Kodagu
ಪೊಲೀಸ್ ಸಿಬ್ಬಂದಿ ಮನೆಯಲ್ಲಿ ಕಳ್ಳತನ: 40 ಗ್ರಾಂ ಚಿನ್ನ ಹಾಗೂ ನಗದು ಕಳವು
ಕುಶಾಲನಗರ : ಕುಶಾಲನಗರ ಪಟ್ಟಣ ಪೊಲೀಸ್ ಠಾಣಾ ಸಿಬ್ಬಂದಿಯೋರ್ವರ ಮನೆಯಲ್ಲಿ ಕಳ್ಳತನ ನಡೆದಿದ್ದು, ಖದೀಮರು 40 ಗ್ರಾಂ ಚಿನ್ನ ಹಾಗೂ 15 ಸಾವಿರ ನಗದನ್ನು ದೋಚಿ ಪರಾರಿಯಾಗಿದ್ದಾರೆ.
ಕುಶಾಲನಗರದ ಮಾದಾಪಟ್ಟಣ ನಿವಾಸಿ ಸುನಿಲ್ ಅವರ ಮನೆಯಲ್ಲಿ ಕಳ್ಳತನ ನಡೆದಿದೆ. ಮನೆ ಮಂದಿ ಮನೆಯಲ್ಲಿ ಇಲ್ಲದ ಸಂದರ್ಭ, ಮನೆಯ ಹಿಂಬದಿಯಿAದ ಮನೆಯೊಳಗೆ ನುಗ್ಗಿ ಕಳ್ಳತನ ನಡೆಸಲಾಗಿದೆ. ಅದೇ ರೀತಿಯಲ್ಲಿ ಸುನಿಲ್ ಅವರ ಹಿಂಬದಿಯ ಮನೆಯಲ್ಲಿ ಕೂಡ ಖದೀಮರು ಕದಿಯಲು ವಿಫಲ ಯತ್ನ ನಡೆಸಿದರು ಕೂಡ ಯಶಸ್ವಿಯಾಗಲಿಲ್ಲ .
ಘಟನಾ ಸ್ಥಳಕ್ಕೆ ಬೆರಳಚ್ಚು ತಂತ್ರಜ್ಞರು, ಶ್ವಾನ ದಳ, ಕುಶಾಲನಗರ ಗ್ರಾಮಾಂತರ ಪೊಲೀಸ್ ಠಾಣಾಧಿಕಾರಿ ಮೋಹನ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಘಟನೆ ಬಗ್ಗೆ ಕುಶಾಲನಗರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಖದೀಮರ ಶೋಧ ಕಾರ್ಯಯಲ್ಲಿ ತೊಡಗಿದ್ದಾರೆ.
Kodagu
ಅಪರಿಚಿತ ವಾಹನ ಡಿಕ್ಕಿ ಮಾದಾಪುರ ಮೂಲದ ವ್ಯಕ್ತಿ ಸಾ*ವು
ಕುಶಾಲನಗರ : ಆನೆಕಾಡು ಹೆದ್ದಾರಿಯಲ್ಲಿ ಅಪರಿಚಿತ ವಾಹನ ಡಿಕ್ಕಿಯಾಗಿ ಬೈಕ್ ಸವಾರ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಬುಧವಾರ ರಾತ್ರಿ 7-30 ರ ಸಮಯದಲ್ಲಿ ಜರುಗಿದೆ.
ಮಾದಾಪುರ ಬಳಿಯ ಜಂಬೂರು ಗ್ರಾಮದ ರವಿ ಹಾಗೂ ಗಂಗೆ ದಂಪತಿ ಗಳ ಪುತ್ರ ಮಹೇಶ್ (31) ಎಂಬಾತ ಮೃತ ವ್ಯಕ್ತಿ.

ಕುಶಾಲನಗರದ ಕಡೆಯಿಂದ ದ್ವಿಚಕ್ರ ವಾಹನದಲ್ಲಿ ಆನೆಕಾಡು ಹೆದ್ದಾರಿಯಲ್ಲಿ ಸುಂಟಿಕೊಪ್ಪದ ಕಡೆ ತೆರಳುತ್ತಿದ್ದರು ಎನ್ನಲಾಗಿದೆ.
Kodagu
ಮರಗಳ್ಳರ ತಂಡ ಪತ್ತೆ ಹಚ್ಚಿದ ಅರಣ್ಯಾಧಿಕಾರಿಗಳು
ಸೋಮವಾರಪೇಟೆ: ಮೀಸಲು ಅರಣ್ಯದಲ್ಲಿ ತೇಗ ಸೇರಿದಂತೆ ಬೆಲೆಬಾಳುವ ಮರಗಳನ್ನು ಕಡಿದು ಸಾಗಿಸುತ್ತಿದ್ದ ಮರಗಳ್ಳರ ತಂಡವನ್ನು ಪತ್ತೆ ಹಚ್ಚುವಲ್ಲಿ ಸೋಮವಾರಪೇಟೆ ವಲಯ ಅರಣ್ಯಾಧಿಕಾರಿಗಳು ಯಶಸ್ವಿಯಾಗಿದ್ದಾರೆ.
ಸೋಮವಾರಪೇಟೆ ವಲಯದ ಹುದುಗೂರು ಶಾಖಾ ವ್ಯಾಪ್ತಿಯ ಐಗೂರು ಗ್ರಾಮದ ಕಾಜೂರು ಅರಣ್ಯ ಪ್ರದೇಶದಲ್ಲಿ ತೇಗದ ಮರಗಳನ್ನು ಕಡಿದು ನಾಟಗಳಾನ್ನಾಗಿ ಪರಿವರ್ತಿಸಿ ಶಾಮಿಲ್ಗೆ ಸಾಗಿಸಲು ಬೊಲೆರೋ ಪಿಕಪ್ ವಾಹನಕ್ಕೆ ತುಂಬಿಸುತ್ತಿದ್ದ ಸಂದರ್ಭ ಅರಣ್ಯ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಆರೋಪಿಗಳು ಅರಣ್ಯ ಸಿಬ್ಬಂದಿಗಳ ಮೇಲೆ ದಾಳಿಗೆ ಪ್ರಯತ್ನಿಸಿದ ಸಂದರ್ಭ, ಆತ್ಮರಕ್ಷಣೆಗಾಗಿ ಸಿಬ್ಬಂದಿಗಳು ಗುಂಡು ಹಾರಿಸಿದ್ದಾರೆ. ಎಡವಾರೆ ಗ್ರಾಮದ ಬಿ.ಜೆ.ಸಂತೋಷ್ ಎಂಬ ಆರೋಪಿಯನ್ನು ಸ್ಥಳದಲ್ಲೇ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಆರೋಪಿಗಳಾದ ಎಡವಾರೆ ಗ್ರಾಮದ ಬಿ.ಆರ್.ಆಶ್ವಥ್, ಬಿ.ವಿ.ನಿತೀನ್, ಕೊಡ್ಲಿಪೇಟೆ ಅರಕನಹಳ್ಳಿಯ ಸಯ್ಯದ್ ಜಹೀರ್, ಕುಶಾಲನಗರ ರಸಲ್ಪುರದ ವಿ.ಎಂ.ಷರೀಪ್, ಐಗೂರು ಗ್ರಾಮದ ಅಕ್ಷಯ್ ನಾಪತ್ತೆಯಾಗಿದ್ದಾರೆ. ವಾಹನ ಸಮೇತ ತೇಗದ ನಾಟಗಳನ್ನು ವಶಪಡಿಸಿಕೊಳ್ಳಲಾಗಿದೆ.
ತಲೆಮರೆಸಿಕೊಂಡಿರುವ ಅರೋಪಿಗಳನ್ನು ಬಂಧಿಸಲು ಆರ್ಎಫ್ಒ ಶೈಲೇಂದ್ರ ಕುಮಾರ್ ನೇತೃತ್ವದಲ್ಲಿ ತಂಡವನ್ನು ರಚಿಸಲಾಗಿದೆ. ಬಂಧಿತ ಅರೋಪಿಗೆ ನ್ಯಾಯಾಲಯದಿಂದ ಜಾಮೀನು ದೊರೆತಿದೆ.

ಬುಧವಾರ ಘಟನಾ ಸ್ಥಳಕ್ಕೆ ಸಿಸಿಎಫ್ ಸೋನಾಲ್, ಡಿಎಫ್ಒ ಅಭಿಷೇಕ್, ಎಸಿಎಫ್ ಎ.ಎ.ಗೋಪಾಲ್, ಅರಣ್ಯ ಸಂಚಾರಿ ದಳದ ಎಸಿಎಫ್ ಗಾನಶ್ರೀ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಕಾರ್ಯಚರಣೆಯಲ್ಲಿ ಆರ್ಎಫ್ಒ ಶೈಲೇಂದ್ರ ಕುಮಾರ್, ಡಿಆರ್‌ಎಫ್‌ಒ ಚಂದ್ರೇಶ್, ಸಿಬ್ಬಂದಿಗಳಾದ ಚಂದ್ರಶೇಖರ್, ರವಿ ಕುಮಾರ್, ಅಂತೋಣಿ, ದಿವಾಕರ್, ಸಚಿನ್, ಅಯ್ಯಪ್ಪ, ಜೀವನ್, ಪ್ರಜ್ವಲ್, ಆನೆ ಕಾರ್ಯಪಡೆಯ ಸಿಬ್ಬಂದಿಗಳು ಭಾಗವಹಿಸಿದ್ದರು.
Kodagu
ಕಳಪೆ ಕಾಮಗಾರಿವೆಂದು ಆರೋಪಿಸಿ ಕೂತಿ ಗ್ರಾಮಸ್ಥರಿಂದ ಪ್ರತಿಭಟನೆ
ಸೋಮವಾರಪೇಟೆ: ರಾಜ್ಯ ಹೆದ್ದಾರಿ ಪ್ರಾಧಿಕಾರದಿಂದ 20 ಕೋಟಿ ರೂ. ವೆಚ್ಚದಲ್ಲಿ ಕೂಡುರಸ್ತೆ, ತೋಳೂರುಶೆಟ್ಟಳ್ಳಿ, ಕೂತಿ ಗ್ರಾಮದ 10 ಕಿ.ಮೀ ವ್ಯಾಪ್ತಿಯ ಸಂಪರ್ಕ ರಸ್ತೆ ಕಾಮಗಾರಿ ಕಳಪೆಯಾಗುತ್ತಿದೆ ಎಂದು ಆರೋಪಿಸಿ ಕೂತಿ ಗ್ರಾಮಸ್ಥರು ಕೂಡುರಸ್ತೆ ಜಂಕ್ಷನ್ನಲ್ಲಿ ಲೋಕೂಪಯೋಗಿ ಇಲಾಖೆ ಅಧಿಕಾರಿಗಳನ್ನು ಬುಧವಾರ ರಸ್ತೆಯಲ್ಲಿ ತಡೆದು ತರಾಟೆಗೆ ತೆಗೆದುಕೊಂಡರು.
ಮಾಗಡಿ, ಜಾಲ್ಸೂರು ಎಸ್.ಎಚ್. ೮೫ ಹೆದ್ದಾರಿಯಲ್ಲಿ ರಸ್ತೆ ಕಾಮಗಾರಿ ನಡೆಯುತ್ತಿದ್ದು, ಕಲ್ಕಂದೂರು, ಹೊಸಬೀಡು, ತೋಳೂರುಶೆಟ್ಟಳ್ಳಿ, ಹರಪಳ್ಳಿ, ಇನಕನಹಳ್ಳಿ, ಕೂತಿ, ಎಡದಂಟೆ ಸೇರಿದಂತೆ ಇನ್ನಿತರ ಗ್ರಾಮಗಳ ಜನರ ಹತ್ತಾರು ವರ್ಷಗಳ ರಸ್ತೆ ಕನಸ್ಸು ನನಸ್ಸಾಗುವ ಹಂತದಲ್ಲಿರುವಾಗ, ಗುತ್ತಿಗೆದಾರರು ಕಾಮಗಾರಿಯನ್ನು ಸರಿಯಾಗಿ ನಿರ್ವಹಿಸುತ್ತಿಲ್ಲ. ಲೋಕೋಪಯೋಗಿ ಇಲಾಖೆಯ ಅಧಿಕಾರಿಗಳು ಗುಣಮಟ್ಟದ ಬಗ್ಗೆ ತಲೆಕೆಡಿಸಿಕೊಂಡಿಲ್ಲ ಎಂದು ಕೂತಿ ಗ್ರಾಮಸ್ಥರು ದೂರಿದರು.

ರಸ್ತೆ ಕಾಮಗಾರಿ ಸಂದರ್ಭ ಗ್ರಾಮಸ್ಥರು ತಮ್ಮ ಜಾಗದಲ್ಲಿದ್ದ ಮರದ ರೆಂಬೆಗಳನ್ನು ತೆಗೆದುಕೊಟ್ಟು ಸಹಕಾರ ನೀಡಿದ್ದಾರೆ. ಆದರೂ ಬೇಕಾಬೆಟ್ಟಿ ಕಾಮಗಾರಿ ನಡೆಸುತ್ತಿದ್ದಾರೆ ಎಂದು ಕೂತಿ ಗ್ರಾಮದ ಉಪಾಧ್ಯಕ್ಷ ಕೆ.ಡಿ.ಗಿರೀಶ್ ದೂರಿದರು. ಹೆಚ್ಚಿನ ರಸ್ತೆ ಕಾಮಗಾರಿಗಳು ಕಳಪೆಯಾಗುತ್ತಿರುವುದರಿಂದ ಬಾಳಿಕೆ ಬರುತ್ತಿಲ್ಲ. ಸರ್ಕಾರ ಹಣ ಪೋಲಾಗುತ್ತಿದೆ. ಕಳಪೆ ಕಾಮಗಾರಿಗಳಿಗೆ ಕೆಲ ಇಂಜಿನಿಯರ್ಗಳೇ ಕಾರಣ ಎಂದು ಕೂತಿ ದಿವಾಕರ್ ದೂರಿದರು.
ಗುಣಮಟ್ಟದ ರಸ್ತೆ ಕಾರ್ಯ ನಡೆಸದೆ ಹೋದರೆ ರಸ್ತೆ ತಡೆದು ಪ್ರತಿಭಟಿಸುವುದಾಗಿ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದರು.
ಈ ಸಂದರ್ಭದಲ್ಲಿ ಸ್ಥಳದಲ್ಲಿ ಎಇಇ ಕುಮಾರ್, ಇಂಜಿನಿಯರ್ ಹರ್ಬಜ್ , ರೈತಸಂಘದ ತಾಲ್ಲೂಕು ಅಧ್ಯಕ್ಷ ಕೆ.ಎಂ.ದಿನೇಶ್, ಕೂತಿ ಗ್ರಾಮಸ್ಥರಾದ ಜೈರಾಜ್, ಯಾದವ್, ಲಕ್ಷ್ಮಣ್, ಸಂಜು ಮತ್ತಿತರರು ಇದ್ದರು.
-
Chamarajanagar14 hours agoನಾಳೆ ರಂಗವಾಹಿನಿ ಜಾನಪದ ಕಾಲೇಜು ಉದ್ಘಾಟನೆ ಕಾರ್ಯಕ್ರಮ
-
Chikmagalur21 hours agoಬೆಳ್ಳಿ ಪದಕ ಪಡೆದ ಹೆಡ್ ಕಾನ್ಸ್ ಟೇಬಲ್ ಗಿರೀಶ್ ಟಿ ಎಸ್ ರವರಿಗೆ ಅಭಿನಂದನೆ ಸಲ್ಲಿಸಿದ ಚಿಕ್ಕಮಗಳೂರು ಜಿಲ್ಲಾ ಪೊಲೀಸ್
-
State16 hours agoರಾಜ್ಯ ಸರ್ಕಾರದಿಂದ 15 ವರ್ಷ ಮೀರಿದ ವಾಹನಗಳ ಸ್ಕ್ರ್ಯಾಪ್ ಅನುಮೋದನೆ: ರಾಮಲಿಂಗಾರೆಡ್ಡಿ
-
Chikmagalur13 hours agoಡಿ.20 ರಿಂದ ಜ.6ರವರೆಗೆ ಜಿಲ್ಲೆಯಲ್ಲಿ ಹೆಲಿಟೂರಿಸಂ ಚಟುವಟಿಕೆ
-
Mandya12 hours agoSSLC ಪರೀಕ್ಷಾ ಫಲಿತಾಂಶ ಹೆಚ್ಚಿಸಲು ಕಾರ್ಯೋನ್ಮುಖರಾಗಲು ಸೂಚಿಸಿದ ಕೆ.ಆರ್.ನಂದಿನಿ
-
Hassan20 hours agoಅಪಘಾತದಲ್ಲಿ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿದ್ದ ಯುವಕನ ಬ್ರೈನ್ ಡೆಡ್ : ಅಂಗಾಂಗಗಳನ್ನು ದಾನ ಮಾಡಿದ ಪೋಷಕರು
-
State12 hours agoಗೃಹಲಕ್ಷ್ಮೀ ಯೋಜನೆಯಲ್ಲಿ ಮೋಸ: ನ್ಯಾಯಾಂಗ ತನಿಖೆಗೆ ಆಗ್ರಹಿಸಿದ ಸಿ.ಟಿ.ರವಿ
-
Hassan11 hours agoಪೊಲೀಸರ ಭರ್ಜರಿ ಕಾರ್ಯಚರಣೆ: ಮಟ್ಕಾ ಆಡುತ್ತಿದ್ದ 17 ಮಂದಿ ಬಂಧನ
