Politics
ಆರ್‌ಎಸ್‌ಎಸ್ ವಿರುದ್ಧ ಪೋಸ್ಟ್ ಪ್ರಕರಣ: ಸಚಿವ ಪ್ರಿಯಾಂಕ್ ಖರ್ಗೆ, ನಲಪಾಡ್‌ಗೆ ಕೋರ್ಟ್ ಸಮನ್ಸ್
ಬೆಂಗಳೂರು: ಆರ್‌ಎಸ್‌ಎಸ್ ವಿರುದ್ಧ ಅವಹೇಳನಕಾರಿ ಪೋಸ್ಟ್ ಹಾಗೂ ಹೇಳಿಕೆ ನೀಡಿದ ಆರೋಪದಡಿ ಸಚಿವ ಪ್ರಿಯಾಂಕ್ ಖರ್ಗೆ ಮತ್ತು ಮೊಹಮ್ಮದ್ ಹ್ಯಾರಿಸ್ ನಲಪಾಡ್ ಅವರಿಗೆ ಕೋರ್ಟ್ ಸಮನ್ಸ್ ಜಾರಿ ಮಾಡಿದೆ.
ಬೆಂಗಳೂರು 42ನೇ ACJM ಕೋರ್ಟ್ ಜುಲೈ 21ರಂದು ಖುದ್ದಾಗಿ ಹಾಜರಾಗುವಂತೆ ಇಬ್ಬರಿಗೂ ಆದೇಶ ನೀಡಿದೆ. ಆದರೆ ಪ್ರಿಯಾಂಕ್ ಖರ್ಗೆ ವಿರುದ್ಧ ಕ್ರಿಮಿನಲ್ ಮಾನನಷ್ಟ ಪ್ರಕರಣವನ್ನು ನ್ಯಾಯಾಲಯ ಇನ್ನೂ ಅಂಗೀಕರಿಸಿಲ್ಲ ಎಂದು ತಿಳಿದುಬಂದಿದೆ.

2025 ಅಕ್ಟೋಬರ್ 14ರಂದು ಆರ್‌ಎಸ್‌ಎಸ್ ಕುರಿತು ಟ್ವೀಟ್ ಮಾಡಿದ ಹಿನ್ನೆಲೆಯಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘ ಸದಸ್ಯ ಎ. ತೇಜಸ್ ಅವರು ಖಾಸಗಿ ದೂರು ದಾಖಲಿಸಿದ್ದರು. ಅದೇ ರೀತಿ ಯೂಟ್ಯೂಬ್ ಚಾನೆಲ್‌ನಲ್ಲಿ ನಲಪಾಡ್ ನೀಡಿದ ಹೇಳಿಕೆಗಳು ಸಂಘದ ಘನತೆಗೆ ಧಕ್ಕೆಯಾಗಿದೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.
ಕೋರ್ಟ್ ಮುಂದಿನ ವಿಚಾರಣೆಯನ್ನು ಜುಲೈ 21ಕ್ಕೆ ನಿಗದಿಪಡಿಸಿದೆ.
Politics
ಎಲ್ ನಿನೋ ಎಚ್ಚರಿಕೆ: 2027ರವರೆಗೆ ತಾಪಮಾನ ಏರಿಕೆ ಸಾಧ್ಯತೆ; ರಾಜ್ಯ ಸರ್ಕಾರದಿಂದ ಮುನ್ನೆಚ್ಚರಿಕೆ ಕ್ರಮ
ಬೆಂಗಳೂರು: ಜಾಗತಿಕ ಮಟ್ಟದಲ್ಲಿ ತೀವ್ರಗೊಳ್ಳುತ್ತಿರುವ ಎಲ್ ನಿನೋ (El Niño) ಹವಾಮಾನ ವೈಪರೀತ್ಯದ ಪರಿಣಾಮವಾಗಿ ರಾಜ್ಯದಲ್ಲಿ ತಾಪಮಾನ ಏರಿಕೆ, ಮುಂಗಾರು ಮಳೆ ಕೊರತೆ ಹಾಗೂ ಬರದ ಪರಿಸ್ಥಿತಿ ಎದುರಾಗುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಕರ್ನಾಟಕ ಸರ್ಕಾರ ಸಮಗ್ರ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ. ಈ ಕುರಿತು ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್ ಅಧಿಕಾರಿಗಳಿಗೆ ಅಗತ್ಯ ಸೂಚನೆಗಳನ್ನು ನೀಡಿದ್ದಾರೆ.
ಭಾರತೀಯ ರಾಷ್ಟ್ರೀಯ ಸಾಗರ ಮಾಹಿತಿ ಸೇವೆಗಳ ಕೇಂದ್ರ (INCOIS) ಮಾಹಿತಿ ಪ್ರಕಾರ, ಎಲ್ ನಿನೋ ಪರಿಣಾಮವು 2027ರ ಮೇ ತಿಂಗಳವರೆಗೆ ಮುಂದುವರಿಯುವ ಸಾಧ್ಯತೆ ಇದೆ. ಇದರಿಂದ ರಾಜ್ಯದಲ್ಲಿ ಸಾಮಾನ್ಯಕ್ಕಿಂತ ಹೆಚ್ಚಿನ ಉಷ್ಣಾಂಶ ದಾಖಲಾಗುವ ಸಾಧ್ಯತೆ ಇದ್ದು, ನೈಋತ್ಯ ಮುಂಗಾರು ದುರ್ಬಲಗೊಂಡು ಜಲಾಶಯಗಳ ನೀರಿನ ಮಟ್ಟ ಕುಸಿತ, ಕುಡಿಯುವ ನೀರಿನ ಸಮಸ್ಯೆ ಹಾಗೂ ಕೃಷಿ ಉತ್ಪಾದನೆಗೆ ಹೊಡೆತ ಬೀಳುವ ಆತಂಕ ವ್ಯಕ್ತವಾಗಿದೆ.

ಈ ಪರಿಸ್ಥಿತಿಯನ್ನು ಎದುರಿಸಲು ಸರ್ಕಾರ ಹಲವು ಮಹತ್ವದ ಕ್ರಮಗಳನ್ನು ಘೋಷಿಸಿದೆ. ರಾಜ್ಯದ ಸುಮಾರು 37 ಲಕ್ಷ ಬೋರ್‌ವೆಲ್‌ಗಳ ಮಾಹಿತಿಯನ್ನು K-GIS ಪೋರ್ಟಲ್‌ನಲ್ಲಿ ದಾಖಲಿಸಿ, ಬೋರ್‌ವೆಲ್ ಮರುಪೂರಣ ಮತ್ತು ಅಂತರ್ಜಲ ಸಂರಕ್ಷಣೆಗೆ ಒತ್ತು ನೀಡಲಾಗಿದೆ. ಅಂತರ್ಜಲ ತೀವ್ರವಾಗಿ ಕುಸಿದಿರುವ ಪ್ರದೇಶಗಳಲ್ಲಿ ಹೊಸ ಬೋರ್‌ವೆಲ್ ಕೊರೆಯುವುದಕ್ಕೂ ನಿರ್ಬಂಧ ಹೇರಲಾಗಿದೆ.
ಗ್ರಾಮೀಣ ಪ್ರದೇಶಗಳಲ್ಲಿ ಮಳೆನೀರು ಸಂಗ್ರಹಣೆ, ಚೆಕ್‌ಡ್ಯಾಂ ನಿರ್ಮಾಣ, ಸಾಂಪ್ರದಾಯಿಕ ಜಲಮೂಲಗಳ ಪುನರುಜ್ಜೀವನ ಹಾಗೂ ಸಂಸ್ಕರಿಸಿದ ತ್ಯಾಜ್ಯ ನೀರನ್ನು ಕೈಗಾರಿಕೆ ಮತ್ತು ಇತರೆ ಅಗತ್ಯಗಳಿಗೆ ಮರುಬಳಕೆ ಮಾಡುವ ಯೋಜನೆಗಳನ್ನು ಜಾರಿಗೊಳಿಸಲಾಗುತ್ತಿದೆ. ಸ್ಥಳೀಯ ಸಂಸ್ಥೆಗಳ ಮಟ್ಟದಲ್ಲಿ ‘ವಾಟರ್ ಬಜೆಟಿಂಗ್’ ವ್ಯವಸ್ಥೆಯನ್ನೂ ಅನುಷ್ಠಾನಗೊಳಿಸಲಾಗುತ್ತಿದೆ.
ರೈತರಿಗೆ ಕಡಿಮೆ ನೀರು ಬಳಸುವ ಹಾಗೂ ಬರವನ್ನು ತಡೆದುಕೊಳ್ಳಬಲ್ಲ ಸಿರಿಧಾನ್ಯಗಳು, ದ್ವಿದಳ ಧಾನ್ಯಗಳು ಮತ್ತು ಎಣ್ಣೆಕಾಳುಗಳ ಬೆಳೆಗಳನ್ನು ಬೆಳೆಯಲು ಸರ್ಕಾರ ಉತ್ತೇಜನ ನೀಡುತ್ತಿದೆ. ಜೊತೆಗೆ, ನೀರಿನ ಮಿತಬಳಕೆ, ಇಂಧನ ಉಳಿತಾಯ ಹಾಗೂ ನವೀಕರಿಸಬಹುದಾದ ಇಂಧನ ಬಳಕೆಗೆ ಆದ್ಯತೆ ನೀಡುವಂತೆ ಸಾರ್ವಜನಿಕರಿಗೆ ಸರ್ಕಾರ ಕರೆ ನೀಡಿದೆ.
ಎಲ್ ನಿನೋ ಪರಿಣಾಮದಿಂದ ಉಂಟಾಗಬಹುದಾದ ಸವಾಲುಗಳನ್ನು ಸಮರ್ಥವಾಗಿ ಎದುರಿಸಲು ಸರ್ಕಾರದ ಜಲ ಸಂರಕ್ಷಣಾ ಕಾರ್ಯಕ್ರಮಗಳಿಗೆ ಸಾರ್ವಜನಿಕರು ಸಹಕರಿಸಬೇಕೆಂದು ಮುಖ್ಯ ಕಾರ್ಯದರ್ಶಿ ಮನವಿ ಮಾಡಿದ್ದಾರೆ.
Politics
ಹೆದ್ದಾರಿ ಅಪಘಾತ ಸಂತ್ರಸ್ತರಿಗೆ 7 ದಿನ ಉಚಿತ ಚಿಕಿತ್ಸೆ: ಸಚಿವ ಯು.ಟಿ. ಖಾದರ್ ಘೋಷಣೆ
ಕಾರವಾರ: ರಾಜ್ಯದ ಹೆದ್ದಾರಿಗಳಲ್ಲಿ ಅಪಘಾತಕ್ಕೊಳಗಾಗುವ ಅಪರಿಚಿತ ವ್ಯಕ್ತಿಗಳಿಗೆ ಪ್ರಥಮ ಏಳು ದಿನಗಳವರೆಗೆ ₹2.5 ಲಕ್ಷದವರೆಗೆ ಉಚಿತ ಚಿಕಿತ್ಸೆ ನೀಡುವ ಹೊಸ ಯೋಜನೆಯನ್ನು ಜಾರಿಗೆ ತರಲಾಗುವುದು ಎಂದು ಆರೋಗ್ಯ ಸಚಿವ ಯು.ಟಿ.ಖಾದರ್ ಘೋಷಿಸಿದರು.
ಕುಮಟಾದ ನೂತನ ಟ್ರಾಮಾ ಕೇರ್ ಸೆಂಟರ್ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದ ಅವರು, ಈ ಯೋಜನೆಗೆ ಮುಖ್ಯಮಂತ್ರಿ ಅವರೊಂದಿಗೆ ಚರ್ಚಿಸಿ ಶೀಘ್ರವೇ ಅನುಮೋದನೆ ಪಡೆಯಲಾಗುವುದು ಎಂಬ ವಿಶ್ವಾಸ ವ್ಯಕ್ತಪಡಿಸಿದರು.

ಈ ಯೋಜನೆ ರಾಜ್ಯದ ನಾಗರಿಕರಿಗೆ ಮಾತ್ರವಲ್ಲದೆ, ರಾಜ್ಯದ ಹೊರಗಿನಿಂದ ಬಂದವರು ಹಾಗೂ ವಿದೇಶಿ ಪ್ರಜೆಗಳಿಗೂ ಅನ್ವಯವಾಗಲಿದೆ ಎಂದು ಸಚಿವರು ತಿಳಿಸಿದರು. ಅಪಘಾತದ ಬಳಿಕ ತುರ್ತು ಚಿಕಿತ್ಸೆಗೆ ಹಣದ ಕೊರತೆಯಿಂದ ಯಾವುದೇ ಜೀವ ಹಾನಿಯಾಗಬಾರದು ಎಂಬ ಉದ್ದೇಶದಿಂದ ಯೋಜನೆ ರೂಪಿಸಲಾಗುತ್ತಿದೆ ಎಂದರು.
ಸರ್ಕಾರಿ ಹಾಗೂ ಖಾಸಗಿ ಟ್ರಾಮಾ ಕೇರ್ ಆಸ್ಪತ್ರೆಗಳನ್ನೂ ಯೋಜನೆಗೆ ಒಳಪಡಿಸಲಾಗುವುದು. ಚಿಕಿತ್ಸೆ ವೆಚ್ಚವನ್ನು ಸರ್ಕಾರವೇ ಭರಿಸಲಿದ್ದು, ಅದರಿಂದ ಆಸ್ಪತ್ರೆಗಳು ತಮ್ಮ ಸೇವೆ ಹಾಗೂ ನಿರ್ವಹಣೆಯನ್ನು ಸುಧಾರಿಸಿಕೊಳ್ಳಲು ಸಾಧ್ಯವಾಗುತ್ತದೆ ಎಂದು ಖಾದರ್ ಹೇಳಿದರು.
ಈ ಯೋಜನೆ ಜಾರಿಗೆ ಬಂದ ಬಳಿಕ ಹೆದ್ದಾರಿ ಅಪಘಾತ ಸಂತ್ರಸ್ತರಿಗೆ ತ್ವರಿತ ಹಾಗೂ ಉಚಿತ ಚಿಕಿತ್ಸೆಯ ಸೌಲಭ್ಯ ದೊರೆಯಲಿದೆ ಎಂದು ಅವರು ತಿಳಿಸಿದರು.
Politics
ಪರಪ್ಪನ ಅಗ್ರಹಾರಕ್ಕೆ ವಿಜಯಲಕ್ಷ್ಮಿ, ರಕ್ಷಿತಾ ಭೇಟಿ: ದರ್ಶನ್ ಆರೋಗ್ಯ ವಿಚಾರಣೆ
ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿರುವ ಆರೋಪಿ ದರ್ಶನ್ ತೂಗದೀಪಾ ಅವರನ್ನು ಪತ್ನಿ ವಿಜಯಲಕ್ಷ್ಮಿ ಹಾಗೂ ನಟಿ ರಕ್ಷಿತಾ ಪ್ರೇಮ್ ಭೇಟಿ ಮಾಡಿದ್ದಾರೆ.
ಇಬ್ಬರೂ ಪ್ರತ್ಯೇಕವಾಗಿ ಜೈಲಿಗೆ ಆಗಮಿಸಿ ದರ್ಶನ್ ಅವರೊಂದಿಗೆ ಸುಮಾರು ಒಂದು ಗಂಟೆಗೂ ಹೆಚ್ಚು ಕಾಲ ಮಾತುಕತೆ ನಡೆಸಿದ್ದಾರೆ. ಭೇಟಿಯ ವೇಳೆ ಅವರ ಆರೋಗ್ಯ ಹಾಗೂ ಜೈಲಿನ ಪರಿಸ್ಥಿತಿ ಕುರಿತು ವಿಚಾರಿಸಿದ್ದಾರೆ ಎನ್ನಲಾಗಿದೆ.

ದರ್ಶನ್ ಅವರನ್ನು ಎರಡನೇ ಬಾರಿ ಭೇಟಿ ಮಾಡಿದ ರಕ್ಷಿತಾ, ಜೈಲಿನಲ್ಲಿರುವ ಅವರ ಪರಿಸ್ಥಿತಿ ಕಂಡು ಭಾವುಕರಾದರು ಎನ್ನಲಾಗಿದೆ. ಗೆಳೆಯನಿಗೆ ಎದುರಾಗಿರುವ ಸಂಕಷ್ಟದ ಬಗ್ಗೆ ಅವರು ಬೇಸರ ವ್ಯಕ್ತಪಡಿಸಿದ್ದಾರೆ ಎಂದು ತಿಳಿದುಬಂದಿದೆ.
ಭೇಟಿ ಬಳಿಕ ರಕ್ಷಿತಾ ಹಾಗೂ ವಿಜಯಲಕ್ಷ್ಮಿ ಅವರು ಮಾಧ್ಯಮಗಳೊಂದಿಗೆ ಹೆಚ್ಚಿನ ಮಾಹಿತಿ ಹಂಚಿಕೊಳ್ಳದೆ ತೆರಳಿದರು. ದರ್ಶನ್ ಹೇಗಿದ್ದಾರೆ ಎಂಬ ಪ್ರಶ್ನೆಗೆ ಮಾತ್ರ “ಚೆನ್ನಾಗಿದ್ದಾರೆ” ಎಂದು ಪ್ರತಿಕ್ರಿಯಿಸಿದರು.
ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ವಿಚಾರಣಾ ಪ್ರಕ್ರಿಯೆಯನ್ನು ಒಂದು ವರ್ಷದೊಳಗೆ ಪೂರ್ಣಗೊಳಿಸುವಂತೆ ನ್ಯಾಯಾಲಯ ಸೂಚಿಸಿದ್ದು, ಜಾಮೀನು ನೀಡಲು ನಿರಾಕರಿಸಿದ ಹಿನ್ನೆಲೆಯಲ್ಲಿ ದರ್ಶನ್ ಅವರಿಗೆ ಮುಂದಿನ ವರ್ಷ ಮೇ 15ರವರೆಗೆ ಜೈಲಿನಲ್ಲೇ ಇರಬೇಕಾದ ಪರಿಸ್ಥಿತಿ ಎದುರಾಗಿದೆ ಎಂದು ವರದಿಯಾಗಿದೆ.
-
Mysore9 hours agoಹುಣಸೂರಿನಲ್ಲಿ ಒಂದೇ ಕುಟುಂಬದ ನಾಲ್ವರು ಆತ್ಮಹ*ತ್ಯೆ; ಸಾವಿನ ಕಾರಣ ನಿಗೂಢ
-
Mysore15 hours agoನಂಜನಗೂಡಿನಲ್ಲಿ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನ: ಕಾಮುಕನಿಗೆ ಗ್ರಾಮಸ್ಥರಿಂದ ಧರ್ಮದೇಟು, ಪೊಲೀಸರ ವಶಕ್ಕೆ
-
Kodagu12 hours agoಅಧ್ಯಕ್ಷರಾಗಿ ವಾಂಚಿರ ವಿಠಲ್ ನಾಣಯ್ಯ ಆಯ್ಕೆ
-
Politics4 hours agoಪರಪ್ಪನ ಅಗ್ರಹಾರಕ್ಕೆ ವಿಜಯಲಕ್ಷ್ಮಿ, ರಕ್ಷಿತಾ ಭೇಟಿ: ದರ್ಶನ್ ಆರೋಗ್ಯ ವಿಚಾರಣೆ
-
Politics5 hours agoರಾಜ್ಯ ಸಚಿವ ಸಂಪುಟ ವಿಸ್ತರಣೆ ನಾಳೆ: 18 ಮಂದಿಗೆ ಸಚಿವ ಸ್ಥಾನ ಸಾಧ್ಯತೆ
-
Kodagu5 hours agoಹಾರಂಗಿ ಜಲಾಶಯದ ನೀರು ಕುಡಿಯಲು ಮಾತ್ರ: ರೈತರಿಗೆ ಬೆಳೆ ಬೆಳೆಯದಂತೆ ಮನವಿ
-
Kodagu7 hours agoಕೂಡಿಗೆ ವ್ಯಾಪ್ತಿಯಲ್ಲಿ 1 ಕೋಟಿ ರೂ. ವೆಚ್ಚದ ಕಾಮಗಾರಿಗಳಿಗೆ ಡಾ. ಮಂತರ್ ಗೌಡ ಚಾಲನೆ
-
Manglore3 hours agoಮನೆ ಕಾಮಗಾರಿಗೆ ಬಂದು 6.37 ಲಕ್ಷ ಮೌಲ್ಯದ ಚಿನ್ನಾಭರಣ ಕಳವು- ಕೃತ್ಯ ಎಸಗಿದ 24 ಗಂಟೆಯೊಳಗೆ ಆರೋಪಿ ಅಂದರ್
