Mandya
ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಆಯುಷ್ ಇಲಾಖೆ ವತಿಯಿಂದ ಚಿಂಚಾ ಪಾನಕ ವಿತರಣೆ

ಮಂಡ್ಯ: ಸಾರ್ವತ್ರಿಕ ಲೋಕಸಭಾ ಚುನಾವಣೆಯ ಕೆಲಸಗಳಲ್ಲಿ ನಿರತರಾಗಿರುವ ಅಧಿಕಾರಿ ಹಾಗೂ ಸಿಬ್ಬಂದಿ ವರ್ಗದವರಿಗೆ ಬೇಸಿಗೆ ಸಮಯದಲ್ಲಿ ಅನುಕೂಲವಾಗುವಂತೆ ಆಯುಷ್ ಇಲಾಖೆ ವತಿಯಿಂದ ನೀಡಲಾದ ಚಿಂಚಾ ಪಾನಕ ವಿತರಣಾ ಕಾರ್ಯಕ್ರಮಕ್ಕೆ ಜಿಲ್ಲಾಧಿಕಾರಿ ಡಾ.ಕುಮಾರ ಅವರು ಇಂದು ಚಾಲನೆ ನೀಡಿದರು.
ಚಾಲನೆ ನೀಡಿದ ನಂತರ ಮಾತನಾಡಿ, ರಾಜ್ಯಾದ್ಯಂತ ಇತ್ತೀಚಿನ ದಿನಗಳಲ್ಲಿ ತಾಪಮಾನವು ದಾಖಲೆ ಮಟ್ಟದಲ್ಲಿ ಏರಿಕೆಯಾಗುತ್ತಿದ್ದು, ಈ ಬೇಸಿಗೆಯ ಸುಡು ಬಿಸಿಲಿನ ದಿನಗಳಲ್ಲಿ ಸಾರ್ವಜನಿಕರಿಗೆ ಹಾಗೂ ಸಿಬ್ಬಂದಿಗಳಿಗೆ ಆರೋಗ್ಯಕರವಾದ ಚಿಂಚಾ ಪಾನಕದ ಬಗ್ಗೆ ಜಾಗೃತಿ ಮೂಡಿಸಲು ಆಯುಷ್ ಇಲಾಖೆಯ ವತಿಯಿಂದ ಆಯುಷ್ ಪಾನೀಯ ಪರಿಚಯ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದರು.
ಹುಣಸೆಹಣ್ಣು, ಬೆಲ್ಲದ ಪುಡಿ, ಜೀರಿಗೆ ಪುಡಿ, ಕಾಳು ಮೆಣಸಿನ ಪುಡಿ, ಸೈಂದವ ಲವಣಗಳಿಂದ ತಯಾರಿಸಿದ ಚಿಂಚಾ ಪಾನಕವು ಜೀರ್ಣಕ್ರಿಯೆಯನ್ನು ಉತ್ತಮಗೊಳಿಸುತ್ತದೆ. ಮಲಬದ್ಧತೆ ನಿವಾರಿಸುವುದು. ಶರೀರದ ದಾಹ ಹಾಗೂ ಬಾಯಾರಿಕೆಯನ್ನು ನೀಗಿಸುತ್ತದೆ ಎಂದರು.
ಅಪರ ಜಿಲ್ಲಾಧಿಕಾರಿ ಡಾ. ಹೆಚ್. ಎಲ್. ನಾಗರಾಜು ಮಾತನಾಡಿ, ಚಿಂಚಾ ಪಾನಕ, ಸೊಗಡೆ ಬೇರಿನ ಪಾನಕ ಸೇರಿದಂತೆ ಆಯುಷ್ ಇಲಾಖೆಯಿಂದ ವಿವಿಧ ರೀತಿಯ ಆರೋಗ್ಯಕರವಾದ ಪಾನೀಯವನ್ನು ತಯಾರಿಸಲಾಗುತ್ತದೆ. ಏಪ್ರಿಲ್ 20 ರಂದು ತಾಲ್ಲೂಕುವಾರು ನಡೆಯುವ ಎ.ಪಿ.ಆರ್.ಓ. ತರಬೇತಿಯಲ್ಲಿ ಭಾಗವಹಿಸುವ ಸಿಬ್ಬಂದಿಗಳಿಗೆ ಚಿಂಚಾ ಪಾನಕವನ್ನು ವಿತರಣೆ ಮಾಡುವಂತೆ ತಿಳಿಸಿದರು.
ಜಿಲ್ಲಾ ಆಯುಷ್ ಅಧಿಕಾರಿ ಡಾ.ಸೀತಾಲಕ್ಷ್ಮಿ ಬಿ.ಎಸ್ ಮಾತನಾಡಿ, ಹುಣಸೆ ಹಣ್ಣನ್ನು ಅಗತ್ಯ ಪ್ರಮಾಣದ ನೀರಿನಲ್ಲಿ ಇಡೀ ರಾತ್ರಿ ನೆನೆಸಿಟ್ಟು ಮರುದಿನ ಬೆಳಿಗ್ಗೆ ಅದನ್ನು ಶುದ್ಧವಾದ ಕೈಗಳಿಂದ ಚೆನ್ನಾಗಿ ಹಿಸುಕಿ ಸೋಸಿಕೊಳ್ಳಬೇಕು (ಗಾಡವಾದ ಹುಣಸೆ ಮಿಶ್ರಣ ಬಾಟಲಿಗಳಲ್ಲಿ ತುಂಬಿಸಿಕೊಂಡು ಪಾನಕ ತಯಾರಿಸುವಾಗ ಬೇಕಾದಷ್ಟನ್ನು ಬಳಸಿ). ಅಗತ್ಯ ಪ್ರಮಾಣದಷ್ಟು ನೀರನ್ನು ಪಾತ್ರೆಗೆ ಹಾಕಿಕೊಳ್ಳಿ. ಅಗತ್ಯ ಪ್ರಮಾಣದಷ್ಟು ಹುಣಸೆ ಹಣ್ಣಿನ ಮಿಶ್ರಣವನ್ನು ನೀರಿನ ಪಾತ್ರೆಗೆ ಹಾಕಿದ ನಂತರ ಬೆಲ್ಲದ ಪುಡಿಯನ್ನು ನೀರಿನಲ್ಲಿ ಹಾಕಿ ಚೆನ್ನಾಗಿ ಕರಗಿಸಿ ಜೀರಿಗೆ ಪುಡಿ, ಕಾಳು ಮೆಣಸಿನ ಪುಡಿ, ಸೈಂದವ ಲವಣವನ್ನು ಸೇರಿಸಬೇಕು ಎಂದರು.
ಚಿಂಚಾ ಪಾನಕವನ್ನು ತಯಾರಿಸುವಾಗ ಹುಣಸೆಹಣ್ಣು – 100 ಗ್ರಾಂ, ಬೆಲ್ಲದ ಪುಡಿ – 400 ಮಿಲಿ, ಜೀರಿಗೆ ಪುಡಿ – 10 ಗ್ರಾಂ, ಕಾಳು ಮೆಣಸಿನಪುಡಿ – 5 ಗ್ರಾಂ, ಸೈಂದವ ಲವಣ – 5 ಗ್ರಾಂ ಹಾಕಬೇಕು. 50 ರಿಂದ 100 ಮಿಲಿ ಸೇವನೆ ಮಾಡುವುದು ಉತ್ತಮ ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯತ್‌ನ ಮುಖ್ಯ ಕಾರ್ಯ ನಿರ್ವಾಹಣಾಧಿಕಾರಿ ಶೇಕ್ ತನ್ವೀರ್ ಆಸಿಫ್, ಜಿಲ್ಲಾ ಆಯುಷ್ ಇಲಾಖೆಯ ಡಾ.ಮಧುಮಾಲತಿ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
Mandya
ಮುಂಡುಗದೊರೆ ಪಂಚಾಯ್ತಿಗೆ ಪದ್ಮ ಅಧ್ಯಕ್ಷೆ

ಶ್ರೀರಂಗಪಟ್ಟಣ : ತಾಲೂಕಿನ ಮುಂಡುಗದೊರೆ ಗ್ರಾ. ಪಂಚಾಯಿತಿಗೆ ನೂತನ ಅಧ್ಯಕ್ಷರಾಗಿ ಪದ್ಮ ಡಿ.ಎಸ್.ಕೋಂ ಸೋಮೇಶ ಹಾಗು ಉಪಾಧ್ಯಕ್ಷರಾಗಿ ಗಾಯಿತ್ರಿ ಕೋಂ ಶಿವರಾಜ್ ಕುಮಾರ್ ಅವಿರೋಧವಾಗಿ ಆಯ್ಕೆಯಾದರು.
ನಿಕಟಪೂರ್ವ ಅಧ್ಯಕ್ಷ ಸೋಮಣ್ಣ ಹಾಗು ಉಪಾಧ್ಯಕ್ಷೆ ಸುಗುಣ ರಿಂದ ತೆರವಾಗಿದ್ದ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಈ ಇಬ್ಬರನ್ನು ಹೊರತು ಪಡಿಸಿ ಯಾರು ನಾಮಪತ್ರ ಸಲ್ಲಿಸಿದ ಕಾರಣ ಅವಿರೋಧವಾಗಿ ಆಯ್ಕೆಯಾಗಿರುವುದಾಗಿ ಚುನಾವಣಾಧಿಕಾರಿ ಎಇಇ ಮಂಜುನಾಥ್ ಘೋಷಣೆ ಮಾಡಿದರು.
ನೂತನ ಅಧ್ಯಕ್ಷ ಮತ್ತು ಉಪಾಧ್ಯಕ್ಷರನ್ನು ಗ್ರಾಮಸ್ಥರು ಹಾಗೂ ಮುಖಂಡರುಗಳು ಸನ್ಮಾನಿಸಿ ಅಭಿನಂಧಿಸಿದರು.
Mandya
ಶಾಲಾ ವಾರ್ಷಿಕೋತ್ಸವ ಹಾಗೂ ಸಾಂಸ್ಕೃತಿಕ ಹಬ್ಬ

ಮಂಡ್ಯ: ಎಸ್.ಬಿ ಎಜುಕೇಶನ್ ಟ್ರಸ್ಟ್, ಮಾಂಡವ್ಯ ಇಂಟಿಗ್ರೇಟೆಡ್ ಪದವಿ ಪೂರ್ವ ಕಾಲೇಜು, ಮಾಂಡವ್ಯ ಆಂಗ್ಲ ಮಾಧ್ಯಮ ಪ್ರೌಢಶಾಲೆ, ನೆಹರು ನಗರ, ಮಂಡ್ಯ, ಈ ಸಂಸ್ಥೆಯ ಶಾಲಾ ವಾರ್ಷಿಕೋತ್ಸವ ಹಾಗೂ ಸಾಂಸ್ಕೃತಿಕ ಹಬ್ಬದ ಕಾರ್ಯಕ್ರಮ ಶಾಲೆಯ ಆವರಣದಲ್ಲಿ ಎಸ್.ಬಿ ಎಜುಕೇಶನ್ ಟ್ರಸ್ಟ್ ನ ಅಧ್ಯಕ್ಷರಾದ ಡಾ. ಬಿ ಶಿವಲಿಂಗಯ್ಯರವರ ಅಧ್ಯಕ್ಷತೆಯಲ್ಲಿ ಜರುಗಿತು.
ಎಸ್.ಬಿ ಎಜುಕೇಶನ್ ಟ್ರಸ್ಟ್ ನ ಕಾರ್ಯದರ್ಶಿಗಳಾದ ಡಾ. ಮೀರಾ ಶಿವಲಿಂಗಯ್ಯರವರು ಕಾರ್ಯಕ್ರಮವನ್ನು ಉದ್ಘಾಟಿಸಿದರು. ಅತ್ಯುನ್ನತ ಶ್ರೇಣಿ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರವನ್ನು ಜಿಲ್ಲಾ ಸಂಪನ್ಮೂಲ ವ್ಯಕ್ತಿಗಳಾದ ರಾಹುಲ್ ಹಾಗೂ ವಿವಿಧ ಕ್ರೀಡೆಗಳಲ್ಲಿ ಪಾಲ್ಗೊಂಡು ಬಹುಮಾನವನ್ನು ಪಡೆದ ವಿದ್ಯಾರ್ಥಿಗಳಿಗೆ ಮಾಂಡವ್ಯ ಕಾಲೇಜಿನ ಪ್ರಾಂಶುಪಾಲರಾದ ಕೆ.ಕೆ. ಚಂದ್ರಶೇಖರ್ ರವರು ಬಹುಮಾನವನ್ನು ವಿತರಿಸಿದರು.
ಮುಖ್ಯ ಅತಿಥಿಗಳಾಗಿ ಎಕ್ಸಲೆಂಟ್ ಸ್ಕೂಲ್ ನ ಕಾರ್ಯದರ್ಶಿ ಅಬ್ದುಲ್ ಮುನೀರ್, ಮಹದೇಶ್ವರ ಚಿಲ್ಡ್ರನ್ ಸ್ಕೂಲ್ ನ ಕಾರ್ಯದರ್ಶಿ ಎಂ. ರವಿ, ಶ್ರೀ ಗುರುವಿಜ್ಞಾನ ವಿದ್ಯಾಲಯದ ಅಧ್ಯಕ್ಷರಾದ ಎಮ್.ಸಿ. ಶಿವಕುಮಾರ್, ಮಾಂಡವ್ಯ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ಮುಖ್ಯ ಶಿಕ್ಷಕರಾದ ಮಹದೇವಯ್ಯ, ಮಾಂಡವ್ಯ ಇಂಟಿಗ್ರೇಟೆಡ್ ಪದವಿ ಪೂರ್ವ ಕಾಲೇಜಿನ ಶೈಕ್ಷಣಿಕ ಪಾಲದಾರರಾದ ಎಂ. ಅವಿನಾಶ್ ಡಾ. ಎಂ. ಮೋಹನ್, ಡಿ.ಎಸ್. ರಾಘವೇಂದ್ರ (ವಿಜ್ಞಾನ ವಿಭಾಗ), ಶೈಕ್ಷಣಿಕ ಪಾಲುಗಾರರಾದ ವಾಣಿಜ್ಯ ವಿಭಾಗದ ಚನ್ನೇಶ್ ಹಾಗೂ ಅರ್ಚನಾರವರು ವೇದಿಕೆಯಲ್ಲಿ ಹಾಜರಿದ್ದರು.
ವೇದಿಕೆಯ ಕಾರ್ಯಕ್ರಮದ ನಂತರ ಕಾಲೇಜಿನ ವಿದ್ಯಾರ್ಥಿನಿಯರು ಹಾಗೂ ವಿದ್ಯಾರ್ಥಿಗಳು ಸಾಂಸ್ಕೃತಿಕ ಕಾರ್ಯಕ್ರಮವನ್ನು ನಡೆಸಿಕೊಟ್ಟರು.
Mandya
ಜೆ.ಡಿ.ಎಸ್ ತೆಕ್ಕೆಗೆ ಹುಲಿಕೆರೆ ಪಂಚಾಯಿತಿ

ನಾಗಮಂಗಲ : ಹುಲಿಕೆರೆ ಗ್ರಾಮ ಪಂಚಾಯಿತಿಯ ಈ ಹಿಂದೆ ಅಧ್ಯಕ್ಷರಾಗಿದ್ದ ಶಿವರಾಮು ರಾಜೀನಾಮೆ ನೀಡಿದ ಹಿನ್ನೆಲೆಯಲ್ಲಿ ಇಂದು ನೂತನ ಅಧ್ಯಕ್ಷರ ಚುನಾವಣೆ ಪ್ರಕ್ರಿಯೆ ನಡೆಯಿತು. ಎರಡು ನಾಮಪತ್ರ ಸಲ್ಲಿಕೆಯಾಗಿದ್ದು ಕಾಂತರಾಜು ಗೆ ಮೂರು ಮತಗಳು ಹಾಗೂ ಸುಮಾ ಚೇತನ್ ಕುಮಾರ್ ರವರಿಗೆ 9 ಮತಗಳ ಮೂಲಕ ನೂತನ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ ಎಂದು ಚುನಾವಣೆ ಅಧಿಕಾರಿಯಾದ ಸತೀಶ್ ರವರು ಘೋಷಣೆ ಮಾಡಿದರು.
ಇದೇ ಸಂದರ್ಭದಲ್ಲಿ ನೂತನ ಅಧ್ಯಕ್ಷರಾದ ಸುಮ ಚೇತನಕುಮಾರ್ ರವರು ಜೆಡಿಎಸ್ ಕಾರ್ಯಕರ್ತರು ಮತ್ತು ಅಭಿಮಾನಿಗಳಿಂದ ಅಭಿನಂದನೆ ಸ್ವೀಕರಿಸಿ ಮಾತನಾಡಿ ಹುಲಿಕೆರೆ ಗ್ರಾಮ ಪಂಚಾಯಿತಿಯು ಮಂಡ್ಯ ಜಿಲ್ಲೆಯಲ್ಲಿ ಉತ್ತಮ ಹೆಸರು ಪಡೆದಿರುವಂತಹ ಪಂಚಾಯಿತಿ. ಇಲ್ಲಿ ನಾನು ಅಧ್ಯಕ್ಷರಾಗಿರುವುದಕ್ಕೆ ಸಂತಸದ ವಿಚಾರ ನನ್ನ ಆಯ್ಕೆ ಮಾಡಿದ ಪಂಚಾಯತಿ ಆತ್ಮೀಯ ಸದಸ್ಯರು ನನ್ನ ಮೇಲೆ ನಂಬಿಕೆ ಇಟ್ಟು ಈ ಹುದ್ದೆಯನ್ನು ನೀಡಿರುವುದಕ್ಕೆ ಎಲ್ಲರಿಗೂ ಧನ್ಯವಾದ ಅರ್ಪಿಸುತ್ತೇನೆ ಎಂದರು.
ಗ್ರಾಮೀಣ ಪ್ರದೇಶದ ಕುಡಿಯುವ ನೀರು ರಸ್ತೆ ಮತ್ತು ವಿದ್ಯುತ್ ದೀಪಕ್ಕೆ ಮೊದಲನೇ ಆದ್ಯತೆ ನೀಡಿ ಮಹಾತ್ಮ ಗಾಂಧಿಯ ನರೇಗಾ ಯೋಜನೆಗೆ ಉತ್ತಮ ರೀತಿ ನಿರ್ವಹಣೆ ಮಾಡಿ ಗ್ರಾಮೀಣ ಪ್ರದೇಶದ ಅಭಿವೃದ್ಧಿಗೆ ಒತ್ತು ನೀಡುತ್ತೇನೆ ಎಂದು ಅವರು ತಿಳಿಸಿದರು.
ಇದೆ ಸಂದರ್ಭದಲ್ಲಿ ಜೆಡಿಎಸ್ ಪಕ್ಷದ ಕಾರ್ಯಕರ್ತರು ಮತ್ತೆ ಮುಖಂಡರು ನೂತನ ಅಧ್ಯಕ್ಷರನ್ನು ಸನ್ಮಾನಿಸಿ ಪಟಾಕಿ ಸಿಡಿಸಿ ಸಂಭ್ರಮಿಸಿದರು
ಗ್ರಾಮ ಪಂಚಾಯತಿ ಸದಸ್ಯರಾದ ತಿಮ್ಮೇಗೌಡ. ಲಕ್ಷ್ಮೀದೇವಮ್ಮ. ಶಿವಲಿಂಗಯ್ಯ. ಮಂಜುಳ. ತಿಮ್ಮೇಗೌಡ. ದಿನೇಶ್ ಕಲ್ಲೇನಹಳ್ಳಿ. ನರಗನಹಳ್ಳಿ ದೇವೇಗೌಡ.ಪುರಸಭೆ ಸದಸ್ಯ ಶಂಕರ್ಲಿಂಗೇಗೌಡ. ಪಡುವಲ ಪಟ್ಟಣ ಪುಟ್ಟರಾಜು.ಎಂ ಎನ್ ಸುರೇಶ್ ಜವರೇಗೌಡ ನೂತನ ಅಧ್ಯಕ್ಷರಿಗೆ ಶುಭ ಕೋರಿದರು.
-
Kodagu13 hours ago
ಮಡಿಕೇರಿಯಲ್ಲಿ ಡಿ ಗ್ರೂಪ್ ಹುದ್ದೆಗಳಿಗೆ ಅರ್ಜಿ ಆಹ್ವಾನ
-
Kodagu13 hours ago
ಸ್ಪ್ರಿಂಕ್ಲರ್ ಪೈಪಿಗೆ ಕೃಷಿ ಇಲಾಖೆಯಿಂದ ಸಹಾಯಧನ
-
Kodagu16 hours ago
ಕೊಡಗು ಗೌಡ ಸಮಾಜಗಳ ಒಕ್ಕೂಟ ತೀವ್ರ ಅಸಮಾಧಾನ: ಕಾರಣವೇನು?
-
Hassan22 hours ago
HASSAN: ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ಟಾಟಾ ವಿಂಗರ್ ವಾಹನ ಪಲ್ಟಿ
-
Mysore22 hours ago
ಅವಹೇಳನಕಾರಿ ಚಿತ್ರವುಳ್ಳ ಪೋಸ್ಟ್ : ಆರೋಪಿ ಬಂಧನಕ್ಕೆ ರಸ್ತೆ ತಡೆದು ಪ್ರತಿಭಟನೆ
-
Hassan18 hours ago
ಯುವ ಕಾಂಗ್ರೆಸ್ ಚುನಾವಣೆಯಲ್ಲಿ ಅಕ್ರಮ: ಮರು ಚುನಾವಣೆಗೆ ಒತ್ತಾಯ
-
State15 hours ago
ನಮ್ಮ ಮೆಟ್ರೋ ದರ ಏರಿಕೆ: ಸಿಎಂ ಸಿದ್ದರಾಮಯ್ಯ ಅವರ ಮಾಧ್ಯಮ ಪ್ರಕಟಣೆ
-
Hassan22 hours ago
ಶ್ರೀ ಲಕ್ಷ್ಮೀ ವೆಂಕಟೇಶ್ವರಸ್ವಾಮಿ ಜಾತ್ರಾ ಮಹೋತ್ಸವ: ಜೆಡಿಎಸ್ ಹಾಗೂ ಕಾಂಗ್ರೆಸ್ನಿಂದ ಪ್ರತ್ಯೇಕವಾಗಿ ಆರ್ಕೆಸ್ಟ್ರಾ ಆಯೋಜನೆ