Kodagu
ನಾಪೋಕ್ಲು ನಾಡು ಗ್ರಾಹಕರ ಸಹಕಾರ ಸಂಘದ ಅಧ್ಯಕ್ಷರಾಗಿ ಪಟ್ರಪಂಡ ಮೋಹನ್ ಮುದ್ದಪ್ಪ ಆಯ್ಕೆ
ವರದಿ :ಝಕರಿಯ ನಾಪೋಕ್ಲು
ನಾಪೋಕ್ಲು : ನಾಪೋಕ್ಲು ನಾಡು ಗ್ರಾಹಕರ ಸಹಕಾರ ಸಂಘ (ನಂ274)ಇದರ ಅಧ್ಯಕ್ಷರಾಗಿ ಪಟ್ರಪಂಡ ಮೋಹನ್ ಮುದ್ದಪ್ಪ, ಉಪಾಧ್ಯಕ್ಷರಾಗಿ ನಾಟೋಳಂಡ ಕಸ್ತೂರಿ ಉತ್ತಪ್ಪ ಮೂರನೇ ಬಾರಿ ಆಯ್ಕೆಯಾಗಿದ್ದಾರೆ.
ನಾಪೋಕ್ಲುವಿನ ಗ್ರಾಹಕರ ಸಹಕಾರ ಸಂಘದ ಸಭಾಂಗಣದಲ್ಲಿ ನಡೆದ ಆಯ್ಕೆ ಪ್ರಕ್ರಿಯೆಯಲ್ಲಿ ಇವರನ್ನು ಆಯ್ಕೆ ಮಾಡಲಾಯಿತು.
ನಿರ್ದೇಶಕರುಗಳಾಗಿ ಕುಲ್ಲೆಟಿರ ಅರುಣ್ ಬೇಬ, ಎನ್.ಟಿ. ಮುತ್ತಪ್ಪ, ಬಿ.ಕೆ.ಕುಟ್ಟಪ್ಪ, ಬಿ.ಎ. ಪೊನ್ನಯ್ಯ,ಕೆ.ಕೆ.ಗಣೇಶ್, ಎಚ್.ಎ.ಬೊಳ್ಳು,ಕೆ.ಗಣಪತಿ ಮುತ್ತಮ್ಮ, ಪಾಡಿಯಮ್ಮನ ಎ. ಮಹೇಶ್, ಕೆ.ಟಿ ಗಣಪತಿ, ಆಯ್ಕೆಯಾಗಿದ್ದಾರೆ.ಈ ಸಂದರ್ಭ ಸಂಘದ ಕಾರ್ಯ ನಿರ್ವಹಣಾಧಿಕಾರಿ ಕೆ.ಎಸ್. ತಿಮ್ಮಯ್ಯ ಹಾಜರಿದ್ದರು
Kodagu
ಫೆ.7 ರಂದು ಕೊಡವ ಪುಸ್ತಕ ಪತ್ತಾಯ ಉದ್ಘಾಟನಾ ಸಮಾರಂಭ


Kodagu
ಫೆ.10ಕ್ಕೆ ರಾಷ್ಟ್ರೀಯ ಜಂತುಹುಳು ನಿವಾರಣ ಕಾರ್ಯಕ್ರಮ: 1,31,783 ಮಕ್ಕಳಿಗೆ ಮಾತ್ರೆ ವಿತರಣೆ
ಮಡಿಕೇರಿ : ಹುಟ್ಟಿನಿಂದ 16 ವರ್ಷಗಳವರೆಗೆ ನೀಡುವ ವಿವಿಧ ಲಸಿಕೆಗಳನ್ನು ನೀಡಿರುವ ಬಗ್ಗೆ ಪ್ರಗತಿ ಪರಿಶೀಲನೆ ಮಾಡಲಾಯಿತು. ಈ ಸಂದರ್ಭದಲ್ಲಿ ವಿರಾಜಪೇಟೆ ಮತ್ತು ಮಡಿಕೇರಿ ತಾಲೂಕಿನಲ್ಲಿ ನಿಗದಿತ ಗುರಿ ತಲುಪಿರುವುದಿಲ್ಲ, ಇದರ ಬಗ್ಗೆ ಹೆಚ್ಚಿನ ಗಮನ ಹರಿಸಿ ಎಲ್ಲಾ ಮಕ್ಕಳಿಗೂ ಎಲ್ಲಾ ನಿಗದಿತ ಲಸಿಕೆಗಳನ್ನು ನೀಡಲು ಮಾನ್ಯ ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ಅವರು ಸೂಚಿಸಿದರು.
ನಂತರ ವಿಪಿಡಿ ಸರ್ವೇಕ್ಷಣಾ ಕಾರ್ಯಕರ್ಮದಲ್ಲಿ ನಿಗದಿತ ಗುರಿ ತಲುಪಿರುವುದಾಗಿ ಜಿಲ್ಲಾ ಆರ್‌ಸಿಎಚ್ ಅಧಿಕಾರಿ ಅವರು ಮಾಹಿತಿ ನೀಡಿದರು.

ರಾಷ್ಟ್ರೀಯ ಜಂತುಹುಳು ನಿವಾರಣ ಕಾರ್ಯಕ್ರಮವು ಜಿಲ್ಲೆಯಲ್ಲಿ ಫೆ.10 ರಂದು ನಡೆಯಲಿದ್ದು, 1 ರಿಂದ 19 ವರ್ಷದೊಳಗಿನ ಎಲ್ಲಾ ಮಕ್ಕಳಿಗೆ ಜಂತುಹುಳು ನಿವಾರಣೆಯ ಅಲ್ಪೆಂಡಜೋಲ್ ಮಾತ್ರೆ ವಿತರಿಸಬೇಕು. ಅರ್ಹ ಮಕ್ಕಳು ಇದರಿಂದ ಹೊರಗುಳಿಯಬಾರದು ಎಂದು ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ಅವರು ತಿಳಿಸಿದರು.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ಸರ್ಕಾರದ ನಿರ್ದೇಶನದಂತೆ ಕಾರ್ಯಕ್ರಮ ಅನುಷ್ಠಾನಕ್ಕೆ ಕ್ರಮವಹಿಸುವಂತೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.
ಆರ್‌ಸಿಎಚ್ ಅಧಿಕಾರಿ ಡಾ.ಮಧುಸೂದನ್ ಅವರು ಮಾತನಾಡಿ, ಜಂತು ಹುಳು ಇರುವ ಮಕ್ಕಳು ಅಪೌಷ್ಠಿಕತೆ ಮತ್ತು ರಕ್ತಹೀನತೆಯಿಂದ ಬಳಲುತ್ತಾರೆ. ಆದರಿಂದ ಅವರ ದೈಹಿಕ, ಮಾನಸಿಕ ಬೆಳವಣಿಗೆ ಕುಂಠಿತವಾಗುವುದರೊಂದಿಗೆ ಶೈಕ್ಷಣಿಕ ಬೆಳವಣಿಗೆ ಸಹ ಕಡಿಮೆಯಾಗುವ ಕಾರಣದಿಂದ ಎಲ್ಲಾ 1 ರಿಂದ 19 ವರ್ಷದ ಮಕ್ಕಳು ಜಂತು ಹುಳು ನಿವಾರಣೆ ಮಾತ್ರೆಗಳನ್ನು ತೆಗೆದುಕೊಳ್ಳಬೇಕು ಎಂದರು.

ಫೆ.10 ರಂದು ಎಲ್ಲೆಡೆ ರಾಷ್ಟ್ರೀಯ ಜಂತು ಹುಳು ನಿವಾರಣಾ ಕಾರ್ಯಕ್ರಮ(ಎನ್.ಡಿ.ಡಿ) ನಡೆಯಲಿದ್ದು, ಫೆ.16 ರಂದು ಮಾಪ್ ಆಪ್ ದಿನ ಕಾರ್ಯಕ್ರಮ ನಡೆಯಲಿದೆ. ರಾಷ್ಟ್ರೀಯ ಜಂತು ಹುಳು ನಿವಾರಣಾ ಕಾರ್ಯಕ್ರಮದಲ್ಲಿ 1-5 ವರ್ಷದ ಒಳಗಿನ ಮಕ್ಕಳಿಗೆ ಅಂಗನವಾಡಿಗಳಲ್ಲಿ ಮಾತ್ರೆ ನೀಡಲಾಗುತ್ತದೆ. 6 ರಿಂದ 19 ವರ್ಷದ ಮಕ್ಕಳಿಗೆ ಎಲ್ಲಾ ಸರಕಾರಿ, ಅನುದಾನಿತ ಹಾಗೂ ಖಾಸಗಿ ಶಾಲೆ, ಕಾಲೇಜು ಹಾಗೂ ತಾಂತ್ರಿಕ ಶಿಕ್ಷಣ ಸಂಸ್ಥೆಗಳಲ್ಲಿ ಮಾತ್ರೆಗಳನ್ನು ನೀಡಲಾಗುತ್ತದೆ. ಆಶಾ ಕಾರ್ಯಕರ್ತೆಯರು ಒಂದರಿಂದ ಹತ್ತೊಂಬತ್ತು ವರ್ಷದೊಳಗಿನ ಅಂಗನವಾಡಿ ಮತ್ತು ಶಾಲೆಯಿಂದ ಹೊರಗುಳಿದ ಮಕ್ಕಳ ಪಟ್ಟಿಯನ್ನು ತಯಾರಿಸಿ ಮನೆ ಮನೆಗೆ ಭೇಟಿ ನೀಡಿ ಮಾತ್ರೆ ನೀಡಲಿದ್ದಾರೆ ಎಂದು ಡಾ.ಮಧುಸೂದನ್ ಅವರು ಮಾಹಿತಿ ನೀಡಿದರು.
ಕಾರ್ಯಕ್ರಮದಲ್ಲಿ 1 ರಿಂದ 2 ವರ್ಷದೊಳಗಿನ ಮಕ್ಕಳಿಗೆ ಅರ್ಧ ಅಲ್ಪೆಂಡಜೋಲ್ ಮಾತ್ರೆ ಹಾಗೂ 2 ರಿಂದ 19 ವರ್ಷದೊಳಗಿನ ಮಕ್ಕಳಿಗೆ ಒಂದು ಅಲ್ಪೆಂಡಜೋಲ್ ಮಾತ್ರೆ ನೀಡಬೇಕಿದೆ ಎಂದು ಆರ್‌ಸಿಎಚ್ ಅಧಿಕಾರಿ ಅವರು ವಿವರಿಸಿದರು.
ಈ ಕಾರ್ಯಕ್ರಮವನ್ನು ಯಶಸ್ವಿಯಾಗಿ ಅನುಷ್ಠಾನಗೊಳಿಸಲು ವಿವಿಧ ಇಲಾಖೆಗಳು ಹಾಗೂ ಸರ್ಕಾರೇತರ ಸಂಸ್ಥೆಗಳ ಸಹಕಾರ ಅಗತ್ಯ ಎಂದು ಕೋರಿದರು.
ರಾಷ್ಟ್ರೀಯ ಜಂತು ಹುಳು ನಿವಾರಣಾ ಕಾರ್ಯಕ್ರಮಕ್ಕೆ (ಎನ್‌ಡಿಡಿ) ಕೊಡಗು ಜಿಲ್ಲೆಯಲ್ಲಿ 1 ರಿಂದ 19 ವರ್ಷದೊಳಗಿನ ಮಕ್ಕಳ ಗುರಿ 1,31,783 ಹೊಂದಿದ್ದು, ಇದರಲ್ಲಿ ಅಂಗನವಾಡಿ ಮಕ್ಕಳು 24,408, ಅಂಗನವಾಡಿಯಿಂದ ಹೊರಗುಳಿದ ಮಕ್ಕಳು 1,448, ಎಲ್ಲಾ ಸರಕಾರಿ, ಅನುದಾನಿತ ಹಾಗೂ ಖಾಸಗಿ ಶಾಲೆಯಲ್ಲಿರುವ ಮಕ್ಕಳು 82,232 ಹಾಗೂ ಪದವಿ ಪೂರ್ವ ತರಗತಿಯಲ್ಲಿ 10,760, ಹಾಗೆಯೇ ಪದವಿ ಕಾಲೇಜಿನ 6,517, ಐಟಿಐ/ಡಿಪ್ಲೋಮಾ 2,916 ವಿದ್ಯಾರ್ಥಿಗಳಿಗೆ ಮಾತ್ರೆಗಳನ್ನು ವಿತರಿಸಲು ಸಂಬಂಧಪಟ್ಟ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಈಗಾಗಲೇ ನೀಡಲಾಗಿದೆ ಎಂದರು.
ಎನ್‌ಡಿಡಿ ಕಾರ್ಯಕ್ರಮಕ್ಕೆ ಅವಶ್ಯಕತೆಯಿರುವ ಅಲ್ಪೆಂಡಜೋಲ್ 400 ಎಂ.ಜಿ. ಮಾತ್ರೆಗಳನ್ನು ಈಗಾಗಲೇ ಪ್ರಾಥಮಿಕ ಆರೋಗ್ಯ ಕೇಂದ್ರಗಳ ಮುಖಾಂತರ ಎಲ್ಲಾ ಶಾಲೆ, ಕಾಲೇಜು ಹಾಗೂ ಅಂಗನವಾಡಿ ಕೇಂದ್ರಗಳಿಗೆ ಸರಬರಾಜು ಮಾಡಲಾಗಿದೆ ಎಂದು ತಿಳಿಸಿದರು.
ಸಭೆಯಲ್ಲಿ ಆರೋಗ್ಯ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಶಿಕ್ಷಣ ಇಲಾಖೆ, ಪೊಲೀಸ್ ಇಲಾಖೆ, ನಗರಸಭೆಯ ಅಧಿಕಾರಿಗಳು ಹಾಗೂ ಇತರೆ ಇಲಾಖಾಧಿಕಾರಿಗಳು ಹಾಗೂ ಸಿಬ್ಬಂದಿಗಳು ಇದ್ದರು.
Kodagu
ರಾಷ್ಟ್ರೀಯ ರ್‍ಯಾಲಿ ಚಾಂಪಿಯನ್‌ಶಿಪ್ ನಲ್ಲಿ ಇತಿಹಾಸ ಬರೆದ ಕೊಡಗಿನ ಗಗನ್
ಐತಿಹಾಸಿಕ ಸಾಧನೆ ಗೈದ “ಗಗನ್ – ಡೀನ್ ” ಜೋಡಿಗೆ ಎಲ್ಲೆಡೆ ಮೆಚ್ಚುಗೆ ವ್ಯಕ್ತ
ಮಡಿಕೇರಿ : ಹಾಕಿ, ಕ್ರಿಕೆಟ್, ಟೆನಿಸ್ ಹೀಗೆ ವಿವಿಧ ಕ್ರೀಡಾ ಕ್ಷೇತ್ರಗಳಲ್ಲಿ ಕೊಡಗಿನವರ ಸಾಧನೆ ಅಪಾರ. ಇದೀಗ ಈ ಪಟ್ಟಿಯಲ್ಲಿ ಮೋಟಾರ್ ಸ್ಪೋರ್ಟ್ಸ್ ಭಾರತೀಯ ರಾಷ್ಟ್ರೀಯ ರ್‍ಯಾಲಿ ಚಾಂಪಿಯನ್‌ಶಿಪ್ (INRC) ನಲ್ಲಿ ಓವರ್ ಆಲ್ ಚಾಂಪಿಯನ್‌ಶಿಪ್ ಗೆಲ್ಲುವ ಮೂಲಕ ಕೊಡಗಿನ ಯುವನೋರ್ವ ಪ್ರಥಮ ಬಾರಿಗೆ ಇತಿಹಾಸ ಸೃಷ್ಟಿಸಿದ್ದಾರೆ.
ಅಮ್ಮತ್ತಿ-ಹೊಸೂರಿನ ಕೊಂಗಂಡ ಕುಟುಂಬಕ್ಕೆ ಸೇರಿದ ಗಗನ್ ಕರುಂಬಯ್ಯ ರವರೆ ಈ ಸಾಧನೆ ಮಾಡಿರೋ ಯುವ ರ್‍ಯಾಲಿಪಟು, 2013 ರಿಂದ ಮೋಟಾರ್‌ಸ್ಪೋರ್ಟ್ಸ್‌ನಲ್ಲಿ ಸಕ್ರಿಯರಾಗಿರುವ ಗಗನ್ ಪ್ರಸ್ತುತ, ಟೀಮ್ ಟಿಎಸ್‌ಐ ರೇಸಿಂಗ್ (ಸಿಡ್ವಿನ್) ನೊಂದಿಗೆ ಡೀನ್ ಮಸ್ಕಾರ್ನೆನ್ಸ್ (ಮಂಗಳೂರು) ಇವರೊಂದಿಗೆ ಸಹ-ಚಾಲಕರಾಗಿದ್ದಾರೆ.

ರಾಷ್ಟ್ರೀಯ ಮಟ್ಟದ ನಾಲ್ಕು ಚಕ್ರಗಳ ರ್‍ಯಾಲಿನಲ್ಲಿ ಇದೆ ಮೊದಲ ಬಾರಿಗೆ ಗಮನಾರ್ಹ ಮೈಲಿಗಲ್ಲು ಸಾಧಿಸಿದ ಕೊಡಗಿನ ಮೊದಲ ವ್ಯಕ್ತಿ ಎಂಬ ಹೆಗ್ಗಳಿಕೆಗೆ ಗಗನ್ ಪಾತ್ರರಾಗಿದ್ದು, ಎಲ್ಲೆಡೆಯಿಂದ ಪ್ರಶಂಸೆ ವ್ಯಕ್ತವಾಗುತ್ತಿದೆ.
ಇತ್ತೀಚೆಗೆ ಫೆಡರೇಷನ್ ಆಫ್ ಮೋಟಾರ್ ಸ್ಪೋರ್ಟ್ಸ್ ಆಫ್ ಇಂಡಿಯಾ, ಬ್ಲೂಬ್ಯಾಂಡ್ ಸ್ಪೋರ್ಟ್ಸ್. ಅಮ್ಮತ್ತಿ ರೋಬಸ್ಟಾ ಅಡ್ವೆಂಚರ್ ಮತ್ತು ಸ್ಪೋರ್ಟ್ಸ್ ಅಕಾಡೆಮಿ ಆಯೋಜಿಸಿದ್ದ ರಾಷ್ಟ್ರಮಟ್ಟದ ಇಂಡಿಯನ್ ನ್ಯಾಷನಲ್ ರ್‍ಯಾಲಿ ಚಾಂಪಿಯನ್‌ಶಿಪ್ ನಲ್ಲಿ (ಐಎನ್ ಆರ್‌ಸಿ) ಸಮಗ್ರ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿದ್ದ ,ಮಂಗಳೂರಿನ ಡೀನ್ ಮಸ್ಕರೇನ್ಹಸ್-ಕೊಡಗಿನ ಕೊಂಗಂಡ ಗಗನ್ ಕರುಂಬಯ್ಯ ಜೋಡಿ ಇದೀಗ ಸಮಗ್ರ ಚಾಂಪಿಯನ್ ಶಿಪ್ ಪಟ್ಟವನ್ನು ತನ್ನದಾಗಿಸಿಕೊಳ್ಳುವ ಮೂಲಕ ಎಲ್ಲರ ಗಮನ ಸೆಳೆದಿದೆ.

ರೋಬಸ್ಟಾ ಅಡ್ವೆಂಚರ್ ಅಂಡ್ ಸ್ಪೋರ್ಟ್ಸ್ ಅಕಾಡೆಮಿ ಸ್ಥಾಪಕ ತಿಮ್ಮಣ್ಣ ಉದ್ದಪಂಡ ಅವರು, ಯುವ ರ್‍ಯಾಲಿ ಪಟುಗಳ ಈ ಸಾಧನೆ ನಿಜವಾಗಿಯೂ ಮೆಚ್ಚತಕ್ಕದ್ದು, ಇದು ಬಹಳ ಬಹಳ ಸಂತೋಷದ ವಿಚಾರ. ಈ ರೀತಿಯ ಸಾಧನೆ ಮಾಡುವುದು ಸುಲಭವಲ್ಲ, ಈ ಯಶಸ್ಸು ಕೊಡಗಿನ ಯುವ ಜನತೆಗೆ ಮತ್ತು ಎಲ್ಲಾ ಮೋಟಾರ್‌ಸ್ಪೋರ್ಟ್ಸ್ ಉತ್ಸಾಹಿಗಳಿಗೆ ದೊಡ್ಡ ಸ್ಫೂರ್ತಿಯಾಗಿದೆ.
ಅಂತಿಮ ಹಂತದ ರ‍್ಯಾಲಿ (ಸುತ್ತು 6) ಮಹಾರಾಷ್ಟ್ರದ ನಾಸಿಕ್‌ನಲ್ಲಿ ನಡೆಯಲಿದ್ದರೂ, ಕೊನೆಯ ಹಂತ ಮುಗಿಯುವ ಮೊದಲೇ ಗಗನ್ ಡೀನ್ ಜೋಡಿ ಉತ್ತಮ ಅಂಕ (ಪಾಯಿಂಟ್) ಗಳನ್ನು ಪಡೆಯುವ ಮೂಲಕ ಚಾಂಪಿಯನ್‌ಶಿಪ್ ಅನ್ನು ಈಗಾಗಲೇ ವಶಪಡಿಸಿಕೊಂಡಿದೆ. ಈ ಅದ್ಭುತ ಮಟ್ಟವನ್ನು ತಲುಪಿದ್ದಕ್ಕಾಗಿ ಮತ್ತು ಭಾರತೀಯ ಮೋಟಾರ್‌ಸ್ಪೋರ್ಟ್ಸ್‌ನಲ್ಲಿ ಗಮನಾರ್ಹ ಮೈಲಿಗಲ್ಲನ್ನು ಸೃಷ್ಟಿಸಿದ್ದಕ್ಕಾಗಿ ಗಗನ್ ಕರುಂಬಯ್ಯ ಮತ್ತು ಇಡೀ ತಂಡಕ್ಕೆ ಹೃತ್ಪೂರ್ವಕ ಅಭಿನಂದನೆಗಳನ್ನು ತಿಳಿಸಿದ್ದಾರೆ.
ಚಾಂಪಿಯನ್ ರ್‍ಯಾಲಿಪಟು ಕೊಂಗಂಡ ಗಗನ್ ಕರುಂಬಯ್ಯ ಮಾತನಾಡಿ, ಸ್ಪರ್ಧೆ ಹೆಚ್ಚು ಸವಾಲಿನ ವಿಚಾರವಾಗಿತ್ತು. ಕ್ರೀಡೆ ಯನ್ನು ನೈಜತೆಯೊಂದಿಗೆ ಆನಂದಿಸಿದ್ದೇವೆ.ರೊಬಸ್ಟಾ ರ್‍ಯಾಲಿ ಅಂತೆ ಇದು ಕೂಡ ಹೊಸ ಅನುಭವ ನೀಡಿದೆ. ಈ ಸಾಧನೆಯಿಂದ ಮತ್ತಷ್ಟು ಉತ್ಸಾಹ ಹೆಚ್ಚಾಗಿದೆ. ಮತ್ತಷ್ಟು ಸಾಧನೆ ಮಾಡುವ ಛಲ ಬಂದಿದೆ ಎಂದರು.
-
Chamarajanagar14 hours agoಬಿಳಿಗಿರಿ ರಂಗನಬೆಟ್ಟದ ದೇವಾಲಯ ಸುತ್ತಮುತ್ತ ಸ್ಕೌಟ್ಸ್ ಆಂಡ್ ಗೈಡ್ಸ್ ವಿದ್ಯಾರ್ಥಿಗಳಿಂದ ಶ್ರಮದಾನ
-
National7 hours agoU-19 World Cup| ವೈಭವ್ನ ಶತಕ: 6ನೇ ಬಾರಿಗೆ ಅಂಡರ್-19 ವಿಶ್ವಕಪ್ ಗೆದ್ದ ಟೀಂ ಇಂಡಿಯಾ
-
National - International7 hours agoನಾಳೆಯಿಂದ T-20 World Cup| 20 ತಂಡಗಳು, 55 ಪಂದ್ಯಗಳು, 1 ಟ್ರೋಫಿ: ವೇಳಾಪಟ್ಟಿ ಏನು?
-
State9 hours agoಬಿಗ್ ಬಾಸ್-12 ವಿನ್ನರ್ ಗಿಲ್ಲಿನಟ ವಿರುದ್ದ ಫಿಲ್ಮ್ ಚೇಂಬರ್ಗೆ ದೂರು
-
Mysore10 hours agoವಿಶ್ವಕರ್ಮ ಯೋಜನೆಯಡಿ ವಸ್ತು ಪ್ರದರ್ಶನ
-
State11 hours agoನಮ್ಮ ಪಕ್ಷದ ಹೈಕಮಾಂಡ್ ಡಾ.ಯತೀಂದ್ರ ಅವರೇ: ಡಿಸಿಎಂ ಡಿಕೆಶಿ ಟಾಂಗ್
-
National11 hours agoಮಹಿಳೆಯ ಇಚ್ಛೆಗೆ ವಿರುದ್ಧವಾಗಿ ತಾಯಿಯಾಗುವಂತೆ ನ್ಯಾಯಾಂಗ ಆಗ್ರಹಿಸಲು ಸಾಧ್ಯವಿಲ್ಲ: ಸುಪ್ರೀಂಕೋರ್ಟ್
-
Mysore11 hours agoವಕೀಲರ ಸಂಘದ ಅಧ್ಯಕ್ಷರ ಮೇಲೆ ಪ್ರಕರಣ: ವಕೀಲ ಸಂಘದಿಂದ ಪ್ರತಿಭಟನೆ
