Hassan
ಪೆಂಡ್ರೈವ್ ಹಾಗೂ ಅಶ್ಲೀಲ ವೀಡಿಯೋ ಮೂಲಕ ಕಾಂಗ್ರೆಸ್ ರಾಜಕೀಯ -ಜಿ. ದೇವರಾಜೇಗೌಡ ಹೇಳಿಕೆ
ಹಾಸನ: ಪೆಂಡ್ರೈವ್ ಹಾಗೂ ಅಶ್ಲೀಲ ವೀಡಿಯೋ ಬಿಡುಗಡೆ ಪ್ರಕರಣದಲ್ಲಿ ನನ್ನ ಕೈವಾಡ ಯಾವುದು ಇಲ್ಲ. ಇದು ಕಾಂಗ್ರೆಸ್ ಪಕ್ಷದ ರಾಜಕೀಯ ಕುತಂತ್ರ ಎಂದು ಬಿಜೆಪಿ ಮುಖಂಡ ಜಿ. ದೇವೇರಾಜೇಗೌಡ ಗಂಬೀರವಾಗಿ ಆರೋಪಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಮಂಗಳವಾರ ಮಾತನಾಡಿದ ಅವರು, ಪೆಂಡ್ರೈವ್ ಜೊತೆ ಅಶ್ಲೀಲ ವೀಡಿಯೋ ಗಳ ಜೊತೆಗೆ ರಾಜಕೀಯ ಮಾಡಲು ಮುಂದಾಗಿರುವ ಕಾಂಗ್ರೆಸ್ ನಡೆ ಖಂಡನೀಯ, ಚುನಾವಣಾ ಸಂದರ್ಭದಲ್ಲಿ ಜಿಲ್ಲೆಯ ಹೆಣ್ಣು ಮಕ್ಕಳ ಶೀಲದ ಜೊತೆ ರಾಜಕೀಯ ಮಾಡಲು ಮುಂದಾಗಿರುವ ಕಾಂಗ್ರೆಸ್ ಆಡಳಿತ ನಡೆಸಲು ಅರ್ಹತೆ ಇಲ್ಲ ಎಂದು ತಮ್ಮ ಅಸಮಾಧಾನ

ವ್ಯಕ್ತಪಡಿಸಿದರು. ಈ ಹಿಂದೆ ತನ್ನ ಪಕ್ಷದ ನಾಯಕರಿಗೆ ನಾನು ಬರೆದಿರುವ ತುರ್ತು ರಹಸ್ಯ ಪತ್ರ ಬಹಿರಂಗವಾಗಿದ್ದು, ಪತ್ರದಲ್ಲಿ ಪ್ರಜ್ವಲ್ ಗೆ ಟಿಕೆಟ್ ನೀಡುವ ವಿಚಾರದಲ್ಲಿ ಆರೋಗ್ಯಕರ ನಿರ್ಧಾರ ತೆಗೆದುಕೊಳ್ಳಿ ಎಂದು ಹೇಳಿದ್ದೆ, ಜೊತೆಗೆ ಪ್ರಜ್ವಲ್ ಅವರ ಅಶ್ಲೀಲ ವೀಡಿಯೋಗಳು ಇವೆ ಎಂದು ಉಲ್ಲೇಖ ಮಾಡಿದ್ದೇನೆ.
ಆದರೆ ಈಗ ಆ ಪತ್ರ ಉಲ್ಲೇಖಿಸಿ ಮಾಧ್ಯಮಗಳಲ್ಲಿ ಸುದ್ದಿ ಪ್ರಕಟ ಆಗಿದ್ದು ಕೆಲವರು ನನ್ನ ಮೇಲೆ ಕೆಲವರು ಅನುಮಾನ ವ್ಯಕ್ತ ಪಡಿಸಿದ್ದಾರೆ ಆದರೆ ಅದು ಸುಳ್ಳು ಎಂದರು. ತಾನು ಕೂಡ ಈ ಹಿಂದೆ ಹೊಳೆನರಸೀಪುರ ವಿಧಾನಸಭಾ ಕ್ಷೇತ್ರದ ಬಿಜೆಪಿ ಪರಾಜಿತ ಅಭ್ಯರ್ಥಿಯಾಗಿ ಅಲ್ಲಿನ ರಾಜಕೀಯ ಸ್ಥಿತಿಗತಿಗಳನ್ನು ಅರಿತು ಕೆಟ್ಟ ರಾಜಕಾರಿಣಿಗಳಿಂದ ಕಳಂಕ ಬರಬಾರದು ಎಂಬ ಉದ್ದೇಶದಿಂದ ಬಿಜೆಪಿ ಹೈ ಕಮಾಂಡ್ ಗಳಿಗೆ ಪತ್ರ ಬರೆದಿದ್ದೆ, ಆರೋಗ್ಯಕರ ತೀರ್ಮಾನ ಕೈಗೊಳ್ಳುವ ಕುರಿತು ಸಲಹೆ ನೀಡಿದ್ದೆ ಆದರೆ ಬಿಜೆಪಿ ಹೈ ಕಮಾಂಡ್ ಸರಿಯಾದ ನಿರ್ಧಾರ ತೆಗೆದುಕೊಂಡಿಲ್ಲ ಅದರ ಪರಿಣಾಮವಾಗಿ ಇಂದು ಜೆಡಿಎಸ್ ಜೊತೆ ಕೈ ಜೋಡಿಸಿರುವ ಬಿಜೆಪಿ ಗೆ ಕೂಡ ಅಪಾಮಾನ ಆಗಿದೆ ಎಂದರು.

ಹಾಸನ ಜಿಲ್ಲೆ ರಾಜಕೀಯ ಹಾಗೂ ಐತಿಹಾಸಿಕ ಇತಿಹಾಸ ಹೊಂದಿರುವ ಜಿಲ್ಲೆಯಲ್ಲಿ ಮಹಿಳೆಯರಿಗೆ ಆಗುತ್ತಿರುವ ಅಪಮಾನ ಖಂಡನೀಯ. ಜಿಲ್ಲಾಡಳಿತ ಹಾಗೂ ಪೊಲೀಸ್ ಇಲಾಖೆಗೆ ಮಾಹಿತಿ ಇದ್ದರೂ ಪೊಲೀಸ್ ಇಲಾಖೆ ಕಣ್ಣು ಮುಚ್ಚಿ ಕುಳಿತಿದ್ದು, ಸುಮೊಟೊ ಕೇಸು ದಾಖಲು ಮಾಡಿ ತಪ್ಪಿತರ ವಿರುದ್ಧ ಕ್ರಮ ಕೈಗೊಳ್ಳಬೇಕಿದ್ದ ಜಿಲ್ಲಾಡಳಿತ, ಪೊಲೀಸ್ ಇಲಾಖೆ ಒಂದು ಪಕ್ಷದ ಪರವಾಗಿ ಕೆಲಸ ಮಾಡುತ್ತಿದೆ, ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲು ವಿಫಲವಾಗಿವೆ ಎಂದು ದೂರಿದರು.
Hassan
ವಿಧಾನಸೌಧದಲ್ಲಿ ಕಾರ್ಯಕಲಾಪ ವೀಕ್ಷಿಸಿದ ಎನ್.ಕೆ. ಗಣಪಯ್ಯ ಕಿವುಡ, ಮೂಗ ಮಕ್ಕಳ ರೋಟರಿ ಶಾಲೆಯ ವಿದ್ಯಾರ್ಥಿಗಳು
ಹಾಸನ: ಸಕಲೇಶಪುರದ ಕೌಡಹಳ್ಳಿಯಲ್ಲಿರುವ ಎನ್.ಕೆ. ಗಣಪಯ್ಯ ಕಿವುಡ ಮತ್ತು ಮೂಗ ಮಕ್ಕಳ ರೋಟರಿ ಶಾಲೆಯ ವಿದ್ಯಾರ್ಥಿಗಳು ಮಂಗಳವಾರ ವಿಧಾನಸೌಧದಲ್ಲಿ ನಡೆದ ಸದನದ ಕಾರ್ಯಕಲಾಪ ವೀಕ್ಷಿಸಿದರು.

ಈ ಸಂದರ್ಭದಲ್ಲಿ ಶಾಸಕ ಸಿಮೆಂಟ್ ಮಂಜು ಅವರು ಮಕ್ಕಳನ್ನು ಆತ್ಮೀಯವಾಗಿ ಸ್ವಾಗತಿಸಿ ಸದನದ ವೀಕ್ಷಣೆಗೆ ಅನುವು ಮಾಡಿಕೊಟ್ಟರು.
Hassan
ಹಾಸನ ಮಹಾನಗರ ಪಾಲಿಕೆ ವಾರ್ಡ್ ಪುನರ್ ವಿಂಗಡಣೆ: ಕರಡು ಪ್ರಕಟ
ಹಾಸನ: ಕರ್ನಾಟಕ ಮಹಾನಗರ ಪಾಲಿಕೆಗಳ ಅಧಿನಿಯಮ 1976ರ ಪ್ರಕಾರ, 2011 ರ ಜನಗಣತಿ ಆಧಾರದ ಮೇರೆಗೆ ಹಾಸನ ಮಹಾನಗರ ಪಾಲಿಕೆಗೆ ವಾರ್ಡ್‌ಗಳನ್ನು ಪುನರ್ ವಿಂಗಡಣೆ ನಿಗದಿ ಪಡಿಸಿ ರಾಜ್ಯ ಸರ್ಕಾರ ಕರಡನ್ನು ಪ್ರಕಟಿಸಿದೆ.
ವಾರ್ಡ್‌ಗಳಲ್ಲಿ ಯಾವುದೇ ಬದಲಾವಣೆ ಆಗಿಲ್ಲ. ಈ ಹಿಂದೆ ನಗರಸಭೆ ಅವಧಿಯಲ್ಲಿ ಇದ್ದಷ್ಟೇ ಅಂದರೆ 35 ವಾರ್ಡ್‌ಗಳೇ ಈಗಲೂ ಮುಂದುವರಿದಿವೆ.
ಆದರೆ ಹಾಸನ ಮಹಾನಗರ ಪಾಲಿಕೆಯಾದ ನಂತರ ಎಲ್ಲ 35 ವಾರ್ಡ್‌ಗಳ ವ್ಯಾಪ್ತಿ ಮತ್ತು ವಿಸ್ತೀರ್ಣ ಹಿಗ್ಗಿದೆ.

ಇದೀಗ ಆಯಾ ವಾರ್ಡ್‌ಗಳಿಗೆ ಸಂಬಂಧಿಸಿದ ಗಡಿ ವ್ಯಾಖ್ಯಾನ(ಚೆಕ್ಕುಬಂದಿ) ನಿಗದಿಪಡಿಸಿ ನಗರಾಭಿವೃದ್ಧಿ ಇಲಾಖೆ ಅಧೀನ ಕಾರ್ಯದರ್ಶಿ ಟಿ.ಮಂಜುನಾಥ ಮಂಗಳವಾರ ಆದೇಶ ಹೊರಡಿಸಿದ್ದಾರೆ.
ಈ ಮೂಲಕ ಹಾಸನ ಮಹಾನಗರ ಪಾಲಿಕೆಯ ಕರಡು ವಾರ್ಡ್‌ವಾರು ಕ್ಷೇತ್ರ ಪುನರ್‌ವಿಂಗಡಣಾ ಮಾಹಿತಿಯನ್ನು ಸಾರ್ವಜನಿಕರ ಅವಗಾಹನೆಗಾಗಿ ಪ್ರಕಟಿಸಲಾಗಿದೆ.

ಈ ಅಧಿಸೂಚನೆಯನ್ನು ಕರ್ನಾಟಕ ರಾಜ್ಯ ಪತ್ರದಲ್ಲಿ ಪ್ರಕಟಿಸಿದ ದಿನಾಂಕದಿಂದ ೧೫ ದಿನಗಳ ತರುವಾಯ ಪರಿಗಣನೆಗೆ ತೆಗೆದುಕೊಳ್ಳಲಾಗುವುದು.
ಈ ಕರಡು ಅಧಿಸೂಚನೆಗೆ ಸಂಬಂಧಿಸಿದಂತೆ ಯಾವುದೇ ಆಕ್ಷೇಪಣೆಯನ್ನು ಸಲ್ಲಿಸಲು ಇಚ್ಛಿಸುವ ವ್ಯಕ್ತಿಗಳು, ಅದನ್ನು ಲಿಖಿತದಲ್ಲಿ ಕಾರಣ ಸಹಿತವಾಗಿ ದಾಖಲೆಗಳೊಂದಿಗೆ ನಿಗದಿತ ದಿನಾಂಕಕ್ಕೆ ಮೊದಲು ಹಾಸನ ಜಿಲ್ಲಾಧಿಕಾರಿ ಅವರಿಗೆ ಸಲ್ಲಿಸಬೇಕೆಂದು ಮಂಜುನಾಥ್ ಅವರು ಸೂಚಿಸಿದ್ದಾರೆ.
Hassan
ಎಸ್‌ಡಿಪಿಐ ಮುಖಂಡನ ಮೇಲೆ ಹಲ್ಲೆ ಆರೋಪ: ಮುನೀರ್ ಹಲ್ಲೆಗೊಳಗಾದ ಎಸ್‌ಡಿಪಿಐ ಮುಖಂಡ
ಆಲೂರು: ಹಾಸನ ಜಿಲ್ಲೆಯ ಆಲೂರು ತಾಲೂಕಿನ ಕೆಂಚಮ್ಮನಹೊಸಕೋಟೆ ಗ್ರಾಮದಲ್ಲಿ ಯುವಕರ ಗುಂಪೊಂದು ಎಸ್‌ಡಿಪಿಐ ಮುಖಂಡನ ಮೇಲೆ ಹಲ್ಲೆ ನಡೆಸಿರುವ ಘಟನೆ ನಡೆದಿದೆ.
ಮುನೀರ್ ಹಲ್ಲೆಗೊಳಗಾದ ಎಸ್‌ಡಿಪಿಐ ಮುಖಂಡನಾಗಿದ್ದು ಭುವನೇಶ್ ಹಾಗೂ ಅಕ್ಷಯ್ ಹಲ್ಲೆ ನಡೆಸಿದ ಯುವಕರು.

ಇಂದು ಬೆಳಿಗ್ಗೆ ಕೆಂಚಮ್ಮನ ಹೊಸಕೋಟೆ ಗ್ರಾಮದಲ್ಲಿ ಹಾಸಿಗೆ ರಿಪೇರಿ ಮಾಡುವ ಕಾರ್ಮಿಕ ಬೈಕ್‌ನಲ್ಲಿ ಬರುತ್ತಿದ್ದ ವೇಳೆ ಆತನನ್ನು ಅಡ್ಡಗಟ್ಟಿದ ಭುವನೇಶ್ ಹಾಗೂ ಅಕ್ಷಯ್ ಹಲ್ಲೆ ನಡೆಸುತ್ತಿದ್ದಾರೆ. ಇದನ್ನು ಕಂಡ ಮುನೀರ್ ಹಾಸಿಗೆ ರಿಪೇರಿ ಮಾಡುವವರ ರಕ್ಷಣೆಗೆ ಬಂದಿದ್ದು ಮುನೀರ್ ಮೇಲೂ ಭುವನೇಶ್ ಹಾಗೂ ಅಕ್ಷಯ್ ಹಲ್ಲೆ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ.
ಮುನೀರ್ ಕೆಂಚಮ್ಮನ ಹೊಸಕೋಟೆ ಉಪಪೊಲೀಸ್ ಠಾಣೆಗೆ ದೂರು ಕೊಡಲು ಹೋಗಿದ್ದು ಅಲ್ಲಿ ಯಾರು ಇಲ್ಲದ ಕಾರಣ ಕಾಯುತ್ತಾ ನಿಂತಿದ್ದ ವೇಳೆ ಅಲ್ಲಿಗೆ ಬಂದ ಭುವನೇಶ್ ಹಾಗೂ ಅಕ್ಷಯ್ ಉಪಪೊಲೀಸ್ ಠಾಣೆಯಿಂದ ಹೊರಗೆಳೆದು ಪುನಃ ಮುನೀರ್ ಮೇಲೆ ಹಲ್ಲೆ ನಡೆಸಿದ್ದಾರೆ.

ಹಲ್ಲೆಗೊಳಗಾದ ಮುನೀರ್ ಹಾಸನ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಆಲೂರು ಪೊಲೀಸ್ ಠಾಣೆಗೆ ದೂರು ನೀಡುವುದಾಗಿ ತಿಳಿಸಿದ್ದಾರೆ.
-
National11 hours agoದೇಶದ ನಿಯಮಗಳನ್ನು ಪಾಲಿಸಲು ಸಾಧ್ಯವಾಗದಿದ್ದರೆ ದೇಶ ಬಿಟ್ಟು ತೊಲಗಿ: ವಾಟ್ಸಪ್ಗೆ ಸುಪ್ರೀಂ ಎಚ್ಚರಿಕೆ
-
Special15 hours agoಪೋಸ್ಟ್ ಆಫೀಸ್ ಉದ್ಯೋಗ ಅವಕಾಶ: ನೇರ ನೇಮಕಾತಿ
-
Hassan5 hours agoಎಸ್‌ಡಿಪಿಐ ಮುಖಂಡನ ಮೇಲೆ ಹಲ್ಲೆ ಆರೋಪ: ಮುನೀರ್ ಹಲ್ಲೆಗೊಳಗಾದ ಎಸ್‌ಡಿಪಿಐ ಮುಖಂಡ
-
Special5 hours agoಕಲೆ, ಸಾಹಿತ್ಯ, ನಾಟ್ಯ ಹಾಗೂ ಸಂಸ್ಕಾರದಲ್ಲಿ ಶ್ರೀಮಂತ ದೇಶ ಭಾರತ: ನ್ಯಾ.ಗೋಪಾಲಗೌಡ
-
Kodagu17 hours agoಹೂಡಿಕೆ ಹೆಸರಲ್ಲಿ ಸೈಬರ್ ವಂಚನೆ : 1.14 ಕೋಟಿ ರೂ. ಕಳೆದುಕೊಂಡ ಸಿದ್ದಾಪುರದ ವ್ಯಕ್ತಿ
-
State6 hours agoಕಮಿಷನ್ಗಾಗಿ ಡೀಲ್ ಆರೋಪದ ಆಡಿಯೋ ವೈರಲ್: ಗುತ್ತಿಗೆದಾರ ಸಂಘದ ಗೌರವಾಧ್ಯಕ್ಷ ಬಿ.ಜಗನ್ನಾಥ್ ಅಮಾನತು
-
Kodagu7 hours agoಬಾಲಗೌರವ ಪ್ರಶಸ್ತಿಗೆ ಅರ್ಜಿ ಆಹ್ವಾನ
-
Mandya9 hours agoಅದ್ದೂರಿಯಾಗಿ ಜರುಗಿದ ಶ್ರೀ ಮಾರಮ್ಮ ದೇವಿ ಅಮ್ಮನವರ 3 ನೇ ವರ್ಷದ ವಾರ್ಷಿಕೋತ್ಸವ
