State
ಮಳೆಹಾನಿ: ಚಿಕ್ಕಮಗಳೂರು ಜಿಲ್ಲೆಗೆ ವಿಶೇಷ ಪ್ಯಾಕೇಜ್‌ಗಾಗಿ ಮುಖ್ಯಮಂತ್ರಿಯವರಿಗೆ ಸಚಿವ ಕೆ.ಜೆ.ಜಾರ್ಜ್ ಮನವಿ
ಬೆಂಗಳೂರು, ಆ. 3, 2024: ಚಿಕ್ಕಮಗಳೂರು ಜಿಲ್ಲೆಯಲ್ಲಿ ಭಾರೀ ಮಳೆ ಮತ್ತು ಗಾಳಿಯಿಂದ ಆಗಿರುವ ಹಾನಿಗೆ ರಾಷ್ಟ್ರೀಯ ವಿಪತ್ತು ಪರಿಹಾರ ನಿಧಿ (ಎನ್‌ಡಿಆರ್‌ಎಫ್) ಮಾನಂದಡಕ್ಕಿಂತ ಹೆಚ್ಚುವರಿಯಾಗಿ ವಿಶೇಷ ಪರಿಹಾರ ಪ್ಯಾಕೇಜ್ ನೀಡುವಂತೆ ಚಿಕ್ಕಮಗಳೂರು ಜಿಲ್ಲಾ ಉಸ್ತುವಾರಿಯನ್ನೂ ಹೊಂದಿರುವ ಇಂಧನ ಸಚಿವ ಕೆ.ಜೆ.ಜಾರ್ಜ್ ಮುಖ್ಯಮಂತ್ರಿಯವರ್ಇಗೆ ಮನವಿ ಮಾಡಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಕಂದಾಯ ಸಚಿವ ಕೃಷ್ಣಬೈರೇಗೌಡ ಅವರನ್ನು ಭೇಟಿಯಾಗಿ ಪರಿಹಾರ ಕುರಿತು ಸಮಾಲೋಚನೆ ನಡೆಸಿದ ಸಚಿವ ಜಾರ್ಜ್ ಅವರು, ಚಿಕ್ಕಮಗಳೂರು ಜಿಲ್ಲೆಯಲ್ಲಿ ಮಳೆಯಿಂದ ಅಪಾರ ಹಾನಿಯಾಗಿದೆ. ಎನ್‌ಡಿಆರ್‌ಎಫ್ ಮಾನದಂಡದ ಅನ್ವಯ ನೆರವು ನಿಗದಿ ಮಾಡಿದರೆ ಜಿಲ್ಲೆಯಲ್ಲಿ ಪರಿಹಾರ ಕಾರ್ಯವನ್ನು ಸಮರ್ಪಕವಾಗಿ ಕೈಗೊಳ್ಳಲು ಸಾಧ್ಯವಿಲ್ಲ. ಹೀಗಾಗಿ ವಿಶೇಷ ಪ್ರಕರಣ ಎಂದು ಪರಿಗಣಿಸಿ ಜಿಲ್ಲೆಗೆ ಪ್ರಕೃತಿ ವಿಕೋಪ ಪರಿಹಾರಕ್ಕಾಗಿ ಹೆಚ್ಚುವರಿ ಅನುದಾನ ನೀಡಬೇಕು ಎಂದು ಮನವಿ ಮಾಡಿದ್ದಾರೆ.
“ಚಿಕ್ಕಮಗಳೂರು ಜಿಲ್ಲೆಯ ವಿವಿಧ ತಾಲೂಕುಗಳಲ್ಲಿ ಮಳೆಯಿಂದ ಹಾನಿಗೊಳಗಾದ ಪ್ರದೇಶಗಳಿಗೆ ಇತ್ತೀಚೆಗೆ ಭೇಟಿ ನೀಡಿ, ಆಗಿರುವ ತೊಂದರೆಗಳ ಬಗ್ಗೆ ಪರಿಶೀಲಿಸಿದ್ದೇನೆ. ಸಾಕಷ್ಟು ಮನೆಗಳು ಕುಸಿದಿದ್ದು, ರಸ್ತೆಗಳು ಕೂಡ ಹಾನಿಗೊಳಗಾಗಿವೆ. ಇದರಿಂದ ಸಂಪರ್ಕ ವ್ಯವಸ್ಥೆಯೂ ಅಸ್ತವ್ಯಸ್ತಗೊಂಡು ತಾತ್ಕಾಲಿಕವಾಗಿ ಪರ್ಯಾಯ ಸಂಪರ್ಕ ವ್ಯವಸ್ಥೆ ಕಲ್ಪಿಸಲಾಗಿದೆ. ಅನೇಕ ಕಡೆ ಭೂ ಕುಸಿತವುಂಟಾಗಿದ. ಇನ್ನು ಕೆಲವೆಡೆ ಭೂ ಕುಸಿತದ ಆತಂಕ ಕಾಣಿಸಿಕೊಂಡಿದೆ. ಮರಗಳು ಬಿದ್ದು ವಿದ್ಯುತ್ ಕಂಬ, ತಂತಿ, ಪರಿವರ್ತಕಗಳು ಹಾಳಾಗಿವೆ. ಇವೆಲ್ಲವನ್ನು ಸರಿಪಡಿಸಲು ಹಚ್ಚುವರಿ ಅನುದಾನದ ಅಗತ್ಯವಿದೆ ಎಂಬುದನ್ನು ಮುಖ್ಯಮಂತ್ರಿಯವರಿಗೆ ಮನವರಿಕೆ ಮಾಡಿಕೊಡಲಾಗಿದೆ,” ಎಂದು ಸಚಿವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಮನೆಗಳು ಸಂಪೂರ್ಣ ಹಾನಿಗೊಳಗಾದವರಿಗೆ ತಾತ್ಕಾಲಿಕ ಪರಿಹಾರವಾಗಿ 1.20 ಲಕ್ಷ ರೂ. ಪರಿಹಾರವನ್ನು ಈಗಾಗಲೇ ನೀಡಲಾಗಿದೆ. ಉಳಿದಂತೆ ರಾಜೀವ್ ಗಾಂಧಿ ವಸತಿ ಯೋಜನೆಯಡಿ 3.80 ಲಕ್ಷ ರೂ. ನೀಡಿ ಮನೆ ನಿರ್ಮಿಸಿಕೊಡಲು ಅಧಿಕಾರಿಗಳಿಗೆ ಸೂಚಿಸಲಾಗಿದೆ. ಅದೇ ರೀತಿ ಹಾನಿಗೊಳಗಾಗಿರುವ ಮತ್ತು ಕುಸಿದಿರುವ ರಸ್ತೆಗಳನ್ನು ತಾತ್ಕಾಲಿಕವಾಗಿ ದುರಸ್ತಿ ಮಾಡಿ ವಾಹನ ಸಂಚಾರಕ್ಕೆ ಅನುವು ಮಾಡಿಕೊಡಬೇಕು. ಶಾಶ್ವತ ಪರಿಹಾರಕ್ಕೆ ಕ್ರಿಯಾಯೋಜನೆ ಸಿದ್ಧಪಡಿಸಿ ಸಲ್ಲಿಸಬೇಕು ಎಂದು ಅಧಿಕಾರಿಗಳಿಗೆ ತಿಳಿಸಲಾಗಿದೆ. ಭೂಕುಸಿತಕ್ಕೂ ಶಾಶ್ವತ ಪರಿಹಾರ ಕಲ್ಪಿಸಬೇಕಾಗಿದೆ. ಎನ್‌ಡಿಆರ್‌ಎಫ್ ಅನ್ವಯ ಅನುದಾನ ನೀಡಿದರೆ ಈ ಎಲ್ಲಾ ಕೆಲಸಗಳನ್ನು ಕೈಗೆತ್ತಿಕೊಳ್ಳಲು ಸಾಧ್ಯವಿಲ್ಲ, ಎಂದು ಸಚಿವರು ಮುಖ್ಯಮಂತ್ರಿಯವರಿಗೆ ತಿಳಿಸಿದ್ದಾರೆ.
ಚಿಕ್ಕಮಗಳೂರು ಜಿಲ್ಲೆಯಲ್ಲಿ ಆಗಿರುವ ಮಳೆಹಾನಿ ಬಗ್ಗೆ ಸಮಗ್ರ ವರದಿ ಸಿದ್ಧಪಡಿಸುವಂತೆ ಅಧಿಕಾರಿಗಳಿಗೆ ತಿಳಿಸಲಾಗಿದ್ದು, ಸದ್ಯದಲ್ಲೇ ವರದಿಯನ್ನು ಸಲ್ಲಿಸಲಾಗುವುದು. ಈ ವರದಿ ಆಧರಿಸಿ ಜಿಲ್ಲೆಗೆ ಹೆಚ್ಚಿನ ನೆರವನ್ನು ರಾಜ್ಯ ಸರ್ಕಾರದಿಂದ ಒದಗಿಸಬೇಕು. ಆ ಮೂಲಕ ಜಿಲ್ಲೆಯ ಜನರ ನೆರವಿಗೆ ಧಾವಿಸಬೇಕು ಎಂದು ಸಚಿವರು ಕೋರಿದ್ದು, ಇದಕ್ಕೆ ಮುಖ್ಯಮಂತ್ರಿಯವರಿಂದ ಸಕಾರಾತ್ಮಕ ಸ್ಪಂದನೆ ಸಿಕ್ಕಿದೆ.
ಕೋಟ್-
ಚಿಕ್ಕಮಗಳೂರು ಜಿಲ್ಲೆಯಲ್ಲಿ ಮಳೆಯಿಂದ ಭಾರೀ ಹಾನಿಯಾಗಿದ್ದು, ಎನ್‌ಡಿಆರ್‌ಎಫ್, ಎಸ್‌ಡಿಆರ್‌ಎಫ್ ಅನುದಾನ ಹೊರತುಪಡಿಸಿ ಹೆಚ್ಚುವರಿ ಆರ್ಥಿಕ ನೆರವು ನೀಡುವಂತೆ ಮುಖ್ಯಮಂತ್ರಿ ಮತ್ತು ಕಂದಾಯ ಸಚಿವರಿಗೆ ಮನವಿ ಮಾಡಿ ವಾಸ್ತವ ಸ್ಥಿತಿಯನ್ನು ವಿವರಿಸಲಾಗಿದೆ. ಅವರಿಂದ ಪೂರಕ ಪ್ರತಿಕ್ರಿಯೆ ವ್ಯಕ್ತವಾಗಿದೆ.
* ಕೆ.ಜೆ.ಜಾರ್ಜ್, ಚಿಕ್ಕಮಗಳೂರು ಜಿಲ್ಲಾ ಉಸ್ತುವಾರಿ ಹಾಗೂ ಇಂಧನ ಸಚಿವರು
State
High Court: ಈ ರೀತಿ ಸಾಲ ಮಾಡಿದ್ರೆ ಆಸ್ತಿ ಜಪ್ತಿ ಮಾಡಲು ಅವಕಾಶವಿಲ್ಲ – ಹೈಕೋರ್ಟ್ ನೀಡಿದ ಮಹತ್ವದ ಆದೇಶ !
High Court: ಕರ್ನಾಟಕ ಪರಿಶಿಷ್ಟ ಜಾತಿ ಮತ್ತು ಪಂಗಡಗಳ (ಕೆಲವು ಜಮೀನುಗಳ ಹಸ್ತಾಂತರ ನಿಷೇಧ) ಕಾಯ್ದೆ (ಪಿಟಿಸಿಎಲ್)ಯಡಿ ಮಂಜೂರು ಆದ ಜಮೀನನ್ನು ಜಿಪಿಎ ಮಾಡಿಕೊಂಡ ಗೃಹ ನಿರ್ಮಾಣ ಸಂಘವು ಬ್ಯಾಂಕ್‌ವೊಂದರಿಂದ ಪಡೆದ ಸಾಲಕ್ಕೆ ಆಸ್ತಿ ಜಪ್ತಿ ಮಾಡಲು ಹೊರಟಿತ್ತು. ಆದರೆ ಕಾನೂನಿನಲ್ಲಿ ಅದಕ್ಕೆ ಅವಕಾಶವಿಲ್ಲ ಎಂದು ಹೈಕೋರ್ಟ್ ಮಹತ್ವದ ಆದೇಶ ಹೊರಡಿಸಿದೆ.
ಈ ಕಾಯ್ದೆಯಡಿ ಮಂಜೂರಾದ ಜಮೀನನ್ನು ಭೂ ಮಾಲೀಕರಿಗೆ ಮರು ಸ್ಥಾಪಿಸಿ ಆದೇಶಿಸಿದ್ದ ಜಿಲ್ಲಾಧಿಕಾರಿ ಕ್ರಮ ಪ್ರಶ್ನಿಸಿ ಜಮೀನು ಅಡಮಾನ ಇಟ್ಟು ಸಾಲ ಕೊಟ್ಟಿದ್ದ ಬೆಂಗಳೂರು ಗ್ರಾಮಾಂತರ ಮತ್ತು ರಾಮನಗರ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ನ್ಯಾಯಮೂರ್ತಿ ಸೂರಜ್ ಗೋವಿಂದರಾಜು ಅವರ ಏಕಸದಸ್ಯ ಪೀಠ ಈ ಆದೇಶ ನೀಡಿದೆ. ವಾದ-ಪ್ರತಿವಾದ ಆಲಿಸಿದ ನ್ಯಾಯಪೀಠ, ಜಮೀನು ಮಾಲೀಕರಿಗೆ ಬ್ಯಾಂಕ್‌ನಿಂದ ಪಡೆದ ಸಾಲದಿಂದ ಯಾವುದೇ ಲಾಭವಿಲ್ಲ. ಅಲ್ಲದೆ, ಬ್ಯಾಂಕ್ ಮತ್ತು ಜಮೀನು ಮಾಲೀಕರ ನಡುವೆ ಒಪ್ಪಂದವೂ ಆಗಿಲ್ಲ. ಆದರೆ, ಜಮೀನಿನ ಹಕ್ಕು ಹೊಂದಿರದ ಗೃಹ ನಿರ್ಮಾಣ ಸೊಸೈಟಿಯು ಆಸ್ತಿಯನ್ನು ಮತ್ತೊಂದು ಬ್ಯಾಂಕಿಗೆ ಅಡವಿಟ್ಟು ಸಾಲ ಪಡೆದಿದೆ. ಹೀಗಾಗಿ ಜಮೀನನ್ನು ಹರಾಜು ನಡೆಸುವುದಕ್ಕೆ ಕಾನೂನಿನಲ್ಲಿ ಅವಕಾಶವಿರುವುದಿಲ್ಲ ಎಂದು ತಿಳಿಸಿದೆ.
ಪ್ರಕರಣದಲ್ಲಿ ಭೂ ಮಾಲೀಕರಿಗೂ ಸಾಲ ನೀಡಿದ ಬ್ಯಾಂಕ್‌ಗೂ ಯಾವುದೇ ಸಂಬಂಧವಿಲ್ಲ. ಕಾಯ್ದೆಯಡಿ ಜಮೀನು ಪರಭಾರೆ ಮಾಡುವುದು ಅಥವಾ ಹಸ್ತಾಂತರಿಸುವುದು ನಿಷೇಧವಿದೆ. ಆದರೂ, ಅಂತಹ ಜಮೀನಿನ ಮೇಲೆ ಬ್ಯಾಂಕ್ ಸೇರಿ ಇತರ ಸಂಸ್ಥೆಗಳಿಂದ ಸಾಲ ಪಡೆದುಕೊಳ್ಳುವುದನ್ನು ನಿಷೇಧಿಸಲಾಗಿಲ್ಲ. ಅಂತಹ ಸಾಲ ಮರು ಪಾವತಿ ಮಾಡದಿದ್ದಲ್ಲಿ ಆ ರೀತಿಯ ಆದೇಶಗಳ ಮೂಲಕ ಜಮೀನಿನ ಮಾರಾಟ ಅಥವಾ ವರ್ಗಾವಣೆ ಮಾಡುವುದಕ್ಕೆ ಕಾಯ್ದೆಯಡಿ ಅವಕಾಶ ಇಲ್ಲ. ಈ ಪ್ರಕರಣದಲ್ಲಿ ಜಮೀನು ಮಾಲೀಕರು ಗೃಹನಿರ್ಮಾಣ ಸೊಸೈಟಿಯಿಂದ ಮಾರಾಟದ ಒಪ್ಪಂದವನ್ನು ಮಾತ್ರ ಮಾಡಿಕೊಂಡಿದ್ದಾರೆ. ಆದರೆ, ಸೊಸೈಟಿ ಬ್ಯಾಂಕ್‌ನಿಂದ ಸಾಲ ಪಡೆಯುವ ಸಂದರ್ಭದಲ್ಲಿ ಆಸ್ತಿಯ ಹೆಸರಿನಲ್ಲಿ ಅಡ ಇಡಲಾಗಿದೆ. ಹೀಗಾಗಿ ಜಮೀನು ಮಾಲೀಕರು ಬ್ಯಾಂಕ್ ಮತ್ತು ಸೊಸೈಟಿ ನಡುವಿನ ಒಪ್ಪಂದಕ್ಕೆ ಜವಾಬ್ದಾರರಾಗುವುದಿಲ್ಲ ಎಂದು ಪೀಠ ತಿಳಿಸಿದೆ. ಜಮೀನು ಮಾಲೀಕರು ಬ್ಯಾಂಕಿನಿಂದ ಯಾವುದೇ ಸಾಲ ಪಡೆಯದ ಹಿನ್ನೆಲೆಯಲ್ಲಿ ಪಿಟಿಸಿಎಲ್ ಕಾಯ್ದೆಯ (ಸೆಕ್ಷನ್ 5 ಮತ್ತು 5ಎ) ಅಡಿಯಲ್ಲಿ ಉಪವಿಭಾಗಾಧಿಕಾರಿಗಳು ಮತ್ತು ಜಿಲ್ಲಾಧಿಕಾರಿಗಳು ನೀಡಿರುವ ತೀರ್ಪಿನಲ್ಲಿ ಯಾವುದೇ ಕಾನೂನು ಉಲ್ಲಂಘನೆಯಾಗಿಲ್ಲ ಎಂದು ನ್ಯಾಯಪೀಠ ಆದೇಶಿಸಿದೆ.
State
ರಾಜ್ಯಪಾಲರು ಕೇಂದ್ರ ಸರ್ಕಾರದ ಕೈಗೊಂಬೆಯಂತೆ ಕೆಲಸ ಮಾಡುತ್ತಿದ್ದಾರೆ: ಮುಖ್ಯಮಂತ್ರಿ ಸಿದ್ದರಾಮಯ್ಯ
ರಾಜಭವನದ ದುರ್ಬಳಕೆ ಮಾಡಿ ಚುನಾಯಿತ ಸರ್ಕಾರವನ್ನು ಅಸ್ಥಿರಗೊಳಿಸಲು ಕೇಂದ್ರ ಸರ್ಕಾರದ ಪ್ರಯತ್ನ
ಮುಖ್ಯಮಂತ್ರಿಗಳಿಗೆ ರಾಜ್ಯಪಾಲರ ನೋಟೀಸು: ಕಾನೂನುಬಾಹಿರ, ಸಂವಿಧಾನಕ್ಕೆ ವಿರುದ್ಧವಾಗಿದೆ
ರಾಜ್ಯಪಾಲರು ಕೇಂದ್ರ ಸರ್ಕಾರದ ಕೈಗೊಂಬೆಯಂತೆ ಕೆಲಸ ಮಾಡುತ್ತಿದ್ದಾರೆ: ಮುಖ್ಯಮಂತ್ರಿ ಸಿದ್ದರಾಮಯ್ಯ
ಮೈಸೂರು, ಆಗಸ್ಟ್ 02: ರಾಜ್ಯಪಾಲರು ಸಂಪೂರ್ಣವಾಗಿ ಕೇಂದ್ರ ಸರ್ಕಾರದ ಹಾಗೂ ಬಿಜೆಪಿ, ಜೆಡಿಎಸ್ ಪಕ್ಷದ ಕೈಗೊಂಬೆಯಾಗಿ ಕೆಲಸ ಮಾಡುತ್ತಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಅವರು ಇಂದು ಮೈಸೂರಿನಲ್ಲಿ ಕೊಡಗು ಜಿಲ್ಲೆಗೆ ತೆರಳುವ ಮುನ್ನ ಮೈಸೂರು ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.
ಶೋಕಾಸ್ ನೋಟೀಸು ಕೊಟ್ಟಿರುವುದು ಕಾನೂನುಬಾಹಿರವಾಗಿದೆ , ಸಂವಿಧಾನಕ್ಕೆ ವಿರುದ್ಧವಾಗಿದೆ. ಕೇಂದ್ರ ಸರ್ಕಾರ ರಾಜಭವನವನ್ನು ದುರ್ಬಳಕೆ ಮಾಡಿಕೊಳ್ಳುತ್ತಿದೆ. ಚುನಾಯಿತ ಸರ್ಕಾರವನ್ನು ಅಸ್ಥಿರಗೊಳಿಸಲು ಪ್ರಯತ್ನಿಸುತ್ತಿದೆ ಎಂದು ಮುಖ್ಯಮಂತ್ರಿಗಳು ತಿಳಿಸಿದರು.
ನೋಟೀಸನ್ನು ಹಿಂಪಡೆಯಬೇಕೆಂದು ರಾಜ್ಯಪಾಲರಿಗೆ ಸಲಹೆ ನೀಡಲು ನಿರ್ಧಾರ
ಪ್ರಾಸಿಕ್ಯೂಶನ್ ಗೆ ಅನುಮತಿ ಕೊಟ್ಟಿರುವ ಸಂದರ್ಭದಲ್ಲಿ ಏನು ಬೆಳವಣಿಗಳಾಗಿವೆ ಎಂಬ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿ ನಿನ್ನೆ
ನಡೆದ ಸಚಿವ ಸಂಪುಟ ಸಭೆಗೆ ಕೆಟ್ಟ ಸಾಂಪ್ರದಾಯವಾಗುತ್ತದೆ ಎಂದು ಸಭೆಗೆ ಹೋಗದೇ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರನ್ನು ಸಚಿವ ಸಂಪುಟ ಸಭೆ ನಡೆಸಲು ನೇಮಿಸಲಾಗಿತ್ತು. ಶೋಕಾಸ್ ನೋಟಿಸ್ ಬಗ್ಗೆ ಸುದೀರ್ಘ ಚರ್ಚೆ ಮಾಡಿ, ನೋಟೀಸು ನೀಡಿರುವುದು ಕಾನೂನು ಬಾಹಿರವಾಗಿದ್ದು, ನೋಟೀಸನ್ನು ಅದನ್ನು ಹಿಂಪಡೆಯಬೇಕೆಂದು ನಿರ್ಧರಿಸಲಾಗಿದೆ ಎಂದರು.
ಯಾವುದೇ ಅಪರಾಧ ಮಾಡಿಲ್ಲ
ಕೆ. ಜೆ.ಅಬ್ರಹಾಂ ಒಬ್ಬ ಬ್ಲಾಕ್ ಮೈಲರ್. ಆತನ ದೂರಿನ ಮೇಲೆ ಕ್ರಮ ಕೈಗೊಂಡಿರುವುದು ಕಾನೂನು ಬಾಹಿರವಾದ ವಿಚಾರ. ಆತ ಈ ರೀತಿ ಅನೇಕ ಜನರ ಮೇಲೆ ದೂರುಗಳನ್ನು ನೀಡಿದ್ದಾರೆ. ನಾನು ಯಾವುದೇ ಅಪರಾಧವನ್ನು ಮಾಡಿಲ್ಲ. ದಿನಾಂಕ : 26-7.2024 ರಂದು 11.30 ಗೆ ದೂರು ನೀಡಿದ್ದು, ಅಂದೇ ರಾಜ್ಯಪಾಲರು ಶೋಕಾಸ್ ನೋಟಿಸ್ ಕೊಟ್ಟಿದ್ದಾರೆ. ಒಂದೇ ದಿನದಲ್ಲಿ ಕಾನೂನು ವಿಷಯವನ್ನು ಒಳಗೊಂಡ ವಿಚಾರವನ್ನು, 136 ಜನ ಶಾಸಕರನ್ನು ಜನ ಆಶೀರ್ವಾದ ಮಾಡಿ ಕಳಿಸಿರುವ ಚುನಾಯಿತ ಸರ್ಕಾರದ ಮುಖ್ಯಮಂತ್ರಿಗೆ ನೋಟೀಸು ಕೊಡುವಾಗ ಎಲ್ಲಾ ಕಾನೂನನ್ನು ಕೂಲಂಕುಷವಾಗಿ ಪರಿಶೀಲಿಸಬೇಕು. ಏನು ನೋಡದೇ ಆತುರವಾಗಿ ಕೆಲಸ ಮಾಡಿದ್ದಾರೆ. ಅಂದೇ ನೋಟೀಸು ನೀಡಿ, ಮುಖ್ಯಮಂತ್ರಿಗಳ ಅಪರ ಮುಖ್ಯ ಕಾರ್ಯದರ್ಶಿ ಎಲ್.ಕೆ.ಅತೀಕ್ ಅವರಿಗೆ ವಿಶೇಷ ಕರ್ತವ್ಯಾಧಿಕಾರಿ ಪ್ರಭು ಶಂಕರ್ ಎಂಬುವರು ಕರೆ ಮಾಡಿ ಶೋಕಾಸ್ ನೋಟಿಸ್ ಸಿದ್ಧವಿದೆ ತೆಗೆದುಕೊಳ್ಳಬೇಕು ಎಂದಿದ್ದಾರೆ. ರಾತ್ರಿಯಾಗಿರುವುದರಿಂದ ಅದನ್ನು ಪಡೆಯಲಾಗಲಿಲ್ಲ. ಮಾರನೇ ದಿನ 2.00 ಗಂಟೆಗೆ ನೋಟೀಸನ್ನು ಆತುರವಾಗಿ ಕೊಟ್ಟಿದ್ದಾರೆ ಎಂದು ಮುಖ್ಯಮಂತ್ರಿಗಳು ವಿವರಿಸಿದರು.
ಕಳೆದ ಸರ್ಕಾರದ ಸಚಿವರ ಮೇಲಿನ ದೂರಿನ ಬಗ್ಗೆ ಕ್ರಮ ಏಕಿಲ್ಲ
ಶಶಿಕಲಾ ಜೊಲ್ಲೆ , ಮುರುಗೇಶ್ ನಿರಾಣಿ , ಜನಾರ್ಧನ್ ರೆಡ್ಡಿಯವರುಗಳ ಮೇಲೆ ವರ್ಷಗಟ್ಟಲೇ ದೂರಿದೆ. ಅವರ ಮೇಲೆ ಏಕೆ ಕ್ರಮ ತೆಗೆದುಕೊಂಡಿಲ್ಲ ಎಂದು ಮುಖ್ಯಮಂತ್ರಿಗಳು ಪ್ರಶ್ನಿಸಿದರು. ಏನೂ ಇಲ್ಲದೆ ಅನಗತ್ಯವಾಗಿ ಈ ರೀತಿ ಮಾಡುತ್ತಿದ್ದಾರೆ ಎಂದರು .
ಯಾವುದನ್ನೂ ಪರಿಗಣಿಸದೆ ಆತುರವಾಗಿ ನೋಟೀಸು
ರಾಜ್ಯಪಾಲರಿಗೆ ಸಲಹೆ ನೀಡಬೇಕಿರುವುದು ನಮ್ಮ ಮಂತ್ರಿ ಮಂಡಲದವರು. ನಾವು ಸಲಹೆ ನೀಡಿಲ್ಲ. ಮುಖ ಕಾರ್ಯದರ್ಶಿಗಳು ವಿವರವಾದ ಪತ್ರವನ್ನು ಜುಲೈ 26 ರಂದು ಸಂಜೆ 6.30 ಗಂಟೆಗೆ ರಾಜ್ಯಪಾಲರಿಗೆ ತಲುಪಿಸಿದ್ದಾರೆ. ಅದನ್ನೂ ಅವರು ನೋಡಿಲ್ಲ . ಮೂಡಾ ಪ್ರಕರಣದ ಬಗ್ಗೆ ನ್ಯಾಯಾಂಗ ಆಯೋಗವನ್ನು ಜುಲೈ 14 ರಂದು ಸರ್ಕಾರ ರಚಿಸಿದೆ. ಆಯೋಗದ ವರದಿಯನ್ನು ನಿರೀಕ್ಷಿಸಲಾಗಿದೆ. ತನಿಖೆ ನಡೆಸಿ ತಪ್ಪುಗಳಾಗಿದ್ದರೆ ವರದಿ ಸಲ್ಲಿಸುತ್ತಾರೆ. ಅದನ್ನೂ ಪರಿಗಣಿಸದೆ ರಾಜ್ಯಪಾಲರು ನೋಟೀಸು ನೀಡಿದ್ದಾರೆ ಎಂದರು.
ವರಿಷ್ಠರಿಗೆ ಮನವರಿಕೆ
ದೆಹಲಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಪಕ್ಷದ ವರಿಷ್ಠರಿಗೆ ಮನವರಿಕೆ ಮಾಡಿಕೊಡಲಾಗಿದೆ.ಅವರಿಗೆ ವಸ್ತುಸ್ಥಿತಿ ಅರ್ಥವಾಗಿದೆ ಎಂದರು.
ಆರ್.ಅಶೋಕ್ ಹೆದರಿರಬೇಕು
ರಾಜ್ಯಪಾಲರು ನೋಟೀಸ್ ನೀಡಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿಗಳು ಹೆದರಿದ್ದಾರೆ ಎಂದು ವಿಪಕ್ಷ ನಾಯಕ ಆರ್.ಅಶೋಕ್ ಹೇಳಿಕೆ ನೀಡಿರುವ ಬಗ್ಗೆ ಪ್ರತಿಕ್ರಿಯೆ ನೀಡಿ ಅಶೋಕ್ ಅವರು ಹೆದರಿರಬಹುದು, ನನಗೆ ಯಾಕೆ ಹೆದರಿಕೆಯಾಗಬೇಕು. ಕಾನೂನಿನ ರೀತ್ಯಾ ಅವರು ನೋಟೀಸು ನೀಡಿಲ್ಲ. ತಪ್ಪು ಮಾಡಿದ್ದರೆ ಹೆದರಬೇಕು. ನಾನು ತಪ್ಪು ಮಾಡಿಲ್ಲ ಎಂದರು.
ಕುಮಾರಸ್ವಾಮಿ ಸ್ವ ಇಚ್ಛೆ ಯಿಂದ ಪಾದಯಾತ್ರೆ ಮಾಡುತ್ತಿಲ್ಲ
ಬಿಜೆಪಿ ಪಾದಯಾತ್ರೆ ಮಾಡುವ ಬಗ್ಗೆ ಅಭ್ಯಂತರವಿಲ್ಲ ಎಂದ ಮುಖ್ಯಮಂತ್ರಿಗಳು ಕೇಂದ್ರ ಸಚಿವ ಹಾಗೂ ಜೆಡಿಎಸ್ ಅಧ್ಯಕ್ಷ ಹೆಚ್.ಡಿ.ಕುಮಾರಸ್ವಾಮಿ ಈ ಪ್ರಕರಣದಲ್ಲಿ ಏನೂ ಇಲ್ಲ ಎಂದು ಪಾದಯಾತ್ರೆ ಬೇಡ ಎಂದರು. ಮಳೆ ಹೆಚ್ಚಾಗಿದೆ , ಜಲಾಶಯಗಳು ತುಂಬಿ ಪ್ರವಾಹ ಬಂದಿದೆ ಅದರ ಕಡೆಗೆ ಗಮನ ನೀಡಬೇಕೆಂದು ಹೇಳಿದರು. ಈಗ ಅದು ಮರೆತುಹೋಯಿತೇ ಎಂದು ಪ್ರಶ್ನಿಸಿದ ಮುಖ್ಯಮಂತ್ರಿಗಳು ಅಂದರೆ ಅವರ ಸ್ವ ಇಚ್ಛೆ ಯಿಂದ ಮಾಡುತ್ತಿಲ್ಲ ಎಂದಾಯಿತು ಎಂದರು.
ಮಳೆಯಿಂದಾದ ಹಾನಿಯ ಬಗ್ಗೆ ವರದಿ
ಮಳೆಯಿಂದ ಮನೆ ಬಿದ್ದಿರುವುದು, ರಸ್ತೆ ಹಾಳಾಗಿರುವುದು, ಸೇತುವೆಗಳು, ವಿದ್ಯುತ್ ಕಂಬಗಳು ಬಿದ್ದಿರುವುದ್ದರ ಬಗ್ಗೆ ವರದಿ ತರಿಸುತ್ತಿರುವುದಾಗಿ ಮುಖ್ಯಮಂತ್ರಿಗಳು ತಿಳಿಸಿದರು.
ಹಾನಿಗೊಳಗಾದ ಮನೆಗಳ ನಿರ್ಮಾಣ
ಮನೆಗಳನ್ನು ಕಟ್ಟಿಕೊಡುವುದು ಹಾಗೂ ಪರಿಹಾರ ಕೊಡುತ್ತೇವೆ ಎಂದು ಕಂದಾಯ ಸಚಿವರು ಹೇಳಿರುವುದು ಗೊಂದಲ ಮೂಡಿಸಿದೆ ಎಂದು ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಮುಖ್ಯಮಂತ್ರಿಗಳು ಬಗ್ಗೆ ಸಚಿವ ಸಂಪುಟ ಸಭೆಯಲ್ಲಿ ಚರ್ಚೆ ಮಾಡಲಾಗಿದ್ದು, ಎಸ್.ಡಿ.ಆರ್. ಎಫ್ ಮಾರ್ಗಸೂಚಿ ಪ್ರಕಾರ ಎಷ್ಟು ಕೊಡಬೇಕೋ ಅಷ್ಟು ಪರಿಹಾರ ನೀಡಿ ಮನೆಯನ್ನೂ ಕಟ್ಟಿಕೊಡಲಾಗುವುದು ಎಂದರು.
ನಾಳೆ ಬೆಳಿಗ್ಗೆ ನಂಜನಗೂಡಿಗೆ ತೆರಳುತ್ತಿದ್ದು, ಇಂದು ಕೊಡಗು ಜಿಲ್ಲೆಯಲ್ಲಿ ಮಳೆಯಿಂದಾಗಿರುವ ಅನಾಹುತಗಳನ್ನು ಪರಿಶೀಲಿಸಲಾಗುವುದು ಎಂದರು.
ಪ್ರವಾಹ ಬಂದಿರುವ ಸ್ಥಳಗಳಿಗೆ ಎಲ್ಲಾ ಸಚಿವರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ ಜನರನ್ನು ಭೇಟಿ ಮಾಡುತ್ತಿದ್ದಾರೆ ಎಂದರು.
State
Ayushamn Card: 5 ಲಕ್ಷದವರೆಗೆ ಉಚಿತ ಚಿಕಿತ್ಸೆ ಪಡೆಯಬಹುದಾದ ‘ಆಯುಷ್ಮಾನ್ ಕಾರ್ಡ್’ ಪಟ್ಟಿಯಲ್ಲಿ ನಿಮ್ಮ ಹೆಸರಿದೆಯಾ? ಹೀಗೆ ಚೆಕ್ ಮಾಡಿ
Ayushamn Card: ಸಾಮಾನ್ಯ ಜನರಿಗೆ ಆರ್ಥಿಕ ಸುರಕ್ಷತೆ (financial help) ನೀಡುವ ಉದ್ದೇಶದಿಂದ ಕೇಂದ್ರ ಸರ್ಕಾರವು ಅನೇಕ ಯೋಜನೆಗಳನ್ನು ಪರಿಚಯಿಸಿದೆ. ಇದರ ಅಡಿಯಲ್ಲಿ ವಿವಿಧ ರೀತಿಯಲ್ಲಿ ಆರ್ಥಿಕ ಸಹಾಯವನ್ನು ನೀಡಲಾಗುತ್ತದೆ. ಅಂತೆಯೇ ಅವುಗಳಲ್ಲಿ ಪ್ರಮುಖವಾದುದೆಂದರೆ ಆಯುಷ್ಮಾನ್ ಭಾರತ್ (Ayushamn Card) ಯೋಜನೆ. ಈ ಆಯುಷ್ಮಾನ್ ಯೋಜನೆಗೆ ಸೇರುವ ಮೂಲಕ ಅದರ ಪ್ರಯೋಜನ ಪಡೆಯಲಾಗದ ಅನೇಕ ಜನರಿದ್ದಾರೆ. ಹಾಗಿದ್ರೆ ಈ ಯೋಜನೆಯ ಪಟ್ಟಿಯಲ್ಲಿ ನಿಮ್ಮ ಹೆಸರಿದೆಯಾ? ಎಂದು ಚೆಕ್ ಮಾಡಬೇಕೆ? ಹಾಗಿದ್ರೆ ಹೀಗೆ ಮಾಡಿ.
ಪಟ್ಟಿಯಲ್ಲಿ ನಿಮ್ಮ ಹೆಸರನ್ನು ಹೀಗೆ ಚೆಕ್ ಮಾಡಿ :
ಹಂತ 1
ನೀವು ಆಯುಷ್ಮಾನ್ ಕಾರ್ಡ್ ಪಟ್ಟಿಯಲ್ಲಿ ನಿಮ್ಮ ಹೆಸರನ್ನು ನೋಡಲು ಬಯಸಿದರೆ, ನೀವು ನೋಡಬಹುದು
ನೀವು ಮಾಡಬೇಕಾಗಿರುವುದು ಯೋಜನೆಯ ಈ ಅಧಿಕೃತ beneficiary.nha.gov.in ಲಿಂಕ್ ಗೆ ಹೋಗುವುದು
ಇದರ ನಂತರ, ನೀವು ವೆಬ್ಸೈಟ್ನ ಲಾಗಿನ್ ಪುಟವನ್ನು ಇಲ್ಲಿ ಪಡೆಯುತ್ತೀರಿ
ಹಂತ 2
ನೀವು ಈ ಪುಟಕ್ಕೆ ಲಾಗಿನ್ ಆಗಬೇಕು, ಇದಕ್ಕಾಗಿ ನೀವು ಮೊದಲು ನಿಮ್ಮ 10-ಅಂಕಿಯ ಮೊಬೈಲ್ ಸಂಖ್ಯೆಯನ್ನು ಇಲ್ಲಿ ನಮೂದಿಸಬೇಕು
ಇದರ ನಂತರ, ನೀವು ವೆರಿಫೈ ಮೇಲೆ ಕ್ಲಿಕ್ ಮಾಡಬೇಕು
ನಂತರ ನೀವು ನಮೂದಿಸಿದ ಮೊಬೈಲ್ ಸಂಖ್ಯೆಗೆ ಒಟಿಪಿ ಬರುತ್ತದೆ, ಅದನ್ನು ನೀವು ನಮೂದಿಸಬೇಕು
ಹಂತ 3
ನಂತರ ಹೊಸ ಪುಟ ತೆರೆಯುತ್ತದೆ, ಅಲ್ಲಿ ನೀವು ಮೊದಲು ಸ್ಕೀಮ್ ಕಾಲಂನಲ್ಲಿ ಪಿಎಂಜೆಎವೈ ಅನ್ನು ಆಯ್ಕೆ ಮಾಡಬೇಕು
ಇದರ ನಂತರ, ನಿಮ್ಮ ರಾಜ್ಯವನ್ನು ಆಯ್ಕೆ ಮಾಡಿ ಮತ್ತು ಎಲ್ಲಾ ಯೋಜನೆಗಳಲ್ಲಿ ಪಿಎಂಜೆಎವೈ ಅನ್ನು ಆಯ್ಕೆ ಮಾಡಿ
ಇದರ ನಂತರ, ನಿಮ್ಮ ಜಿಲ್ಲೆಯನ್ನು ಆಯ್ಕೆ ಮಾಡಿ ಮತ್ತು ಅಂತಿಮವಾಗಿ ಆಧಾರ್ ಸಂಖ್ಯೆಯನ್ನು ಆಯ್ಕೆ ಮಾಡಿ ಮತ್ತು ಸರ್ಚ್ ಮೇಲೆ ಕ್ಲಿಕ್ ಮಾಡಿ.
ಏನಿದು ಆಯುಷ್ಮಾನ್ ಭಾರತ್ ಯೋಜನೆ?
ಆಯುಷ್ಮಾನ್ ಭಾರತ್ ಯೋಜನೆಯು, ಆರೋಗ್ಯ ಮತ್ತು ಸ್ವಾಸ್ಥ್ಯ ಕೇಂದ್ರ ಮತ್ತು ಪ್ರಧಾನ ಮಂತ್ರಿ ಜನ ಆರೋಗ್ಯ ಯೋಜನೆ ಎಂಬ ಎರಡು ಪರಸ್ಪರ ಸಂಬಂಧಿತ ಘಟಕಗಳನ್ನು ಒಳಗೊಂಡಿದೆ. ಆರೈಕೆಗಾಗಿ ಪ್ರತಿ ಕುಟುಂಬಕ್ಕೆ ವರ್ಷಕ್ಕೆ ₹5 ಲಕ್ಷದವರೆಗೆ ರಕ್ಷಣೆ ನೀಡುವುದು ಈ ಯೋಜನೆಯ ಉದ್ದೇಶವಾಗಿದೆ. ಈ ಯೋಜನೆಯಡಿ ಯಾವುದೇ ಬಡವರು ದೇಶದ ಯಾವುದೇ ಭಾಗದಲ್ಲಿ ಯೋಜನೆಯ ಲಾಭ ಪಡೆಯಬಹುದು ಮತ್ತು ಈ ಯೋಜನೆಯಡಿ ಒಳಗೊಂಡಿರುವ ಫಲಾನುಭವಿಗೆ ಭಾರತದಾದ್ಯಂತ ಖಾಸಗಿ / ಸಾರ್ವಜನಿಕ ಆಸ್ಪತ್ರೆಗಳಿಂದ ಆರೋಗ್ಯ ಸೌಲಭ್ಯ ಒದಗಿಸಲಾಗುತ್ತದೆ.
ಯೋಜನೆಯ ಸೌಲಭ್ಯ ಪಡೆಯುವುದೇಗೆ?:
ಪ್ರಾಥಮಿಕ, ದ್ವಿತೀಯ ಕ್ಲಿಷ್ಟಕರ ಚಿಕಿತ್ಸೆಗಳು ಮತ್ತು ತೃತೀಯ ಹಂತದ ಕಾಯಿಲೆಗಳಿಗೆ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಲಭ್ಯವಿದ್ದರೆ ಮಾತ್ರ ಅಲ್ಲಿಯೇ ನೀಡಲಾಗುತ್ತದೆ. ಇಲ್ಲದಿದ್ದರೆ ರೆಫರಲ್ ನೀಡಲಾಗುತ್ತದೆ. ರೆಫರಲ್ ಪಡೆದುಕೊಂಡ ರೋಗಿ ತಾನು ಇಚ್ಛಿಸುವ ಯಾವುದೇ ನೋಂದಾಯಿತ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯಬಹುದು. ಹೃದಯರೋಗ, ಕ್ಯಾನ್ಸರ್, ಮೂತ್ರಪಿಂಡದ ಕಾಯಿಲೆ, ನವಜಾತ ಶಿಶುಗಳ ಕಾಯಿಲೆ ಸೇರಿದಂತೆ ತೃತೀಯ ಹಂತದ ಸುಮಾರು 900 ಚಿಕಿತ್ಸೆಗಳು ಹಾಗೂ ರಸ್ತೆ ಅಪಘಾತ ಸೇರಿದಂತೆ 169 ತುರ್ತು ಚಿಕಿತ್ಸೆಗಳಿಗೆ ಯಾವುದೇ ರೆಫರಲ್ ಇಲ್ಲದೆ ನೇರವಾಗಿ ನೋಂದಾಯಿತ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯಬಹುದು.
ಆಯುಷ್ಮಾನ್ ಕಾರ್ಡ್ ಪಡೆಯುವುದು ಹೇಗೆ?
ಆಯುಷ್ಮಾನ್ ಕಾರ್ಡ್ ಅನ್ನು ಆಫ್‌ಲೈನ್‌ನಲ್ಲಿ ಪಡೆಯಲು ಬಯಸಿದರೆ ಇದಕ್ಕಾಗಿ ನಿಮ್ಮ ಹತ್ತಿರದ ಸಿಎಸ್‌ಸಿ ಕೇಂದ್ರಕ್ಕೆ ಹೋಗಬೇಕು. ಇಲ್ಲಿ ಸಂಬಂಧಪಟ್ಟ ಅಧಿಕಾರಿಯನ್ನು ಭೇಟಿಯಾಗಿ ಅದನ್ನು ಮಾಡಿಕೊಳ್ಳಬಹುದು.
ಆನ್ಲೈನ್ ಮೂಲಕ ಪಡೆಯುವುದು ಹೇಗೆ:
* ಹಂತ 1: ಗೂಗಲ್ ಪ್ಲೇ ಸ್ಟೋರ್ ಅಥವಾ beneficiary.nha.gov.in ನಿಂದ ‘ಆಯುಷ್ಮಾನ್’ ಅಪ್ಲಿಕೇಶನ್ ಅನ್ನು ಡೌನ್ಫೋಡ್ ಮಾಡಿ, ಅಥವಾ ಮೇಲಿನ ಚಿತ್ರದಲ್ಲಿ ನೀಡಲಾದ ಕ್ಯೂಆರ್ ಕೋಡ್ ಅನ್ನು ಸ್ಕ್ಯಾನ್ ಮಾಡಿ.
* ಹಂತ 2: ನಿಮ್ಮ ಮೊಬೈಲ್ ಸಂಖ್ಯೆಯನ್ನು ನಮೂದಿಸಿ ಮತ್ತು ಬಳಕೆದಾರರ ಲಾಗಿನ್ ರಚಿಸಲು ಫೋನ್ನಲ್ಲಿ ಸ್ವೀಕರಿಸಿದ ಒಟಿಪಿಯನ್ನು ಭರ್ತಿ ಮಾಡಿ.
* ಹಂತ 3: ನಿಮ್ಮ ಹೆಸರು, ಪಡಿತರ ಚೀಟಿ ಅಥವಾ ಆಧಾರ್
ಸಂಖ್ಯೆಯ ಮೂಲಕ ನಿಮ್ಮ ಅರ್ಹತೆಯನ್ನು ಪರಿಶೀಲಿಸಿ.
* ಹಂತ 4: ಅರ್ಹರಾಗಿದ್ದರೆ, ಆಧಾರ್ ಇ-ಕೆವೈಸಿ (ಉದಾ. ಫೇಸ್ ಆಥ್, ಮೊಬೈಲ್ ಒಟಿಪಿ) ಮೂಲಕ ನಿಮ್ಮ ಮತ್ತು ನಿಮ್ಮ ಕುಟುಂಬ ಸದಸ್ಯರ ವಿವರಗಳನ್ನು ಪರಿಶೀಲಿಸಿ.
* ಹಂತ 5: ಅಗತ್ಯವಿರುವ ಎಲ್ಲಾ ವಿವರಗಳನ್ನು ಭರ್ತಿ ಮಾಡಿದ ನಂತರ, ನಿಮ್ಮ ಮೊಬೈಲಿಂದ ನಿಮ್ಮ ಫೋಟೋವನ್ನು ತೆಗೆದುಕೊಂಡು ಅದನ್ನು ಅಪ್ಲೋಡ್ ಮಾಡಿ. ಪರಿಶೀಲನೆ ಪ್ರಕ್ರಿಯೆ ಪೂರ್ಣಗೊಂಡ ನಂತರ, ನೀವು ನಿಮ್ಮ ಆಯುಷ್ಮಾನ್ ಕಾರ್ಡ್ ಅನ್ನು ಡೌನ್ಫೋಡ್ ಮಾಡಬಹುದು.
ಯಾರೆಲ್ಲಾ ಪಡೆಯಬಹುದು?
ಕುಟುಂಬದಲ್ಲಿ ಅಂಗವಿಕಲ ವ್ಯಕ್ತಿಯನ್ನು ಹೊಂದಿರುವವರು, ಪರಿಶಿಷ್ಟ ಜಾತಿ ಅಥವಾ ಪಂಗಡದಿಂದ ಬಂದವರು, ಅಸಂಘಟಿತ ವಲಯದಲ್ಲಿ ಕೆಲಸ ಮಾಡುವವರು, ಗ್ರಾಮೀಣ ಪ್ರದೇಶಗಳಲ್ಲಿ ವಾಸಿಸುವ ಜನರು, ದಿನಗೂಲಿ ಮಾಡುವವರು, ಬಡತನ ರೇಖೆಗಿಂತ ಕೆಳಗಿರುವವರು, ನಿರ್ಗತಿಕ ಅಥವಾ ಬುಡಕಟ್ಟು ಜನರು ಆಯುಷ್ಮಾನ್ ಕಾರ್ಡ್ ಅನ್ನು ಪಡೆಯಬಹುದು.
-
Mysore3 months ago
ಶ್ರೀಮತಿ ಭವಾನಿ ರೇವಣ್ಣ ಸಹೋದರ ಇಂದು ಅಂತ್ಯಕ್ರಿಯೆ
-
State6 months ago
Free sewing machine, ಉಚಿತ ಹೊಲಿಗೆ ಯಂತ್ರ ಪಡೆಯಲು ಅರ್ಜಿ ಸಲ್ಲಿಸಿ!
-
State6 months ago
ಶಾಲಾ ಮಕ್ಕಳಿಗೆ ಫೆಬ್ರವರಿ ತಿಂಗಳಲ್ಲಿ ಭರ್ಜರಿ ಹಾಲಿಡೇ! ಇಲ್ಲಿದೆ ರಜಾ ಲಿಸ್ಟ್!!!
-
Health6 months ago
Sugar Control ಆಗಬೇಕು ಅಂದ್ರೆ ಈ ಹಿಟ್ಟನ್ನು ತಿನ್ನಬೇಕಂತೆ! ಕನ್ಫ್ಯೂಸ್ ಆಗ್ಬೇಡಿ ಸುದ್ದಿ ಓದಿ
-
Hassan3 months ago
ಹಾಸನ ಜಿಲ್ಲೆ ಹೊಳೆನರಸೀಪುರ ತಾಲ್ಲೂಕಿನ ಹರದನಹಳ್ಳಿಯಲ್ಲಿ ಸಂಸದ ಪ್ರಜ್ವಲ್ ರೇವಣ್ಣ ಹೇಳಿಕೆ
-
Uncategorized2 months ago
NEET 2024 ಮರು ಪರೀಕ್ಷೆಗೆ ಒತ್ತಾಯ: ಪೇಪರ್ ಲೀಕ್, ಮೋಸದ ಗ್ರೇಸ್ ಮಾರ್ಕ್, ಒಂದೇ ಕೇಂದ್ರದ ವಿದ್ಯಾರ್ಥಿಗಳು ಟಾಪರ್ಸ್ !!
-
Uncategorized8 months ago
ಅರ್ಜುನನ ಸಮಾದಿಗೆ ಪೂಜೆ ಸಲ್ಲಿಸಿದ ಮೈಸೂರು ರಾಜವಂಶಸ್ಥ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್
-
State6 months ago
ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ!!. ‘ಹಳೆ ಪಿಂಚಣಿ’ ಜಾರಿಗೆ ಗ್ರೀನ್ ಸಿಗ್ನಲ್ ಕೊಟ್ಟ ರಾಜ್ಯ ಸರ್ಕಾರ.