Connect with us

Mandya

ಶಿಕ್ಷಣಕ್ಕೆ ಹೆಚ್ಚು ಒತ್ತು ನೀಡುವುದು ಮುಖ್ಯವಾಗಲಿ: ಶಾಸಕ

Published

on

ಮಂಡ್ಯ: ಸರ್ಕಾರ ಉಚಿತ ಶಿಕ್ಷಣ ನೀಡುತ್ತಿದೆ ಎಲ್ಲಾ ಮಕ್ಕಳು ವಿದ್ಯಾವಂತರಾಗಬೇಕು ಎಂಬ ದೃಷ್ಟಿಯನ್ನು ಇಟ್ಟುಕೊಂಡು ಯಾವುದೇ ಸರ್ಕಾರ ಬಂದರೂ ಶಿಕ್ಷಣಕ್ಕೆ ಹೆಚ್ಚು ಹೊತ್ತು ನೀಡುತ್ತಾ ಬಂದಿದೆ ಎಂದು ಶಾಸಕ ಪಿ.ರವಿಕುಮಾರ್‌ಗೌಡ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದರು,

ಸರ್ಕಾರಿ ಪ್ರಾಥಮಿಕ ಶಾಲೆ ಚಿಕ್ಕ ಮಂಡ್ಯದಲ್ಲಿ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ದಕ್ಷಿಣ ವಲಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಚಿಕ್ಕ ಮಂಡ್ಯ ಇವರ ವತಿಯಿಂದ 2023 24ನೇ ಸಾಲಿನ ಶಾಲಾ ವಾರ್ಷಿಕೋತ್ಸವ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದರು,

ಮಕ್ಕಳು ಚೆನ್ನಾಗಿ ವಿದ್ಯಾಭ್ಯಾಸ ಮಾಡಿ ತಂದೆ ತಾಯಿಗೆ ಪೋಷಕರಿಗೆ ಒಳ್ಳೆಯ ಹೆಸರು ತರಬೇಕು ಸರ್ಕಾರಿ ಶಾಲೆಯಲ್ಲಿ ಓದಿ ಉನ್ನತ ಹುದ್ದೆ ಹೇರಿದ್ದಾರೆ ಸರ್ಕಾರ ಉಚಿತವಾಗಿ ಶಿಕ್ಷಣ ನೀಡುತ್ತಿರುವುದು ವಿದ್ಯಾವಂತರಾಗಿ ಇಡೀ ದೇಶಕ್ಕೆ ಉತ್ತಮ ಪ್ರಜೆಯಾಗಲಿ ಎಂಬ ಆಶಯವನ್ನು ಇಟ್ಟುಕೊಂಡು ಶಿಕ್ಷಣದಿಂದ ಹಿಡಿದು ನಿಮ್ಮ ಎಲ್ಲಾ ಖರ್ಚು ವೆಚ್ಚವನ್ನು ಸರ್ಕಾರ ಬರಿಸುತ್ತಿದೆ ಎಂದರು

ಕ್ಷೇತ್ರ ಶಿಕ್ಷಣಾಧಿಕಾರಿ ಮಹಾದೇವ ಮಾತನಾಡಿ ಸರ್ಕಾರ ಕೋಟಿಗಟ್ಟಲೆ ಹಣವನ್ನು ವಿದ್ಯಾಭ್ಯಾಸಕ್ಕೆ ಖರ್ಚು ಮಾಡುತ್ತಿದೆ 32ಕ್ಕೂ ಹೆಚ್ಚು ಪ್ರೋತ್ಸಾಹದಾಯಕ ಯೋಜನೆಗಳನ್ನು ಸರ್ಕಾರ ಉಚಿತವಾಗಿ ನೀಡುತ್ತಿದೆ ಬಿಸಿಯೂಟ ಕಬ್ಬಿನಾಂಶದ ಮಾತ್ರೆಯ ಹಾಲು ರಾಗಿ ಮಾಲ್ ಪಠ್ಯ ಪುಸ್ತಕ ಸಂಪೂರ್ಣ ವಿದ್ಯಾಭ್ಯಾಸ ಮಕ್ಕಳಿಗೆ ಬೈಸಿಕಲ್ ವಿತರಣೆ ವಿದ್ಯಾರ್ಥಿ ವೇತನ ಸೇರಿದಂತೆ 10 ಹಲವು ಯೋಜನೆಗಳನ್ನು ನೀಡುತ್ತಾ ಬಂದಿದೆ ಒಬ್ಬ ವಿದ್ಯಾರ್ಥಿಗೆ ಸರ್ಕಾರ ಮಾಡುವ ಖರ್ಚು ಎಂಟರಿಂದ ಹತ್ತು ಸಾವಿರದ ವರೆಗೂ ಖರ್ಚಾಗುತ್ತದೆ ಇದರ ಸದುಪಯೋಗವನ್ನು ಪೋಷಕರು ಸರಿಯಾದ ರೀತಿಯಲ್ಲಿ ಬಳಸಿಕೊಳ್ಳಬೇಕು ಎಂದು ಹೇಳಿದರು,

ವಿದ್ಯಾರ್ಥಿಗಳು ವೇದಿಕೆಯಲ್ಲಿ ಸಾಂಸ್ಕೃತಿಕ ನೃತ್ಯ ಪ್ರದರ್ಶನ ನೀಡಿದರು ಕ್ರೀಡೆಯಲ್ಲಿ ಭಾಗವಹಿಸಿ ವಿಜೇತರಾದ ವಿದ್ಯಾರ್ಥಿಗಳಿಗೆ ಗಣ್ಯರು ಬಹುಮಾನ ವಿತರಿಸಿದರು,
ಕಾರ್ಯಕ್ರಮದಲ್ಲಿ ಡಯಟ್ ಉಪನಿರ್ದೇಶಕ ಪುರುಷೋತ್ತಮ್ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಶಂಭುಗೌಡ ಸರ್ಕಾರಿ ನೌಕರರ ಸಂಘದ ಪ್ರಧಾನ ಕಾರ್ಯದರ್ಶಿ ಹಾಗೂ ಮುಖ್ಯ ಶಿಕ್ಷಕ ದೇವರಾಜು ಬಿ ಇ ಒ ಚಂದ್ರಕಲಾ ಅಕ್ಷರ ದಾಸೋಹದ ಗಿರೀಶ್ ಎಸ್ ಡಿ ಎಂ ಸಿ ಯ ಲಕ್ಷ್ಮಿ ಸೇರಿದಂತೆ ಹಲವು ಗಣ್ಯರು ಭಾಗವಹಿಸಿದ್ದರು

Continue Reading
Click to comment

Leave a Reply

Your email address will not be published. Required fields are marked *

Mandya

ಎಚ್ಡಿಕೆ ಮಂಡ್ಯದಲ್ಲಿ ಅಬ್ಬರದ ಪ್ರಚಾರ

Published

on

ಮಂಡ್ಯ : ಮಂಡ್ಯ ಲೋಕಸಭಾ ಕ್ಷೇತ್ರದ ಬಿಜೆಪಿ – ಜೆಡಿಎಸ್ ಪಕ್ಷದ ಅಭ್ಯರ್ಥಿ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಬಹಿರಂಗ ಪ್ರಚಾರದ ಕೊನೆಯ ದಿನ ಮಂಡ್ಯದಲ್ಲಿ ಭರ್ಜರಿ ರೋಡ್ ಶೋ ನಡೆಸುವ ಮೂಲಕ ಶಕ್ತಿಪ್ರದರ್ಶಿಸಿದರು.

ಬೆಂಗಳೂರು -ಮೈಸೂರು ಹೆದ್ದಾರಿಯಲ್ಲಿ ರೋಡ್ ಶೋ ನಡೆಸಿದ ಹೆಚ್‍.ಡಿ ಕುಮಾರಸ್ವಾಮಿಗೆ ಅಪಾರ ಜನಸ್ತೋಮ ಬೆಂಬಲ ಸೂಚಿಸಿತು.

ಮಂಡ್ಯ ವಿಶ್ವವಿದ್ಯಾನಿಲಯ ಆವರಣದಿಂದ ಪುತ್ರ ನಿಖಿಲ್ ಕುಮಾರಸ್ವಾಮಿ ಜೊತೆಗೂಡಿ ರೋಡ್ ಶೋ ಮೂಲಕ ಮತಯಾಚನೆಗೆ ಹೊರಟ ಮೈತ್ರಿ ಪಕ್ಷದ ಅಭ್ಯರ್ಥಿಗೆ ಬಿಜೆಪಿ ಹಾಗೂ ಜೆಡಿಎಸ್ ಕಾರ್ಯಕರ್ತರು ಜಯ ಘೋಷ ಮೊಳಗಿಸಿ ಹರ್ಷೋದ್ಗಾರದ ನಡುವೆ ಪುಷ್ಪಾರ್ಚನೆ ಮೂಲಕ ಹೆಜ್ಜೆ ಹಾಕಿದರು. ಅಪಾರ ಜನಸ್ತೋಮದ ನಡುವೆ ತೆರೆದ ವಾಹನದಲ್ಲಿ ಕೈ ಮುಗಿದು ನನ್ನ ಗೆಲುವಿಗೆ ಶ್ರಮಿಸುವಂತೆ ಮನವಿ ಮಾಡಿದರು.


ಜಯಚಾಮರಾಜೇಂದ್ರ ಒಡೆಯರ್ ವೃತ್ತದಲ್ಲಿ ಜನಸ್ತೋಮ ಉದ್ದೇಶಿಸಿ ಮಾತನಾಡಿದ ಮೈತ್ರಿ ಅಭ್ಯರ್ಥಿ ಎಚ್ ಡಿ ಕುಮಾರಸ್ವಾಮಿ ಆಳುವ ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.
ಬಹಿರಂಗ ಪ್ರಚಾರದ ಕೊನೆಯ ದಿನ ಜಾತ್ಯತೀತ ಜನತಾದಳ ಮತ್ತು ಬಿಜೆಪಿ ಪಕ್ಷದ ಕಾರ್ಯಕರ್ತರು ಹೊಸ ಹುಮ್ಮಸ್ಸಿನಿಂದ ಶಕ್ತಿಪ್ರದರ್ಶಿಸುವ ಮೂಲಕ ಮೈತ್ರಿ ಅಭ್ಯರ್ಥಿ ಗೆಲುವಿಗೆ ಅಣಿಯಾಗಿದ್ದಾರೆ.

Continue Reading

Mandya

ಕಾಂಗ್ರೆಸ್ ಪಕ್ಷದಿಂದ ಬೈಕ್ ರ್‍ಯಾಲಿ

Published

on

ಮಂಡ್ಯ : ಮಂಡ್ಯ ಲೋಕಸಭಾ ಚುನಾವಣೆಯ ಬಹಿರಂಗ ಪ್ರಚಾರದ ಕೊನೆಯ ದಿನ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಹಾಗೂ ಮುಖಂಎರು ಮಂಡ್ಯದಲ್ಲಿ ಬೈಕ್ ರ್‍ಯಾಲಿ ಮೂಲಕ ಮತಯಾಚಿಸಿದರು.

ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ವೆಂಕಟರಮಣೇ ಗೌಡ, ಜಿಲ್ಲಾ ಉಸ್ತುವಾರಿ ಸಚಿವ ಚೆಲುವರಾಯಸ್ವಾಮಿ, ಶಾಸಕ ರವಿಕುಮಾರ್ ಗಣಿಗ ಜೊತೆಗೂಡಿ ಕೊನೆಯ ದಿನದ ಪ್ರಚಾರ ಮಾಡಿದರು.

ನಗರದ ಕಾರಿಮನೆ ಗೇಟ್ ನಿಂದ ಬೈಕ್ ರ್‍ಯಾಲಿ ಮೂಲಕ ಪ್ರಚಾರ ಆರಂಭಿಸಿದ ಕಾಂಗ್ರೆಸ್ ನಾಯಕರು, ಬೆಂಗಳೂರು ಮೈಸೂರು ಹೆದ್ದಾರಿ ಮೂಲಕ ಜಯ ಚಾಮರಾಜೇಂದ್ರ ಒಡೆಯರ್ ವೃತ್ತ, ಆರ್ ಪಿ ರಸ್ತೆ, ಅಂಬೇಡ್ಕರ್ ರಸ್ತೆ ಯಲ್ಲಿ ಮತಯಾಚಿಸಿ ಹೊಸಹಳ್ಳಿಯಲ್ಲಿ ಪ್ರಚಾರ ಮಾಡಿದರು.

ಕಾಂಗ್ರೆಸ್ ಪಕ್ಷ ಜನರ ಪರವಾದ ಪಕ್ಷವಾಗಿದ್ದು, ಗ್ಯಾರಂಟಿ ಯೋಜನೆಗಳ ಮೂಲಕ ಜನತೆಗೆ ಸವಲತ್ತು ದೊರಕಿಸಿಕೊಟ್ಟಿದೆ, ಮುಂದಿನ ದಿನಗಳಲ್ಲಿ ಕೇಂದ್ರದಲ್ಲಿ ಅಧಿಕಾರಕ್ಕೆ ಬಂದರೆ ಮತ್ತಷ್ಟು ಜನಪರ ಯೋಜನೆಗಳನ್ನು ಜಾರಿಗೆ ತರಲು ಮುಂದಾಗಿದ್ದು ಆ ನಿಟ್ಟಿನಲ್ಲಿ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸುವಂತೆ ಮನವಿ ಮಾಡಿದರು.

Continue Reading

Mandya

ಕುಮಾರಸ್ವಾಮಿ ಪರ ಮತ ಪ್ರಚಾರ

Published

on

ಭಾರತೀನಗರ :ಕೆ.ಎಂ.ದೊಡ್ಡಿಯಲ್ಲಿನ 1 ಮತ್ತು 2ನೇ ಬ್ಲಾಕ್ನಲ್ಲಿ ಜಾ.ದಳ ಹಾಗೂ ಬಿಜೆಪಿ ಮುಖಂಡರು, ಕಾರ್ಯಕರ್ತರು ಎನ್.ಡಿಎ ಮೈತ್ರಿ ಅಭ್ಯರ್ಥಿ ಎಚ್.ಡಿ.ಕುಮಾರಸ್ವಾಮಿ ಪರವಾಗಿ ಮನೆ ಮನೆಗೆ ತೆರಳಿ ಮತಯಾಚನೆ ಮಾಡಿದರು.

ಪ್ರತೀ ಮನೆಯಲ್ಲಿ ಮತದಾರರಿಗೆ ಎಚ್.ಡಿ.ಕುಮಾರಸ್ವಾಮಿ ಅವರು ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಜಿಲ್ಲೆಯ ಅಭಿವೃದ್ಧಿಗೆ ಕೊಟ್ಟ ಕೊಡುಗೆಗಳ ಹಾಗೂ ಅಭಿವೃದಧಿ ಕಾರ್ಯಗಳ ಬಗ್ಗೆ ಮನವರಿಕೆ ಮಾಡಿಕೊಟ್ಟು, ರೈತರ ಉದ್ಧಾರಕ್ಕೋಸ್ಕರ ಸಾಲ ಮನ್ನಾ ಮಾಡಿದ್ದರು. ಹಾಗಾಗಿ ಕುಮಾರಸ್ವಾಮಿ ಅವರ ತೆನೆ ಹೊತ್ತ ಮಹಿಳೆ ಗುರುತಿಗೆ ಮತ ನೀಡುವ ಮೂಲಕ ಅತ್ಯಧಿಕ ಮತಗಳಿಂದ ಜಯಗಳಿಸುವಂತೆ ಮಾಡಬೇಕೆಂದು ಮನವಿ ಮಾಡಿದರು.
ಕೇಂದ್ರದಲ್ಲಿ ಅಧಿಕಾರ ನಡೆಸುತ್ತಿರುವ ಬಿಜೆಪಿ ಪಕ್ಷದ ಪ್ರದಾನಮಂತ್ರಿ ನರೇಂದ್ರ ಮೋದಿ ಅವರು ಜನತೆಯ ಹಿತಕಕಾಗಿ ಹಲವಾರು ಯೋಜನೆಗಳನ್ನು ಜಾರಿಗೆ ತಂದಿದ್ದಾರೆ, ರೈತರ ಶ್ರೇಯೋಬಿವೃದ್ಧಿ ಹಿನ್ನೆಯಲ್ಲಿಯೂ ಕೂಡ ಹಲವು ಯೋಜನೆಗಳನ್ನು ಜಾರಿ ಮಾಡಿದ್ದಾರೆ ಎಂದು ಮತದಾರರಿಗೆ ತಿಳಿಸಿ ಕುಮಾರಸ್ವಾಮಿ ಅವರನ್ನು ಗೆಲ್ಲಿಸುವ ಮೂಲಕ ಪ್ರದಾನಿ ನರೇಂದ್ರ ಮೋದಿ ಅವರ ಕೈ ಬಲಪಡಿಸಬೇಕೆಂದು ಮನವಿ ಮಾಡಿದರು.

ಇದೇ ಸಂದರ್ಭದಲ್ಲಿ ಮುಖಂಡರುಗಳಾದ ಮಾಜಿ ಗ್ರಾಮ ಪಂಚಾಯಿತಿ ಅಧ್ಯಕ್ಷ ವೆಂಕಟೇಶ್, ಗ್ರಾಮ ಪಂಚಾಯತಿ ಸದಸ್ಯರಾದ ವೆಂಕಟೇಶ್, ಮುಖಂಡರಾದ ಮೊಬೈ ವೆಂಕಟೇಶ್, ಕುಮಾರ್ , ರವಿ, ವಿಶ್ವ ಶ್ರೀನಿವಾಸ್, ಪುನೀತ್, ವಿಕಾಸ್ (ಬೋರ), ಪ್ರಶಾಂತ್, ಲಕ್ಷ್ಮಮ್ಮ, ರಂಗಮ್ಮ ಮುಂತಾದವರುಗಳು ಭಾಗವಹಿಸಿದ್ದರು

Continue Reading

Trending

error: Content is protected !!