Connect with us

State

ಅಂಚೆ ಇಲಾಖೆಯಲ್ಲಿ SSLC ಪಾಸಾದವರಿಗೆ ಬೃಹತ್ ನೇಮಕಾತಿ : ಪರೀಕ್ಷೆ ಇಲ್ಲದೆ ನೇರ ನೇಮಕಾತಿ

Published

on

Post office jobs for 10th Pass : ಭಾರತೀಯ ಅಂಚೆ ಇಲಾಖೆಯಲ್ಲಿ 10ನೇ ತರಗತಿ ಪಾಸಾಗಿರುವಂತಹ ಅಭ್ಯರ್ಥಿಗಳಿಗೆ ಬ್ರಾಂಚ್ ಪೋಸ್ಟ್ ಮಾಸ್ಟರ್ ಹಾಗೂ ಗ್ರಾಮೀಣ ಡಾಕ್ ಸೇವಕ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲು ಅಧಿಸೂಚನೆ ಹೊರಡಿಸಿದ್ದಾರೆ.

ಭಾರತ ದೇಶಾದ್ಯಂತ ಒಟ್ಟು 21,413 ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲು ಅಧಿಸೂಚನೆ ಹೊರಡಿಸಲಾಗಿದ್ದು, ಅದರಲ್ಲಿ ಕರ್ನಾಟಕ ರಾಜ್ಯಕ್ಕೆ 1,135 ಹುದ್ದೆಗಳನ್ನು ಮಿಸಲೀಡಲಾಗಿದೆ. ವಿಶೇಷವೇನೆಂದರೆ ಈ ನೇಮಕಾತಿಯಲ್ಲಿ ಅಭ್ಯರ್ಥಿಗಳನ್ನು ನೇರವಾಗಿ ಅವರು 10ನೇ ತರಗತಿಯಲ್ಲಿ ಗಳಿಸಿದ ಅಂಕಗಳ ಆಧಾರದ ಮೇಲೆ ನೇಮಕಾತಿ ಮಾಡಿಕೊಳ್ಳಲಾಗುವುದು. ಆದ್ದರಿಂದ ಇದೊಂದು ಉತ್ತಮ ಅವಕಾಶವಾಗಿದೆ.

ಯಾರು ಅರ್ಜಿ ಸಲ್ಲಿಸಲು ಅರ್ಹರಿರುತ್ತಾರೆ?

ಈ ನೇಮಕಾತಿಗಾಗಿ ಅರ್ಜಿ ಸಲ್ಲಿಸಲು 10ನೇ ತರಗತಿ ಪಾಸ್ ಆಗಿರುವಂತಹ ಅಭ್ಯರ್ಥಿಗಳು ಅರ್ಹರಿರುತ್ತಾರೆ.

ನೇಮಕಾತಿ ಮಾಡಿಕೊಳ್ಳುತ್ತಿರುವ ಹುದ್ದೆಗಳು :

• ಗ್ರಾಮೀಣ ಡಾಕ್ ಸೇವಕ
• ಬ್ರಾಂಚ್ ಪೋಸ್ಟ್ ಮಾಸ್ಟರ್

ಆನ್ಲೈನ್ ಮುಕಾಂತರ ಅರ್ಜಿ ಸಲ್ಲಿಕೆಯ ಅವಧಿ:
10 ಫೆಬ್ರವರಿ 2025 ರಿಂದ 03 ಮಾರ್ಚ್ 2025 ರ ವರೆಗೆ

• ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಹಾಗೂ ರಾಜ್ಯವಾರು & ಜಿಲ್ಲಾವಾರು ಖಾಲಿ ಇರುವ ಹುದ್ದೆಗಳ ವಿವರಗಳನ್ನು ತಿಳಿಯಲು ಇಲ್ಲಿ ಕ್ಲಿಕ್ ಮಾಡಿ:
https://indiapostgdsonline.gov.in/

State

ಅಕ್ರಮ ಮರ ಕಡಿತಲೆಗೆ ಶಿಕ್ಷೆ ಪ್ರಮಾಣ ಹೆಚ್ಚಳ: ಈಶ್ವರ ಖಂಡ್ರೆ ಖಡಕ್‌ ಸೂಚನೆ

Published

on

ಬೆಂಗಳೂರು: ಅಕ್ರಮ ಮರ ಕಡಿತಲೆಗೆ ಪ್ರಸಕ್ತ ವಿಧಿಸಲಾಗುತ್ತಿರುವ ದಂಡ ಮತ್ತು ಶಿಕ್ಷೆಯ ಪ್ರಮಾಣವನ್ನು ಹತ್ತುಪಟ್ಟು ಹೆಚ್ಚಿಸಲು ಅನುವಾಗುವಂತೆ ವೃಕ್ಷ ಸಂರಕ್ಷಣಾ ಕಾಯಿದೆ 1972ಕ್ಕೆ ತಿದ್ದುಪಡಿ ತರಲು ಕ್ರಮ ವಹಿಸುವಂತೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಸೂಚನೆ ನೀಡಿದ್ದಾರೆ.

ತತ್ಸಂಬಂಧ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಮತ್ತು ಅರಣ್ಯ ಪಡೆ ಮುಖ್ಯಸ್ಥರಿಗೆ ಸೂಚನೆ ನೀಡಿರುವ ಸಚಿವರು, “ದೊಡ್ಡ ಸಂಖ್ಯೆಯಲ್ಲಿ ಮರಗಳನ್ನು ಕಡಿಯುವುದು, ಮಾನವ ಹತ್ಯೆ ಮಾಡಿದಂತೆ ಅಥವಾ ಅದಕ್ಕಿಂತ” ಎಂದು ಘನ ಸುಪ್ರೀಂಕೋರ್ಟ್ ಅಭಿಪ್ರಾಯಪಟ್ಟಿರುವುದನ್ನು ಉಲ್ಲೇಖಿಸಿದ್ದಾರೆ.

ಅಕ್ರಮವಾಗಿ ಕತ್ತರಿಸಿದ ಪ್ರತಿ ಮರಕ್ಕೆ 1 ಲಕ್ಷ ರೂ. ದಂಡ ವಿಧಿಸಿರುವ ವಿಚಾರದಲ್ಲಿ ಕರುಣೆ ತೋರುವ ಅಗತ್ಯವಿಲ್ಲ ಎಂದು ಸುಪ್ರೀಂಕೋರ್ಟ್ ನ್ಯಾಯಮೂರ್ತಿಗಳು ಅಭಿಪ್ರಾಯಪಟ್ಟಿರುವುದನ್ನೂ ತಮ್ಮ ಟಿಪ್ಪಣಿಯಲ್ಲಿ ಉಲ್ಲೇಖಿಸಿರುವ ಸಚಿವರು, ಅಕ್ರಮ ಮರಗಳ ಕಡಿತಲೆಗೆ ವಿಧಿಸುವ ದಂಡದ ಪ್ರಮಾಣ ಹೆಚ್ಚಳದ ಅಗತ್ಯ ಪ್ರತಿಪಾದಿಸಿದ್ದಾರೆ.

ಜಾಗತಿಕ ತಾಪಮಾನ ಏರಿಕೆ ಮತ್ತು ಹವಾಮಾನ ಬದಲಾವಣೆಯ ಸವಾಲುಗಳನ್ನು ಇಡೀ ವಿಶ್ವ ಎದುರಿಸುತ್ತಿರುವ ಪ್ರಸಕ್ತ ಸನ್ನಿವೇಶದಲ್ಲಿ, ಇರುವ ಒಂದೇ ಭೂಮಿಯನ್ನು ರಕ್ಷಿಸಿ, ಸುರಕ್ಷಿತವಾಗಿ ಮುಂದಿನ ಪೀಳಿಗೆಗೆ ಹಸ್ತಾಂತರಿಸಲು, ಪ್ರಕೃತಿ, ಪರಿಸರ ಉಳಿಸುವುದು ನಮ್ಮೆಲ್ಲರ ಹೊಣೆಯಾಗಿದೆ ಎಂದೂ ತಿಳಿಸಿದ್ದಾರೆ.

ಸಂಸ್ಕೃತದಲ್ಲಿ “ಧರ್ಮೋ ರಕ್ಷತಿ ರಕ್ಷಿತಃ’ ಎಂಬ ಮಾತಿದೆ. ಈಗ ಇದನ್ನು “ವೃಕ್ಷೋ ರಕ್ಷತಿ ರಕ್ಷಿತಃ’ ಎಂದು ಬದಲಾಯಿಸಿಕೊಳ್ಳಬೇಕಾದ ಕಾಲಘಟ್ಟದಲ್ಲಿ ನಾವಿದ್ದೇವೆ. ಹತ್ತಾರು, ನೂರಾರು ವರ್ಷದಿಂದ ಬೆಳೆದ ಮರಗಳನ್ನು ಸಂರಕ್ಷಿಸದಿದ್ದರೆ ಮುಂದೆ ದೊಡ್ಡ ಅಪಾಯ ಎದುರಿಸಬೇಕಾಗುತ್ತದೆ. ಈ ನಿಟ್ಟಿನಲ್ಲಿ ವೃಕ್ಷ ಸಂರಕ್ಷಣಾ ಕಾಯಿದೆಗೆ ತಿದ್ದುಪಡಿ ತರಲು ಕ್ರಮ ವಹಿಸುವಂತೆ ಆದೇಶ ನೀಡಿದ್ದಾರೆ.

ಈ ಸಂಬಂಧ ಟ್ವೀಟ್‌ ಮಾಡಿರುವ ಈಶ್ವರ್‌ ಖಂಡ್ರೆ, ಅಕ್ರಮ ಮರ ಕಡಿತ ತಡೆಗೆ ಕಠಿಣ ಕ್ರಮ – ದಂಡ ಮತ್ತು ಶಿಕ್ಷೆ ಹೆಚ್ಚಳಕ್ಕೆ ಕ್ರಮ.

ಅರಣ್ಯ ಸಂರಕ್ಷಣೆಯ ಉದ್ದೇಶದಿಂದ ವೃಕ್ಷ ಸಂರಕ್ಷಣಾ ಕಾಯಿದೆ 1972ಕ್ಕೆ ತಿದ್ದುಪಡಿ ತರಲು ಮತ್ತು ಅಕ್ರಮ ಮರಗಳ ಕಡಿತ ತಡೆಗಟ್ಟಲು ದಂಡ ಹಾಗೂ ಶಿಕ್ಷೆಯ ಪ್ರಮಾಣವನ್ನು ಹೆಚ್ಚಿಸಲು ಸಂಬಂಧಿತ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಸುಪ್ರೀಂ ಕೋರ್ಟ್ ಅಭಿಪ್ರಾಯದಂತೆ, ದೊಡ್ಡ ಪ್ರಮಾಣದಲ್ಲಿ ಮರಗಳನ್ನು ಕಡಿಯುವುದು ಗಂಭೀರ ಅಪರಾಧ ಎಂದು ಪರಿಗಣಿಸಿ, ಪ್ರತಿ ಮರಕ್ಕೆ ₹1 ಲಕ್ಷ ದಂಡ ವಿಧಿಸುವ ನಿಯಮವನ್ನು ಇನ್ನಷ್ಟು ಕಠಿಣಗೊಳಿಸಲು ಕ್ರಮ ಕೈಗೊಳ್ಳಲಾಗುತ್ತಿದೆ.

ಜಾಗತಿಕ ತಾಪಮಾನ ಏರಿಕೆ, ಹವಾಮಾನ ಬದಲಾವಣೆಯ ನಿಟ್ಟಿನಲ್ಲಿ ಪರಿಸರ ಸಂರಕ್ಷಣೆ ಅಗತ್ಯ. “ಧರ್ಮೋ ರಕ್ಷತಿ ರಕ್ಷಿತಃ” ಎಂಬಂತೆ, ಈಗ “ವೃಕ್ಷೋ ರಕ್ಷತಿ ರಕ್ಷಿತಃ” ಎಂಬ ಸಂದೇಶ ಸಾರಬೇಕಾದ ಸಮಯ.

ಪರಿಸರ ಉಳಿಸಿ, ಭವಿಷ್ಯ ರಕ್ಷಿಸೋಣ! ಎಂದು ಈಶ್ವರ್‌ ಖಂಡ್ರೆ ಬರೆದುಕೊಂಡಿದ್ದಾರೆ.

Continue Reading

State

ಪತ್ರಕರ್ತರಿಗೆ ಮಾಧ್ಯಮ ಕಿಟ್ ವಿತರಣೆ ಮಾಡಿದ ಸಿಎಂ ಸಿದ್ದರಾಮಯ್ಯ

Published

on

ಬೆಂಗಳೂರು: 2024-25 ನೇ ಸಾಲಿನ ಪರಿಶಿಷ್ಟ ಜಾತಿ ವಿಶೇಷ ಯೋಜನೆ ಹಾಗೂ ಗಿರಿಜನ ಉಪ ಯೋಜನೆಯಡಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯು ಮಾಧ್ಯಮ ಮಾನ್ಯತೆ ಪಡೆದ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಪತ್ರಕರ್ತರಿಗೆ ಮಾಧ್ಯಮ ಕಿಟ್ ‌ಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಅಧಿಕೃತ ನಿವಾಸ ಕಾವೇರಿಯಲ್ಲಿ ಸಾಂಕೇತಿಕವಾಗಿ ವಿತರಿಸಿದರು.

ಮಾಧ್ಯಮ ಪ್ರತಿನಿಧಿಗಳ ವೃತ್ತಿಪರ ಚಟುವಟಿಕೆಗಳನ್ನು ಪ್ರೋತ್ಸಾಹಿಸುವ ಉದ್ದೇಶದಿಂದ ರಾಜ್ಯದ ವಿವಿಧ ಜಿಲ್ಲೆಗಳ 168 ಪರಿಶಿಷ್ಟ ಜಾತಿ ಹಾಗೂ 32 ಪರಿಶಿಷ್ಟ ಪಂಗಡದ ಪತ್ರಕರ್ತರು ಸೇರಿ ಒಟ್ಟು 200 ಜನ ಪತ್ರಕರ್ತರು ಈ ಯೋಜನೆಯಡಿ ಲ್ಯಾಪ್‌ಟಾಪ್ ಹಾಗೂ ಕ್ಯಾಮೆರಾ ಒಳಗೊಂಡ ಮಾಧ್ಯಮ ಕಿಟ್ ಪಡೆಯುತ್ತಿದ್ದಾರೆ.

ಅರಣ್ಯ ಸಚಿವ ಈಶ್ವರ್ ಖಂಡ್ರೆ,ಶಾಸಕ ಹಾಗೂ ಕರ್ನಾಟಕ ರಾಜ್ಯ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷ ಎಂ.ನರೇಂದ್ರ ಸ್ವಾಮಿ,ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ್, ವಾರ್ತಾ ಇಲಾಖೆಯ ಸರ್ಕಾರದ ಕಾರ್ಯದರ್ಶಿ ಬಿ.ಬಿ.ಕಾವೇರಿ, ಆಯುಕ್ತ ಹೇಮಂತ್ ಎಂ.ನಿಂಬಾಳ್ಕರ್ ಸೇರಿದಂತೆ ಹಲವರು ಇದ್ದರು.

Continue Reading

State

ಸತ್ಯವಂತರಿಗಿದು ಕಾಲವಲ್ಲ: ಉಚ್ಛಾಟನೆ ಬೆನ್ನಲ್ಲೇ ಟ್ವೀಟ್‌ ಮೂಲಕ ಯತ್ನಾಳ್‌ ಆಕ್ರೋಶ

Published

on

ಬೆಂಗಳೂರು: ರಾಜ್ಯ ನಾಯಕತ್ವದ ವಿರುದ್ಧ ಪದೇ ಪದೇ ಹೇಳಿಕೆ ನೀಡುತ್ತಿದ್ದ ಬಿಜೆಪಿ ರೆಬೆಲ್‌ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ರನ್ನು ಆರು ವರ್ಷಗಳ ಕಾಳ ಉಚ್ಛಾಟಿಸಿ ಬಿಜೆಪಿ ರಾಷ್ಟ್ರೀಯ ಶಿಸ್ತು ಸಮಿತಿ ಆದೇಶ ಹೊರಡಿಸಿದೆ.

ಬಿಜೆಪಿ ಶಿಸ್ತು ಸಮಿತಿ ನೀಡಿದ್ದ ನೋಟಿಸ್‌ಗೆ ಯಾವುದೇ ಉತ್ತರ ನೀಡದ ಕಾರಣ ಬಿಜೆಪಿ ಈ ನಿರ್ಧಾರ ಕೈಗೊಂಡಿದೆ. ತಕ್ಷಣವೇ ಈ ನಿರ್ಧಾರ ಜಾರಿಗೆ ಬಂದಿದೆ.

ಈ ಬೆನ್ನಲ್ಲೇ ಬಿಜೆಪಿ ಹಾಗೂ ಪಕ್ಷದ ವರಿಷ್ಠರ ವಿರುದ್ಧ ಪೋಸ್ಟ್‌ ಒಂದನ್ನು ಮಾಡಿರುವ ಯತ್ನಾಳ್‌, ವಂಶಪಾರಂಪರ್ಯ ರಾಜಕೀಯ, ಭ್ರಷ್ಟಾಚಾರ, ಪಕ್ಷದೊಳಗಿನ ಸುಧಾರಣೆಗಳ ವಿರುದ್ಧ ಮಾತನಾಡಿದ್ದಕ್ಕಾಗಿ, ಏಕವ್ಯಕ್ತಿ ದಬ್ಬಾಳಿಕೆಯನ್ನು ತೆಗೆದುಹಾಕಿ ಮತ್ತು ಉತ್ತರ ಕರ್ನಾಟಕವನ್ನು ಅಭಿವೃದ್ಧಿಪಡಿಸಲು ವಿನಂತಿಸಿದ್ದಕ್ಕಾಗಿ ಪಕ್ಷವು ನನ್ನನ್ನು 6 ವರ್ಷಗಳ ಕಾಲ ಪಕ್ಷದಿಂದ ಹೊರಹಾಕಿದೆ.

‘ಸ್ಪೇಡ್ ಅನ್ನು ಕರೆಯುವುದು, ಸ್ಪೇಡ್ ಅನ್ನು ಕರೆಯುವುದು’ ಎಂಬುದಕ್ಕೆ ಪಕ್ಷವು ನನಗೆ ಪ್ರತಿಫಲ ನೀಡಿದೆ.

ಕೆಲವು ಸ್ಥಾಪಿತ ಹಿತಾಸಕ್ತಿಗಳು ತಮ್ಮ ಕಾರ್ಯಸೂಚಿಯನ್ನು ಯಶಸ್ವಿಯಾಗಿ ಮುಂದುವರಿಸುವಲ್ಲಿ ತಮ್ಮ ಪಾತ್ರವನ್ನು ವಹಿಸಿವೆ.

ನನ್ನನ್ನು ಅಮಾನತುಗೊಳಿಸುವ ನಿರ್ಧಾರವು ಭ್ರಷ್ಟಾಚಾರ, ಕುಟುಂಬ ರಾಜಕೀಯ, ಉತ್ತರ ಕರ್ನಾಟಕದ ಅಭಿವೃದ್ಧಿ ಮತ್ತು ಹಿಂದುತ್ವದ ವಿರುದ್ಧದ ನನ್ನ ಹೋರಾಟವನ್ನು ತಡೆಯುವುದಿಲ್ಲ. ನಾನು ನನ್ನ ಜನರಿಗೆ ಅದೇ ಹುರುಪು ಮತ್ತು ದೃಢತೆಯಿಂದ ಸೇವೆ ಸಲ್ಲಿಸುವುದನ್ನು ಮುಂದುವರಿಸುತ್ತೇನೆ.

ಎಲ್ಲಾ ಕಾರ್ಯಕರ್ತರಿಗೆ, ಹಿತೈಷಿಗಳಿಗೆ, ಸ್ನೇಹಿತರಿಗೆ, ಪರಿಚಯಸ್ಥರಿಗೆ, ಸ್ವಾಮೀಜಿಗಳಿಗೆ, ಮಾಧ್ಯಮಗಳಿಗೆ, ಬೆಂಬಲದ ಆಧಾರಸ್ತಂಭವಾಗಿರುವ ನನ್ನ ಕುಟುಂಬಕ್ಕೆ ಮತ್ತು ಸರ್ವಶಕ್ತನಿಗೆ ನಾನು ಧನ್ಯವಾದಗಳನ್ನು ಅರ್ಪಿಸುತ್ತೇನೆ

ನಾನು ಇದನ್ನು ಬರೆಯುವಾಗ, ಪುರಂದರ ದಾಸರು ಹೇಳಿದ್ದನ್ನು ನಾನು ಪ್ರೀತಿಯಿಂದ ನೆನಪಿಸಿಕೊಳ್ಳುತ್ತೇನೆ.

ಸತ್ಯವಂತರಿಗಿದು ಕಾಲವಲ್ಲ
ದುಷ್ಟಜನರಿಗೆ ಸುಭಿಕ್ಷಕಾಲ ||

ಉಪಕಾರ ಮಾಡಿದರೆ ಅಪಕರಿಸುವ ಕಾಲ

ಸಕಲವು ತಿಳಿದವಗೆ ದುರ್ಭಿಕ್ಷ ಕಾಲ. ಧರ್ಮ ಮಾಡುವಗೆ ನಿರ್ಮೂಲವಾಗುವ ಕಾಲ
ಕರ್ಮಿ ಪಾತಕರಿಗೆ ಬಹು ಸೌಖ್ಯಕಾಲ

ಸತ್ಯವಂತರಿಗಿದು ಕಾಲವಲ್ಲ

ಎಂದು ತಮ್ಮ ಎಕ್ಸ್‌ ಖಾತೆಯಲ್ಲಿ ಬರೆದುಕೊಳ್ಳುವ ಮೂಲಕ ತಮ್ಮನ್ನು ಉಚ್ಛಾಟನೆ ಮಾಡಿರುವ ಬಗ್ಗೆ ಪರೋಕ್ಷವಾಗಿ ಬಸನಗೌಡ ಪಾಟೀಲ್‌ ಯತ್ನಾಳ್‌ ಅಸಮಾಧಾನ ಹೊರಹಾಕಿದ್ದಾರೆ.

Continue Reading

Trending

error: Content is protected !!