Hassan
7 ಪೆನ್ ಡ್ರೈವ್, 6 ಹಾರ್ಡ್ ಡಿಸ್ಕ್, 4 ಲ್ಯಾಪ್‌ಟಾಪ್, 3 ಡೆಸ್ಕ್ ಟಾಪ್ ವಶ
ಹಾಸನ- ಹಾಸನದಲ್ಲಿ ಅಶ್ಲೀಲ ವೀಡಿಯೋ ಗಳ ಪೆನ್ ಡ್ರೈವ್ ವೈರಲ್ ಪ್ರಕರಣ
ಜಿಲ್ಲೆಯಲ್ಲಿ ತನಿಖೆ ಮುಗಿಸಿದ ಎಸ್ ಐ ಟಿ
18 ಕಡೆ ದಾಳಿ ಮಾಡಿ ಹಲವು ಮಹತ್ವದ ದಾಖಲೆ ವಶಪಡಿಸಿಕೊಂಡಿರೊ ಎಸ್ ಐಟಿ
7 ಪೆನ್ ಡ್ರೈವ್, 6 ಹಾರ್ಡ್ ಡಿಸ್ಕ್, 4 ಲ್ಯಾಪ್‌ಟಾಪ್, 3 ಡೆಸ್ಕ್ ಟಾಪ್ ವಶ

ವಶ ಪಡಿಸಿಕೊಂಡ ಉಪಕರಣಗಳಿಂದ ಮಾಹಿತಿ ಸಂಗ್ರಹ ಮಾಡಿ ಪರಿಶೀಲನೆ
ಪರಿಶೀಲನೆ ವೇಳೆ ಸಿಗೋ ಮಾಹಿತಿ ಆದರಿಸಿ ಮುಂದಿನ ಕ್ರಮಕ್ಕಾಗಿ ಕಾಯುತ್ತಿರೊ ಎಸ್ ಐಟಿ.
ಸಿಸಿ ಕ್ಯಾಮೆರಾಗಳ ದೃಶ್ಯಾವಳಿ, ಕಂಪ್ಯುಟರ್, ಲ್ಯಾಪ್ ಟಾಪ್ ಗಳಲ್ಲಿ ಲಭ್ಯವಾಗೊ ಮಾಹಿತಿಗಾಗಿ ಕಾಯುತ್ತಿರೊ ತನಿಖಾ ಟೀಂ
ಹಾರ್ಡ್ ಡಿಸ್ಕ್, ಲ್ಯಾಪ್‌ಟಾಪ್ ಹಾಗು ಕಂಪ್ಯೂಟರ್ ನಲ್ಲಿ ಡಿಲೀಟ್ ಆದ ಮಾಹಿತಿ ಕಲೆ ಹಾಕುತ್ತಿರೊ ತಂಡ..
ಎಲ್ಲಾ ಮಾಹಿತಿ ಸಂಗ್ರಹ ದ ಬಳಿಕ,ಬಂದ ಮಾಹಿತಿ ಆದರಿಸಿ ಮುಂದಿನ ಕ್ರಮ

ಎಫ್. ಎಸ್ ಎಲ್ ವರದಿಗಾಗಿ ಕಾಯುತ್ತಿರೊ ತನಿಖಾದಿಕಾರಿಗಳು
ಅಶ್ಲೀಲ ವೀಡಿಯೋ ಹಂಚಿಕೆ ಬಗ್ಗೆ ಇಂಚಿಂಚೂ ಮಾಹಿತಿ ಸಂಗ್ರಹ
ದಾಳಿ ನಡೆಸಲಾಗಿರೊ ಎಲ್ಲರ ಮೊಬೈಲ್ ವಶಕ್ಕೆ ಪಡೆದು ಪರಿಶೀಲನೆ
ಮೊಬೈಲ್ ನ ಕಾಲ್ ಟ್ರ್ಯಾಕ್ ಬಗ್ಗೆ ಯೂ ಮಾಹಿತಿ ಸಂಗ್ರಹ
ವೀಡಿಯೋ ವೈರಲ್ ಸಂಬಂದ ದೂರು ದಾಖಲಾಗಿರೊ ಐವರ ಬಗ್ಗೆ ವಿಶೇಷವಾಗಿ ತನಿಖೆ ನಡೆಸುತ್ತಿರೊ ಎಸ್ ಐ ಟಿ ಟೀಂ
v
Hassan
ಚಿರತೆ ದಾಳಿ: ಗೌತವಳ್ಳಿಯಲ್ಲಿ ಇಬ್ಬರು ಕೂಲಿ ಕಾರ್ಮಿಕರಿಗೆ ಗಂಭೀರ ಗಾಯ
ಬೇಲೂರು : ತಾಲೂಕಿನ ಗಡಿ ಗ್ರಾಮವಾದ ಗೌತಹಳ್ಳಿಯಲ್ಲಿ ಸೋಮವಾರ ಬೆಳಿಗ್ಗೆ ಚಿರತೆ ದಾಳಿ ಸಂಭವಿಸಿ ಇಬ್ಬರು ಕೂಲಿ ಕಾರ್ಮಿಕರು ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ.
ಗೌತವಳ್ಳಿ ಗ್ರಾಮವು ಬೇಲೂರು ತಾಲೂಕಿನ ಮಾಡ್ ಗೋಡು–ಚುಂಗನಹಳ್ಳಿ ಬಾರ್ಡರ್ ವ್ಯಾಪ್ತಿಗೆ ಸೇರಿದ್ದು, ಅರಣ್ಯ ಪ್ರದೇಶಕ್ಕೆ ಸಮೀಪದಲ್ಲಿರುವುದರಿಂದ ಚಿರತೆಗಳ ಸಂಚಾರ ಹೆಚ್ಚಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.
ಬೇಲೂರು ತಾಲೂಕಿನ ಗೌತವಳ್ಳಿ ಗ್ರಾಮದ ಎಬಿಸಿ ಚಂದ್ರೇಗೌಡರವರ ಕಾಫಿ ತೋಟದಲ್ಲಿ ಬೆಳಿಗ್ಗೆ ಕೂಲಿ ಕಾರ್ಮಿಕರು ಸುಣ್ಣ ಚೆಲ್ಲುವ ಕೆಲಸದಲ್ಲಿ ತೊಡಗಿದ್ದಾಗ, ತೋಟದೊಳಗಿನಿಂದ ಏಕಾಏಕಿ ಎರಡು ಚಿರತೆಗಳು ದಾಳಿ ನಡೆಸಿವೆ. ಈ ದಾಳಿಯಲ್ಲಿ ಸುಲ್ತಾನ ಹಾಗೂ ಸಬೀನಾ ಎಂಬ ಇಬ್ಬರು ಕಾರ್ಮಿಕರು ಗಂಭೀರವಾಗಿ ಗಾಯಗೊಂಡಿದ್ದಾರೆ. ಚಿರತೆಗಳ ದಾಳಿಯಿಂದ ಕಾರ್ಮಿಕರು ನೆಲಕ್ಕೆ ಬಿದ್ದಿದ್ದು, ಅವರ ಕೂಗು ಕೇಳಿ ಇತರ ಕಾರ್ಮಿಕರು ಧಾವಿಸಿ ಬಂದು ಚಿರತೆಗಳನ್ನು ಓಡಿಸಿದ್ದಾರೆ ಎನ್ನಲಾಗಿದೆ.

ಗಾಯಗೊಂಡ ಇಬ್ಬರನ್ನೂ ತಕ್ಷಣವೇ ಸ್ಥಳೀಯರ ಸಹಕಾರದಿಂದ ಮೂಡಿಗೆರೆ ಸರ್ಕಾರಿ ಆಸ್ಪತ್ರೆಗೆ ಕರೆದೊಯ್ಯಲಾಗಿದ್ದು, ಅಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಲಾಗಿದೆ. ಗಾಯಾಳುಗಳ ಸ್ಥಿತಿ ಗಂಭೀರವಾಗಿರುವುದರಿಂದ ವೈದ್ಯರು ಹೆಚ್ಚಿನ ನಿಗಾವಹಿಸಿ ಚಿಕಿತ್ಸೆ ನೀಡುತ್ತಿದ್ದಾರೆ ಎಂದು ತಿಳಿದುಬಂದಿದೆ.
ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಅರಣ್ಯ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಚಿರತೆಗಳ ಸಂಚಾರ ಇರುವುದರಿಂದ ತೋಟ ಪ್ರದೇಶಗಳಲ್ಲಿ ಕೆಲಸ ಮಾಡುವ ಕೂಲಿ ಕಾರ್ಮಿಕರು ಹಾಗೂ ಗ್ರಾಮಸ್ಥರು ಹೆಚ್ಚಿನ ಎಚ್ಚರಿಕೆ ವಹಿಸಬೇಕು ಎಂದು ಅಧಿಕಾರಿಗಳು ಸೂಚಿಸಿದ್ದಾರೆ. ಜೊತೆಗೆ, ಚಿರತೆಗಳನ್ನು ಹಿಡಿದು ಸುರಕ್ಷಿತವಾಗಿ ಸ್ಥಳಾಂತರಿಸುವಂತೆ ಗ್ರಾಮಸ್ಥರು ಅರಣ್ಯ ಇಲಾಖೆಯನ್ನು ಒತ್ತಾಯಿಸಿದ್ದಾರೆ.

ಈ ಚಿರತೆ ದಾಳಿಯಿಂದ ಗೌತವಳ್ಳಿ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಭಯದ ವಾತಾವರಣ ಆವರಿಸಿದ್ದು, ಬೆಳಿಗ್ಗೆ ಹಾಗೂ ಸಂಜೆ ಸಮಯದಲ್ಲಿ ತೋಟದ ಕೆಲಸಕ್ಕೆ ತೆರಳಲು ಜನರು ಹಿಂಜರಿಯುತ್ತಿದ್ದಾರೆ. ಅರಣ್ಯ ಇಲಾಖೆ ಶೀಘ್ರ ಕ್ರಮ ಕೈಗೊಳ್ಳದಿದ್ದರೆ ಪ್ರತಿಭಟನೆ ನಡೆಸುವುದಾಗಿ ಗ್ರಾಮಸ್ಥರು ಎಚ್ಚರಿಕೆ ನೀಡಿದ್ದಾರೆ.
Hassan
ವಿಶೇಷ ಚೇತನ ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಕೀಚಕ
ಹಾಸನ : ಹಾಸನ ನಗರದಲ್ಲಿ, ಕೀಚಕನೊಬ್ಬ ವಿಶೇಷ ಚೇತನ ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ.ಹಾಸನ ಮಹಿಳಾ ಪೊಲೀಸ್ ಠಾಣೆ ಪೊಲೀಸರು ಆರೋಪಿ ಬಂಧನಕ್ಕೆ ತೆರಳಿದ್ದಾರೆ.
ಈ ವೇಳೆ ಮನೆಯೊಂದರಲ್ಲಿದ್ದ ಸಂತ್ರಸ್ತ ಮಹಿಳೆ ರಕ್ಷಿಸಿದ ಪೊಲೀಸರು,ಸಂತ್ರಸ್ತ ಮಹಿಳೆಯನ್ನು ಪೊಲೀಸರು ವಿಚಾರಣೆ ನಡೆಸಿದಾಗ ವೇಶ್ಯಾವಾಟಿಕೆ ಜಾಲ ಪತ್ತೆ ಹಿಡಿದಿದ್ದಾರೆ.
ಹಾಸನ ನಗರ ಪೊಲೀಸ್ ಠಾಣೆ ವ್ಯಾಪ್ತಿಯ ಗುಡ್ಡೇನಹಳ್ಳಿಕೊಪ್ಪಲಿನಲ್ಲಿ ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದ ಕಿಂಗ್‌ಪಿನ್‌ಗಳ ಬಂಧನ ಮಾಡಿದ್ದಾರೆ.

ನಾಲ್ವರು ಸಂತ್ರಸ್ತೆಯರನ್ನು ಪೊಲೀಸರು ರಕ್ಷಿಸಿದ್ದಾರೆ.ಆಯೀಷ್ ಹಾಗೂ ಪ್ರಮೀಳಾ ಬಂಧಿತ ಕಿಂಗ್‌ಪಿನ್‌ಗಳು ಆಯೀಷ್ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲು ಮಾಡಿದ್ದಾರೆ.
ಹಾನಸ ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು,ಈ ಹಿಂದೆಯೂ ವೇಶ್ಯಾವಾಟಿಕೆ ದಂಧೆಯಲ್ಲಿ ಪೊಲೀಸರಿಗೆಆಯೀಷ್ ಸಿಕ್ಕಿಬಿದ್ದಿದ್ದನು.
ಹಾಸನ ಮಹಿಳಾ ಠಾಣೆ ಇನ್ಸ್‌ಪೆಕ್ಟರ್ ಪಾಲಾಕ್ಷಪ್ರಭು, ಸಿಬ್ಬಂದಿಗಳಾದ ಭಾನುಪ್ರಕಾಶ್, ಸಂಜಯ್, ತೇಜಸ್ವಿ ನೇತೃತ್ವದಲ್ಲಿ ಕಾರ್ಯಾಚರಣೆ ನಡೆದಿದೆ.
Hassan
ಕಾಡಿನ ಕೊಳಲು ಕುವೆಂಪು ಗೀತೆಗಳ ನೃತ್ಯ ರೂಪಕ ಸಮಾರಂಭ
ಹಾಸನ: ಸರ್ವಗುಣ ಯೋಗಿ ಎನಿಸಿಕೊಂಡಿರುವ ರಾಷ್ಟ್ರಕವಿ ಕುವೆಂಪು ಅವರ ಬರಹವನ್ನು ಯುವಕರು ಓದುವ ಮೂಲಕ ಭಾರತೀಯ ಆಧ್ಯಾತಿಕ, ಸಾಂಸ್ಕೃತಿಕ ಪರಂಪರೆಯನ್ನು ಅರಿಯಬೇಕೆಂದು ಆದಿಚುಂಚನಗಿರಿ ಹಾಸನ ಶಾಖಾ ಮಠದ ಶ್ರೀ ಶಂಭುನಾಥ ಸ್ವಾಮೀಜಿ ಸಲಹೆ ನೀಡಿದರು.
ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಜಿಲ್ಲಾ ಘಟಕ, ಜಿಲ್ಲಾ ಅನುದಾನ ರಹಿತ ಶಾಲೆಗಳ ಆಡಳಿತ ಮಂಡಳಿ ಒಕ್ಕೂಟ, ರೋಟರಿ ಕ್ಲಬ್ ಆಫ್ ಹಾಸನ್ ಟೈಗರ್, ಅಮೋಘ ಸುದ್ದಿ ವಾಹಿನಿ ಸಹಯೋಗದಲ್ಲಿ ಬೆಂಗಳೂರಿನ ಮನೋಜ್ಞ ನೃತ್ಯಕಲಾ ಅಕಾಡೆಮಿ ವತಿಯಿಂದ ನಗರದ ಆದಿಚುಂಚನಗಿರಿ ಆಂಗ್ಲ ಮಾಧ್ಯಮ ಶಾಲಾ ಆವರಣದಲ್ಲಿ ಹಮಿಕೊಂಡಿದ್ದ ಕಾಡಿನ ಕೊಳಲು ಕುವೆಂಪು ಗೀತೆಗಳ ನೃತ್ಯ ರೂಪಕ ಸಮಾರಂಭದಲ್ಲಿ ಮಾತನಾಡಿದರು.

ಕುವೆಂಪು ಅವರನ್ನು ಎಲ್ಲರಿಗೂ ಪರಿಚಯಿಸಬೇಕಿದೆ. ಸಾಂಸ್ಕೃತಿಕ, ಆಧ್ಯಾತಿಕವಾಗಿ ಭಾರತ ಸಾಕಷ್ಟು ಖ್ಯಾತಿ ಹೊಂದಿದೆ. ಪುರಾತನ ಪರಂಪರೆ ಬಗ್ಗೆ ವಿಶ್ವವೇ ಅಚ್ಚರಿ ವ್ಯಕ್ತಪಡಿಸುತ್ತದೆ. ಅಂತಹ ಶಕ್ತಿಯನ್ನು ಸಾಹಿತ್ಯದ ಮೂಲಕ ಪರಿಚಯಿಸಿಕೊಟ್ಟವರು ರಾಷ್ಟ್ರಕವಿ ಕುವೆಂಪು ಎಂದರು.
ಮನುಷ್ಯ ಚಿಂತನೆಗಲ್ಲಿ ಭಾವ ಹಾಗು ಅಭಾವ ಮುಖ್ಯವಾಗುತ್ತದೆ. ಯಾವುದನ್ನೇ ಆಗಲಿ ಭಾವದಿಂದ ನೋಡಬೇಕೆ ಹೊರತು ಅಭಾವದಿಂದ ಅಲ್ಲ. ಋಷಿಗಳಿಗೆ ನೋಡಿದ್ದೆಲ್ಲ ಭಾವವಾಗಿ ಕಾಣುತ್ತದೆ. ಆದ್ದರಿಂದಲೇ ಅವರು ಅಸಾಧ್ಯವಾದುದನ್ನು ಸಾಧಿಸಿದ್ದಾರೆಂದರು.
ಭಾವನೆಗಳು ಬದಲಾದರೆ ಮನುಷ್ಯರಾಗಲು ಸಾಧ್ಯವಿಲ್ಲ. ಮನುಷ್ಯ ಭಾವನೆಗಳನ್ನು ಹೊಂದಬೇಕು. ವ್ಯಕ್ತಿಯ ಚಿಂತನಾ ಲಹರಿ ಆಳಕ್ಕಿಳಿಯಬೇಕೆಂದರೆ ಕುವೆಂಪು ಸಾಹಿತ್ಯ ಓದಬೇಕು. ಮರಣ ಇಲ್ಲದ ವಸ್ತು ಎಂದರೆ ಪುಸ್ತಕ ಮಾತ್ರ. ಭಗವಂತ ಕೊಟ್ಟ ಸುಂದರ ಬದುಕನ್ನು ಸಾರ್ಥಕ ಮಾಡಿಕೊಳ್ಳಬೇಕು. ಸತ್ಕಾರ್ಯಗಳಲ್ಲಿ ನಮನ್ನು ನಾವು ತೊಡಗಿಸಿಕೊಳ್ಳಬೇಕೆಂದರು.

ಮಂಡ್ಯ ಕರ್ನಾಟಕ ಸಂಘದ ಅಧ್ಯಕ್ಷ, ಸಾಹಿತಿ ಪ್ರೊ. ಡಾ. ಜಯಪ್ರಕಾಶ್ ಗೌಡ ಅವರು ಮಾತನಾಡಿ, ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಭೈರವೈಕ್ಯ ಡಾ. ಬಾಲಗಂಗಾಧರನಾಥ ಸ್ವಾಮೀಜಿ ನಾಡಿನ ಹಿರಿಮೆಯನ್ನು ಜಗತ್ತಿಗೆ ಪರಿಚಯಿಸಿದ್ದಾರೆ. ಸಾಹಿತ್ಯ, ಆಧ್ಯಾತ ಹಾಗು ವೈಜ್ಞಾನಿಕತೆಗೆ ಪ್ರೋತ್ಸಾಹ ನೀಡಿದ್ದರೆಂದರು.
ಕುವೆಂಪು ಅವರನ್ನು ನೃತ್ಯದ ಮೂಲಕ ಅರಿಯಬೇಕೆಂದು ಹಾಸನದಲ್ಲಿ ಈ ಕಾರ್ಯಕ್ರಮ ಆಯೋಜಿಸಿದ್ದೇವೆ. ಪ್ರೌಢ ಶಾಲಾ ಹಂತದಿಂದಲೇ ನೃತ್ಯದ ಮೂಲಕ ಗಮನ ಸೆಳೆದ ಡಾ. ಮಾನಸಾ ಅವರು ಬಿಇ ಪದವಿ ಪಡೆದು ಪಿಹೆಚ್.ಡಿ. ಕೂಡ ಮಾಡಿದ್ದಾರೆ. ರಾಜ್ಯ ಮಾತ್ರವಲ್ಲದೆ ಅನೇಕ ಕಡೆ ನೃತ್ಯ ಕಾರ್ಯಕ್ರಮಗಳ ಮೂಲಕ ಕುವೆಂಪು ಅವರನ್ನು ರಾಷ್ಟ್ರಕ್ಕೆ ಪರಿಚಯಿಸುತ್ತಿದ್ದಾರೆಂದರು. ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾಧ್ಯಕ್ಷ ಜೆ.ಆರ್.ಕೆಂಚೇಗೌಡ, ಜಿಲ್ಲಾ ಅನುದಾನ ರಹಿತ ಶಾಲೆಗಳ ಆಡಳಿತ ಮಂಡಳಿ ಒಕ್ಕೂಟ ಶಿವರಾಮೇಗೌಡ ಮಾತನಾಡಿದರು.

ವಿಜಯ ಸ್ಕೂಲ್‌ನ ತಾರಾ ಎಸ್. ಸ್ವಾಮಿ, ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ಬಾಗೂರು ಕೃಷ್ಣೇಗೌಡ, ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾಧ್ಯಕ್ಷ ಡಾ.ಎಚ್.ಎಲ್.ಮಲ್ಲೇಶಗೌಡ, ನಗರಸಭೆ ಮಾಜಿ ಅಧ್ಯಕ್ಷ ಡಾ. ಹೆಚ್.ಎಸ್.ಅನಿಲ್ ಕುಮಾರ್, ರೋಟರಿ ಕ್ಲಬ್ ಆಫ್ ಹಾಸನ್ ಟೈಗರ್ ಅಧ್ಯಕ್ಷ ನಿಶ್ಚಯ್ ಧನಪಾಲ್ ಜೈನ್, ಒಕ್ಕಲಿಗರ ಸಂಘದ ರಾಜ್ಯ ನಿರ್ದೇಶಕ ರಘು, ಪತ್ರಕರ್ತರ ಸಂಘದ ಮಾಜಿ ಅಧ್ಯಕ್ಷ ರವಿ ನಾಕಲಗೂಡು ಮತ್ತಿತರರಿದ್ದರು. ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಉಪಾಧ್ಯಕ್ಷ ಹೆಚ್.ಬಿ.ಮದನಗೌಡ ಸ್ವಾಗತಿಸಿದರು.
-
Chamarajanagar3 hours agoಚಿರತೆ ದಾಳಿ: ಹಸು ಬಲಿ ಗ್ರಾಮಸ್ಥರಲ್ಲಿ ಆತಂಕ
-
Chamarajanagar22 hours agoನಾನಂಥವನಲ್ಲಾ ಎಂದ ನಂದಕುಮಮಾರ್: ಚಾಮರಾಜನಗರ ಹಿರಿಕಾಟಿ ಕ್ರಷರ್ ವಿವಾದಕ್ಕೆ ಸ್ಪಷ್ಟನೆ
-
Hassan21 hours agoಕೃಷಿ ಸಾಲವನ್ನು ತೀರಿಸಲಾಗದೆ ರೈತನೋರ್ವ ಆತ್ಮ*ತ್ಯೆ
-
Uncategorized14 hours agoಫೆ.11ರಂದು ನಾಪೋಕ್ಲುವಿನಲ್ಲಿ ಮಸ್ಜಿದು ತೌಹೀದ್ ನೂತನ ಮಸೀದಿ ಉದ್ಘಾಟನೆ ಹಾಗೂ ದಅವಾ ಸಮ್ಮೇಳನ
-
Hassan22 minutes agoಚಿರತೆ ದಾಳಿ: ಗೌತವಳ್ಳಿಯಲ್ಲಿ ಇಬ್ಬರು ಕೂಲಿ ಕಾರ್ಮಿಕರಿಗೆ ಗಂಭೀರ ಗಾಯ
-
Mandya15 hours agoಫೆ.10 ರಂದು ಹಿಂದು ಸಮಾಜ ಜಾಗೃತಿಗಾಗಿ ಹಿಂದೂ ಸಮಾಜೋತ್ಸವ, ಬೃಹತ್ ಶೋಭಾಯಾತ್ರೆ : ಚಂದನ್
-
Kodagu15 hours agoದೇಶೀಯ ಕ್ರೀಡೋತ್ಸವ ಮತ್ತು ಜಾನಪದ ನಮ್ಮೆಗೆ ಅನುದಾನ ಕೋರಿ ಮನವಿ
-
Mysore15 hours agoಮಹಾರಾಜ ಕಾಲೇಜಿನಲ್ಲಿ ನೆಬೆ 40 ಸಮ್ಮಿಲನ
