Mandya
ಪಾರದರ್ಶಕ ಚುನಾವಣೆ ನಡೆಸಲು ಸಹಕರಿಸುವಂತೆ ಮನವಿ ಮಾಡಿದ ಜಿಲ್ಲಾಧಿಕಾರಿ

ಮಂಡ್ಯ: ಲೋಕಸಭೆ ಸಾರ್ವತ್ರಿಕ ಚುನಾವಣೆಯ ಮಾದರಿ ನೀತಿ ಸಂಹಿತೆ ಜಾರಿಯಲ್ಲಿದ್ದು, ಪಾರದರ್ಶನಕ ಚುನಾವಣೆ ನಡೆಸಲು ಸಹಕರಿಸಬೇಕು ಎಂದು ಜಿಲ್ಲಾಧಿಕಾರಿ ಡಾ.ಕುಮಾರ ಮನವಿ ಮಾಡಿದರು.
ಮಂಡ್ಯ ಲೋಕಸಭಾ ಕ್ಷೇತ್ರದ ಎಂಟು ಕ್ಷೇತ್ರಗಳಲ್ಲಿ 17,59,175 ಮತದಾರರಿದ್ದಾರೆ. 8,67,652 ಪುರುಷರು, 8,91,355 ಹಾಗೂ 168 ಇತರೆ ಮತದಾರರಿದ್ದಾರೆ, ಮಂಡ್ಯ ಜಿಲ್ಲೆಯ ಏಳು ವಿಧಾನಸಭಾ ಕ್ಷೇತ್ರಗಳಲ್ಲಿ 7,60,248 ಪುರುಷರು, 7,81,452 ಮಹಿಳೆಯರು ಹಾಗೂ 156 ಇತರೆ ಮತದಾರರು ಸೇರಿ 15,41,856 ಮತದಾರರಿದ್ದಾರೆ ಜಿಲ್ಲಾಧಿಕಾರಿ ಕಚೇರಿಯಲ್ಲಿ ಭಾನುವಾರ ನಡೆದ ಸುದ್ದಿಗೋಷ್ಠಿಯಲ್ಲಿ ವಿವರಿಸಿದರು.
ಮೈಸೂರು ಜಿಲ್ಲೆಯ ಕೆ.ಆರ್.ನಗರ ಕ್ಷೇತ್ರ ಮಂಡ್ಯ ಲೋಕಸಭಾ ಕ್ಷೇತ್ರ ವ್ಯಾಪ್ತಿಗೆ ಬರುವುದರಿಂದ ಆ ಕ್ಷೇತ್ರದೊಳಗೆ 1,07,404 ಪುರುಷರು, 1,09,903 ಮಹಿಳೆಯರು ಹಾಗೂ 12 ಇತರೆ ಮತದಾರರು ಸೇರಿ 1,17,319 ಮತದಾರರಿದ್ದಾರೆ ಎಂದರು.
ಈ ಬಾರಿ 35,140 ಯುವ ಮತದಾರರರು ಲೋಕಸಭಾ ಕ್ಷೇತ್ರದಲ್ಲಿ ಮತದಾರರ ಪಟ್ಟಿಗೆ ಸೇರ್ಪಡೆಯಾಗಿದ್ದಾರೆ. 18 ವರ್ಷ ತುಂಬಿದ 19,004 ಯುವಕರು, 16,127 ಯುವತಿಯರು ಹಾಗೂ 9 ಇತರೆ ಮತದಾರರಿದ್ದಾರೆ. ಇದರಲ್ಲಿ ಮಂಡ್ಯ ಜಿಲ್ಲೆಯಲ್ಲಿ 16,216 ಯುವಕರು, 13,958 ಯುವತಿಯರು, ಇತರೆ 9 ಮತದಾರರೊಂದಿಗೆ 30,183 ಯುವ ಮತದಾರರಿದ್ದರೆ, ಕೆ.ಆರ್.ನಗರ ಕ್ಷೇತ್ರದ 2,788 ಯುವಕರು, 2,169 ಯುವತಿಯರು ಸೇರಿ 4,957 ಯುವ ಮತದಾರರೂ ಮತಪಟ್ಟಿಯಲ್ಲಿದ್ದಾರೆ ಎಂದರು.
ಮಂಡ್ಯ ಲೋಕಸಭಾ ಕ್ಷೇತ್ರದೊಳಗೆ 85 ವರ್ಷ ಮೇಲ್ಪಟ್ಟವರು 23,044 ಮಂದಿ ಮತದಾರರಿದ್ದಾರೆ. ಇದರಲ್ಲಿ ಮಂಡ್ಯ ಜಿಲ್ಲೆಯೊಳಗೆ 85 ವರ್ಷ ಮೇಲ್ಪಟ್ಟವರು 10,336, 90 ವರ್ಷ ಮೇಲ್ಪಟ್ಟವರು 8425 ಹಾಗೂ 100 ವರ್ಷ ಮೇಲ್ಪಟ್ಟವರು 574 ಮಂದಿ ಸೇರಿ 19,335 ಮತದಾರರಿದ್ದರೆ, ಮೈಸೂರು ಜಿಲ್ಲೆಯ ಕೆ.ಆರ್.ನಗರ ಕ್ಷೇತ್ರದಲ್ಲಿ 85 ವರ್ಷ ಮೇಲ್ಪಟ್ಟ 1,917, 90 ವರ್ಷ ಮೇಲ್ಪಟ್ಟ 1,635 ಹಾಗೂ 100 ವರ್ಷ ಮೇಲ್ಪಟ್ಟ 157 ಮಂದಿ ಸೇರಿ 3,709 ಮಂದಿ ಮತದಾನದ ಹಕ್ಕನ್ನು ಹೊಂದಿದ್ದಾರೆ ಎಂದರು.
ಸೇವಾ ಮತದಾರರು 871 ಪುರುಷ, 90 ಮಹಿಳೆಯರು ಸೇರಿ 901 ಮತದಾರರಿದ್ದಾರೆ. ಇದರಲ್ಲಿ ಕೆ.ಆರ್.ನಗರ ಕ್ಷೇತ್ರ 261 ಪುರುಷರು, 7 ಮಹಿಳೆಯರು ಸೇರಿ 268 ಮತದಾರರಿದ್ದಾರೆ, ಎಂಟು ವಿಧಾನಸಭಾ ಕ್ಷೇತ್ರಗಳ 1,591 ಪ್ರದೇಶಗಳಲ್ಲಿ 292 ನಗರ ಹಾಗೂ 1,782 ಗ್ರಾಮೀಣ ಸೇರಿದಂತೆ 2,074 ಮತಕೇಂದ್ರಗಳನ್ನು ತೆರೆಯಲಾಗಿದೆ. ಮಂಡ್ಯ ಜಿಲ್ಲೆಯೊಳಗೆ 1,394 ಸ್ಥಳಗಳಲ್ಲಿ 260 ನಗರ ಹಾಗೂ 1,562 ಗ್ರಾಮೀಣ ಪ್ರದೇಶಗಳಲ್ಲಿ 1,822 ಮತಕೇಂದ್ರ ತೆರೆದಿದ್ದರೆ, ಕೆ.ಆರ್.ನಗರ ಕ್ಷೇತ್ರದ 197 ಪ್ರದೇಶಗಳಲ್ಲಿ 32 ನಗರ ಹಾಗೂ 220 ಗ್ರಾಮೀಣ ಪ್ರದೇಶದಲ್ಲಿ 252 ಮತಕೇಂದ್ರಗಳನ್ನು ತೆರೆಯಲಾಗಿದೆ ಎಂದು ಹೇಳಿದರು.
ಚುನಾವಣೆಯನ್ನು ಸುಸೂತ್ರವಾಗಿ ನಡೆಸುವ ಸಲುವಾಗಿ 151 ಸೆಕ್ಟರ್ ಅಧಿಕಾರಿಗಳನ್ನು ನೇಮಿಸಲಾಗಿದೆ. ಸ್ಟ್ಯಾಟಿಕ್ ಸರ್ವೇಲೆನ್ಸ್ ತಂಡ, ವೀಡಿಯೋ ಸರ್ವೇಲೆನ್ಸ್ ತಂಡಗಳನ್ನು ರಚಿಸಿ, ಅಧಿಕಾರಿ, ಸಿಬ್ಬಂದಿ ನೇಮಕಾತಿ ಮಾಡಲಾಗಿದೆ. ಜಿಲ್ಲೆಯಲ್ಲಿ ಚುನಾವಣಾ ನೀತಿ ಸಂಹಿತೆ ಉಲ್ಲಂಘನೆಯಾದ ಪ್ರಕರಣಗಳು ಕಂಡುಬಂದಲ್ಲಿ ಸಾರ್ವಜನಿಕರು ಲಿಖಿತವಾಗಿ ಅಥವಾ ದೂರವಾಣಿ ಮೂಲಕ ಸಂಪರ್ಕಿಸಿ ದೂರು ದಾಖಲಿಸಲು ಅನುಕೂಲವಾಗುವಂತೆ ಜಿಲ್ಲಾ ಮತ್ತು ತಾಲ್ಲೂಕು ಮಟ್ಟದಲ್ಲಿ ತಂಡಗಳನ್ನು ರಚಿಸಲಾಗಿದೆ ಎಂದರು.
ಮಂಡ್ಯ ಲೋಕಸಭಾ ಕ್ಷೇತ್ರ ವ್ಯಾಪ್ತಿಯೊಳಗೆ 25 ಚೆಕ್ ಪೋಸ್ಟ್‌ಗಳನ್ನು ಸ್ಥಾಪಿಸುವುದಕ್ಕೆ ಸ್ಥಳ ಗುರುತಿಸಲಾಗಿದೆ. ಮಳವಳ್ಳಿ-5, ಮದ್ದೂರು-4, ಶ್ರೀರಂಗಪಟ್ಟಣ-5, ನಾಗಮಂಗಲ-4, ಕೆ.ಆರ್.ಪೇಟೆ-3 ಹಾಗೂ ಕೆ.ಆರ್.ನಗರದಲ್ಲಿ 4 ಚೆಕ್‌ಪೋಸ್ಟ್ ಸ್ಥಾಪನೆಗೆ ಸ್ಥಳ ಗುರುತಿಸಲಾಗಿದೆ. ಈಗಾಗಲೇ 19 ಚೆಕ್‌ಪೋಸ್ಟ್‌ಗಳನ್ನು ಸ್ಥಾಪಿಸಿ ಸಿಸಿ ಟಿವಿ ಕ್ಯಾಮೆರಾ ಅಳವಡಿಸಲಾಗಿದೆ. ಇದರ ದೃಶ್ಯಾವಳಿಗಳನ್ನು ಜಿಲ್ಲಾ ಹಾಗೂ ರಾಜ್ಯಮಟ್ಟದಲ್ಲೂ ವೀಕ್ಷಣೆಗೆ ಅವಕಾಶ ಮಾಡಿದೆ. ವಿಡಿಯೋಗ್ರಾಫರ್‌ಗಳನ್ನು ಅಲ್ಲಿಗೆ ನೇಮಿಸಲಾಗಿದೆ. ವಾಹನಗಳನ್ನು ಯಾವ ರೀತಿ ತಪಾಸಣೆ ಮಾಡಬೇಕೆಂಬ ಬಗ್ಗೆ ಅಧಿಕಾರಿಗಳು, ಸಿಬ್ಬಂದಿಗೆ ತರಬೇತಿ ನೀಡಿದ್ದಾರೆ ಎಂದು ವಿವರಿಸಿದರು.
10 ಲಕ್ಷಕ್ಕಿಂತ ಹೆಚ್ಚು ಹಣವನ್ನು ಬ್ಯಾಂಕ್ ಖಾತೆಯಿಂದ ವರ್ಗಾವಣೆ ಮಾಡಿದರೆ ಆದಾಯ ಮತ್ತು ತೆರಿಗೆ ಇಲಾಖೆ ಅಧಿಕಾರಿಗಳಿಗೆ ಮಾಹಿತಿ ನೀಡಿ ಪರಿಶೀಲನೆಗೊಳಪಡಿಸಲಾಗುವುದು. 50 ಸಾವಿರಕ್ಕಿಂತ ಹೆಚ್ಚು ಹಣವನ್ನು ಕೊಂಡೊಯ್ಯುವುದು ಕಂಡುಬಂದಲ್ಲಿ ಅದನ್ನೂ ಪರಿಶೀಲಿಸಲಾಗುವುದು. ದಾಖಲೆಗಳು ಸಮರ್ಪಕವಾಗಿದ್ದರೆ ಅಲ್ಲಿಯೇ ಬಿಡುಗಡೆ ಮಾಡಲಾಗುವುದು ಎಂದರು.
ಚುಉನಾವಣಾ ಸಂಬಂಧಿತ ನೀತಿ ಸಂಹಿತೆ ಸಂಹಿತೆ ಉಲ್ಲಂಘನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾರ್ವಜನಿಕರು ದೂರು ಸಲ್ಲಿಸಲು ಚುನಾವಣಾ ಆಯೋಗವು ಸಿ-ವಿಜಿಲ್ ಮೊಬೈಲ್ ಆ್ಯಪ್ಗಳನ್ನು ಅಭಿವೃದ್ಧಿಪಡಿಸಿದೆ. ಈ ಆ್ಯಪ್ ಮೂಲಕ ಜಿಲ್ಲೆಯಲ್ಲಿ ಚುನಾವಣೆಗೆ ಸಂಬಂಧಿಸಿದ ನೀತಿ ಸಂಹಿತೆ ಉಲ್ಲಂಘನೆಗಳು ಕಂಡುಬಂದಲ್ಲಿ ಫೋಟೋ, ವಿಡಿಯೋ ಮುಖಾಂತರ ದೂರು ದಾಖಲಿಸಬಹುದು. ದೂರುದಾರರ ಹೆಸರನ್ನು ಗೌಪ್ಯವಾಗಿಡಲಾಗುವುದು ಎಂದು ತಿಳಿಸಿದರು.
ಸಿ-ವಿಜಿಲ್ ಮೊಬೈಲ್ ಆ್ಯಪ್ ಮೂಲಕ ಸಾರ್ವಜನಿಕರು ಸಲ್ಲಿಸುವ ದೂರುಗಳನ್ನು 100 ನಿಮಿಷಗಳೊಳಗೆ ಇತ್ಯರ್ಥಪಡಿಸುವುದು. ದೂರು ಬಂದ ಸಮೀಪದಲ್ಲಿರುವ ತಂಡಕ್ಕೆ ಕಂಟ್ರೋಲ್ ರೂಂನಿಂದ ಮಾಹಿತಿ ರವಾನೆಯಾಗಲಿದೆ. ತಕ್ಷಣವೇ ಅವರು ಕಾರ್ಯೋನ್ಮುಖರಾಗುತ್ತಾರೆ ಎಂದರು.
ರಾಜಕೀಯ ಪಕ್ಷಗಳು ಸಭೆ-ಸಮಾರಂಭಗಳನ್ನು ನಡೆಸಲು, ಚುನಾವಣಾ ಪ್ರಚಾರ ಕಾರ್ಯಗಳಿಗೆ ಅನುಮತಿ ಪಡೆಯಲು ಸುವಿಧ ಆ್ಯಪ್ ಮೂಲಕ ಅನುಮತಿ ಪಡೆಯಬಹುದು. ಜಿಲ್ಲಾಮಟ್ಟದಲ್ಲಿ ಜಿಲ್ಲಾ ಚುನಾವಣಾಧಿಕಾರಿಗಳು ಹಾಗೂ ತಾಲೂಕು ಮಟ್ಟದಲ್ಲಿ ಸಹಾಯಕ ಚುನಾವಣಾಧಿಕಾರಿಗಳಿಂದ ಅನುಮತಿ ಪಡೆಯಬಹುದು. ಅಜರ್ಿಗಳ ಶೀಘ್ರ ವಿಲೇವಾರಿ ಏಕಗವಾಕ್ಷಿ ಕೇಂದ್ರಗಳನ್ನು ಸ್ಥಾಪಿಸಲಾಗಿದೆ ಎಂದು ತಿಳಿಸಿದರು.
ಜಿಲ್ಲೆಯಲ್ಲಿ 634 ಆಯುಧಗಳಿಗೆ ಪರವಾನಗಿ ನೀಡಲಾಗಿದ್ದು, ಚುನಾವಣೆ ಹಿನ್ನೆಲೆಯಲ್ಲಿ ಸಂಬಂಧಪಟ್ಟ ಪೊಲೀಸ್ ಠಾಣೆಯಲ್ಲಿ ಶಸ್ತ್ರಾಗಳನ್ನು ಠೇವಣಿ ಇಡಲು ಸೂಚಿಸಲಾಗಿದೆ. ಈ ಅವಧಿಯಲ್ಲಿ ಯಾವುದೇ ರೀತಿಯ ಮದ್ದು-ಗುಂಡು, ಸ್ಪೋಟಕಗಳನ್ನು ಸಾಗಿಸದಂತೆ ಎಚ್ಚರಿಕೆ ನೀಡಲಾಗಿದೆ ಎಂದರು.
ಲೋಕಸಭಾ ಸಾರ್ವತ್ರಿಕ ಚುನಾವಣೆ ಹಿನ್ನೆಲೆಯಲ್ಲಿ ಮಾ.25 ರವರೆಗೆ ಮತಪಟ್ಟಿಗೆ ಹೆಸರು ಸೇರಿಸಲು ಅವಕಾಶ ಕಲ್ಪಿಸಲಾಗಿದೆ. ಈಗಾಗಲೇ ಮತದಾರರ ಅಂತಿಮ ಪಟ್ಟಿಯನ್ನು ಪ್ರಕಟಿಸಲಾಗಿದೆ. ಇನ್ನೂ ಮತಪಟ್ಟಿಗೆ ಸೇರ್ಪಡೆಯಾಗಲು ಸಲ್ಲಿಸಿರುವ 20 ಅರ್ಜಿಗಳು ಪರಿಶೀಲನಾ ಹಂತದಲ್ಲಿವೆ. ಮಾ.25 ರೊಳಗೆ ಪಟ್ಟಿಯಲ್ಲಿ ಹೆಸರು ಕೈಬಿಟ್ಟುಹೋಗಿದ್ದರೆ ಅವರನ್ನು ಸೇರಿಸಲು ಅವಕಾಶ ನೀಡಲಾಗಿದೆ ಎಂದು ಹೇಳಿದರು.
ಲೋಕಸಭಾ ವ್ಯಾಪ್ತಿಯಲ್ಲಿ 22,202 ಅಂಗವಿಕಲರಿದ್ದು, ಶೇ.40ಕ್ಕಿಂತ ಹೆಚ್ಚು ಅಂಗವೈಕಲ್ಯವಿದ್ದವರಿಗೆ ಮನೆಯಿಂದಲೇ ಮತದಾನ ಮಾಡುವುದಕ್ಕೆ ಅವಕಾಶ ನೀಡಲಾಗುವುದು. ಮನೆಯಿಂದ ಮತದಾನ ಮಾಡಲು ಬಯಸುವವರು ಶೇ.40 ಹಾಗೂ ಅದಕ್ಕಿಂತ ಹೆಚ್ಚು ಅಂಗವೈಕಲ್ಯವಿರುವ ದೃಢೀಕರಣ ಪತ್ರ ಸಲ್ಲಿಸಬೇಕು. ಅಂತಹವರ ಮನೆಗಳಿಗೆ ಚುನಾವಣಾ ಸಿಬ್ಬಂದಿ ಕಳುಹಿಸಿ ಮತದಾನ ಮಾಡುವುದಕ್ಕೆ ಅವಕಾಶ ಕಲ್ಪಿಸಿಕೊಡಲಾಗುವುದು ಎಂದು ತಿಳಿಸಿದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎನ್.ಯತೀಶ್ ಮಾತನಾಡಿ, ಲೋಕಸಭಾ ಚುನಾವಣಾ ಹಿನ್ನೆಲೆಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ಸಲುವಾಗಿ ರೌಡಿಗಳ ವಿಚಾರಣೆ ನಡೆಸಲಾಗುತ್ತಿದೆ. ಎಂಟು ಮಂದಿ ಗಡಿಪಾರಿಗೆ ಉಪವಿಭಾಗಾಧಿಕಾರಿಗಳಿಗೆ ಶಿಫಾರಸ್ಸು ಮಾಡಲಾಗಿದೆ. ಕಾನೂನು ಸುವ್ಯವಸ್ಥೆಗೆ ಭಂಗ ತರದಂತೆ ರೌಡಿಗಳನ್ನು ಕರೆಸಿ ವಿಚಾರಣೆ ಮಾಡಲಾಗುತ್ತಿದೆ. ಅಹಿತಕರ ಘಟನೆಗಳನ್ನು ಉಂಟುಮಾಡುವ ರೌಡಿಗಳನ್ನು ಗುರುತಿಸಲಾಗುತ್ತಿದೆ. ಈಗಾಗಲೇ ಎಂಟು ಮಂದಿ ರೌಡಿಗಳನ್ನು ಗಡಿಪಾರು ಮಾಡುವಂತೆ ಶಿಫಾರಸು ಮಾಡಲಾಗಿದೆ. ಇನ್ನೂ ಹಲವರ ವಿಚಾರಣೆ ನಡೆಸಿ ಗಡಿಪಾರಿಗೆ ಸೂಚಿಸಲಾಗುವುದು ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.
ಜಿ.ಪಂ.ಸಿಇಓ ಶೇಖ್ ತನ್‌ವೀರ್ ಆಸಿಫ್, ಹೆಚ್ಚುವರಿ ಜಿಲ್ಲಾಧಿಕಾರಿ ಎಚ್.ಎಲ್.ನಾಗರಾಜು ಭಾಗವಹಿಸಿದ್ದರು.
Mandya
ಜನಮಿತ್ರ ಫಲಶೃತಿ: ಹೆಬ್ಬಾಡಿಹುಂಡಿ ಗ್ರಾಮದ ಸ್ಮಶಾನ ಜಾಗದ ರಸ್ತೆ ಬೇಲಿಗೆ ಸಿಗ್ತು ಉತ್ತರ

ಮಂಡ್ಯ: ಪೂರ್ವಿಕರ ಕಾಲದಿಂದಲೂ ಗ್ರಾಮದ ಸ್ಮಶಾನ, ಧನ ಕರುಗಳು ಕುಡಿಯಲು ಕೆರೆಕಟ್ಟೆ ಹಾಗೂ ಜಮೀನುಗಳಿಗೆ ತೆರಳಲು ಬಳಸುತ್ತಿದ್ದ ರಸ್ತೆಗೆ ಅಡ್ಡಲಾಗಿ ರೈತನೋರ್ವ ತಂತಿ ಬೇಲಿ ಹಾಕಿಕೊಂಡಿದ್ದಕ್ಕೆ ಆಕ್ರೋಶಗೊಂಡ ಗ್ರಾಮಸ್ಥರು ರಸ್ತೆ ಮದ್ಯೆದಲ್ಲಿಯ ಮೃತನ ಶವ ಸುಟ್ಟ ಘಟನೆಗೆ ಸಂವಂಧಿಸಿದಂತೆ ಜನಮಿತ್ರ ಪತ್ರಿಕೆ ಹಾಗೂ ಡಿಜಿಟಲ್ ವರದಿಗೆ ಫಲಶೃತಿ ದೊರೆತಿದೆ.
ಜನಮಿತ್ರ ವರದಿಯಿಂದ ಎಚ್ಚತ್ತ ತಾಲ್ಲೂಕು ಆಡಳಿತ ತಹಸೀಲ್ದಾರ್ ಪರಶುರಾಮ್ ಸತ್ತಿಗೇರಿ ನೇತೃತ್ವದಲ್ಲಿ ಅಧಿಕಾರಿಗಳ ತಂಡ ಗ್ರಾಮಕ್ಕೆ ದೌಡಾಯಿಸಿ, ರಸ್ತೆಯ ಇಕ್ಕೆಲಗಳ ಇಬ್ಬರೂ ರೈತರಿಂದ ಹತ್ತು, ಹತ್ತು ಅಡಿ ಜಾಗವನ್ನು ಸ್ಮಶಾಬದ ರಸ್ತೆಗೆ ಬಿಡಿಸಿ ಸಫಲತೆ ಕಂಡಿದೆ.
ಜನಮಿತ್ರ ವರದಿಯಿಂದ ಎಚ್ಚೆತ್ತ ತಾಲ್ಲೂಕು ಆಡಳಿತ ತಹಸೀಲ್ದಾರ್ ಪರಶುರಾಮ್ ಸತ್ತಿಗೇರಿ ನೇತೃತ್ವದಲ್ಲಿ ಗ್ರಾಮಕ್ಕೆ ತೆರಳಿದ್ದ ಅಧಿಕಾರಿಗಳ ತಂಡ, ಸ್ಮಶಾನ ಹಾಗೂ ಜನ ಜಾನುವಾರುಗಳ ಕುಡಿಯುವ ನೀರಿಗಾಗಿ ತೆರಳುವ ರಸ್ತೆಯ ಸಮಸ್ಯೆಯನ್ನು ಇತ್ಯರ್ಥ ಪಡಿಸಿದ್ದಾರೆ.
ರಸ್ತೆಯ ಎರಡೂ ಬದಿಯಲ್ಲಿನ ರೈತರಾದ ಅಂಧಾನಿಗೌಡ ಹಾಗೂ ಯಶೋಧಮ್ಮ ರವರಿಂದ ತಲಾ ಹತ್ತು ಹತ್ತು ಅಡಿ ಜಾಗವನ್ನು ಸ್ಮಶಾನದ ರಸ್ತೆಗೆ ಬಿಟ್ಟುಕೊಡುವಂತೆ ಮನವಲೈಸಿದ್ದಾರೆ.
ತಾಲ್ಲೂಕು ಆಡಳಿತದ ಮದ್ಯಸ್ಥಿಕೆಯಿಂದಾಗಿ ಇದೀಗ ಹೆಬ್ಬಾಡಿಹುಂಡಿ ಗ್ರಾಮಸ್ಥರು ನೆಮ್ಮದಿಯ ನಿಟ್ಟುಸಿರು ಬಿಟ್ಟಿದ್ದು, ಜನಮಿತ್ರ ಪತ್ರಿಕೆ ಹಾಗೂ ಜನಮಿತ್ರ ಡಿಜಿಜಿಟಲ್ ನ್ಯೂಸ್ ಗೆ ಎಲ್ಲೆಡೆ ಮೆಚ್ಚುಗೆ ವ್ಯಕ್ತವಾಗಿದೆ.
Mandya
ಸರ್ಕಾರದ ಯೋಜನೆಗಳನ್ನು ಸದ್ಬಳಕೆ ಮಾಡಿಕೊಳ್ಳಿ : ಸಚಿವ ಚೆಲುವರಾಯಸ್ವಾಮಿ

ನಾಗಮಂಗಲ : ಸರ್ಕಾರವು ವಿವಿಧ ಯೋಜನೆಗಳನ್ನು ಜಾರಿಗೊಳಿಸುತ್ತಿದ್ದು, ಆ ಯೋಜನೆಗಳನ್ನು ಸದುಪಯೋಗ ಮಾಡಿಕೊಳ್ಳುವಂತೆ ಸಚಿವ ಚೆಲುವರಾಯಸ್ವಾಮಿ ತಿಳಿಸಿದರು.
ಅವರು ಪಟ್ಟಣದ ಕಾಂಗ್ರೆಸ್ ಕಚೇರಿಯ ಮುಂಬಾಗದಲ್ಲಿ ಅಂಗವಿಕಲರಿಗೆ 2024 -25 ನೇ ಸಾಲಿನ ಶಾಸಕರ ಪ್ರದೇಶ ಅಭಿವೃದ್ಧಿ ನಿಧಿಯಿಂದ ತ್ರಿಚಕ್ರ ವಾಹನ ಸಮಾರಂಭದಲ್ಲಿ ಭಾಗವಹಿಸಿ ಸುಮಾರು 25 ಫಲಾನುಭವಿಗಳಿಗೆ ವಾಹನ ವಿತರಣೆ ಮಾಡುತ್ತ ಮಾತನಾಡಿದರು.
ಅಂಗವಿಕಲರು ದಿನನಿತ್ಯದ ತಮ್ಮ ವ್ಯವಹಾರಿಕ ಕಾರ್ಯನಿಮಿತ್ತ ಕೆಲಸಗಳಿಗೆ ತ್ರಿಚಕ್ರ ವಾಹನ ಬಳಸುವ ಮುಖಾಂತರ ಸರ್ಕಾರದ ಇಂತಹ ಸೌವಲತ್ತುಗಳನ್ನು ಸದುಪಯೋಗ ಮಾಡಿಕೊಂಡು ಇತರೆ ಚಟುವಟಿಕೆಗಳಲ್ಲಿ ಈ ವಾಹನಗಳನ್ನು ಬಳಸದಂತೆ ತಮ್ಮ ಸ್ವಂತ ವಾಹನಗಳಾಗಿ ಬಳಸಿಕೊಳ್ಳುವ ಮುಖಾಂತರ ಸರ್ಕಾರದ ಯೋಜನೆಗಳನ್ನು ಪಡೆದು ಅನುಕೂಲ ಮಾಡಿಕೊಳ್ಳುವಂತೆ ಈ ಸಂದರ್ಭದಲ್ಲಿ ಕರೆ ನೀಡಿದರು.
ಇದೇ ಸಂದರ್ಭದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ರಾಜೇಶ್ ಕೃಷಿ ವಿವಿ ಆಡಳಿತ ಮಂಡಳಿ ನಿರ್ದೇಶಕರಾದ ದಿನೇಶ್. ಎಚ್ ಟಿ ಕೃಷ್ಣೆ ಗೌಡ. ಪುರಸಭಾ ಅಧ್ಯಕ್ಷರು ಗಣ್ಯರು ಕಾಂಗ್ರೆಸ್ ಮುಖಂಡರುಗಳು ಉಪಸ್ಥಿತರಿದ್ದರು.
Mandya
ವ್ಯಕ್ತಿಯ ಬಗ್ಗೆ ಮಾಹಿತಿ ಸಿಕ್ಕರೆ ಕೂಡಲೇ ತಿಳಿಸಿ

ಮಂಡ್ಯ : ಈ ಚಿತ್ರದಲ್ಲಿರುವ ವ್ಯಕ್ತಿ ಇಂದು (ಮಾ.14) ರಂದು ಮಂಡ್ಯ ರೈಲು ನಿಲ್ದಾಣದಲ್ಲಿ ರೈಲುಗಾಡಿಯಿಂದ ಬಿದ್ದು ಗಾಯಗೊಂಡಿರುತ್ತಾರೆ.
ಸದರಿಯವರ ಹೆಸರು ಮತ್ತು ವಿಳಾಸ ಪತ್ತೆಯಾಗಿರುವುದಿಲ್ಲ ಯಾವುದಾದರೂ ಪೊಲೀಸ್ ಠಾಣೆಯಲ್ಲಿ ಮನುಷ್ಯ ಕಾಣೆಯಾದ ಪ್ರಕರಣ ದಾಖಲಾಗಿದ್ದಲ್ಲಿ, ಅಥವ ಇವರ ಬಗ್ಗೆ ಮಾಹಿತಿ ಗೊತ್ತಿದ್ದಲ್ಲಿ ಮಾಹಿತಿ ನೀಡಲು
ರೈಲ್ವೆ ಹೊರ ಉಪ ಠಾಣೆ ಮಂಡ್ಯ ಕೋರಿದೆ.
-
Mandya7 hours ago
ಜನಮಿತ್ರ ಫಲಶೃತಿ: ಹೆಬ್ಬಾಡಿಹುಂಡಿ ಗ್ರಾಮದ ಸ್ಮಶಾನ ಜಾಗದ ರಸ್ತೆ ಬೇಲಿಗೆ ಸಿಗ್ತು ಉತ್ತರ
-
Hassan14 hours ago
ಹಾಸನದಲ್ಲಿ ಭಾರೀ ಮಳೆ: ಅಪಾರ ಪ್ರಮಾಣದ ಬೆಳೆ ಹಾನಿ
-
Mandya10 hours ago
ಜೆಎಸ್ಎಸ್ ಕಾಲೇಜಿನಲ್ಲಿ ಪತ್ರಿಕಾ ಬರಹ ಕುರಿತು ಕಾರ್ಯಾಗಾರ
-
Kodagu12 hours ago
ರಸ್ತೆಯ ಅಭಿವೃದ್ಧಿ ಕಾಮಗಾರಿಗೆ ಭೂಮಿ ಪೂಜೆ
-
Mandya9 hours ago
ವ್ಯಕ್ತಿಯ ಬಗ್ಗೆ ಮಾಹಿತಿ ಸಿಕ್ಕರೆ ಕೂಡಲೇ ತಿಳಿಸಿ
-
Hassan13 hours ago
ಕ್ಷಯ ಮುಕ್ತ ಭಾರತವನ್ನಾಗಿ ಮಾಡಲು ಎಲ್ಲಾರೂ ಕೈಜೋಡಿಸಿ: ಡಿಸಿ ಸಿ. ಸತ್ಯಭಾಮ
-
Kodagu10 hours ago
ನಿವೃತ್ತ ಶಿಕ್ಷಕಿಯಿಂದ ಕಕ್ಕಬ್ಬೆ ಯುವಕಪಾಡಿ ಸರಕಾರಿ ಶಾಲೆಯ ವಿದ್ಯಾರ್ಥಿಗಳಿಗೆ ಚಾರಣ ಭಾಗ್ಯ
-
Kodagu7 hours ago
ಮಡಿಕೇರಿಯಿಂದ ಬೆಂಗಳೂರು ವಿಮಾನ ನಿಲ್ದಾಣಕ್ಕೆ ಪ್ಲೈಬಸ್ ಸಂಚಾರ