Mandya
ಮುಂಡುಗದೊರೆ ಪಂಚಾಯ್ತಿಗೆ ಪದ್ಮ ಅಧ್ಯಕ್ಷೆ
ಶ್ರೀರಂಗಪಟ್ಟಣ : ತಾಲೂಕಿನ ಮುಂಡುಗದೊರೆ ಗ್ರಾ. ಪಂಚಾಯಿತಿಗೆ ನೂತನ ಅಧ್ಯಕ್ಷರಾಗಿ ಪದ್ಮ ಡಿ.ಎಸ್.ಕೋಂ ಸೋಮೇಶ ಹಾಗು ಉಪಾಧ್ಯಕ್ಷರಾಗಿ ಗಾಯಿತ್ರಿ ಕೋಂ ಶಿವರಾಜ್ ಕುಮಾರ್ ಅವಿರೋಧವಾಗಿ ಆಯ್ಕೆಯಾದರು.
ನಿಕಟಪೂರ್ವ ಅಧ್ಯಕ್ಷ ಸೋಮಣ್ಣ ಹಾಗು ಉಪಾಧ್ಯಕ್ಷೆ ಸುಗುಣ ರಿಂದ ತೆರವಾಗಿದ್ದ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಈ ಇಬ್ಬರನ್ನು ಹೊರತು ಪಡಿಸಿ ಯಾರು ನಾಮಪತ್ರ ಸಲ್ಲಿಸಿದ ಕಾರಣ ಅವಿರೋಧವಾಗಿ ಆಯ್ಕೆಯಾಗಿರುವುದಾಗಿ ಚುನಾವಣಾಧಿಕಾರಿ ಎಇಇ ಮಂಜುನಾಥ್ ಘೋಷಣೆ ಮಾಡಿದರು.
ನೂತನ ಅಧ್ಯಕ್ಷ ಮತ್ತು ಉಪಾಧ್ಯಕ್ಷರನ್ನು ಗ್ರಾಮಸ್ಥರು ಹಾಗೂ ಮುಖಂಡರುಗಳು ಸನ್ಮಾನಿಸಿ ಅಭಿನಂಧಿಸಿದರು.
Mandya
ಮಳವಳ್ಳಿಯಲ್ಲಿ ಸುತ್ತೂರು ಜಯಂತಿ- ಡಿ.16 ರಾಷ್ಟ್ರಪತಿಗಳ ಅಗಮನ – ಭದ್ರತೆ ತಂಡದಿಂದ ಹೆಲಿಕ್ಯಾಪ್ಟರ್ ಅಣಕು ಪ್ರದರ್ಶನ
ಮಂಡ್ಯ: ಮಳವಳ್ಳಿ ಪಟ್ಟಣದಲ್ಲಿ ಸುತ್ತೂರಿನ ಆದಿ ಜಗದ್ಗುರು ಶ್ರೀ ಶಿವರಾತ್ರಿ ಶಿವಯೋಗಿಗಳ ರವರ 1066ನೇ ಜಯಂತಿ ಮಹೋತ್ಸವ ಡಿ.15 ರಿಂದ ಅರಂಭವಾಗಲಿದ್ದು, ಡಿ.16 ರಂದು ಭಾರತದ ಘನತೆ ವೆತ್ತ ರಾಷ್ಟ್ರಪತಿಗಳಾದ ದ್ರೌಪದಿ ಮುರ್ಮು ಅವರು ಕಾರ್ಯಕ್ರಮಕ್ಕೆ ಆಗಮಿಸುವ ಹಿನ್ನೆಲೆಯಲ್ಲಿ ದೆಹಲಿ ಭದ್ರತಾ ಪಡೆ ಅಧಿಕಾರಿಗಳು ಇಂದು (ಭಾನುವಾರ) ಮಾರೆಹಳ್ಳಿ ಬಳಿ ನಿರ್ಮಿಸಲಾಗಿರುವ ಹೆಲಿಪ್ಯಾಡ್ ಜಾಗದಲ್ಲಿ ಹೆಲಿಕ್ಯಾಪ್ಟರ್ ಅಣಕು ಪ್ರದರ್ಶನ ನಡೆಸಿದರು.

ಮಾರೆಹಳ್ಳಿ ಬಳಿ ಹೆಲಿಪ್ಯಾಡ್ ನಿರ್ಮಿಸಲಾಗಿದ್ದು, ಭಾನುವಾರ ದೆಹಲಿ ಭದ್ರತಾ ಪಡೆ ಅಧಿಕಾರಿಗಳ ತಂಡ ಹಾಗೂ ಜಿಲ್ಲಾಧಿಕಾರಿಗಳಾದ ಡಾ.ಕುಮಾರ ನೇತೃತ್ವದಲ್ಲಿ ಅಗಮಿಸಿ ಹೆಲಿಕ್ಯಾಪ್ಟರ್ ಅಣಕು ಪ್ರದರ್ಶನ ನಡೆಸಿ ರಾಷ್ಟ್ರಪತಿಗಳು ಬಂದಾಗ ಎಲ್ಲಿ ಯಾವ ರೀತಿ ಲ್ಯಾಂಡಿಂಗ್ ಮಾಡುವುದರ ಕುರಿತು ಪ್ರಾಯೋಗಿಕವಾಗಿ ಪ್ರದರ್ಶನ ನಡೆಸಿದರು.

ನಂತರ ಜಯಂತಿ ಮಹೋತ್ಸವದ ಸ್ವಾಗತ ಸಮಿತಿ ಗೌರವ ಅಧ್ಯಕ್ಷರಾದ ಶ್ರೀ ಚನ್ನಬಸವಸ್ವಾಮಿಗಳ ದಿವ್ಯ ಸಮ್ಮುಖದಲ್ಲಿ ಜಿಲ್ಲಾಧಿಕಾರಿ ಡಾ,ಕುಮಾರ ,ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ, ಹೆಚ್ಚುವರಿ ಪೋಲಿಸ್ ವರಿಷ್ಠಾಧಿಕಾರಿಗಳಾದ ಎಸ್.ಇ.ಗಂಗಾಧರಸ್ವಾಮಿ, ಎಸ್,ತಿಮ್ಮಯ್ಯ, ಡಿವೈಎಸ್ಪಿ ಯಶವಂತ್ ಕುಮಾರ್, ಉಪ ವಿಭಾಗಾದಿಕಾರಿ ಶಿವಮೂರ್ತಿ, ತಹಶೀಲ್ದಾರ್ ಡಾ.ಲೋಕೇಶ್ ಹಾಗೂ ಜಯಂತಿ ಮಹೋತ್ಸವದ ಸಮಿತಿಯ ಸದಸ್ಯರು ಕಾರ್ಯಕ್ರಮದ ವೇದಿಕೆ, ವಸ್ತುಪ್ರದರ್ಶನ ಸ್ಟಾಲ್, ದಾಸೋಹ ವ್ಯವಸ್ಥೆಯ, ಅಗಮನ, ನಿರ್ಗಮನ ಸ್ಥಳಗಳು, ವಾಹನ ಪಾರ್ಕಿಂಗ್, ದೇವಸ್ಥಾನ ನಿರ್ಮಾಣ ಸೇರಿದಂತೆ ಸುತ್ತಮುತ್ತಲ ಸ್ವಚ್ಚತೆ, ಕುಡಿಯುವ ನೀರು ಸೌಲಭ್ಯಗಳ ಕುರಿತು ಅಂತಿಮ ಹಂತದ ಪರಿಶೀಲನೆ ನಡೆಸಿ ಬಂದೋಬಸ್ತ್ ಕುರಿತು ಚರ್ಚೆ ನಡೆಸಿದರು.

ಪಟ್ಟಣಕ್ಕೆ ರಾಷ್ಟ್ರಪತಿಗಳ ಅಗಮನ ಹಿನ್ನೆಲೆಯಲ್ಲಿ ದೆಹಲಿ ಭದ್ರತಾ ಪಡೆಯ ಅಧಿಕಾರಿಗಳ ನಿರ್ದೇಶನದಂತೆ ಪಟ್ಟಣದಲ್ಲಿ ಭಾರಿ ಬಿಗಿಪೋಲಿಸ್ ಬಂದೋಬಸ್ತ್ ಕಲ್ಪಿಸಲಾಗಿದ್ದು, ರಾಷ್ಟ್ರಪತಿಗಳು ಅಗಮಿಸುವ ಮಾರ್ಗದಲ್ಲಿ ಕಟ್ಟೆಚ್ಚರ ವಹಿಸಲಾಗಿದೆ. ಪುಟ್‌ಬಾತ್ ಅಂಗಡಿಗಳ ತೆರವು, ವಾಹನಗಳ ಸಂಚಾರ , ಸೇರಿದಂತೆ ಹಲವು ಕಟ್ಟುನಿಟ್ಟಿನ ಕ್ರಮ ವಹಿಸಲಾಗಿದೆ ಎಂದರು.
Mandya
ಡಿ.28 ರಂದು ಪ್ರತಿಭಾ ಪುರಸ್ಕಾರ ಮತ್ತು ಹಿರಿಯ ನಾಗರಿಕರಿಗೆ ಸನ್ಮಾನ : ಪಾಪಣ್ಣ
ಮಳವಳ್ಳಿ : ಇದೇ ಡಿ.28 ರಂದು ಬೆಂಗಳೂರಿನ ಲಕ್ಷ್ಮೀನಾರಾಯಣಪುರದ ಒಡಲೂರು ಶ್ರೀ ಜ್ಯೋತಿ ರಾಮಲಿಂಗ ಸ್ವಾಮಿಗಳ ಸಮರಸ ಸನ್ಮಾರ್ಗ ಸಂಘದ ಕಚೇರಿಯಲ್ಲಿ ಪ್ರತಿಭಾ ಪುರಸ್ಕಾರ ಮತ್ತು ಹಿರಿಯ ನಾಗರಿಕರಿಗೆ ಸನ್ಮಾನ ಕಾರ್ಯಕ್ರಮ ಹಮ್ಮಿಕೊಂಡಿರುವುದಾಗಿ ಆರ್.ಆರ್ ವಧು- ವರರ ಕೇಂದ್ರದ
ಅಧ್ಯಕ್ಷ ಪಾಪಣ್ಣ ಅವರು ತಿಳಿಸಿದರು.
ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕೆಂದು ಮನವಿ ಮಾಡಿದರು.

ನಾರಾಯಣಪ್ಪ.ವಿ ಜಾಲಗೆರೆ ಮಾತನಾಡಿ, ಪಾಪಣ್ಣನವರ ಕಾರ್ಯಕ್ರಮಕ್ಕೆ ಸಂಪೂರ್ಣ ಬೆಂಬಲ ಹಾಗೂ ಸಹಭಾಗಿತ್ವವನ್ನು ವಹಿಸಿ ಕಾರ್ಯಕ್ರಮ ಯಶಸ್ವಿಗೊಳಿಸಬೇಕೆಂದು ಕೇಳಿಕೊಂಡರು.
ಸುದ್ದಿಗೋಷ್ಠಿಯಲ್ಲಿ ಮಡಿವಾಳರ ಖಡ್ಗ ಪತ್ರಿಕೆಯ ಚಂದ್ರಶೇಖರ್, ಶಂಕರಮಠ ವಾರ್ಡ್ ಒಬಿಸಿ ಅಧ್ಯಕ್ಷ ಜಯರಾಮ್, ಬಿಜೆಪಿ ಮುಖಂಡ ಕೆಂಚಪ್ಪ, ಮುಖಂಡರಾದ ನಾಗರಾಜ ಮತ್ತು ಮುನಿರಾಜು, ವೆಂಕಟಾದ್ರಿ ಟೆಂಟ್ ಹೌಸ್ ಮಾಲೀಕ ವೆಂಕಟೇಶ್ ಉಪಸ್ಥಿತರಿದ್ದರು.
Mandya
ವಿವಿಧ ಗಣ್ಯರ ಪುತ್ಥಳಿ, ಸರ್ಕಲ್ ನಿರ್ಮಾಣಕ್ಕೆ ಸ್ಥಳ ಪರಿಶೀಲಿಸಿದ ಶಾಸಕ ಕೆ.ಎಂ.ಉದಯ್
ಮದ್ದೂರು: ತಾಲೂಕಿನ ನಗರ ವ್ಯಾಪ್ತಿಯ ವಿವಿಧ ಗಣ್ಯರ ಪುತ್ಥಳಿ ಹಾಗೂ ಸರ್ಕಲ್ ನಿರ್ಮಾಣಕ್ಕೆ ಶಾಸಕ ಕೆ. ಎಂ .ಉದಯ್ ಸ್ಥಳ ಪರಿಶೀಲನೆ ನಡೆಸಿದ್ದಾರೆ.
ಮದ್ದೂರು ನಗರದ ಟಿ.ಬಿ. ಸರ್ಕಲ್‌ನಿಂದ ಪೇಟೆಬೀದಿ, ಕೊಲ್ಲಿ ಸರ್ಕಲ್‌ವರೆಗೆ 80 ಅಡಿ ರಸ್ತೆ ಮತ್ತು ಶಿವಪುರದ ಕೊಪ್ಪ ಸರ್ಕಲ್ ಸೇರಿದಂತೆ ನಗರದ ವಿವಿಧ ಪ್ರಮುಖ ಸರ್ಕಲ್‌ಗಳಲ್ಲಿ ಗಣ್ಯರ ಪುತ್ಥಳಿ ಹಾಗೂ ಸರ್ಕಲ್ ನಿರ್ಮಾಣಕ್ಕೆ ಸಂಬಂಧಿಸಿದಂತೆ ಇಂದು ಸ್ಥಳ ಪರಿಶೀಲನೆ ಮಾಡಿದ್ದಾರೆ.

ಈ ಸಂದರ್ಭದಲ್ಲಿ, ಶಿವಪುರದ ಕೊಪ್ಪ ಸರ್ಕಲ್ – ಭಕ್ತ ಕನಕದಾಸರು, ಕೊಲ್ಲಿ ಸರ್ಕಲ್ – ವಿಶ್ವಗುರು ಜಗಜ್ಯೋತಿ ಶ್ರೀ ಬಸವಣ್ಣ, ಹೂವಿನ ಸರ್ಕಲ್ – ಅಮರ ಶಿಲ್ಪಿ ಶ್ರೀ ಜಕಣಚಾರಿ, ಕೆಮ್ಮಣ್ಣು ನಾಲೆ ಸರ್ಕಲ್ – ಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ್, ಸ್ಟೇಡಿಯಂ ಸರ್ಕಲ್ – ಶ್ರೀ ಶ್ರೀ ಶ್ರೀ ಬಾಲ ಗಂಗಾಧರನಾಥ ಸ್ವಾಮಿಜೀ ಹಾಗೂ ಟಿ.ಬಿ. ಸರ್ಕಲ್ – ನಾಡಪ್ರಭು ಶ್ರೀ ಕೆಂಪೇಗೌಡರು ರವರುಗಳ ಪುತ್ಥಳಿ ಹಾಗೂ ಸರ್ಕಲ್ ನಿರ್ಮಾಣಕ್ಕೆ ಸಂಬಂಧಿಸಿದಂತೆ, ಅಯೋಧ್ಯೆಯ ಬಾಲರಾಮನ ಕೆತ್ತನೆಯ ಖ್ಯಾತ ಶಿಲ್ಪಿ ಮೈಸೂರಿನ ಅರುಣ್ ಯೋಗಿರಾಜ್ ರವರ ಜೊತೆಗೂಡಿ ಸ್ಥಳ ಪರಿಶೀಲನೆ ನಡೆಸಿದ್ದಾರೆ.
ಪರಿಶೀಲನೆಯ ಮೂಲಕ ಯೋಜನೆಯ ವಿನ್ಯಾಸ, ಸ್ಥಳದ ಸೂಕ್ತತೆ, ಸಂಚಾರ ವ್ಯವಸ್ಥೆ ಹಾಗೂ ಅಗತ್ಯ ಮೂಲಸೌಕರ್ಯಗಳ ಬಗ್ಗೆ ಚರ್ಚಿಸಿ, ಮುಂದಿನ ಕ್ರಮಗಳಿಗೆ ಅಗತ್ಯ ಮಾರ್ಗದರ್ಶನ ಪಡೆದಿದ್ದಾರೆ.
-
Hassan6 hours agoಬೈರಾಪುರ-ಚನ್ನಪುರ- ಮಗ್ಗೆ ರಸ್ತೆ ತಾತ್ಕಾಲಿಕ ಬಂದ್: ಬದಲಿ ಮಾರ್ಗದಲ್ಲಿ ವಾಹನ ಸಂಚಾರಕ್ಕೆ ಸೂಚನೆ
-
Special7 hours agoಕರ್ನಾಟಕ ಕುಕ್ಕುಟ ಸಂಜೀವಿನಿ ಯೋಜನೆ: ಮಹಿಳೆಯರಿಗೆ ಉಚಿತ ಕೋಳಿ ಮರಿ, ಶೆಡ್ ನಿರ್ಮಾಣಕ್ಕೆ ಭರ್ಜರಿ ಸಹಾಯಧನ
-
Mandya24 hours agoವಿಕಲಚೇತನ ಯುವತಿ ಮೇಲೆ ಅತ್ಯಾಚಾರ ಆರೋಪ : ದೂರು ದಾಖಲು
-
Hassan1 hour agoಜಾನಪದವೇ ಸಾಹಿತ್ಯದ ತಾಯಿ ಬೇರು: ಡಾ. ಪಿಚ್ಚಳ್ಳಿ ಶ್ರೀನಿವಾಸ್
-
State21 hours agoರಾಹುಲ್, ಖರ್ಗೆ ಕಾಂಗ್ರೆಸ್ಸಿನ ಹೈಕಮಾಂಡೇ ಅಥವಾ ಯತೀಂದ್ರ ಹೈಕಮಾಂಡೇ: ಬಿ.ವೈ.ವಿಜಯೇಂದ್ರ
-
Hassan23 hours agoರೋಟರಿ ಬೆಂಗಳೂರು ದಕ್ಷಿಣದಿಂದ MCE ಕಾಲೇಜಿನ 51 ವಿದ್ಯಾರ್ಥಿಗಳಿಗೆ 15 ಲಕ್ಷ ರೂ. ವಿದ್ಯಾರ್ಥಿ ವೇತನ ವಿತರಣೆ
-
Mandya2 hours agoಮಳವಳ್ಳಿಯಲ್ಲಿ ಸುತ್ತೂರು ಜಯಂತಿ- ಡಿ.16 ರಾಷ್ಟ್ರಪತಿಗಳ ಅಗಮನ – ಭದ್ರತೆ ತಂಡದಿಂದ ಹೆಲಿಕ್ಯಾಪ್ಟರ್ ಅಣಕು ಪ್ರದರ್ಶನ
-
Mandya5 hours agoಡಿ.28 ರಂದು ಪ್ರತಿಭಾ ಪುರಸ್ಕಾರ ಮತ್ತು ಹಿರಿಯ ನಾಗರಿಕರಿಗೆ ಸನ್ಮಾನ : ಪಾಪಣ್ಣ
