Connect with us

Chamarajanagar

ನಾಳೆ ಹನೂರಿನ ಕೆಲವು ಭಾಗದಲ್ಲಿ ವಿದ್ಯುತ್‌ನಲ್ಲಿ ವ್ಯತ್ಯಯ

Published

on

ಹನೂರು : ಚಾಮುಂಡೇಶ್ವರಿ ವಿಧ್ಯುತ್ ಸರಬರಾಜು ನಿಗಮ ನಿಯಮಿತ ಹನೂರು ಉಪ ವಿಭಾಗ ವ್ಯಾಪ್ತಿಯಲ್ಲಿ ಬರುವ 66/11 ಕೆವಿ ವಿದ್ಯುತ್ ವಿತರಣಾ ಕೇಂದ್ರಗಳಲ್ಲಿ ತ್ರೈ ಮಾಸಿಕ ಕಾರ್ಯ ನಿರ್ವಹಣೆ ಹಮ್ಮಿಕೊಂಡಿರುವುದರಿಂದ ಮೇ 27ರ ಬುಧವಾರದಂದು ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಚಾಮುಂಡೇಶ್ವರಿ ವಿಧ್ಯುತ್ ಸರಬರಾಜು ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ರಂಗಸ್ವಾಮಿ ರವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಹನೂರು 66/11ಕೆವಿ ವಿಧ್ಯುತ್ ಸರಬರಾಜು ವಿತರಣಾ ಕೇಂದ್ರದಿಂದ ಹೊರ ಬರುವ ಹನೂರು
ಟೌನ್, ಬಂಡಳ್ಳಿ,ಕೌದಳ್ಳಿ, ಅಜ್ಜೀಪುರ ರಾಮಾಪುರ ಮಾರ್ಟಳ್ಳಿ 66/11 ಕೆ.ವಿ. ವಿದ್ಯುತ್ ಫೀಡರ್ ವ್ಯಾಪ್ತಿಯ ಗ್ರಾಮಗಳಲ್ಲಿ ವಿದ್ಯುತ್ ಕಂಬ ಸ್ಥಳಾಂತರ ಇನ್ನಿತರ ಕಾಮಾಗಾರಿ ಕೆಲಸ ಕಾರ್ಯಗಳನ್ನು ಹಮ್ಮಿಕೊಂಡಿರುವುದರಿಂದ ಸದರಿ ದಿನಾಂಕದಂದು ಮೇ. 27 ರಂದು ಬೆಳಿಗ್ಗೆ 10:00 ಗಂಟೆಯಿಂದ ಸಂಜೆ 6:00ಗಂಟೆ ವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ ಆಗಾಗಿ ಗ್ರಾಹಕರು ಸಾರ್ವಜನಿಕರು ಸಹಕರಿಸಬೇಕು ಎಂದು ಪ್ರಕಟಣೆಯಲ್ಲಿ ಕೋರಲಾಗಿದೆ.

Continue Reading

Chamarajanagar

ಶಾಸಕರು, ಸಂಸದರ ನಿರ್ಲಕ್ಷ್ಯ ಖಂಡಿಸಿ ಬಿಎಸ್‌ಪಿ ಪ್ರತಿಭಟನೆಗೆ ಕರೆ

Published

on

ವರದಿ : ಸುನೀಲ್ ಪ್ರಶಾಂತ್

ಕೊಳ್ಳೇಗಾಲ: ಪಟ್ಟಣದ ಐಬಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಬಿಎಸ್‌ಪಿ ನೂತನ ಪದಾಧಿಕಾರಿಗಳು, ಶಾಸಕರು ಹಾಗೂ ಸಂಸದರ ನಿರ್ಲಕ್ಷ್ಯ ಮತ್ತು ನಗರಸಭೆಯ ದುರಾಡಳಿತವನ್ನು ಖಂಡಿಸಿ ನಗರಸಭೆ ಕಚೇರಿ ಎದುರು ಪ್ರತಿಭಟನೆ ನಡೆಸಲು ತೀರ್ಮಾನಿಸಲಾಗಿದೆ ಎಂದು ತಿಳಿಸಿದರು.

ಈ ಪ್ರತಿಭಟನೆಗೆ ಕನ್ನಡ ಪರ ಸಂಘಟನೆಗಳು, ಪ್ರಗತಿಪರ ಸಂಘಟನೆಗಳು ಹಾಗೂ ಮಹಿಳಾ ಸಂಘಟನೆಗಳು ಬೆಂಬಲ ಸೂಚಿಸಿದ್ದು, ಸುಮಾರು ಸಾವಿರಕ್ಕೂ ಹೆಚ್ಚು ಜನರು ಭಾಗವಹಿಸುವ ನಿರೀಕ್ಷೆಯಿದೆ ಎಂದು ಹೇಳಿದರು.

ನಗರಸಭೆಯ 31 ವಾರ್ಡ್‌ಗಳಲ್ಲಿನ ಎಲ್ಲಾ ಮೂಲಭೂತ ಸಮಸ್ಯೆಗಳನ್ನೊಳಗೊಂಡಂತೆ ಪ್ರತಿಭಟನೆ ಹಮ್ಮಿಕೊಳ್ಳಲಾಗುತ್ತಿದ್ದು, ಎಲ್ಲಾ ವಾರ್ಡ್‌ಗಳ ನಾಗರಿಕರು ಪ್ರತಿಭಟನೆಯಲ್ಲಿ ಭಾಗವಹಿಸಿ ಬೆಂಬಲ ನೀಡಬೇಕೆಂದು ಮನವಿ ಮಾಡಿದರು.

Continue Reading

Chamarajanagar

ಚಾಮರಾಜನಗರನಲ್ಲಿ ಕಾಡಾನೆ ದಾಳಿ: ರೈತರ ಬೆಳೆ ನಾಶ

Published

on

ಚಾಮರಾಜನಗರ :  ತಾಲೂಕಿನ ವಡ್ಡರಹಳ್ಳಿ ಹಾಗೂ ಯಣಗುಂಬ ಗ್ರಾಮಗಳ ಜಮೀನುಗಳಿಗೆ ತಡರಾತ್ರಿ ಕಾಡಾನೆಗಳು ಲಗ್ಗೆ ಇಟ್ಟು ಅಪಾರ ಪ್ರಮಾಣದ ಬೆಳೆ ನಾಶಪಡಿಸಿವೆ.

ಕಾಡಾನೆಗಳ ದಾಳಿಯಿಂದ ಆತಂಕಗೊಂಡ ರೈತರು ಅರಣ್ಯ ಇಲಾಖೆ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಆಗಮಿಸಿದ ಅಧಿಕಾರಿಗಳು ಆನೆಗಳನ್ನು ಕಾಡಿನತ್ತ ಓಡಿಸಿ ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತಂದರು.

ಇದೇ ವೇಳೆ, ರೈತರಿಗೆ ಉಂಟಾದ ಬೆಳೆ ನಷ್ಟವನ್ನು ಅಧಿಕಾರಿಗಳು ಪರಿಶೀಲನೆ ನಡೆಸಿ, ಸರ್ಕಾರದ ನಿಯಮಾನುಸಾರ ಪರಿಹಾರ ನೀಡಲು ಕ್ರಮ ಕೈಗೊಳ್ಳುವುದಾಗಿ ತಿಳಿಸಿದ್ದಾರೆ.

Continue Reading

Chamarajanagar

ಮರದ ಪಟ್ಟಿಯಿಂದ ಹಲ್ಲೆ: ಮಾನಸಿಕ ಅಸ್ವಸ್ಥ ಸಾ*ವು

Published

on

ಗುಂಡ್ಲುಪೇಟೆ: ಮೇ 26: ಪಟ್ಟಣದ ಹಳೆ ಅಸ್ಟತ್ರೆ ರಸ್ತೆಯ ಹಾಡ್‌ವೇರ್ ಅಂಗಡಿ ಮುಂಭಾಗ ನಡೆದ ಹಲ್ಲೆ ಪ್ರಕರಣದಲ್ಲಿ ಮಾನಸಿಕ ಅಸ್ವಸ್ಥ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಸೋಮವಾರ ಸಂಜೆ ನಡೆದಿದೆ.

ಮಾನಸಿಕ ಅಸ್ವಸ್ಥತೆಯಿಂದ ಬಳಲುತ್ತಿದ್ದ ವ್ಯಕ್ತಿಯು ಅಂಗಡಿ ಮುಂದೆ ಹಿಂದಿ ಭಾಷೆಯಲ್ಲಿ ಅವಾಚ್ಯ ಶಬ್ದಗಳಿಂದ ನಿಂದಿಸುತ್ತಿದ್ದನೆಂದು ಹೇಳಲಾಗುತ್ತಿದೆ. ಈ ವೇಳೆ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದ ಮಹೇಶ್ ಎಂಬಾತ ಆಕ್ರೋಶಗೊಂಡು ಮರದ ಪಟ್ಟಿಯಿಂದ ತಲೆ ಭಾಗಕ್ಕೆ ಹಲ್ಲೆ ನಡೆಸಿದ್ದಾನೆ ಎನ್ನಲಾಗಿದೆ. ಹಲ್ಲೆಯಿಂದ ಗಂಭೀರವಾಗಿ ಗಾಯಗೊಂಡ ವ್ಯಕ್ತಿಯನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ಸಾಗಿಸಲಾಯಿತಾದರೂ, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಘಟನೆಯ ಮಾಹಿತಿ ತಿಳಿದು ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದು ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ.

Continue Reading

Trending

error: Content is protected !!