Connect with us

Kodagu

ಮಡಿಕೇರಿಯಿಂದ ಬೆಂಗಳೂರು ವಿಮಾನ ನಿಲ್ದಾಣಕ್ಕೆ ಪ್ಲೈಬಸ್ ಸಂಚಾರ

Published

on

ಮಡಿಕೇರಿ : ಬೆಂಗಳೂರಿನ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಪ್ಲೈಬಸ್ ಸಂಚಾರಕ್ಕೆ ಈಗಾಗಲೇ ಚಾಲನೆ ನೀಡಲಾಗಿದೆ ಎಂದು ಕೆಎಸ್‍ಆರ್‍ಟಿಸಿ ಮಡಿಕೇರಿ ಘಟಕದ ವ್ಯವಸ್ಥಾಪಕರಾದ ಎಂ.ಎಂ.ಮೆಹಬೂಬ್ ಅಲಿ ಅವರು ತಿಳಿಸಿದ್ದಾರೆ.

ಬೆಂಗಳೂರು ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಮಧ್ಯರಾತ್ರಿ 2.30 ಗಂಟೆಗೆ ಹೊರಟು ಮಡಿಕೇರಿಗೆ ಬೆಳಗ್ಗೆ 7.30 ಗಂಟೆಗೆ ತಲುಪಲಿದೆ.

ನಂತರ ಬೆಳಗ್ಗೆ 11.30 ಗಂಟೆಗೆ ಮಡಿಕೇರಿಯಿಂದ ಹೊರಟು ಸಂಜೆ 6 ಗಂಟೆಗೆ ಬೆಂಗಳೂರು ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ತಲುಪಲಿದೆ. ಕೆಎಸ್‍ಆರ್‍ಟಿಸಿ ಬೆಂಗಳೂರು ಕೇಂದ್ರ ವಿಭಾಗದ ನಾಲ್ಕನೇ ಘಟಕದಿಂದ ಪ್ಲೈ ಬಸ್ ಸೌಲಭ್ಯ ಕಲ್ಪಿಸಲಾಗಿದೆ ಎಂದು ಮೆಹಬೂಬ್ ಅಲಿ ಅವರು ತಿಳಿಸಿದ್ದಾರೆ

Continue Reading

Kodagu

ಆ.13ಕ್ಕೆ ಲೋಕಾಯುಕ್ತದಿಂದ ದೂರು ಅರ್ಜಿ ಸ್ವೀಕಾರ

Published

on

ಮಡಿಕೇರಿ : ಕರ್ನಾಟಕ ಲೋಕಾಯುಕ್ತ ಮಡಿಕೇರಿಯ ಲೋಕಾಯುಕ್ತ ಅಧಿಕಾರಿಗಳು ಆಗಸ್ಟ್, 13 ರಂದು ಬೆಳಗ್ಗೆ 11 ಗಂಟೆಯಿಂದ ಮಧ್ಯಾಹ್ನ 1 ಗಂಟೆಗೆಯವರೆಗೆ ಸೋಮವಾರಪೇಟೆ ತಹಶೀಲ್ದಾರ್ ಕಚೇರಿ ಸಭಾಂಗಣದಲ್ಲಿ ಕರ್ನಾಟಕ ಲೋಕಾಯುಕ್ತ ಕಾಯಿದೆಯಡಿ ದೂರು ಅರ್ಜಿಗಳನ್ನು ವಿತರಿಸಲಿದ್ದಾರೆ. ಭರ್ತಿ ಮಾಡಿದ ಮತ್ತು ನೋಟರಿಯಿಂದ ಆಫಿಡೆವಿಟ್ ಮಾಡಿಸಿದ ಅರ್ಜಿ ಸ್ವೀಕರಿಸಲಾಗುವುದು.

ಸರ್ಕಾರಿ ಕಚೇರಿಗಳಲ್ಲಿ ಅಧಿಕೃತ ಕೆಲಸಗಳಲ್ಲಿ ವಿಳಂಬ ಹಾಗೂ ಇನ್ನಿತರ ತೊಂದರೆ ನೀಡುತ್ತಿರುವ ಸರ್ಕಾರಿ ಅಧಿಕಾರಿ/ ನೌಕರರ ವಿರುದ್ದ ಸಾರ್ವಜನಿಕ ದೂರುಗಳನ್ನು ನಿಗದಿತ ಪತ್ರದಲ್ಲಿ ನೀಡಬಹುದಾಗಿದೆ. ಸಾರ್ವಜನಿಕರು ಈ ಅವಕಾಶವನ್ನು ಸದುಪಯೋಗ ಪಡಿಸಿಕೊಳ್ಳಲು ಕೋರಿದೆ.

ಹೆಚ್ಚಿನ ವಿವರಗಳಿಗೆ ಮಡಿಕೇರಿ ಲೋಕಾಯುಕ್ತ ಪೊಲೀಸ್ ಕಚೇರಿ, ಗೌಳಿಬೀದಿ, ದೂರವಾಣಿ ಸಂಖ್ಯೆ. 08272-295297 ನ್ನು ಸಂಪರ್ಕಿಸಬಹುದು ಎಂದು ಕರ್ನಾಟಕ ಲೋಕಾಯುಕ್ತ ಪೊಲೀಸ್ ಉಪಾಧೀಕ್ಷಕರು ತಿಳಸಿದ್ದಾರೆ.

Continue Reading

Kodagu

ವಿಶ್ವ ಸ್ತನ್ಯಪಾನ ಸಪ್ತಾಹ| ಮಕ್ಕಳಲ್ಲಿ ಅಪೌಷ್ಟಿಕತೆ ಹೋಗಲಾಡಿಸಲು ಎದೆಹಾಲು ಸಹಕಾರಿ: ಡಾ.ಮಧುಸೂದನ

Published

on

ಮಡಿಕೇರಿ : ಮಕ್ಕಳಲ್ಲಿ ಅಪೌಷ್ಟಿಕತೆ ಹೋಗಲಾಡಿಸಲು ಆರು ತಿಂಗಳ ವರೆಗೆ ಕಡ್ಡಾಯವಾಗಿ ಎದೆಹಾಲು ಕುಡಿಸಬೇಕು. ಜೊತೆಗೆ 2 ವರ್ಷದವರೆಗೆ ಪೂರಕ ಆಹಾರದ ಜೊತೆಗೆ ಎದೆಹಾಲು ಕುಡಿಸುವಂತಾಗಬೇಕು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಆರ್‍ಸಿಎಚ್ ಅಧಿಕಾರಿ ಡಾ.ಮಧುಸೂದನ್ ಅವರು ತಿಳಿಸಿದ್ದಾರೆ.

ರಾಷ್ಟ್ರೀಯ ಆರೋಗ್ಯ ಅಭಿಯಾನ ಕಾರ್ಯಕ್ರಮದಡಿಯಲ್ಲಿ ಮಕ್ಕಳ ವಿಭಾಗದಿಂದ ನಗರದ ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಬೋಧಕ ಆಸ್ಪತ್ರೆಯ ಮಕ್ಕಳ ಹೊರ ರೋಗಿ ವಿಭಾಗದಲ್ಲಿ ಬುಧವಾರ ನಡೆದ ವಿಶ್ವ ಸ್ತನ್ಯಪಾನ ಸಪ್ತಾಹ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

ಎದೆಹಾಲಿನ ಮಹತ್ವ ಕುರಿತು ಆಗಸ್ಟ್, 1 ರಿಂದ 7 ರವರೆಗೆ ಜಿಲ್ಲೆಯಾದ್ಯಂತ ಜಾಗೃತಿ ಮೂಡಿಸಲಾಗುತ್ತಿದೆ. ಎದೆ ಹಾಲಿನ ಮಹತ್ವ ಬಗ್ಗೆ ಹೆಚ್ಚಿನ ಅರಿವು ಮೂಡಿಸಿದರು ಸಹ ಮೂಡನಂಬಿಕೆಗೆ ಒಳಗಾಗುವುದು ತಪ್ಪುತ್ತಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.
ಮಕ್ಕಳ ಬೆಳವಣಿಗೆಗೆ ಎದೆ ಹಾಲು ಅತ್ಯಮೂಲ್ಯವಾಗಿದೆ. ಎದೆ ಹಾಲಿನ ಮಹತ್ವ ಕುರಿತು ಸ್ಪರ್ಧಾ ಕಾರ್ಯಕ್ರಮವನ್ನು ಹಮ್ಮಿಕೊಂಡು ಜಾಗೃತಿ ಮೂಡಿಸಲಾಗುತ್ತಿದೆ ಎಂದು ವಿವರಿಸಿದರು.

ಜಿಲ್ಲೆಯಲ್ಲಿ 6 ತಿಂಗಳ ಒಳಗಿನ ಮಕ್ಕಳಿಗೆ ನಾಟಿ ಔಷಧಿ ಸೊಪ್ಪಿನ ರಸ ಕುಡಿಸಿ ಉಸಿರಾಟದ ತೊಂದರೆಯಾಗಿ ಸಾವನ್ನಪ್ಪುತ್ತಿರುವುದು ಕಂಡುಬರುತ್ತಿದೆ ಎಂದು ಡಾ.ಮಧುಸೂದನ ಅವರು ಮಾಹಿತಿ ನೀಡಿದರು.

ಕಳೆದ ಮೂರು ತಿಂಗಳಲ್ಲಿ ಒಂದು ವರ್ಷದೊಳಗಿನ 31 ಮಕ್ಕಳು ವಿವಿಧ ಕಾರಣಗಳಿಂದ ಸಾವನಪ್ಪಿರುವುದು ಕಂಡು ಬಂದಿದೆ ಎಂದು ಡಾ.ಮಧುಸೂದನ ವಿವರಿಸಿದರು.
ಕಾಂಗಾರು ಮದರ್ ಕೇರ್ ಬಗ್ಗೆ ಮಾಹಿತಿ ನೀಡಿ ಆರು ತಿಂಗಳವರೆಗೆ ಎದೆ ಹಾಲನ್ನು ಮಾತ್ರವೇ ಕುಡಿಸಿ ಮತ್ತು ಎರಡು ವರ್ಷದವರೆಗೆ ಪೂರಕ ಆಹಾರದೊಂದಿಗೆ ಎದೆ ಹಾಲನ್ನು ಮುಂದುವರಿಸಿ, ಇದರಿಂದ ಅಪೌಷ್ಟಿಕತೆ ನಿಮೋನಿಯಾ ಅತಿಸಾರ ಬೇಧಿ ತಡೆಗಟ್ಟುವಲ್ಲಿ ಹೆಚ್ಚಿನ ಪಾತ್ರ ವಹಿಸುತ್ತದೆ ಎಂಬ ಜ್ಞಾನಿಕ ಮಾಹಿತಿಯನ್ನು ನೀಡಿದರು.

ನವಜಾತ ಶಿಶು ಮರಣ, ಶಿಶು ಮರಣ, ಚಿಕ್ಕ ಮಕ್ಕಳ ಮರಣ ಪ್ರಮಾಣವನ್ನು ಕಡಿಮೆ ಮಾಡುವಲ್ಲಿ ಸ್ತನ್ಯಪಾನವು ಮಹತ್ತರವಾದ ಪಾತ್ರವಹಿಸುತ್ತದೆ ಎಂದು ತಿಳಿಸಿದರು.
ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಯ ಮಕ್ಕಳ ವಿಭಾಗದ ಮುಖ್ಯಸ್ಥರಾದ ಡಾ.ಪುರುಷೋತ್ತಮ ಅವರು ಮಾತನಾಡಿ ಎದೆಹಾಲು ಉಣಿಸುವುದು ಒಂದು ಸಹಜ ಪ್ರಕ್ರಿಯೆಯಾಗಿದ್ದರೂ ಸಾಂಸ್ಥಿಕ ಹೆರಿಗೆಗಳು ಜಾಸ್ತಿ ಆಗುತ್ತಿದ್ದರು ಎದೆಹಾಲು ಕುಡಿಸುವವರ ಪ್ರಮಾಣ ಕಡಿಮೆಯಾಗುತ್ತಿದೆ ಎಂದರು.

ತಾಯಿಯ ಹಾಲು ಅಮೃತಕ್ಕೆ ಸಮಾನ ಅದೇ ಅಮೃತ ಸಮಾನವಾದ ಸ್ತನ್ಯಪಾನವನ್ನು ಮಾತೆಯರು ಸರಿ ಪ್ರಮಾಣದಲ್ಲಿ ಸರಿಯಾದ ರೀತಿಯಲ್ಲಿ ಸ್ತನ್ಯಪಾನ ಮಾಡಿಸಬೇಕು ಎಂದರು.

ತಾಯಿಯ ಹಾಲಿನ ಮಹತ್ವವನ್ನು ಎತ್ತಿ ತೋರಿಸುವ ಸದುದ್ದೇಶವಾಗಿದೆ. ತಾಯಿಯ ಹಾಲನ್ನು ರಕ್ಷಿಸಿ ಪ್ರೋತ್ಸಾಹಿಸಲು ಬೆಂಬಲಿಸಲು ಈ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ ಎಂದು ಮಾಹಿತಿ ನೀಡಿದರು.

ತಾಯಿಯು ತನ್ನ ಇಚ್ಛೆಯಂತೆ ಎದೆ ಹಾಲುಣಿಸಲು ಅಗತ್ಯವಾದ ಸಮಗ್ರ ಮಾಹಿತಿಯನ್ನು ವೈದ್ಯಕೀಯ ವಿದ್ಯಾರ್ಥಿಗಳು ನಾಟಕ ಪ್ರದರ್ಶನದ ಮುಖಾಂತರ ಮಾಹಿತಿಯನ್ನು ರವಾನಿಸಿದರು.

ವಿಶ್ವ ಸ್ತನ್ಯಪಾನ ಸಪ್ತಾಹದ ಅಂಗವಾಗಿ ಎಲ್ಲ ವಿಭಾಗದ ವೈದ್ಯಕೀಯ ವಿದ್ಯಾರ್ಥಿಗಳಿಗೆ ರಂಗೋಲಿ ಸ್ಪರ್ಧೆ, ಪ್ರಬಂಧ ಸ್ಪರ್ಧೆ, ಕವನ ಸ್ಪರ್ಧೆಯನ್ನು ಏರ್ಪಡಿಸಿ ಮಕ್ಕಳ ವಿಭಾಗದ ವತಿಯಿಂದ ಬಹುಮಾನವನ್ನು ವಿತರಿಸಲಾಯಿತು.

ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಶಾಂತಿ ಸ್ವಾಗತಿಸಿ, ನಿರೂಪಿಸಿದರು. ಶುಶ್ರೂಷಕ ಅಧಿಕ್ಷಕರಾದ ವೀಣಾ, ಅಸೋಸಿಯೇಟ್ ಪ್ರೊ. ಶ್ರೀ ಗುರುಪಾದ, ತಾಲೂಕು ಹಿರಿಯ ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿ ಸುಮತಿ, ಕೇರ್ ಕಂಪನಿಯನ್ ಪ್ರೊಗ್ರಾಂ ವತಿಯಿಂದ ನಾಗೇಶ್ ಮತ್ತು ಪ್ರಶಾಂತ್, ಆರೋಗ್ಯ ಇಲಾಖೆಯ ಮತ್ತು ಮಕ್ಕಳ ವಿಭಾಗದ ಎಲ್ಲಾ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

Continue Reading

Kodagu

ಯಶಸ್ವಿ ರೈ ಅವರಿಗೆ ಸನ್ಮಾನ

Published

on

ಮೂರ್ನಾಡು : ದೆಹಲಿಯಲ್ಲಿ ನಡೆಯುವ ಸ್ವಾತಂತ್ರೋತ್ಸವಕ್ಕೆ ರಾಯಭಾರಿಯಾಗಿ ಆಯ್ಕೆ ಯಾಗಿರುವ ಕಾಂತೂರು ಗ್ರಾಮ ಪಂಚಾಯತಿ ವ್ಯಾಪ್ತಿಯ ಕೋಡಂಬೂರು ಗ್ರಾಮದ ನಿವಾಸಿ ಜಯಂತಿ ಬಿ. ಬಿ ಮತ್ತು ಲವಕುಮಾರ್ ದಂಪತಿಗಳ ಮಗನಾದ ಯಶಸ್ವಿ ರೈ ರವರನ್ನು ಕಾಂತೂರ್ ಗ್ರಾಮ ಪಂಚಾಯತಿ ವತಿಯಿಂದ ಸನ್ಮಾನಿಸಲಾಯಿತು.

ಕಾರ್ಯಕ್ರಮದಲ್ಲಿ ಪಂಚಾಯತ್ ಅಧ್ಯಕ್ಷ ಕುಶನ್ ರೈ, ಉಪಾಧ್ಯಕ್ಷರು ರೇಖಾ ಬಿ ಎಸ್, ಪಿ ಡಿ ಓ ಚಂದ್ರಮೌಳಿ, ಸದಸ್ಯರಾದ ವಿಜು ತಿಮ್ಮಯ, ಸೌಮ್ಯ ಸತೀಶ್, ರೀತಾ ಸುದರ್ಶನ್,ಸುಮಾ ಸುಂದರಿ, ಪುಷ್ಪ, ದಿವ್ಯ ಮಿತ್ತೂರ್, ಯಶ್ವಿನ್, ರಘು. ಹೀರ ಸುಬ್ಬಯ್ಯ. ಶೃತಿ, ಲತ, ಶರ್ಮಿಳಾ,ಮೀನಾಕ್ಷಿ ದೇವಯ್ಯ ಮತ್ತು ಸಿಬ್ಬಂದಿಗಳಾದ ನಿರೂಪ, ಶಶಿ,ಲಿಖಿತ,ಕೋಮಲ, ಮತ್ತು ದಿನೇಶ ಹಾಜರಿದ್ದರು.

Continue Reading

Trending

error: Content is protected !!