Kodagu
ವಿರಾಜಪೇಟೆಯ ವಿವಿಧೆಡೆ ಆ.18 ಕ್ಕೆ ವಿದ್ಯುತ್ ವ್ಯತ್ಯಯ
ಮಡಿಕೇರಿ : 66/33/11 ಕೆ.ವಿ ವಿರಾಜಪೇಟೆ ವಿದ್ಯುತ್ ವಿತರಣಾ ಉಪಕೇಂದ್ರದ ವಿರಾಜಪೇಟೆ ಶಾಖಾ ವ್ಯಾಪ್ತಿಯ ವಿಎಫ್-3 ಕೆ.ಎಸ್.ಆರ್.ಟಿ.ಸಿ ಮತ್ತು ವಿಎಫ್-7 ಹೆಗ್ಗಳ ಫೀಡರ್‍ಗಳಲ್ಲಿ ಆಗಸ್ಟ್. 18 ರಂದು ಬೆಳಿಗ್ಗೆ 9 ರಿಂದ ಸಂಜೆ 5 ಗಂಟೆಯವರೆಗೆ ಸದರಿ ಮಾರ್ಗಗಳನ್ನು ಬೇರ್ಪಡಿಸುವ ಕಾರ್ಯ ಕೈಗೆತ್ತಿಕೊಂಡಿರುವುದರಿಂದ ಈ ಮಾರ್ಗದಿಂದ ವಿದ್ಯುತ್ ಸರಬರಾಜಾಗುವ ವಿರಾಜಪೇಟೆ ಪಟ್ಟಣದ ತೆಲುಗರ ಬೀದಿ, ಅರಸುನಗರ, ಸುಂಕದಕಟ್ಟೆ, ದೊಡ್ಡಟ್ಟಿ ಚೌಕಿ ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ.

ಸಾರ್ವಜನಿಕರು ಸಹಕರಿಸುವಂತೆ ಚಾವಿಸನಿನಿ ಕಾರ್ಯ ಮತ್ತು ಪಾಲನೆ ವಿಭಾಗದ ಕಾರ್ಯನಿರ್ವಾಹಕ ಎಂಜಿನಿಯರ್ ಅವರು ಕೋರಿದ್ದಾರೆ.
Kodagu
ಕೊಡಗಿನ ಇತಿಹಾಸದಲ್ಲೇ ಮೊಟ್ಟ ಮೊದಲ ಬಾರಿಗೆ ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಿದ ಕೋರ್ಟ್
ಮಡಿಕೇರಿ: ಕೊಡಗು ಜಿಲ್ಲೆಯ ಇತಿಹಾಸದಲ್ಲಿ ಮೊದಲ ಬಾರಿಗೆ ನಾಲ್ವರನ್ನು ಹತ್ಯೆಗೈದಿದ್ದ ಆರೋಪಿಗೆ ಕೋರ್ಟ್ ಗಲ್ಲು ಶಿಕ್ಷೆ ವಿಧಿಸಿದೆ.
ಪೊನ್ನಂಪೇಟೆ ತಾಲೂಕಿನ ಬೇಗೂರು ಗ್ರಾಮದಲ್ಲಿ ಒಂದೇ ಕುಟುಂಬದ ನಾಲ್ವರನ್ನ ಹತ್ಯೆಗೈದಿದ್ದ ಆರೋಪಿಗೆ ವಿರಾಜಪೇಟೆ ಸೆಷನ್ಸ್ ನ್ಯಾಯಾಲಯ ಗಲ್ಲು ಶಿಕ್ಷೆ ವಿಧಿಸಿ ಐತಿಹಾಸಿಕ ತೀರ್ಪು ನೀಡಿದೆ.
ಕೇರಳ ಮೂಲದ ಆರೋಪಿ ಗಿರೀಶ್ ಎಂಬಾತನಿಗೆ ಈ ಮರಣದಂಡನೆ ವಿಧಿಸಿದೆ. 2024 ರಲ್ಲಿ ಪೊನ್ನಂಪೇಟೆ ತಾಲೂಕಿನ ಬೇಗೂರು ಗ್ರಾಮದ ಕೊಳತೋಡು ಎಂಬಲ್ಲಿ ಒಂದೇ ಕುಟುಂಬದ ನಾಲ್ವರನ್ನು ಕೇರಳ ಮೂಲದ ಗಿರೀಶ್ (37) ಎಂಬಾತ ಬರ್ಬರವಾಗಿ ಹತ್ಯೆ ಮಾಡಿದ್ದ.

ಮೃತಪಟ್ಟವರನ್ನು ನಾಗಿ (35), ಆಕೆಯ ಮಗಳು ಕಾವೇರಿ (7) ಹಾಗೂ ನಾಗಿಯ ಅಜ್ಜ-ಅಜ್ಜಿ ಕರಿಯ (75) ಮತ್ತು ಗೌರಿ (70) ಎಂದು ಗುರುತಿಸಲಾಗಿತ್ತು.
ಆರೋಪಿ ಗಿರೀಶ್ ಕತ್ತಿಯಿಂದ ನಾಲ್ವರನ್ನೂ ಕೊಚ್ಚಿ ಕೊಲೆಗೈದು ಪರಾರಿಯಾಗಿದ್ದ. ಪ್ರಕರಣದ ಭೀಕರತೆ ಮತ್ತು ಗಂಭೀರತೆಯನ್ನು ಮನಗಂಡ ಪೊನ್ನಂಪೇಟೆ ಠಾಣೆ ಪೊಲೀಸರು ತಕ್ಷಣವೇ ಪ್ರಕರಣ ದಾಖಲಿಸಿಕೊಂಡು ಆರೋಪಿ ಗಿರೀಶ್‌ನನ್ನು ಬಂಧಿಸಿದ್ದರು.
ಪೊಲೀಸರು ತ್ವರಿತವಾಗಿ ತನಿಖೆ ನಡೆಸಿ ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಸಿದ್ದರು. ಈ ಮಹತ್ವದ ಪ್ರಕರಣದಲ್ಲಿ ಹಿರಿಯ ವಕೀಲರಾದ ಯಾಸೀನ್ ಅವರು ಸರ್ಕಾರದ ಪರವಾಗಿ ವಾದ ಮಂಡಿಸಿದ್ದರು.

ಎಲ್ಲಾ ಸಾಕ್ಷ್ಯ ಮತ್ತು ವಾದ-ಪ್ರತಿವಾದ ಪರಿಶೀಲಿಸಿದ ಬಳಿಕ ವಿರಾಜಪೇಟೆ ಸೆಷನ್ಸ್ ನ್ಯಾಯಾಲಯವು, ಆರೋಪಿ ಗಿರೀಶ್‌ನ ಅಪರಾಧವು ಗಂಭೀರ ಸ್ವರೂಪದ್ದು ಎಂದು ಪರಿಗಣಿಸಿ, ಗಲ್ಲು ಶಿಕ್ಷೆ ವಿಧಿಸಿ ತೀರ್ಪು ನೀಡಿದೆ.
ಈ ಮೂಲಕ ಕೊಡಗಿನ ನ್ಯಾಯಾಂಗ ಇತಿಹಾಸದಲ್ಲಿ ಮೊದಲ ಬಾರಿಗೆ ಮರಣದಂಡನೆಯ ತೀರ್ಪು ಪ್ರಕಟವಾಗಿದೆ.
Kodagu
ಪ್ರಧಾನಿ ಬಗ್ಗೆ ಅವಹೇಳನ – ಮಡಿಕೇರಿಯ ಮೂವರ ಬಂಧನ
ಮಡಿಕೇರಿ: ಪ್ರಧಾನ ಮಂತ್ರಿ ನರೇಂದ್ರ ಮೋದಿ ಬಗ್ಗೆ ವಿಡಿಯೋದಲ್ಲಿ ಅವಹೇಳನ ಮಾಡಿರುವ ಮಡಿಕೇರಿಯ ಮೂವರನ್ನು ಬಂಧಿಸಲಾಗಿದೆ.
ಪ್ರಧಾನಿ ಮೋದಿ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳನ ವಿಡಿಯೋ ವೈರಲ್ ಆಗಿತ್ತು. ಈ ಸಂಬಂಧ ಮಡಿಕೇರಿ ನಗರದ ರಾಣಿಪೇಟೆಯ ಫಹಾದ್ (32), ತ್ಯಾಗರಾಜ ಕಾಲೋನಿಯ ಬಾಸಿಲ್ (29) , ಸಮೀರ್ (31) ಎಂಬವವರನ್ನು ಬಂಧಿಸಲಾಗಿದೆ.

ತಪಿತಸ್ಥರ ವಿರುದ್ಧ ಸೂಕ್ತ ಕ್ರಮಕ್ಕೆ ಜಿಲ್ಲಾ ಬಿಜೆಪಿ ಆಗ್ರಹಿಸಿದ್ದು, ಡಿ. 11 ರಂದು ಪ್ರತಿಭಟನೆಗೆ ಕರೆ ನೀಡಿದೆ.
Kodagu
ಪರಸ್ಪರ ಹೊಡೆದಾಟ ಕಾಲಿಗೆ ಗುಂಡು, ಕತ್ತಿಯಿಂದ ಹಲ್ಲೆ: ಇಬ್ಬರು ಆಸ್ಪತ್ರೆಗೆ ದಾಖಲು
ವಿರಾಜಪೇಟೆ : ಇಂದು ಬೆಳಗ್ಗೆ ವಿರಾಜಪೇಟೆ ಹೊರವಲಯದ ಕಾವಾಡಿ ಗ್ರಾಮದಲ್ಲಿ ಕಾಫಿ ಕೊಯ್ಯಲು ತೆರಳಿದ್ದ ವೇಳೆ ತಮ್ಮದೇ ಕುಟುಂಬದ ಸದಸ್ಯರ ನಡುವೆ ತೋಟದ ವಿಷಯ ದಲ್ಲಿ ಜಗಳ ಮಾಡಿಕೊಂಡು, ಕಾಲಿಗೆ ಗುಂಡು ಹಾರಿಸಿದ ಪರಿಣಾಮ ಹಾಗೂ ಕತ್ತಿಯಿಂದ ಕಡಿದ ಪರಿಣಾಮ ಗಂಭೀರ ಗಾಯಗೊಂಡಿದ್ದಾರೆ. ಹಾಗಾಗಿ ಗಾಯಗಳು ಇಬ್ಬರನ್ನು ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಮಾಚಿಮಂಡ ಅಪ್ಪಚ್ಚು , ಅವರ ಪುತ್ರ ಅಮ್ರತ್ , ಮಾಚಿಮಂಡ ರತನ್ ಹಾಗೂ ಪುತ್ರ ಬ್ರಿಜೇಶ್ ಅವರು ನೆನ್ನೆ ಸಣ್ಣಪುಟ್ಟ ಜಗಳ ಮಾಡಿಕೊಂಡು ವಿರಾಜಪೇಟೆ ಗ್ರಾಮಾಂತರ ಪೊಲೀಸ್ ಠಾಣೆ ಯಲ್ಲಿ ಪುಕಾರು ನೀಡಲಾಗಿತ್ತು. ಹೀಗಾಗಿ ಪೊಲೀಸರು ವಿಚಾರಣೆ ಮಾಡುವುದಾಗಿ ತಿಳಿಸಿದ್ದರು.

ಆದರೆ ಇಂದು ಬೆಳಗ್ಗೆ ರತನ್ ಹಾಗೂ ಬ್ರಿಜೆಶ್ ಬೆಳಗ್ಗೆ ಏಳು ಗಂಟೆಗೆ ಕೆಲಸ ಗಾರರನ್ನು ಕರೆದುಕೊಂಡು ಕಾಫಿ ಕುಯ್ಯಲು ಮುಂದಾಗಿದ್ದಾರೆ.
ನಮ್ಮ ತೋಟದಲ್ಲಿ ನೀವು ಕಾಫಿ ಏಕೆ ಕುಯ್ಯುತ್ತಿರಾ ಎಂದು ಎರಡು ಕುಟುಂಬದ ಸದಸ್ಯರ ನಡುವೆ ಮಾತಿನ ಚಕಮಕಿ ನಡೆದಿದೆ.
ಅಪ್ಪಚ್ಚು ಅವರು ತನ್ನ ವಾಹನದಲ್ಲಿ ಕೋವಿ ತಂದು ಒಂದು ಬೆದರಿಕೆ ಗುಂಡು ಹರಿಸಿದ್ದಾರೆ. ಆದರೂ ಕೂಡ ಕಾಫಿ ಕುಯ್ಯಲು ಮುಂದುವರಿಸಿದ ಹಿನ್ನೆಲೆಯಲ್ಲಿ ಅಪ್ಪಚ್ಚು ಅವರು ರತನ್ ಪುತ್ರ ನ ಕಾಲಿನ ಬಳಿ ಗುಂಡು ಹಾರಿಸಿದರು ಗುಂಡು ಚದುರಿ ಕಾಲಿಗೆ ಗಂಭೀರ ಸ್ವರೂಪದ ಗಾಯ ಉಂಟಾಗಿದೆ.
ನಂತರ ರತನ್ ಕೂಡ ಹಲ್ಲೆಗೆ ಮುಂದಾದಾಗ ಅಪ್ಪಚ್ಚು ಅವರ ಪುತ್ರ ಅಮ್ರತ್ ಹಾಗೂ ಸಂಗಡಿಗರು ಕತ್ತಿಯಿಂದ ರತನ್ ಮೇಲೆ ಹಲ್ಲೆ ಮಾಡಿರುವ ಪರಿಣಾಮ ವಿರಾಜಪೇಟೆ ಗ್ರಾಮಾಂತರ ಠಾಣೆಯಲ್ಲಿ ಮೊಕದ್ದಮೆ ದಾಖಲಾಗಿದೆ.

ಇನ್ನೂ ಗಾಯಗೊಂಡ ಇಬ್ಬರನ್ನು ವಿರಾಜಪೇಟೆ ಸರ್ಕಾರಿ ಆಸ್ಪತ್ರೆ ಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಅಲ್ಲದೇ ವೈದ್ಯರು ಇಬ್ಬರೂ ಪ್ರಾಣಪಾಯದಿಂದ ಪಾರಾಗಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ. ಪೊಲೀಸರು ಮುಂದಿನ ಕ್ರಮವನ್ನು ಕೈಗೊಂಡಿದ್ದು ಆರೋಪಿ ಗಳನ್ನು ಬಂಧಿಸಿ ಮುಂದಿನ ಕ್ರಮವನ್ನು ಅನುಸರಿಸಿದ್ದಾರೆ.
-
Mandya12 hours agoಜಿಲ್ಲಾಧಿಕಾರಿಗಳಿಂದ ಗುತ್ತಲು ಕೆರೆಗೆ ಭೇಟಿ ಮತ್ತು ಪರಿಶೀಲನೆ
-
State10 hours agoIPL, ಟಿ-20 ವಿಶ್ವಕಪ್ ಕ್ರಿಕೆಟ್ ಸಂಬಂಧ ಸಿಎಂ, ಡಿಸಿಎಂರನ್ನು ಭೇಟಿ ಮಾಡಿದ ವೆಂಕಟೇಶ್ ಪ್ರಸಾದ್
-
Chamarajanagar4 hours agoಮ.ಮ.ಬೆಟ್ಟದಲ್ಲಿ ಹುಂಡಿ ಹಣ ಎಣಿಕೆ: 28 ದಿನಗಳ ಅವಧಿಯಲ್ಲಿ 2.53 ಕೋಟಿ ರೂ. ಸಂಗ್ರಹ
-
Mandya10 hours agoಕಾಳೇನಹಳ್ಳಿ ಘನ ತ್ಯಾಜ್ಯ ವಿಲೇವಾರಿ ಘಟಕಕ್ಕೆ ಡಿಸಿ ಭೇಟಿ
-
State5 hours agoದ್ವೇಷ ಭಾಷಣ, ದ್ವೇಷ ಅಪರಾಧಗಳ ವಿಧೇಯಕ ಮಂಡಿಸಿದ ಡಾ.ಜಿ.ಪರಮೇಶ್ವರ್
-
Hassan7 hours agoಡಿ. 11ರಿಂದ 14 ರವರೆಗೆ ಶ್ರೀ ಮೆಳೆಯಮ್ಮದೇವಿ, ಚಿಕ್ಕಮ್ಮದೇವಿ ಅದ್ದೂರಿ ಜಾತ್ರಾ ಮಹೋತ್ಸವ
-
Hassan6 hours agoಗಾಂಜಾ ಅಮಲಿನಲ್ಲಿ ಯುವಕನೋರ್ವನ ಹ*ತ್ಯೆ: ಆರೋಪಿಯನ್ನು ಬಂಧಿಸಿದ ಪೊಲೀಸರು
-
Chamarajanagar6 hours agoರಾಗಿ ಒಕ್ಕಣೆ ಮಿಷನ್ ನಿಂದ ಕೂಲಿ ಕಾರ್ಮಿಕಳೊಬ್ಬಳ ಕೈ ತುಂಡು
