Connect with us

Chamarajanagar

ಚಾಮರಾಜನಗರ ಪ್ರಾದೇಶಿಕ ರೇಷ್ಮೆ ಸಂಶೋಧನಾ ಕೇಂದ್ರ ಮುಂದುವರೆಸಲು ಸಂಸದ ಸುನೀಲ್ ಬೋಸ್ ಮಾಡಿದ ಮನವಿಗೆ ಕೇಂದ್ರದಿಂದ ಸಕಾರಾತ್ಮಕ ಸ್ಪಂದನೆ

Published

on

ಚಾಮರಾಜನಗರ: ಚಾಮರಾಜನಗರದಲ್ಲಿರುವ ಪ್ರಾದೇಶಿಕ ರೇಷ್ಮೆ ಸಂಶೋಧನಾ ಕೇಂದ್ರವನ್ನು ಚಾಮರಾಜನಗರದಲ್ಲಿಯೇ ಮುಂದುವರೆಸಲು ಹಾಗೂ ಈ ಸಂಶೋಧನಾ ಸಂಸ್ಥೆಗೆ ಅಗತ್ಯ ಮಾನವ ಸಂಪನ್ಮೂಲ ಮತ್ತು ಅನುದಾನ ನೆರವು ಒದಗಿಸಲು ಕೋರಿ ಲೋಕಸಭಾ ಸದಸ್ಯ ಸುನೀಲ್ ಬೋಸ್ ಅವರು ಮಾಡಿದ್ದ ಮನವಿಗೆ ಕೇಂದ್ರ ಜವಳಿ ಸಚಿವರಾದ ಗಿರಿರಾಜ್ ಸಿಂಗ್ ಅವರು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ.

ಲೋಕಸಭಾ ಸದಸ್ಯರಾದ ಸುನೀಲ್ ಬೋಸ್ ಅವರಿಗೆ ಕೇಂದ್ರ ಜವಳಿ ಸಚಿವರಾದ ಗಿರಿರಾಜ್ ಸಿಂಗ್ ಅವರು ಪತ್ರ ಬರೆದಿದ್ದಾರೆ.

ಚಾಮರಾಜನಗರದಲ್ಲಿರುವ ರೇಷ್ಮೆ ಪ್ರಾದೇಶಿಕ ಸಂಶೋಧನಾ ಕೇಂದ್ರವನ್ನು ಚಾಮರಾಜನಗರದಲ್ಲಿಯೇ ಮುಂದುವರೆಸಲು ಮತ್ತು ರೇಷ್ಮೆ ಕ್ಷೇತ್ರ ಹಾಗೂ ಗ್ರಾಮೀಣ ಭಾಗದ ಆರ್ಥಿಕತೆ ಹಿತಾಸಕ್ತಿಯಿಂದ ರೇಷ್ಮೆ ಸಂಶೋಧನಾ ಸಂಸ್ಥೆಯನ್ನು ಬಲಪಡಿಸುವ ಉದ್ದೇಶದಿಂದ ಅಗತ್ಯವಿರುವ ಮಾನವ ಸಂಪನ್ಮೂಲ ಹಾಗೂ ಹಣಕಾಸು ನೆರವು ಕೋರಿ ಕಳೆದ ಜುಲೈ .24 ರಂದು ತಾವು ಕಳುಹಿಸಿರುವ ಪತ್ರವನ್ನು ಸ್ವೀಕರಿಸಲಾಗಿದೆ.

ತಮ್ಮ ಮನವಿ ಕುರಿತು ಅಗತ್ಯ ಕ್ರಮವಹಿಸಲು ಸಂಬಂಧಿಸಿದ ವಿಭಾಗಕ್ಕೆ ತಮ್ಮ ಪತ್ರವನ್ನು ಕಳುಹಿಸಲಾಗಿದೆ ಎಂದು ಕೇಂದ್ರ ಜವಳಿ ಸಚಿವರು ಲೋಕಸಭಾ ಸದಸ್ಯ ಸುನೀಲ್ ಬೋಸ್ ಅವರಿಗೆ ಬರೆದ ಪತ್ರದಲ್ಲಿ ತಿಳಿಸಿದ್ದಾರೆ.

Continue Reading

Chamarajanagar

ಕೊಳ್ಳೇಗಾಲ ಪಟ್ಟಣದಲ್ಲಿ 15 ಆಡಿ ಗಣೇಶ್ ಮೂರ್ತಿ ಇಂದು ವಿಸರ್ಜನೆ

Published

on

ವರದಿ : ಸುನೀಲ್ ಪ್ರಶಾಂತ್

ಕೊಳ್ಳೇಗಾಲ: ಪಟ್ಟಣದಲ್ಲಿ ಗೌರಿ ಗಣೇಶ್ ಹಬ್ಬದ ದಿನದಂದು ಪ್ರತಿಷ್ಠಾಪಿಸಿದ್ದ 15 ಆಡಿ, ಗಣೇಶ್ ನ ಮೂರ್ತಿ ಯನ್ನು ಇಂದು ವಿಸರ್ಜನೆ.

ಪಟ್ಟಣದ ನಾರಾಯಣ ಸ್ವಾಮಿ ಮಠದ ಅವರಣ ದಲ್ಲಿ ಗಣೇಶ್ ನನ್ನು ಪ್ರತಿಷ್ಠಾಪಿಸಿ ಅಂದಿನಿಂದ ಪ್ರತಿದಿನವೂ ಹಲವು ಕಾರ್ಯಕ್ರಮ ವನ್ನು ಹಮ್ಮಿಕೊಳ್ಳಲಾಗುತಿತ್ತು.

ಇಂದು ರಾಘವನ್ ಗುರೂಜಿ ನೇತೃತ್ವದಲ್ಲಿ ಪಟ್ಟಣದ ಪ್ರಮುಖ ರಸ್ತೆಯಲ್ಲಿ ಗಣೇಶ್ ನ ಮೂರ್ತಿ ಯನ್ನು ಮೆರವಣಿಗೆ ಮಾಡಿಸಿ ಮೆರವಣಿಗೆಯಲ್ಲಿ ಕಲಾ ತಂಡ ಗಳು ಬಾಗಿ ಯಾಗಿ ವಿಶೇಷ ಮೆರಗು ತಂದರು. ಸ್ವತಃ ರಾಘವನ್ ಗುರೂಜಿ ರವರು ಮೆರವಣಿಗೆ ಯಲ್ಲಿ ಕಲಾ ತಂಡ ಹಾಗೂ ಯುವಕರ ಜೊತೆ ಸೇರಿ ಕುಣಿದು ಕುಪ್ಪಳಿಸಿದರು.

ಈ ಸಂದರ್ಭದಲ್ಲಿ ಮೆರವಣಿಗೆ ವೇಳೆ ಯಾವುದೇ ತೊಂದರೆ ಯಾಗದಂತೆ ಬಿಗಿ ಪೊಲೀಸ್ ಬಂಧುಬಾಸ್ತ್  ಏರ್ಪಡಿಸಲಾಯಿತು.

Continue Reading

Chamarajanagar

ಎಸ್.ಚರಣ್‌ ಗೆ ರಾಜ್ಯಮಟ್ಟದ ಬಹುಮಾನ

Published

on

ಚಾಮರಾಜನಗರ: ನಗರದ ಛಾಯಾಗ್ರಾಹಕ ಎಸ್.ಚರಣ್ ಬಿಳಿಗಿರಿ ಅವರಿಗೆ ರಾಜ್ಯಮಟ್ಟದ ಛಾಯಾಗ್ರಾಹಕ ಸ್ಪರ್ಧೆಯಲ್ಲಿ ಸಮಾಧಾನಕರ ಬಹುಮಾನ ಲಭಿಸಿದೆ.

ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ ಅಂಗವಾಗಿ ಮೈಸೂರು ಪತ್ರಿಕಾ ಛಾಯಾಗ್ರಾಹಕರ ಸಂಘದ ವತಿಯಿಂದ ರಾಜ್ಯ ಮಟ್ಟದ ಸುದ್ದಿ ಛಾಯಾಚಿತ್ರ ಸ್ಪರ್ಧೆಯನ್ನು ಆಯೋಜಿಸಲಾಗಿತ್ತು. ಈ ಸ್ಪರ್ಧೆಯಲ್ಲಿ ರಾಜ್ಯದ ವಿವಿಧ ಜಿಲ್ಲೆಗಳ ಪತ್ರಿಕಾ ಛಾಯಾಗ್ರಾಹಕರು ತಮ್ಮ ಸುದ್ದಿ ಛಾಯಾಚಿತ್ರಗಳನ್ನು ಕಳುಹಿಸಿದ್ದರು.

ಹಿರಿಯ ಛಾಯಾಗ್ರಾಹಕ ದಿವಂಗತ ನೇತ್ರರಾಜು ಸ್ಮರಣಾರ್ಥ ಅತ್ಯುತ್ತಮ ಛಾಯಾಚಿತ್ರಕ್ಕೆ ಬಹುಮಾನವನ್ನು ಸಹ ಘೋಷಿಸಲಾಗಿತ್ತು. ಈ ರಾಜ್ಯ ಮಟ್ಟದ ಛಾಯಾಗ್ರಾಹಕ ಸ್ಪರ್ಧೆಯಲ್ಲಿ ಎಸ್. ಚರಣ್ ಬಿಳಿಗಿರಿ ಚಾಮರಾಜನಗರ ಇವರು ಸಮಾಧಾನಕರ ಬಹುಮಾನವನ್ನು ತಮ್ಮದಾಗಿಸಿಕೊಂಡಿದ್ದಾರೆ.

ಇವರಿಗೆ ನಗರದ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಹಾಗೂ ಚಾಮರಾಜನಗರ ಛಾಯಾಗ್ರಹಕ ಸಂಘ, ಎಲ್ಲಾ ಸಂಘ-ಸಂಸ್ಥೆಗಳು ಅಭಿನಂದಿಸಿದ್ದಾರೆ.

Continue Reading

Chamarajanagar

ಮಹಾರಾಷ್ಟ್ರದ ನಾಗಪುರದಲ್ಲಿರುವ ದೀಕ್ಷಾಭೂಮಿ ಯಾತ್ರೆಗೆ ಅರ್ಜಿ ಸಲ್ಲಿಸುವ ಅವಧಿ ವಿಸ್ತರಣೆ

Published

on

ಚಾಮರಾಜನಗರ: ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಡಾ.ಬಿ.ಆರ್.ಅಂಬೇಡ್ಕರ್ ಅನುಯಾಯಿಗಳು ಮಹಾರಾಷ್ಟ್ರದ ನಾಗಪುರರದಲ್ಲಿನ ದೀಕ್ಷಾಭೂಮಿ ಯಾತ್ರೆ ಕೈಗೊಳ್ಳುವ ಸಂಬಂಧ ಅರ್ಜಿ ಸಲ್ಲಿಸುವ ಅವಧಿಯನ್ನು ಅಕ್ಟೋಬರ್ 15 ರವರೆಗೆ ವಿಸ್ತರಿಸಲಾಗಿದೆ.

ರಾಜ್ಯದಿಂದ ಡಾ.ಬಿ.ಆರ್.ಅಂಬೇಡ್ಕರ್ ಅನುಯಾಯಿಗಳನ್ನು ಇಲಾಖಾ ವತಿಯಿಂದ ನಾಗಪುರದಲ್ಲಿರುವ ದೀಕ್ಷಾಭೂಮಿ ಯಾತ್ರೆ ಕೈಗೊಳ್ಳಲು ಸಾರಿಗೆ, ರೈಲಿನ ವ್ಯವಸ್ಥೆ ಕಲ್ಪಿಸುವ ಸಂಬಂಧ ಅರ್ಹ ಯಾತ್ರಾರ್ಥಿಗಳನ್ನು ಆಯ್ಕೆಗಾಗಿ ಅರ್ಜಿ ಸಲ್ಲಿಸಲು ಸೆಪ್ಟಂಬರ್ 9 ಕಡೆಯ ದಿನವೆಂದು ನಿಗದಿಪಡಿಸಲಾಗಿತ್ತು.

ಡಾ. ಬಿ.ಆರ್. ಅಂಬೇಡ್ಕರ್ ಅನುಯಾಯಿಗಳ ಹಿತದೃಷ್ಠಿಯಿಂದ ದೀಕ್ಷಾಭೂಮಿ ಯಾತ್ರೆ ಕೈಗೊಳ್ಳುವ ಸಂಬಂಧ ಅರ್ಜಿ ಸ್ವೀಕರಿಸುವ ಅವಧಿಯನ್ನು ಅಕ್ಟೋಬರ್ 15ರ ಸಂಜೆ 5.30 ಗಂಟೆಯವರೆಗೂ ವಿಸ್ತರಿಸಲಾಗಿದೆ.

ಆಸಕ್ತರು ಆನ್‌ಲೈನ್ ಮೂಲಕ ಸಮಾಜ ಕಲ್ಯಾಣ ಇಲಾಖೆಯ ವೆಬ್‌ಸೈಟ್ www.swd.karnataka.gov.in ನಲ್ಲಿ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ಜಿಲ್ಲೆಯ ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರು ಹಾಗೂ ಸಂಬಂಧಿಸಿದ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೆಶಕರನ್ನು ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ.

Continue Reading

Trending

error: Content is protected !!