Connect with us

State

ಮಹಿಳಾ ವಿದ್ಯಾರ್ಥಿಗಳಿಗೆ ಪತ್ರಿಕಾಲಯಗಳಲ್ಲಿ ತರಬೇತಿಗೆ ಅರ್ಜಿ ಆಹ್ವಾನ

Published

on

ಬೆಂಗಳೂರು:- ಕರ್ನಾಟಕ ಮಾಧ್ಯಮ ಅಕಾಡೆಮಿಯು ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಅಥವಾ

ಪದವಿ ಪಡೆದಿರುವ ಮಹಿಳಾ ವಿದ್ಯಾರ್ಥಿಗಳಿಗೆ ಪತ್ರಿಕಾಲಯದಲ್ಲಿ ತರಬೇತಿ ಪಡೆಯಲು ಅರ್ಜಿ ಆಹ್ವಾನಿಸಿದೆ.

ಪ್ರಸಕ್ತ ಸಾಲಿನಲ್ಲಿ 5 ಮಂದಿ ಮಹಿಳಾ ವಿದ್ಯಾರ್ಥಿಗಳಿಗೆ ಪ್ರಮುಖ ದಿನಪತ್ರಿಕೆಗಳ ಕಾರ್ಯಾಲಯಗಳಲ್ಲಿ 2 ತಿಂಗಳ ಕಾಲ

ತರಬೇತಿ ಪಡೆಯಲು, ಮಾಸಿಕ ತಲಾ 20,000/- ರೂ ಗಳನ್ನು ಶಿಶ್ಯವೇತನ ನೀಡಲಾಗುವುದು.

 

ಕರ್ನಾಟಕದ ಯಾವುದೇ ವಿಶ್ವವಿದ್ಯಾಲಯಗಳಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ/ಪದವಿಯಲ್ಲಿ ಅತಿ ಹೆಚ್ಚು ಅಂಕ ಗಳಿಸಿರುವ ವಿದ್ಯಾರ್ಥಿಗಳಿಗೆ ಆದ್ಯತೆ ನೀಡಲಾಗಿದೆ. ಮಹಿಳಾ ವಿದ್ಯಾರ್ಥಿಗಳು ಆಗಸ್ಟ್ 26 ರೊಳಗೆ ತಮ್ಮ ಸ್ವವಿವರ,

ದೂರವಾಣಿ ಸಂಖ್ಯೆ, ಇ-ಮೇಲ್ ವಿಳಾಸ, ಆರ್ಥಿಕ ಸ್ಥಿತಿ, ಅಂಕಪಟ್ಟಿಗಳ ಫೋಟೋ ಪ್ರತಿಯನ್ನು ಸ್ಕ್ಯಾನ್ ಮಾಡಿ [email protected] ಗೆ ಇಮೇಲ್ ಮೂಲಕ ಕಳುಹಿಸಬಹುದು.

28 ವರ್ಷದೊಳಗಿನ ಮಹಿಳಾ ವಿದ್ಯಾರ್ಥಿಗಳಿಗೆ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದ್ದು, ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಅಕಾಡೆಮಿಯು ಅರ್ಹತಾ ಪರೀಕ್ಷೆ ನಡೆಸಲಿದೆ.

ಈ ಪರೀಕ್ಷೆಯ ದಿನಾಂಕ, ಸ್ಥಳ ಮತ್ತು ಸಮಯವನ್ನು ಸಂದರ್ಶನದ ವೇಳೆ ತಿಳಿಸಲಾಗುವುದು ಎಂದು ಕರ್ನಾಟಕ ಮಾಧ್ಯಮ ಅಕಾಡೆಮಿಯ ಕಚೇರಿ ಪ್ರಕಟಣೆ ತಿಳಿಸಿದೆ.

Continue Reading

State

ಡಿಕೆ ಶಿವಕುಮಾರ್ ವಿರುದ್ಧ ಹೆಚ್.ಡಿ.ಕುಮಾರಸ್ವಾಮಿ ಆಕ್ರೋಶ

Published

on

ನಪುಂಸಕ ಎಂದು ಡಿಕೆಶಿ ವಿರುದ್ಧ ಕಿಡಿ

ಗಂಡಸ್ತನದಿಂದ ರಾಜಕೀಯ ಮಾಡಬೇಕು ಎಂದು ಡಿಕೆಶಿಗೆ ಸವಾಲು ಹಾಕಿದ HDK

*

ನವದೆಹಲಿ: ತಮ್ಮನ್ನು ಏಕವಚನದಲ್ಲಿ ಕೀಳಾಗಿ ನಿಂದಿಸಿದ ಡಿಸಿಎಂ ಡಿಕೆ ಶಿವಕುಮಾರ್ ವಿರುದ್ಧ ತೀವ್ರ ಮಟ್ಟದಲ್ಲಿ ವಾಗ್ದಾಳಿ ನಡೆಸಿದ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು; ದಿಕೆಶಿಯನ್ನು ನಪುಂಸಕ ಎಂದು ಕರೆದರು.

ನವದೆಹಲಿಯಲ್ಲಿ ಮಾಧ್ಯಮಗಳ ಜತೆ ಮಾತನಾಡಿದ ಅವರು; ಡಿ.ಕೆ.ಶಿವಕುಮಾರ್ ಗೆ ವ್ಯಕ್ತಿತ್ವ ಎನ್ನುವುದು ಇದೆಯಾ? ಅವರದ್ದು ಒಂದು ನಾಲಿಗೆನಾ.. ಆತ ಮನುಷ್ಯನಾ? ಎಂದು ಆಕ್ರೋಶ ವ್ಯಕ್ತಪಡಿಸಿದರು.

ಧೈರ್ಯ ಎನ್ನುವುದು ಇದ್ದರೆ ಗಂಡಸ್ತನದಿಂದ ರಾಜಕೀಯ ಮಾಡಬೇಕು. ಸಂಪುಸಕ ಮಾಡುವ ಕೆಲಸ ಮಾಡುತ್ತಿದ್ದಾನೆ. ನನ್ನನ್ನು ಪ್ರಶ್ನೆ ಮಾಡುತ್ತಾನೆ. ಯಾರ ಮಗನನ್ನು ಬೆಳೆಸಬೇಕು ಎಂದು ಜನ ನಿರ್ಧಾರ ಮಾಡುತ್ತಾರೆ. ಒಳ್ಳೆಯದು, ಕೆಟ್ಟದು ಏನು ಎನ್ನುವುದು ಅವರಿಗೆ ಗೊತ್ತಿದೆ ಎಂದು ಕೇಂದ್ರ ಸಚಿವರು ಕಿಡಿ ಕಾರಿದರು.


ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಜನರೇ ನಿರ್ಧಾರ ಮಾಡುತ್ತಾರೆ. ಮೊದಲು ನೆಟ್ಟಗೆ ಬದುಕು. ನನ್ನನ್ನು ಕೆಣಕಬೇಡ ಶಿವಕುಮಾರ್..ಹುಷಾರು! ಎಂದು ಕುಮಾರಸ್ವಾಮಿ ಅವರು ಎಚ್ಚರಿಕೆ ಕೊಟ್ಟರು.

ನಿನ್ನ ಯೋಗ್ಯತೆ, ಹಣೆಬರಹ ನನಗೆ ಬಹಳ ಚನ್ನಾಗಿ ಗೊತ್ತಿದೆ. ನಿನ್ನ ಬಗ್ಗೆ ನನ್ನಲ್ಲಿರುವ ಮಾಹಿತಿ ತೆಗೆದಿಟ್ಟರೆ ನೀನು ಬದುಕಲು ಕಷ್ಟವಾಗುತ್ತದೆ. ನಮ್ಮ ಕುಟುಂಬದ ವಿರುದ್ಧ ನೀನು ಏನೆಲ್ಲಾ ಸಂಚು ಮಾಡಿದೆ, ರೇವಣ್ಣ ಕುಟುಂಬ ಮುಗಿಸಲು ಏನು ಕುತಂತ್ರ ಮಾಡಿದೆ ಎನ್ನುವುದು ನನಗೆ ಗೊತ್ತಿದೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು.

ನನ್ನದು ಪಾರಾದರ್ಶಕ ಆಡಳಿತ. ಒಂದು ಕಪ್ಪು ಚುಕ್ಕೆ ಇಲ್ಲ ಎಂದು ಸಿದ್ದರಾಮಯ್ಯ ಹೇಳುತ್ತಾರೆ. ರೀಡು ಹೆಸರಿನಲ್ಲಿ ಲೂಟಿ ಹೊಡೆದಿದ್ದೀರಿ. ಕೆಂಪಣ್ಣ ವರದಿ ಏನಾಯಿತು? ಸದನ ಸಮಿತಿ ವರದಿ ಎಲ್ಲಿ ಇಟ್ಕೊಂಡಿದ್ದೀರಿ? ಕೆಟ್ಟ ಪದ ಬಳಸ ಬಾರದು. ಇವತ್ತು ಕಿರು ಹೊತ್ತಿಗೆ ಬಿಡುಗಡೆ ಮಾಡಿದ್ದಾರೆ. ಎ.ಕೆ.ಸುಬ್ಬಯ್ಯ ಕಾಲದಿಂದಲೂ ದೇವೇಗೌಡರನ್ನು ಮುಗಿಸಲು ಯತ್ನ ಮಾಡಲಾಯಿತು. ಯಾವ ಸಂಚು ಮಾಡಿ ಬಿಡುಗಡೆ ಮಾಡಿದ್ದೀಯಾ ಪೊಣ್ಣನ್ನ? ಎಂದು ಕುಮಾರಸ್ವಾಮಿ ಅವರು ಆಕ್ರೋಶ ವ್ಯಕ್ತಪಡಿಸಿದರು.

ನಿವೇಶನ ಕೊಡಿ ಎಂದು 37,000 ರೂಪಾಯಿ ದುಡ್ಡು ಕಟ್ಟಿದ್ದೇನೆ. ನನಗೆ ಈವರೆಗೆ ನಿವೇಶನ ಕೊಟ್ಟಿಲ್ಲ. ನಾನು ಮೈಸೂರಿನಲ್ಲಿದ್ದಾಗ ಸಿನಿಮಾ, ಹಂಚಿಕೆ ನಿರ್ಮಾಣ ಮಾಡುತ್ತಿದ್ದಾಗ ಹಣ ಕಟ್ಟಿದ್ದೆ. ಸತ್ಯ ಸಂಗತಿ ಮುಚ್ಚಿಟ್ಟು ಮೈಸೂರುನಲ್ಲಿ ಬೋರ್ಡ್, ಫ್ಲೆಕ್ಸ್ ಹಾಕಿಕೊಂಡಿದ್ದಾರೆ. ಅದನ್ನು ನಿಮ್ಮ ಶಾಸಕರು ಕೊರಳಿಗೆ ಹಾಕಿಕೊಳ್ಳಲಿ. ಆ ಪ್ರಕರಣಲ್ಲಿ ಏನು ಇಲ್ಲ ಎಂದು ಲೋಕಾಯುಕ್ತ, ಸಿಐಡಿ ಯವರು ಹೇಳಿದ್ದಾರೆ. ಈ ಬೋರ್ಡ್ ಕಾಂಗ್ರೆಸ್ ಸ್ವಂತದ್ದ.. ಬಿಜೆಪಿಯಿಂದ ಎರವಲು ತೆಗೆದುಕೊಂಡಿದ್ದಾರೆ ಕಾಂಗ್ರೆಸ್ ಪಕ್ಷದ್ದು ಏನೂ ಇಲ್ಲ ಎಂದು ಸಚಿವರು ಟೀಕಾ ಪ್ರಹಾರ ನಡೆಸಿದರು.

ಇವತ್ತಿನ ಕಾಂಗ್ರೆಸ್ ನಾಯಕರ ಜನಾಂದೋಲನ ನಡೆಯಿತು. ಇವರಿಗೆ ನಾಚಿಕೆ ಆಗಬೇಕು. ವಿರೋಧ ಪಕ್ಷದಲ್ಲಿದ್ದಾಗ ಬೊಗಳೆ ಬಿಟ್ಟರು. ಸಾಕ್ಷಿಗಳಿಲ್ಲದೇ ಅವರು ಬಿಜೆಪಿ ಸರ್ಕಾರದ ವಿರುದ್ಧ ಆರೋಪ ಮಾಡಿದರು. ವಿರೋಧ ಪಕ್ಷದ ಸ್ಥಾನದ ಘನತೆ ಮರೆತು ಅತ್ಯಂತ ನಿಷ್ಕೃತವಾಗಿ ವರ್ತಿಸಿದ್ದಾರೆ. ವಿಧಾನಸಭೆಯಲ್ಲಿ ನಮ್ಮ ಶಾಸಕರು ಕಡಿಮೆ ಇದ್ದರೂ ದಾಖಲೆ ಸಮೇತ ಹೋರಾಟ ಮಾಡಿದ್ದೇವು. ದಾಖಲೆ ಸಮೇತ ಮಾತನಾಡಿದೆವು, ಅದರಲ್ಲೇನು ನಾಚಿಕೆ ಇಲ್ಲ ಎಂದು ಅವರು ಹೇಳಿದರು.

ನಾನು ಸಿಎಂ ಆಗಿದ್ದಾಗ ಒಂದು ಅಕ್ರಮ ನಡೆದಿದ್ದರೆ ದಾಖಲೆ ನೀಡಲಿ. ಇವರೇನಾದರೂ ದಾಖಲೆ ನೀಡಿದ್ದರಾ? ನಾನು ವಿರೋಧ ಪಕ್ಷದ ನಾಯಕನಿದ್ದಾಗ ಬಿಜೆಪಿ ವಿರುದ್ಧವೂ ಹೋರಾಟ ಮಾಡಿದ್ದೆ. ಈಗ ಏನೋ ಹೊಸದು ಅಂತ ಬಂದಿದ್ದಾರೆ. ಇದರಲ್ಲಿ ನನ್ನ ಮೇಲೆ ಏನು ಅಪಾದನೆ ಏನೂ ಇಲ್ಲ ಎಂದು ಅವರು ಸ್ಪಷ್ಟ ಮಾತುಗಳಲ್ಲಿ ಹೇಳಿದರು.

ಮೋದಿ ಅವರನ್ನು ಭೇಟಿಯಾಗಿದ್ದು ರಕ್ಷಣೆ ಪಡೆಯಲು ಎಂದು ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. ನಾವು ಯಾವತ್ತು ಕಾಪಾಡಿ ಎಂದು ಯಾರ ಮನೆ ಬಾಗಿಲಿಗೂ ಹೋಗಿಲ್ಲ. ನೀವು ಲೋಕಾಯಕ್ತ ಮುಚ್ಚಿ ಎಸಿಬಿ ಮಾಡಿದಿರಿ. ಹ್ಯೂಬ್ಲೊಟೊ ವಾಚ್ ಏನಾಯಿತು, ರೀಡು ಹಗರಣ, ಕೆಂಪಯ್ಯ ವರದಿ ಏನಾಯಿತು? ಎಂದು ತೀಕ್ಷ್ಣವಾಗಿ ಪ್ರಶ್ನಿಸಿದರು.

ಸರಕಾರ ಕೆಡವಲು ಪ್ರಯತ್ನ ನಡೆಯುತ್ತದೆಯಂತೆ ಎಂದು ವರದಿಗಾರರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು; ಸಂಚು ನಡೆಯುತ್ತಿದೆ ಎಂದು ಯಾರು ಹೇಳಿದರು? ಅವರಿಗೇನು ಕನಸು ಬಿದ್ದಿತ್ತಾ? ಅಥವಾ ಅಜ್ಜಯ್ಯ ಹೇಳಿದರಾ? ಯಾರು ಹೇಳಿದ್ರಂತೆ ಅವರಿಗೆ? ಎಂದು ಸಚಿವರು ಕೇಳಿದರು.

ಸಂಸದ ಮಲ್ಲೇಶ್ ಬಾಬು ಅವರು ಸಚಿವರ ಜತೆಯಲ್ಲಿ ಇದ್ದರು.

Continue Reading

State

ಒಲಿಂಪಿಕ್ಸ್ ನಲ್ಲಿ ವಿನೇಶಾ ಪೋಗಟ್ ಗೆ ಕುಸ್ತಿ ಫೈನಲ್ ಸ್ಪರ್ಧೆಗೆ ಅನರ್ಹಗೊಳಿಸಿರುವುದು ದೊಡ್ಡ ಅನ್ಯಾಯ: ಬಸವರಾಜ ಬೊಮ್ಮಾಯಿ

Published

on

ನವ ದೆಹಲಿ: ಅಂತಾರಾಷ್ಟ್ರೀಯ ಕುಸ್ತಿ ಪಟು ವಿನೇಶಾ ಪೋಗಟ್ ಅವರಿಗೆ ಒಲಿಪಿಂಕ್ಸ್ ಕುಸ್ತಿ ಫೈನಲ್ ಪಂದ್ಯದ ಮೊದಲು ಅವರ ತೂಕ ಕೇವಲ 100 ಗ್ರಾಂ ಹೆಚ್ಚಳವಾಗಿದೆ ಎಂದು ಅವರನ್ನು ಸ್ಪರ್ಧೆಯಿಂದ ಅನರ್ಹಗೊಳಿಸಿರುವುದು ದೊಡ್ಡ ಅನ್ಯಾಯ. ಒಲಿಂಪಿಕ್ಸ್ ಗೇಮ್ ನ ಕಾನೂನು ಪುನರ್ ವಿಮರ್ಶೆ ಮಾಡುವುದು ಅಗತ್ಯವಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿಯವರು ಹೇಳಿದರು.


ಅಂತಾರಾಷ್ಟ್ರೀಯ ‌ಕುಸ್ತಿ ಪಟು ವಿನೇಶಾ ಪೋಗಟ್ ಅವರಿಗೆ ಒಲಿಂಪಿಕ್ ಫೈನಲ್ ನಲ್ಲಿ ಅವಕಾಶ ತಪ್ಪಿರುವ ಕುರಿತು ಇಂದು ನವ ದೆಹಲಿಯಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದರು.
ಸಾಮಾನ್ಯವಾಗಿ ಯಾವುದಾದರೂ ಆಟದ ಆರಂಭದಲ್ಲಿ ತೂಕ ಮತ್ತು ಇತರ ಅರ್ಹತೆಗಳನ್ನು ನೋಡುತ್ತಾರೆ. ಆದರೆ, ಪ್ರತಿಯೊಂದು ರೌಂಡ್ ನಲ್ಲಿಯೂ ತೂಕ ನೋಡುವುದು ಬೇರೆ ಯಾವುದೇ ಆಟದಲ್ಲಿ ನೋಡಿಲ್ಲ. ಈ ಒಲಿಂಪಿಕ್ಸ್ ನಲ್ಲಿ ತೂಕ ನೋಡಿರುವುದು ಪ್ರಶ್ನಾರ್ಹವಾಗಿದೆ. ಪ್ರತಿದಿನ ವ್ಯಕ್ತಿಯ ತೂಕದಲ್ಲಿ ನೂರರಿಂದ ಮುನ್ನೂರು ಗ್ರಾಂ ವ್ಯತ್ಯಾಸವಾಗುತ್ತಿರುತ್ತದೆ. ಅವರ ತೂಕದಲ್ಲಿ ನೂರು ಗ್ರಾಂ ಹೆಚ್ಚಾಗಿದೆ ಎಂದು

ಸ್ಪರ್ಧೆಯಿಂದ ಅಮಾನತು ಮಾಡುವುದು ಸಮಂಜಸ ಅಲ್ಲ. ಪ್ರತಿದಿನ ಮನುಷ್ಯನ ದೇಹದ ತೂಕದಲ್ಲಿ ಹೆಚ್ಚಾಗುವುದು ಕಡಿಮೆಯಾಗುವುದು ತನ್ನದೇ ಆದ ನೈಸರ್ಗಿಕ ಮೆಟಾಬಲಿಕ್ ಪ್ರಕ್ರಿಯೆ. ಮೆಟಾಬೆಲಿಕ್ ಚಟುವಟಿಕೆಗಳು ಕಡಿಮೆ ಆದಾಗ ತೂಕ ಹೆಚ್ಚಾಗುತ್ತದೆ. ಮೆಟಾಬೆಲಿಕ್ ಚಟುವಟಿಕೆಗಳು ಹೆಚ್ಚಾದಾಗ ತೂಕ ಕಡಿಮೆ ಆಗುತ್ತದೆ. ಇದು ನೈಸರ್ಗಿಕ ಕ್ರಿಯೆ. ಹೀಗಾಗಿ ತೂಕ ಹೆಚ್ಚಳದ ಹಿನ್ನೆಲೆಯಲ್ಲಿ ಸ್ಪರ್ಧೆಗೆ ಅವಕಾಶ ನೀಡದಿರುವುದು ಬಹಳ ದೊಡ್ಡ ಅನ್ಯಾಯವಾದಂತಾಗಿದ್ದು ಇದನ್ನು ಪುನರ್ ಪರಿಶೀಲನೆ ಮಾಡುವುದು ಅಗತ್ಯ ಎಂದು ಅವರು ಆಗ್ರಹಿಸಿದರು.


ಒಲಿಂಪಿಕ್ಸ್ ಕ್ರೀಡಾ ಕೂಟ ಕ್ಲೀನ್ ಅಂತ ಏನಿಲ್ಲ. ಅಲ್ಲಿಯೂ ಕೂಡ ಕೆಲವು ಸಾರಿ ರಾಜಕೀಯ ನಡೆಯುತ್ತದೆ. ಕೆಲವರನ್ನು ಹೊರಗಿಡುವ ತಂತ್ರಗಾರಿಕೆ ನಡೆಯುತ್ತದೆ. ಆ ಹಿನ್ನೆಲೆಯಲ್ಲಿ ಕೆಲವರಿಗೆ ಶಿಕ್ಷೆ ಕೂಡ ಆಗಿದೆ. ಈ ಪ್ರಕರಣವನ್ನು ಕೇಂದ್ರ ಕ್ರೀಡಾ ಸಚಿವರು ಗಂಭೀರವಾಗಿ ತೆಗೆದುಕೊಂಡು ಒಲಿಂಪಿಕ್ಸ್ ಬೋರ್ಡ್ ಗೆ ತೆಗೆದುಕೊಂಡು ಹೋಗಬೇಕು. ಮತ್ತು ಯಾವುದೇ ಕಾರಣಕ್ಕೂ ವಿನೇಶಾ ಪೋಗಟ್ ಕುಸ್ತಿ ಫೈನಲ್ ಆಡುವುದರಿಂದ ವಂಚಿತರಾಗಬಾರದು. ಅವರಿಗೆ ಅವಕಾಶ ದೊರಕುವಂತೆ ನೋಡಿಕೊಳ್ಳಬೇಕು. ಇದು ಎಲ್ಲ ಭಾರತೀಯರ ಭಾವನೆಯಾಗಿದೆ ಎಂದು ಹೇಳಿದರು.


ಕಳೆದ ಬಾರಿಯೂ ವಿನೇಶಾ ಪೋಗಟ್ ಸ್ಪರ್ಧೆಯಿಂದ ದೂರ ಉಳಿಯುವಂತಾಗಿತ್ತು. ಈ ಬಾರಿಯಂತೂ ದೊಡ್ಡ ಅನ್ಯಾಯವಾಗಿದ್ದು, ಈ ಅನ್ಯಾಯವನ್ನು ಸರಿಪಡಿಸುವ ನಿಟ್ಟಿನಲ್ಲಿ ಎಲ್ಲ ರೀತಿಯ ಪ್ರಯತ್ನಗಳು ನಡೆಯಬೇಕು. ಅವರಿಗೆ ಅವಕಾಶ ದೊರೆಯಬೇಕು. ಅವರಿಗೆ ಫೈನಲ್ ನಲ್ಲಿ ಅವಕಾಶ ದೊರೆತರೆ ಚಿನ್ನದ ಪದಕ ಗೆಲ್ಲುವ ವಿಶ್ವಾಸ ಇದೆ. ಒಲಿಂಪಿಕ್ಸ್ ನಲ್ಲಿ ವಿನೇಶಾ ಪೋಗಟ್ ಚಿನ್ನದ ಪದಕ ತರುತ್ತಾರೆ ಎನ್ನುವ ವಿಶ್ವಾಸ ಎಲ್ಲರದ್ದಾಗಿದೆ. ಇಲ್ಲದಿದ್ದರೆ ಭಾರತಕ್ಕೆ ಚಿನ್ನದ ಪದಕ ಸಿಗುವುದು ಬಹಳ ಕಷ್ಟಕರ ಅನಿಸುತ್ತಿದೆ. ಈ ಪ್ರಕರಣವನ್ನು ಗಂಭೀರವಾಗಿ ತೆಗೆದುಕೊಂಡು ಒಲಿಂಪಿಕ್ಸ್ ಮಂಡಳಿಯಲ್ಲಿ ಚರ್ಚಿಸಿ ತೀರ್ಮಾನ ಮಾಡುವ ಅಗತ್ಯವಿದೆ ಎಂದು ಹೇಳಿದರು.

Continue Reading

State

ಮುಡಾ ಪ್ರಕರಣದಲ್ಲಿ ಸರ್ಕಾರದ ಸ್ಪಷ್ಟೀಕರಣವನ್ನು ರಾಜ್ಯಪಾಲರು ಒಪ್ಪಿಕೊಳ್ಳುವ ನಂಬಿಕೆಯಿದೆ: ಮುಖ್ಯಮಂತ್ರಿ ಸಿದ್ದರಾಮಯ್ಯ

Published

on

ಮೈಸೂರು, ಆ.7 : ಮುಡಾ ಪ್ರಕರಣದಲ್ಲಿ ರಾಜ್ಯಪಾಲರು ನೀಡಿರುವ ನೋಟೀಸಿಗೆ ಈಗಾಗಲೇ ಉತ್ತರ ನೀಡಲಾಗಿದ್ದು, ಅದನ್ನು ರಾಜಪಾಲರು ಒಪ್ಪಿಕೊಳ್ಳುವ ನಂಬಿಕೆಯಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭರವಸೆ ವ್ಯಕ್ತಪಡಿಸಿದರು.

ಅವರು ಬುಧವಾರ ಮಾಧ್ಯಮದವರೊಂದಿಗೆ ಮಾತನಾಡಿ, ಮುಡಾ ವಿಷಯದಲ್ಲಿ ಸಂಪೂರ್ಣವಾಗಿ ಕಾನೂನು ಪ್ರಕಾರ ನಡೆದಿರುವುದರಿಂದ ರಾಜ್ಯಪಾಲರು ಸರ್ಕಾರದ ಉತ್ತರವನ್ನು ಒಪ್ಪಿಕೊಳ್ಳುವ ನಂಬಿಕೆಯಿದೆ. ಮುಡಾ ನಿವೇಶನ ಹಂಚಿಕೆಯಲ್ಲಿ ಯಾವುದೇ ರೀತಿಯ ಪ್ರಭಾವವನ್ನು ನಾನು ಬೀರಿಲ್ಲ. ಕಾನೂನು ಪ್ರಕಾರವಾಗಿರುವ ಹಿನ್ನೆಲೆಯಲ್ಲಿಯೇ ಬಿಜೆಪಿ ಸರ್ಕಾರದ ಅವಧಿಯಲ್ಲಿ 2021ರಲ್ಲಿ ನನ್ನ ಪತ್ನಿಗೆ ಬದಲಿ ನಿವೇಶನ ನೀಡಲಾಗಿದೆ ಎಂದು ಅವರು ಹೇಳಿದರು.

2014ರಲ್ಲಿ ನಾನು ಮುಖ್ಯಮಂತ್ರಿ ಆಗಿದ್ದ ಸಂದರ್ಭದಲ್ಲಿ ನನ್ನ ಪತ್ನಿ, ಮುಡಾ ಅಕ್ರಮವಾಗಿ ನಮ್ಮ ಜಮೀನು ಸ್ವಾಧೀನಪಡಿಸಿಕೊಂಡಿರುವ ಹಿನ್ನೆಲೆಯಲ್ಲಿ ಬದಲಿ ನಿವೇಶನ ಕೋರಿ ಅರ್ಜಿ ಸಲ್ಲಿಸಿದ್ದಳು. ಆ ಸಂದರ್ಭದಲ್ಲಿ ನಾನು ಈ ಕುರಿತು ಯಾವುದೇ ಕ್ರಮಗಳನ್ನು ಕೈಗೊಂಡಿರಲಿಲ್ಲ.

ಬಿಜೆಪಿ ಮತ್ತು ಜೆಡಿಎಸ್‌ ಪಕ್ಷಗಳು ಸರ್ಕಾರವನ್ನು ಅಸ್ಥಿರಗೊಳಿಸುವ ಉದ್ದೇಶದಿಂದ ನನ್ನ ಮೇಲೆ ಆಪಾದನೆಗಳನ್ನು ಮಾಡುತ್ತಿವೆ. ಆಪರೇಶನ್‌ ಕಮಲ ನಡೆಸಲು ಪ್ರಯತ್ನಿಸಿದರೂ, ಸರ್ಕಾರ ಅಸ್ಥಿರಗೊಳಿಸಲು ಸಾಧ್ಯವಾಗದ ಕಾರಣ ಇದನ್ನು ಮಾಡುತ್ತಿದ್ದಾರೆ. ನಮ್ಮ ಸರ್ಕಾರ ಗ್ಯಾರಂಟಿ ಯೋಜನೆಗಳನ್ನು ಕಳೆದ ಒಂದು ವರ್ಷದ ಅವಧಿಯಲ್ಲಿ ಯಶಸ್ವಿಯಾಗಿ ಜಾರಿಗೊಳಿಸಿ, ಬಡವರ ಪರವಾಗಿ ಕೆಲಸ ಮಾಡುತ್ತಿರುವುದನ್ನು ಸಹಿಸಲು ಅವರಿಗೆ ಸಾಧ್ಯವಾಗುತ್ತಿಲ್ಲ ಎಂದರು.

ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನಗೊಳಿಸಲು ಸಾಧ್ಯವಿಲ್ಲ ಎಂದು ಸ್ವತಃ ಪ್ರಧಾನಿಯವರೇ ಹೇಳಿದ್ದರು. ಮೊದಲ ದಿನದಿಂದಲೂ ಗ್ಯಾರಂಟಿ ಯೋಜನೆ ವಿರುದ್ಧವಾಗಿ ಅವರು ಮಾತನಾಡುತ್ತಿದ್ದಾರೆ. ಒಂದು ವೇಳೆ ಗ್ಯಾರಂಟಿ ಯೋಜನೆ ಆರಂಭಿಸಿದರೂ, ಅದನ್ನು ನಿಲ್ಲಿಸಿ ಬಿಡುತ್ತಾರೆ ಎಂದಿದ್ದರು. ಆದರೆ ಗ್ಯಾರಂಟಿ ಯೋಜನೆಗಳ ಯಶಸ್ವಿ ಅನುಷ್ಠಾನದಿಂದ ಅವರು ಹತಾಶರಾಗಿದ್ದಾರೆ ಎಂದರು.


ಬಿ.ಎಸ್.ವೈ. ಸಾರ್ವಜನಿಕ ಜೀವನದಿಂದ ನಿವೃತ್ತರಾಗಲಿ
ಈ ವಯಸ್ಸಿನಲ್ಲಿ ಪೋಕ್ಸೋ ಪ್ರಕರಣದಲ್ಲಿ ಸಿಲುಕಿರುವ ಯುಡಿಯೂರಪ್ಪ ಅವರು ನ್ಯಾಯಾಲಯದ ದಯೆಯಿಂದ ಜೈಲು ಪಾಲಾಗದೆ ಬಚಾವಾಗಿದ್ದಾರೆ. 82ರ ವಯಸ್ಸಿನಲ್ಲಿ ಇಂತಹ ಪ್ರಕರಣದಲ್ಲಿ ಚಾರ್ಜ್‌ಶೀಟ್‌ ಹಾಕಿಸಿಕೊಂಡಿರುವ ಯಡಿಯೂರಪ್ಪ ಅವರಿಗೆ ನನ್ನ ಬಗ್ಗೆ ಮಾತನಾಡುವ ಯಾವುದೇ ನೈತಿಕತೆ ಇಲ್ಲ. ಅವರು ನೈತಿಕತೆ ಇದ್ದರೆ ಸಾರ್ವಜನಿಕ ಜೀವನದಿಂದ ನಿವೃತ್ತರಾಗಬೇಕು. ಅವರ ವಿರುದ್ಧ 20ಕ್ಕೂ ಅಧಿಕ ಪ್ರಕರಣಗಳು ಇದ್ದು, ಈ ಕುರಿತು ವಿವರವಾದ ಮಾಹಿತಿಯನ್ನು ನೀಡಲಿದ್ದೇನೆ.
ಸತ್ಯಕ್ಕೇ ಅಂತಿಮ ಜಯ
ಯಡಿಯೂರಪ್ಪ ಅಧಿಕಾರದ ಅವಧಿಯಲ್ಲಿ ಚೆಕ್‌ ಮೂಲಕ ಲಂಚದ ಹಣವನ್ನು ಪಡೆದುಕೊಂಡಿದ್ದರು. ಅಕ್ರಮವಾಗಿ ಡಿನೋಟಿಫಿಕೇಶನ್‌ ಮಾಡಿದ್ದರು. ನಾವು ಅಂತಹ ಯಾವುದೇ ಅಕ್ರಮಗಳನ್ನು ಎಸಗಿಲ್ಲ. ವಿರೋಧ ಪಕ್ಷಗಳು ಸುಳ್ಳನ್ನು ನಿರಂತರವಾಗಿ ಹೇಳುವ ಮೂಲಕ ಸತ್ಯ ಮಾಡಲು ಸಾಧ್ಯವಿಲ್ಲ. ಸತ್ಯಕ್ಕೇ ಅಂತಿಮ ಜಯ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು.

Continue Reading

Trending

error: Content is protected !!