ಷಣದ ಜೊತೆಗೆ ಧರ್ಮ ಶಿಕ್ಷಣ ಅತ್ಯಂತ ಮುಖ್ಯ. ಇದರ ಅರಿವು ಪೋಷಕರಿಗೆ ಇರಬೇಕು. ಮಕ್ಕಳು ಸ್ವಭಾವತಃ ಪೋಷಕರನ್ನೇ ಅನುಸರಿಸಿ ಬೆಳೆಯುತ್ತಾರೆ. ಹಾಗಾಗಿ ಪೋಷಕರಾದವರು ಮಕ್ಕಳಿಗೆ ಆದರ್ಶವಾಗಿರಬೇಕು ಎಂದು ತಿಳಿಸಿದರು.
ಪ್ರತಿಯೊಬ್ಬ ವಿದ್ಯಾರ್ಥಿಯೂ ದೇಶಕ್ಕೆ ಮಾದರಿಯಾಗಬೇಕು. ವಿನೂತನವಾಗಿ ಏನನ್ನಾದರೂ ತಯಾರಿಸುವ ಕೌಶಲ್ಯಾವೃದ್ಧಿ ಮಕ್ಕಳಲ್ಲಿ ಆಗಬೇಕು. ಶೈಕ್ಷಣಿಕ ವರ್ಷಗಳಲ್ಲಿ ಸಿಗುವ ರಜೆಯನ್ನು ಸಾಮರ್ಥ್ಯವೃದ್ಧಿಗಾಗಿ ಉಪಯೋಗಿಸಿಕೊಳ್ಳಬೇಕು. ಹೊಸ ಹೊಸದಾದ ವೈಜ್ಞಾನಿಕ ಮಾದರಿಗಳನ್ನು ತಯಾರಿಸಿ ಭವಿಷ್ಯದ ವಿಜ್ಞಾನಿಗಳಾಗಿ ದೇಶಕ್ಕೆ ಮಾದರಿಯಾಗಬೇಕು ಎಂದು ತಿಳಿಸಿದರು.
ಶಾಲಾ ಪ್ರಾಂಶುಪಾಲೆ ಮಾಲತಿ ಡಿ. ಶೈಕ್ಷಣಿಕ ವರ್ಷದಲ್ಲಾಗುವ ಚಟುವಟಿಕೆಗಳ ಕುರಿತು ಮಾಹಿತಿ ನೀಡಿದರು. ವೇದಿಕೆಯಲ್ಲಿ ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ರಾಜಶ್ರೀ ಎಸ್. ನಟ್ಟೋಜ ಉಪಸ್ಥಿತರಿದ್ದರು.
ವಿದ್ಯಾಲಯದ ಮಾತಾಜಿ ಪ್ರಿಯಾಶ್ರೀ ಕೆ. ಎಸ್. ಕಾರ್ಯಕ್ರಮ ನಿರ್ವಹಿಸಿದರು. ಕಾರ್ಯಕ್ರಮದಲ್ಲಿ ವಿದ್ಯಾರ್ಥಿ ಪೋಷಕರು, ಶಿಕ್ಷಕ ಶಿಕ್ಷಕೇತರ ವೃಂದದವರು ಹಾಜರಿದ್ದರು.
Manglore
ಪುತ್ತೂರು: ಸಂತ ಫಿಲೋಮಿನಾ (ಸ್ವಾಯತ್ತ) ಕಾಲೇಜಿನಲ್ಲಿ ಶಿಕ್ಷಕರ ದಿನಾಚರಣೆ
 
														ಪುತ್ತೂರು : ಸಂತ ಫಿಲೋಮಿನಾ (ಸ್ವಾಯತ್ತ) ಕಾಲೇಜಿನಲ್ಲಿ ಮಾಜಿ ರಾಷ್ಟ್ರಪತಿಯಾದ ಡಾ.ಸರ್ವಪಲ್ಲಿ ರಾಧಾಕೃಷ್ಣನ್ ರವರ ಜನ್ಮ ದಿನಾಚರಣೆಯ ಪ್ರಯುಕ್ತ ಆಚರಿಸಲ್ಪಡುವ ಶಿಕ್ಷಕರ ದಿನಾಚರಣೆಯನ್ನು ಸಂಭ್ರಮದಿಂದ ಆಚರಿಸಲಾಯಿತು. ಕಾಲೇಜಿನ ಪ್ರಾಚಾರ್ಯರಾದ ರೆ. ಡಾ. ಆಂತೋನಿ ಪ್ರಕಾಶ್ ಮಾಂತೇರೋ ಶಿಕ್ಷಕರನ್ನುದ್ದೇಶಿಸಿ ದೇಶದ ಅತ್ಯುತ್ತಮ ಮನಸ್ಸುಗಳು ಶಿಕ್ಷಕರಾಗಿರಬೇಕು ಎಂದು ಅಧ್ಯಕ್ಷೆಯ ನುಡಿಗಳನ್ನಾಡಿದರು.
ಉಪ ಪ್ರಾಂಶುಪಾಲರಾದ ಡಾ. ವಿಜಯ ಕುಮಾರ್ ಮೊಳೆಯಾರ್ ಶಿಕ್ಷಕರು ಜವಾಬ್ದಾರಿಯನ್ನರಿತು ಕಾರ್ಯನಿರ್ವಹಿಸಬೇಕು ಎಂದರು.

ಉಪನ್ಯಾಸಕ ತೇಜಸ್ವಿ ಭಟ್ ಇವರು ತಮ್ಮ ವೃತ್ತಿ ಜೀವನದ ಅನುಭವಗಳನ್ನು ಹಂಚಿಕೊಂಡರು. ಶ್ರೀಮತಿ ಭಾರತೀ ಎಸ್ ರೈ ಇವರು ಶಿಕ್ಷಕರ ಜವಾಬ್ದಾರಿ, ಸಮಾಜ ಮತ್ತು ವಿದ್ಯಾಸಂಸ್ಥೆಗಳ ನಿರೀಕ್ಷೆಗಳು, ಸವಾಲುಗಳನ್ನು ನಿಭಾಯಿಸಲು ಬೇಕಾದ ಆತ್ಮವಿಶ್ವಾಸದ ಬಗ್ಗೆ ತಮ್ಮ ಅನಿಸಿಕೆಯನ್ನು ವ್ಯಕ್ತಪಡಿಸಿದರು.
ವಿದ್ಯಾರ್ಥಿಯ ಪ್ರತಿ ಸೋಲು ಗೆಲುವು ಆತನ ವ್ಯಕ್ತಿತ್ವದ ಬಗೆಗಿನ ಅರಿವಾಗಿರಬೇಕು ಹಾಗು ಶಿಕ್ಷಕರು ಬೋಧಿಸುವ ಸ್ಥಿತಿಸ್ಥಾಪಕತ್ವವೇ ವಿದ್ಯಾರ್ಥಿಗಳಿಗೆ ಅತ್ಯಂತ ಒಳ್ಳೆಯ ಜೀವನ ಪಾಠ ಎಂದು ನುಡಿದರು.
ಕಾಲೇಜಿನ ವ್ಯವಹಾರ ಆಡಳಿತ ವಿಭಾಗದ ಮುಖ್ಯಸ್ಥರಾದ ಡಾ. ರಾಧಾಕೃಷ್ಣ ಗೌಡ ಸ್ವಾಗತಿಸಿದರು. ಸ್ನಾತಕೋತ್ತರ ವಾಣಿಜ್ಯ ವಿಭಾಗದ ಸಂಯೋಜಕರಾದ ಹರ್ಷಿತ್ ವಂದಿಸಿದರು.
ಶಿವಾನಿ ಮಲ್ಯ ಕಾರ್ಯಕ್ರಮವನ್ನು ನಿರೂಪಿಸಿದರು. ಉಪನ್ಯಾಸಕರಾದ ಸುರಕ್ಷಾ, ಶ್ರೀರಾಗ, ಶಿವಾನಿ ಮಲ್ಯ, ಪ್ರಶಾಂತ್ ರೈ ವಿವಿಧ ಮನೋರಂಜನಾ ಕಾರ್ಯಕ್ರಮವನ್ನು ನೀಡಿದರು.
Manglore
ಮಂಗಳೂರು: ಮತ್ತೆ ಎಸ್ಐಟಿ ವಿಚಾರಣೆಗೆ ಯೂಟ್ಯೂಬರ್ ಮನಾಫ್ ಹಾಜರ್- ನನಗೇನು ಹೆದರಿಕೆಯಿಲ್ಲ ನಾನೊಬ್ಬನೇ ಬಂದಿದ್ದೇನೆ
 
														ಮಂಗಳೂರು: ಧರ್ಮಸ್ಥಳ ನೂರಾರು ಮೃತದೇಹ ಹೂತಿಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳವಾರ ಮತ್ತೆ ವಿಚಾರಣೆಗೆ ಯೂಟ್ಯೂಬರ್ ಮನಾಫ್ ಮತ್ತೋರ್ವ ಯೂಟ್ಯೂಬರ್ ಅಭಿಷೇಕ್ ಅವರೊಂದಿಗೆ ಬೆಳ್ತಂಗಡಿ ಎಸ್ಐಟಿ ಕಚೇರಿಗೆ ವಿಚಾರಣೆಗೆ ಹಾಜರಾಗಿದ್ದಾರೆ.
ಎರಡನೇ ದಿನವಾದ ಇಂದು ಅವರು ವಿಚಾರಣೆಗೆ ಹಾಜರಾಗಿದ್ದಾರೆ. ವಿಚಾರಣೆಗೆ ಮುನ್ನ ಮಾತನಾಡಿದ ಅವರು, ನನಗೆ ಯಾವುದೇ ಹೆದರಿಕೆ ಇಲ್ಲ ನಾನು ಒಬ್ಬನೇ ಒಂದಿದ್ದೇನೆ. ಯಾವ ಪೊಲೀಸ್ ಸೆಕ್ಯೂರಿಟಿ ಇಲ್ಲ. ನಾನು ಧರ್ಮಸ್ಥಳ ದೇವಸ್ಥಾನದ ವಿರುದ್ಧ ಮಾತನಾಡಿಲ್ಲ. ಅದೇ ರೀತಿ ಆರೋಪಿ ಇವರೇ ಎಂದು ಎಲ್ಲೂ ಹೇಳಿಲ್ಲ.
ಕೇರಳದ ಸಂಸದ ಸಂತೋಷ್ ಕುಮಾರ್ ಭೇಟಿಗೆ ನಾನು ಹೋಗಿಲ್ಲ. ಸುಜಾತಾ ಭಟ್ ವಿಚಾರದಲ್ಲಿ ನನಗೆ ಬೇಸರವಾಗಿದೆ. ನಾನು ತಾಯಿಗೆ ನೀಡುವ ಗೌರವವನ್ನು ಅವರಿಗೆ ನೀಡಿದ್ದೇನೆ. ಅವರು ಹೇಳಿದ ಕಥೆ ನಿಜವೆಂದೇ ನಂಬಿದ್ದೇನೆ. ಎಸ್ಐಟಿ ತನಿಖೆ ನಡೆಸುತ್ತಿದೆ. ಈಗಲೇ ಎಲ್ಲಾಡ ವಿಚಾರ ಹೇಳಲು ಸಾಧ್ಯವಿಲ್ಲ ಎಂದು ಕೇರಳ ಯೂಟ್ಯೂಬರ್ ಮನಾಫ್ ಹೇಳಿದ್ದಾರೆ.
- 
																	   Mysore23 hours ago Mysore23 hours agoಅರ್ಧವೃತ್ತಾಕಾರದ ಬೆಂಜ್ ಜೋಡಣೆ ಸಮಾನ ಕಲಿಕೆಗೆ ಪೂರಕ: ಸಂಶೋಧಕ ಸಂಜಯ್ ಸಿಂಗಮಾರನಹಳ್ಳಿ 
- 
																	   Mysore9 hours ago Mysore9 hours agoರಾಜಕೀಯ ಪಕ್ಷಗಳು ಜನಕಲ್ಯಾಣದ ಪರ್ಯಾಯ ಶಕ್ತಿ: ಡಾ.ಬಿಜೆವಿ 
- 
																	   Mandya23 hours ago Mandya23 hours agoಮದ್ದೂರು ಘಟನೆಗೆ ಕಾಂಗ್ರೆಸ್ ಸರ್ಕಾರವೇ ಕಾರಣ: ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಆರೋಪ 
- 
																	   Kodagu6 hours ago Kodagu6 hours agoಚನ್ನಪಟ್ಟಣದಲ್ಲಿ ಅಪಘಾತ: ಕೊಡಗಿನ ದಂಪತಿ ದುರ್ಮರಣ 
- 
																	   Hassan4 hours ago Hassan4 hours agoಓಪನ್ ಕರಾಟೆ ಚಾಂಪಿಯನ್ ಶಿಪ್ನಲ್ಲಿ ಡೆಕ್ಕನ್ ವ್ಯಾಲಿ ಇಂಟರ್ ನ್ಯಾಷನಲ್ ಶಾಲೆಯ ವಿದ್ಯಾರ್ಥಿಗಳು ಚಾಂಪಿಯನ್ 
- 
																	   Chikmagalur21 hours ago Chikmagalur21 hours agoಶ್ರೀ ವಿದ್ಯಾ ಗಣಪತಿ ಯುವಕರ ಬಳಗದ ವತಿಯಿಂದ 9ನೇ ವರ್ಷದ ಅದ್ದೂರಿ ಗಣೇಶೋತ್ಸವ 
- 
																	   Kodagu1 hour ago Kodagu1 hour agoವಿರಾಜಪೇಟೆ ಸುತ್ತಮುತ್ತ ಸೆ.11 ರಂದು ವಿದ್ಯುತ್ ವ್ಯತ್ಯಯ 
- 
																	   Hassan22 hours ago Hassan22 hours agoಆಚಾರ್ಯ ವಾಣಿಜ್ಯ ಪಿ.ಯು. ಕಾಲೇಜಿನಲ್ಲಿ ಹಾಸನ ಜಿಲ್ಲಾ ಚಟುಕು ಸಾಹಿತ್ಯ ಪರಿಷತ್ತಿನಿಂದ ಜಿಲ್ಲಾಮಟ್ಟದ ಕವಿಗೋಷ್ಠಿ 

 
											 
											 
											 
											 
											