Hassan
ಆಕರ್ಷಕ ಫಲಪುಷ್ಪ ಪ್ರದರ್ಶನಕ್ಕೆ ಜಿಲ್ಲಾ ಮಂತ್ರಿ ಕೆ.ಎನ್. ರಾಜಣ್ಣ ಚಾಲನೆ
ಹಾಸನ: ಗಣರಾಜ್ಯೋತ್ಸವದ ಅಂಗವಾಗಿ ತೋಟಗಾರಿಕೆ ಇಲಾಖೆವತಿಯಿಂದ ನಗರದ ಸಿಲ್ವರ್ ಜುಬ್ಲಿ ಅರ್ಚರ್ಡ್ ಪಾರ್ಕ್‌ನಲ್ಲಿ ಜ.೨೬ ರಿಂದ ೨೮ ರವರೆಗೆ ಏರ್ಪಡಿಸಲಾಗಿರುವ ಫಲಪುಷ್ಪ ಪ್ರದರ್ಶನವನ್ನು ಸಹಕಾರ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಎನ್. ರಾಜಣ್ಣ ಅವರು ಉದ್ಘಾಟಿಸಿ ನಂತರ ತೋಟಗಾರಿಕೆಯ ಪಿತಾಮಹ ಮರಿಗೌಡ ಅವರ ಪುತ್ಥಳಿ ಅನಾವರಣಗೊಳಿಸಿದರು.

ಫಲಪುಷ್ಪ ಪ್ರದರ್ಶನ ವೀಕ್ಷಣೆ ಮಾಡಿದ ನಂತರ ಸಚಿವರು ಮಾಧ್ಯಮದೊಂದಿಗೆ ಮಾತನಾಡಿ. ಕಳೆದ ೫ ವರ್ಷಗಳಿಂದ ನಿಂತುಹೊಗಿದ್ದ ಫಲಪುಷ್ಪ ಪ್ರದರ್ಶನವನ್ನು ಈ ಬಾರಿ ಶಾಸಕರು ಹಾಗೂ ಇಲಾಖೆ ಅಧಿಕಾರಿಗಳು ಆಸಕ್ತಿವಹಿಸಿ ತುಂಬಾ ಚೆನ್ನಾಗಿ ಆಯೋಜಿಸಿದ್ದಾರೆ. ಹೇಮಾವತಿ ತೋಟಗಾರಿಕೆ ಸಂಘದ ಕೂಡ ಸೇರಿಕೊಂಡಿದ್ದಾರೆ. ಹೆಣ್ಣು ಮಕ್ಕಳು ತುಂಬಾ ಆಸಕ್ತಿವಹಿಸಿ ಮಾಡಿದ್ದಾರೆ ಅವರಿಗೆ ಅಭಿನಂದನೆಗಳನ್ನು ತಿಳಿಸಿದರು. ಮುಂದಿನ ದಿನಗಳಲ್ಲಿ ಗುಣಮಟ್ಟವನ್ನು ಇನ್ನು ಹೆಚ್ಚು ಉತ್ತಮ ಪಡಿಸಲು ಹಾಗೂ ಸಾರ್ವಜನಿಕರ ಪಾಲ್ಗೋಳುವಿಕೆಯನ್ನು ಹೆಚ್ಚಿಸಿ ಉನ್ನತ ಮಟ್ಟಕ್ಕೆ ತೆಗೆದುಕೊಂಡು ಹೋಗುವ ಆಶಯವಿದೆ. ಜಿಲ್ಲಾಡಳಿತ, ತೋಟಗಾರಿಕೆ ಇಲಾಖೆ, ಸಂಘ ಸಂಸ್ಥೆಗಳ ಹಾಗೂ ಸಾರ್ವಜನಿಕರೆಲ್ಲರ ಸಹಕಾರ ಪಡೆದು ಪ್ರತಿ ವರ್ಷ ಹೆಚ್ಚು ಪರಿಣಾಮಕಾರಿಯಾಗಿ ಜನರಿಗೆ ಮುಟ್ಟುವಂತೆ ಆಯೋಜಿಸಬೇಕು ಇದು ರೈತರಿಗೆ ಅನುಕೂಲವಾಗುತ್ತದೆ ಎಂದರು. ನಾವು ಕೂಡ ರೈತ ಕುಟುಂಬದಲ್ಲಿ ಬೆಳೆದಿದ್ದರು ಸಹ ಇಲ್ಲಿ ಪ್ರದರ್ಶನಕ್ಕಿಟ್ಟಿರುವ ವಿವಿಧ ತಳಿಗಳ ಮಾಹಿತಿಯಿಲ್ಲ ಇರಲ್ಲಿಲ್ಲ ಎಂದ ಅವರು ರೈತರಿಗೆ ಬಹಳ ಉಪಯೋಗವಾಗಲಿದೆ ಎಂದರು. ರೈತರು ರಾಗಿ, ಭತ್ತ, ಕಬ್ಬು ಬೆಳೆಯುತ್ತಿದ್ದಾರೆ. ಕಬ್ಬಿಗೂ ಸ್ವಲ್ಪ ದಿನದಲ್ಲಿ ಬೆಲೆಯಿಲ್ಲದಂತೆ ಆಗುತ್ತದೆ ಅದೃಷ್ಟಕ್ಕೆ ಕಬ್ಬಿನ ಜೂಸ್‌ನಿಂದ ಎಥೆನಾಲ್ ಮಾಡುವುದರಿಂದ ಬ್ಲೆಂಡಿಂಗ್‌ಗೆ ಅನುಮತಿ ನೀಡಿ ಅದಕ್ಕೆ ೫೪ ರೂ ಆಗುತ್ತದೆ ಈ ಕಾರ್ಯಕ್ರಮದ ಸದುಪಂಯೋಗ ಪಡೆದುಕೊಳ್ಳಬೇಕು ಎಂದು ಹೇಳಿದರು. ನೀರಾವರಿ ಸೌಲಭ್ಯವಿಲ್ಲದ ಪ್ರದೇಶಗಳಲ್ಲಿ ಕಡಿಮೆ ನೀರಿನಲ್ಲಿ ಉತ್ತಮವಾಗಿ ತರಕಾರಿ ಬೆಳೆಗಳನ್ನು ಬೆಳೆದು ಆರ್ಥಿಕವಾಗಿ ಅಭಿವೃದ್ಧಿ ಹೊಂದಲು ಪೂರಕವಾಗಿ ಮಾಹಿತಿ ನೀಡುತ್ತಿದ್ದಾರೆ. ಇದು ಒಂದು ಉತ್ತಮ ಕಾರ್ಯ ಎಂದು ಶ್ಲಾಘಿಸಿದರು.

ಇದೆ ವೇಳೆ ಕ್ಷೇತ್ರದ ಶಾಸಕರಾದ ಹೆಚ್.ಪಿ. ಸ್ವರೂಪ್ ಪ್ರಕಾಶ್, ಜಿಲ್ಲಾಧಿಕಾರಿ ಸಿ. ಸತ್ಯಭಾಮ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಬಿ.ಆರ್. ಪೂರ್ಣಿಮಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮೊಹಮ್ಮದ್ ಸುಜಿತಾ, ಅಪರ ಜಿಲ್ಲಾಧಿಕಾರಿ ಕೆ.ಟಿ. ಶಾಂತಲಾ, ಹೆಚ್.ಪಿ. ಮೋಹನ್ ಹಾಗೂ ತೋಟಗಾರಿಕ ಇಲಾಖೆ ಅಧಿಕಾರಿಗಳು ಸೇರಿದಂತೆ ಇತರರು ಉಪಸ್ಥಿತರಿದ್ದರು.
Hassan
ವಿಕಸಿತ ಭಾರತ ಸಂಕಲ್ಪಕ್ಕೆ ಕೇಂದ್ರದ ಬಜೆಟ್ ಪೂರಕ: ಶಾಸಕ ಸಿಮೆಂಟ್ ಮಂಜು
ಸಕಲೇಶಪುರ : ವಿಕಸಿತ ಭಾರತ ಮೋದಿಜಿಯವರ ಕನಸು. 2047ಕ್ಕೆ ವಿಕಸಿತ ಭಾರತ ಆಗಬೇಕು ಅನ್ನೊ ಸಂಕಲ್ಪಕ್ಕೆ ಪೂರಕವಾಗಿ ಕೇಂದ್ರದ ವಿತ್ತ ಸಚಿವೆ ನಿರ್ಮಲ ಸೀತಾರಾಮನ್ ಈ ಭಾರಿಯ ಬಜೆಟ್ ಮಂಡಿಸಿದ್ದಾರೆ ಎಂದು ಶಾಸಕ ಸಿಮೆಂಟ್ ಮಂಜು ಹೇಳಿದರು.
ಪಟ್ಟಣದಲ್ಲಿ ಇಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು,ಈ ಬಜೆಟ್ ಮೂರು ಪ್ರಮುಖ ಕರ್ತವ್ಯಗಳ ಆಧಾರದ ಮೇಲೆ ಅಭಿವೃದ್ಧಿ ಪೂರಕ ಆಡಳಿತದತ್ತ ಸ್ಪಷ್ಟ ದಿಕ್ಸೂಚಿಯನ್ನು ನೀಡಿದೆ. ಮೊದಲನೆಯದಾಗಿ, ಜಾಗತಿಕ ಆರ್ಥಿಕ ಏರಿಳಿತಗಳ ನಡುವೆಯೂ ಭಾರತದ ಆರ್ಥಿಕ ಪ್ರಗತಿಗೆ ವೇಗ ನೀಡುವುದು ಮತ್ತು ಆರ್ಥಿಕತೆ ಚೇತರಿಸಿಕೊಳ್ಳುವ ಶಕ್ತಿಯನ್ನು ವೃದ್ಧಿಸುವುದು, ಎರಡನೆಯದಾಗಿ, ಯುವಜನತೆಯ ಆಕಾಂಕ್ಷೆಗಳನ್ನು ಈಡೇರಿಸುತ್ತಾ ಅವರಲ್ಲಿ ಹೊಸ ಸಾಮರ್ಥ್ಯ ಬೆಳೆಸುವುದು ಹಾಗೂ ಮೂರನೆಯದಾಗಿ, ’ಸಬ್ ಕಾ ಸಾಥ್ ಸಬ್ ಕಾ ವಿಕಾಸ್ ಮಂತ್ರದೊಂದಿಗೆ ಪ್ರತಿಯೊಂದು ಕುಟುಂಬ, ಸಮುದಾಯ ಮತ್ತು ಪ್ರದೇಶಗಳಿಗೆ ಅಗತ್ಯ ಸಂಪನ್ಮೂಲ ಹಾಗೂ ಸಮಾನ ಅವಕಾಶಗಳನ್ನು ಒದಗಿಸಿ, ಎಲ್ಲರೂ ದೇಶದ ಪ್ರಗತಿಯಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳುವಂತೆ ಮಾಡುವುದು ಈ ಬಜೆಟ್‌ನ ಆಶಯವಾಗಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.

◦ ಈ ಬಜೆಟ್ ’ವಿಕ್ಷಿತ್ ಭಾರತ್ ಯಂಗ್ ಲೀಡರ್ಸ್ ಡೈಲಾಗ್ನಂತಹ ವೇದಿಕೆಗಳ ಮೂಲಕ ಯುವಜನರ ಆಲೋಚನೆಗಳನ್ನು ನೀತಿ ನಿರೂಪಣೆಯಲ್ಲಿ ಅಳವಡಿಸಿಕೊಂಡಿರುವುದು ಶ್ಲಾಘನೀಯ. ಇದು ಯುವಜನರನ್ನು ಕೇವಲ ಫಲಾನುಭವಿಗಳನ್ನಾಗಿ ನೋಡದೆ, ರಾಷ್ಟ್ರದ ನಿರ್ಧಾರಗಳಲ್ಲಿ ಸಕ್ರಿಯ ಪಾಲುದಾರರನ್ನಾಗಿ ಮಾಡಿದೆ. ಆ ಮೂಲಕ ಭಾರತದ ಮುಂದಿನ ಪ್ರಗತಿಯನ್ನು ಯುವಜನರು ಮುನ್ನಡೆಸುತ್ತಾರೆ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಪದೇ ಪದೇ ಒತ್ತಿ ಹೇಳಿದ್ದು, ಅದರತ್ತ ಈ ಬಜೆಟ್ ಕೂಡ ಗಮನಹರಿಸಿರುವುದು ಸಮಯೋಚಿತವೆನಿಸಿದೆ ಎಂದು ಹೇಳಿದರು.
ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು 9ನೇ ಬಜೆಟ್ ಮಂಡಿಸಿದ್ದಾರೆ. ಕರ್ತವ್ಯ ಭವನದಲ್ಲಿ ಈ ಬಜೆಟ್ ತಯಾರಾಗಿದ್ದು.ನಿರ್ಮಲಾ ಸೀತಾರಾಮನ್ ನಮ್ಮವರು. ಕರ್ನಾಟಕದಿಂದಲೇ ರಾಜ್ಯಸಭೆಗೆ ಆಯ್ಕೆಯಾಗಿ ಹೋಗಿದ್ದಾರೆ. ಅವರು 9ನೇ ಬಾರಿ ದಾಖಲೆಯ ಬಜೆಟ್ ಮಂಡಿಸಿದ್ದಾರೆ.ಕ್ರೀಡಾ ಕ್ಷೇತ್ರ, ನಾರಿ ಶಕ್ತಿಗೆ ಹೆಚ್ಚು ಆದ್ಯತೆ ನೀಡಿದ್ದಾರೆ. ಯಾವುದೇ ಹೊಸ ತೆರಿಗೆಯನ್ನ ಹೇರಿಲ್ಲ. ಸರ್ವಸ್ಪರ್ಷಿ, ಸರ್ವವ್ಯಾಪಿ ಬಜೆಟ್ ಇದು.ದೇಶದ ಸರ್ವತೋಮುಖ ಅಭಿವೃದ್ಧಿಗೆ ಪೂರಕವಾಗಿದೆ. ಆರ್ಥಿಕ ಸದೃಢತೆ, ವಿಶ್ವಗುರುವಾಗಲು ಪೂರಕ ಬಜೆಟ್ ಮಂಡಿಸಿದ್ದಾರೆ ಎಂದು ತಿಳಿಸಿದರು.
Hassan
ಅರಸೀಹಳ್ಳಿ ಹರೀಶ್‌ಗೆ ಪಿಹೆಚ್‌ಡಿ ಪದವಿ
ಹಾಸನ: ನಗರದ ಸರ್ಕಾರಿ ಕಲಾ ವಾಣಿಜ್ಯ ಮತ್ತು ಸ್ನಾತಕೋತ್ತರ ಸ್ವಾಯತ್ತ ಕಾಲೇಜಿನ ರಾಜ್ಯಶಾಸ್ತ್ರ ವಿಭಾಗದ ಉಪನ್ಯಾಸಕ ಎ.ಹರೀಶ್ ಅವರಿಗೆ ಆಂಧ್ರಪ್ರದೇಶದ ಕುಪ್ಪಂನ ದ್ರಾವಿಡಿಯನ್ ವಿಶ್ವವಿದ್ಯಾನಿಲಯ ಪಿ ಎಚ್ ಡಿ ಪದವಿ ನೀಡಿದೆ.
ಹರೀಶ್ ಅವರು ಡಾ. ಎಂ. ಆರ್. ಚಂದ್ರಶೇಖರ್ ಅವರ ಮಾರ್ಗದರ್ಶನದಲ್ಲಿ ಮಂಡಿಸಿದ ಮಹಾಪ್ರಬಂಧ The Impact of E- governance and rural development ( A case study of Hassan district ) ಕ್ಕೆ ಪಿ.ಎಚ್.ಡಿ ಪದವಿ ನೀಡಿ ಗೌರವಿಸಿದೆ.

ಹರೀಶ್ ಅವರು ಅರಸೀಹಳ್ಳಿಯ ನಿವೃತ್ತ ಮುಖ್ಯೋಪಾಧ್ಯಾಯ ಎ ಅಣ್ಣೇಗೌಡ ಮತ್ತು ಜಯಲಕ್ಷ್ಮಮ್ಮ ಅವರ ಪುತ್ರರಾಗಿದ್ದಾರೆ
Hassan
ಆನೆ-ಮಾನವ ಸಂಘರ್ಷಕ್ಕೆ ಶಾಶ್ವತ ಪರಿಹಾರ : ಕೇಂದ್ರ ಸಚಿವರನ್ನು ಭೇಟಿ ಮಾಡಿದ ಸಂಸದ ಶ್ರೇಯಸ್ ಪಟೇಲ್
ನವದೆಹಲಿ: ಹಾಸನ ಜಿಲ್ಲೆಯಲ್ಲಿ ದಶಕಗಳಿಂದಲೂ ರೈತರನ್ನು ಕಾಡುತ್ತಿರುವ ಆನೆ-ಮಾನವ ಸಂಘರ್ಷಕ್ಕೆ ಶಾಶ್ವತ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಹಾಸನ ಲೋಕಸಭಾ ಕ್ಷೇತ್ರದ ಸಂಸದ ಶ್ರೇಯಸ್ ಪಟೇಲ್ ಅವರು ಇಂದು ದೆಹಲಿಯಲ್ಲಿ ಕೇಂದ್ರ ಅರಣ್ಯ ಸಚಿವ ಭೂಪೇಂದರ್ ಯಾದವ್ ಅವರನ್ನು ಭೇಟಿ ಮಾಡಿ ಚರ್ಚಿಸಿದರು.

ಶೀಘ್ರದಲ್ಲೇ ಹಾಸನಕ್ಕೆ ಕೇಂದ್ರ ತಂಡ ಭೇಟಿ ಸಚಿವರೊಂದಿಗಿನ ಭೇಟಿಯ ನಂತರ, ಅರಣ್ಯ ವಿಭಾಗದ ಹೆಚ್ಚುವರಿ ಮಹಾ ನಿರ್ದೇಶಕರಾದ ರಮೇಶ್ ಕೆ. ಪಾಂಡೇ (IFS) ಅವರನ್ನು ಸಂಸದರು ಭೇಟಿ ಮಾಡಿದರು. ಸಚಿವರ ನಿರ್ದೇಶನದಂತೆ, ಹಾಸನ ಜಿಲ್ಲೆಯಲ್ಲಿನ ಪರಿಸ್ಥಿತಿಯನ್ನು ವೈಜ್ಞಾನಿಕವಾಗಿ ಅಧ್ಯಯನ ಮಾಡಲು ವೈಲ್ಡ್‌ಲೈಫ್ ಇನ್‌ಸ್ಟಿಟ್ಯೂಟ್ ಆಫ್ ಇಂಡಿಯಾ (WII) ತಂಡವು ಶೀಘ್ರದಲ್ಲೇ ಜಿಲ್ಲೆಗೆ ಭೇಟಿ ನೀಡಲಿದೆ ಎಂದು ಸಂಸದರು ತಿಳಿಸಿದರು.

ಈ ತಂಡವು ಜಿಲ್ಲೆಯ ಆನೆ ಕಾರಿಡಾರ್‌ಗಳ ಸ್ಥಿತಿಗತಿ ಮತ್ತು ಸಂಘರ್ಷ ತಡೆಗೆ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ವರದಿ ಸಿದ್ಧಪಡಿಸಿ ಕೇಂದ್ರಕ್ಕೆ ಸಲ್ಲಿಸಲಿದೆ. 7 ಗ್ರಾಮಗಳ ರೈತರಿಂದ ಸ್ವಯಂಪ್ರೇರಿತ ಜಮೀನು ಹಸ್ತಾಂತರ ಹಿಂದೆ ನಡೆದ ಟಾಸ್ಕ್‌ಫೋರ್ಸ್ ಕಮಿಟಿ ಸಭೆಯ ನಿರ್ಧಾರಗಳನ್ನು ಸಚಿವರ ಗಮನಕ್ಕೆ ತಂದ ಶ್ರೇಯಸ್ ಪಟೇಲ್ ಅವರು ಅರಣ್ಯ ಪ್ರದೇಶಕ್ಕೆ ಹೊಂದಿಕೊಂಡಿರುವ ಮತ್ತು ಆನೆಗಳ ಸಂಚಾರ ಅಧಿಕವಾಗಿರುವ ಕೆಳಕಂಡ 7 ಗ್ರಾಮಗಳನ್ನು ಯೋಜನೆಗೆ ಒಳಪಡಿಸುವಂತೆ ಒತ್ತಾಯಿಸಿದರು.
ಅರಣಿ, ಬೋರನಮನೆ, ಬಾಳೆಹಳ್ಳ, ಬೆಟ್ಟಕುಮರಿ, ಮಂಕನಹಳ್ಳಿ, ಯತ್ತಹಳ್ಳ, ಬಾಜಿ ಮನೆ ಎಸ್ಟೇಟ್ ಈ ಗ್ರಾಮಗಳಲ್ಲಿನ 416 ರೈತರು ತಮ್ಮ ಒಟ್ಟು 2261.21 ಎಕರೆ ಹಿಡುವಳಿ ಪ್ರದೇಶವನ್ನು ಸರ್ಕಾರಕ್ಕೆ ಬಿಟ್ಟುಕೊಡಲು ಸಿದ್ಧರಿದ್ದಾರೆ.
ಪರಿಹಾರಕ್ಕೆ ಆಗ್ರಹ
“ಈ 7 ಗ್ರಾಮಗಳ ರೈತರು ಆನೆಗಳ ಕಾಟದಿಂದ ಬೇಸತ್ತಿದ್ದು, ಸರ್ಕಾರವು ಪ್ರತಿ ಎಕರೆಗೆ ಕನಿಷ್ಠ 15 ಲಕ್ಷ ರೂ. ಪರಿಹಾರ ನೀಡಿದಲ್ಲಿ ತಕ್ಷಣವೇ ಜಮೀನು ಹಸ್ತಾಂತರಿಸಲು ಒಪ್ಪಿಗೆ ಸೂಚಿಸಿದ್ದಾರೆ. ಈ ಪ್ರಸ್ತಾವನೆ ಜಾರಿಯಾದಲ್ಲಿ ಆನೆಗಳಿಗೆ ಮುಕ್ತ ಸಂಚಾರಕ್ಕೆ ಅವಕಾಶ ಸಿಗಲಿದ್ದು, ರೈತರ ಪ್ರಾಣ-ಹಾನಿ ತಪ್ಪಿಸಬಹುದು,” ಎಂದು ಶ್ರೇಯಸ್ ಪಟೇಲ್ ತಿಳಿಸಿದರು.

ಹಾಸನ ಜಿಲ್ಲೆಯ ರೈತರ ಹಿತದೃಷ್ಟಿಯಿಂದ ಈ ಯೋಜನೆಯನ್ನು ಕೇಂದ್ರ ಸರ್ಕಾರವು ಆದ್ಯತೆಯ ಮೇಲೆ ಪರಿಗಣಿಸಬೇಕು ಎಂದು ಅವರು ಈ ಸಂದರ್ಭದಲ್ಲಿ ಆಗ್ರಹಿಸಿದರು.
-
Manglore8 hours agoಜಿ.ಎಲ್. ಟ್ರೋಫಿ-2026: ಜಿ.ಎಲ್. ಹಾಸನ ತಂಡ ಚಾಂಪಿಯನ್
-
Hassan9 hours agoಮಾಧ್ಯಮ ಸ್ವಾತಂತ್ರ್ಯ ಸದ್ಬಳಕೆಯಾಗಲಿ: ಎಎಸ್ಪಿ ತಮ್ಮಯ್ಯ
-
Hassan8 hours agoಅರಸೀಹಳ್ಳಿ ಹರೀಶ್‌ಗೆ ಪಿಹೆಚ್‌ಡಿ ಪದವಿ
-
Hassan9 hours agoಆನೆ-ಮಾನವ ಸಂಘರ್ಷಕ್ಕೆ ಶಾಶ್ವತ ಪರಿಹಾರ : ಕೇಂದ್ರ ಸಚಿವರನ್ನು ಭೇಟಿ ಮಾಡಿದ ಸಂಸದ ಶ್ರೇಯಸ್ ಪಟೇಲ್
-
National10 hours ago17ನೇ ಬೆಂಗಳೂರು ಚಿತ್ರೋತ್ಸವದಲ್ಲಿ ತಾಯಿ-ಮಗನ ಸಂಬಂಧದ ʼಅಮ್ಮಂಗೆ ಹೇಳ್ಬೇಡʼ ಚಿತ್ರ ಪ್ರದರ್ಶನ
-
State11 hours agoಸಿಎಂ ಹೌದು ಹುಲಿಯಾ ಆಗಿಲ್ಲ, ಹೌದು ಇಲಿಯಾ ಆಗಿದ್ದಾರೆ: ಆರ್.ಅಶೋಕ್
-
Mandya13 hours agoಎಂ. ಅಂಕೇಗೌಡರ ಪುಸ್ತಕ ಪ್ರೀತಿ ಇಂದಿನ ಯುವ ಪೀಳಿಗೆಗೆ ಮಾದರಿ : ಡಾ.ಮಾನಸ
-
Mysore9 hours agoಡ್ರಗ್ಸ್ ಲ್ಯಾಬ್ ಪತ್ತೆ: ಕೈಗಾರಿಕೆಗಳ ತಪಾಸಣೆಗೆ 14 ತಂಡ ರಚನೆ
