Connect with us

Kodagu

ಲೋಕಕಲ್ಯಾಣಕ್ಕಾಗಿ ವಿಶೇಷ ಪೂಜೆ ಸಲ್ಲಿಸಿ,ಸ್ವಾಮೀಜಿಗಳ ಆಶೀರ್ವಾದ ಪಡೆದ ಯದುವಂಶದ ಮಹಾರಾಜ

Published

on

ಲೋಕಕಲ್ಯಾಣಕ್ಕಾಗಿ ವಿಶೇಷ ಪೂಜೆ ಸಲ್ಲಿಸಿ,ಸ್ವಾಮೀಜಿಗಳ ಆಶೀರ್ವಾದ ಪಡೆದ ಯದುವಂಶದ ಮಹಾರಾಜ.
ತಾಲ್ಲೋಕಿನ ಆಲೂರುಸಿದ್ದಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ತಪೋಕ್ಷೇತ್ರ ಮನೆಹಳ್ಳಿ ಮಠಕ್ಕೆ ಭೇಟಿ ನೀಡಿದ
ಮೈಸೂರಿನ ರಾಜ ವಂಶಸ್ಥರಾದ ಶ್ರಿ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಕ್ಷೇತ್ರದ ಆರಾದ್ಯ ದೈವ ವೀರಭದ್ರ ಸ್ವಾಮಿ,ಜೇನುಕಲ್ಲು ಸಿದ್ದೇಶ್ವರ ಸ್ವಾಮಿ ಸನ್ನಿಧಾನದಲ್ಲಿ ಮಠದ ಪೀಠಾಧ್ಯಕ್ಷರಾದ ಶ್ರೀ.ಮಹಾಂತ ಶಿವಲಿಂಗ ಸ್ವಾಮೀಜಿ ನೇತೃತ್ವ ಹಾಗೂ ಜಿಲ್ಲೆಯ ಎಲ್ಲಾ ಸ್ವಾಮೀಜಿಗಳ ಸಮ್ಮುಖದಲ್ಲಿ ಮಳೆ,ಬೆಳೆ, ಪ್ರಜೆಗಳ ಕಲ್ಯಾಣಕ್ಕಾಗಿ ಅಷ್ಟೋತ್ತರ,ಅರ್ಚನೆ ಹಾಗೂ ವಿಶೇಷ ಪೂಜೆ ನೆರವೇರಿಸಿದರು.
ನಂತರ ಬಿಲ್ವ ಗೋ ಶಾಲೆಗೆ ಭೇಟಿನೀಡಿದ ಅವರು ಗೋವುಗಳಿಗೆ ಹಣ್ಣು ಹಂಪಲು ತಿನ್ನಿಸಿ ನಮಿಸಿದರು.
ನಂತರ ಮಾತನಾಡಿದ ಅವರು ಇಂದು ಸಾಕಷ್ಟು ಸವಾಲುಗಳಿವೆ ಅವುಗಳನ್ನು ಮೆಟ್ಟಿನಿಂತು ಅಭಿವೃದ್ದಿ ಸಾಧಿಸಬೇಕಾಗಿದೆ,ಇಂದು ಲೋಕಕಲ್ಯಾಣಕ್ಕಾಗಿ ಭಗವಂತನ ಮೊರೆಹೊಕ್ಕಿದ್ದೇವೆ ಎಲ್ಲಾ ಗುರುಗಳ ಮಾರ್ಗದರ್ಶನ,ಆಶೀರ್ವಾದ ವಿರಲಿ ಎಂದರು.
ಈ ಸಂದರ್ಭ ಮಾಜಿ ಸಚಿವ ಎಂ.ಪಿ.ಅಪ್ಪಚ್ಚು ರಂಜನ್,
ಕೊಡಗುಹಾಸನ ಮಠಧೀಶರ ಪರಿಷತ್ತಿನ ಪ್ರದಾನ ಕಾರ್ಯದರ್ಶಿ ಮುದ್ದಿನಕಟ್ಟೆ ಮಠದ ಶ್ರೀ.ಅಭಿನವ ಸಿದ್ದಲಿಂಗ ಶಿವಾಚಾರ್ಯ ಸ್ವಾಮೀಜಿ,ಕಾರ್ಯದರ್ಶಿ ಕಿರಿಕೂಡ್ಲಿ ಮಠದ ಶ್ರೀ.ಸದಾಶಿವ ಸ್ವಾಮೀಜಿ,ಕಲ್ಲುಮಠದ
ಶ್ರೀ.ಮಹಾಂತ ಸ್ವಾಮೀಜಿ, ತೋಂಟದಾರ್ಯ ಸಂಸ್ಥಾನ ಮಠದ ಶ್ರೀ.ಸ್ವತಂತ್ರ ಬಸವಲಿಂಗ ಸ್ವಾಮೀಜಿ, ತೊರೆನೋರು ಮಠದ ಮಲ್ಲೇಶ ಸ್ವಾಮೀಜಿ,ಶಿಡಿಗಳಲೇ ಮಠದ ಇಮ್ಮಡಿ ಶಿವಲಿಂಗ ಸ್ವಾಮೀಜಿ, ವಿರಕ್ತ ಮಠದ ನಿಶ್ಚಲ ನಿರಂಜನ ದೇಶಿಕೇಂದ್ರ ಸ್ವಾಮೀಜಿ,ಜವೇನಳ್ಳಿ ಮಠದ ಸ್ವಾಮೀಜಿ ಉಪಸ್ಥಿತರಿದ್ದರು.
ತಪೋಕ್ಷೇತ್ರದ ನಾಗರ ಕಟ್ಟೆ ಬಳಿಯಿಂದ ಯದುವೀರ್ ಒಡೆಯರ್ ರವರನ್ನು ಮಂಗಳ ವಾದ್ಯ,ವೀರಗಾಸೆ ಹಾಗೂ ಪೂರ್ಣಕುಂಬ ಕಲಶ ದೊಂದಿಗೆ ದೇವಾಲಯಕ್ಕೆ ಕರೆತರಲಾಯಿತು.

Continue Reading
Click to comment

Leave a Reply

Your email address will not be published. Required fields are marked *

Kodagu

ಮಡಿಕೇರಿಯಲ್ಲಿ ಪ್ರಧಾನಿ ಮೋದಿ ನಿಂದನೆ ಪ್ರಕರಣ : ಆರೋಪಿಗಳಿಗೆ ಜಾಮೀನು ಮಂಜೂರು

Published

on

ಮಡಿಕೇರಿ: ಸ್ಪೈಸಸ್ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದ ಯುವಕರು ದೇಶದ ಪ್ರಧಾನಿಗಳಾದ ಮೋದಿ ಅವರನ್ನು ಅವ್ಯಾಚ ಶಬ್ದಗಳಿಂದ ನಿಂದಿಸಿದ ವಿಡಿಯೋ ವೈರಲ್ ಆದ ಹಿನ್ನೆಲೆಯಲ್ಲಿ ಜಿಲ್ಲಾ ಪೊಲೀಸ್ ಇವರ ವಿರುದ್ಧ ಸುಮೊಟೋ ಕೇಸ್ ದಾಖಲಿಸಿದ ಪ್ರಕರಣದಲ್ಲಿ ಬಂಧಿತರಾದ ಆರೋಪಿಗಳಾದ ಫಹಾದ್, ರಿಯಾಜ್, ಬಾಸಿಲ್, ಸಮೀರ್ ರವರಿಗೆ
ಹಿರಿಯ ಸಿವಿಲ್ ನ್ಯಾಯಧೀಶರು ಮತ್ತು ಮುಖ್ಯ ನ್ಯಾಯಾಂಗ ಮ್ಯಾಜಿಸ್ಟ್ರೇಟ್ ಮಡಿಕೇರಿ ಜಾಮೀನು ಮಂಜೂರು ಮಾಡಿ ಆದೇಶ ಹೊರಡಿಸಿದ್ದಾರೆ.


ಆರೋಪಿಗಳ ಪರವಾಗಿ ಕೊಡಗು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸಹಾಯಕ ಅಭಿರಕ್ಷಕರಾದ ಜುನೈಜ್ ಎಂ. ಎಂ. ವಕೀಲರು ವಾದ ಮಂಡಿಸಿದ್ದರು.

Continue Reading

Kodagu

ಕೊಟ್ಟಮುಡಿ ಮರ್ಕಝ್ ಶಾಲೆಯ ಮಾಷಿತಾಳಿಗೆ ಗ್ಲೋಬೆಲ್ ವಿಷನೆರಿ ಅವಾರ್ಡ್

Published

on

ವರದಿ: ಝಕರಿಯ ನಾಪೋಕ್ಲು

ನಾಪೋಕ್ಲು: ಕೇರಳದ ಕ್ಯಾಲಿಕೆಟ್ ನಲ್ಲಿ ಶಾಲಾ ಆಯೋಜಕತ್ವದಲ್ಲಿ ನಡೆದ ಫೇಸ್ ಎಕ್ಸ್ ಟಾಕ್ ಶೋನಲ್ಲಿ ಭಾಗವಹಿಸಿ ನಾಪೋಕ್ಲು ಬಳಿಯ ಕೊಟ್ಟಮುಡಿಯ ಮರ್ಕಝ್ ವಿದ್ಯಾಸಂಸ್ಥೆಯ ವಿದ್ಯಾರ್ಥಿನಿ ಮಾಷಿತ ಗ್ಲೋಬಲ್ ವಿಷನರಿ ಅವಾರ್ಡ್ ಪಡೆದುಕೊಂಡಿದ್ದಾಳೆ.

ಕೊಟ್ಟಮುಡಿ ಮರ್ಕಝ್ ವಿದ್ಯಾಸಂಸ್ಥೆಯ ಹತ್ತನೇ ತರಗತಿವಿದ್ಯಾರ್ಥಿನಿಯಾಗಿರುವ ಮಾಷಿತ ಮೂರ್ನಾಡುವಿನ ಪಿ. ಎ.ಮುನೀರ್ ಫೈಝಿ ಹಾಗೂ ಬುಶ್ರಾ ದಂಪತಿಗಳ ಪುತ್ರಿಯಾಗಿದ್ದಾಳೆ. ವಿದ್ಯಾರ್ಥಿನಿಯ ಸಾಧನೆಗೆ ಶಾಲೆಯ ಆಡಳಿತ ಮಂಡಳಿ ಹಾಗೂ ಶಿಕ್ಷಕ ವೃಂದ ಅಭಿನಂದನೆ ಸಲ್ಲಿಸಿದ್ದಾರೆ.

Continue Reading

Kodagu

ಕೊಡವರ ಕುರಿತು ಸುಳ್ಳು ಚರಿತ್ರೆ ಸೃಷ್ಟಿಸುವವರ ವಿರುದ್ಧ ಜಾಗೃತರಾಗಲು ಎನ್.ಯು.ನಾಚಪ್ಪ ಕರೆ

Published

on

ಮಡಿಕೇರಿ : ಕೊಡವರ ಕುರಿತು ಸುಳ್ಳು ಚರಿತ್ರೆಗಳನ್ನು ಸೃಷ್ಟಿಸುವ ಮೂಲಕ ಆದಿಮ ಸಂಜಾತ ಏಕ-ಜನಾಂಗೀಯ ಆನಿಮಿಸ್ಟಿಕ್ ಕೊಡವ ಸಮುದಾಯದ ನೈಜ ಚರಿತ್ರೆಯನ್ನು ಬುಡಮೇಲು ಮಾಡುವ ಷಡ್ಯಂತ್ರ ನಡೆಯುತ್ತಿದೆ. ಇದರ ವಿರುದ್ಧ ಕೊಡವರು ಜಾಗೃತರಾಗಬೇಕು ಎಂದು ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆಯ ಅಧ್ಯಕ್ಷ ಎನ್.ಯು.ನಾಚಪ್ಪ ಅವರು ಕರೆ ನೀಡಿದ್ದಾರೆ.

2026-27ರಲ್ಲಿ ನಡೆಯಲಿರುವ 16ನೇ ರಾಷ್ಟ್ರೀಯ ಜನಗಣತಿಯಲ್ಲಿ ಆದಿಮ ಸಂಜಾತ ಏಕ-ಜನಾಂಗೀಯ ಆನಿಮಿಸ್ಟಿಕ್ ಕೊಡವರು ಪ್ರತ್ಯೇಕವಾಗಿ `ಕೊಡವ’ ಎಂದು ದಾಖಲೀಕರಣಗೊಳ್ಳುವಂತೆ ಜನಜಾಗೃತಿ ಮೂಡಿಸುವ ಸಲುವಾಗಿ ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆ ವತಿಯಿಂದ ತಿತಿಮತಿಯಲ್ಲಿ ನಡೆದ 22ನೇ ಮಾನವ ಸರಪಳಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.


ಕಳೆದ ಅನೇಕ ವರ್ಷಗಳಿಂದ ಕೊಡವರ ಹಕ್ಕುಗಳ ಮೇಲೆ ಆಗುತ್ತಿರುವ ದಾಳಿಯನ್ನು ನಾವು ಸಹಿಸಿಕೊಂಡೇ ಬಂದಿದ್ದೇವೆ. ನಮ್ಮ ಹಕ್ಕನ್ನು ಕಸಿದುಕೊಳ್ಳುವವರಿಗೆ ಸರಕಾರ ಅಧಿಕಾರದಲ್ಲಿ ಉಳಿಯುವುದಕ್ಕಾಗಿ ಬೆಂಬಲವನ್ನು ನೀಡುತ್ತಾ ಬಂದಿದೆ. ಸರಕಾರ ಈ ನಾಡಿನ ಬಹುಸಂಖ್ಯಾತರ ಪರವಾಗಿದೆ ಎಂದು ಆರೋಪಿಸಿದರು.

1970ರ ನಂತರ ಈ ರೀತಿಯ ಸುಳ್ಳು ಚರಿತ್ರೆಗಳನ್ನು ಕೊಡವರು ಅಥವಾ ಬೇರೆ ಯಾರೇ ಬರೆದಿದ್ದರೂ ಕನಿಕರ ತೋರದೆ ಅದನ್ನು ಬೆಂಕಿಗೆ ಹಾಕಿ ಅಥವಾ ಕಾವೇರಿ ನದಿಗೆ ಹಾಕಿ ನಾಶ ಮಾಡಿ. ಕೊಡವ ಲ್ಯಾಂಡ್ ಗಾಗಿ ಒತ್ತಾಯಿಸಿ ಮತ್ತು ಕೊಡವರ ಕುರಿತು ಸುಳ್ಳು ಚರಿತ್ರೆ ಸೃಷ್ಟಿಯ ವಿರುದ್ಧ ಜನವರಿ ತಿಂಗಳಿನಿಂದ ಜಿಲ್ಲೆಯಾದ್ಯಂತ ಜಾಗೃತಿ ಅಭಿಯಾನ ನಡೆಸಲಾಗುವುದು ಎಂದರು.


ಇಲ್ಲಿಯವರೆಗೆ ಬಿರುನಾಣಿ, ಟಿ.ಶೆಟ್ಟಿಗೇರಿ, ಕಡಂಗ, ಕಕ್ಕಬ್ಬೆ, ಬಾಳೆಲೆ, ಪೊನ್ನಂಪೇಟೆ, ಮಾದಾಪುರ, ಸುಂಟಿಕೊಪ್ಪ, ಸಿದ್ದಾಪುರ, ನಾಪೋಕ್ಲು, ಗೋಣಿಕೊಪ್ಪ, ವಿರಾಜಪೇಟೆ, ಮೂರ್ನಾಡು, ಚೇರಂಬಾಣೆ, ಚೆಟ್ಟಳ್ಳಿ, ಅಮ್ಮತ್ತಿ, ಶ್ರೀಮಂಗಲ, ಬುಟ್ಟಂಗಾಲ, ಹುದಿಕೇರಿ, ಕುಟ್ಟ ಮತ್ತು ಪಾಲಿಬೆಟ್ಟದಲ್ಲಿ ಜನಜಾಗೃತಿ ಕಾರ್ಯಕ್ರಮ ಯಶಸ್ವಿಯಾಗಿ ನಡೆದಿದೆ ಎಂದು ಎನ್.ಯು.ನಾಚಪ್ಪ ಇದೇ ಸಂದರ್ಭ ತಿಳಿಸಿದರು.

ಮಾನವ ಸರಪಳಿಯಲ್ಲಿ ಕಾಣತಂಡ ನವ್ಯಾ ನವೀನ್, ಚೆಪ್ಪುಂಡಿರ ರಾಮಕೃಷ್ಣ, ಪಾಳೆಂಗಡ ಮನು, ಬೊಳ್ಳಿಮಾಡ ನಂಜಪ್ಪ, ನೆಲ್ಲಮಕ್ಕಡ ವಿವೇಕ್ ಪಾಲ್ಗೊಂಡಿದ್ದರು.

ಗುರು-ಕಾರೋಣ-ಸೂರ್ಯ-ಚAದ್ರ, ಜಲದೇವಿ ಕಾವೇರಿ, ಪರ್ವತ ದೇವಿ, ಪ್ರಕೃತಿ ದೇವಿ, ಭೂದೇವಿ ಮತ್ತು ಪವಿತ್ರ ಸಂವಿಧಾನದ ಹೆಸರಿನಲ್ಲಿ ಸಿಎನ್‌ಸಿ ಹೋರಾಟದ ಪರ ಪ್ರತಿಜ್ಞಾವಿಧಿ ಸ್ವೀಕರಿಸಿದರು. ರಾಷ್ಟçಗೀತೆ ಜನ-ಗಣ-ಮನ ಪಠಣದೊಂದಿಗೆ ಕಾರ್ಯಕ್ರಮ ಸಮಾರೋಪಗೊಂಡಿತು.

Continue Reading

Trending

error: Content is protected !!