State
ಪೆಟ್ರೋಲ್ ಡೀಸೆಲ್ ದರ ಏರಿಕೆಗೂ ಚುನಾವಣಾ ಫಲಿತಾಂಶಕ್ಕೂ ಸಂಬಂಧವಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ
ವಿಜಯಪುರ :ಜೂನ್ -16: ಪೆಟ್ರೋಲ್ ಬೆಲೆ ಏರಿಕೆಗೂ ಚುನಾವಣಾ ಫಲಿತಾಂಶಕ್ಕೂ ಸಂಬಂಧವಿಲ್ಲ. ಪ್ರಜಾಪ್ರಭುತ್ವದಲ್ಲಿ ಸೋಲು ಗೆಲುವು ಇದ್ದದ್ದೇ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಅವರು ಇಂದು ವಿಜಯಪುರ ಜಿಲ್ಲೆಯ ಇಂಚಗೇರಿ ಗ್ರಾಮದ ಹೆಲಿಪ್ಯಾಡ್ ನಲ್ಲಿ ಮಾಧ್ಯಮ ದವರೊಂದಿಗೆ ಮಾತನಾಡಿದರು.
ಪೆಟ್ರೋಲ್ ಡೀಸೆಲ್ ಬೆಲೆ ಏರಿಕೆ ಬಗ್ಗೆ ಪ್ರತಿಕ್ರಿಯೆ ನೀಡಿರುವ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರ ಸೇಡಿಗಾಗಿ ದರ ಏರಿಕೆ ಮಾಡಿದ್ದಾರೆ ಎಂಬ ಹೇಳಿಕೆಗೆ ಉತ್ತರಿಸಿದ ಮುಖ್ಯಮಂತ್ರಿಗಳು ವಿಜಯಪುರದಲ್ಲಿ ನಾವು ಸೋತಿದ್ದೇವೆ. ಕರ್ನಾಟಕದಲ್ಲಿ ನಾವು ನಿರೀಕ್ಷೆ ಮಾಡಿದಷ್ಟು ಸ್ಥಾನಗಳು ಬಂದಿಲ್ಲ. ವಿಜಯಪುರದಲ್ಲಿ ಗೆಲ್ಲುತ್ತೇವೆ ಎಂಬ ನಿರೀಕ್ಷೆಯಿತ್ತು. ಕರ್ನಾಟಕದಲ್ಲಿ ಕಳೆದ ಚುನಾವಣೆಗೆ ಹೋಲಿಕೆ ಮಾಡಿದರೆ , ಈ ಬಾರಿ ಒಂಭತ್ತು ಸ್ಥಾನಗಳನ್ನು ಗಳಿಸಿದ್ದೇವೆ. ಬಿಜೆಪಿ ಕಳೆದ ಬಾರಿ 25 ಇದ್ದನ್ನು ಈ ಬಾರಿ 19 ಕ್ಕೆ ಇಳಿದಿದ್ದಾರೆ. ನಮಗೆ 13% ಮತ ಹಂಚಿಕೆಯಾಗಿದೆ. ನಾವು ಸೋತಿದ್ದೇವೆಯೇ ಎಂದು ಪ್ರಶ್ನಿಸಿದರು. ನಮ್ಮ ಲೆಕ್ಕಾಚಾರದ ಪ್ರಕಾರ, ನಿರೀಕ್ಷೆ ಮಾಡಿದಷ್ಟು ಸ್ಥಾನಗಳು ಬಂದಿಲ್ಲ ಅಷ್ಟೇ ಎಂದರು.
ಸೋತಿರುವುದು ಬಿಜೆಪಿ
ಚುನಾವಣೆಯಲ್ಲಿ ಸೋತಿರುವುದು ಬಿಜೆಪಿ. ಕಳೆದ ಬಾರಿ 303 ಸ್ಥಾನಗಳನ್ನು ಪಡೆದು ಈ ಬಾರಿ 240 ಸ್ಥಾನಗಳನ್ನು ಪಡೆದು ಬಿಜೆಪಿ ಸೋತಿದೆ ಎಂದರು. ಕಳೆದ ಬಾರಿ 31% ಈ ಬಾರಿ 41% ಮತ ಹಂಚಿಕೆಯಾಗಿದೆ. 15 ಸ್ಥಾನ ಬರಬಹುದೆಂಬ ನಿರೀಕ್ಷೆಯಿತ್ತು. ನಾವು ಸೋತಿದ್ದೇವೆಯೇ ಎಂದರು. ವಿಧಾನಸಭಾ ಚುನಾವಣೆಗೆ ಹೋಲಿಸಿದರೆ ಕಡಿಮೆ ಮತ ಬಂದಿದೆ, ಮೋದಿ ಅಲೆ ಕಡಿಮೆಯಾಗಿದೆ ಎಂದರು.
ರಾಜ್ಯದಲ್ಲಿ ಪೆಟ್ರೋಲ್ ಬೆಲೆ ಕಡಿಮೆ ಇದೆ
ಪೆಟ್ರೋಲ್ ಡೀಸೆಲ್ ದರ ಏರಿಕೆಗೂ ಚುನಾವಣಾ ಫಲಿತಾಂಶಕ್ಕೂ ಸಂಬಂಧವಿಲ್ಲ. 11.4.2021ರಂದು ಪೆಟ್ರೋಲ್ ಮೇಲೆ 35% ತೆರಿಗೆ ಹಾಗೂ ಡೀಸೆಲ್ ಮೇಲೆ 24% ತೆರಿಗೆ ಹಾಕುತ್ತಿದ್ದರು. ನಂತರ ಕೇಂದ್ರದಲ್ಲಿ ಇಳಿಕೆ ಮಾಡಿದ್ದರಿಂದ ಇವರೂ 35 ರಿಂದ 25.92 ಕ್ಕೆ ನಂತರ ಇಳಿಸಿದರು.
ಡೀಸಲ್ ಮೇಲೆ 14.34ಕ್ಕೆ ಇಳಿಸಿದರು. ಶೇ7 ರೂಪಾಯಿಯಷ್ಟು ಕಡಿಮೆ ಮಾಡಿದರು. ಏಕೆಂದರೆ ಕೇರಳ ಆಗಲಿ, ಮಹಾರಾಷ್ಟ್ರ, ತೆಲಂಗಾಣ, ಆಂಧ್ರ, ತಮಿಳುನಾಡು ಕಡಿಮೆ ಮಾಡಲಿಲ್ಲ. ಈಗ ಕರ್ನಾಟಕದಲ್ಲಿ 99.85 ರೂ ಪೆಟ್ರೋಲ್ ಬೆಲೆಯಿದೆ. ನಿನ್ನೆಯಿಂದ ಮೂರು ರೂಪಾಯಿ ಹೆಚ್ಚು ಮಾಡಿದ್ದೇವೆ. 102 ರೂ ಗೆ ಹೆಚ್ಚಾಗಿದೆ. ಇದು ತಮಿಳುನಾಡಿಗೆ ಸಮವಾಗಿದೆ. ಕೇರಳದ ಕಾಸರಗೋಡಿನಲ್ಲಿ 106.66 ರೂ.ಗಳಿದೆ. ಆಂಧ್ರದ ಅನಂತಪುರದಲ್ಲಿ 109.44 , ತೆಲಂಗಾಣದ ಹೈದರಾಬಾದ್ ನಲ್ಲಿ 107.40 ಹಾಗೂ ಮಹಾರಾಷ್ಟ್ರದಲ್ಲಿ 104.46 ರೂ.ಇದೆ. ಇವೆಲ್ಲಕ್ಕೆ ಹೋಲಿಸಿದರೆ ನಮ್ಮ ದರ ಕಡಿಮೆ ಇದೆ ಎಂದರು.
ಇತರೆ ರಾಜ್ಯಗಳಿಗೆ ಹೋಲಿಸಿದರೆ ಕರ್ನಾಟಕದಲ್ಲಿ ಪೆಟ್ರೋಲ್ ಬೆಲೆ ಕಡಿಮೆ ಇದೆ
ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿಯವರು ಕರ್ನಾಟಕದ ಇತಿಹಾಸದಲ್ಲಿ ಪೆಟ್ರೋಲ್ ಬೆಲೆ ಇಷ್ಟು ದುಬಾರಿಯಾಗಿರಲಿಲ್ಲ ಎಂದು ಹೇಳಿಕೆ ನೀಡಿರುವ ಬಗ್ಗೆ ಮಾತನಾಡಿ ಕುಮಾರಸ್ವಾಮಿ ಹಿಂದೆ ಇದ್ದಾಗ ಶೇ 35% ಇತ್ತು. ಬಿಜೆಪಿ ಸರ್ಕಾರ ಇರುವ ರಾಜಸ್ಥಾನದಲ್ಲಿ 104.86 ರೂ.ಗಳಿದೆ ಹಾಗೂ ಮಧ್ಯಪ್ರದೇಶದಲ್ಲಿ 106.47 ರೂ
ಗಳಿದೆ. ಕರ್ನಾಟದಲ್ಲಿ ಈ ರಾಜ್ಯಗಳಿಗಿಂತ ಕಡಿಮೆ ಇದೆ. ಪಕ್ಕದ ರಾಜ್ಯಗಳಿಗೆ ಸಮವಾಹಿರಲಿ ಎಂಬ ಕಾರಣಕ್ಕೆ ಬೆಲೆ ಏರಿಕೆ ಮಾಡಿರಲಿಲ್ಲ. ಚುನಾವಣೆಯ ನಂತರ ತಲೆಬದ್ಧಗೊಳಿಸಲು ಏರಿಕೆ ಮಾಡಿದ್ದೇವೆ. ಇತರೆ ರಾಜ್ಯಗಳಲ್ಲಿ ಇದಕ್ಕಿಂತ ಹೆಚ್ಚಿದೆ ಎಂದರು.
ಅನುದಾನ ನೀಡಲಾಗಿದೆ
ಗ್ಯಾರಂಟಿಗಳ ಬಗ್ಗೆ ಕಾಂಗ್ರೆಸ್ ನಲ್ಲಿ ಕೆಲವರು ಅಸಮಾಧಾನ ವ್ಯಕ್ತಪಡಿಸಿರುವ ಬಗ್ಗೆ ಮಾತನಾಡಿ ಅನುದಾನವನ್ನು ನೀಡಲಾಗಿದೆ ಎಂದರು.
ಗ್ಯಾರಂಟಿಗಳನ್ನು ಬಡವರ ಅನುಕೂಲಕ್ಕಾಗಿ ಜಾರಿಮಾಡಿದೆ ಚುನಾವಣೆಗಾಗಿ ಅಲ್ಲ
ಸಾರ್ವಜನಿಕರಲ್ಲಿ ಗ್ಯಾರಂಟಿ ಗಳನ್ನು ನಿಲ್ಲಿಸುತ್ತಾರೆ ಎಂಬ ಗಾಳಿಸುದ್ದಿ ಎದ್ದಿರುವ ಬಗ್ಗೆ ಮಾತನಾಡಿ ಗ್ಯಾರಂಟಿಗಳನ್ನು ಬಡವರ ಅನುಕೂಲಕ್ಕಾಗಿ ಜಾರಿಮಾಡಿದೆ ಚುನಾವಣೆಗಾಗಿ ಅಲ್ಲ ಎಂದರು.
State
ಒಂದೇ ಕುಟುಂಬದ ಐವರು ಸೇರಿ ಏಳು ಮಂದಿ ಮಣ್ಣನಡಿ ಸಿಲುಕಿರುವ ಶಂಕೆ ವ್ಯಕ್ತ
ಕಾರವಾರ, ಜು.16: ಅಂಕೋಲಾ ತಾಲೂಕಿನ ಶಿರೂರು ಬಳಿ ರಾಷ್ಟ್ರೀಯ ಹೆದ್ದಾರಿ ಬಳಿ ಭಾರೀ ಪ್ರಮಾಣ ಗುಡ್ಡ ಕುಸಿತ ಸಂಭವಿಸಿದ್ದು, ಒಂದೇ ಕುಟುಂಬದ ಐವರು ಸೇರಿ ಒಟ್ಟು ಏಳು ಮಂದಿ ಮಣ್ಣನಡಿ ಸಿಲುಕಿರುವ ಶಂಕೆ ವ್ಯಕ್ತವಾಗಿದೆ.
ರಾಷ್ಟ್ರೀಯ ಹೆದ್ದಾರಿಯ 66ರಲ್ಲಿ ಐಆರ್ ಬಿ ಕಂಪೆನಿ ಹೆದ್ದಾರಿ ಅಗಲೀಕರಣಕ್ಕಾಗಿ ರಸ್ತೆ ಪಕ್ಕದ ಗುಡ್ಡವನ್ನು ಭಾರೀ ಪ್ರಮಾಣದಲ್ಲಿ ಅಗೆಯಲಾಗಿತ್ತು. ಕಳೆದೆರಡು ದಿನಗಳಿಂದ ನಿರಂತರವಾಗಿ ಮಳೆ ಸುರಿಯುತ್ತಿರುವ ಕಾರಣ ಈ ಗುಡ್ಡ ಭಾರೀ ಪ್ರಮಾಣದಲ್ಲಿ ಕುಸಿದಿದೆ. ಮನೆಯ ಮೇಲೆ ಭಾರೀ ಪ್ರಮಾಣದ ಮಣ್ಣು ಕುಸಿದುಬಿದ್ದ ಪರಿಣಾಮ ಐವರು ಅದರಡಿ ಸಿಲುಕಿರುವ ಶಂಕೆ ಇದೆ. ಈ ವೇಳೆ ಹೆದ್ದಾರಿ ಬದಿಯಲ್ಲಿ ಕ್ಯಾಂಟೀನ್ ವೊಂದರ ಪಕ್ಕದಲ್ಲಿ ನಿಲ್ಲಿಸಿದ್ದ ಟ್ಯಾಂಕರ್ ವೊಂದು ಮಣ್ಣಿನ ರಭಸಕ್ಕೆ ಗಂಗಾವಳಿ ನದಿಗೆ ಕೊಚ್ಚಿಹೋಗಿದೆ. ಅದರಲ್ಲಿದ್ದ ಚಾಲಕ ಹಾಗೂ ಕ್ಲೀನರ್ ಸಹ ಮಣ್ಣಿನಡಿಯಲ್ಲಿ ಸಿಲುಕಿದ್ದಾರೆ.
State
ಹಿರಿಯ ಪತ್ರಕರ್ತ ಕೃಷ್ಣಪ್ಪ ನಿಧನ
ಬೆಂಗಳೂರು:
ಪ್ರಜಾವಾಣಿಯ ಹಿರಿಯ ಪತ್ರಕರ್ತರಾಗಿದ್ದ ಆರ್ ಕೃಷ್ಣಪ್ಪ (75) ಇಂದು ನಿಧನರಾದರು. ಅವರು ಪತ್ನಿ ಒಬ್ಬ ಪುತ್ರನನ್ನು ಅಗಲಿದ್ದಾರೆ.
ಪ್ರಜಾವಾಣಿಗೆ ಸೇರಿದ್ದ ಅವರು ಹಿರಿಯ ಉಪ ಸಂಪಾದಕರಾಗಿ ನಿವೃತ್ತರಾಗಿದ್ದರು.
ಪತ್ರಕರ್ತರ ಸಂಘಟನೆಯಲ್ಲಿ ಸಕ್ರಿಯರಾಗಿದ್ದ ಆರ್ ಕೃಷ್ಣಪ್ಪ, ಕರ್ನಾಟಕ ಪತ್ರಕರ್ತರ ಸಹಕಾರ ಸಂಘ, ಪ್ರೆಸ್ ಕ್ಲಬ್ ಪ್ರಧಾನ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿದ್ದರು. ಕೆಯುಡಬ್ಲ್ಯೂಜೆ ಒಡನಾಡಿಯಾಗಿಯೂ ಇದ್ದರು.
ಪ್ರಸ್ತುತ ಹಿರಿಯ ಪತ್ರಕರ್ತರ ವೇದಿಕೆಯ ಅಧ್ಯಕ್ಷರಾಗಿದ್ದರು.
ಕೆಯುಡಬ್ಲ್ಯೂಜೆ ಸಂತಾಪ:
ಹಿರಿಯ ಪತ್ರಕರ್ತರ ವೇದಿಕೆ ಸಂಘಟನೆಯಲ್ಲಿ ಸಕ್ರೀಯವಾಗಿದ್ದ ಕೃಷ್ಣಪ್ಪ ಅವರ ನಿಧನ ನೋವಿನ ಸಂಗತಿ ಎಂದು ಕೆಯುಡಬ್ಲ್ಯೂಜೆ ಸಂತಾಪ ವ್ಯಕ್ತಪಡಿಸಿದ.
ಕೃಷ್ಣಪ್ಪ ಅವರ ಆತ್ಮಕ್ಕೆ ಶಾಂತಿ ಸಿಗಲಿ. ಮೃತರ ಕುಟುಂಬಕ್ಕೆ ದುಃಖ ಭರಿಸುವ ಶಕ್ತಿಯನ್ನು ದೇವರು ಕರುಣಿಸಲಿ ಎಂದು ಕೆಯುಡಬ್ಲ್ಯೂಜೆ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಪ್ರಾರ್ಥಿಸಿದ್ದಾರೆ.
State
ಕೊರಗಜ್ಜನ ಕಟ್ಟೆಯ ಕೋಲದಲ್ಲಿ ಭಾಗವಹಿಸಿದ ಬಾಲಿವುಡ್ ಕುಟುಂಬ
ಉಳ್ಳಾಲ: ಕುತ್ತಾರು ಕೊರಗಜ್ಜನ ಕಟ್ಟೆಯಲ್ಲಿ ಭಾನುವಾರ ನಡೆದ ಹರಕೆಯ ಕೋಲದಲ್ಲಿ ಬಾಲಿವುಡ್ ಖ್ಯಾತ ನಟಿ ಕತ್ರಿನಾ ಕೈಫ್, ಸೇರಿದಂತೆ ಖ್ಯಾತ ಕ್ರಿಕೆಟಿಗ ಕೆ.ಎಲ್ ರಾಹುಲ್ ಸೇರಿದಂತೆ ನಟ ಸುನಿಲ್ ಶೆಟ್ಟಿ ಕುಟುಂಬ ಭಾಗಿಯಾಗಿತ್ತು.
ನಟಿ ಕತ್ರಿನಾ ಕೈಫ್, ನಟ ಸುನಿಲ್ ಶೆಟ್ಟಿ ಪುತ್ರ ಅಹಾನ್ ಶೆಟ್ಟಿ, ಪುತ್ರಿ ಆಧ್ಯಾ ಶೆಟ್ಟಿ, ಕ್ರಿಕೆಟಿಗ ಕೆ.ಎಲ್ .ರಾಹುಲ್, ಮ್ಯಾಟ್ರಿಕ್ಸ್ ಎಂಟರ್ ಟೈನ್ಮೆಂಟ್ ನ ರೇಷ್ಮಾ ಶೆಟ್ಟಿ, ಕತ್ರಿನಾ ಪತಿ ವಿಕಿ ಕೌಶಲ್ ಹಾಗೂ ವಿ.ಎಮ್ ಕಾಮತ್ ಸೇರಿದಂತೆ ಒಟ್ಟು ಅವರ ಪರಿಚಿತರೇ ಆಗಿರುವ 9 ಮಂದಿಯ ಕೋಲ ಕಟ್ಟೆಯಲ್ಲಿ ಹರಕೆಯ ರೂಪದಲ್ಲಿ ಎರಡು ತಿಂಗಳ ಹಿಂದೆ ಬರೆಸಲಾಗಿತ್ತು. ಇಂದು ವಿಕಿ ಕೌಶಲ್ ಹೊರತುಪಡಿಸಿ ಉಳಿದೆಲ್ಲರೂ ಕೋಲದಲ್ಲಿ ಭಾಗಿಯಾಗಿದ್ದರು. ಕತ್ರಿನಾ, ರೇಷ್ಮಾ ಶೆಟ್ಟಿ , ಆಧ್ಯಾ ಶೆಟ್ಟಿ ಪರಂಪರೆಯಂತೆ ಕೋಲದಿಂದ ಹೊರಗುಳಿದು ಕಟ್ಟೆಯ ಕಚೇರಿಯಲ್ಲಿ ಉಳಿದರೆ, ರಾಹುಲ್ ಮತ್ತು ಅಹಾನ್ ಕೋಲದಲ್ಲಿ ಭಾಗಿಯಾಗಿದ್ದಾರೆ. ಸಂಜೆ 6 ಗಂಟೆ ವೇಳೆಗೆ ಕುತ್ತಾರಿಗೆ ಆಗಮಿಸಿದ್ದ ಬಾಲಿವುಡ್ ಕುಟುಂಬ ಮಾಧ್ಯಮಗಳಿಗೆ ಮಾಹಿತಿ ನೀಡದಂತೆ ಕಟ್ಟೆಯ ಕಚೇರಿ ಅಧಿಕೃತರಲ್ಲಿ ಮನವಿ ಮಾಡಿದ್ದರು.
ಅಲ್ಲದೇ ಸ್ಥಳದಲ್ಲಿ ಫೋಟೊ ತೆಗೆಯಲು ಬಿಡದೇ , ತೆಗೆದವರನ್ನು ಅಳಿಸುವಂತೆ ವಿನಂತಿಸಿದ್ದಾರೆ. ಕಟ್ಟೆಯೊಳಗೆ ಬೆಳಕಿಲ್ಲದೆ ನಡೆಯುತ್ತಿದ್ದ ಕೋಲವನ್ನು ಹೊರಗೇ ನಿಂತ ಕತ್ರಿನಾ ಸೇರಿದಂತೆ ಉಳಿದವರು ಗಾಢವಾಗಿ ಕಣ್ಣುಮುಚ್ಚಿ ಪ್ರಾರ್ಥನೆಯಲ್ಲಿ ಭಾಗಿಯಾದರು.
-
Mysore3 months ago
ಶ್ರೀಮತಿ ಭವಾನಿ ರೇವಣ್ಣ ಸಹೋದರ ಇಂದು ಅಂತ್ಯಕ್ರಿಯೆ
-
State5 months ago
Free sewing machine, ಉಚಿತ ಹೊಲಿಗೆ ಯಂತ್ರ ಪಡೆಯಲು ಅರ್ಜಿ ಸಲ್ಲಿಸಿ!
-
State6 months ago
ಶಾಲಾ ಮಕ್ಕಳಿಗೆ ಫೆಬ್ರವರಿ ತಿಂಗಳಲ್ಲಿ ಭರ್ಜರಿ ಹಾಲಿಡೇ! ಇಲ್ಲಿದೆ ರಜಾ ಲಿಸ್ಟ್!!!
-
Health6 months ago
Sugar Control ಆಗಬೇಕು ಅಂದ್ರೆ ಈ ಹಿಟ್ಟನ್ನು ತಿನ್ನಬೇಕಂತೆ! ಕನ್ಫ್ಯೂಸ್ ಆಗ್ಬೇಡಿ ಸುದ್ದಿ ಓದಿ
-
Hassan3 months ago
ಹಾಸನ ಜಿಲ್ಲೆ ಹೊಳೆನರಸೀಪುರ ತಾಲ್ಲೂಕಿನ ಹರದನಹಳ್ಳಿಯಲ್ಲಿ ಸಂಸದ ಪ್ರಜ್ವಲ್ ರೇವಣ್ಣ ಹೇಳಿಕೆ
-
Uncategorized1 month ago
NEET 2024 ಮರು ಪರೀಕ್ಷೆಗೆ ಒತ್ತಾಯ: ಪೇಪರ್ ಲೀಕ್, ಮೋಸದ ಗ್ರೇಸ್ ಮಾರ್ಕ್, ಒಂದೇ ಕೇಂದ್ರದ ವಿದ್ಯಾರ್ಥಿಗಳು ಟಾಪರ್ಸ್ !!
-
Uncategorized8 months ago
ಅರ್ಜುನನ ಸಮಾದಿಗೆ ಪೂಜೆ ಸಲ್ಲಿಸಿದ ಮೈಸೂರು ರಾಜವಂಶಸ್ಥ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್
-
State6 months ago
ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ!!. ‘ಹಳೆ ಪಿಂಚಣಿ’ ಜಾರಿಗೆ ಗ್ರೀನ್ ಸಿಗ್ನಲ್ ಕೊಟ್ಟ ರಾಜ್ಯ ಸರ್ಕಾರ.